Homeಮುಖಪುಟಕೋವಿಶೀಲ್ಡ್ ಲಸಿಕೆಯ ಅಡ್ಡ ಪರಿಣಾಮಗಳ ಪರೀಕ್ಷೆ, ಸಂತ್ರಸ್ತರಿಗೆ ಪರಿಹಾರ ಕೋರಿ ಸುಪ್ರೀಂ ಕೋರ್ಟ್‌ಗೆ ಅರ್ಜಿ

ಕೋವಿಶೀಲ್ಡ್ ಲಸಿಕೆಯ ಅಡ್ಡ ಪರಿಣಾಮಗಳ ಪರೀಕ್ಷೆ, ಸಂತ್ರಸ್ತರಿಗೆ ಪರಿಹಾರ ಕೋರಿ ಸುಪ್ರೀಂ ಕೋರ್ಟ್‌ಗೆ ಅರ್ಜಿ

- Advertisement -
- Advertisement -

ಔಷಧೀಯ ಕಂಪನಿ ಅಸ್ಟ್ರಾಜೆನೆಕಾ ತನ್ನ ಕೋವಿಶೀಲ್ಡ್ ಲಸಿಕೆ ಅಪರೂಪದ ಅಡ್ಡ ಪರಿಣಾಮಗಳನ್ನು ಉಂಟು ಮಾಡಬಹುದು ಎಂದು ಒಪ್ಪಿಕೊಂಡ ಹಿನ್ನೆಲೆ, ವಕೀಲರೊಬ್ಬರು ಈ ಲಸಿಕೆಯ ಅಡ್ಡ ಪರಿಣಾಮಗಳು ಮತ್ತು ಅಪಾಯದ ಅಂಶಗಳನ್ನು ಪರೀಕ್ಷಿಸಲು ವೈದ್ಯಕೀಯ ತಜ್ಞರ ಸಮಿತಿಯನ್ನು ರಚಿಸುವಂತೆ ಸುಪ್ರೀಂ ಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದಾರೆ. ಲಸಿಕೆಯಿಂದ ತೀವ್ರ ತರವಾದ ಅಡ್ಡ ಪರಿಣಾಮ ಎದುರಿಸಿದವರು ಮತ್ತು ಮರಣ ಹೊಂದಿದವರಿಗೆ ಪರಿಹಾರ ನೀಡುವಂತೆಯೂ ಅರ್ಜಿಯಲ್ಲಿ ಕೋರಲಾಗಿದೆ.

ಕೋವಿಡ್ -19 ವಿರುದ್ಧದ AZD1222 ಲಸಿಕೆ (ಭಾರತದಲ್ಲಿ ಪರವಾನಗಿ ಪಡೆದ ಮತ್ತು ಕೋವಿಶೀಲ್ಡ್ ಎಂಬ ಹೆಸರಿನಲ್ಲಿ ಮಾರಾಟವಾದ ಲಸಿಕೆ) “ಅತ್ಯಂತ ಅಪರೂಪದ” ಪ್ರಕರಣಗಳಲ್ಲಿ ಕಡಿಮೆ ಪ್ಲೇಟ್‌ಲೆಟ್ ಕೌಂಟ್ ಮತ್ತು ರಕ್ತ ಹೆಪ್ಪುಗಟ್ಟುವಿಕೆಗೆ ಕಾರಣವಾಗಬಹುದು ಎಂದು ಲಸಿಕೆ ತಯಾರಿಸಿದ ಕಂಪನಿ ಅಸ್ಟ್ರಾಜೆನೆಕಾ ಒಪ್ಪಿಕೊಂಡಿದೆ ಎಂದು ವಕೀಲ ವಿಶಾಲ್ ತಿವಾರಿ ಅವರು ಅರ್ಜಿಯಲ್ಲಿ ತಿಳಿಸಿದ್ದಾರೆ.

ಭಾರತದಲ್ಲಿ ಕೋವಿಶೀಲ್ಡ್ ಲಸಿಕೆ ವಿತರಣೆಗೆ ಪುಣೆ ಮೂಲದ ಸೀರಮ್ ಇನ್‌ಸ್ಟಿಟ್ಯೂಟ್ ಆಫ್ ಇಂಡಿಯಾಗೆ ಪರವಾನಗಿ ನೀಡಲಾಗಿತ್ತು ಮತ್ತು ದೇಶದಲ್ಲಿ 175 ಕೋಟಿಗೂ ಹೆಚ್ಚು ಡೋಸ್ ಕೋವಿಶೀಲ್ಡ್ ಲಸಿಕೆ ವಿತರಿಸಲಾಗಿದೆ. ಕೋವಿಡ್ -19 ಬಳಿಕ ದೇಶದ ಜನರು ಹೃದಯಾಘಾತಕ್ಕೊಳಗಾಗುವುದು ಮತ್ತು ಹಠಾತ್ ಕುಸಿತು ಬಿದ್ದು ಸಾವನಪ್ಪುವುದು ಹೆಚ್ಚಳವಾಗಿದೆ ಎಂದು ವಕೀಲ ವಿಶಾಲ್ ತಿವಾರಿ ಹೇಳಿದ್ದಾರೆ.

