Homeಮುಖಪುಟಹರಿಯಾಣ ಗಣಿಗಾರಿಕೆ ವಲಯದಲ್ಲಿ ಭೂಕುಸಿತ: ಸಾವಿನ ಸಂಖ್ಯೆ 5ಕ್ಕೆ ಏರಿಕೆ

ಹರಿಯಾಣ ಗಣಿಗಾರಿಕೆ ವಲಯದಲ್ಲಿ ಭೂಕುಸಿತ: ಸಾವಿನ ಸಂಖ್ಯೆ 5ಕ್ಕೆ ಏರಿಕೆ

- Advertisement -
- Advertisement -

ಹರಿಯಾಣದ ಭಿವಾನಿ ಜಿಲ್ಲೆಯ ದಾದಾಮ್‌ನ ಗಣಿಗಾರಿಕೆ ವಲಯದಲ್ಲಿ ಶನಿವಾರ ಸಂಭವಿಸಿದ ಭೂಕುಸಿತದ ಪ್ರದೇಶದಿಂದ ಮತ್ತೊಂದು ಮೃತದೇಹವನ್ನು ಹೊರತೆಗೆಯಲಾಗಿದೆ. ಇದರೊಂದಿಗೆ ಘಟನೆಯಲ್ಲಿ ಸಾವನ್ನಪ್ಪಿದವರ ಒಟ್ಟು ಸಂಖ್ಯೆಯನ್ನು ಐದಕ್ಕೆ ಏರಿದೆ. ಪರಿಹಾರ ಕಾರ್ಯದಲ್ಲಿ ರಾಜ್ಯ ಮತ್ತು ರಾಷ್ಟ್ರೀಯ ವಿಪತ್ತು ನಿರ್ವಹಣಾ ಪಡೆಗಳು ಕಾರ್ಯನಿರ್ವಹಿಸುತ್ತಿದೆ.

ಈ ಮಧ್ಯೆ, ಮಣ್ಣಿನ ಅಡಿಯಲ್ಲಿ ಇನ್ನೂ ಯಾರಾದರೂ ಸಿಲುಕಿರುವ ಸಾಧ್ಯತೆಯಿರುವುದರಿಂದ ಸದ್ಯಕ್ಕೆ ರಕ್ಷಣಾ ಕಾರ್ಯಾಚರಣೆ ಮುಂದುವರಿಯುತ್ತದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. “ಭಾನುವಾರ ಸಂಜೆ ಕಾರ್ಮಿಕನ ಮೃತದೇಹವನ್ನು ಹೊರತೆಗೆಯಲಾಗಿದೆ” ಎಂದು ತೋಷಮ್ ಪೊಲೀಸ್ ಠಾಣೆಯ ಎಸ್‌ಎಚ್‌ಒ ಸುಖ್ಬೀರ್‌ ತಿಳಿಸಿದ್ದಾರೆ.

ಇದನ್ನೂ ಓದಿ:ಹರಿಯಾಣ ಗಣಿಗಾರಿಕೆ ವಲಯದಲ್ಲಿ ಭೂಕುಸಿತ: 1 ಸಾವು; ಮಣ್ಣಿನಡಿಯಲ್ಲಿ ಇನ್ನೂ 20 ಜನರು

ದಾದಾಮ್‌ನಲ್ಲಿ ದೊಡ್ಡ ಪ್ರಮಾಣದಲ್ಲಿ ಅಕ್ರಮ ಕಲ್ಲು ಗಣಿಗಾರಿಕೆ ನಡೆಯುತ್ತಿದೆ ಎಂದು ರಾಜ್ಯದ ಬಿಜೆಪಿ ಮತ್ತು ಕಾಂಗ್ರೆಸ್ ನಾಯಕರು ಆರೋಪಿಸಿದ್ದಾರೆ.

