Homeಮುಖಪುಟಗಾಝಾದಲ್ಲಿ ಮಾನವೀಯತೆಯನ್ನು ಸಮಾಧಿ ಮಾಡಿದ ನೆತನ್ಯಾಹು

ಗಾಝಾದಲ್ಲಿ ಮಾನವೀಯತೆಯನ್ನು ಸಮಾಧಿ ಮಾಡಿದ ನೆತನ್ಯಾಹು

- Advertisement -
- Advertisement -

ನಾಲ್ಕು ತಿಂಗಳ ಬಾಂಬ್‌ ದಾಳಿಯ ಮೂಲಕ ಗಾಝಾವನ್ನು ಬಹುಪಾಲು ಭಗ್ನಾವಶೇಷಗಳಾಗಿ ಮಾಡಿದ ಇಸ್ರೇಲ್‌ ಪ್ರಧಾನಿ ಬೆಂಜಮಿನ್ ನೆತನ್ಯಾಹು, ಇಸ್ರೇಲ್ ರಕ್ಷಣಾ ಪಡೆಗೆ (IDF) ಈಜಿಪ್ಟ್ ಗಡಿಯಲ್ಲಿರುವ ದಕ್ಷಿಣ ಗಾಝಾ ಪಟ್ಟಣವಾದ ರಫಾವನ್ನು ವಶಕ್ಕೆ ತೆಗೆದುಕೊಳ್ಳಲು ಸೂಚಿಸಿದ್ದಾರೆ. ಸಂಪೂರ್ಣ ಗೆಲುವು ಕೈಗೆಟುಕಲು ಇಸ್ರೇಲ್‌ಗೆ ಇನ್ನೇನು ಬಾಕಿ ಉಳಿದಿದೆ ಎಂಬಂತಹ ಪರಿಸ್ಥಿ ಇದೆ. ಜನಾಂಗೀಯ ಹತ್ಯೆ, ಜನರ ಬಲವಂತದ ವರ್ಗಾವಣೆ ಮೂಲಕ ಇಸ್ರೇಲ್‌ ತನ್ನ ನೈಜ ಮುಖವನ್ನು ವಿಶ್ವಕ್ಕೆ ಅನಾವರಣಗೊಳಿಸಿದೆ. ನಾಗರಿಕರ ನೋವು ಇಸ್ರೇಲ್‌ನ್ನು ಕ್ರೂರ ಕೃತ್ಯದಿಂದ ಹಿಂದೆ ಸರಿಯುವಂತೆ ಮಾಡಿಲ್ಲ. ನೆತನ್ಯಾಹು  ರಕ್ತಪಾತದ  ಬೆದರಿಕೆಯನ್ನು ಮುಂದವರಿಸಿದ್ದಾರೆ. ಗಾಝಾದಲ್ಲಿ ಕಾನೂನು ಮತ್ತು ಮಾನವೀಯತೆಯನ್ನು ಹೂತು ಹಾಕಿದ್ದಾರೆ.

