Homeಕರ್ನಾಟಕNEP ವಿರೋಧಿಸಿ ಪ್ರತಿಭಟಿಸುತ್ತಿದ್ದ ಕ್ಯಾಂಪಸ್ ಫ್ರಂಟ್ ವಿದ್ಯಾರ್ಥಿಗಳ ಮೇಲೆ ಲಾಠಿಚಾರ್ಜ್: ತೀವ್ರ ಖಂಡನೆ

NEP ವಿರೋಧಿಸಿ ಪ್ರತಿಭಟಿಸುತ್ತಿದ್ದ ಕ್ಯಾಂಪಸ್ ಫ್ರಂಟ್ ವಿದ್ಯಾರ್ಥಿಗಳ ಮೇಲೆ ಲಾಠಿಚಾರ್ಜ್: ತೀವ್ರ ಖಂಡನೆ

ಪೊಲೀಸರ ಲಾಠಿಚಾರ್ಜ್ ಅನ್ನು ಪಾಪ್ಯುಲರ್ ಫ್ರಂಟ್ ಇಂಡಿಯಾ, ವಿಪಕ್ಷ ನಾಯಕರಾದ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷರಾದ ಡಿ.ಕೆ ಶಿವಕುಮಾರ್ ಸೇರಿದಂತೆ ಇತರ ನಾಯಕರು ಕಟು ಶಬ್ದಗಳಲ್ಲಿ ಖಂಡಿಸಿದ್ದಾರೆ.

- Advertisement -
- Advertisement -

ಸಮಗ್ರ ಚರ್ಚೆ ನಡೆಸದೇ ಹೊಸ ರಾಷ್ಟ್ರೀಯ ಶಿಕ್ಷಣ ನೀತಿಯನ್ನು ಜಾರಿಗೊಳಿಸುತ್ತಿರುವ ಕರ್ನಾಟಕ ರಾಜ್ಯ ಸರ್ಕಾರದ ಕ್ರಮ ಖಂಡಿಸಿ ಬೆಂಗಳೂರಿನ ಮೈಸೂರು ಬ್ಯಾಂಕ್ ವೃತ್ತದಲ್ಲಿ ಪ್ರತಿಭಟನೆ ನಡೆಸುತ್ತಿದ್ದ ಕ್ಯಾಂಪಸ್ ಫ್ರಂಟ್ ಆಫ್ ಇಂಡಿಯಾ ವಿದ್ಯಾರ್ಥಿಗಳ ಮೇಲೆ ಪೊಲೀಸರು ಅಮಾನವೀಯ ಲಾಠಿಚಾರ್ಜ್ ನಡೆಸಿದ್ದಾರೆ.

ಐದು ನೂರಕ್ಕೂ ಹೆಚ್ಚು ವಿದ್ಯಾರ್ಥಿಗಳು ಎನ್‌ಇಪಿ ಜಾರಿ ನಿಲ್ಲಬೇಕು ಎಂದು ಆಗ್ರಹಿಸಿ ಇಂದು ವಿಧಾನಸೌಧ ಚಲೋ ಹೋರಾಟ ನಡೆಸುತ್ತಿದ್ದರು. ಈ ವೇಳೆ ಮನಬಂದಂತೆ ಲಾಠಿಚಾರ್ಜ್ ನಡೆಸಿ ನೂರಾರು ವಿದ್ಯಾರ್ಥಿಗಳನ್ನು ಬಂಧಿಸಿದ್ದಾರೆ. ಇನ್ನೂ ಹಲವಾರು ವಿದ್ಯಾರ್ಥಿಗಳು ತೀವ್ರವಾಗಿ ಗಾಯಗೊಂಡು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಪ್ರತಿಭಟನೆ ಮತ್ತು ಲಾಠಿಚಾರ್ಜ್‌ನ ಪೂರ್ಣ ವಿಡಿಯೋ ಇಲ್ಲಿದೆ.

ಪೊಲೀಸರ ಲಾಠಿಚಾರ್ಜ್ ಅನ್ನು ಪಾಪ್ಯುಲರ್ ಫ್ರಂಟ್ ಇಂಡಿಯಾ, ವಿಪಕ್ಷ ನಾಯಕರಾದ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷರಾದ ಡಿ.ಕೆ ಶಿವಕುಮಾರ್ ಸೇರಿದಂತೆ ಇತರ ನಾಯಕರು ಕಟು ಶಬ್ದಗಳಲ್ಲಿ ಖಂಡಿಸಿದ್ದಾರೆ.

