Homeಮುಖಪುಟವಕೀಲೆ ಆತ್ಮಹತ್ಯೆ ಪ್ರಕರಣ:  ಡಿವೈಎಸ್ಪಿ ಕನಕಲಕ್ಷ್ಮಿ ಬಂಧನ

ವಕೀಲೆ ಆತ್ಮಹತ್ಯೆ ಪ್ರಕರಣ:  ಡಿವೈಎಸ್ಪಿ ಕನಕಲಕ್ಷ್ಮಿ ಬಂಧನ

- Advertisement -
- Advertisement -

ಬೆಂಗಳೂರು: ವಕೀಲೆ ಜೀವಾ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಡಿವೈಎಸ್​ಪಿ ಕನಕಲಕ್ಷ್ಮೀ ಬಂಧನವಾಗಿದೆ. ಕರ್ನಾಟಕ ಭೋವಿ ನಿಗಮ ಹಗರಣದ ತನಿಖೆ ಎದುರಿಸಿದಾಗ ಪೊಲೀಸ್ ಅಧಿಕಾರಿ ವಿವಸ್ತ್ರಗೊಳಿಸಿ ವಿಚಾರಣೆ ನಡೆಸಿದ್ದಲ್ಲದೆ, 25 ಲಕ್ಷ ರೂ. ಲಂಚ ನೀಡುವಂತೆ ಬೇಡಿಕೆ ಇಟ್ಟಿದ್ದರು ಎಂದು ಮಹಿಳಾ ವಕೀಲೆ ಜೀವಾ 13 ಪುಟಗಳ ಡೆತ್​ನೋಟ್​ ಬರೆದಿಟ್ಟು 2024 ನವೆಂಬರ್ 22ರಂದು ಆತ್ಮಹತ್ಯೆ ಮಾಡಿಕೊಂಡಿದ್ದರು. ಇದೀಗ ಈ ಪ್ರಕರಣ ಸಂಬಂಧ ಎಸ್​ಐಟಿ ಅಧಿಕಾರಿಗಳು ಕನಕಲಕ್ಷ್ಮಿ ಅವರನ್ನು ಬಂಧಿಸಿದ್ದಾರೆ.

ಈ ಸಂಬಂಧ ಸಿಐಡಿ ಡಿವೈಎಸ್ ಪಿ ಕನಕಲಕ್ಷ್ಮಿ ವಿರುದ್ಧ ಜೀವಾ ಸಹೋದರಿ ದೂರು ನೀಡಿದ್ದರು. ಭೋವಿ ಅಭಿವೃದ್ಧಿ ನಿಗಮದ ಅಕ್ರಮ ಪ್ರಕರಣದ ತನಿಖಾಧಿಕಾರಿಯಾಗಿದ್ದ ಕನಕಲಕ್ಷ್ಮಿ, ವಿಚಾರಣೆ ನೆಪದಲ್ಲಿ ಜೀವಾ ಅವರನ್ನು ಅವಾಚ್ಯವಾಗಿ ನಿಂದಿಸಿ ಮಾನಸಿಕ ಆಘಾತಕ್ಕೆ ಗುರಿಪಡಿಸಿದ್ದರು ಎಂದು ದೂರು ನೀಡಲಾಗಿತ್ತು.

ಬಿಜೆಪಿ ಸರ್ಕಾರದ ಅವಧಿಯಲ್ಲಿ ಭೋವಿ ನಿಗಮದ ಅಕ್ರಮದ ಕುರಿತು ಕಾಂಗ್ರೆಸ್​ ಸರ್ಕಾರ ಸಿಐಡಿ ತನಿಖೆಗೆ ವಹಿಸಿತ್ತು. ಇದನ್ನು ಸಿಐಡಿ ಡಿವೈಎಸ್ಪಿ ಕನಕಲಕ್ಷ್ಮೀ ಅವರು ತನಿಖೆ ಕೈಗೊಂಡಿದ್ದು, ಬೋವಿ ನಿಗಮದ ಫಲಾನುಭವಿಗಳಿಗೆ ಮೆಟಿರಿಯಲ್ ಪೂರೈಸಿದ ಆರೋಪದ ಮೇಲೆ 34 ವರ್ಷದ ವಕೀಲೆ ಜೀವಾ ಎನ್ನುವವರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದರು. ಈ ವಿಚಾರಣೆಯ ನಂತರ ವಕೀಲೆ ಜೀವಾ  ಪದ್ಮನಾಭನಗರದ ತಮ್ಮ ನಿವಾಸದಲ್ಲಿ ನೇಣುಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದರು.

