Homeಮುಖಪುಟನೂತನ ಕ್ರಿಮಿನಲ್ ಕಾನೂನುಗಳನ್ನು ಪ್ರಶ್ನಿಸಿ ಸುಪ್ರೀಂಕೋರ್ಟ್‌ನಲ್ಲಿ ಸಾರ್ವಜನಿಕ ಹಿತಾಶಕ್ತಿ ಅರ್ಜಿ ಸಲ್ಲಿಕೆ

ನೂತನ ಕ್ರಿಮಿನಲ್ ಕಾನೂನುಗಳನ್ನು ಪ್ರಶ್ನಿಸಿ ಸುಪ್ರೀಂಕೋರ್ಟ್‌ನಲ್ಲಿ ಸಾರ್ವಜನಿಕ ಹಿತಾಶಕ್ತಿ ಅರ್ಜಿ ಸಲ್ಲಿಕೆ

- Advertisement -
- Advertisement -

ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಇತ್ತೀಚೆಗೆ ಅಂಕಿತ ಹಾಕಿದ್ದ ನೂತನ 3 ಕ್ರಿಮಿನಲ್ ಕಾನೂನುಗಳನ್ನು ಪ್ರಶ್ನಿಸಿ ಸುಪ್ರೀಂಕೋರ್ಟ್‌ನಲ್ಲಿ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಸಲ್ಲಿಸಲಾಗಿದ್ದು, ತಜ್ಞರ ಸಮಿತಿಯನ್ನು ತಕ್ಷಣ ರಚನೆ ಮಾಡಿ ಕಾನೂನಿನ ಕುರಿತು ಪರಿಶೀಲನೆಗೆ ನಿರ್ದೇಶಿಸುವಂತೆ ಆಗ್ರಹಿಸಲಾಗಿದೆ.

ಭಾರತೀಯ ನ್ಯಾಯ (ಎರಡನೇ) ಸಂಹಿತಾ, ಭಾರತೀಯ ನಾಗರಿಕ ಸುರಕ್ಷಾ (ಎರಡನೇ) ಸಂಹಿತಾ ಮತ್ತು ಭಾರತೀಯ ಸಾಕ್ಷಿ (ಎರಡನೇ) ಮಸೂದೆಗೆ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಡಿ.25 ರಂದು ಅಂಕಿತವನ್ನು ಹಾಕಿದ್ದಾರೆ.

ವಕೀಲ ವಿಶಾಲ್ ತಿವಾರಿ ಅವರು ಈ ಕುರಿತು ಸುಪ್ರೀಂಕೋರ್ಟ್‌ನಲ್ಲಿ ಸಾರ್ವಜನಿಕ ಹಿತಾಶಕ್ತಿ ಅರ್ಜಿಯನ್ನು ಸಲ್ಲಿಸಿದ್ದು,  3 ಹೊಸ ಕ್ರಿಮಿನಲ್ ಕಾನೂನುಗಳ ಅನುಷ್ಠಾನಕ್ಕೆ ತಡೆ ಮತ್ತು ಸುಪ್ರೀಂಕೋರ್ಟ್‌ನ ಮಾಜಿ ನ್ಯಾಯಾಧೀಶರ ಅಧ್ಯಕ್ಷತೆಯಲ್ಲಿ ತಜ್ಞರ ಸಮಿತಿಯನ್ನು ತಕ್ಷಣ  ರಚನೆ ಮಾಡಿ ಕಾನೂನಿನ ಕುರಿತು ಪರಿಶೀಲನೆಗೆ ನಿರ್ದೇಶಿಸುವಂತೆ ಆಗ್ರಹಿಸಿದ್ದಾರೆ.

