Homeಅಂತರಾಷ್ಟ್ರೀಯLatest Update | ಇಸ್ರೇಲ್ ಮೇಲೆ ಕ್ಷಿಪಣಿ ದಾಳಿ ನಡೆಸಿದ ಇರಾನ್: ಮೂವರು ಸಾವು

Latest Update | ಇಸ್ರೇಲ್ ಮೇಲೆ ಕ್ಷಿಪಣಿ ದಾಳಿ ನಡೆಸಿದ ಇರಾನ್: ಮೂವರು ಸಾವು

- Advertisement -
- Advertisement -

ಇಸ್ರೇಲ್ ಮತ್ತು ಇರಾನ್ ಪೂರ್ಣ ಕದನ ವಿರಾಮಕ್ಕೆ ಒಪ್ಪಿಕೊಂಡಿವೆ ಎಂದು ಯುಎಸ್ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಇಂದು ಮುಂಜಾನೆ (ಭಾರತೀಯ ಕಾಲಮಾನ- ಜೂನ್ 24, 3.32 AM) ಘೋಷಣೆ ಮಾಡಿದ್ದರು.

ಆದರೆ, ಇರಾನ್ ಇದನ್ನು ಅಲ್ಲಗಳೆದಿದೆ. “ದಾಳಿ ಪ್ರಾರಂಭಿಸಿದ್ದು ಇಸ್ರೇಲ್, ಅವರು ನಿಲ್ಲಿಸದೆ ನಾವು ನಿಲ್ಲಿಸುವುದಿಲ್ಲ. ನಾವು ಶರಣಾಗುವುದಿಲ್ಲ. ಕೊನೆಯವೆರೆಗೂ ಹೋರಾಡುತ್ತೇವೆ” ಎಂದಿದೆ.

ಇತ್ತೀಚಿನ ವರದಿಗಳ ಪ್ರಕಾರ, ಟ್ರಂಪ್ ಕದನ ವಿರಾಮದ ಕುರಿತು ಘೋಷಣೆ ಮಾಡಿದ ಬಳಿಕ ಇರಾನ್ ಇಸ್ರೇಲ್ ಮೇಲೆ ಕ್ಷಿಪಣಿ ದಾಳಿ ನಡೆಸಿದೆ.

ಇಸ್ರೇಲ್‌ನ ದಕ್ಷಿಣ ನಗರವಾದ ಬೀರ್‌ಶೆಬಾ ಮೇಲೆ ಇರಾನ್ ಹಲವು ಕ್ಷಿಪಣಿಗಳ ಮೂಲಕ ದಾಳಿ ಮಾಡಿದೆ. ಇದರಿಂದ ಕನಿಷ್ಠ 3 ಮಂದಿ ಸಾವನ್ನಪ್ಪಿದ್ದಾರೆ ಎಂದು ಇಸ್ರೇಲ್ ಮಾಧ್ಯಮಗಳು ತಿಳಿಸಿವೆ.

ಇರಾನ್-ಇಸ್ರೇಲ್ ಪೂರ್ಣ ಕದನ ವಿರಾಮಕ್ಕೆ ಒಪ್ಪಿಕೊಂಡಿವೆ. ಈ ಮೂಲಕ 12 ದಿನಗಳ ಯುದ್ಧ ಕೊನೆಗೊಂಡಿದೆ ಎಂದು ಡೊನಾಲ್ಡ್ ಟ್ರಂಪ್ ಘೋಷಣೆ ಮಾಡಿದ್ದರು.

