Homeಮುಖಪುಟ2024ರ ಚುನಾವಣೆ ಪ್ರಜಾಪ್ರಭುತ್ವ ಉಳಿಸಲು ಜನರಿಗಿರುವ ಕೊನೆಯ ಅವಕಾಶ: ಮಲ್ಲಿಕಾರ್ಜುನ ಖರ್ಗೆ

2024ರ ಚುನಾವಣೆ ಪ್ರಜಾಪ್ರಭುತ್ವ ಉಳಿಸಲು ಜನರಿಗಿರುವ ಕೊನೆಯ ಅವಕಾಶ: ಮಲ್ಲಿಕಾರ್ಜುನ ಖರ್ಗೆ

- Advertisement -
- Advertisement -

2024ರ ಲೋಕಸಭೆ ಚುನಾವಣೆ ಪ್ರಜಾಪ್ರಭುತ್ವವನ್ನು ಉಳಿಸಲು ಜನರಿಗೆ ಕೊನೆಯ ಅವಕಾಶವಾಗಿದೆ, ಮುಂಬರುವ ಚುನಾವಣೆಯಲ್ಲಿ ಎನ್‌ಡಿಎ ಗೆದ್ದರೆ ಪ್ರಧಾನಿ ನರೇಂದ್ರ ಮೋದಿ ಸರ್ವಾಧಿಕಾರಕ್ಕೆ ಆದ್ಯತೆ ನೀಡುವ ಸಾಧ್ಯತೆ ಇದೆ ಎಂದು ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಹೇಳಿದ್ದಾರೆ.

ಬಿಜೆಪಿ ಮತ್ತು ಅದರ ಸಿದ್ಧಾಂತವಾದಿ ಆರೆಸ್ಸೆಸ್‌ ವಿಷ ಇದ್ದಂತೆ ಜನರು ಅದರಿಂದ ದೂರವಿರಬೇಕು ಎಂದು ಹೇಳಿದ ಮಲ್ಲಿಕಾರ್ಜುನ ಖರ್ಗೆ, ಭಾರತದಲ್ಲಿ ಪ್ರಜಾಪ್ರಭುತ್ವವನ್ನು ಉಳಿಸಲು ಇದು ಜನರಿಗೆ ಇರುವ ಕೊನೆಯ ಅವಕಾಶವಾಗಿದೆ. ನರೇಂದ್ರ ಮೋದಿ ಮತ್ತೊಂದು ಚುನಾವಣೆಯಲ್ಲಿ ಗೆದ್ದರೆ, ದೇಶದಲ್ಲಿ ಸರ್ವಾಧಿಕಾರ ನೆಲೆಯೂರಲಿದೆ. ರಷ್ಯಾದಲ್ಲಿ ಪುಟಿನ್ ಆಳ್ವಿಕೆ ನಡೆಸಿದಂತೆ ಬಿಜೆಪಿ ಭಾರತವನ್ನು ಆಳ್ವಿಕೆ ನಡೆಸಲಿದೆ ಎಂದು  ಹೇಳಿದ್ದಾರೆ.

ಬಿಜೆಪಿ ಮತ್ತು ಆರೆಸ್ಸೆಸ್ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ ಖರ್ಗೆ, ಪ್ರಧಾನಿ ಮೋದಿ ನೇತೃತ್ವದ ಪ್ರಸ್ತುತ ಸರ್ಕಾರವು, ಪ್ರತಿಪಕ್ಷಗಳ ನಾಯಕರನ್ನು ಬೆದರಿಸುವ ಮೂಲಕ ಆಳ್ವಿಕೆ ನಡೆಸುತ್ತಿದೆ ಎಂದು ಹೇಳಿದ್ದಾರೆ.

