Homeಮುಖಪುಟಜಮ್ಮು ಕಾಶ್ಮೀರದಲ್ಲಿ ಸೆರೆ ಸಿಕ್ಕ ಲಷ್ಕರ್-ಎ-ತೊಯ್ಬಾ ಉಗ್ರ ಬಿಜೆಪಿ ಐಟಿ ಸೆಲ್ ಮುಖ್ಯಸ್ಥ!

ಜಮ್ಮು ಕಾಶ್ಮೀರದಲ್ಲಿ ಸೆರೆ ಸಿಕ್ಕ ಲಷ್ಕರ್-ಎ-ತೊಯ್ಬಾ ಉಗ್ರ ಬಿಜೆಪಿ ಐಟಿ ಸೆಲ್ ಮುಖ್ಯಸ್ಥ!

- Advertisement -
- Advertisement -

ಇಂದು ಜಮ್ಮು ಮತ್ತು ಕಾಶ್ಮೀರದಲ್ಲಿ ಸೆರೆ ಸಿಕ್ಕ ಲಷ್ಕರ್-ಎ-ತೊಯ್ಬಾ ಉಗ್ರ ಬಿಜೆಪಿಯ ಸಕ್ರಿಯ ಸದಸ್ಯನಾಗಿದ್ದ ಜೊತೆಗೆ ಜಮ್ಮು ಬಿಜೆಪಿ ಅಲ್ಪಸಂಖ್ಯಾತ ಮೋರ್ಚಾ ಸಾಮಾಜಿಕ ಮಾಧ್ಯಮ ಉಸ್ತುವಾರಿ ಕೂಡ ಆಗಿದ್ದ ಎಂಬ ಸ್ಪೋಟಕ ಮಾಹಿತಿ ಕುರಿತು ಎನ್‌ಡಿಟಿವಿ ವರದಿ ಮಾಡಿದೆ.

ಇಂದು ಬೆಳಗ್ಗೆ ಜಮ್ಮುವಿನ ರಿಯಾಸಿ ಪ್ರದೇಶದಲ್ಲಿ ಉಗ್ರರಾದ ತಾಲಿಬ್ ಹುಸೇನ್ ಶಾ ಮತ್ತು ಆತನ ಸಹಚರರನ್ನು ಗ್ರಾಮಸ್ಥರು ಸೆರೆ ಹಿಡಿದಿದ್ದಾರೆ. ಅವರಿಂದ ಎರಡು ಎಕೆ ರೈಫಲ್‌ಗಳು, ಹಲವಾರು ಗ್ರೆನೇಡ್‌ಗಳು ಮತ್ತು ಇತರ ಶಸ್ತ್ರಾಸ್ತ್ರಗಳು ಮತ್ತು ಮದ್ದುಗುಂಡುಗಳನ್ನು ವಶಪಡಿಸಿಕೊಂಡು, ಅವರನ್ನು ಪೊಲೀಸರಿಗೆ ಒಪ್ಪಿಸಲಾಗಿತ್ತು.

ಮೇ 9 ರಂದು ಬಿಜೆಪಿಯು ಜಮ್ಮು ಪ್ರಾಂತ್ಯದಲ್ಲಿ ಪಕ್ಷದ ಐಟಿ ಮತ್ತು ಸಾಮಾಜಿಕ ಮಾಧ್ಯಮದ ಉಸ್ತುವಾರಿಯಾಗಿ ತಾಲಿಬ್ ಹುಸೇನ್ ಶಾನನ್ನು ನೇಮಿಸಲಾಗಿತ್ತು ಎನ್ನಲಾಗಿದೆ. ಜಮ್ಮು ಕಾಶ್ಮೀರದ ಬಿಜೆಪಿ ಅಧ್ಯಕ್ಷ ರವೀಂದ್ರ ರೈನಾ ಸೇರಿದಂತೆ ಬಿಜೆಪಿಯ ಹಿರಿಯ ನಾಯಕರೊಂದಿಗೆ ಉಗ್ರ ಶಾ ಇರುವ ಹಲವರು ಫೋಟೊಗಲು ವೈರಲ್ ಆಗುತ್ತಿವೆ.