ಅ.7ರಂದು ಇಸ್ರೇಲ್ ಗಾಝಾದ ಮೇಲೆ ಯುದ್ಧ ಘೋಷಿಸಿದ ಬಳಿಕ ಆ ಪ್ರದೇಶದಲ್ಲಿ ಸಾವಿನ ಸಂಖ್ಯೆ 29,000 ಮೀರಿದೆ. 69,000ಕ್ಕೂ ಹೆಚ್ಚು ಪ್ಯಾಲೆಸ್ತೀನ್‌ ನಾಗರಿಕರು ಗಾಯಗೊಂಡಿದ್ದಾರೆ ಎಂದು ಯುಎನ್ ವರದಿ ತಿಳಿಸಿದೆ. ಆದರೆ ವಾಸ್ತವ ಸಾವು ಮತ್ತು ಗಾಯಾಳುಗಳ ಸಂಖ್ಯೆಯಲ್ಲಿ ಗಣನೀಯ ಹೆಚ್ಚಳದ ಸಾಧ್ಯತೆ ಇದೆ. ಇಸ್ರೇಲ್‌ ನಡೆಸಿದ ಬಾಂಬ್‌ ದಾಳಿಗೆ ಲಕ್ಷಾಂತರ ಮನೆಗಳು, ಕಟ್ಟಡಗಳು ಧ್ವಂಸಗೊಂಡಿದೆ. ಲಕ್ಷಾಂತರ ಮಂದಿ ಮನೆಗಳನ್ನು ಕಳೆದುಕೊಂಡು ಕಿಕ್ಕಿರಿದ ಜನಸಂದಣಿಯ ನಿರಾಶ್ರಿತರ ಕೇಂದ್ರಗಳಲ್ಲಿ ದಿನದೂಡುವಂತಾಗಿದೆ. ಗಾಝಾದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಮುಗ್ಧ ಮಕ್ಕಳು ಮತ್ತು ಮಹಿಳೆಯರ ಹತ್ಯೆ ನಡೆಸಿದರೂ ಇಸ್ರೇಲ್‌ ಪ್ರಧಾನಿ ಬೆಂಜಮಿನ್ ನೆತನ್ಯಾಹು ಯುದ್ಧ ದಾಹ ಮುಗಿದಿಲ್ಲ. ಹಮಾಸ್‌ನ್ನು ಸಂಪೂರ್ಣ ನಿರ್ನಾಮ ಮಾಡುತ್ತೇವೆ ಎಂದು ಹೇಳುತ್ತಿರುವ ನೆತನ್ಯಾಹು, ಪ್ಯಾಲೆಸ್ತೀನ್‌ನ ಮುಗ್ಧ ನಾಗರಿಕರ ಹತ್ಯೆಯನ್ನು ಸಮರ್ಥಿಸಿಕೊಳ್ಳುತ್ತಿದ್ದಾರೆ. ಇದಲ್ಲದೆ ಗಾಝಾದಲ್ಲಿನ ಯುದ್ಧ ನಿರಾಶ್ರಿತರಿಗೆ ಮಾನವೀಯ ನೆರವನ್ನು ತಡೆಯುತ್ತಿರುವುದು ಮತ್ತು ಶುದ್ಧ ನೀರಿನ ಕೇಂದ್ರಗಳ ಮೇಲೆ ದಾಳಿ ನಡೆಸಿ ಕುಡಿಯಲು ಅಯೋಗ್ಯವನ್ನಾಗಿ ಮಾಡುವುದು ಇಸ್ರೇಲ್‌ ಯುದ್ಧ ಕ್ರೌರ್ಯವನ್ನು ಬಿಚ್ಚಿಡುತ್ತಿದೆ.

2007ರಲ್ಲಿ ಇಸ್ರೇಲ್ ಗಾಝಾದ ಮೇಲೆ ಆಕ್ರಮಿಸಿದ ಬಳಿಕ ರಫಾವು ಗಾಝಾದ ಯುದ್ದ ಸಂತ್ರಸ್ತ ಪ್ರದೇಶಕ್ಕೆ  ಹೆಚ್ಚಿನ ಮಾನವೀಯ ಸರಬರಾಜುಗಳನ್ನು ತಲುಪಿಸುವ ಮಾರ್ಗವಾಗಿತ್ತು. ಇಸ್ರೇಲ್‌ ಆಕ್ರಮಣಕ್ಕೆ ಮುಂಚಿತವಾಗಿ ಒಂದು ಲಕ್ಷ ಜನರು ಇಲ್ಲಿ ವಾಸಿಸುತ್ತಿದ್ದರು. ಇತ್ತೀಚಿನ ಇಸ್ರೇಲ್‌ ಯುದ್ಧ ಘೋಷಣೆ ಬಳಿಕ ಒಂದೂವರೆ ಮಿಲಿಯನ್‌ ಜನರು ಗಾಝಾದ ರಫಾವನ್ನು ಆಶ್ರಯ ಕೇಂದ್ರವನ್ನಾಗಿಸಿಕೊಂಡಿದ್ದಾರೆ. ಜನ ಸಂದಣಿಯಿಂದಾಗಿ ರಫಾದಲ್ಲಿ ವಾಸಿಸುವ ಜನರು ನೀರಿನ ಕೊರತೆ, ಮೂಲ ಸೌಕರ್ಯದ ಕೊರತೆ, ಆಹಾರದ ಕೊರತೆ, ನೈರ್ಮಲ್ಯದ ಕೊರತೆ, ಸಾಂಕ್ರಾಮಿಕ ರೋಗದಂತಹ ಸಮಸ್ಯೆಗಳನ್ನು ಎದುರಿಸುತ್ತಿದ್ದಾರೆ. ಈಗ ಇಸ್ರೇಲ್‌ ರಫಾವನ್ನೇ ಟಾರ್ಗೆಟ್‌ ಮಾಡಿ ದಾಳಿಯನ್ನು ನಡೆಸುತ್ತಿದ್ದು, ಆಸ್ಪತ್ರೆಗಳು, ಮನೆಗಳು ಮತ್ತು ಮಸೀದಿಗಳನ್ನು ಧ್ವಂಸ ಮಾಡಿದೆ. ರಫಾದಲ್ಲಿ ಕೂಡ ಡಜನ್‌ ಗಟ್ಟಲೆ ಜನರನ್ನು ಹತ್ಯೆ ಮಾಡಿದೆ.