ನಮ್ಮ ನಾಯಕರಿಗೆ ಇಡಿ ಮತ್ತು ಆದಾಯ ತೆರಿಗೆ ಅಧಿಕಾರಿಗಲ ಮೂಲಕ ನೋಟಿಸ್ ಜಾರಿ ಮಾಡಲಾಗುತ್ತಿದ್ದು, ಇಡಿ ಮತ್ತು ಆದಾಯ ತೆರಿಗೆ ರಾಜಕೀಯ ವಿರೋಧಿಗಳನ್ನು ಮೆಟ್ಟಿ ನಿಲ್ಲುವ ಅಸ್ತ್ರಗಳಾಗಿ ಮಾರ್ಪಟ್ಟಿವೆ. ಬಿಜೆಪಿ ಮತ್ತು ಆರೆಸ್ಸೆಸ್ ಸಿದ್ಧಾಂತಗಳ ಬಗ್ಗೆ ಜನತೆ ಜಾಗೃತರಾಗಿರಬೇಕು. ಬಿಜೆಪಿ ಮತ್ತು ಆರೆಸ್ಸೆಸ್‌ ಸಿದ್ಧಾಂತಗಳನ್ನು ವಿರೋಧಿಸಿದರೆ ಪಕ್ಷ, ಮೈತ್ರಿ ತೊರೆಯಲು ನಾಯಕರಿಗೆ ಬೆದರಿಕೆ ಹಾಕಲಾಗುತ್ತಿದೆ ಎಂದು ಆರೋಪಿಸಿದ್ದಾರೆ.

ಬಿಜೆಪಿ ಮತ್ತು ಆರೆಸ್ಸೆಸ್‌ನ್ನು ವಿರೋಧಿಸುತ್ತಿರುವ ರಾಹುಲ್ ಗಾಂಧಿಗೆ ಪದೇ ಪದೇ ಬೆದರಿಕೆ ಹಾಕಲಾಗುತ್ತಿದೆ. ಆದರೆ ರಾಹುಲ್ ಗಾಂಧಿ ಅವರ ಒತ್ತಡಕ್ಕೆ ಒಳಗಾಗಲಿಲ್ಲ ಮತ್ತು ರಾಷ್ಟ್ರವನ್ನು ವಿಭಜಿಸಲು ಹೊರಟಿರುವ ಇಂತಹ ಶಕ್ತಿಗಳ ವಿರುದ್ಧ ಹೋರಾಟವನ್ನು ಮುಂದುವರೆಸಿದ್ದಾರೆ.  ಇಂದಿಗೂ ಮಣಿಪುರದಲ್ಲಿ ಜನರ ಹತ್ಯೆ, ಮಹಿಳೆಯರ ಮೇಲೆ ಅತ್ಯಾಚಾರ, ನೂರಾರು ಮನೆಗಳು, ಕಾರುಗಳಿಗೆ ಬೆಂಕಿ ಹಚ್ಚಲಾಗುತ್ತಿದೆ. ಮೋದಿಜೀ ಎಲ್ಲಿದ್ದಾರೆ, ಬಿಜೆಪಿ ಎಲ್ಲಿದೆ? ಎಂದು ಖರ್ಗೆ ಪ್ರಶ್ನಿಸಿದ್ದಾರೆ.

ಮಣಿಪುರ ಮತ್ತು ನಾಗಾಲ್ಯಾಂಡ್‌ಗೆ ಹೋಗಿ ಅಲ್ಲಿನ ಜನರಿಗೆ ನಿಮ್ಮ ಮುಖವನ್ನು ತೋರಿಸಿ, ಶಾಂತಿಯನ್ನು ಕಾಪಾಡುವುದು ಎಷ್ಟು ಕಷ್ಟ ಎಂದು ನಿಮಗೆ ಅರ್ಥವಾಗುತ್ತದೆ. ರಾಷ್ಟ್ರವನ್ನು ಒಗ್ಗೂಡಿಸಲು ನಾವು ತ್ಯಾಗ ಮಾಡಬೇಕಾಗುತ್ತದೆ. ನಿಮಗೆ ಆ ಧೈರ್ಯವಿಲ್ಲ. ಇಂದಿರಾ ಗಾಂಧಿಯವರು ತನ್ನ ಪ್ರಾಣದ ಅಪಾಯದ ಬಗ್ಗೆ ಅರಿವಿತ್ತು. ಇಂದಿರಾಜಿ ಒಡಿಶಾದಲ್ಲಿ ತಮ್ಮ ಕೊನೆಯ ಭಾಷಣದಲ್ಲಿ ತಮ್ಮ ಜೀವಕ್ಕೆ ಅಪಾಯದ ಬಗ್ಗೆ ಸೂಚಿಸಿದ್ದರು. ಆಕೆ ಮಾಡಿದ ತಪ್ಪೇನು, ಯಾರನ್ನಾದರೂ ಲೂಟಿ ಮಾಡಿದ್ದೀರಾ? ಇಲ್ಲ, ಅವರು ದೇಶವನ್ನು ಒಗ್ಗೂಡಿಸಲು ಶ್ರಮಿಸುತ್ತಿದ್ದರು. ಆದರೆ ಕೆಲವರು ಅವರನ್ನು ಕೊಂದರು. ರಾಜೀವ್ ಗಾಂಧಿಯವರು ತಮ್ಮ ತಾಯಿಯ ಹಾದಿಯಲ್ಲೇ ತಮ್ಮ ಪ್ರಾಣವನ್ನು ತ್ಯಾಗ ಮಾಡಿದ್ದಾರೆ ಎಂದು ಖರ್ಗೆ ಹೇಳಿದ್ದಾರೆ.

