Homeಮುಖಪುಟವಕೀಲೆ ಜೀವಾ ಆತ್ಮಹತ್ಯೆ ಪ್ರಕರಣ : ತನಿಖೆಗೆ ಎಸ್‌ಐಟಿ ರಚಿಸಿದ ಹೈಕೋರ್ಟ್‌

ವಕೀಲೆ ಜೀವಾ ಆತ್ಮಹತ್ಯೆ ಪ್ರಕರಣ : ತನಿಖೆಗೆ ಎಸ್‌ಐಟಿ ರಚಿಸಿದ ಹೈಕೋರ್ಟ್‌

- Advertisement -
- Advertisement -

ಭೋವಿ ಅಭಿವೃದ್ಧಿ ನಿಗಮದಲ್ಲಿ ನಡೆದಿದೆ ಎನ್ನಲಾದ ಬಹುಕೋಟಿ ಹಗರಣದ ತನಿಖೆ ನೆಪದಲ್ಲಿ ಸಿಐಡಿ ಪೊಲೀಸರು ನೀಡಿದ ಕಿರುಕುಳದಿಂದ ಮನನೊಂದು ವಕೀಲೆ ಎಸ್‌. ಜೀವಾ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾದ ಪ್ರಕರಣದ ತನಿಖೆ ನಡೆಸಲು ಹೈಕೋರ್ಟ್‌ ಎಸ್‌ಐಟಿ ರಚಿಸಿದೆ.

ಬುಧವಾರ (ಡಿ.4) ಮೂವರು ಐಪಿಎಸ್‌ ಅಧಿಕಾರಿಗಳನ್ನು ಒಳಗೊಂಡ ವಿಶೇಷ ತನಿಖಾ ತಂಡವನ್ನು (ಎಸ್‌ಐಟಿ) ರಚಿಸಿರುವ ಹೈಕೋರ್ಟ್ ಮೂರು ತಿಂಗಳಲ್ಲಿ ವರದಿ ಸಲ್ಲಿಸುವಂತೆ ಸೂಚಿಸಿದೆ.

ಜೀವಾ ಆತ್ಮಹತ್ಯೆ ಪ್ರಕರಣವನ್ನು ಸಿಬಿಐ ತನಿಖೆಗೆ ವಹಿಸಬೇಕು ಎಂದು ಕೋರಿ ಬೆಂಗಳೂರು ವಕೀಲರ ಸಂಘ ಸಲ್ಲಿಸಿದ್ದ ಮಧ್ಯಂತರ ಅರ್ಜಿ ಹಾಗೂ ತನ್ನ ವಿರುದ್ಧ ಬನಶಂಕರಿ ಠಾಣೆಯಲ್ಲಿ ದಾಖಲಾಗಿರುವ ಎಫ್‌ಐಆರ್‌ ರದ್ದುಪಡಿಸುವಂತೆ ಕೋರಿ ಜೀವಾ ಆತ್ಮಹತ್ಯೆಗೆ ಪ್ರಚೋದನೆ ನೀಡಿದ ಆರೋಪ ಎದುರಿಸುತ್ತಿರುವ ಡಿವೈಎಸ್‌ಪಿ ಬಿ ಎಂ ಕನಕಲಕ್ಷ್ಮಿ ಸಲ್ಲಿಸಿದ್ದ ಅರ್ಜಿಯನ್ನು ನ್ಯಾಯಮೂರ್ತಿ ಎಂ ನಾಗಪ್ರಸನ್ನ ಅವರ ಏಕಸದಸ್ಯ ಪೀಠ ವಜಾಗೊಳಿಸಿದೆ.