ಭಯೋತ್ಪಾದಕನೊಬ್ಬನನ್ನು ಪಕ್ಷದ ಐಟಿ ಸೆಲ್ ಮುಖ್ಯಸ್ಥನಾಗಿ ಬಿಜೆಪಿ ನೇಮಿಸಿದೆ, ಹೆಸರಿಗೆ ಮಾತ್ರ ಭಯೋತ್ಪಾದನೆ ವಿರುದ್ಧ ಹೋರಾಡುವ ಬಿಜೆಪಿಯು ಭಯೋತ್ಪಾದಕರನ್ನೇ ಸಾಕುತ್ತಿದೆ ಎಂದು ಹಲವಾರು ಜನರು ದೂರಿದ್ದಾರೆ.

ಬಿಜೆಪಿ ಪಕ್ಷದಲ್ಲಿಯೇ ಉಗ್ರಿದ್ದಾರೆ ಎಂಬ ಆರೋಪದ ಬಗ್ಗೆ ಪ್ರತಿಕ್ರಿಯಿಸಿರುವ ಪಕ್ಷವು, “ಆನ್‌ಲೈನ್ ಸದಸ್ಯತ್ವ ವ್ಯವಸ್ಥೆಯು ಯಾವುದೇ ಹಿನ್ನೆಲೆ ಪರಿಶೀಲನೆಯಿಲ್ಲದೆ ಜನರನ್ನು ಪಕ್ಷಕ್ಕೆ ಸೇರಲು ಅನುವು ಮಾಡಿಕೊಡುತ್ತದೆ” ಎಂದು ಹೇಳುವ ಮೂಲಕ ಜಾರಿಕೊಳ್ಳಲು ಯತ್ನಿಸಿದೆ.

ಬಿಜೆಪಿ ವಕ್ತಾರ ಆರ್.ಎಸ್.ಪಠಾನಿಯಾ ಮಾತನಾಡಿ, “ಇದು ಹೊಸ ಮಾದರಿಯಾಗಿದೆ. ಉಗ್ರರು ಬಿಜೆಪಿಗೆ ಪ್ರವೇಶ ಪಡೆಯುವುದು, ಅಲ್ಲಿ ಹೆಸರು ಗಳಿಸುವುದು ನಂತರ ಉನ್ನತ ನಾಯಕತ್ವವನ್ನು ಕೊಲ್ಲುವ ಸಂಚು ಮಾಡಿದ್ದರು, ಆದರೆ ಅದನ್ನು ಪೊಲೀಸರು ಭೇದಿಸಿದ್ದರು” ಎಂದು ಹೇಳಿದ್ದಾರೆ.

“ಗಡಿಯಲ್ಲಿ, ಭಯೋತ್ಪಾದನೆಯನ್ನು ಹರಡಲು ಬಯಸುವವರು ಇದ್ದಾರೆ. ಈಗ ಯಾರು ಬೇಕಾದರೂ ಆನ್‌ಲೈನ್‌ನಲ್ಲಿ ಬಿಜೆಪಿ ಸದಸ್ಯರಾಗಬಹುದು. ಇದು ಒಂದು ನ್ಯೂನತೆ ಎಂದು ನಾನು ಹೇಳುತ್ತೇನೆ ಏಕೆಂದರೆ ಅಪರಾಧ ದಾಖಲೆ ಅಥವಾ ಜನರ ಪೂರ್ವಾಪರಗಳನ್ನು ಪರಿಶೀಲಿಸುವ ವ್ಯವಸ್ಥೆ ಇಲ್ಲ” ಎಂದು ಅವರು ಹೇಳಿದರು.