ಇದಕ್ಕೆ ಪ್ರತಿಕ್ರಿಯಿಸಿರುವ ಇರಾನ್‌ನ ವಿದೇಶಾಂಗ ಸಚಿವ ಅಬ್ಬಾಸ್ ಅರಘ್ಚಿ, “ಇಸ್ರೇಲ್ ಜೊತೆ ಕದನ ವಿರಾಮದ ಬಗ್ಗೆ ಯಾವುದೇ ಒಪ್ಪಂದ ಮಾಡಿಕೊಂಡಿಲ್ಲ. ಇಸ್ರೇಲ್ ತನ್ನ ಅಕ್ರಮಣ ನಿಲ್ಲಿಸಿದರೆ ಇರಾನ್ ನಿಲ್ಲಿಸಲಿದೆ ಎಂದು ಹೇಳಿದ್ದಾರೆ. ಇದಕ್ಕೆ ಈವರೆಗೆ ಇಸ್ರೇಲ್ ಯಾವುದೇ ಪ್ರತಿಕ್ರಿಯೆ ನೀಡಿಲ್ಲ. ಈ ನಡುವೆ ಇರಾನ್ ಇಸ್ರೇಲ್ ಮೇಲೆ ದಾಳಿ ಮಾಡಿರುವ ಬಗ್ಗೆ ವರದಿಯಾಗಿದೆ.

ನಿನ್ನೆ (ಜೂ.23) ರಾತ್ರಿ ಇರಾನ್ ಕತಾರ್‌ನಲ್ಲಿರುವ ಅಮೆರಿಕದ ಮಿಲಿಟರಿ ನೆಲೆ ಮೇಲೆ ಕ್ಷಿಪಣಿ ದಾಳಿ ನಡೆಸಿದೆ. ಭಾನುವಾರ (ಜೂ. 22) ಇರಾನ್‌ನ ಮೂರು ಪರಮಾಣು ನೆಲೆಗಳ ಮೇಲೆ ಅಮೆರಿಕ ನಡೆಸಿದ ದಾಳಿಗೆ ಪ್ರತೀಕಾರವಾಗಿ ಇರಾನ್ ಈ ದಾಳಿ ನಡೆಸಿದೆ.

ಜೂನ್ 13ರಿಂದ ನಡೆಯುತ್ತಿರುವ ಇಸ್ರೇಲ್-ಇರಾನ್ ಸಂಘರ್ಷದಿಂದ, ಇರಾನ್‌ನಲ್ಲಿ ಇದುವರೆಗೆ 13 ಮಕ್ಕಳು ಸೇರಿದಂತೆ 400ಕ್ಕೂ ಹೆಚ್ಚು ಜನರು ಸಾವನ್ನಪ್ಪಿದ್ದಾರೆ ಮತ್ತು ಕನಿಷ್ಠ 3,056 ಜನರು ಗಾಯಗೊಂಡಿದ್ದಾರೆ ಎಂದು ಅಲ್ಲಿನ ಸರ್ಕಾರ ಹೇಳಿಕೊಂಡಿದೆ. ಇಸ್ರೇಲ್‌ನಲ್ಲಿ, ಇರಾನ್‌ ದಾಳಿಯಿಂದ ಕನಿಷ್ಠ 24 ಜನರು ಸಾವನ್ನಪ್ಪಿರುವ ಬಗ್ಗೆ ವರದಿಯಾಗಿದೆ.

ಆದರೆ, ಎರಡೂ ರಾಷ್ಟ್ರಗಳಲ್ಲಿ ಸಾವು-ನೋವುಗಳ ಸಂಖ್ಯೆ ಇನ್ನೂ ಹೆಚ್ಚಿದೆ. ಎರಡೂ ಕಡೆಯ ಸರ್ಕಾರಗಳು ಸರಿಯಾದ ಮಾಹಿತಿ ಬಹಿರಂಗಪಡಿಸುತ್ತಿಲ್ಲ ಎಂದು ಮಾನವ ಹಕ್ಕು ಸಂಘಟನೆಗಳು ಹೇಳಿಕೊಂಡಿವೆ.

ಇರಾನ್ ಜನರಿಗೆ ಸಹಾಯ ಮಾಡಲು ರಷ್ಯಾ ಸಿದ್ಧ – ವ್ಲಾದಿಮಿರ್ ಪುಟಿನ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಗ್ರಾಮೀಣ ಭಾಗದ ಶಾಲಾ ಮಕ್ಕಳಿಗೆ ಶಿಕ್ಷಣ ಮತ್ತು ಉದ್ಯೋಗದಲ್ಲಿ 7.5% ಮೀಸಲಾತಿ: ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್

