Homeಅಂತರಾಷ್ಟ್ರೀಯಶ್ರೀಲಂಕಾ: ಹೊತ್ತಿ ಉರಿದ ದೈತ್ಯ ಹಡಗು - ಸಮುದ್ರ ದಡಕ್ಕೆ ತೇಲಿಬರುತ್ತಿವೆ ಜಲಚರಗಳ ಮೃತದೇಹ

ಶ್ರೀಲಂಕಾ: ಹೊತ್ತಿ ಉರಿದ ದೈತ್ಯ ಹಡಗು – ಸಮುದ್ರ ದಡಕ್ಕೆ ತೇಲಿಬರುತ್ತಿವೆ ಜಲಚರಗಳ ಮೃತದೇಹ

- Advertisement -
- Advertisement -

ಕೆಲ ದಿನಗಳ ಹಿಂದೆ ಕೊಲೊಂಬೊ ಬಂದರಿನಲ್ಲಿ ಸಿಂಗಾಪುರ ಮೂಲದ ಎಕ್ಸ್‌ಪ್ರೆಸ್‌ ಪರ್ಲ್ ಎಂಬ ಹಡಗು ಮುಳುಗಡೆಯಾಗಿದೆ. ನೂರಾರು ಟನ್ ರಾಸಾಯನಿಕಗಳನ್ನು ಮತ್ತು ತೈಲವನ್ನು ಸಾಗಿಸುತ್ತಿದ್ದ ಹಡಗು ಸಮುದ್ರದಲ್ಲಿ ಸ್ಫೋಟಗೊಂಡ ಪರಿಣಾಮ ಕೊಲೊಂಬೊ ಸುತ್ತಲಿನ ಸಮುದ್ರ ವಾತಾವರಣದಲ್ಲಿ ತೀವ್ರ ಬದಲಾವಣೆಯಾಗಿದ್ದು ನೂರಾರು ಜಲಚರಗಳ ಮೃತದೇಹಗಳು ಸಮುದ್ರ ದಂಡೆಗೆ ತೇಲಿ ಬರುತ್ತಿವೆ. ಕಳೆದ ಒಂದು ವಾರದ ಅವಧಿಯಲ್ಲಿ ಸುಮಾರು 176 ಕಡಲಾಮೆಗಳ ಮೃತದೇಹ ಕೊಲಂಬೊ ತೀರದಲ್ಲಿ ಕಾಣಿಸಿಕೊಂಡಿದ್ದರೆ 20ಕ್ಕೂ ಹೆಚ್ಚು ಡಾಲ್ಫಿನ್‌ಗಳು, 4 ಬೃಹತ್ ತಿಮಿಂಗಲಗಳು ಮತ್ತು ಸಾವಿರಾರು ಸಂಖ್ಯೆಯ ವಿವಿಧ ಜಾತಿಯ ಮತ್ಸ್ಯ ತಳಿಗಳ  ಮೃತದೇಹಗಳು ಸಮುದ್ರ ತೀರದಲ್ಲಿ ರಾಶಿ ರಾಶಿಯಾಗಿ ಬಂದು ಬೀಳತೊಡಗಿದೆ.

ಎಕ್ಸ್‌ಪ್ರೆಸ್‌ ಪರ್ಲ್‌ ಹಡಗು 238 ಟನ್‌ಗಳಷ್ಟು ದ್ರವ ಇಂದನ ಮತ್ತು 50 ಟನ್‌ಗಳಷ್ಟು ಗ್ಯಾಸ್‌ ಅನ್ನು ತುಂಬಿ ಕೊಲಂಬೊ ತೀರದಲ್ಲಿ ಮುಳುಗಿದೆ. ದಶಕಗಳ ಕಾಲ ಪರಿಸರದ ಮೇಲೆ ಇದರ ಪರಿಣಾಮ ಉಳಿಯಲಿದೆ ಎಂದು ಪರಿಸರ ತಜ್ಞರು ಹೇಳಿದ್ದಾರೆ. ಶ್ರೀಲಂಕಾದ ಇತಿಹಾಸದಲ್ಲಿ ಇಷ್ಟು ದೊಡ್ಡ ಪ್ರಮಾಣದ ಹಡಗು ದುರಂತ ನಡೆದಿರಲಿಲ್ಲ ಎಂದು ಅಲ್ಲಿನ ಸರ್ಕಾರ ತಿಳಿಸಿದೆ.