UNICEF ಹೇಳುವಂತೆ ಗಾಝಾವು ಮಕ್ಕಳ ಸಾವುಗಳ ಕೇಂದ್ರವಾಗುತ್ತಿದೆ. ಹತ್ತಾರು ಯುರೋಪಿಯನ್ ರಾಷ್ಟ್ರಗಳು  ತಕ್ಷಣದ ಕದನ ವಿರಾಮಕ್ಕೆ ಕರೆ ನೀಡಿವೆ. ರಫಾದ ಮೇಲೆ ಇಸ್ರೇಲ್‌ ಆಕ್ರಮಣವನ್ನು ಕೈಬಿಡುವಂತೆ ಆಗ್ರಹಿಸಿದೆ. ಅಲ್ ಜಝೀರಾ ವರದಿಯ ಪ್ರಕಾರ, ಉತ್ತರ ಗಾಝಾದಲ್ಲಿ ಮಾನವೀಯ ನೆರವಿಗಾಗಿ ಕಾಯುತ್ತಿದ್ದ ಅಂದರೆ ಆಹಾರದ ಪೊಟ್ಟಣಕ್ಕೆ ಕಾಯುತ್ತಿದ್ದ ಪ್ಯಾಲೆಸ್ತೀನ್‌ ನಾಗರಿಕರ ಮೇಲೆ ಇಸ್ರೇಲ್‌ ದಾಳಿ ನಡೆಸಿದೆ. ದಾಳಿಯಲ್ಲಿ ಓರ್ವ ನಾಗರಿಕ ಮೃತಪಟ್ಟು, ಹಲವಾರು ಮಂದಿ ಗಾಯಗೊಂಡಿದ್ದಾರೆ.

ಗಾಝಾದಲ್ಲಿ ಅಪೌಷ್ಟಿಕತೆಯ ಕುರಿತು ಯುಎನ್‌ನ ಮಕ್ಕಳ ಸಂಸ್ಥೆ (ಯುನಿಸೆಫ್), ವಿಶ್ವ ಆರೋಗ್ಯ ಸಂಸ್ಥೆ (ಡಬ್ಲ್ಯುಎಚ್‌ಒ)  ಕಳವಳವನ್ನು ವ್ಯಕ್ತಪಡಿಸಿದೆ. ಗಾಝಾ ಪಟ್ಟಿಯು ಪೌಷ್ಟಿಕಾಂಶದ ಬಿಕ್ಕಟ್ಟಿನ ಅಂಚಿನಲ್ಲಿದೆ ಎಂದು ನಾವು ವಾರಗಳಿಂದ ಎಚ್ಚರಿಸುತ್ತಿದ್ದೇವೆ. ಗಾಝಾದಲ್ಲಿ ಊಹಿಸಲು ಅಸಾಧ್ಯವಾದ ಮಟ್ಟದಲ್ಲಿ ಮಕ್ಕಳ ಸಾವುಗಳು ಸಂಭವಿಸುತ್ತದೆ ಎಂದು ಯುನಿಸೆಫ್‌ನ ಉಪ ಕಾರ್ಯನಿರ್ವಾಹಕ ನಿರ್ದೇಶಕ ಟೆಡ್ ಚೈಬಾನ್ ಹೇಳಿದ್ದಾರೆ.