ಸಾಮಾನ್ಯ ಸದಸ್ಯರಾದರೆ ಬೇರೆ ವಿಚಾರ. ಆದರೆ ಬಂಧಿಸಲ್ಪಟ್ಟಿರುವ ಉಗ್ರನಿಗೆ ಸಾಮಾಜಿಕ ಜಾಲತಾಣ ನಿರ್ವಹಣೆಯ ಹುದ್ದೆ ನೀಡಲಾಗಿದೆ. ಅಲ್ಲದೆ ಪಕ್ಷದ ಹಿರಿಯರೊಂದಿಗೆ ಆತನಿಗೆ ಉತ್ತಮ ಸಂಬಂಧವಿರುವುದು ಫೋಟೊಗಳಿಂದ ತಿಳಿದುಬಂದಿದೆ. ಇಷ್ಟಿದ್ದು ಆತ ಆನ್‌ಲೈನ್ ಮೂಲಕ ಸದಸ್ಯನಾಗಿದ್ದಾನೆ ಎಂಬುದನ್ನು ಒಪ್ಪಲು ಸಾಧ್ಯವೇ? ಎಂಬ ಪ್ರಶ್ನೆಗಳು ಕೇಳಿಬಂದಿವೆ.

“ಶ್ರೀ ತಾಲಿಬ್ ಹುಸೇನ್ ಷಾ, ಡ್ರಜ್ ಕೊಟ್ರಂಕಾ, ಬುಧಾನ್, ರಾಜೌರಿ ಜಿಲ್ಲೆ, ಇವರನ್ನು ತಕ್ಷಣವೇ ಜಾರಿಗೆ ಬರುವಂತೆ ಬಿಜೆಪಿ ಅಲ್ಪಸಂಖ್ಯಾತ ಮೋರ್ಚಾ ಜಮ್ಮು ಪ್ರಾಂತ್ಯದ ಹೊಸ ಐಟಿ ಮತ್ತು ಸಾಮಾಜಿಕ ಮಾಧ್ಯಮ ಉಸ್ತುವಾರಿಯಾಗನಿ ನೇಮಿಸಲಾಗಿದೆ” ಎಂದು ಬಿಜೆಪಿ J&K ಅಲ್ಪಸಂಖ್ಯಾತ ಮೋರ್ಚಾ ಮೇ 09 ರಂದು ಆದೇಶ ಹೊರಡಿಸಿತ್ತು. ಈ ಎರಡು ತಿಂಗಳೊಳಗೆ ಆತ ಭಯೋತ್ಪಾದನಾ ಚಟುವಟಿಕೆ ನಡೆಸಿ ಸಿಕ್ಕಿಬಿದ್ದಿದ್ದಾರೆ.

ಇದನ್ನೂ ಓದಿ: ಮಾನವ ಸಂಬಂಧಗಳನ್ನು ದ್ವೇಷದಿಂದ ಕದಡಿ ದೇಶ ಕಟ್ಟಲು ಸಾಧ್ಯವಿಲ್ಲ: ರಹಮತ್ ತರೀಕೆರೆ

ಉಗ್ರರನ್ನು ಹಿಡಿದುಕೊಟ್ಟ ರಿಯಾಸಿ ಜಿಲ್ಲೆಯ ತುಕ್ಸಾನ್‌ನ ಗ್ರಾಮಸ್ಥರ ಧೈರ್ಯವನ್ನು ಶ್ಲಾಘಿಸಿರುವ ಜಮ್ಮು ಮತ್ತು ಕಾಶ್ಮೀರದ ಲೆಫ್ಟಿನೆಂಟ್ ಗವರ್ನರ್ ಮತ್ತು ಪೊಲೀಸ್ ಮುಖ್ಯಸ್ಥರು ರಿಯಾಸಿ ಗ್ರಾಮಸ್ಥರಿಗೆ 2 ಲಕ್ಷ ರೂ ನಗದು ಬಹುಮಾನ ಘೋಷಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