ರಿಮ್ಯಾಂಡ್‌ ಅರ್ಜಿ ಪರಿಶೀಲಿಸಿದ ನ್ಯಾಯಾಧೀಶ ಕೆ.ಎಂ. ರಾಧಾಕೃಷ್ಣ, ಆರೋಪಿ ಕನಕಲಕ್ಷ್ಮಿ ಅವರನ್ನು ಮಾ.24ರವರೆಗೆ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿ ಆದೇಶಿಸಿದರು.

ಡೆತ್‌ನೋಟ್‌ನಲ್ಲಿ ಬರೆದ ಬರವಣಿಗೆ ಜೀವಾ ಅವರದ್ದೇ ಎಂದು ಎಫ್‌ಎಸ್‌ಎಲ್‌ ವರದಿಯಲ್ಲಿ ದೃಢಪಟ್ಟಿದೆ. ತನಿಖೆ ಸಂದರ್ಭದಲ್ಲಿ 2024ರ ನವೆಂಬರ್‌ 14ರಂದು ಸಿಐಡಿ ಕಚೇರಿಗೆ ಕರೆಸಿದ್ದ ಕನಕಲಕ್ಷ್ಮಿ, ‘ಒಳ ಉಡುಪು ತೆಗೆಸಿ ವಿವಸ್ತ್ರಗೊಳಿಸಿದ್ದರು. ಬೆನ್ನಿನ ಮೇಲೆ ಹಲ್ಲೆ ನಡೆಸಿದ್ದರು. ಸೈನೈಡ್‌ ತಂದಿದ್ದೀಯಾ ಎಂದು ಹೀಯಾಳಿಸಿ ಹಿಂಸೆ ನೀಡಿದ್ದರು,’ ಎಂದು ಜೀವಾ ಡೆತ್‌ನೋಟ್‌ನಲ್ಲಿ ಉಲ್ಲೇಖಿಸಿದ್ದರು. ಈ ಕುರಿತ ವಿಡಿಯೊ ತುಣುಕುಗಳು ಕನಕಲಕ್ಷ್ಮಿ ಅವರ ಮೊಬೈಲ್‌ನಲ್ಲಿಯೇ ಸಿಕ್ಕಿವೆ ಎಂದು ಎಸ್‌ಐಟಿ ನ್ಯಾಯಾಲಯಕ್ಕೆ ತಿಳಿಸಿದೆ.

ಉದ್ಯಮಿ, ವಕೀಲೆ ಎಸ್‌. ಜೀವಾ ಕುರಿತು ಪೊಲೀಸರಿಗೆ ದೂರು ನೀಡಿದ್ದ ಅವರ ತಂಗಿ ಸಂಗೀತಾ, ‘ಭೋವಿ ಅಭಿವೃದ್ಧಿ ನಿಗಮ ಅಕ್ರಮ ಪ್ರಕರಣ ವಿಚಾರಣೆ ವೇಳೆ ನನ್ನ ಅಕ್ಕ ಜೀವಾ ಅವರನ್ನು ನಗ್ನಗೊಳಿಸಿ ಡಿವೈಎಸ್‌ಪಿ ಕನಕಲಕ್ಷ್ಮಿ ಮಾನಸಿಕ ಹಾಗೂ ದೈಹಿಕ ಕಿರುಕುಳ ನೀಡಿದ್ದಾರೆ. ಜತೆಗೆ, 25 ಲಕ್ಷ ರೂ. ಲಂಚಕ್ಕೆ ಬೇಡಿಕೆ ಇಟ್ಟಿದ್ದರು. ಹೀಗಾಗಿ, ಜೀವಾ ಆತ್ಮಹತ್ಯೆಗೆ ಅವರೇ ಕಾರಣ,’ ಎಂದು ಆರೋಪಿಸಿದ್ದರು.