ಕೋವಿಶೀಲ್ಡ್ ಲಸಿಕೆ ಸುರಕ್ಷಿತವಾಗಿದೆ ಎಂಬ ಭಾರತ ಸರ್ಕಾರದ ಭರವಸೆಯ ಮೇಲೆ ಜನರು ಅದನ್ನು ಪಡೆದುಕೊಂಡಿದ್ದಾರೆ ಎಂದು ವಕೀಲ ವಿಶಾಲ್ ತಿವಾರಿ ಅರ್ಜಿಯಲ್ಲಿ ಹೇಳಿದ್ದಾರೆ. ಯುನೈಟೆಡ್ ಕಿಂಗ್‌ಡಮ್‌ನಲ್ಲಿ ಲಸಿಕೆ ಹಾನಿ ಪಾವತಿ ವ್ಯವಸ್ಥೆಯನ್ನು ಉಲ್ಲೇಖಿಸಿದ ವಕೀಲ, ಲಸಿಕೆಯಿಂದ ತೀವ್ರವಾಗಿ ಅಂಗವಿಕಲರಾದವರಿಗೆ ಪರಿಹಾರ ನೀಡಬೇಕೆಂದು ಕೋರಿದ್ದಾರೆ ಮತ್ತು ಭವಿಷ್ಯದಲ್ಲಿ ಜನರ ಆರೋಗ್ಯಕ್ಕೆ ಅಪಾಯವಾಗದಂತೆ ಕೇಂದ್ರ ಸರ್ಕಾರವು ಆದ್ಯತೆಯ ಮೇಲೆ ವಿಷಯವನ್ನು ಪರಿಗಣಿಸಬೇಕು ಎಂದು ಆಗ್ರಹಿಸಿದ್ದಾರೆ.

ವಕೀಲ ವಿಶಾಲ್ ತಿವಾರಿ ನ್ಯಾಯಾಲಯಕ್ಕೆ ಸಲ್ಲಿಸಿರುವ ಅರ್ಜಿಯಲ್ಲಿ ಪ್ರಮುಖವಾಗಿ ಈ ಕೆಳಗಿನ ಮನವಿಗಳನ್ನು ಮಾಡಿದ್ದಾರೆ.

1. ಸುಪ್ರೀಂ ಕೋರ್ಟ್ ನಿವೃತ್ತ ನ್ಯಾಯಮೂರ್ತಿಗಳ ಮೇಲ್ವಿಚಾರಣೆಯಲ್ಲಿ ದೆಹಲಿಯ ಆಲ್ ಇಂಡಿಯಾ ಇನ್‌ಸ್ಟಿಟ್ಯೂಟ್ ಆಫ್ ಮೆಡಿಕಲ್ ಸೈನ್ಸ್‌ (ಏಮ್ಸ್‌) ನ ವೈದ್ಯರನ್ನೊಳಗೊಂಡ ವೈದ್ಯಕೀಯ ತಜ್ಞರ ಸಮಿತಿ ರಚಿಸಬೇಕು. ಈ ಸಮಿತಿ ಮೂಲಕ ಕೋವಿಶೀಲ್ಡ್‌ ಲಸಿಕೆಯ ಅಡ್ಡ ಪರಿಣಾಮಗಳ ಬಗ್ಗೆ ಪರಿಶೀಲನೆ ನಡೆಸಬೇಕು.

2. ಕೋವಿಡ್ 19 ಸಮಯದಲ್ಲಿ ಲಸಿಕಾ ಅಭಿಯಾನದ ಪರಿಣಾಮವಾಗಿ ತೀವ್ರವಾಗಿ ಅಶಕ್ತಗೊಂಡ ನಾಗರಿಕರಿಗೆ ಲಸಿಕೆ ಹಾನಿ ಪಾವತಿ ವ್ಯವಸ್ಥೆ (ಪರಿಹಾರ ವಿತರಣೆ ವ್ಯವಸ್ಥೆ) ಸ್ಥಾಪಿಸಲು ಕೇಂದ್ರ ಸರ್ಕಾರಕ್ಕೆ ನಿರ್ದೇಶನ ನೀಡಬೇಕು.