ಬಿಹಾರ ಮುಖ್ಯಮಂತ್ರಿ ನಿತೀಶ್‌ ಕುಮಾರ್‌ ಎನ್‌ಡಿಎಗೆ ಮರಳಿರುವುದು ಚುನಾವಣೆಯ ಮೇಲೆ ಯಾವುದೇ ಪರಿಣಾಮ ಬೀರುವುದಿಲ್ಲ. ಒಬ್ಬ ವ್ಯಕ್ತಿ ಮಹಾಘಟಬಂಧನ್ ತ್ಯಜಿಸುವುದರಿಂದ ನಮ್ಮನ್ನು  ದುರ್ಬಲಗೊಳಿಸುವುದಿಲ್ಲ, ನಾವು ಬಿಜೆಪಿಯನ್ನು ಸೋಲಿಸುತ್ತೇವೆ. ಪ್ರತಿ ವರ್ಷ ಎರಡು ಕೋಟಿ ಉದ್ಯೋಗ ಮತ್ತು ಪ್ರತಿಯೊಬ್ಬ ಭಾರತೀಯರ ಬ್ಯಾಂಕ್ ಖಾತೆಯಲ್ಲಿ 15 ಲಕ್ಷ ಹಣವನ್ನು ಭರವಸೆ ನೀಡುವ ಮೂಲಕ ಜನರನ್ನು ದಾರಿ ತಪ್ಪಿಸುತ್ತಿದ್ದಾರೆ. ಅವರು ಪ್ರಧಾನಿ ಮೋದಿಯನ್ನು ಸಾಮಾನ್ಯ ಸುಳ್ಳುಗಾರ ಎಂದು ಬಣ್ಣಿಸಿದ್ದಾರೆ.

ಮೋದಿ ಗುಜರಾತ್‌ನ ಮುಖ್ಯಮಂತ್ರಿಯಾಗಿ ಈಗ ಪ್ರಧಾನಿಯಾಗಿದ್ದೀರಿ ಏಕೆಂದರೆ ಕಾಂಗ್ರೆಸ್ ಪ್ರಜಾಪ್ರಭುತ್ವ ಮತ್ತು ಸಂವಿಧಾನವನ್ನು ಎತ್ತಿ  ಹಿಡಿದಿದೆ. ಆದರೆ ನೀವು ಈಗ  ಪ್ರಜಾಪ್ರಭುತ್ವ ಮತ್ತು ಸಂವಿಧಾನದ ಮೂಲಗಳನ್ನು ನಾಶ ಮಾಡುತ್ತಿದ್ದೀರಿ, ಸಂವಿಧಾನವನ್ನು ಸರಿಯಾಗಿ ಜಾರಿಗೊಳಿಸುವ ಮೂಲಕ ಮಹಿಳೆಯರು, ದಲಿತರು, ಬುಡಕಟ್ಟು ಜನಾಂಗದವರು ಮತ್ತು ದೀನದಲಿತರಿಗೆ ಹಕ್ಕುಗಳನ್ನು ಕಾಂಗ್ರೆಸ್ ನೀಡಿದೆ ಎಂದು ಅವರು ಹೇಳಿದ್ದಾರೆ.