2 COMMENTS

  1. ಬಿಜೆಪಿಯ ತುಂಡು ಬಿಸ್ಕೆಟ್ ತಿನ್ನುವ ಹಲ್ಕಟ್, ಕಜ್ಜಿ, ಕಂತ್ರಿ ನಾಯಿ ಒಂದು ಯಾವಾಗ್ಲೂ ಒಂದು ಧರ್ಮದ ವಿರುದ್ಧ ಬೊಗಳತಿತ್ತು ಇವಾಗ ಬಂದು ಬೊಗಳೋಕೆ ಯಾವುದಾದರು ಇನ್ನೊಂದು ಕಂತ್ರಿ ನಾಯಿ ತೊಡ್ಡು ಸಿಕ್ಕಿದಿಯಾ ಬಾಯಲ್ಲಿ..? ಅಪ್ಪನಿಗೆ ಹುಟ್ಟಿದವರು ಮಾತ್ರ ಸತ್ಯ ಹೇಳ್ತಾರೆ ಮತ್ತೆ ಬೇರೆಯವರು ಹೇಳುವ ಸತ್ಯವನ್ನು ಒಪ್ಪುತ್ತಾರೆ. ಇಡೀ ಕ್ರಿಕೆಟ್ ತಂಡಕ್ಕೆ ಹುಟ್ಟಿದೋರು ಬರಿ ಬೊಗಳೆ ಬಿಟ್ಕೊಂಡ ದೇಶದ ಸ್ವಾಸ್ತ್ಯ ಹಾಳು ಮಾಡತಾವೆ ### ಮಕ್ಕಳು

  2. ಕೆಲವು ಸಮುದಾಯಕ್ಕೆ ಸೇರಿದವರನ್ನ ಯಾವುದೇ ಹುದ್ದೆಗೆ ನೇಮಿಸಿದರೂ ಆ ಹುದ್ದೆಯಿಂದ ನಿರ್ಗಮಿಸಿದ ನಂತರ ದೇಶ ದ್ರೋಹಿಗಳೇ ಆಗೋದು ಅನ್ನೋದು ಅವರ ಮೂಲದಲ್ಲಿಯೇ ಅಡಗಿದೆ

LEAVE A REPLY

Please enter your comment!
Please enter your name here

- Advertisment -

ಐ-ಪ್ಯಾಕ್ ಮೇಲೆ ದಾಳಿ ಪ್ರಕರಣ: ಮಮತಾ ಬ್ಯಾನರ್ಜಿ ದೂರಿನ ಬೆನ್ನಲ್ಲೇ ಜಾರಿ ನಿರ್ದೇಶನಾಲಯದ ವಿರುದ್ಧ ಎಫ್‌ಐಆರ್

ಕೋಲ್ಕತ್ತಾ: ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ ನಡೆಸಿದ ದಾಳಿಗೆ ಸಂಬಂಧಿಸಿದಂತೆ ಟಿಎಂಸಿ ಅಧ್ಯಕ್ಷೆ ಮಮತಾ ಬ್ಯಾನರ್ಜಿ...

‘ಭ್ರಷ್ಟ ಜನತಾ ಪಾರ್ಟಿ’: ಬಿಜೆಪಿ ಡಬಲ್ ಎಂಜಿನ್ ಆಡಳಿತದ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ

ನವದೆಹಲಿ: ವಿವಿಧ ರಾಜ್ಯಗಳಲ್ಲಿ ಬಿಜೆಪಿಯ ಡಬಲ್ ಎಂಜಿನ್ ಸರ್ಕಾರಗಳ ವಿರುದ್ಧ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ.  ತಮ್ಮ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ರಾಹುಲ್, ಉತ್ತರಾಖಂಡದಲ್ಲಿ ಅಂಕಿತ...

ಇಂದೋರ್‌ನಲ್ಲಿ ಕಲುಷಿತ ನೀರಿಗೆ 8 ಮಂದಿ ಬಲಿ: ಆರ್‌ಎಸ್‌ಎಸ್ ಕಚೇರಿಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್: ಭುಗಿಲೆದ್ದ ವಿವಾದ

ಇಂದೋರ್: ಆರ್‌ಎಸ್‌ಎಸ್ ಕಚೇರಿಯಲ್ಲಿ ಬುಧವಾರ ತಡರಾತ್ರಿ ನಡೆದ ಸಭೆಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್ ಭಾಗವಹಿಸಿದ್ದು ಕಂಡುಬಂದ ನಂತರ ಗುರುವಾರ ಇಂದೋರ್‌ನಲ್ಲಿ ರಾಜಕೀಯ ವಿವಾದ ಭುಗಿಲೆದ್ದಿದೆ.  ಕನಿಷ್ಠ ಎಂಟು ಮಂದಿ ಜೀವಗಳನ್ನು ಬಲಿ ಪಡೆದಿರುವ ಕಲುಷಿತ...