ಕೇರಳದ ಕೂಡಲ್ಮಾಣಿಕ್ಯಂ ದೇವಸ್ಥಾನದಲ್ಲಿ ಜಾತಿ ತಾರತಮ್ಯ : ಬ್ರಾಹ್ಮಣ ಅರ್ಚಕರ ವಿರುದ್ಧ ಪ್ರಕರಣ ದಾಖಲು, ತನಿಖೆಗೆ ಆದೇಶ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇವಲ ಪ್ರತಿಭಟಿಸಿದ್ದಕ್ಕೆ ವಿದ್ಯಾರ್ಥಿಗಳು ಜೈಲುಪಾಲು; ಗಂಗೆಯ ದೋಣಿಯಲ್ಲಿ ಬಿರಿಯಾನಿ ತಿಂದವರಿಗೂ ಸಿಗುತ್ತಿಲ್ಲ ಜಾಮೀನು : ನ್ಯಾಯಮೂರ್ತಿ ಉಜ್ಜಲ್ ಭುಯಾನ್ ಕಳವಳ

ಭಾರತದಲ್ಲಿ ಭಿನ್ನಾಭಿಪ್ರಾಯಗಳನ್ನು ಗೌರವಿಸುವ ಮತ್ತು ಅವುಗಳಿಗೆ ಅವಕಾಶ ನೀಡುವ ಸಾರ್ವಜನಿಕ ಸ್ಥಳಗಳು ಎಷ್ಟು ಕಡಿಮೆಯಾಗುತ್ತಿವೆ ಎಂದರೆ, ತಮ್ಮ ಹಕ್ಕುಗಳಿಗಾಗಿ ಪ್ರತಿಭಟಿಸುವ ವಿದ್ಯಾರ್ಥಿಗಳನ್ನು ಬಂಧಿಸಿ ಅವರಿಗೆ ಜಾಮೀನು ನಿರಾಕರಿಸಲಾಗುತ್ತಿದೆ ಎಂದು ಸುಪ್ರೀಂ ಕೋರ್ಟ್‌ನ ನ್ಯಾಯಮೂರ್ತಿ...

ಪ.ಬಂಗಾಳ: ನೂತನ ‘ಗೂಂಡಾ ಕಾಯ್ದೆ’ ಅಡಿ NEET ಪ್ರತಿಭಟನೆಯಲ್ಲಿ ಭಾಗಿಯಾದ 10 ಮುಸ್ಲಿಂ ಯುವಕರು ಸೇರಿದಂತೆ 11 ಜನರ ಬಂಧನ 

ಕೋಲ್ಕತ್ತಾ: ಕೇಂದ್ರದ ನರೇಂದ್ರ ಮೋದಿ ಸರ್ಕಾರದ ಶಿಕ್ಷಣ ಕ್ಷೇತ್ರದ ವೈಫಲ್ಯಗಳು ಹಾಗೂ ನೀಟ್-ಯುಜಿ (NEET-UG) ಪ್ರಶ್ನೆ ಪತ್ರಿಕೆ ಸೋರಿಕೆ ಹಗರಣವನ್ನು ಖಂಡಿಸಿ ಶುಕ್ರವಾರ ಕೋಲ್ಕತ್ತಾದಲ್ಲಿ ನಡೆದ ಬೃಹತ್ ವಿದ್ಯಾರ್ಥಿ ಪ್ರತಿಭಟನೆಯು ತೀವ್ರ ರಾಜಕೀಯ...

ಪೊಲೀಸರ ಅನುಮತಿ ಪಡೆದಿದ್ದರೂ ನೀಟ್ ಪ್ರತಿಭಟನೆಗೆ ವಾಟ್ಸಾಪ್ ಗ್ರೂಪ್ ರಚಿಸಿದ್ದಕ್ಕಾಗಿ ಅಸ್ಸಾಂನಲ್ಲಿ ಮೂವರು ಮುಸ್ಲಿಂ ವಿದ್ಯಾರ್ಥಿಗಳ ಬಂಧನ

ಅಸ್ಸಾಂನಲ್ಲಿ ಬಿಜೆಪಿ ಸರ್ಕಾರದ ಕೋಮುವಾದಿ ಧೋರಣೆ ಮತ್ತು ಪ್ರಜಾಸತ್ತಾತ್ಮಕ ಹಕ್ಕುಗಳ ದಮನದ ದಾರುಣ ಚಿತ್ರಣವೊಂದು ಮತ್ತೆ ಮುನ್ನೆಲೆಗೆ ಬಂದಿದೆ. ದೇಶಾದ್ಯಂತ ಸದ್ದು ಮಾಡಿದ್ದ 'ನೀಟ್' (NEET) ಅಕ್ರಮಗಳ ವಿರುದ್ಧ ಧ್ವನಿ ಎತ್ತಲು ಮತ್ತು...