ಶ್ರೀಲಂಕದ ಕೊಲಂಬೊ ತೀರಕ್ಕೆ ತೇಲಿ ಬರುತ್ತಿರುವ ಆಮೆಗಳ ಮೃತ ದೇಹ (PC : BBC)

ಇದನ್ನೂ ಓದಿ: ಈಜಿಪ್ಟ್‌ನ ಸುಯೆಜ್ ಕಾಲುವೆಯ ಮಧ್ಯೆ ಸಿಲುಕಿದ ಬೃಹತ್ ಹಡಗು – ಕೋಟ್ಯಂತರ ಡಾಲರ್ ನಷ್ಟ!

ಹಡಗಿನಲ್ಲಿದ್ದ ವಿಷಕಾರಿ ಅನಿಲಗಳು ಮತ್ತು ರಾಸಾಯನಿಕಗಳು ಸಮುದ್ರದಲ್ಲಿ ಬೆರೆತು ಹಿಂದು ಮಹಾಸಾಗರದ ನೂರಾರು ಕಿಲೋಮೀಟರ್‌ ವರೆಗಿನ ಜೀವ ಸಂಕಲ ವಿಷಕಾರಿಯಾಗಲಿದೆ. ಈ ಪ್ರದೆಶದಲ್ಲಿನ ಮೀನು ಸೇರಿದಂತೆ ಸಮುದ್ರ ಮೂಲದ ಆಹಾರ ತಿನ್ನುವ ಲಕ್ಷಾಂತರ ಜನರ ಆರೋಗ್ಯದ ಮೇಲೆ ಇದು ದೀರ್ಘಕಾಲದಲ್ಲಿ ಪರಿಣಾಮ ಬೀರಲಿದೆ ಎಂದು ಕೊಲಂಬೊ ಮೂಲದ ಪರಿಸರ ಸಂಘಟನೆಯೊಂದು ಎಚ್ಚರಿಕೆ ನೀಡಿದೆ.

ನೈರುತ್ಯ ಮಾನ್ಸೂನ್‌ ಸಂದರ್ಭದಲ್ಲಿ ಜಲಚರಗಳು ಇಷ್ಟು ಪ್ರಮಾಣದಲ್ಲಿ ಮೃತಪಟ್ಟ ದಾಖಲೆಯಿಲ್ಲ. ಸಾವಿರಾರು ಸಂಖ್ಯೆಯ ಜೀವ ಸಂಕುಲ ಒಮ್ಮೆಗೆ ಇಷ್ಟು ದೊಡ್ಡ ಪ್ರಮಾಣದಲ್ಲಿ ಅಪಾಯಕ್ಕೆ ತುತ್ತಾಗಿರುವುದು ಸಾಮಾನ್ಯ ಘಟನೆಯಲ್ಲ ಎಂದು ಶ್ರೀಲಂಕಾದ ಪರಿಸರ ಸಚಿವ ಮಹಿಂದ ಅಮರವೀರ ಅಭಿಪ್ರಾಯ ಪಟ್ಟಿದ್ದಾರೆ.

ವಿಷಕಾರಿ ಅನಿಲ ಮತ್ತು ರಾಸಾಯಿನಿಕದ ಸೋರಿಕೆಯಿಂದ ಮೃತಪಟ್ಟ ದೈತ್ಯ ಕಡಲಾಮೆ

186 ಮೀಟರ್ ಉದ್ದದ ಎಕ್ಸ್‌ಪ್ರೆಸ್‌ ಪರ್ಲ್ ಹಡಗು ಮೇ 15 ರಂದು ಭಾರತದ ಹಜೀರಾ ಬಂದರಿನಿಂದ ಕೊಲಂಬೊ ಕಡೆಗೆ ಪ್ರಯಾಣ ಬೆಳೆಸಿತ್ತು. ಈ ಹಿಂದೆ ಕತಾರ್ ಮತ್ತು ಭಾರತದ ಅಧಿಕಾರಿಗಳು ತಮ್ಮ ಬಂದರಿನಲ್ಲಿ ಹಡಗನ್ನು ನಿಲ್ಲಿಸಲು ಅವಕಾಶವನ್ನು ನೀಡಿರಲಿಲ್ಲ.