“ವಕೀಲೆ ಜೀವಾ ಆತ್ಮಹತ್ಯೆ ಪ್ರಕರಣದ ತನಿಖೆಯನ್ನು ಬೆಂಗಳೂರು ಸಿಬಿಐನ ಪೊಲೀಸ್‌ ವರಿಷ್ಠಾಧಿಕಾರಿ ವಿನಾಯಕ್‌ ವರ್ಮಾ ನೇತೃತ್ವದ ಮೂರು ಅಧಿಕಾರಿಗಳ ವಿಶೇಷ ತನಿಖಾ ತಂಡ ನಡೆಸಲಿದೆ. ಕರ್ನಾಟಕ ಹೋಮ್‌ ಗಾರ್ಡ್‌ನ ಪೊಲೀಸ್‌ ವರಿಷ್ಠಾಧಿಕಾರಿಯಾಗಿರುವ ಅಕ್ಷಯ್‌ ಮಚೀಂದ್ರ ಹಾಕೆ, ಆಂತರಿಕ ಭದ್ರತಾ ವಿಭಾಗದ ಪೊಲೀಸ್‌ ವರಿಷ್ಠಾಧಿಕಾರಿ ನಿಶಾ ಜೇಮ್ಸ್‌ ಅವರು ಎಸ್‌ಐಟಿಯ ಸದಸ್ಯರಾಗಿರಲಿದ್ದಾರೆ” ಎಂದು ನ್ಯಾಯಾಲಯ ಹೇಳಿದೆ.

“ಜೀವಾ ಆತ್ಮಹತ್ಯೆ ಪ್ರಕರಣದ ತನಿಖೆಯನ್ನು ಎಸ್‌ಐಟಿ ತಕ್ಷಣ ಆರಂಭಿಸಬೇಕು. ಪ್ರಕರಣಕ್ಕೆ ಸಂಬಂಧಿಸಿದ ಎಲ್ಲಾ ದಾಖಲೆಗಳನ್ನು ಸಂಬಂಧಿತ ಅಧಿಕಾರಿಗಳು ಎಸ್‌ಐಟಿಗೆ ಒದಗಿಸಬೇಕು. ಅಗತ್ಯಬಿದ್ದರೆ ಇತರೆ ಪೊಲೀಸ್‌ ಅಧಿಕಾರಿಗಳನ್ನು ಎಸ್‌ಐಟಿಯು ನೆರವಿಗೆ ಪಡೆಯಬಹುದು. ಮೂರು ತಿಂಗಳಲ್ಲಿ ತನಿಖೆ ಮುಗಿಯಬೇಕು. ತನಿಖಾ ವರದಿಯನ್ನು ಮೂರು ತಿಂಗಳು ಅಥವಾ ಅದರ ಒಳಗೆ ಈ ನ್ಯಾಯಾಲಯಕ್ಕೆ ಸಲ್ಲಿಸಬೇಕು. ಎಸ್‌ಐಟಿಗೆ ಅಗತ್ಯವಾದ ಕಚೇರಿ ಮತ್ತಿತರ ಸೌಲಭ್ಯವನ್ನು ರಾಜ್ಯ ಸರ್ಕಾರ ಒದಗಿಸಬೇಕು ಎಂದು ನ್ಯಾಯಾಲಯ ಸೂಚಿಸಿದೆ.

ಭೋವಿ ನಿಗಮದ ಹಗರಣಕ್ಕೆ ಸಂಬಂಧಿಸಿದ ಪ್ರಕರಣಗಳಲ್ಲಿನ ಮಧ್ಯಂತರ ಆದೇಶ ಮುಂದುವರಿಯಲಿದೆ. ಅವುಗಳ ವಿಚಾರಣೆಯನ್ನು ಡಿಸೆಂಬರ್‌ 19ಕ್ಕೆ ನಡೆಸಲಾಗುವುದು ಎಂದು ನ್ಯಾಯಾಲಯ ಹೇಳಿದೆ.

