Homeಚಳವಳಿಒಳ ಮೀಸಲಾತಿ ಹೋರಾಟಗಾರರ ಮೇಲಿನ ಲಾಠಿ ಚಾರ್ಜ್, ಬಂಧನ ಖಂಡನೀಯ: ಡಾ.ಎಚ್.ಸಿ ಮಹದೇವಪ್ಪ

ಒಳ ಮೀಸಲಾತಿ ಹೋರಾಟಗಾರರ ಮೇಲಿನ ಲಾಠಿ ಚಾರ್ಜ್, ಬಂಧನ ಖಂಡನೀಯ: ಡಾ.ಎಚ್.ಸಿ ಮಹದೇವಪ್ಪ

- Advertisement -
- Advertisement -

ಒಳ ಮೀಸಲಾತಿ ಹೋರಾಟಗಾರರ ಮೇಲಿನ ಲಾಠಿ ಚಾರ್ಜ್ ಮತ್ತು ಬಂಧನವನ್ನು ಮಾಜಿ ಸಚಿವ ಡಾ.ಎಚ್.ಸಿ ಮಹದೇವಪ್ಪ ಖಂಡಿಸಿದ್ದಾರೆ.

ಒಳ ಮೀಸಲಾತಿ ಹೋರಾಟಗಾರರ ಮೇಲೆ ಪೊಲೀಸರು ಲಾಠಿ ಚಾರ್ಜ್ ನಡೆಸಿ, ಅವರನ್ನು ಬಂಧಿಸಿರುವ ಕ್ರಮವನ್ನು ನಾನು ತೀವ್ರವಾಗಿ ಖಂಡಿಸುತ್ತೇನೆ. ತಮ್ಮ ಹಕ್ಕುಗಳಿಗಾಗಿ ಪ್ರಜಾಸತ್ತಾತ್ಮಕವಾಗಿ ಹೋರಾಟ ನಡೆಸುವವರ ವಿರುದ್ಧ ದೌರ್ಜನ್ಯ ನಡೆಸುವ ರಾಜ್ಯ ಸರ್ಕಾರವು ತನ್ನ ಸರ್ವಾಧಿಕಾರಿ ಧೋರಣೆಯನ್ನು ಪ್ರದರ್ಶಿಸಿದೆ ಎಂದು ಅವರು ತಿಳಿಸಿದ್ದಾರೆ.

ಸರ್ಕಾರ ಕೂಡಲೇ ಅಂಬಣ್ಣ ಅರೋಲಿಕರ್ ಹಾಗೂ ಇನ್ನಿತರೆ ಹೋರಾಟಗಾರರನ್ನು ಕೂಡಲೇ ಬಿಡುಗಡೆ ಮಾಡಬೇಕು ಎಂದು ಈ ಮ‌ೂಲಕ ಆಗ್ರಹಿಸುತ್ತೇನೆ! ಪ್ರಜಾಸತ್ತಾತ್ಮಕ ಹೋರಾಟಗಳು ಗೆಲ್ಲಲಿ. ಹೋರಾಟಗಳು ಚಿರಾಯುವಾಗಲಿ ಎಂದು ಅವರು ಫೇಸ್‌ಬುಕ್‌ನಲ್ಲಿ ಪೋಸ್ಟ್ ಮಾಡಿದ್ದಾರೆ.

ಒಳಮೀಸಲು ಜಾರಿಗೆ ಒತ್ತಾಯಿಸಿ ಸಿಎಂ ಮನೆಯೆಡೆಗೆ ಪಾದಯಾತ್ರೆ ಹೊರಟ ‘ಸಾಮಾಜಿಕ ನ್ಯಾಯಕ್ಕಾಗಿ ಪರಿಶಿಷ್ಟ ಜಾತಿಗಳ ಒಳಮೀಸಲಾತಿ ಜಾರಿ ಹೋರಾಟ ಸಮಿತಿ’ಯ ಮುಖಂಡರ ಮೇಲೆ ಲಾಠಿ ಚಾರ್ಜ್ ಮಾಡಲಾಗಿದ್ದು, ಹಲವರನ್ನು ಬಂಧಿಸಲಾಗಿದೆ.