ವರದಿಯ ಪ್ರಕಾರ, ಗಾಝಾದ ಉತ್ತರದಲ್ಲಿ ಪರಿಸ್ಥಿತಿಯು ಚಿಂತಾಜನಕವಾಗಿದೆ, ಈ ಪ್ರದೇಶಗಳಲ್ಲಿ ವಾರಗಳಿಂದ ಎಲ್ಲಾ ಮಾನವೀಯ ನೆರವು ಪರಿಹಾರ ಕಡಿತಗೊಂಡಿದೆ ಮತ್ತು ಅಲ್ಲಿನ ಆರು ಮಕ್ಕಳಲ್ಲಿ ಒಂದು ಮಗು ತೀವ್ರವಾಗಿ ಅಪೌಷ್ಟಿಕತೆಯಿಂದ ಬಳಲುತ್ತಿದೆ. ರಾಫಾದಲ್ಲಿ ಎರಡಕ್ಕಿಂತ ಕಡಿಮೆ ವಯಸ್ಸಿನ 5 ಪ್ರತಿಶತ ಮಕ್ಕಳು ತೀವ್ರವಾಗಿ ಅಪೌಷ್ಟಿಕತೆಯಿಂದ ಬಳಲುತ್ತಿದ್ದಾರೆ.

ಹಸಿವು ಮತ್ತು ರೋಗವು ಮಾರಣಾಂತಿಕವಾಗಿದೆ ಎಂದು WHO ನ ಆರೋಗ್ಯ ತುರ್ತು ಕಾರ್ಯಕ್ರಮದ ಮುಖ್ಯಸ್ಥ ಡಾ ಮೈಕ್ ರಯಾನ್ ಹೇಳಿದ್ದಾರೆ. ಹಸಿದ, ದುರ್ಬಲಗೊಂಡ ಮತ್ತು ಆಳವಾಗಿ ಆಘಾತಕ್ಕೊಳಗಾದ ಮಕ್ಕಳು ಅನಾರೋಗ್ಯಕ್ಕೆ ಒಳಗಾಗುವ ಸಾಧ್ಯತೆಯಿದೆ. ಇದು ಅಪಾಯಕಾರಿ ಮತ್ತು ಈ ದುರಂತ ನಮ್ಮ ಕಣ್ಣುಗಳ ಮುಂದೆ ನಡೆಯುತ್ತಿದೆ ಎಂದು ರಯಾನ್ ಹೇಳಿದ್ದಾರೆ.

ಐರಿಷ್ ವಿದೇಶಾಂಗ ಸಚಿವ ಮೈಕೆಲ್ ಮಾರ್ಟಿನ್ ಅವರು ದಕ್ಷಿಣ ಗಾಝಾದ ರಫಾಹ್ ಮೇಲೆ ದಾಳಿ ಮಾಡದಂತೆ ಯುರೋಪಿಯನ್ ಒಕ್ಕೂಟವು ಇಸ್ರೇಲ್‌ ಸರ್ಕಾರದ ಮೇಲೆ ಒತ್ತಡ ಹೇರಬೇಕು ಎಂದು ಹೇಳಿದ್ದಾರೆ. ಬ್ರಸೆಲ್ಸ್‌ನಲ್ಲಿ ಮಾತನಾಡಿದ ಮಾರ್ಟಿನ್, ಗಾಝಾದಲ್ಲಿ ಈಗ ನಡೆಯುತ್ತಿರುವ ಅಮಾನವೀಯತೆಯ ಮಟ್ಟ ಜಗತ್ತನ್ನು ಬೆಚ್ಚಿಬೀಳಿಸಿದೆ. ರಫಾದಲ್ಲಿ ಇಸ್ರೇಲ್‌ನ ಯೋಜಿತ ಆಕ್ರಮಣವನ್ನು ತಡೆಯಲು ಯುರೋಪ್ ಸಾಧ್ಯವಾದ ಎಲ್ಲವನ್ನೂ ಮಾಡಬೇಕು ಎಂದು ಅವರು ಆಗ್ರಹಿಸಿದ್ದಾರೆ. ಭಾನುವಾರ ಮತ್ತು ಸೋಮವಾರದ ನಡುವೆ ಗಾಝಾದ ಮೇಲಿನ ಇಸ್ರೇಲ್‌ ದಾಳಿಯಲ್ಲಿ ಹೆಚ್ಚುವರಿ 107 ಪ್ಯಾಲೆಸ್ತೀನ್‌ ನಾಗರಿಕರ ಹತ್ಯೆ ನಡೆದಿದೆ. ಈ ದಾಳಿಯಲ್ಲಿ 145 ಮಂದಿ ಗಾಯಗೊಂಡಿದ್ದಾರೆ. ಇಸ್ರೇಲ್‌ ಗಾಝಾ ಮೇಲೆ ಮತ್ತೆ ಆಕ್ರಮಣವನ್ನು ಮುಂದುವರಿಸಿದೆ.