ಒಡಿಶಾದ ಆಡಳಿತಾರೂಢ ಬಿಜೆಡಿ ಮತ್ತು ಪ್ರತಿಪಕ್ಷ ಬಿಜೆಪಿ ಪ್ರೇಮ ವಿವಾಹವನ್ನು ಮಾಡಿಕೊಂಡಿವೆ ಎಂದು ಹೇಳಿರುವ ಖರ್ಗೆ, ಎರಡು ಪಕ್ಷಗಳು ಒಡಿಶಾವನ್ನು ಲೂಟಿ ಮಾಡಿ ರಾಜ್ಯದ ಬಡ ಜನರನ್ನು ದಬ್ಬಾಳಿಕೆ ಮಾಡುತ್ತಿವೆ. ಬಿಜೆಪಿ ಮತ್ತು ಬಿಜೆಡಿ ಕೇವಲ ಶ್ರೀಮಂತರ ಜೊತೆಗಿದ್ದರೆ, ಕಾಂಗ್ರೆಸ್ ಯಾವಾಗಲೂ ಬಡವರ ಪರವಾಗಿ ನಿಲ್ಲುತ್ತದೆ ಎಂದು ಹೇಳಿದ್ದಾರೆ.

ಇದನ್ನು ಓದಿ: ಮೈಸೂರು: ಅಂಬೇಡ್ಕರ್‌ ನಾಮಫಲಕ ಅಳವಡಿಕೆ ವಿಚಾರದಲ್ಲಿ ಘರ್ಷಣೆ: 30ಕ್ಕೂ ಅಧಿಕ ಮಂದಿಗೆ ಗಾಯ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

14 ವರ್ಷದೊಳಗಿನ ಮಕ್ಕಳ ಧಾರ್ಮಿಕ ಶಿಕ್ಷಣ ನಿಯಂತ್ರಣಕ್ಕೆ ಅರ್ಜಿ: ಕೇಂದ್ರ ಶಿಕ್ಷಣ ಕಾರ್ಯದರ್ಶಿಗೆ ಸುಪ್ರೀಂ ಕೋರ್ಟ್ ನೋಟಿಸ್

14 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳಿಗೆ ಧಾರ್ಮಿಕ ಶಿಕ್ಷಣ ನೀಡುತ್ತಿರುವ ಸಂಸ್ಥೆಗಳ ನೋಂದಣಿ, ಮೇಲ್ವಿಚಾರಣೆ ಮತ್ತು ನಿಯಂತ್ರಣಕ್ಕೆ ಸಂಬಂಧಿಸಿದಂತೆ ಸಲ್ಲಿಸಲಾದ ಅರ್ಜಿಯನ್ನು ಪರಿಗಣಿಸುವಲ್ಲಿ ವಿಳಂಬವಾಗಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ಕೇಂದ್ರ ಶಿಕ್ಷಣ ಕಾರ್ಯದರ್ಶಿ...

ಸರ್ಕಾರದ 100 ದಿನ: ಪ್ರಚಾರದ ಸ್ವರೂಪವನ್ನೇ ಬದಲಿಸಿದ ಸರ್ಕಾರಿ ಜಾಹೀರಾತು

ಸಾಂಪ್ರದಾಯಿಕ ಪತ್ರಿಕಾ ಜಾಹೀರಾತುಗಳು, ಬ್ಯಾನರ್‌ಗಳು ಹಾಗೂ ಸರ್ಕಾರಿ ಕಾರ್ಯಕ್ರಮಗಳ ನಡುವೆ ಪ್ರಸಾರವಾಗುತ್ತಿದ್ದ ಜಾಹೀರಾತುಗಳ ಕಾಲವೀಗ ಬದಲಾಗಿದೆ. ಪ್ರಜೆಗಳ ಮನಸ್ಸನ್ನು ತಲುಪಲು ಅಧಿಕಾರದಲ್ಲಿರುವವರು ಆಯ್ದುಕೊಳ್ಳುವ ಮಾರ್ಗಗಳು ದಿನದಿಂದ ದಿನಕ್ಕೆ ರೂಪಾಂತರಗೊಳ್ಳುತ್ತಿವೆ. ಇದಕ್ಕೆ ಜ್ವಲಂತ ನಿದರ್ಶನ...