ಹೆಚ್ಚಿನ ಸಂಸದರು ಅಮಾನತಿನಲ್ಲಿದ್ದಾಗ ಸಂಸತ್ತಿನಲ್ಲಿ ಸರಿಯಾದ ಚರ್ಚೆಯಿಲ್ಲದೆ ಈ ಮಸೂದೆಗಳನ್ನು ಅಂಗೀಕರಿಸಲಾಗಿದೆ. ಡಿ.20 ರಂದು ಲೋಕಸಭೆಯಲ್ಲಿ ನೂತನ ಕ್ರಿಮಿನಲ್‌ ಮಸೂದೆಗಳನ್ನು ಅಂಗೀಕರಿಸಿದಾಗ 141 ಪ್ರತಿಪಕ್ಷ ಸಂಸದರು (ಎರಡೂ ಸದನಗಳಿಂದ) ಅಮಾನತುಗೊಂಡಿದ್ದರು. 2021ರಲ್ಲಿ ಭಾರತದ ಮಾಜಿ ಮುಖ್ಯ ನ್ಯಾಯಮೂರ್ತಿ ಎನ್‌ವಿ ರಮಣ ಅವರು ಸಂಸತ್ತಿನಲ್ಲಿ ಸರಿಯಾದ ಚರ್ಚೆಗಳಿಲ್ಲದೆ ಮಸೂದೆಗಳ ಅಂಗೀಕಾರದ ಬಗ್ಗೆ ಕಳವಳವನ್ನು ವ್ಯಕ್ತಪಡಿಸಿದ್ದರು ಎಂದು ತಿವಾರಿ ಅವರು ತಮ್ಮ ಅರ್ಜಿಯಲ್ಲಿ ಉಲ್ಲೇಖಿಸಿದ್ದಾರೆ.

ಸಂಸತ್ತಿನಲ್ಲಿ ಚರ್ಚೆಯು ಪ್ರಜಾಸತ್ತಾತ್ಮಕ ಕಾನೂನು ರಚನೆಯ ಮೂಲಭೂತ ಭಾಗವಾಗಿದೆ. ಚರ್ಚೆಗಳ ಮೂಲಕ ಮಸೂದೆಗೆ ಅಗತ್ಯವಾದ ತಿದ್ದುಪಡಿಗಳನ್ನು ಮಾಡಲು ಸಹಾಯ ಮಾಡುತ್ತದೆ. ಈ ಮೂಲಕ ಮಸೂದೆಯು ಪರಿಪೂರ್ಣವಾಗುತ್ತದೆ. ಹೊಸ ಕ್ರಿಮಿನಲ್ ಕಾನೂನುಗಳ ಮೂಲಕ ತಂದ ಬದಲಾವಣೆಗಳು ಕಠೋರವಾಗಿವೆ ಮತ್ತು ವಾಸ್ತವದಲ್ಲಿ ಪೊಲೀಸ್ ರಾಜ್ಯವನ್ನು ಸ್ಥಾಪಿಸಲು ಪ್ರಯತ್ನಿಸುತ್ತಿವೆ ಎಂದು ಅದು ಹೇಳುತ್ತದೆ. ಜೊತೆಗೆ ಅವು ಭಾರತದ ಜನರ ಮೂಲಭೂತ ಹಕ್ಕುಗಳನ್ನು ಉಲ್ಲಂಘಿಸುತ್ತದೆ ಎಂದು ಅವರು ಅರ್ಜಿಯಲ್ಲಿ ಉಲ್ಲೇಖಿಸಿದ್ದಾರೆ.

ಬ್ರಿಟೀಷ್ ಕಾನೂನುಗಳನ್ನು ವಸಾಹತುಶಾಹಿ ಯುಗದ ಕಠೋರ ಕಾನೂನೆಂದು ಪರಿಗಣಿಸಿದ್ದರೆ, ಬ್ರಿಟಿಷರ ಅವಧಿಯಲ್ಲಿ ನೀವು ಒಬ್ಬ ವ್ಯಕ್ತಿಯನ್ನು ಗರಿಷ್ಠ 15 ದಿನಗಳವರೆಗೆ ಪೊಲೀಸ್ ಕಸ್ಟಡಿಯಲ್ಲಿ ಇರಿಸಬಹುದು. ಇದೀಗ 15 ದಿನಗಳಿಂದ 90 ದಿನಗಳವರೆಗೆ ಮತ್ತು ಅದಕ್ಕಿಂತ ಹೆಚ್ಚಿನ ಅವಧಿಗೆ ವಿಸ್ತರಿಸುವುದು. ಆಘಾತಕಾರಿ ನಿಬಂಧನೆಯು ಪೊಲೀಸ್ ಚಿತ್ರಹಿಂಸೆಗೆ ದಾರಿಯಾಗುತ್ತದೆ ಎಂದು ಮನವಿಯಲ್ಲಿ ಹೇಳಲಾಗಿದೆ.