ಗ್ರಾಮೀಣ ಹಾಗೂ ಬಡ ವಿದ್ಯಾರ್ಥಿಗಳ ಉನ್ನತ ಶಿಕ್ಷಣದ ಕನಸಿಗೆ ಬಲ ತುಂಬುವ ನಿಟ್ಟಿನಲ್ಲಿ ಸರ್ಕಾರಿ ಶಾಲಾ ವಿದ್ಯಾರ್ಥಿಗಳಿಗೆ ಶಿಕ್ಷಣ ಹಾಗೂ ಉದ್ಯೋಗದಲ್ಲಿ ಶೇಕಡಾ 7.5 ರಷ್ಟು ಮೀಸಲಾತಿ ಕಲ್ಪಿಸುವುದಾಗಿ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್...

ಪಶ್ಚಿಮ ಬಂಗಾಳದ ಪ್ರವಾಸೋದ್ಯಮ ಜಾಹೀರಾತಿನಲ್ಲಿ ಐಫೆಲ್ ಟವರ್, ಈಜಿಪ್ಟ್ ಪಿರಮಿಡ್: ಆದರೆ ಬಂಗಾಳವೇ ನಾಪತ್ತೆ!

ಪಶ್ಚಿಮ ಬಂಗಾಳವನ್ನು ಜಾಗತಿಕ ಪ್ರವಾಸೋದ್ಯಮ ಭೂಪಟದಲ್ಲಿ ಮುನ್ನೆಲೆಗೆ ತರುವ ಉದ್ದೇಶದಿಂದ ಬಿಡುಗಡೆ ಮಾಡಲಾದ ರಾಜ್ಯದ ಹೊಸ ಪ್ರವಾಸೋದ್ಯಮ ಜಾಹೀರಾತು ಈಗ ತೀವ್ರ ಟೀಕೆ ಹಾಗೂ ಅಪಹಾಸ್ಯಕ್ಕೆ ಈಡಾಗಿದೆ. ಈ ಜಾಹೀರಾತನ್ನು ಒಮ್ಮೆ ಗಮನಿಸಿದರೆ...

ಅಮೆರಿಕದಲ್ಲಿ ಮೋಹನ್‌ ಭಾಗವತ್ ಸೌಹಾರ್ದತೆ ಮಾತು; ಮಹಾರಾಷ್ಟ್ರದ ಗಾರ್ಬಾ-ದಾಂಡಿಯಾ ಕಾರ್ಯಕ್ರಮಗಳಲ್ಲಿ ಮುಸ್ಲಿಮರಿಗೆ ನಿಷೇಧ ಹೇರಿದ ವಿಎಚ್‌ಪಿ

ರಾಷ್ಟ್ರೀಯ ಸ್ವಯಂಸೇವಕ ಸಂಘದ (ಆರ್‌ಎಸ್‌ಎಸ್) ಮುಖ್ಯಸ್ಥ ಮೋಹನ್ ಭಾಗವತ್ ಅವರು ನ್ಯೂಯಾರ್ಕ್‌ನಲ್ಲಿ ಮಾಡಿದ ಭಾಷಣದಲ್ಲಿ ಧಾರ್ಮಿಕ ಸೌಹಾರ್ದತೆ, ಪರಸ್ಪರ ಗೌರವ ಮತ್ತು ಪ್ರತಿಯೊಂದು ಸಮುದಾಯದ ಗುರುತಿನ ರಕ್ಷಣೆ ಕುರಿತು ಮಾತನಾಡಿದ ಕೆಲವೇ ದಿನಗಳ...

ಸೈಬರ್ ವಂಚನೆಗೊಳಗಾದ ಸಂತ್ರಸ್ತರಿಗೆ ನೆರವು: ಕರ್ನಾಟಕದಲ್ಲಿ ಶೀಘ್ರವೇ ‘ಇ-ಶೂನ್ಯ ಎಫ್‌ಐಆರ್’ ಜಾರಿ