ಇದನ್ನು ಓದಿ: 5 ವರ್ಷದ ಎಂಎಸ್ಪಿ ಗುತ್ತಿಗೆ; ಕೇಂದ್ರದ ಪ್ರಸ್ತಾವನೆ ತಿರಸ್ಕರಿಸಿದ ರೈತ ಮುಖಂಡರು: ನಾಳೆಯಿಂದ ದೆಹಲಿ ಚಲೋ ಆರಂಭ

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಲಂಚ ಪ್ರಕರಣ : ಎಸ್‌ಇಸಿ ಸಮನ್ಸ್ ಸ್ವೀಕರಿಸಲು ಅದಾನಿ ಒಪ್ಪಿಗೆ

ಲಂಚ ಪ್ರಕರಣದಲ್ಲಿ ಅಮೆರಿಕದ ಸೆಕ್ಯುರಿಟೀಸ್ ಆ್ಯಂಡ್ ಎಕ್ಸ್‌ಚೇಂಜ್ ಕಮಿಷನ್ (ಎಸ್‌ಇಸಿ) ನ ಸಮನ್ಸ್‌ಗಳನ್ನು ಸ್ವೀಕರಿಸಲು ಉದ್ಯಮಿ ಗೌತಮ್ ಅದಾನಿ ಮತ್ತು ಅವರ ಸೋದರಳಿಯ ಸಾಗರ್ ಅದಾನಿ ಒಪ್ಪಿಕೊಂಡಿದ್ದಾರೆ ಎಂದು ವರದಿಯಾಗಿದೆ. ನ್ಯೂಯಾರ್ಕ್‌ನ ಬ್ರೂಕ್ಲಿನ್‌ನಲ್ಲಿರುವ ಫೆಡರಲ್...

ಬೀದರ್‌ : ಮೊಳಕೇರಾ ಗ್ರಾಮದಲ್ಲಿ ಸ್ಫೋಟ ಪ್ರಕರಣ ; ಸಮಗ್ರ ತನಿಖೆಗೆ ಸಚಿವ ಈಶ್ವರ್ ಖಂಡ್ರೆ ಆದೇಶ

ಬೀದರ್ ಜಿಲ್ಲೆ ಹುಮನಾಬಾದ್ ತಾಲೂಕಿನ ಮೊಳಕೇರಾ ಗ್ರಾಮದ ಮೋಳಗಿ ಮಾರಯ್ಯ ದೇವಸ್ಥಾನ ರಸ್ತೆಯಲ್ಲಿ ಅನುಮಾನಾಸ್ಪದ ವಸ್ತು ಸ್ಫೋಟಗೊಂಡು, ಶಾಲೆಗೆ ತೆರಳುತ್ತಿದ್ದ ಮಕ್ಕಳೂ ಸೇರಿ 6 ಜನರು ಗಾಯಗೊಂಡಿರುವ ಘಟನೆ ಬಗ್ಗೆ ಆಘಾತ ವ್ಯಕ್ತಪಡಿಸಿರುವ...

ಜೈಲಿನಲ್ಲಿರುವ ಹೋರಾಟಗಾರ ಸೋನಮ್ ವಾಂಗ್‌ಚುಕ್‌ಗೆ ಅನಾರೋಗ್ಯ : ಜೋಧ್‌ಪುರದ ಏಮ್ಸ್‌ನಲ್ಲಿ ವೈದ್ಯಕೀಯ ಪರೀಕ್ಷೆ

ನ್ಯಾಯಾಂಗ ಬಂಧನದಲ್ಲಿರುವ ಲಡಾಖ್‌ನ ಹೋರಾಟಗಾರ ಹಾಗೂ ವಿಜ್ಞಾನಿ ಸೋನಮ್ ವಾಂಗ್‌ಚುಕ್ ಅವರ ಆರೋಗ್ಯ ಹದೆಗೆಟ್ಟಿದ್ದು, ಸುಪ್ರೀಂ ಕೋರ್ಟ್ ನಿರ್ದೇಶನ ಅನುಸಾರ ಜೋಧ್‌ಪುರದ ಏಮ್ಸ್‌ನಲ್ಲಿ ಅವರಿಗೆ ವೈದ್ಯಕೀಯ ಪರೀಕ್ಷೆ ನಡೆಸಲಾಗಿದೆ. ಪೊಲೀಸರು ವಾಂಗ್‌ಚುಕ್ ಅವರನ್ನು ಜೋಧ್‌ಪುರ...