ಭಿವಾನಿ-ಮಹೇಂದರ್‌ಗಢದ ಬಿಜೆಪಿ ಸಂಸದ ಧರಂಬೀರ್ ಸಿಂಗ್ ಅವರು ಈ ಪ್ರದೇಶದಲ್ಲಿ ಗಣಿಗಾರಿಕೆಯನ್ನು ಕಾನೂನು ಉಲ್ಲಂಘಿಸಿ ನಡೆಸಲಾಗುತ್ತಿದೆ ಮತ್ತು ಈ ಬಗ್ಗೆ ತನಿಖೆ ನಡೆಸಬೇಕೆಂದು ಒತ್ತಾಯಿಸಿದ್ದಾರೆ. ಸ್ಥಳಕ್ಕೆ ಭೇಟಿ ನೀಡಿದ ಹರಿಯಾಣ ಮುಖ್ಯಮಂತ್ರಿ ಮನೋಹರ್ ಲಾಲ್ ಖಟ್ಟರ್, ಯಾವುದೇ ಮಾನದಂಡಗಳನ್ನು ಉಲ್ಲಂಘಿಸಲಾಗಿದೆಯೇ ಎಂಬ ಬಗ್ಗೆ ತನಿಖೆಗೆ ಆದೇಶಿಸಲಾಗಿದೆ ಎಂದು ಹೇಳಿದ್ದಾರೆ.

ಘಟನೆಯಲ್ಲಿ ಸಾವಿಗೀಡಾದ ಪ್ರತಿಯೊಬ್ಬರ ಕುಟುಂಬಕ್ಕೆ 25 ಲಕ್ಷ ರೂ. ಮತ್ತು ಗಾಯಗೊಂಡವರಿಗೆ 10 ಲಕ್ಷ ರೂ. ಪರಿಹಾರ ನೀಡಬೇಕು ಎಂದು ಕಾಂಗ್ರೆಸ್ ನಾಯಕರು ಒತ್ತಾಯಿಸಿದ್ದಾರೆ. ಜೊತೆಗೆ ಈ ಪ್ರದೇಶದಲ್ಲಿ ನಡೆಯುತ್ತಿರುವ ಗಣಿಗಾರಿಕೆಗಳ ಬಗ್ಗೆ ತನಿಖೆ ನಡೆಸಬೇಕು ಎಂಬ ಒತ್ತಾಯವನ್ನು ತೀವ್ರಗೊಳಿಸಿದ್ದಾರೆ. ಹರ್ಯಾಣ ಕಾಂಗ್ರೆಸ್ ಅಧ್ಯಕ್ಷೆ ಕುಮಾರಿ ಸೆಲ್ಜಾ ಭಾನುವಾರದಂದು ನ್ಯಾಯಾಂಗ ತನಿಖೆಗೆ ಒತ್ತಾಯಿಸಿದ್ದಾರೆ.

ಇದನ್ನೂ ಓದಿ:ತೀವ್ರಗೊಳ್ಳುತ್ತಿರುವ ರೈತ ಹೋರಾಟ: ಹರಿಯಾಣದ 60 ಗ್ರಾಮಗಳಲ್ಲಿ ಬಿಜೆಪಿಗೆ ಪ್ರವೇಶ ನಿಷೇಧ

ಭಿವಾನಿಯಲ್ಲಿರುವ ಖಾನಕ್ ಮತ್ತು ದಾದಾಮ್ ಬೆಟ್ಟಗಳಲ್ಲಿ ದೊಡ್ಡ ಪ್ರಮಾಣದ ಗಣಿಗಾರಿಕೆ ನಡೆಸಲಾಗುತ್ತದೆ. ಹೆಚ್ಚುತ್ತಿರುವ ಮಾಲಿನ್ಯದ ಮಟ್ಟದಿಂದ ಗಣಿಗಾರಿಕೆ ಕೆಲಸವನ್ನು ಎರಡು ತಿಂಗಳ ಹಿಂದೆ ನಿಷೇಧಿಸಲಾಗಿತ್ತು.

ರಾಷ್ಟ್ರೀಯ ಹಸಿರು ನ್ಯಾಯಮಂಡಳಿ (NGT) ಪ್ರದೇಶದಲ್ಲಿ ಗಣಿಗಾರಿಕೆ ಕಾರ್ಯಾಚರಣೆಯನ್ನು ಪುನರಾರಂಭಿಸಲು ಗುರುವಾರ ಅನುಮತಿ ನೀಡಿತ್ತು. ಇದರ ಮರುದಿನ ಕೆಲಸ ಪ್ರಾರಂಭವಾಗಿತ್ತು.

ಎರಡು ತಿಂಗಳಿನಿಂದ ಗಣಿಗಳನ್ನು ಮುಚ್ಚಿದ್ದರಿಂದ ಕಟ್ಟಡ ನಿರ್ಮಾಣ ಸಾಮಗ್ರಿಗಳ ಕೊರತೆ ಉಂಟಾಗಿದೆ. ಈ ಕೊರತೆಯನ್ನು ನೀಗಿಸುವ ಸಲುವಾಗಿ ಸ್ಫೋಟಗಳನ್ನು ನಡೆಸಲಾತ್ತು, ಇದರಿಂದಾಗಿ ಭೂಕುಸಿತ ಉಂಟಾಗಿದೆ ಎಂದು ಊಹಿಸಲಾಗಿದೆ.