ಸೈಬರ್ ವಂಚನೆಗೊಳಗಾದ ಸಂತ್ರಸ್ತರು ಇನ್ನು ಮುಂದೆ ದೂರು ದಾಖಲಿಸಲು ಪೊಲೀಸ್ ಠಾಣೆಗಳಿಗೆ ಅಲೆಯಬೇಕಿಲ್ಲ. ಸೈಬರ್ ಅಪರಾಧ ಪ್ರಕರಣಗಳ ಎಫ್‌ಐಆರ್ ದಾಖಲಾತಿಯನ್ನು ಚುರುಕುಗೊಳಿಸುವ ಹಾಗೂ ಜನಸ್ನೇಹಿಯಾಗಿಸುವ ಉದ್ದೇಶದಿಂದ ಭಾರತೀಯ ಸೈಬರ್ ಅಪರಾಧ ಸಮನ್ವಯ ಕೇಂದ್ರ...

ತಲೆ ಮರೆಸಿಕೊಂಡಿದ್ದ ಸ್ವತಂತ್ರ ಭಾರದ್ವಾಜ್‌ ಅರೆಸ್ಟ್ : ಪೋಕ್ಸೋ ಅಡಿ ಮತ್ತೊಂದು ಪ್ರಕರಣ ದಾಖಲು

ದೆಹಲಿಯ ಜಂತರ್ ಮಂತರ್‌ನಲ್ಲಿ ಜುಲೈನಲ್ಲಿ ನಡೆದ ಸಿಜೆಪಿ ಪ್ರತಿಭಟನೆ ವೇಳೆ ವಿದ್ಯಾರ್ಥಿ ಹೋರಾಟಗಾರ್ತಿ ನಿಶು ಆಝಾದ್ ಅವರ ತಂದೆಯ ಮೇಲೆ ಹಲ್ಲೆ ನಡೆಸಿದ ಆರೋಪ ಹೊತ್ತಿರುವ ಹಿಂದುತ್ವ ಸೋಶಿಯಲ್ ಮೀಡಿಯಾ 'ಇನ್‌ಫ್ಲುಯೆನ್ಸರ್' ಸ್ವತಂತ್ರ...

ಆರ್‌ಎಸ್ಎಸ್ ಬೆಂಬಲಿತ ಗುಂಪುಗಳಿಂದ ದೇಣಿಗೆ ಸ್ವೀಕರಿಸದಿರಲು ಅಮೆರಿಕದ ರಾಜಕಾರಣಿಗಳಿಂದ ಪ್ರತಿಜ್ಞೆ

ಅಮೆರಿಕದ ಸುಮಾರು 90 ಜನಪ್ರತಿನಿಧಿಗಳು ಮತ್ತು ರಾಜಕೀಯ ಅಭ್ಯರ್ಥಿಗಳು ರಾಷ್ಟ್ರೀಯ ಸ್ವಯಂಸೇವಕ ಸಂಘಕ್ಕೆ (RSS) ಬೆಂಬಲಿತ ಗುಂಪುಗಳಿಂದ ರಾಜಕೀಯ ದೇಣಿಗೆಗಳನ್ನು ಸ್ವೀಕರಿಸುವುದಿಲ್ಲ ಎಂದು ಪ್ರತಿಜ್ಞೆ ಮಾಡಿದ್ದಾರೆ. ಹಿಂದುತ್ವ ಸಂಘಟನೆಯ ಮುಖ್ಯಸ್ಥ ಮೋಹನ್ ಭಾಗವತ್...

KPSC ಪರೀಕ್ಷಾ ಅಕ್ರಮ: ಯಾರನ್ನೂ ರಕ್ಷಿಸುವ ಪ್ರಶ್ನೆಯೇ ಇಲ್ಲ, ರಾಜಕೀಯ ಪಕ್ಷ ನೋಡದೆ ನಿರ್ದಾಕ್ಷಿಣ್ಯ ಕ್ರಮ – ಸಚಿವ ಪ್ರಿಯಾಂಕ್ ಖರ್ಗೆ

ಕೆಪಿಎಸ್‌ಸಿ (KPSC) ಪರೀಕ್ಷಾ ಅಕ್ರಮ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಜ್ಯ ಸರ್ಕಾರ ಅತ್ಯಂತ ಗಂಭೀರವಾಗಿದ್ದು, ಇದರಲ್ಲಿ ಭಾಗಿಯಾಗಿರುವ ಯಾರನ್ನೇ ಆಗಲಿ ರಕ್ಷಿಸುವ ಪ್ರಶ್ನೆಯೇ ಇಲ್ಲ. ಆರೋಪಿಗಳು ಎಷ್ಟೇ ಪ್ರಭಾವಶಾಲಿಗಳಾಗಿದ್ದರೂ ಅಥವಾ ಯಾವುದೇ ರಾಜಕೀಯ ಪಕ್ಷಕ್ಕೆ...