ಇದನ್ನೂ ಓದಿ : ಮುಡಾ ಪ್ರಕರಣ | ವಿಚಾರಣೆ ಮುಂದೂಡಿದ ಹೈಕೋರ್ಟ್ : ರಾಜ್ಯಪಾಲರು ಸೇರಿದಂತೆ ಪ್ರತಿವಾದಿಗಳಿಗೆ ನೋಟಿಸ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಟೋಲ್ ಪ್ಲಾಜಾಗಳಲ್ಲಿನ ಅಶುಚಿತ್ವ ಶೌಚಾಲಯಗಳ ಬಗ್ಗೆ ವರದಿ ಮಾಡಿದರೆ ಬಹುಮಾನ: ಕೇಂದ್ರ ಸರ್ಕಾರ

ರಾಷ್ಟ್ರೀಯ ಹೆದ್ದಾರಿಗಳಲ್ಲಿನ ನೈರ್ಮಲ್ಯದ ಬಗ್ಗೆ ದೀರ್ಘಕಾಲದ ಕಳವಳಗಳನ್ನು ಪರಿಹರಿಸುವ ಪ್ರಯತ್ನದಲ್ಲಿ, ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವಾಲಯ (MoRTH) ಟೋಲ್ ಪ್ಲಾಜಾಗಳಲ್ಲಿ ಅಶುಚಿಯಾದ ಶೌಚಾಲಯ ಸೌಲಭ್ಯಗಳ ಬಗ್ಗೆ ವರದಿ ಮಾಡಲು ಪ್ರಯಾಣಿಕರನ್ನು ಪ್ರೋತ್ಸಾಹಿಸುವ...

ಮಣಿಪುರ: ಬಾಂಬ್ ದಾಳಿಗೆ ಇಬ್ಬರು ಮಕ್ಕಳು ಬಲಿ; ಕುಕಿ ದಂಗೆಕೋರರಿಂದ ದಾಳಿ ಆರೋಪ; ಇದು ಅನಾಗರಿಕ ಕೃತ್ಯ ಎಂದ ಸಿಎಂ 

ಗುವಾಹಟಿ: ಮಣಿಪುರದ ಮೈತೇಯಿ ಪ್ರಾಬಲ್ಯದ ಬಿಷ್ಣುಪುರ ಜಿಲ್ಲೆಯಲ್ಲಿ ಮಂಗಳವಾರ ಮನೆಯೊಂದರ ಮೇಲೆ ಬಾಂಬ್ ದಾಳಿ ನಡೆದಿದ್ದು, ಘಟನೆಯಲ್ಲಿ ಐದು ತಿಂಗಳ ಗಂಡು ಮಗು ಸೇರಿದಂತೆ ಇಬ್ಬರು ಅಪ್ರಾಪ್ತ ವಯಸ್ಕರು ಸಾವನ್ನಪ್ಪಿರುವ ಘಟನೆ ನಡೆದಿದೆ.  ಮೊಯಿರಾಂಗ್...

ಮುಖ್ಯ ಚುನಾವಣಾ ಆಯುಕ್ತರ ಪದಚ್ಯುತಿಗೆ ವಿಪಕ್ಷಗಳಿಂದ ನೋಟಿಸ್‌ : ಕಾರಣ ನೀಡದೆ ತಿರಸ್ಕರಿಸಿದ ಸಂಸತ್ತಿನ ಉಭಯ ಸದನಗಳ ಮುಖ್ಯಸ್ಥರು-ವರದಿ

ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಅವರನ್ನು ಪದಚ್ಯುತಗೊಳಿಸಲು ವಿಪಕ್ಷ ಸಂಸದರು ಸಲ್ಲಿಸಿದ್ದ ನಿಲುವಳಿ ನೋಟಿಸ್ ಅನ್ನು ರಾಜ್ಯಸಭಾ ಅಧ್ಯಕ್ಷ ಸಿ.ಪಿ. ರಾಧಾಕೃಷ್ಣನ್ ಮತ್ತು ಲೋಕಸಭಾ ಸ್ಪೀಕರ್ ಓಂ ಬಿರ್ಲಾ ತಿರಸ್ಕರಿಸಿದ್ದಾರೆ. ಉಭಯ...