3. ಕೋವಿಡ್ 19 ಸಮಯದಲ್ಲಿ ನೀಡಲಾದ ಲಸಿಕೆಯ ಅಡ್ಡ ಪರಿಣಾಮಗಳಿಂದಾಗಿ ತೀವ್ರವಾಗಿ ಅಂಗವಿಕಲರಾದ ಅಥವಾ ಮರಣ ಹೊಂದಿದ ಜನರಿಗೆ ಪರಿಹಾರ ನೀಡಲು ಕೇಂದ್ರ ಸರ್ಕಾರಕ್ಕೆ ನಿರ್ದೇಶನ ನೀಡಬೇಕು.

ಇದನ್ನೂ ಓದಿ : ಕೋವಿಶೀಲ್ಡ್ ಅಡ್ಡ ಪರಿಣಾಮ: ‘ಬಿಜೆಪಿ’ ದೇಣಿಗೆಗಾಗಿ ‘ಜನರ ಜೀವ’ವನ್ನು ಪಣಕ್ಕಿಟ್ಟಿದೆ; ಅಖಿಲೇಶ್ ಯಾದವ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪಶ್ಚಿಮ ಏಷ್ಯಾ ಸಂಘರ್ಷ: ಇರಾನ್ ಭದ್ರತಾ ಮುಖ್ಯಸ್ಥ ಅಲಿ ಲಾರಿಜಾನಿ ಹತ್ಯೆ ಮಾಡಿರುವುದಾಗಿ ಹೇಳಿಕೊಂಡ ಇಸ್ರೇಲ್ 

ಇರಾನ್‌ನ ಭದ್ರತಾ ಮುಖ್ಯಸ್ಥ ಅಲಿ ಲಾರಿಜಾನಿ ವೈಮಾನಿಕ ದಾಳಿಯಲ್ಲಿ ಸಾವನ್ನಪ್ಪಿದ್ದಾರೆ ಎಂದು ಇಸ್ರೇಲ್ ರಕ್ಷಣಾ ಸಚಿವ ಕಾಟ್ಜ್ ಮಂಗಳವಾರ ಹೇಳಿದ್ದಾರೆ. ಆದರೆ ಟೆಹ್ರಾನ್‌ನಿಂದ ಯಾವುದೇ ಅಧಿಕೃತ ದೃಢೀಕರಣವಿಲ್ಲ. ಕಾಟ್ಜ್ ಪ್ರಕಾರ, ಜನರಲ್ ಘೋಲಮ್...

ನಾಲ್ಕು ತಿಂಗಳಲ್ಲೇ ಗರಿಷ್ಠ ಮಟ್ಟಕ್ಕೆ ತಲುಪಿದ ಯುವಜನರ ನಿರುದ್ಯೋಗ ಪ್ರಮಾಣ

15–29 ವರ್ಷ ವಯಸ್ಸಿನ ಯುವಕರಲ್ಲಿ ನಿರುದ್ಯೋಗ ದರವು ಫೆಬ್ರವರಿಯಲ್ಲಿ ನಾಲ್ಕು ತಿಂಗಳಲ್ಲೇ ಗರಿಷ್ಠ ಶೇ. 14.8 ಕ್ಕೆ ಏರಿದೆ. ಇದು ಜನವರಿಯಲ್ಲಿ ಶೇ. 14.7 ರಷ್ಟು ಹೆಚ್ಚಾಗಿ, ಯುವಜನರಲ್ಲಿ ನಿರುದ್ಯೋಗ ಹೆಚ್ಚಳ ಉಂಟಾಗಿದೆ...

ಆರ್‌ಎಸ್‌ಎಸ್‌ ನಿಷೇಧಕ್ಕೆ ಒತ್ತಾಯಿಸಿದ ಅಮೆರಿಕದ ಧಾರ್ಮಿಕ ಸ್ವಾತಂತ್ರ್ಯ ಸಮಿತಿ; ಕಾಂಗ್ರೆಸ್ ಪ್ರತಿಕ್ರಿಯೆ

ಭಾರತದಲ್ಲಿ ಧಾರ್ಮಿಕ ಸ್ವಾತಂತ್ರ್ಯದ ಉಲ್ಲಂಘನೆಯಾಗಿದೆ ಎಂದು ಆರೋಪಿಸಿರುವ ಅಂತರರಾಷ್ಟ್ರೀಯ ಧಾರ್ಮಿಕ ಸ್ವಾತಂತ್ರ್ಯದ ಯುನೈಟೆಡ್ ಸ್ಟೇಟ್ಸ್ ಆಯೋಗವು, ರಾಷ್ಟ್ರೀಯ ಸ್ವಯಂ ಸೇವಕ ಸಂಘ (ಆರೆಸ್ಸೆಸ್) ಮತ್ತು ಭಾರತದ ಬಾಹ್ಯ ಗುಪ್ತಚರ ಸಂಸ್ಥೆಯಾದ ಸಂಶೋಧನೆ, ವಿಶ್ಲೇಷಣಾ...