ಉತ್ತರ ಪ್ರದೇಶ: ಸಹಾರನ್‌ಪುರ ಕಲೆಕ್ಟರೇಟ್ ಮಸೀದಿ ಧ್ವಂಸ, ‘ಬುಲ್ಡೋಜರ್ ರಾಜಕಾರಣ’ಕ್ಕೆ ವಿಪಕ್ಷಗಳಿಂದ ಖಂಡನೆ!

ಸಹಾರನ್‌ಪುರ (ಉತ್ತರ ಪ್ರದೇಶ): ಉತ್ತರ ಪ್ರದೇಶದ ಸಹಾರನ್‌ಪುರ ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿದ್ದ ಮಸೀದಿಯನ್ನು ಶನಿವಾರ (ಸೆಪ್ಟೆಂಬರ್ 5) ಮುಂಜಾನೆ ಭಾರಿ ಪೊಲೀಸ್ ಭದ್ರತೆಯೊಂದಿಗೆ ಬುಲ್ಡೋಜರ್ ಬಳಸಿ ಧ್ವಂಸಗೊಳಿಸಲಾಗಿದೆ. ಈ ಕಾರ್ಯಾಚರಣೆಗೆ ವ್ಯಾಪಕ ಆಕ್ರೋಶ...

ಗೌರಿ ಹತ್ಯೆಯಾಗಿ 9 ವರ್ಷ : ಹೋರಾಟಗಾರರು-ಒಡನಾಡಿಗಳಿಂದ ಗೌರವ ನಮನ

ದಿಟ್ಟ ಪತ್ರಕರ್ತೆ, ಹೋರಾಟಗಾರ್ತಿ ಗೌರಿ ಲಂಕೇಶ್‌ ಅವರ 9ನೇ ವರ್ಷದ ಹುತಾತ್ಮ ದಿನದ ಅಂಗವಾಗಿ ಇಂದು (ಸೆ.5) ಬೆಳಿಗ್ಗೆ ಬೆಂಗಳೂರಿನ ಚಾಮರಾಜಪೇಟೆಯಲ್ಲಿರುವ ಅವರ ಸಮಾಧಿ ಬಳಿ ‘ಗೌರಿ ನಮನ ಕಾರ್ಯಕ್ರಮ‘ ನಡೆಯಿತು. ಗೌರಿ ಅವರ...

ರಾಯಚೂರಿನಲ್ಲಿ ದಲಿತರ ಸರಣಿ ಕೊಲೆ: ಸಂತ್ರಸ್ತರ ಮನೆಗೆ ಸಚಿವ ಕೆ.ಎಚ್. ಮುನಿಯಪ್ಪ ಭೇಟಿ

ರಾಯಚೂರು ಜಿಲ್ಲೆಯಲ್ಲಿ ಇತ್ತೀಚೆಗೆ ನಡೆದ ದಲಿತರ ಮೇಲಿನ ಸರಣಿ ದೌರ್ಜನ್ಯ ಮತ್ತು ಕೊಲೆ ಪ್ರಕರಣಗಳು ಜನಾಕ್ರೋಶಕ್ಕೆ ಕಾರಣವಾಗಿವೆ. ಈ ಹಿನ್ನೆಲೆಯಲ್ಲಿ ಸಮಾಜ ಕಲ್ಯಾಣ ಸಚಿವ ಕೆ.ಎಚ್. ಮುನಿಯಪ್ಪ ಅವರು ಜಿಲ್ಲೆಯ ವಿವಿಧ ಗ್ರಾಮಗಳಲ್ಲಿ...