ಉತ್ತರಾಖಂಡ ಏಕರೂಪ ನಾಗರಿಕ ಸಂಹಿತೆ ತಿದ್ದುಪಡಿ : ಬಲವಂತದ ವಿವಾಹ, ಲಿವ್‌ಇನ್ ಸಂಬಂಧಕ್ಕೆ 7 ವರ್ಷ ಜೈಲು

ಉತ್ತರಾಖಂಡ ಏಕರೂಪ ನಾಗರಿಕ ಸಂಹಿತೆ (ತಿದ್ದುಪಡಿ) ಸುಗ್ರೀವಾಜ್ಞೆಗೆ ರಾಜ್ಯಪಾಲ ಹಾಗೂ ನಿವೃತ್ತ ಲೆಫ್ಟಿನೆಂಟ್ ಜನರಲ್ ಗುರ್ಮೀತ್ ಸಿಂಗ್ ಅವರು ಅಂಕಿತ ಹಾಕಿದ್ದಾರೆ. ಈ ತಿದ್ದುಪಡಿಯ ಪರಿಣಾಮ, ರಾಜ್ಯದಲ್ಲಿ ವಿವಾಹ ಹಾಗೂ ಲಿವ್‌ಇನ್ ಸಂಬಂಧಗಳಿಗೆ...

ಮಹಾರಾಷ್ಟ್ರದ ಡಿಸಿಎಂ ಆಗಿ ಅಜಿತ್ ಪವಾರ್ ಪತ್ನಿ ಸುನೇತ್ರಾ ಪವಾರ್ ಆಯ್ಕೆ : ಇಂದು ಸಂಜೆ ಪ್ರಮಾಣ ವಚನ ಸ್ವೀಕಾರ; ವರದಿ

ಅಜಿತ್ ಪವಾರ್ ಅವರ ಅಕಾಲಿಕ ಸಾವಿನಿಂದ ತೆರವಾದ ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಸ್ಥಾನಕ್ಕೆ ಅಜಿತ್ ಪವಾರ್ ಅವರ ಪತ್ನಿ ಸುನೇತ್ರಾ ಪವಾರ್ ಅವರನ್ನು ನೇಮಿಸಲು ನ್ಯಾಷನಲಿಸ್ಟ್ ಕಾಂಗ್ರೆಸ್ ಪಾರ್ಟಿ (ಎನ್‌ಸಿಪಿ) ನಿರ್ಧರಿಸಿದೆ ಎಂದು ವರದಿಯಾಗಿದೆ....

ಶೂಟ್ ಮಾಡಿಕೊಂಡು ಪ್ರಾಣ ಬಿಟ್ಟ ಕಾನ್ಫಿಡೆಂಟ್ ಗ್ರೂಪ್ ಸಂಸ್ಥಾಪಕ ಸಿ.ಜೆ. ರಾಯ್: ಐಟಿ ದಾಳಿ ಒತ್ತಡದಿಂದ ಆತ್ಮಹತ್ಯೆ ಶಂಕೆ

ಬೆಂಗಳೂರು: ಖ್ಯಾತ ರಿಯಲ್ ಎಸ್ಟೇಟ್ ಉದ್ಯಮಿ, ಕಾನ್ಫಿಡೆಂಟ್ ಗ್ರೂಪ್ (Confident Group) ಅಧ್ಯಕ್ಷ ಡಾ. ಸಿ.ಜೆ. ರಾಯ್ ಅವರು ಶುಕ್ರವಾರ ಬೆಂಗಳೂರಿನ ತಮ್ಮ ಕಚೇರಿಯಲ್ಲಿ ಗನ್ ನಿಂದ ಶೂಟ್ ಮಾಡಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.  ಕೇರಳ...