3 ಕ್ರಿಮಿನಲ್ ಕಾನೂನುಗಳಿಗೆ ಸಂಬಂಧಿಸಿ ಈ ಹಿಂದೆ ವಿರೋಧ ಪಕ್ಷದ ನಾಯಕರಾದ ಅಧೀರ್ ರಂಜನ್ ಚೌಧರಿ ಮತ್ತು ಹಿರಿಯ ವಕೀಲ ಕಪಿಲ್ ಸಿಬಲ್ ಅವರು ಮಾತನಾಡಿ ಮಾನವ ಹಕ್ಕುಗಳ ಸಂಭಾವ್ಯ ಉಲ್ಲಂಘನೆ ಬಗ್ಗೆ ಕಳವಳ ವ್ಯಕ್ತಪಡಿಸಿದ್ದರು.

ಏನಿದು ಮಸೂದೆ?

ಈ ಬಾರಿಯ ಚಳಿಗಾದ ಅಧಿವೇಶನದಲ್ಲಿ ಲೋಕಸಭೆಯಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಭಾರತೀಯ ನ್ಯಾಯ (ಎರಡನೇ) ಸಂಹಿತಾ, ಭಾರತೀಯ ನಾಗರಿಕ ಸುರಕ್ಷಾ (ಎರಡನೇ) ಸಂಹಿತಾ ಮತ್ತು ಭಾರತೀಯ ಸಾಕ್ಷಿ (ಎರಡನೇ) ಮಸೂದೆಯನ್ನು ಮಂಡಿಸಿದ್ದರು. ಈ ಮಸೂದೆಗಳು ಕ್ರಮವಾಗಿ ಭಾರತೀಯ ದಂಡ ಸಂಹಿತೆ-1860, ಕ್ರಿಮಿನಲ್ ಪ್ರೊಸೀಜರ್ ಆಕ್ಟ್-1898 ಮತ್ತು 1872ರ ಭಾರತೀಯ ಸಾಕ್ಷ್ಯ ಕಾಯಿದೆಗೆ ಬದಲಾವಣೆಗಳನ್ನು ಸೂಚಿಸುತ್ತದೆ. ಈ ಮಸೂದೆ ಡಿ.21ರಂದು ರಾಜ್ಯಸಭೆಯಲ್ಲಿ ಅಂಗೀಕಾರವಾಗಿದ್ದವು.

ಇದು ಪೊಲೀಸ್ ಬಲವನ್ನು ಮಿತಿಮೀರಿದ ಬಳಕೆಗೆ ಕಾರಣವಾಗಬಹುದು ಮತ್ತು ಮಾನವ ಹಕ್ಕುಗಳಿಗೆ ಅಪಾಯವನ್ನುಂಟುಮಾಡುತ್ತದೆ ಎಂಬ ಕಳವಳದ ನಡುವೆ ಮಸೂದೆಗಳನ್ನು ಅಂಗೀಕರಿಸಲಾಗಿದೆ. ಗೃಹ ಸಚಿವ ಅಮಿತ್ ಶಾ ಅವರು ಸಂಸತ್ತಿನಲ್ಲಿ ಮಸೂದೆಗಳ ಬಗ್ಗೆ ಚರ್ಚಿಸುವಾಗ, ಪ್ರಸ್ತಾವಿತ ಕಾನೂನುಗಳನ್ನು ಸಮಗ್ರ ಸಮಾಲೋಚನೆಯ ನಂತರ ರಚಿಸಲಾಗಿದೆ ಮತ್ತು ಸದನದ ಅನುಮೋದನೆಗೆ ತರುವ ಮೊದಲು ಕರಡು ಶಾಸನಗಳ ಕೂಲಂಕುಷವಾಗಿ ಪರಿಶೀಲಿಸಲಾಗಿದೆ ಎಂದು ಹೇಳಿದ್ದರು. ಅಸ್ತಿತ್ವದಲ್ಲಿರುವ ಕ್ರಿಮಿನಲ್ ಕಾನೂನುಗಳು ವಸಾಹತುಶಾಹಿ ಮನಸ್ಥಿತಿಯನ್ನು ಪ್ರತಿಬಿಂಬಿಸುತ್ತವೆ ಮತ್ತು ಶಿಕ್ಷಿಸುವ ಉದ್ದೇಶವನ್ನು ಹೊಂದಿದೆ ನ್ಯಾಯವನ್ನು ನೀಡುವ ಉದ್ದೇಶ ಹೊಂದಿರಲಿಲ್ಲ ಎಂದು ಹೇಳಿದ್ದರು.

