Homeಮುಖಪುಟಜೈಲಿನಿಂದಲೇ ಲಾರೆನ್ಸ್ ಬಿಷ್ಣೋಯಿ ಸಂದರ್ಶನ : 7 ಮಂದಿ ಪಂಜಾಬ್ ಪೊಲೀಸರ ಅಮಾನತು

ಜೈಲಿನಿಂದಲೇ ಲಾರೆನ್ಸ್ ಬಿಷ್ಣೋಯಿ ಸಂದರ್ಶನ : 7 ಮಂದಿ ಪಂಜಾಬ್ ಪೊಲೀಸರ ಅಮಾನತು

- Advertisement -
- Advertisement -

ಗ್ಯಾಂಗ್‌ಸ್ಟರ್‌ ಲಾರೆನ್ಸ್ ಬಿಷ್ಣೋಯಿ ಜೈಲಿನಲ್ಲಿರುವಾಗಲೇ ಸಂದರ್ಶನ ನಡೆಸಲು ಅವಕಾಶ ಮಾಡಿಕೊಟ್ಟ ಪ್ರಕರಣಕ್ಕೆ ಸಂಬಂಧಿಸಿದಂತೆ ಪಂಜಾಬ್ ಪೊಲೀಸ್‌ನ ಏಳು ಸಿಬ್ಬಂದಿಯನ್ನು ಅಮಾನತುಗೊಳಿಸಿ ಸರ್ಕಾರ ಆದೇಶಿಸಿದೆ ಎಂದು ವರದಿಯಾಗಿದೆ.

ವಿಶೇಷ ಪೊಲೀಸ್ ಮಹಾನಿರ್ದೇಶಕ (ಮಾನವ ಹಕ್ಕುಗಳು) ನೇತೃತ್ವದ ವಿಶೇಷ ತನಿಖಾ ತಂಡ (ಎಸ್‌ಐಟಿ), ಬಿಷ್ಣೋಯ್ ಮೊಹಾಲಿಯ ಖರಾರ್‌ನಲ್ಲಿ ಪಂಜಾಬ್ ಪೊಲೀಸರ ವಶದಲ್ಲಿದ್ದಾಗ ಒಂದು ಸಂದರ್ಶನ ಮತ್ತು ರಾಜಸ್ಥಾನದ ಜೈಲಿನಲ್ಲಿ ಮತ್ತೊಂದು ಸಂದರ್ಶನ ನಡೆದಿದೆ ಎಂದು ಪಂಪತ್ತೆ ಹಚ್ಚಿದೆ.

ಎಸ್‌ಐಟಿ ತನಿಖೆ ಅನುಸರಿಸಿ ಎಸ್ಪಿ ಗುರ್ಷರ್ ಸಿಂಗ್ ಸಂಧು, ಡಿಎಸ್ಪಿ ಸಮ್ಮರ್ ವನೀತ್, ಸಬ್-ಇನ್‌ಸ್ಪೆಕ್ಟರ್ ರೀನಾ (ಸಿಐಎ ಖರಾರ್), ಸಬ್-ಇನ್‌ಸ್ಪೆಕ್ಟರ್ ಜಗತ್ಪಾಲ್ ಜಂಗು, ಸಬ್-ಇನ್‌ಸ್ಪೆಕ್ಟರ್‌ ಶಗನ್ಜಿತ್ ಸಿಂಗ್, ಸಹಾಯಕ ಸಬ್-ಇನ್‌ಸ್ಪೆಕ್ಟರ್ ಮುಖ್ತಿಯಾರ್ ಸಿಂಗ್ ಮತ್ತು ಹೆಡ್ ಕಾನ್‌ಸ್ಟೇಬಲ್ ಓಂ ಪ್ರಕಾಶ್ ಅವರನ್ನು ಅಮಾನತುಗೊಳಿಸಿ ಶುಕ್ರವಾರ (ಅ.25) ಪಂಜಾಬ್ ಗೃಹ ಕಾರ್ಯದರ್ಶಿ ಆದೇಶ ಹೊರಡಿಸಿದ್ದಾರೆ.

