Homeಮುಖಪುಟಆಸ್ತಿ ನಾಶ ಮಾಡಿದ ಪ್ರತಿಭಟನಾಕಾರಿಂದಲೆ ನಷ್ಟ ಭರಿಸುವ ಹೊಸ ಕಾನೂನು ಜಾರಿ: ಹರಿಯಾಣ ಸಿಎಂ

ಆಸ್ತಿ ನಾಶ ಮಾಡಿದ ಪ್ರತಿಭಟನಾಕಾರಿಂದಲೆ ನಷ್ಟ ಭರಿಸುವ ಹೊಸ ಕಾನೂನು ಜಾರಿ: ಹರಿಯಾಣ ಸಿಎಂ

ಹರಿಯಾಣದಲ್ಲಿ ಬಿಜೆಪಿ ನೇತೃತ್ವದ ಮೈತ್ರಿ ಸರ್ಕಾರವಿದ್ದು, ರೈತರ ಬೃಹತ್ ಪ್ರತಿಭಟನೆಯನ್ನು ಕಂಡ ರಾಜ್ಯಗಳಲ್ಲಿ ಒಂದಾಗಿದೆ.

- Advertisement -
- Advertisement -

ಕೇಂದ್ರ ಸರ್ಕಾರ ಜಾರಿಗೆ ತಂದಿರುವ ಮೂರು ಹೊಸ ಕೃಷಿ ಕಾನೂನುಗಳ ವಿರುದ್ಧ ರೈತರು ಪ್ರತಿಭಟನೆ ನಡೆಸುತ್ತಿರುವುದರ ನಡುವೆ ಹರಿಯಾಣ ಮುಖ್ಯಮಂತ್ರಿ ಮನೋಹರ್ ಲಾಲ್ ಖಟ್ಟರ್‌ ಗೃಹ ಸಚಿವ ಅಮಿತ್ ಶಾ ಅವರನ್ನು ಭೇಟಿ ಮಾಡಿದರು. ಸಭೆಯ ನಂತರ ಮಾತನಾಡಿದ ಮುಖ್ಯಮಂತ್ರಿ, ರೈತರ ಹೋರಾಟ ಹಾಗೂ ಇತರ ವಿಷಯಗಳ ಕುರಿತು ಮಾತನಾಡಿದೆವು. ಪ್ರತಿಭಟನೆಯ ಸಮಯದಲ್ಲಿ ಆಸ್ತಿ-ಪಾಸ್ತಿಗಳನ್ನು ನಾಶಮಾಡುವವರೇ ಆ ನಷ್ಟವನ್ನು ಭರಿಸಬೇಕು ಎಂಬ ಹೊಸ ಕಾನೂನು ರೂಪಿಸುವುದಾಗಿ ಹೇಳಿದರು.

ಹರಿಯಾಣದಲ್ಲಿ ಬಿಜೆಪಿ ನೇತೃತ್ವದ ಮೈತ್ರಿ ಸರ್ಕಾರವಿದ್ದು, ರೈತರ ಬೃಹತ್ ಪ್ರತಿಭಟನೆಯನ್ನು ಕಂಡ ರಾಜ್ಯಗಳಲ್ಲಿ ಒಂದಾಗಿದೆ. ಪ್ರಸ್ತುತ ಕಾನೂನನ್ನು ಮುಂಬರುವ ವಿಧಾನಸಭೆಯ ಅಧಿವೇಶನದಲ್ಲಿ ತರಲು ಪ್ರಯತ್ನಿಸಲಾಗುವುದು ಎಂದು ಮುಖ್ಯಮಂತ್ರಿ ಹೇಳಿದರು.