ಭಾರತೀಯ ನ್ಯಾಯ (ಎರಡನೇ) ಸಂಹಿತಾ ಪ್ರಸ್ತುತ 358 ವಿಭಾಗಗಳನ್ನು ಹೊಂದಿದೆ. ಭಾರತೀಯ ನಾಗರಿಕಾ ಸುರಕ್ಷಾ (ಎರಡನೇ) ಸಂಹಿತಾ 531 ವಿಭಾಗಗಳನ್ನು ಹೊಂದಿದೆ ಮತ್ತು ಭಾರತೀಯ ಸಾಕ್ಷಿ (ಎರಡನೇ) ಸಂಹಿತಾ 170 ವಿಭಾಗಗಳನ್ನು ಹೊಂದಿದೆ. ಮಸೂದೆಗಳನ್ನು ಮೊದಲು ಆ.11ರಂದು ಸಂಸತ್ತಿನಲ್ಲಿ ಪರಿಚಯಿಸಲಾಯಿತು. ನಂತರ ಗೃಹ ವ್ಯವಹಾರಗಳ ಸಂಸದೀಯ ಸ್ಥಾಯಿ ಸಮಿತಿಯು ಈ ಬಗ್ಗೆ ಹೆಚ್ಚಿನ ಶಿಫಾರಸುಗಳನ್ನು ಮಾಡಿದ ನಂತರ ಸರ್ಕಾರವು ಮಸೂದೆಯನ್ನು ಹಿಂಪಡೆದಿತ್ತು.

ಭಾರತೀಯ ನ್ಯಾಯ ಸಂಹಿತಾ (BNS2) ಅಡಿಯಲ್ಲಿ ದೇಶದ್ರೋಹವನ್ನು ‘ರಾಜ್ಯದ್ರೋಹದ’ (ಸರ್ಕಾರದ ವಿರುದ್ಧ) ಬದಲಾಗಿ ‘ದೇಶದ್ರೋಹ’ (ರಾಷ್ಟ್ರದ ವಿರುದ್ಧ) ಎಂದು ಬದಲಾಯಿಸಲಾಗಿದೆ. ಇದಲ್ಲದೆ, ‘ಸಂಘಟಿತ ಅಪರಾಧ’ವನ್ನು ಅಪರಾಧ ಎಂದು ಸೇರಿಸಲಾಗಿದೆ. ಐದು ಅಥವಾ ಹೆಚ್ಚು ಜನರ ಗುಂಪು ಒಬ್ಬ ವ್ಯಕ್ತಿಯ ಜನಾಂಗ, ಜಾತಿ, ಲಿಂಗ, ಭಾಷೆ ಅಥವಾ ವೈಯಕ್ತಿಕ ನಂಬಿಕೆಯ ಆಧಾರಗಳ ಮೇಲೆ ಕೊಲೆ ಅಥವಾ ಗಂಭೀರ ಗಾಯ ಮಾಡಿದರೆ ಅದು ಗುಂಪು ಹತ್ಯೆಯಾಗಲಿದೆ. ಇಂತಹ ಅಪರಾಧಗಳಿಗೆ ಮರಣ ದಂಡನೆ ಶಿಕ್ಷೆ ವಿಧಿಸಲು ನೂತನ ಕಾನೂನಿನಲ್ಲಿ ಅವಕಾಶವಿದೆ.