ಎನ್‌ಸಿಪಿ ನಾಯಕನ ಕೊಲೆ ಪ್ರಕರಣ : ಛತ್ತೀಸ್‌ಗಢ ಮಾಜಿ ಸಿಎಂ ಅಜಿತ್ ಜೋಗಿ ಮಗ ಅಮಿತ್ ಜೋಗಿಗೆ ಜೀವಾವಧಿ ಶಿಕ್ಷೆ

2003ರ ಕೊಲೆ ಪ್ರಕರಣದಲ್ಲಿ ಛತ್ತೀಸ್‌ಗಢ ಹೈಕೋರ್ಟ್ ಮಾಜಿ ಮುಖ್ಯಮಂತ್ರಿ ಅಜಿತ್ ಜೋಗಿ ಅವರ ಪುತ್ರ ಅಮಿತ್ ಜೋಗಿಗೆ ಜೀವಾವಧಿ ಶಿಕ್ಷೆ ವಿಧಿಸಿದೆ ಎಂದು ದಿ ಹಿಂದೂ ಸೋಮವಾರ (ಏ.6) ವರದಿ ಮಾಡಿದೆ. ರಾಷ್ಟ್ರೀಯವಾದಿ ಕಾಂಗ್ರೆಸ್...

ಪ. ಬಂಗಾಳ | ಮತದಾರರ ಪಟ್ಟಿಯಿಂದ ಕೈಬಿಟ್ಟಿದ್ದಕ್ಕೆ ಸೂಕ್ತ ಕಾರಣ ನೀಡದ ಚುನಾವಣಾ ಆಯೋಗ : ಕಾಂಗ್ರೆಸ್ ಅಭ್ಯರ್ಥಿ ಹೆಸರು ಮರು ಸೇರ್ಪಡೆ

ಪಶ್ಚಿಮ ಬಂಗಾಳದ ಮತದಾರರ ಪಟ್ಟಿಯಿಂದ ಹೆಸರು ಕೈಬಿಡಲ್ಪಟ್ಟವರ ಅರ್ಜಿಗಳ ವಿಚಾರಣೆಗಾಗಿ ಕೋಲ್ಕತ್ತಾದಲ್ಲಿ ಸ್ಥಾಪಿಸಲಾದ ಮೇಲ್ಮನವಿ ನ್ಯಾಯಮಂಡಳಿಯು, ಮುಂಬರುವ ವಿಧಾನಸಭಾ ಚುನಾವಣೆಯ ಫರಕ್ಕಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಮೊತಾಬ್ ಶೇಖ್ ಅವರ ಹೆಸರನ್ನು ಭಾನುವಾರ...

ತೂತುಕುಡಿ ಸಾತನ್‌ಕುಳಂ ತಂದೆ-ಮಗನ ಕಸ್ಟಡಿ ಸಾವು ಪ್ರಕರಣ : ಅಪರಾಧಿಗಳಾದ ಎಲ್ಲಾ 9 ಪೊಲೀಸರಿಗೆ ಮರಣದಂಡನೆ ವಿಧಿಸಿದ ನ್ಯಾಯಾಲಯ

ತಮಿಳುನಾಡಿನ ತೂತುಕುಡಿ ಜಿಲ್ಲೆಯ ಸಾತನ್‌ಕುಳಂ ಪೊಲೀಸ್ ಠಾಣೆಯಲ್ಲಿ ಕೋವಿಡ್-19 ಲಾಕ್‌ಡೌನ್ ಸಮಯದಲ್ಲಿ ಸಂಭವಿಸಿದ, ವ್ಯಾಪಾರಿ ಪಿ. ಜಯರಾಜ್ (58) ಮತ್ತು ಅವರ ಮಗ ಜೆ. ಬೆನಿಕ್ಸ್ (31) ಅವರ ಕಸ್ಟಡಿ ಸಾವು ಪ್ರಕರಣದ...

ದಾವಣಗೆರೆ ದಕ್ಷಿಣ ಉಪ-ಸಮರ: ಶಾಮನೂರು ಸಾಮ್ರಾಜ್ಯದಲ್ಲಿ ಅಹಿಂದ ಬಂಡಾಯ!