‘ಉಮರ್ ಖಾಲಿದ್ ಒಬ್ಬ ದೇಶಭಕ್ತ..’; ಸಾಕ್ಷ್ಯಚಿತ್ರ ಪ್ರದರ್ಶನ ವಿರೋಧಿಸಿದ ಎಬಿವಿಪಿ ವಿರುದ್ಧ ಹರಿಪ್ರಸಾದ್ ವಾಗ್ದಾಳಿ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯುನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು) ಹೋರಾಟಗಾರ ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನವನ್ನು ವಿರೋಧಿಸಿದ್ದಕ್ಕಾಗಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಬಿಕೆ ಹರಿಪ್ರಸಾದ್ ಅವರು ಮಂಗಳವಾರ...

ಜಂತರ್ ಮಂತರ್ ಹಲ್ಲೆ ಪ್ರಕರಣ: ಎಸ್‌ಸಿ/ಎಸ್‌ಟಿ, ಪೋಕ್ಸೊ ಕಾಯ್ದೆಯಡಿ ಬಂಧಿಸಲಾಗಿದ್ದ ಆರೋಪಿ ಸ್ವತಂತ್ರ ಭಾರದ್ವಾಜ್‌ಗೆ ಮಧ್ಯಂತರ ಜಾಮೀನು

ನವದೆಹಲಿ: ಜಂತರ್ ಮಂತರ್‌ನಲ್ಲಿ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಸ್ವತಂತ್ರ ಭಾರದ್ವಾಜ್‌ಗೆ ದೆಹಲಿಯ ಪಟಿಯಾಲ ಹೌಸ್ ನ್ಯಾಯಾಲಯ ಮೂರು ವಾರಗಳ ಮಧ್ಯಂತರ ಜಾಮೀನು ಮಂಜೂರು ಮಾಡಿದೆ....

ವಿಡಿಯೋದಲ್ಲಿ ‘ಅಸ್ಸಲಾಮು ಅಲೈಕುಮ್’ – ‘ಇನ್ಶಾ ಅಲ್ಲಾ’ ಎಂದಿದ್ದಕ್ಕೆ ಐಪಿಎಸ್ ಅಧಿಕಾರಿ ವರ್ಗಾವಣೆ

'ಅಸ್ಸಲಾಮು ಅಲೈಕುಮ್' ಮತ್ತು 'ಇನ್ಶಾ ಅಲ್ಲಾ' ಎಂದಿದ್ದಕ್ಕೆ ಬಲಪಂಥೀಯ ಸಂಘಟನೆಯೊಂದು ಪಶ್ಚಿಮ ಬಂಗಾಳದ ಗೃಹ ಕಾರ್ಯದರ್ಶಿಗೆ ದೂರು ನೀಡಿದ ಬೆನ್ನಲ್ಲೇ, ಭಾರತೀಯ ಪೊಲೀಸ್ ಸೇವೆ (ಐಪಿಎಸ್) ಅಧಿಕಾರಿ ಬುಷ್ರಾ ಬಾನೋ ಅವರನ್ನು ವರ್ಗಾವಣೆ...

ಪಾನ್ ಮಸಾಲಾ ಜಾಹೀರಾತು ವಿವಾದ: ಶಾರುಖ್, ಅಜಯ್ , ಶ್ರಾಫ್‌ ಅರ್ಜಿ ವಜಾಗೊಳಿಸಿದ ದೆಹಲಿ ಹೈಕೋರ್ಟ್‌

ವಿಮಲ್ ಇಲಾಯಚಿ ಹೆಸರಿನಲ್ಲಿ ನಿಷೇಧಿತ ಪಾನ್ ಮಸಾಲಾ ಉತ್ಪನ್ನದ ಪರೋಕ್ಷ ಪ್ರಚಾರ ನಡೆಸಿದ ಆರೋಪಕ್ಕೆ ಸಂಬಂಧಿಸಿದಂತೆ ಬಾಲಿವುಡ್ ನಟರಾದ ಶಾರುಖ್ ಖಾನ್, ಅಜಯ್ ದೇವಗನ್ ಹಾಗೂ ಟೈಗರ್ ಶ್ರಾಫ್ ಅವರಿಗೆ ಮಹಾರಾಷ್ಟ್ರ ಆಹಾರ...