ಇದನ್ನು ಓದಿ: ಬಿಜೆಪಿ ನಾಯಕನ ವಿರುದ್ಧ ಕಾನೂನು ಹೋರಾಟ ನಡೆಸುತ್ತಿದ್ದ ದಲಿತ ರೈತರಿಗೆ ‘ED’ಯಿಂದ ಸಮನ್ಸ್‌!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

SIR: ನೋಟಿಸ್ ನೀಡಿದರೆ ಸಾಲದು, ಹೊರಗಿಟ್ಟ ಮತದಾರರ ಲೆಕ್ಕ ಕೊಡಿ ಚುನಾವಣಾ ಆಯೋಗಕ್ಕೆ ಜಾಗೃತ ಕರ್ನಾಟಕ ಒತ್ತಾಯ

ರಾಜ್ಯದಲ್ಲಿ ಪ್ರಸ್ತುತ ನಡೆಯುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯ ಭಾಗವಾಗಿ ಲಕ್ಷಾಂತರ ಮತದಾರರಿಗೆ ನೋಟಿಸ್ ಜಾರಿ ಮಾಡಿ ವಿಚಾರಣೆಗಳನ್ನು ನಡೆಸಿದ ನಂತರ, ಅಂತಿಮವಾಗಿ ಎಷ್ಟು ಜನರ ಹೆಸರುಗಳನ್ನು ಮತದಾರರ ಪಟ್ಟಿಯಿಂದ ಕೈಬಿಡಲಾಗಿದೆ...

ಗಣೇಶ ಮೆರವಣಿಗೆ ಡಿಜೆ ವಿಚಾರಕ್ಕೆ ಗಲಾಟೆ : ದಲಿತರ ಮೇಲೆ ಹಲ್ಲೆ, ಜಾತಿ ನಿಂದನೆ; 31 ಜನರ ಮೇಲೆ ಎಫ್‌ಐಆರ್

ಗಣೇಶ ಮೆರವಣಿಗೆಯ ಡಿಜೆ ವಿಚಾರಕ್ಕೆ ನಡೆದ ಗಲಾಟೆಯಲ್ಲಿ ದಲಿತರ ಮೇಲೆ ಹಲ್ಲೆ ನಡೆಸಿ, ಜಾತಿ ನಿಂದನೆ ಮಾಡಿದ ಆರೋಪದ ಮೇಲೆ 31 ಜನರ ವಿರುದ್ಧ ಕೊಪ್ಪಳದ ಮುನಿರಾಬಾದ್ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ....

ಚಿಕ್ಕಬಳ್ಳಾಪುರ: ಮೂಲ ಗಣಿತ, ಕನ್ನಡ ಬಾರದ 7ನೇ ತರಗತಿ ವಿದ್ಯಾರ್ಥಿಗಳು: 180 ಶಿಕ್ಷಕರಿಗೆ ನೋಟಿಸ್‌ ಜಾರಿ

ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ 7ನೇ ತರಗತಿಯ ಕೆಲವು ವಿದ್ಯಾರ್ಥಿಗಳಿಗೆ ಮೂಲ ಗಣಿತದ ಲೆಕ್ಕಗಳನ್ನು ಮಾಡಲು ಮತ್ತು ಕನ್ನಡ ಅಕ್ಷರಗಳನ್ನು ಬರೆಯಲು ಬರುವುದಿಲ್ಲ ಎಂಬುದು ತಿಳಿದುಬಂದ ಹಿನ್ನೆಲೆಯಲ್ಲಿ ಶಿಕ್ಷಣ ಇಲಾಖೆಯು 180 ಸರ್ಕಾರಿ ಶಾಲೆಗಳ ಶಿಕ್ಷಕರಿಗೆ...