ರಾಜ್ಯದ ಬಿಜೆಪಿ ಸರಕಾರವು ಹೊಸ ರಾಷ್ಟ್ರೀಯ ಶಿಕ್ಷಣ ನೀತಿಗೆ‌ ಸಂಬಂಧಿಸಿದಂತೆ ಯಾವುದೇ ಚರ್ಚೆ ನಡೆಸದೇ,  ಶಿಕ್ಷಣ ತಜ್ಞರ‌ ಅಭಿಪ್ರಾಯವನ್ನೂ ಪಡೆದುಕೊಳ್ಳದೆ ಈ ಕಾಯ್ದೆಯನ್ನು ತರಾತುರಿಯಲ್ಲಿ ಜಾರಿಗೊಳಿಸಲು ಹೊರಟಿದೆ. ಸರಕಾರದ‌ ಈ ಅಸಾಂವಿಧಾನಿಕ ಕ್ರಮದ ವಿರುದ್ಧ ಕ್ಯಾಂಪಸ್ ಫ್ರಂಟ್ ಆಫ್ ಇಂಡಿಯಾ ವಿದ್ಯಾರ್ಥಿ ಸಂಘಟನೆಯು ವಿಧಾನ ಸೌಧಕ್ಕೆ ಮುತ್ತಿಗೆ ಹಾಕುವ ಶಾಂತಿಯುತ ಪ್ರತಿಭಟನೆಯನ್ನು ಹಮ್ಮಿಕೊಂಡಿತ್ತು. ಪ್ರತಿಭಟನೆಯ ಹಕ್ಕು ಪ್ರತಿಯೋರ್ವ ನಾಗರಿಕನ ಮೂಲಭೂತ‌ ಹಕ್ಕು. ಆದರೆ ಪೊಲೀಸರು ಪ್ರತಿಭಟನಾ ನಿರತ‌ ವಿದ್ಯಾರ್ಥಿಗಳ ಮೇಲೆ ಲಾಠಿಚಾರ್ಜ್ ನಡೆಸಿರುವುದು ಅಕ್ಷಮ್ಯ ಎಂದು ಪಿಎಫ್‌ಐ ಕಿಡಿಕಾರಿದೆ.

ಘಟನೆಯಲ್ಲಿ ಕೆಲ ವಿದ್ಯಾರ್ಥಿಗಳು ಗಂಭೀರ ಗಾಯಗೊಂಡಿದ್ದು, ವಿದ್ಯಾರ್ಥಿನಿಯರನ್ನೂ ಎಳೆದಾಡಲಾಗಿದೆ. ಮಾತ್ರವಲ್ಲ, ಪೊಲೀಸರು ಹಲವು ವಿದ್ಯಾರ್ಥಿಗಳನ್ನು ಅಕ್ರಮವಾಗಿ ವಶಕ್ಕೆ ಪಡೆದುಕೊಂಡಿದ್ದಾರೆ. ಪ್ರತಿಭಟನಾನಿರತ ವಿದ್ಯಾರ್ಥಿಗಳ ಮೇಲೆ ಅಮಾನವೀಯವಾಗಿ ಲಾಠಿಚಾರ್ಜ್ ನಡೆಸಿದ ಪೊಲೀಸರ ಮೇಲೆ ಕಾನೂ‌ನು ಕ್ರಮ ಕೈಗೊಳ್ಳಬೇಕು. ಬಂಧಿತ ವಿದ್ಯಾರ್ಥಿಗಳನ್ನು ಕೂಡಲೇ‌ ಬಿಡುಗಡೆಗೊಳಿಸಬೇಕು. ಶಿಕ್ಷಣವನ್ನು ಕೇಸರೀಕರಣಗೊಳಿಸುವ, ಶಿಕ್ಷಣದ ಬಜಾರೀಕರಣ ನಡೆಸುವ, ರಾಜ್ಯ ಸರಕಾರದ ಅಧಿಕಾರವನ್ನು ಮೊಟಕುಗೊಳಿಸಲುವ, ಶೋಷಿತ ಸಮುದಾಯವನ್ನು ಉನ್ನತ ಶಿಕ್ಷಣದಿಂದ ವಂಚಿತರನ್ನಾಗಿಸುವ ಹೊಸ ಎನ್.ಇ.ಪಿ. ಜಾರಿಗೊಳಿಸುವ ನಿರ್ಧಾರದಿಂದ ರಾಜ್ಯ ಸರಕಾರವು ಹಿಂದೆ ಸರಿಯಬೇಕೆಂದು ಪಿಎಫ್‌ಐ ಆಗ್ರಹಿಸಿದೆ.