ಐ-ಪ್ಯಾಕ್ ಮೇಲೆ ಇಡಿ ದಾಳಿ: ಕೋಲ್ಕತ್ತಾದಲ್ಲಿ ಮಮತಾ ಪ್ರತಿಭಟನೆ: ಅಮಿತ್ ಶಾ ಕಚೇರಿಯ ಹೊರಗೆ ಪ್ರತಿಭಟಿಸುತ್ತಿದ್ದ ಟಿಎಂಸಿ ಶಾಸಕರ ಬಂಧನ

ಗುರುವಾರ (ಜ.8) ಬೆಳಿಗ್ಗೆ ಕೋಲ್ಕತ್ತಾದ ಸಾಲ್ಟ್ ಲೇಕ್‌ನಲ್ಲಿರುವ ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ನಡೆಸಿದ...

ಮಹಾರಾಷ್ಟ್ರ ಜಲ್ನಾ ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣದ ಪ್ರಮುಖ ಆರೋಪಿ ಸ್ಪರ್ಧೆ!

ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆಯ ಆರೋಪಿ ಶ್ರೀಕಾಂತ್ ಪಂಗಾರ್ಕರ್ ಮುಂಬರುವ ಜಲ್ನಾ ಮುನ್ಸಿಪಲ್ ಕಾರ್ಪೊರೇಷನ್ ಚುನಾವಣೆಯಲ್ಲಿ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಿದ್ದಾರೆ ಎಂಬ ಸುದ್ದಿ  ಹಲವು ರಾಷ್ಟ್ರೀಯ ಮಾಧ್ಯಮಗಳಲ್ಲಿ ವರದಿಯಾಗಿದೆ.  ಗೌರಿ ಲಂಕೇಶ್ ಹತ್ಯೆ ಸೇರಿದಂತೆ...

‘ಮೋದಿ ಟ್ರಂಪ್‌ಗೆ ಕರೆ ಮಾಡದ ಕಾರಣ ಭಾರತ-ಯುಎಸ್ ವ್ಯಾಪಾರ ಒಪ್ಪಂದ ನಡೆಯಲಿಲ್ಲ’: ಹೊವಾರ್ಡ್ ಲುಟ್ನಿಕ್ 

ಪ್ರಧಾನಿ ನರೇಂದ್ರ ಮೋದಿ ಅವರು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರಿಗೆ ಸರಿಯಾದ ಸಮಯಕ್ಕೆ ಕರೆ ಮಾಡದ ಕಾರಣ ಭಾರತದೊಂದಿಗಿನ ವ್ಯಾಪಾರ ಒಪ್ಪಂದ ನಡೆಯಲಿಲ್ಲ ಎಂದು ಅಮೆರಿಕದ ವಾಣಿಜ್ಯ ಕಾರ್ಯದರ್ಶಿ ಹೊವಾರ್ಡ್ ಲುಟ್ನಿಕ್...

‘ರೈಲ್ವೆ ಸಚಿವಾಲಯವನ್ನು ವೈಯಕ್ತಿಕ ಆಸ್ತಿಯಾಗಿ ಬಳಸಿಕೊಳ್ಳಲಾಗಿದೆ’: ಲಾಲು ಮತ್ತು ಕುಟುಂಬದ ವಿರುದ್ಧ ದೆಹಲಿ ನ್ಯಾಯಾಲಯ ಆರೋಪ

ನವದೆಹಲಿ: ಉದ್ಯೋಗಕ್ಕಾಗಿ ಭೂಮಿ ಹಗರಣದಲ್ಲಿ ಆರ್‌ಜೆಡಿ ಮುಖ್ಯಸ್ಥ ಮತ್ತು ಮಾಜಿ ರೈಲ್ವೆ ಸಚಿವ ಲಾಲು ಪ್ರಸಾದ್ ಯಾದವ್, ಅವರ ಕುಟುಂಬದ ಸದಸ್ಯರು ಮತ್ತು ಇತರರ ವಿರುದ್ಧ ದೆಹಲಿ ನ್ಯಾಯಾಲಯ ಗಂಭೀರ ಆರೋಪಗಳನ್ನು ಮಾಡಿದೆ.  ಯಾದವ್...