ಕರಾವಳಿಯನ್ನು ‘ಕೋಮುವಾದದ ಪ್ರಯೋಗಶಾಲೆ’ ಮಾಡಿದ್ದ ಬಿಜೆಪಿಗೆ ನಮ್ಮ ಅಭಿವೃದ್ಧಿ ಕಂಡು ಅಸ್ತಿತ್ವದ ಭಯ: ಪ್ರಿಯಾಂಕ್ ಖರ್ಗೆ

ಮಂಗಳೂರಿನಲ್ಲಿ ನಡೆದ ವಿಶೇಷ ಸಚಿವ ಸಂಪುಟ ಸಭೆ ಹಾಗೂ ಕರಾವಳಿಯ ಮೂರು ಜಿಲ್ಲೆಗಳಿಗೆ ₹32,611 ಕೋಟಿ ಮೊತ್ತದ ಅಭಿವೃದ್ಧಿ ಯೋಜನೆಗಳಿಗೆ ಅನುಮೋದನೆ ನೀಡಿರುವುದನ್ನು ಬಿಜೆಪಿ ಟೀಕಿಸಿರುವ ಬೆನ್ನಲ್ಲೇ, ಗೃಹ ಸಚಿವ ಪ್ರಿಯಾಂಕ್ ಖರ್ಗೆ...

KPSC ಅಕ್ರಮ: ಮೀಟರ್ ಬಡ್ಡಿ ದಂಧೆಯಿಂದ ಕೆಪಿಎಸ್‌ಸಿ ಅಧ್ಯಕ್ಷ ಸ್ಥಾನದವರೆಗೆ – ಅಧ್ಯಕ್ಷ ಸಾಹುಕಾರ್ ಬಿಜೆಪಿ ಅವಧಿಯಲ್ಲಿ ನೇಮಕ, ಕಾಂಗ್ರೆಸ್ ಆಡಳಿತದಲ್ಲಿ ರಕ್ಷಣೆ

ಶಿವಶಂಕರಪ್ಪ ಸಾಹುಕಾರ್ ಅವರ ಈ ಇಡೀ ಕಥನವು ಕರ್ನಾಟಕದ ಕಾರ್ಯಾಂಗ ಮತ್ತು ರಾಜಕೀಯ ವ್ಯವಸ್ಥೆಯಲ್ಲಿ ಭ್ರಷ್ಟಾಚಾರ ಎಷ್ಟು ಆಳವಾಗಿ ಬೇರೂರಿದೆ ಎಂಬುದಕ್ಕೆ ಸಾಕ್ಷಿಯಾಗಿದೆ. ಬಿಜೆಪಿ ಸರ್ಕಾರವು ನಿಯಮಗಳನ್ನು ಗಾಳಿಗೆ ತೂರಿ, ಒಬ್ಬ ಕನಿಷ್ಠ...

ಟಿಎಂಸಿ ಪಕ್ಷದ ಹೆಸರು, ಚಿಹ್ನೆ ಫ್ರೀಝ್ : ಚು. ಆಯೋಗದ ಆದೇಶ ಪ್ರಶ್ನಿಸಿ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ ಮಮತಾ ಬ್ಯಾನರ್ಜಿ

ತೃಣಮೂಲಕ ಕಾಂಗ್ರೆಸ್ (ಟಿಎಂಸಿ) ಪಕ್ಷದ ಚಿಹ್ನೆ ಮತ್ತು ಹೆಸರನ್ನು ಭಾರತೀಯ ಚುನಾವಣಾ ಆಯೋಗ ಫ್ರೀಝ್ ಮಾಡಿರುವುದನ್ನು ಪ್ರಶ್ನಿಸಿ, ಪಕ್ಷದ ಸಂಸ್ಥಾಪಕಿ ಹಾಗೂ ಪಶ್ಚಿಮ ಬಂಗಾಳದ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಸುಪ್ರೀಂ ಕೋರ್ಟ್‌...

ನಂದಿಗ್ರಾಮದ ಬೆನ್ನಲ್ಲೇ ರೆಜಿನಗರ ಅಭ್ಯರ್ಥಿಯಿಂದಲೂ ನಾಮಪತ್ರ ವಾಪಸ್ : ಬಂಗಾಳ ಉಪ ಚುನಾವಣೆ ಕಣದಲ್ಲಿ ಮಮತಾ ಬ್ಯಾನರ್ಜಿ ಬಣಕ್ಕೆ ಮತ್ತೊಂದು ಹಿನ್ನಡೆ

ಪಶ್ಚಿಮ ಬಂಗಾಳದ ಉಪಚುನಾವಣಾ ಕಣದಲ್ಲಿ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರಿಗೆ ಮತ್ತೊಂದು ಹಿನ್ನಡೆಯಾಗಿದೆ. ನಂದಿಗ್ರಾಮದ ಬಳಿಕ ರೆಜಿನಗರ ವಿಧಾನಸಭಾ ಕ್ಷೇತ್ರದಲ್ಲೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಅಭ್ಯರ್ಥಿ ತನ್ನ ನಾಮಪತ್ರವನ್ನು ವಾಪಸ್ ಪಡೆದಿದ್ದಾರೆ...