ಕಾಂಗ್ರೆಸ್ ವಿರುದ್ಧದ ‘ಟರ್ಕಿ ಕಚೇರಿ’ ಹೇಳಿಕೆ: ಅರ್ನಾಬ್ ಗೋಸ್ವಾಮಿಗೆ ₹2 ಕೋಟಿ ಮಾನನಷ್ಟ ಮೊಕದ್ದಮೆ ಹೂಡಲು ಸಮನ್ಸ್ ಜಾರಿ ಮಾಡಿದ ದೆಹಲಿ ಹೈಕೋರ್ಟ್

ಕಾಂಗ್ರೆಸ್ ವಿರುದ್ಧದ "ಟರ್ಕಿ ಕಚೇರಿ" ಆರೋಪಕ್ಕೆ ಸಂಬಂಧಿಸಿದಂತೆ ಅರ್ನಾಬ್ ಗೋಸ್ವಾಮಿಗೆ ₹2 ಕೋಟಿ ಮಾನನಷ್ಟ ಮೊಕದ್ದಮೆ ಹೂಡಲು ದೆಹಲಿ ಹೈಕೋರ್ಟ್ ಸಮನ್ಸ್ ಜಾರಿ ಮಾಡಿದೆ. ಟರ್ಕಿಯಲ್ಲಿ ಭಾರತೀಯ ರಾಷ್ಟ್ರೀಯ ಕಾಂಗ್ರೆಸ್ ಅಂತರರಾಷ್ಟ್ರೀಯ ಕಚೇರಿಯನ್ನು ನಡೆಸುತ್ತಿದೆ...

ಚುನಾವಣಾ ಆಯೋಗ ಬಿಜೆಪಿ ಆಜ್ಞೆಯ ಮೇರೆಗೆ ಕೆಲಸ ಮಾಡುತ್ತಿದೆ: ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ

ವಿಧಾನಸಭಾ ಚುನಾವಣೆಗೂ ಮುನ್ನ, ಭಾರತದ ಚುನಾವಣಾ ಆಯೋಗ (ಇಸಿಐ) ಪ್ರಸ್ತುತ ಡಿಜಿಪಿ, ಕೋಲ್ಕತ್ತಾ ಪೊಲೀಸ್ ಆಯುಕ್ತರು, ಮುಖ್ಯ ಮತ್ತು ಗೃಹ ಕಾರ್ಯದರ್ಶಿಗಳನ್ನು ಬದಲಿಸುವ ಮೂಲಕ ಪ್ರಮುಖ ಪುನರ್ರಚನೆಯನ್ನು ಮಾಡಿದೆ. ಪಶ್ಚಿಮ ಬಂಗಾಳದ ಹೊಸ ಡಿಜಿ...

‘ಶಾಂತಿಗೆ ಇದು ಸಮಯವಲ್ಲ’: ‘ಕದನ ವಿರಾಮ’ ಪ್ರಸ್ತಾಪಗಳನ್ನು ತಿರಸ್ಕರಿಸಿದ ಇರಾನ್ ಸರ್ವೋಚ್ಚ ನಾಯಕ ಮೊಜ್ತಾಬಾ ಖಮೇನಿ 

ಇರಾನ್‌ನ ನೂತನ ಸರ್ವೋಚ್ಚ ನಾಯಕ ಅಯತೊಲ್ಲಾ ಮೊಜ್ತಬಾ ಖಮೇನಿ ಅವರು ಉದ್ವಿಗ್ನತೆಯನ್ನು ಕಡಿಮೆ ಮಾಡುವ ಅಥವಾ ಎರಡು ಮಧ್ಯವರ್ತಿ ರಾಷ್ಟ್ರಗಳು ಟೆಹ್ರಾನ್‌ಗೆ ತಲುಪಿಸಿದ ಯುನೈಟೆಡ್ ಸ್ಟೇಟ್ಸ್‌ನೊಂದಿಗೆ ಕದನ ವಿರಾಮದ ಪ್ರಸ್ತಾಪಗಳನ್ನು ತಿರಸ್ಕರಿಸಿದರು ಎಂದು...