ಕಾಂಗ್ರೆಸ್ ಆಳ್ವಿಕೆಯಲ್ಲಿ ನುಸುಳಲುಕೋರರು ಬಹುಸಂಖ್ಯಾತರಾದರು; ನುಸುಳುಕೋರರಿಂದ ಅಸ್ಸಾಂ ರಕ್ಷಿಸಲು ಬಿಜೆಪಿಗೆ ಮತ ಹಾಕಿ: ಅಮಿತ್ ಶಾ

ಧೇಮಾಜಿ (ಅಸ್ಸಾಂ): ಕಾಂಗ್ರೆಸ್ ಆಳ್ವಿಕೆಯಲ್ಲಿ ಅಸ್ಸಾಂನ ಜನಸಂಖ್ಯಾಶಾಸ್ತ್ರ ಬದಲಾಗಿದೆ ಎಂದು ಹೇಳಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ , ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ನೇತೃತ್ವದ ಸರ್ಕಾರ ಈ ಪ್ರವೃತ್ತಿಯನ್ನು...

ಕೊಲ್ಕತ್ತಾ ಅಗ್ನಿ ಅವಘಡ| ಈವರೆಗೆ ವಾವ್ ಮೊಮೋ ಕಂಪನಿ ಗೋದಾಮು ಸೇರಿದಂತೆ ಇತರೆಡೆ 21 ಜನರು ಸಾವನ್ನಪ್ಪಿರುವ ಮಾಹಿತಿ ಲಭ್ಯ  

ಜನವರಿ 26 ರ ಮುಂಜಾನೆ ಕೋಲ್ಕತ್ತಾದ ಆನಂದಪುರ ಪ್ರದೇಶದಲ್ಲಿ ಸಂಭವಿಸಿದ ಭೀಕರ ಬೆಂಕಿ ಅಪಘಾತದಲ್ಲಿ ಸಾವನ್ನಪ್ಪಿದವರ ಸಂಖ್ಯೆ ಗುರುವಾರ 21 ಕ್ಕೆ ಏರಿದ್ದು, 28 ಜನರು ಇನ್ನೂ ನಾಪತ್ತೆಯಾಗಿದ್ದಾರೆ.  ಬೆಂಕಿಯ ಅವಘಡದಲ್ಲಿ ಎರಡು ಗೋದಾಮುಗಳು...

ಮುಟ್ಟಿನ ಆರೋಗ್ಯ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ : ಸುಪ್ರೀಂ ಕೋರ್ಟ್

ಮುಟ್ಟಿನ ಆರೋಗ್ಯ ಸಂವಿಧಾನದ 21ನೇ ವಿಧಿಯಡಿ ಖಾತ್ರಿಪಡಿಸಿದ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ ಎಂದು ಸುಪ್ರೀಂ ಕೋರ್ಟ್ ಶುಕ್ರವಾರ (ಜ.30) ಮಹತ್ವದ ತೀರ್ಪು ನೀಡಿದೆ. ಎಲ್ಲಾ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ಸರ್ಕಾರಿ,...

ಅತ್ಯಾಚಾರ ಪ್ರಕರಣದಲ್ಲಿ ಎಸ್‌ಪಿ ನಾಯಕ ಮೊಯಿದ್ ಖಾನ್ ಖುಲಾಸೆ: ಬಂಧನದ ಎರಡು ವರ್ಷಗಳ ನಂತರ ಬುಲ್ಡೋಜರ್ ನಿಂದ ಮನೆ ಕೆಡವಿದ್ದ ಯೋಗಿ ಸರ್ಕಾರ

2024 ರಲ್ಲಿ ಅಪ್ರಾಪ್ತ ಬಾಲಕಿಯ ಮೇಲೆ ನಡೆದ ಸಾಮೂಹಿಕ ಅತ್ಯಾಚಾರ ಪ್ರಕರಣದಲ್ಲಿ ಸಮಾಜವಾದಿ ಪಕ್ಷದ ನಾಯಕ ಮೊಯಿದ್ ಖಾನ್ ಅವರನ್ನು ಉತ್ತರ ಪ್ರದೇಶದ ಅಯೋಧ್ಯೆಯ ಪೋಕ್ಸೋ ನ್ಯಾಯಾಲಯವು ಖುಲಾಸೆಗೊಳಿಸಿದೆ.  ಅಪ್ರಾಪ್ತ ಬಾಲಕಿಯ ಮೇಲೆ ನಡೆದ...