ತುಂಗಭದ್ರಾ ನದಿ ಪರ‍್ವಕ್ಕೆ ಎತ್ತರದ ಪ್ರದೇಶದಲ್ಲಿರುವ ದಾವಣಗೆರೆ ಮಧ್ಯ ಕರ್ನಾಟಕದ ಪ್ರಮುಖ ವಾಣಿಜ್ಯ ನಗರಿ. ಬೆಣ್ಣೆ ದೋಸೆಯ ಘಮಲಿನ ದಾವಣಗೆರೆಯ ರಾಜಕಾರಣ ಮಾತ್ರ ಮಿರ್ಚಿ-ಮಂಡಕ್ಕಿಯ ಖಡಕ್ ಖಾರಾ ಕುರುಕುಲಿನಂತೆ! ದಾವಣಗೆರೆ ಮತ್ತದರ ಸುತಮುತ್ತಲಿನ...

‘Dr. Nimo Yadav’, ‘Nehr Who’ ಎಕ್ಸ್‌ ಖಾತೆಗಳನ್ನು ತಕ್ಷಣ ಮರುಸ್ಥಾಪಿಸಲು ದೆಹಲಿ ಹೈಕೋರ್ಟ್ ಆದೇಶ

'Dr. Nimo Yadav' ಮತ್ತು 'Nehr Who' ಎಂಬ ಎರಡು ಪರೋಡಿ ಎಕ್ಸ್‌ ಖಾತೆಗಳನ್ನು ತಕ್ಷಣ ಮರು ಸ್ಥಾಪಿಸುವಂತೆ ದೆಹಲಿ ಹೈಕೋರ್ಟ್ ಸೋಮವಾರ (ಏ.6) ಎಕ್ಸ್ ಸಂಸ್ಥೆಗೆ (X Corp) ಆದೇಶಿಸಿದೆ. 'Dr....

ಬಂಗಾಳ| ಮತದಾರರ ಪಟ್ಟಿಯಿಂದ ಹೆಸರು ತೆಗೆದ ಬಳಿಕ ಸಾವಿಗೆ ಶರಣಾದ ಮುಸ್ಲಿಂ ವ್ಯಕ್ತಿ

ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆಯ ನಂತರ ಪಶ್ಚಿಮ ಬಂಗಾಳದಲ್ಲಿ ಮತದಾರರ ಪಟ್ಟಿಯಿಂದ ತನ್ನ ಹೆಸರನ್ನು ತೆಗೆದುಹಾಕಿದ್ದರಿಂದ ಮನನೊಂದ ಮುಸ್ಲಿಂ ವ್ಯಕ್ತಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಪೊಲೀಸರು ಸೋಮವಾರ ತಿಳಿಸಿದ್ದಾರೆ. ಮೃತನನ್ನು ಬಿರ್ಭುಮ್...

‘ಯೋಜನೆಯು ಕೇರಳಕ್ಕೆ ಜೀವನಾಡಿಯಾಗಲಿದೆ’: ವಯನಾಡ್ ಸುರಂಗ ಮಾರ್ಗ ವಿರುದ್ದದ ಅರ್ಜಿ ವಜಾಗೊಳಿಸಿದ ಸುಪ್ರೀಂ ಕೋರ್ಟ್

ಕೇರಳದ ಕೋಝಿಕ್ಕೋಡ್-ವಯನಾಡ್ ಸುರಂಗ ಮಾರ್ಗ ನಿರ್ಮಾಣಕ್ಕೆ ನೀಡಲಾದ ಪರಿಸರ ಅನುಮತಿ (ಇಸಿ) ಪ್ರಶ್ನಿಸಿ ಸಲ್ಲಿಸಲಾದ ಅರ್ಜಿಯನ್ನು ಸುಪ್ರೀಂ ಕೋರ್ಟ್ ಸೋಮವಾರ (ಏ.6) ವಜಾಗೊಳಿಸಿದೆ. ಸುರಂಗ ನಿರ್ಮಾಣದ ಸಮಯದಲ್ಲಿ ಪರಿಸರ ಅನುಮತಿಯ ಷರತ್ತುಗಳ ಉಲ್ಲಂಘನೆಯಾದರೆ, ಅರ್ಜಿದಾರರು...