Homeಕರ್ನಾಟಕಸಿಡಿ ಭಯ: ಕೋರ್ಟ್‌ನಿಂದ ತಡೆಯಾಜ್ಞೆ ತರಲಿರುವ ಶಾಸಕ ರೇಣುಕಾಚಾರ್ಯ!

ಸಿಡಿ ಭಯ: ಕೋರ್ಟ್‌ನಿಂದ ತಡೆಯಾಜ್ಞೆ ತರಲಿರುವ ಶಾಸಕ ರೇಣುಕಾಚಾರ್ಯ!

- Advertisement -
- Advertisement -

ಮಾಜಿ ಮುಖ್ಯಮಂತ್ರಿ ಬಿಎಸ್‌ ಯಡಿಯೂರಪ್ಪ ಅವರ ರಾಜಕೀಯ ಕಾರ್ಯರ್ಶಿಯಾಗಿದ್ದ ಶಾಸಕ ಎಂಪಿ ರೇಣುಕಾಚಾರ್ಯ ಅವರಿಗೆ ಸಿಡಿ ಭಯ ಪ್ರಾರಂಭವಾಗಿದೆ. ಇದನ್ನು ಸ್ವತಃ ಅವರೆ ಹೇಳಿದ್ದು, ಸಿಡಿಯ ವಿರುದ್ದ ತಡೆಯಾಜ್ಞೆ ತರಲು ನೋಡುತ್ತಿರುವುದಾಗಿ ಅವರು ಶುಕ್ರವಾರ ತಿಳಿಸಿದ್ದಾರೆ.

ಬೆಂಗಳೂರಿನ ಸರ್ಕಾರಿ ನಿವಾಸದಲ್ಲಿ ಪತ್ರಕರ್ತರೊಂದಿಗೆ ಮಾತನಾಡಿ ಅವರು, “ರೇಣುಕಾಚಾರ್ಯ ವಿಡಿಯೋ ಇದೆ ಎಂದು ಯಾರೋ ಪುಣ್ಯಾತ್ಮ ಬ್ಲ್ಯಾಕ್‌ಮೇಲ್ ಮಾಡಿದ್ದಾರೆ. ಆದರೆ ನಾನು ಯಾವ ತಪ್ಪನ್ನೂ ಮಾಡಿಲ್ಲ. ಯಾವುದನ್ನ ಬೇಕಾದರೂ ಎಡಿಟ್ ಮಾಡಿ, ಯಾರ ಮುಖ ಯಾವುದಕ್ಕಾದರೂ ಜೋಡಿಸಬಹುದು. ಯಾರದ್ದೋ ಕಾಲು, ದೇಹ ಗ್ರಾಫಿಕ್ಸ್ ಮಾಡಿಸಬಹುದು” ಎಂದು ಹೇಳಿದ್ದಾರೆ.

ಇದನ್ನೂ ಓದಿ: ‘ಯಡಿಯೂರಪ್ಪ ಕಿಂಗ್ ಮೇಕರ್‌’ ಎಂದ ರೇಣುಕಾಚಾರ್ಯ!

“ನನ್ನನ್ನು ಯಾರೂ ಬ್ಲ್ಯಾಕ್ ಮೇಲ್ ಮಾಡಲು ಸಾಧ್ಯವಿಲ್ಲ, ಬ್ಲ್ಯಾಕ್ ಮೇಲ್ ಖೆಡ್ಡಾಗೆ ನಾನು ಬೀಳುವುದಿಲ್ಲ. ನನ್ನ ವಿರುದ್ದ ಷಡ್ಯಂತ್ರ ರೂಪಿಲಾಗುತ್ತಿದೆ, ಅದು ಯಾರು ಎಂದು ನನಗೆ ಗೊತ್ತಿದೆ,ಅದರ ಹೆಸರು ನಾನು ಹೇಳುವುದಿಲ್ಲ. ನನ್ನ‌ ಮೇಲೆ‌ ಆರೋಪ ಮಾಡುವವರು ಅವರು ಏನು ಮಾಡಿದ್ದಾರೆ ಎಂದು ಆತ್ಮಾವಲೋಕನ ಮಾಡಿಕೊಳ್ಳಲಿ” ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಲ್‌ ಅವರ ವಿರುದ್ದವು ಕಿಡಿ ಕಾರಿದ ಅವರು, “ಜೆಡಿಎಸ್‌ಗೆ ಪಕ್ಷಾಂತರವಾಗಿದ್ದಾಗ ಹಿಂದುತ್ವ ಎಲ್ಲಿ ಹೋಗಿತ್ತು. ಸ್ವಾರ್ಥಕ್ಕಾಗಿ ಹಿಂದುತ್ವ ಬೇಕಾ? ಜೆಡಿಎಸ್‌ನಲ್ಲಿದ್ದಾಗ ಅಲ್ಪಸಂಖ್ಯಾತರ ಓಲೈಕೆ ಮಾಡಿಲ್ವಾ. ಅವರು ಯಡಿಯೂರಪ್ಪ ಕೈಕಾಲು ಹಿಡಿದು ವಾಪಾಸ್‌ ಪಕ್ಷಕ್ಕೆ ಬಂದಿದ್ದಾರೆ” ಎಂದು ಹೇಳಿದ್ದಾರೆ.