ಸೆಪ್ಟೆಂಬರ್ 3 ಮತ್ತು 4, 2022ರ ರಾತ್ರಿ ವಿಡಿಯೋ ಕಾನ್ಫರೆನ್ಸ್ ಮೂಲಕ ಲಾರೆನ್ಸ್‌ ಬಿಷ್ಣೋಯ್‌ನ ಸಂದರ್ಶನ ನಡೆಸಲಾಗಿದೆ ಎಂದು ಎಸ್‌ಐಟಿ ವರದಿ ಹೇಳಿದೆ.

ಕಳೆದ ಮಾರ್ಚ್‌ನಲ್ಲಿ ಖಾಸಗಿ ಸುದ್ದಿ ವಾಹಿನಿಯೊಂದು ಬಿಷ್ಣೋಯ್ ಜೊತೆಗಿನ ಎರಡು ಸಂದರ್ಶನಗಳನ್ನು ಪ್ರಸಾರ ಮಾಡಿತ್ತು. ಈ ಪೈಕಿ ಒಂದನ್ನು ಪಂಜಾಬ್‌ನ ಮೊಹಾಲಿಯ ಎಸ್‌ಎಎಸ್ ನಗರ ವ್ಯಾಪ್ತಿಯ ಖರಾರ್‌ನಲ್ಲಿರುವ ಅಪರಾಧ ತನಿಖಾ ಸಂಸ್ಥೆ (ಸಿಐಎ) ಸಿಬ್ಬಂದಿ ಆವರಣದಿಂದ ಹಾಗೂ ಮತ್ತೊಂದನ್ನು ರಾಜಸ್ಥಾನದ ಜೈಪುರದ ಕೇಂದ್ರ ಕಾರಾಗೃಹದಿಂದ ಮಾಡಿದ್ದ ವಿಡಿಯೋ ಕರೆಯಿಂದ ಚಿತ್ರೀಕರಿಸಲಾಗಿತ್ತು.

2022 ರಲ್ಲಿ ನಡೆದ ಪಂಜಾಬಿ ಗಾಯಕ ಸಿಧು ಮೂಸೆವಾಲಾ ಅವರ ಕೊಲೆ ಪ್ರಕರಣದಲ್ಲಿ ಲಾರೆನ್ಸ್ ಬಿಷ್ಣೋಯ್ ಜೈಲಿನಲ್ಲಿದ್ದಾನೆ. ಈತನ ತಂಡವೇ ಇತ್ತೀಚೆಗೆ ಮಹಾರಾಷ್ಟ್ರದ ಹಿರಿಯ ರಾಜಕಾರಣಿ ಬಾಬಾ ಸಿದ್ದೀಕ್ ಹತ್ಯೆ ಮಾಡಿದೆ ಎಂದು ಹೇಳಲಾಗುತ್ತಿದೆ. ಲಾರೆನ್ಸ್ ಬಿಷ್ಣೋಯಿ ಬಾಲಿವುಡ್ ನಟ ಸಲ್ಮಾನ್ ಖಾನ್‌ ಅವರನ್ನು ಕೊಲ್ಲುವುದಾಗಿ ನೇರ ಬೆದರಿಕೆ ಹಾಕಿದ್ದಾನೆ. ಈತ ಜೈಲಿನಲ್ಲಿ ಕುಳಿತೇ ತನ್ನ ತಂಡದ ಮೂಲಕ ಅಪರಾಧ ಕೃತ್ಯಗಳನ್ನು ನಡೆಸುತ್ತಿದ್ದಾನೆ.

ಪೊಲೀಸ್ ಅಧಿಕಾರಿಗಳ ಬೆಂಬಲವೂ ಲಾರೆನ್ಸ್ ಬಿಷ್ಣೋಯಿಗೆ ಇದೆ ಎಂದು ಹೇಳಲಾಗ್ತಿದೆ. ಇದೀಗ ಬಿಷ್ಣೋಯಿಗೆ ಸಹಕರಿಸಿದ ಆರೋಪದ ಮೇಲೆ ಪೊಲೀಸರು ಅಮಾನತಾಗಿರುವುದು ಈ ಆರೋಪವನ್ನು ಪುಷ್ಠೀಕರಿಸಿದೆ.

