Homeಕರ್ನಾಟಕಕಲ್ಲಡ್ಕ ಪ್ರಭಾಕರ್ ಭಟ್ ಪರ ವಕಾಲತ್ತು ವಹಿಸಿದ್ದ ವಕೀಲ ಕಾಂಗ್ರೆಸ್‌ನಿಂದ ಉಚ್ಚಾಟನೆ

ಕಲ್ಲಡ್ಕ ಪ್ರಭಾಕರ್ ಭಟ್ ಪರ ವಕಾಲತ್ತು ವಹಿಸಿದ್ದ ವಕೀಲ ಕಾಂಗ್ರೆಸ್‌ನಿಂದ ಉಚ್ಚಾಟನೆ

- Advertisement -
- Advertisement -

ಮುಸ್ಲಿಂ ಮಹಿಳೆಯರ ಪರ ಅವಹೇಳನಕಾರಿಯಾಗಿ ಮಾತನಾಡಿದ ಪ್ರಕರಣದ ಆರೋಪಿ, ಆರೆಸ್ಸೆಸ್ ಮುಖಂಡ ಕಲ್ಲಡ್ಕ ಪ್ರಭಾಕರ್ ಭಟ್ ಪರ ವಕಾಲತ್ತು ವಹಿಸಿರುವ ವಕೀಲ ಡಿ. ಚಂದ್ರೇಗೌಡ ಅವರನ್ನು ಶ್ರೀರಂಗಪಟ್ಟಣ ತಾಲೂಕು ಕಾಂಗ್ರೆಸ್ ಕಾನೂನು ಘಟಕದ ಅಧ್ಯಕ್ಷ ಸ್ಥಾನದಿಂದ ಉಚ್ಚಾಟನೆ ಮಾಡಲಾಗಿದೆ.

ಈ ಬಗ್ಗೆ ಮಂಡ್ಯ ಜಿಲ್ಲಾ ಕಾಂಗ್ರೆಸ್ ಘಟಕದ ಅಧ್ಯಕ್ಷ ಸಿ.ಡಿ ಗಂಗಾಧರ್ ಅವರು ನಾನುಗೌರಿ.ಕಾಂಗೆ ಖಚಿತಪಡಿಸಿದ್ದಾರೆ. ಕಲ್ಲಡ್ಕ ಪ್ರಭಾಕರ್ ಭಟ್ ಪರ ವಕಾಲತ್ತು ವಹಿಸಿದ ಕಾರಣಕ್ಕೆ ಉಚ್ಚಾಟನೆ ಮಾಡಿದ್ದೇವೆ ಎಂದು ತಿಳಿಸಿದ್ದಾರೆ.

ಮುಸ್ಲಿಂ ಮಹಿಳೆಯರ ವಿರುದ್ಧ ಅಕ್ಷೇಪಾರ್ಹ ಹೇಳಿಕೆ ನೀಡಿರುವ ಕಲ್ಲಡ್ಕ ಪ್ರಭಾಕರ್ ಭಟ್‌ಗೆ ಚಂದ್ರೇಗೌಡ ಜಾಮೀನು ಕೊಡಿಸಿದ್ದಾರೆ. ಇದು ಪಕ್ಷದ ಕಾನೂನು ಘಟಕದ ನಿಯಮಗಳಿಗೆ ವಿರುದ್ದವಾಗಿದೆ. ಈ ಕಾರಣಕ್ಕೆ ಅವರ ವಿರುದ್ದ ಕ್ರಮ ಕೈಗೊಳ್ಳಲಾಗಿದೆ ಎಂದು ಕೆಪಿಸಿಸಿ ಕಾನೂನು ಘಟಕದ ಮಂಡ್ಯ ಜಿಲ್ಲಾಧ್ಯಕ್ಷ ಎ.ಎಸ್‌ ಗೌರಿ ಶಂಕರ್ ಪತ್ರಿಕಾ ಹೇಳಿಕೆಯಲ್ಲಿ ತಿಳಿಸಿದ್ದಾರೆ.