ರಾಜ್ಯದಲ್ಲಿ ಹೊಸ ಮುಖ್ಯಮಂತ್ರಿ ಪ್ರಮಾಣ ವಚನ ಸ್ವೀಕರಿಸಿ ಕೆಲವೆ ದಿನಗಳಾಗುತ್ತಿದ್ದಂತೆ ಹೊಸ ಸರ್ಕಾರದ ಸಂಪುಟ ರಚನೆಯ ಚರ್ಚೆಗಳು ತಾರಕಕ್ಕೇರಿದೆ. ಮಂತ್ರಿಗಿರಿ ಗಿಟ್ಟಿಸಿಕೊಳ್ಳಲು ಪೈಪೋಟಿ, ಓಲೈಕೆ ನಡೆಯುತ್ತಿದೆ. ಪ್ರತಿ ಬಾರಿಯು ಯಡಿಯೂರಪ್ಪ ಕಿಡಿ ಕಾರುತ್ತಿದ್ದ ಬಿಜೆಪಿ ಶಾಸಕ ಬಸನಗೌಡ ಪಾಟೀಲ್​ ಯತ್ನಾಳ್​​​‌ ಅವರಿಗೆ ಸಚಿವ ಸ್ಥಾನ ಸಿಗಲಿದೆ ಎಂದು ಹೇಳಲಾಗುತ್ತಿದೆ. ಈ ಮಧ್ಯೆ ರೇಣುಕಾಚಾರ್ಯ ಕೂಡಾ ಸಚಿವ ಸ್ಥಾನಕ್ಕೆ ಪ್ರಯತ್ನ ಪಡುತ್ತಿದ್ದಾರೆ.

ಇದನ್ನೂ ಓದಿ: ಲಾಬಿ ಮಾಡಿದವರು ಸಚಿವರಾಗುತ್ತಾರೆ, ನನಗೆ ಬೇಸರವಾಗಿದೆ: ಶಾಸಕ ರೇಣುಕಾಚಾರ್ಯ ಕಿಡಿ

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಮೋದಿ ದ್ವೇಷ ಭಾಷಣದ ಕುರಿತು ಅಭಿಪ್ರಾಯ ವ್ಯಕ್ತಪಡಿಸಿದ ಬಿಜೆಪಿ ಜಿಲ್ಲಾಧ್ಯಕ್ಷ ಪಕ್ಷದಿಂದಲೇ ಉಚ್ಚಾಟನೆ!

0
ಪ್ರಧಾನಿ ನರೇಂದ್ರ ಮೋದಿಯವರು ಮುಸ್ಲಿಮರ ವಿರುದ್ಧ ಮಾಡಿರುವ ದ್ವೇಷ ಭಾಷಣದ ಬಗ್ಗೆ ಮಾಧ್ಯಮವೊಂದರಲ್ಲಿ ತನ್ನ ಅಭಿಪ್ರಾಯ ವ್ಯಕ್ತಪಡಿಸಿದ್ದಕ್ಕೆ ರಾಜಸ್ಥಾನದ ಬಿಕಾನೇರ್ ಬಿಜೆಪಿ ಅಲ್ಪಸಂಖ್ಯಾತ ಮೋರ್ಚಾದ ಜಿಲ್ಲಾಧ್ಯಕ್ಷನನ್ನು ಪಕ್ಷದಿಂದಲೇ ಉಚ್ಚಾಟಿಸಲಾಗಿದೆ. ಈ ವಿಚಾರ ಈಗ...