ಇದನ್ನೂ ಓದಿ: ಮಹತ್ವದ ಬೆಳವಣಿಗೆ: 42 ಐಎಎಸ್ ಅಧಿಕಾರಿಗಳನ್ನು ವರ್ಗಾಯಿಸಿದ ರಾಜ್ಯ ಸರ್ಕಾರ

“ಕೃಷಿ ಕಾನೂನುಗಳ ವಿರುದ್ಧ ನಡೆಸುತ್ತಿರುವ ಪ್ರತಿಭಟನೆಯು ಪಟ್ಟಭದ್ರರ ರಾಜಕೀಯ ಉದ್ದೇಶವನ್ನು ಈಡೇರಿಸಲು ಬೇಕಾಗಿ ಮಾಡಲಾಗುತ್ತಿದೆ. ಸಕಾರಾತ್ಮಕ ಸಂವಾದದ ಮೂಲಕ, ಈ ಕಾನೂನುಗಳಲ್ಲಿ ಯಾವುದೇ ತಿದ್ದುಪಡಿ ಅಗತ್ಯವಿದ್ದರೆ, ಸರ್ಕಾರ ಯಾವಾಗಲೂ ಸಿದ್ಧವಾಗಿರುತ್ತದೆ” ಎಂದು ಮುಖ್ಯಮಂತ್ರಿ ಹೇಳಿದರು.

ಹರಿಯಾಣ ಮತ್ತು ನರೆಯ ಪಂಜಾಬ್‌ನಲ್ಲಿ ಎರಡು ತಿಂಗಳುಗಳಿಂದಲೂ ಹೆಚ್ಚು ಕಾಲದಿಂದ ಕೇಂದ್ರ ಸರ್ಕಾರ ಜಾರಿಗೆ ತಂದಿರುವ ಕೃಷಿ ಕಾನೂನಿನ ವಿರುದ್ದ ರೈತರು ಹೋರಾಟ ನಡೆಸುತ್ತಿದ್ದಾರೆ. ಆದರೆ ಕೇಂದ್ರವು ಇವರೊಂದಿಗೆ 11 ಸುತ್ತಿನ ಮಾತುಕತೆ ನಡೆಸಿದ್ದು ಎಲ್ಲವೂ ವಿಫಲವಾಗಿದೆ. ರೈತರು ನೂತನ ಕೃಷಿ ಕಾಯಿದೆಯನ್ನು ವಾಪಾಸು ಪಡೆಯದೆ ಪ್ರತಿಭಟನೆಯಿಂದ ಹಿಂದೆ ಸರಿಯುವುದಿಲ್ಲ ಎಂದು ಘೋಷಿಸಿದ್ದಾರೆ.

ಇದನ್ನೂ ಓದಿ: ಹರಿಯಾಣ ಉಪಮುಖ್ಯಮಂತ್ರಿಯ ರಾಜೀನಾಮೆ ನನ್ನ ಕಿಸೆಯಲ್ಲಿದೆ: ಜೆಜೆಪಿ ನಾಯಕ ಅಜಯ್ ಚೌಟಾಲ

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

‘ಇವಿಎಂ’ ತಿರುಚಲು ಶಿವಸೇನಾ ನಾಯಕನಿಗೆ 2.5 ಕೋಟಿ ರೂ.ಬೇಡಿಕೆ ಇಟ್ಟ ಯೋಧ!

0
ವಿದ್ಯುನ್ಮಾನ ಮತಯಂತ್ರಗಳನ್ನು(ಇವಿಎಂ) ತಿರುಚಲು ಶಿವಸೇನಾ ಉದ್ಧವ್‌ ಬಣದ ನಾಯಕ ಅಂಬಾದಾಸ್ ದನ್ವೆ ಅವರಿಂದ 2.5 ಕೋಟಿ ರೂಪಾಯಿಗೆ ಬೇಡಿಕೆಯಿಟ್ಟಿದ್ದಕ್ಕಾಗಿ ಮಹಾರಾಷ್ಟ್ರ ಪೊಲೀಸರು ಛತ್ರಪತಿ ಸಂಭಾಜಿನಗರದಲ್ಲಿ ಸೇನಾ ಯೋಧನೋರ್ವನನ್ನು ಬಂಧಿಸಿದ್ದಾರೆ. ಮಾರುತಿ ಧಕ್ನೆ(42) ವಿರುದ್ಧ ದೂರು...