ಇದನ್ನೂ ಓದಿ:ಹರಿಯಾಣ: ದುಷ್ಕರ್ಮಿಗಳಿಂದ ಯೇಸು ಕ್ರಿಸ್ತನ ಪ್ರತಿಮೆ ಧ್ವಂಸ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಧರ್ಮದ ಕಾರಣಕ್ಕೆ ಹೈದರಾಬಾದ್ ಮೂಲದ ಮುಸ್ಲಿಂ ವ್ಯಕ್ತಿಗೆ ಹಲವು ಬಾರಿ ಇರಿತ: ಅಮೆರಿಕದ ಮಾಲ್‌ನಲ್ಲಿ ಕೃತ್ಯ

ಅಮೆರಿಕದ ಉತಾಹ್‌ನಲ್ಲಿರುವ ಶಾಪಿಂಗ್ ಮಾಲ್‌ನಲ್ಲಿ ಹೈದರಾಬಾದ್ ಮೂಲದ ಮುಸ್ಲಿಂ ವ್ಯಕ್ತಿಯೊಬ್ಬನಿಗೆ ಹಲವು ಬಾರಿ ಇರಿತದ ಆರೋಪ ಹೊರಿಸಲಾಗಿದೆ. ಹೈದರಾಬಾದ್‌ ನಗರದ ಟೋಲಿಚೌಕಿಯ ನಿವಾಸಿ ಸೈಯದ್ ಸೊಹೈಲ್ ಉದ್ದೀನ್, ಉತಾಹ್‌ನ ಸಾಲ್ಟ್ ಲೇಕ್ ಕೌಂಟಿಯ...

47 ವರ್ಷಗಳ ನಂತರ ಸಾಮೂಹಿಕ ಅತ್ಯಾಚಾರ ಪ್ರಕರಣದ ಶಿಕ್ಷೆ ಎತ್ತಿಹಿಡಿದ ಅಲಹಾಬಾದ್ ಹೈಕೋರ್ಟ್

1979 ರಲ್ಲಿ ನಡೆದಿದ್ದ ಅಪ್ರಾಪ್ತೆ ಮೇಲಿನ ಸಾಮೂಹಿಕ ಅತ್ಯಾಚಾರ ಪ್ರಕರಣದಲ್ಲಿ 71 ವರ್ಷದ ವ್ಯಕ್ತಿಯ ಶಿಕ್ಷೆಯನ್ನು ಅಲಹಾಬಾದ್ ಹೈಕೋರ್ಟ್ ಎತ್ತಿಹಿಡಿದಿದೆ. ಆದರೆ, ಕ್ರಿಮಿನಲ್ ಮೇಲ್ಮನವಿಯ 43 ವರ್ಷಗಳ ಸುದೀರ್ಘ ವಿಚಾರಣೆ ಮತ್ತು ಆತನ...

ಪಶ್ಚಿಮ ಬಂಗಾಳ: ಮುರ್ಷಿದಾಬಾದ್‌ನಲ್ಲಿ ಶಾಲಾ ವ್ಯಾನ್‌ಗೆ ರೈಲು ಡಿಕ್ಕಿ: ಇಬ್ಬರು ವಿದ್ಯಾರ್ಥಿಗಳು ಸೇರಿ 3 ಮಂದಿ ಸಾವು

ಮುರ್ಷಿದಾಬಾದ್: ದೇಶದಲ್ಲಿ ರೈಲ್ವೆ ಸುರಕ್ಷತೆಯ ಕುರಿತು ಸರ್ಕಾರಗಳು ದೊಡ್ಡ ದೊಡ್ಡ ಭರವಸೆ ಹಾಗೂ ಯೋಜನೆಗಳನ್ನು ಮಂಡಿಸುತ್ತಿದ್ದರೂ, ತಳಮಟ್ಟದ ವಾಸ್ತವ ಮಾತ್ರ ಇಂದಿಗೂ ಅತ್ಯಂತ ಭೀಕರವಾಗಿದೆ ಎಂಬುದಕ್ಕೆ ಪಶ್ಚಿಮ ಬಂಗಾಳದಲ್ಲಿ ನಡೆದ ಈ ಘೋರ...