ಅಮಾನವೀಯ ಕೃತ್ಯ : ಮಹಿಳೆಗೆ ಥಳಿಸಿ, ಕೂದಲು ಹಿಡಿದು ಎಳೆದೊಯ್ದ ಪೊಲೀಸ್ ಸಿಬ್ಬಂದಿ

ತೆಲಂಗಾಣದ ಹಫೀಝ್‌ಪೇಟ್ ರೈಲ್ವೆ ನಿಲ್ದಾಣದಲ್ಲಿ ಪೊಲೀಸ್ ಸಿಬ್ಬಂದಿಯೊಬ್ಬರು ಮಹಿಳೆಗೆ ಥಳಿಸಿ, ಆಕೆಯ ತಲೆಕೂದಲು ಹಿಡಿದು ಎಳೆದೊಯ್ದಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ತೀವ್ರ ಆಕ್ರೋಶ ವ್ಯಕ್ತವಾಗಿದೆ. ಶುಕ್ರವಾರ (ಸೆ.18) ರಾತ್ರಿ ರೈಲ್ವೆ...

ರಾಮಮಂದಿರ ದೇಣಿಗೆ ಕಳವು ಪ್ರಕರಣ: ಆರೋಪಿಗಳ ನ್ಯಾಯಾಂಗ ಬಂಧನ ಅವಧಿ ವಿಸ್ತರಣೆ

ರಾಮಮಂದಿರದಲ್ಲಿ ದೇಣಿಗೆ ಹಣ ಕಳವು ಮಾಡಿದ ಆರೋಪದ ಮೇಲೆ ಬಂಧಿಸಲಾಗಿರುವ ಎಲ್ಲಾ ಎಂಟು ಆರೋಪಿಗಳ ನ್ಯಾಯಾಂಗ ಬಂಧನವನ್ನು ಸೆಪ್ಟೆಂಬರ್ 21ರವರೆಗೆ ವಿಸ್ತರಿಸಲಾಗಿದೆ ಎಂದು ಅವರ ವಕೀಲರು (ಸೆ.18) ತಿಳಿಸಿದ್ದಾರೆ. ಅಯೋಧ್ಯೆಯ ಭ್ರಷ್ಟಾಚಾರ ನಿಗ್ರಹ ನ್ಯಾಯಾಲಯದ...

ಬಂಗಾಳದಲ್ಲಿ ಬಿಜೆಪಿ ದ್ವೇಷ ರಾಜಕಾರಣ: ಮಾಮತಾ ಬ್ಯಾನರ್ಜಿ ಬೆಂಬಲ ಘೋಷಿಸಿದ ಬೆನ್ನಲ್ಲೇ ನಂದಿಗ್ರಾಮ ಕಾಂಗ್ರೆಸ್ ಅಭ್ಯರ್ಥಿ ಬಂಧನ

ಪಶ್ಚಿಮ ಬಂಗಾಳದ ಪೂರ್ವ ಮೇದಿನಿಪುರ ಜಿಲ್ಲೆಯ ನಂದಿಗ್ರಾಮ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯ ಕಾಂಗ್ರೆಸ್ ಅಭ್ಯರ್ಥಿ ಮಿಲನ್ ಪ್ರಧಾನ್ ಅವರನ್ನು ಹಳೆಯ ಪ್ರಕರಣವೊಂದರಲ್ಲಿ ಶುಕ್ರವಾರ (ಸೆ.18) ಬಂಧಿಸಲಾಗಿದೆ ಎಂದು ಪೂರ್ವ ಮೇದಿನಿಪುರ ಜಿಲ್ಲಾ ಪೊಲೀಸ್...