ಲೋಕಸಭೆ | 8 ವಿಪಕ್ಷ ಸಂಸದರ ಅಮಾನತು ರದ್ದು

ಲೋಕಸಭೆಯ ಎಂಟು ವಿಪಕ್ಷ ಸಂಸದರ ಅಮಾನತನ್ನು ತಕ್ಷಣಕ್ಕೆ ಜಾರಿಗೆ ಬರುವಂತೆ ಸ್ಪೀಕರ್ ಓಂ ಬಿರ್ಲಾ ಮಂಗಳವಾರ (ಮಾ.17) ವಾಪಸ್ ಪಡೆದಿದ್ದಾರೆ. ಅಶಿಸ್ತಿನ ಕಾರಣ ನೀಡಿ ಫೆಬ್ರವರಿ 8ರಂದು ಸಂಸದರನ್ನು ಅಮಾನತು ಮಾಡಲಾಗಿತ್ತು. ಅಮಾನತು...

ಪಿತೃತ್ವ ರಜೆಗೆ ಕಾನೂನು ತನ್ನಿ : ಕೇಂದ್ರಕ್ಕೆ ಸುಪ್ರೀಂ ಕೋರ್ಟ್ ಸೂಚನೆ

ಪಿತೃತ್ವ ರಜೆಯನ್ನು (paternity leave) ಸಾಮಾಜಿಕ ಭದ್ರತಾ ಸೌಲಭ್ಯವೆಂದು ಪರಿಗಣಿಸಿ ಕಾನೂನು ರೂಪಿಸುವಂತೆ ಸುಪ್ರೀಂ ಕೋರ್ಟ್ ಮಂಗಳವಾರ (ಮಾ.17) ಕೇಂದ್ರ ಸರ್ಕಾರಕ್ಕೆ ಸೂಚಿಸಿದೆ. ಈ ರಜೆಯ ಅವಧಿಯು ಪೋಷಕರು ಮತ್ತು ಮಗು ಇಬ್ಬರ...

‘ಕಾಲ ಎಲ್ಲಕ್ಕೂ ಉತ್ತರಿಸುತ್ತದೆ’; ಟಿವಿಕೆ ನಾಯಕನ ‘ಡಿಎಂಕೆ ಬೆದರಿಕೆ’ ಆರೋಪ ‘ಸತ್ಯಕ್ಕೆ ದೂರವಾದ ಮಾತು’ ಎಂದ ರಜನಿಕಾಂತ್

ರಾಜಕೀಯ ಪ್ರವೇಶಕ್ಕೆ ಯತ್ನಿಸಿದಾಗ ಡಿಎಂಕೆಯಿಂದ ಬೆದರಿಕೆ ಇತ್ತು ಎಂಬ ಟಿವಿಕೆ ನಾಯಕ ಆಧವ್ ಅರ್ಜುನ ಅವರ ಆರೋಪವನ್ನು ಸೂಪರ್‌ಸ್ಟಾರ್ ರಜನಿಕಾಂತ್ ಮಂಗಳವಾರ ನಿರಾಕರಿಸಿದ್ದಾರೆ ಮತ್ತು "ಕಾಲವೇ ಉತ್ತರ ನೀಡುತ್ತದೆ" ಎಂದು ಹೇಳಿದ್ದಾರೆ. ತಮ್ಮ ಅಧಿಕೃತ...

ಕಾಂಗ್ರೆಸ್‌ ಮಾನನಷ್ಟ ಪ್ರಕರಣ : ಅರ್ನಾಬ್ ಗೋಸ್ವಾಮಿ, ರಿಪಬ್ಲಿಕ್ ಟಿವಿಗೆ ದೆಹಲಿ ಹೈಕೋರ್ಟ್ ಸಮನ್ಸ್

ಟರ್ಕಿ ದೇಶದಲ್ಲಿ ಕಾಂಗ್ರೆಸ್‌ ಪಕ್ಷವು ಅಂತಾರಾಷ್ಟ್ರೀಯ ಕಚೇರಿ ಹೊಂದಿದೆ ಎಂಬ ವರದಿಗೆ ಸಂಬಂಧಿಸಿದಂತೆ, ಅರ್ನಾಬ್ ಗೋಸ್ವಾಮಿ ಮತ್ತು ರಿಪಬ್ಲಿಕ್ ಟಿವಿ ವಿರುದ್ಧ ಕಾಂಗ್ರೆಸ್ ಹೂಡಿರುವ ಮಾನನಷ್ಟ ಮೊಕದ್ದಮೆಯಲ್ಲಿ ದೆಹಲಿ ಹೈಕೋರ್ಟ್ ಮಂಗಳವಾರ (ಮಾ.17)...