ಪ್ರಕರಣದ ಹಿನ್ನೆಲೆ : ಡಿ.24ರಂದು ಶ್ರೀರಂಗಪಟ್ಟಣದಲ್ಲಿ ಹಿಂದೂ ಜಾಗರಣಾ ವೇದಿಕೆ ವತಿಯಿಂದ ಹನುಮ ಜಯಂತಿ ಆಂಗವಾಗಿ ಆಯೋಜಿಸಿದ್ದ ಹನುಮ ಸಂಕೀರ್ತನಾ ಯಾತ್ರೆಯಲ್ಲಿ ಮಾತನಾಡಿದ್ದ ಕಲ್ಲಡ್ಕ ಪ್ರಭಾಕರ್ ಭಟ್, “ಮುಸ್ಲಿಂ ಮಹಿಳೆಯರಿಗೆ ದಿನಕ್ಕೊಬ್ಬರು ಗಂಡಂದಿರು, ಅವರಿಗೆ ಪರ್ಮೆನೆಂಟ್ ಗಂಡ ಇರಲಿಲ್ಲ. ಪರ್ಮೆನೆಂಟ್ ಗಂಡನನ್ನು ಕೊಟ್ಟಿದ್ದು ಮೋದಿ ಸರ್ಕಾರ. ಮುಸ್ಲಿಂ ಯುವಕರು ಮಾತ್ರ ಅಲ್ಲ, ಮುಸ್ಲಿಂ ಯುವತಿಯರು ಮೋಸ ಮಾಡುತ್ತಿದ್ದಾರೆ. ಹಿಂದೂ ಯುವಕ ಯುವತಿಯರನ್ನು ಲವ್ ಜಿಹಾದ್ ಮಾಡುತ್ತಿದ್ದಾರೆ. ನಿಮ್ಮಲ್ಲಿ ಯುವತಿ ಯುವಕರು ಇಲ್ಲವೇ?” ಎಂದು ಹೇಳಿಕೆ ನೀಡಿದ್ದರು.

ಇದರ ವಿರುದ್ದ ಸಾಮಾಜಿಕ ಹೋರಾಟಗಾರ್ತಿ ನಜ್ಮಾ ನಝೀರ್ ಚಿಕ್ಕನೇರಳೆ ಮಂಡ್ಯ ಪೊಲೀಸ್ ಠಾಣೆಗೆ ದೂರು ನೀಡಿದ್ದರು. ಪೊಲೀಸರು ಕಲ್ಲಡ್ಕ ಭಟ್ ವಿರುದ್ದ ಐಪಿಸಿ ಸೆಕ್ಷನ್ 294, 354, 509, 506ರಡಿಯಲ್ಲಿ ಪ್ರಕರಣ ದಾಖಲಿಸಿದ್ದರು. ಪ್ರಸ್ತುತ ಪ್ರಕರಣದ ವಿಚಾರಣೆ ಶ್ರೀರಂಗಪಟ್ಟಣದ 3ನೇ ಅಪರ ಜಿಲ್ಲಾ ಮತ್ತು ಸೆಶನ್ಸ್ ನ್ಯಾಯಾಲಯದಲ್ಲಿ ನಡೆಯುತ್ತಿದೆ.

ಸ್ಥಳೀಯರಿಬ್ಬರ ಶ್ಯೂರಿಟಿ, 2 ಲಕ್ಷ ರೂ. ಮೌಲ್ಯದ ಬಾಂಡ್ ಆಧಾರದ ಮೇಲೆ ಜನವರಿ 17ರಂದು ನ್ಯಾಯಾಲಯ ಕಲ್ಲಡ್ಕ ಭಟ್‌ಗೆ ನಿರೀಕ್ಷಣಾ ಜಾಮೀನು ಮಂಜೂರು ಮಾಡಿದೆ.‌ ಪ್ರಕರಣಕ್ಕೆ ಸಂಬಂಧಿಸಿದಂತೆ ದೂರುದಾರರ ಪರವಾಗಿ ಹಿರಿಯ ವಕೀಲರಾದ ಎಸ್ ಬಾಲನ್ ವಾದ ಮಂಡಿಸಿದ್ದರು. ಜನವರಿ 10ರಂದು ಈ ಕುರಿತು ವಿಚಾರಣೆ ನಡೆಸಿದ್ದ ನ್ಯಾಯಾಲಯ, ಆದೇಶವನ್ನು ಜ.17ಕ್ಕೆ ಕಾಯ್ದಿರಿಸಿತ್ತು.

ಇದನ್ನೂ ಓದಿ: ರಾಜ್ಯದಲ್ಲಿರುವುದು ಕಾಂಗ್ರೆಸ್ ಸರ್ಕಾರವೋ, ಆರ್‌ಎಸ್‌ಎಸ್‌ ಸರ್ಕಾರವೋ ಗೊತ್ತಾಗುತ್ತಿಲ್ಲ: ಬಿ.ಕೆ. ಹರಿಪ್ರಸಾದ್

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಕೇಂದ್ರದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ‘ರೋಹಿತ್ ವೇಮುಲಾ ಕಾಯ್ದೆ’ ಜಾರಿ: ಕೆ.ಸಿ ವೇಣುಗೋಪಾಲ್

0
ಕೇಂದ್ರದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಶಿಕ್ಷಣ ಸಂಸ್ಥೆಗಳಲ್ಲಿನ ಜಾತಿ ಮತ್ತು ಕೋಮು ದೌರ್ಜನ್ಯ ತಡೆಯಲು 'ರೋಹಿತ್ ವೇಮುಲಾ ಕಾಯ್ದೆ ಜಾರಿಗೊಳಿಸಲಾಗುವುದು ಎಂದು ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ ವೇಣುಗೋಪಾಲ್ ಭರವಸೆ ನೀಡಿದ್ದಾರೆ. ಸಾಮಾಜಿಕ ಮತ್ತು...