ಒಳಮೀಸಲಾತಿ ಹೋರಾಟಗಾರ ಕರಿಯಪ್ಪ ಗುಡಿಮನಿಯವರ ತಲೆಗೆ ಪೆಟ್ಟಾಗಿದ್ದು ಅವರನ್ನು ಕೆ.ಸಿ ಜನರಲ್ ಆಸ್ಪತ್ರೆಗೆ ಸೇರಿಸಲಾಗಿದೆ. 62 ವರ್ಷ ವಯಸ್ಸಿನ ಅವರು ನವೆಂಬರ್ 28 ರಿಂದಲೂ ಹರಿಹರದಿಂದ ಪಾದಯಾತ್ರೆಯಲ್ಲಿ ನಡೆದು ಬೆಂಗಳೂರು ತಲುಪಿದ್ದರು. ಅವರ ಮೇಲಿನ ಹಲ್ಲೆ ನಡೆಸಿರುವುದು ಆಕ್ರೋಶಕ್ಕೆ ಕಾರಣವಾಗಿದೆ. ಉಳಿದಂತೆ ಅಂಬಣ್ಣ ಅರೋಲಿಕರ್ ಸೇರಿದಂತೆ ನೂರಾರು ಹೋರಾಟಗಾರರನ್ನು ಆಡುಗೋಡಿ ಪೊಲೀಸ್ ಠಾಣೆಗೆ ಕರೆದೊಯ್ಯಲಾಗಿದೆ.

ಇಂದು ಬೆಳಿಗ್ಗೆಯಿಂದಲೇ ಸಾವಿರಾರು ಜನರು ಒಳಮೀಸಲಾತಿ ಜಾರಿಗಾಗಿ ಹೋರಾಟ ಆರಂಭಿಸಿದ್ದರು. ಮಳೆ-ಚಳಿ-ಗಾಳಿ ಲೆಕ್ಕಿಸದೆ ಸದಾಶಿವ ಆಯೋಗದ ವರದಿ ಚರ್ಚೆ ಮತ್ತು ಜಾರಿಗೊಳಿಸಬೇಕೆಂದು ಒತ್ತಾಯಿಸಿದ್ದರು. ಸಚಿವ ವಿ.ಸೋಮಣ್ಣ ಮನವಿ ಆಲಿಸಲು ಬಂದಾಗ ಧಿಕ್ಕಾರ ಕೂಗಿ ಸಿಎಂ ಬೊಮ್ಮಾಯಿಯವರೆ ಬರಬೇಕೆಂದು ಪಟ್ಟು ಹಿಡಿದಿದ್ದರು.

ಸಂಜೆ 6 ಗಂಟೆಯಾದರೂ ಸಹ ಪ್ರತಿಭಟನಾ ಸ್ಥಳಕ್ಕೆ ಸಿಎಂ ಬರಲಿಲ್ಲ. ಪೊಲೀಸರು ಹೋರಾಟ ನಿಲ್ಲಿಸಲು ಮನವಿ ಮಾಡಿದರು. ಆದರೆ ಹೋರಾಟಗಾರರು ಸಿಎಂ ಮನೆ ಕಡೆ ಪಾದಯಾತ್ರೆಗೆ ಮುಂದಾದರು. ಆಗ ಪೊಲೀಸರು ಮತ್ತು ಪ್ರತಿಭಟನಾಕಾರರ ನಡುವೆ ಮಾತಿನ ಚಕಮಕಿ ನಡೆದಿದೆ. ಗುಂಪು ಚದುರಿಸಲು ಲಾಠೀಚಾರ್ಜ್ ಮಾಡಿದ ಪೊಲೀಸರು ಮುಖಂಡರನ್ನು ಬಂಧಿಸಿದ್ದಾರೆ.

ಇದನ್ನೂ ಓದಿ: ರಕ್ತವನ್ನು ಚೆಲ್ಲುತ್ತೇವೆ, ಒಳಮೀಸಲಾತಿ ಪಡೆಯುತ್ತೇವೆ: ಬೆಂಗಳೂರಿನಲ್ಲಿ ಭೀಮಸೈನಿಕರ ಘರ್ಜನೆ 

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಪ್ರಜ್ವಲ್ ರೇವಣ್ಣ ಲೈಂಗಿಕ ದೌರ್ಜನ್ಯ ಪ್ರಕರಣ: ಅಪಹರಣಕ್ಕೊಳಗಾಗಿದ್ದ ಸಂತ್ರಸ್ತೆಯ ರಕ್ಷಣೆ

0
ಅಪಹರಣಕ್ಕೊಳಗಾಗಿದ್ದ ಪ್ರಜ್ವಲ್ ರೇವಣ್ಣ ಲೈಂಗಿಕ ದೌರ್ಜನ್ಯ ಪ್ರಕರಣದ ಸಂತ್ರಸ್ತೆ, ಶಾಸಕ ಹೆಚ್‌.ಡಿ ರೇವಣ್ಣ ಅವರ ಮನೆ ಕೆಲಸದ ಮಹಿಳೆಯನ್ನು ವಿಶೇಷ ತನಿಖಾ ತಂಡ (ಎಸ್‌ಐಟಿ)ದ ಅಧಿಕಾರಿಗಳು ಇಂದು (ಮೇ 4) ರಕ್ಷಣೆ ಮಾಡಿದ್ದಾರೆ. ಪ್ರಜ್ವಲ್...