ವಿಜಯ್ ನೇತೃತ್ವದ ಟಿವಿಕೆ ಸರ್ಕಾರವನ್ನು ಅಸ್ಥಿರಗೊಳಿಸಲು ‘ಪ್ರಾಜೆಕ್ಟ್ ಮೇಘಾಲಯ’ ಸಂಚು ಆರೋಪ : ಪತ್ರಕರ್ತನ ವಿಚಾರಣೆ

ತಮಿಳುನಾಡಿನ ಆಡಳಿತಾರೂಢ ತಮಿಳಗ ವೆಟ್ರಿ ಕಳಗಂ (ಟಿವಿಕೆ) ಪಕ್ಷದ ಶಾಸಕ ಎನ್. ಇಲೈಯರಾಜ ಅವರಿಗೆ ಹಣದ ಆಮಿಷವೊಡ್ಡಲು ಯತ್ನಿಸಿದ ಆರೋಪ ಪ್ರಕರಣ ಸಂಬಂಧ ಚೆನ್ನೈ ಪೊಲೀಸರು 'ಪುದಿಯಾ ತಲೈಮುರೈ' ವಾಹಿನಿಯ ಪತ್ರಕರ್ತ ವಿಜಯನ್...

ಜಂತರ್ ಮಂತರ್ ಉಪವಾಸ ಸತ್ಯಾಗ್ರಹ ಸ್ಥಳಕ್ಕೆ ಕೇಜ್ರಿವಾಲ್ ಭೇಟಿ

ದೇಶಾದ್ಯಂತ ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿರುವ ನೀಟ್ (NEET) ಪರೀಕ್ಷಾ ಅಕ್ರಮ ಹಾಗೂ ಪ್ರಶ್ನೆ ಪತ್ರಿಕೆ ಸೋರಿಕೆ ಖಂಡಿಸಿ ಜಂತರ್ ಮಂತರ್‌ನಲ್ಲಿ ಆಮರಣಾಂತ ಉಪವಾಸ ಸತ್ಯಾಗ್ರಹ ನಡೆಸುತ್ತಿರುವ ಖ್ಯಾತ ಶಿಕ್ಷಣ ತಜ್ಞ ಹಾಗೂ ಪರಿಸರ...

E20 ಪೆಟ್ರೋಲ್ ಪ್ರಕರಣ : ‘ಗ್ರ್ಯಾಂಡ್ ವಿಟಾರಾ’ ಕಾರು ಬದಲಾಯಿಸಿ ಕೊಡಲು ಮಾರುತಿ ಸುಝುಕಿಗೆ ಗ್ರಾಹಕ ನ್ಯಾಯಾಲಯ ಆದೇಶ

ಛತ್ತೀಸ್‌ಗಢದ ರಾಯ್‌ಪುರದ ಜಿಲ್ಲಾ ಗ್ರಾಹಕ ವಿವಾದಗಳ ಪರಿಹಾರ ಆಯೋಗವು (ಡಿಸಿಡಿಆರ್‌ಸಿ), E20 ಇಂಧನ (ಪೆಟ್ರೋಲ್) ಬಳಕೆಯಿಂದಾಗಿ ಕಾರು ಕೆಟ್ಟುಹೋಗಿದೆ ಎಂದು ಆರೋಪಿಸಿದ ವ್ಯಕ್ತಿಗೆ ಹೊಸ 'ಗ್ರಾಂಡ್ ವಿಟಾರಾ' ಕಾರನ್ನು ನೀಡುವಂತೆ ಕಾರು ತಯಾರಿಕಾ...

ಸಿಜೆಪಿ ಶಾಂತಿಯುತ ಪ್ರತಿಭಟನೆಗೆ ನಿರಂತರ ಪೊಲೀಸ್ ಕಣ್ಗಾವಲು ಪ್ರಶ್ನಿಸಿ ದೆಹಲಿ ಹೈಕೋರ್ಟ್‌ಗೆ ಅರ್ಜಿ

ರಾಷ್ಟ್ರ ರಾಜಧಾನಿ ದೆಹಲಿಯ ಜಂತರ್ ಮಂತರ್‌ನಲ್ಲಿ ಜಿರಳೆ ಜನತಾ ಪಕ್ಷ (ಸಿಜೆಪಿ) ಆಯೋಜಿಸಿರುವ ಶಾಂತಿಯುತ ಧರಣಿ ಮತ್ತು ಉಪವಾಸ ಸತ್ಯಾಗ್ರಹದಲ್ಲಿ ಭಾಗವಹಿಸುವ ನಾಗರಿಕರ ಮೇಲೆ ದೆಹಲಿ ಪೊಲೀಸರು ನಿರಂತರ ಮತ್ತು ವ್ಯಾಪಕ ಕಣ್ಗಾವಲು...