‘ಕೇರಳದ ಮಲಯಾಳಂ ಮಸೂದೆಯನ್ನು ವಿರೋಧಿಸಲು ಸಾಧ್ಯವಿರುವ ಎಲ್ಲವನ್ನೂ ಮಾಡುತ್ತೇವೆ’: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಕನ್ನಡ ಮಾಧ್ಯಮ ಶಾಲೆಗಳಲ್ಲಿಯೂ ಮಲಯಾಳಂ ಅನ್ನು ಪ್ರಥಮ ಭಾಷೆಯನ್ನಾಗಿ ಮಾಡುವ ಕೇರಳದ ಪ್ರಸ್ತಾವಿತ ಕಾನೂನನ್ನು ವಿರೋಧಿಸಲು ಕರ್ನಾಟಕ "ಸಾಧ್ಯವಾದಷ್ಟು ಪ್ರಯತ್ನಿಸುತ್ತದೆ" ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.   ಪ್ರಸ್ತಾವಿತ ಮಲಯಾಳಂ ಭಾಷಾ ಮಸೂದೆಯು "ಕೇರಳದ...

ಜಾರ್ಖಂಡ್‌ನಲ್ಲಿ ಮತ್ತೊಂದು ಗುಂಪುಹತ್ಯೆ: ದನ ಕಳ್ಳತನದ ಶಂಕೆಯಲ್ಲಿ ಮುಸ್ಲಿಂ ವ್ಯಕ್ತಿಯನ್ನು ಥಳಿಸಿ ಕೊಂದ ಗುಂಪು

ಜಾರ್ಖಂಡ್‌ನ ಗೊಡ್ಡಾ ಜಿಲ್ಲೆಯಲ್ಲಿ ಬುಧವಾರ ದನಗಳನ್ನು ಕದ್ದಿದ್ದಾನೆ ಎಂಬ ಶಂಕೆಯಲ್ಲಿ 45 ವರ್ಷದ ಮುಸ್ಲಿಂ ವ್ಯಕ್ತಿಯನ್ನು ಅಪರಿಚಿತ ಜನರ ಗುಂಪೊಂದು ಹೊಡೆದು ಕೊಂದಿದೆ ಎಂದು ಪಿಟಿಐ ವರದಿ ಮಾಡಿದೆ. ಪೊಲೀಸ್ ಅಧಿಕಾರಿಗಳನ್ನು ಉಲ್ಲೇಖಿಸಿ ವರದಿ...

ನ್ಯಾಷನಲ್ ಹೆರಾಲ್ಡ್ ಜಾಹೀರಾತು ವಿವಾದ: ಹಣಕಾಸಿನ ದಾಖಲೆ ಕೇಳಿ ಡಿಕೆ ಸಹೋದರರಿಗೆ ನೋಟಿಸ್  

ಕಾಂಗ್ರೆಸ್ ನೇತೃತ್ವದ ಕರ್ನಾಟಕ ಸರ್ಕಾರದಿಂದ ನ್ಯಾಷನಲ್ ಹೆರಾಲ್ಡ್ ಪತ್ರಿಕೆಗೆ ಬೇರೆ ಯಾವುದೇ ರಾಷ್ಟ್ರೀಯ ದಿನಪತ್ರಿಕೆಗಿಂತ ಹೆಚ್ಚಿನ ಜಾಹೀರಾತು ನಿಧಿ ದೊರೆತಿದೆ ಎಂದು ವರದಿಯಾಗಿದೆ, ಇದು ಸಾರ್ವಜನಿಕ ಹಣದ ಬಳಕೆಯ ಬಗ್ಗೆ ಪ್ರಶ್ನೆಗಳನ್ನು ಹುಟ್ಟುಹಾಕಿದೆ....