“ಏಕರೂಪತೆಯು ಸಮಾನತೆಯಲ್ಲ”: 21 ಎನ್‌ಡಿಎ ಆಡಳಿತದ ರಾಜ್ಯಗಳಲ್ಲಿ ಯುಸಿಸಿ ಜಾರಿ ಕುರಿತ ಅಮಿತ್ ಶಾ ಘೋಷಣೆಗೆ ವಿಪಕ್ಷಗಳ ಕಿಡಿ

2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆಯನ್ನು (ಯುಸಿಸಿ) ಜಾರಿಗೊಳಿಸಲಾಗುವುದು ಎಂದು ಅಮಿತ್ ಶಾ ಘೋಷಿಸಿದ ಬೆನ್ನಲ್ಲೇ, ವಿಪಕ್ಷಗಳು ಬಿಜೆಪಿ ತನ್ನ...

ಉತ್ತರ ಪ್ರದೇಶ| ಫಿರೋಜಾಬಾದ್ ಖಾಕಿ ದೌರ್ಜನ್ಯ; ಪೊಲೀಸರ ಭೂಟು ಕಾಲಿನ ಒದೆತಕ್ಕೆ ಗರ್ಭಿಣಿ ಸಾವು

ಉತ್ತರ ಪ್ರದೇಶದ ಫಿರೋಜಾಬಾದ್‌ನ ಶಿಕೋಹಾಬಾದ್ ಪ್ರದೇಶದಲ್ಲಿ ಕಳ್ಳತನ ಪ್ರಕರಣದ ಶಂಕಿತ ಆರೋಪಿಯೊಬ್ಬನನ್ನು ಬಂಧಿಸಲು ಬಂದಿದ್ದ ಪೊಲೀಸರು ಆತನ ಗರ್ಭಿಣಿ ಹೆಂಡತಿಗೆ ಒದ್ದಿದ್ದರಿಂದ ಆಕೆ ಮೃತಪಟ್ಟಿದ್ದು, ಈ ಘಟನೆಗೆ ಸಂಬಂಧಿಸಿದಂತೆ ಇಬ್ಬರು ಸಬ್‌ಇನ್ಸ್‌ಪೆಕ್ಟರ್‌ಗಳು ಸೇರಿದಂತೆ...

ಕೋಲ್ಕತ್ತಾ | 48 ದಿನಗಳಿಂದ ಮುಸ್ಲಿಂ ಕಾಲೋನಿಗೆ ನೀರು ಬಂದ್ : ಬಿಜೆಪಿ ಸರ್ಕಾರದಿಂದ ದ್ವೇಷ ಸಾಧನೆ ಆರೋಪ

ಉತ್ತರ ಕೋಲ್ಕತ್ತಾದ ಕಾಶಿಪುರದ ಜ್ಯೋತಿನಗರ ಕಾಲೋನಿ ನಿವಾಸಿಗಳು ಕಳೆದ 48 ದಿನಗಳಿಂದ ಕುಡಿಯುವ ನೀರಿಗಾಗಿ ಹಾಹಾಕಾರಪಡುತ್ತಿದ್ದಾರೆ. ಇಲ್ಲಿನ ನೂರಾರು ಕುಟುಂಬಗಳಿಗೆ ನೀರಿನ ಮೂಲವಾಗಿರುವ ಐದು ಸಾರ್ವಜನಿಕ ನಲ್ಲಿಗಳು ಸಂಪೂರ್ಣವಾಗಿ ಒಣಗಿ ಹೋಗಿವೆ. ಇದರಿಂದಾಗಿ...

ಗುರುಗ್ರಾಮ| ಮಹಿಳಾ ಬೈಕರ್‌ಗೆ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಕಾರು ಚಾಲಕನ ಬಂಧನ

ಗುರುಗ್ರಾಮದಲ್ಲಿ ಮಹಿಳಾ ಸ್ಪೋರ್ಟ್ಸ್ ಬೈಕ್ ಸವಾರೆಗೆ ಕಾರಿನಿಂದ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ, ಚಾಲಕ ಕಲ್ಯಾಣ್ ಬೈನ್ಸ್ಲಾನನ್ನು ರಾಜಸ್ಥಾನದ ರಾಜ್‌ಗಢದಲ್ಲಿ ಮಂಗಳವಾರ ಬಂಧಿಸಲಾಗಿದೆ ಎಂದು ಗುರುಗ್ರಾಮ ಕಮಿಷನರ್ ಸಿಬಾಶ್ ಕಬೀರಾಜ್ ತಿಳಿಸಿದ್ದಾರೆ. ಈ...