ಇದನ್ನೂ ಓದಿ : ಉತ್ತರಾಖಂಡ | ಹಿಂಸಾಚಾರಕ್ಕೆ ತಿರುಗಿದ ಮಸೀದಿ ವಿರೋಧಿ ಪ್ರತಿಭಟನೆ, ಮುಸ್ಲಿಮರ ಅಂಗಡಿಗಳು ಧ್ವಂಸ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಂಗಾಳ| ಮತದಾರರ ಪಟ್ಟಿಯಿಂದ ಹೆಸರು ತೆಗೆದ ಬಳಿಕ ಸಾವಿಗೆ ಶರಣಾದ ಮುಸ್ಲಿಂ ವ್ಯಕ್ತಿ

ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆಯ ನಂತರ ಪಶ್ಚಿಮ ಬಂಗಾಳದಲ್ಲಿ ಮತದಾರರ ಪಟ್ಟಿಯಿಂದ ತನ್ನ ಹೆಸರನ್ನು ತೆಗೆದುಹಾಕಿದ್ದರಿಂದ ಮನನೊಂದ ಮುಸ್ಲಿಂ ವ್ಯಕ್ತಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಪೊಲೀಸರು ಸೋಮವಾರ ತಿಳಿಸಿದ್ದಾರೆ. ಮೃತನನ್ನು ಬಿರ್ಭುಮ್...

‘ಯೋಜನೆಯು ಕೇರಳಕ್ಕೆ ಜೀವನಾಡಿಯಾಗಲಿದೆ’: ವಯನಾಡ್ ಸುರಂಗ ಮಾರ್ಗ ವಿರುದ್ದದ ಅರ್ಜಿ ವಜಾಗೊಳಿಸಿದ ಸುಪ್ರೀಂ ಕೋರ್ಟ್

ಕೇರಳದ ಕೋಝಿಕ್ಕೋಡ್-ವಯನಾಡ್ ಸುರಂಗ ಮಾರ್ಗ ನಿರ್ಮಾಣಕ್ಕೆ ನೀಡಲಾದ ಪರಿಸರ ಅನುಮತಿ (ಇಸಿ) ಪ್ರಶ್ನಿಸಿ ಸಲ್ಲಿಸಲಾದ ಅರ್ಜಿಯನ್ನು ಸುಪ್ರೀಂ ಕೋರ್ಟ್ ಸೋಮವಾರ (ಏ.6) ವಜಾಗೊಳಿಸಿದೆ. ಸುರಂಗ ನಿರ್ಮಾಣದ ಸಮಯದಲ್ಲಿ ಪರಿಸರ ಅನುಮತಿಯ ಷರತ್ತುಗಳ ಉಲ್ಲಂಘನೆಯಾದರೆ, ಅರ್ಜಿದಾರರು...

651 ಕೋಟಿ ರೂ. ಮೌಲ್ಯದ ನಗದು, ಮದ್ಯ, ಮಾದಕ ವಸ್ತು ವಶಪಡಿಸಿಕೊಂಡ ಚುನಾವಣಾ ಆಯೋಗ

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದಲ್ಲಿ ನಡೆಯುತ್ತಿರುವ ವಿಧಾನಸಭಾ ಚುನಾವಣೆಗೆ ಸಂಬಂಧಿಸಿದಂತೆ ಅಧಿಕಾರಿಗಳು 651.51 ಕೋಟಿ ರೂ.ಗೂ ಹೆಚ್ಚು ಮೌಲ್ಯದ ನಗದು, ಮದ್ಯ, ಮಾದಕ ವಸ್ತುಗಳು ಮತ್ತು ಇತರ ಉಚಿತ ವಸ್ತುಗಳನ್ನು...

ಪೇರಳೆ ಹಣ್ಣು ಕದ್ದಿದ್ದಾಳೆಂದು ಆರೋಪಿಸಿ ಬಾಲಕಿಯನ್ನು ಸರಪಳಿಯಿಂದ ಕಟ್ಟಿ ಥಳಿಸಿದ ಮಾಜಿ ಸೇನಾಧಿಕಾರಿ

ಪೇರಳೆ ಹಣ್ಣು ಕದ್ದಿದ್ದಾಳೆಂದು ಆರೋಪಿಸಿ ನಾಲ್ಕು ವರ್ಷದ ಬಾಲಕಿಯನ್ನು ನಿವೃತ್ತ ಸೇನಾಧಿಕಾರಿಯೊಬ್ಬರು ಸರಪಳಿಯಿಂದ ಕಟ್ಟಿಹಾಕಿ ಕ್ರೂರವಾಗಿ ಥಳಿಸಿರುವ ಆಘಾತಕಾರಿ ಘಟನೆ ಹಿಮಾಚಲ ಪ್ರದೇಶದ ಉನಾ ಜಿಲ್ಲೆಯ ಬೆಹಡಾಲ ಗ್ರಾಮದಲ್ಲಿ ನಡೆದಿದೆ. ಬಾಲಕಿಯು ನಿವೃತ್ತ ಸೇನಾಧಿಕಾರಿಯ ತೋಟದ...