ಹಡಗು ದುರಂತ ಸಂಭವಿಸಿರುವ ಸುತ್ತಮುತ್ತದ ಸಮುದ್ರ ಪ್ರದೇಶದಲ್ಲಿ ಶ್ರೀಲಂಕಾ ಸರ್ಕಾರ ಮೀನುಗಾರಿಕೆಯನ್ನು ನಿಷೇಧಿಸಿದ್ದು ಸುಮಾರು 50,000 ಜನ ಮೀನುಗಾರಿಕೆಯನ್ನೇ ಅವಲಂಬಿಸಿರುವ ಜನರು ಆರ್ಥಿಕವಾಗಿ ಸಂಕಷ್ಟಕ್ಕೆ ಒಳಗಾಗಿದ್ದಾರೆ.

ನೈಟ್ರಿಕ್ ಆಸಿಡ್ ಸೋರಿಕೆಯಿಂದ ಹಡಗಿನಲ್ಲಿ ಬೆಂಕಿ ಕಾಣಿಸಿಕೊಂಡಿದೆ ಎಂದು ಪ್ರಾಥಮಿಕ ತನಿಖೆಯಲ್ಲಿ ಕಂಡು ಬಂದಿದ್ದು ಮೇ 11 ರಿಂದಲೇ ಹಡಗಿನಲ್ಲಿ ಅನಿಲ ಸೋರಿಕೆಯಾಗುತ್ತಿತ್ತು ಎಂಬ ಅಂಶ ಕೂಡ ತನಿಖೆಯಲ್ಲಿ ಪತ್ತೆಯಾಗಿದೆ.

ಅನಿಲ ಸೋರಿಕೆಯ ವಿಷಯವನ್ನು ಮೊದಲೇ ತಿಳಿದಿದ್ದರೂ ಹಡಗಿನ ಸಿಬ್ಬಂದಿ ಯಾವುದೇ ಕ್ರಮವನ್ನು ಕೈಗೊಳ್ಳದಿರುವುದೇ ಈ ಮಹಾ ದುರಂತಕ್ಕೆ ಕಾರಣ ಎಂದು ಶ್ರೀಲಂಕಾ ಸರ್ಕಾರ ಹಡಗು ಕಂಪನಿಯ ಮೇಲೆ ಆರೋಪಿಸಿದೆ. ಹಡಗಿನಲ್ಲಿ ಅನಿಲ ಸೋರಿಕೆಯಾಗುತ್ತಿರುವ ವಿಷಯ ಮೇ 11 ರ ವೇಳೆಯಲ್ಲಿಯೇ ಗಮನಕ್ಕೆ ಬಂದಿತ್ತು ಎಂದು ಹಡಗಿನ ಮಾಲೀಕರು ತಿಳಿಸಿದ್ದಾರೆ.

ಶ್ರೀಲಂಕಾ ನ್ಯಾಯಾಲಯದಲ್ಲಿ ಜುಲೈ 15 ರಿಂದ ಪ್ರಕರಣದ ವಿಚಾರಣೆ ಆರಂಭವಾಗಲಿದ್ದು ಪರಿಸರಹಾನಿ, ಜೀವಹಾನಿ, ಮೀನುಗಾರರ ಆರ್ಥಿಕ ಸಂಕಷ್ಟಕ್ಕೆ ಕಾರಣವಾದ ಹಡಗು ಮಾಲೀಕರು ಮತ್ತು ಶ್ರೀಲಂಕಾ ಸರ್ಕಾರದ ಮೇಲೆ ಜನರ ಆಕ್ರೋಶ ಭುಗಿಲೆದ್ದಿದೆ.


ದನ್ನೂ ಓದಿ: ಈಜಿಪ್ಟ್‌ನ ಸುಯೆಜ್ ಕಾಲುವೆಯ ಮಧ್ಯೆ ಸಿಲುಕಿದ ಬೃಹತ್ ಹಡಗು – ಕೋಟ್ಯಂತರ ಡಾಲರ್ ನಷ್ಟ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...