“ಹೊಸ ಶಿಕ್ಷಣ ನೀತಿ ವಿರುದ್ಧ ಪ್ರತಿಭಟನೆ ನಡೆಸುತ್ತಿದ್ದ ವಿದ್ಯಾರ್ಥಿಗಳ ಮೇಲೆ ಪೊಲೀಸರು ನಡೆಸಿದ ದೌರ್ಜನ್ಯ ಖಂಡನೀಯ. ವಿದ್ಯಾರ್ಥಿಗಳಿಗೆ ಮೋಸದ ಅರಿವಾಗಿ ಬೀದಿಗಿಳಿದಿದ್ದಾರೆ. ಮುಖ್ಯಮಂತ್ರಿಗಳೇ, ಪೊಲೀಸರ ಲಾಠಿಯಿಂದ ಪ್ರತಿಭಟನೆ ಹತ್ತಿಕ್ಕಬಹುದೆಂದು ತಿಳಿದುಕೊಂಡಿದ್ದರೆ ಅದು ನಿಮ್ಮ ಭ್ರಮೆ. ವಿದ್ಯಾರ್ಥಿಗಳ ಭವಿಷ್ಯದ ಜೊತೆ ಚೆಲ್ಲಾಟವಾಡಬೇಡಿ. ಪ್ರತಿಭಟನಾ ನಿರತ ವಿದ್ಯಾರ್ಥಿಗಳಿಗೆ ನಮ್ಮ ಪಕ್ಷದ ಸಂಪೂರ್ಣ ಬೆಂಬಲ ಇದೆ. ಮೊದಲು ಹೊಸ ಶಿಕ್ಷಣ ನೀತಿಯ ಜಾರಿಯನ್ನು ಸ್ಥಗಿತಗೊಳಿಸಿ. ವಿದ್ಯಾರ್ಥಿಗಳು, ಹೆತ್ತವರು ಹಾಗೂ ಶಿಕ್ಷಕರ ಜೊತೆ ಚರ್ಚಿಸಿ ನಂತರ ತೀರ್ಮಾನಕ್ಕೆ ಬನ್ನಿ” ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಆಗ್ರಹಿಸಿದ್ದಾರೆ.

“NEP ಯನ್ನು ಒಂದು ವರ್ಷ ಮುಂದೂಡುವಂತೆ ನಾನು ಮಾಡಿದ್ದ ಮನವಿಗೆ ಬಿಜೆಪಿ ಸರ್ಕಾರ ಗಮನ ಕೊಡಲಿಲ್ಲ. ಈಗ ಅದೇ ಹೊಸ ಶಿಕ್ಷಣ ನೀತಿ ವಿರುದ್ಧ ವಿದ್ಯಾರ್ಥಿಗಳು ಪ್ರತಿಭಟಿಸುತ್ತಿದ್ದು, ಅಮಾಯಕ ವಿದ್ಯಾರ್ಥಿಗಳ ಮೇಲೆ ಲಾಠಿ ಚಾರ್ಜ್ ಮಾಡುತ್ತಿದ್ದಾರೆ. ಈ ವಿದ್ಯಾರ್ಥಿಗಳ ಬೆಂಬಲಕ್ಕೆ ಸದಾ ನಾನಿದ್ದೇನೆ” ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಟ್ವೀಟ್ ಮಾಡಿದ್ದಾರೆ.


ಇದನ್ನೂ ಓದಿ: NEP ಎಂದರೆ ‘ನಾಗ್ಪುರ ಶಿಕ್ಷಣ ನೀತಿ’ – ಡಿ.ಕೆ. ಶಿವಕುಮಾರ್ ಆಕ್ರೋಶ

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

FACT CHECK : ಸಿದ್ದರಾಮಯ್ಯ ಸರ್ಕಾರ ಮುಸ್ಲಿಮರನ್ನು ಒಬಿಸಿ ಪಟ್ಟಿಗೆ ಸೇರಿಸಿದ್ದು ನಿಜಾನಾ?

0
ಕರ್ನಾಟಕದಲ್ಲಿ ಮುಸ್ಲಿಮರನ್ನು ಹಿಂದುಳಿದ ವರ್ಗಕ್ಕೆ ಸೇರಿಸುವ ಮೂಲಕ ಸಿಎಂ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಹಿಂದುಳಿದ ವರ್ಗಗಳ 36 ಜಾತಿಗಳಿಗೆ ಅನ್ಯಾಯ ಮಾಡಿದೆ ಎಂದು ಬಿಜೆಪಿ ಆರೋಪಿಸಿದೆ. ಸಿದ್ದರಾಮಯ್ಯ ಸರ್ಕಾರ ಹಿಂದುಳಿದ ವರ್ಗಗಳಿಗೆ...