ಆಂಧ್ರ ವಿಧಾನಸಭಾ ಸ್ಪೀಕರ್ ಅಯ್ಯಣ್ಣ ಪಾತ್ರುಡು ಅವರಿಂದ ದಲಿತ ವ್ಯಕ್ತಿಗೆ ಕಪಾಳಮೋಕ್ಷ: ವೈಎಸ್‌ಆರ್‌ಸಿಪಿ ವಾಗ್ದಾಳಿ

ಏಪ್ರಿಲ್ 3 ರ ಗುರುವಾರ ನರಸಿಪಟ್ಟಣದಲ್ಲಿ ದಲಿತ ವ್ಯಕ್ತಿಯೊಬ್ಬರಿಗೆ ಕಪಾಳಮೋಕ್ಷ ಮಾಡಿದ್ದಕ್ಕಾಗಿ ಆಂಧ್ರಪ್ರದೇಶ ವಿಧಾನಸಭಾ ಸ್ಪೀಕರ್ ಮತ್ತು ತೆಲುಗು ದೇಶಂ ಪಕ್ಷದ (ಟಿಡಿಪಿ) ನಾಯಕ ಅಯ್ಯಣ್ಣ ಪಾತ್ರುಡು ಅವರ ವಿರುದ್ಧ ವೈಎಸ್‌ಆರ್ ಕಾಂಗ್ರೆಸ್...

ಪ. ಬಂಗಾಳ | ಬಿಜೆಪಿ ಪ್ರಚಾರ ಸಾಮಗ್ರಿ ಸಜ್ಜುಗೊಳಿಸಿದ ವಿಡಿಯೋ ವೈರಲ್ : ಚುನಾವಣಾ ಕರ್ತವ್ಯದಲ್ಲಿದ್ದ ಅಧಿಕಾರಿ ಅಮಾನತು

ಬಿಜೆಪಿ ಪ್ರಚಾರ ಸಾಮಗ್ರಿಗಳನ್ನು ತಯಾರಿಸಲು ಸಹಾಯ ಮಾಡಿದ ಆರೋಪದ ಮೇಲೆ ಪಶ್ಚಿಮ ಬಂಗಾಳದ ಉತ್ತರ 24 ಪರಗಣ ಜಿಲ್ಲೆಯ ಪಾಣಿಹಟಿ ವಿಧಾನಸಭಾ ಕ್ಷೇತ್ರದ ಅಧಿಕಾರಿಯೊಬ್ಬರನ್ನು ಚುನಾವಣಾ ಆಯೋಗ ಅಮಾನತುಗೊಳಿಸಿದೆ ಎಂದು ದಿ ಇಂಡಿಯನ್...

ಮುಸ್ಲಿಮರ ವಿರುದ್ಧ ದ್ವೇಷ ಕಾರುವ ಅಸ್ಸಾಂ ಸಿಎಂ ಪತ್ನಿ ಬಳಿ 2 ಮುಸ್ಲಿಂ ದೇಶಗಳ ಪಾಸ್‌ಪೋರ್ಟ್ ಇದೆ : ಕಾಂಗ್ರೆಸ್ ಆರೋಪ

ಮತದಾನಕ್ಕೆ ಇನ್ನೇನು ಮೂರು ದಿನಗಳು ಬಾಕಿ ಇರುವಾಗ, ಅಸ್ಸಾಂನಲ್ಲಿ ಕಾಂಗ್ರೆಸ್‌-ಬಿಜೆಪಿ ನಡುವೆ ವೈಯಕ್ತಿಕ ವಿಚಾರಗಳ ಕುರಿತ ವಾಗ್ಯುದ್ಧ ತಾರಕಕ್ಕೇರಿದೆ. ಸಿಎಂ ಹಿಮಂತ ಬಿಸ್ವಾ ಶರ್ಮಾ ಮತ್ತು ಅವರ ಪತ್ನಿ ರಿನಿಕಿ ಭುಯಾನ್ ಶರ್ಮಾ...