IAS ಆಗುವ ಮುನ್ನ ‘ಪರಿಪೂರ್ಣ ತಾಯಿ’ಯಾಗಿ ಎಂದ ರಾಜ್ಯಪಾಲರ ಸಲಹೆ ಪುರುಷ ಪ್ರಾಧ್ಯಾನ್ಯತೆಯ ಮುಂದುವರೆದ ಆಚರಣೆ ಅಲ್ಲವೆ?

ಇತ್ತೀಚೆಗೆ ಉತ್ತರ ಪ್ರದೇಶದ ರಾಜ್ಯಪಾಲರಾದ ಆನಂದಿಬೆನ್ ಪಟೇಲ್ ಅವರು, "ಮಹಿಳೆಯರು IAS ಅಧಿಕಾರಿ ಅಥವಾ ಶಿಕ್ಷಕಿಯಾಗುವ ಕನಸು ಕಾಣುವ ಮೊದಲು 'ಪರಿಣಿತ ತಾಯಿ' ಆಗುವುದನ್ನು ಕಲಿಯಬೇಕು ಎಂದು ಸಲಹೆ ನೀಡಿದ್ದರು. ಕಾನ್ಪುರದ ಛತ್ರಪತಿ...

ಹಿಂದಿನ ಮದುವೆ, ಮಗು ವಿಚಾರ ಮುಚ್ಚಿಟ್ಟಿದ್ದಕ್ಕೆ ಸಹೋದರನೊಂದಿಗಿನ ಸಂಬಂಧ ಮುರಿದುಕೊಂಡಿದ್ದ ಕಾನೂನು ವಿದ್ಯಾರ್ಥಿನಿಯನ್ನು ಇರಿದು ಕೊಂದ ತಮ್ಮ

ಬೆಂಗಳೂರು: ಮೊದಲ ಮದುವೆ ಹಾಗೂ ಮಗುವಿದ್ದ ವಿಷಯವನ್ನು ಮುಚ್ಚಿಟ್ಟು ವಂಚಿಸಿದ್ದ ಪ್ರಿಯಕರನೊಂದಿಗಿನ ಸಂಬಂಧವನ್ನು ಮುರಿದುಕೊಂಡ ಕಾರಣಕ್ಕೆ, ಆತನ ಸಹೋದರನಿಂದಲೇ ಚಾಕು ಇರಿತಕ್ಕೊಳಗಾಗಿದ್ದ ಕಾನೂನು ವಿದ್ಯಾರ್ಥಿನಿಯೊಬ್ಬಳು ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿರುವ ಘಟನೆ ಸಿಲಿಕಾನ್ ಸಿಟಿಯಲ್ಲಿ...

ಮಕ್ಕಳ ಕ್ಯಾನ್ಸರ್ ಆಸ್ಪತ್ರೆಯ ಮೇಲೆ ಅಮೆರಿಕ ದಾಳಿಗೆ ಇರಾನ್‌ನಿಂದ ಪ್ರತೀಕಾರ

ಕಳೆದ ಗುರುವಾರ (ಜು.16) ಖುಜೆಸ್ತಾನ್ ಪ್ರಾಂತ್ಯದಲ್ಲಿರುವ ಮಕ್ಕಳ ಕ್ಯಾನ್ಸರ್ ಆಸ್ಪತ್ರೆಯ ಮೇಲೆ ನಡೆದ ದಾಳಿಗೆ ಪ್ರತೀಕಾರವಾಗಿ, ಕುವೈತ್ ಮತ್ತು ಬಹ್ರೇನ್ ಸೇರಿದಂತೆ ಗಲ್ಫ್ ರಾಷ್ಟ್ರಗಳಲ್ಲಿರುವ ಅಮೆರಿಕದ ವಾಯು ನೆಲೆಗಳ ಮೇಲೆ ಇರಾನ್ ಪ್ರತಿದಾಳಿ...