ದಟ್ಟಾರಣ್ಯದೊಳಗೆ ಮೂರು ದಿನಗಳನ್ನು ಕಳೆದಿದ್ದು ಹೇಗೆ..ದಾರಿ ತಪ್ಪಿದ ಬಳಿಕ ಏನಾಯ್ತು? ನಾಪತ್ತೆ ವಿಚಾರ ಬಿಚ್ಚಿಟ್ಟ ಶರಣ್ಯ

ಕಳೆದ ಗುರುವಾರ (ಏಪ್ರಿಲ್ 2, 2026) ಕೊಡಗಿನ ತಡಿಯಂಡಮೋಳ್ ಬೆಟ್ಟಕ್ಕೆ ಚಾರಣಕ್ಕೆ ತೆರಳಿ ನಾಪತ್ತೆಯಾಗಿದ್ದ ಕೇರಳದ ಯುವತಿ ಶರಣ್ಯ, ಮೂರು ದಿನಗಳ ಬಳಿಕ, ಅಂದರೆ ನಾಪತ್ತೆಯಾದ ನಾಲ್ಕನೇ ದಿನ ಭಾನುವಾರ (ಏಪ್ರಿಲ್ 4,...

ಮಗಳ ವಿಚ್ಛೇದನ: ಸಿಹಿ ಹಂಚಿ, ಮೆರವಣಿಗೆಯಲ್ಲಿ ಆಕೆಯನ್ನು ಮನೆಗೆ ಕರೆತಂದ ನೀವೃತ್ತ ನ್ಯಾಯಾದೀಶ ಮತ್ತು ಕುಟುಂಬ

ಮೀರತ್: ಕೌಟುಂಬಿಕ ನ್ಯಾಯಾಲಯದಲ್ಲಿ ಮಗಳ ವಿಚ್ಛೇದನ ಅಂತಿಮವಾದ ನಂತರ ಆಕೆಯನ್ನು ಡೋಲು, ನೃತ್ಯಗಳ ಮೆರವಣಿಗೆಯಲ್ಲಿ ಸಂಭ್ರಮದಿಂದ ತಂದೆ ಮನೆಗೆ ಕರೆತಂದ ಘಟನೆ ಮೀರನ್ ನಲ್ಲಿ ನಡೆದಿದೆ.  ಪೋಷಕರ ಬೆಂಬಲದ ಅಪರೂಪದ ಮತ್ತು ಹೃದಯಸ್ಪರ್ಶಿ ಪ್ರದರ್ಶನದಲ್ಲಿ,...

“ನೀನು ನಿಜವಾಗಿಯೂ ಅಂಬೇಡ್ಕರ್ ಮಗಳಾ ಎಂದು ತಿಳಿಯಲು ನಾವು ನಿನ್ನ ಡಿಎನ್‌ಎ ಟೆಸ್ಟ್ ಮಾಡುತ್ತೇವೆ” ದೆಹಲಿ ಸಭೆಯಲ್ಲಿ ದಲಿತ ಟ್ರಾನ್ಸ್ ಹೋರಾಟಗಾರ್ತಿ ಗ್ರೇಸ್ ಬಾನುಗೆ ಜಾತಿ ನಿಂದನೆ ಆರೋಪ

ಕೇಂದ್ರ ಸರ್ಕಾರದ ವಿವಾದಾತ್ಮಕ ಟ್ರಾನ್ಸ್‌ಜೆಂಡರ್ ವ್ಯಕ್ತಿಗಳ (ಹಕ್ಕುಗಳ ರಕ್ಷಣೆ) ತಿದ್ದುಪಡಿ ಕಾಯ್ದೆ, 2026ರ ವಿರುದ್ಧ ಕಳೆದ ಕೆಲ ವಾರಗಳಿಂದ ಇಡೀ ಟ್ರಾನ್ಸ್‌ಜೆಂಡರ್ ಮತ್ತು ಪ್ರಗತಿಪರ ಸಮುದಾಯ ಪ್ರತಿಭಟನೆ ನಡೆಸುತ್ತಿದೆ. ಈ ನಡುವೆ ಶುಕ್ರವಾರ...