‘ವಿದ್ಯಾರ್ಥಿಗಳ ಮೇಲಿನ ವಿಕೃತ ದಾಳಿಗೆ ನಿಮ್ಮ ಸಮ್ಮತಿ ಇತ್ತೇ?’: ಪತ್ರದ ಮೂಲಕ ಅಮಿತ್ ಶಾಗೆ ರಾಹುಲ್ ಗಾಂಧಿ ಪ್ರಶ್ನೆ

ನವದೆಹಲಿ: ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಕಾರಣವಾದ ದೇಶವ್ಯಾಪಿ ವಿದ್ಯಾರ್ಥಿ ಆಂದೋಲನದ ವೇಳೆ ದೆಹಲಿ ಪೊಲೀಸರು ನಡೆಸಿದ ಭೀಕರ ದೌರ್ಜನ್ಯ ಮತ್ತು ಮಿತಿಮೀರಿದ ಬಲಪ್ರಯೋಗದ ವಿರುದ್ಧ ಲೋಕಸಭೆಯ ವಿರೋಧ...

‘ಮಗ ಬೇಗನೆ ಮನೆಗೆ ಬರಲಿ..’; ಭಾವುಕರಾದ ಅಭಿಜೀತ್ ದಿಪ್ಕೆ ಅವರ ಪೋಷಕರು

ಸಿಜೆಪಿ ಸಂಸ್ಥಾಪಕ ಅಭಿಜೀತ್ ದಿಪ್ಕೆ ನೇತೃತ್ವದಲ್ಲಿ ನಡೆದ ಅಸಾಧಾರಣ ಹೋರಾಟವು ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜಿನಾಮೆಯಲ್ಲಿ ಅಂತಿಮವಾಗಿದೆ. ಈ ಕುರಿತು ಮಾಧ್ಯಮಗಳಿಗೆ ಪ್ರತಿಕ್ರಿಯಿಸಿರುವ ಅವರ ಪೋಷಕರು ಭಾವುಕರಾಗಿದ್ದಾರೆ. "ಮಗ ಬೇಗನೆ ಮನೆಗೆ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆ: ಕಾಕ್ರೋಚ್‌ಗಳಿಗೆ ಅಭಿನಂದಿಸಿದ ಸೋನಮ್ ವಾಂಗ್‌ಚುಕ್ – ಪ್ರಕಾಶ್‌ ರಾಜ್

ದೇಶದ ಯುವಜನರ ಹಲವು ದಿನಗಳ ಹೋರಾಟದ ಬಳಿಕ ಮೋದಿ ನೇತೃತ್ವದ ಕೇಂದ್ರ ಸರ್ಕಾರ ವಿದ್ಯಾರ್ಥಿಗಳ ಮುಂದೆ ಮಂಡಿಯೂರಿದೆ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಿದ್ದಾರೆ. ಈ ಗೆಲುವಿಗೆ ಕಾಕ್ರೋಚ್ ಜನತಾ ಪಕ್ಷದ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಜಿರಳೆಗಳ ಹರ್ಷೋದ್ಗಾರ: ದೆಹಲಿ ಪೊಲೀಸರಿಂದ ಸಾರ್ವಜನಿಕ ಕ್ಷಮೆಯಾಚನೆಗೆ ಆಗ್ರಹ

ದೇಶಾದ್ಯಂತ ನಡೆಯುತ್ತಿರುವ ಸಿಜೆಪಿ ಪ್ರತಿಭಟನೆಗಳ ನಡುವೆ ನೀಟ್ ಪತ್ರಿಕೆ ಸೋರಿಕೆಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ರಾಜೀನಾಮೆ ನೀಡಿದ್ದು, ದೆಹಲಿಯ ಜಂತರ್‌ ಮಂತರ್‌ನಲ್ಲಿ ಪ್ರತಿಭಟನೆ ನಡೆಸುತ್ತಿರುವ ಕಾಕ್ರೋಚ್‌ ಜನತಾ...

ಕಾಕ್ರೋಚ್‌ಗಳಿಗೆ ಮಣಿದ ಮೋದಿ ಸರ್ಕಾರ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್‌ ರಾಜೀನಾಮೆ

ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ನೇತೃತ್ವದಲ್ಲಿ ದೇಶಾದ್ಯಂತ ನಡೆಯುತ್ತಿರುವ ಪ್ರತಿಭಟನೆಗಳ ಮಧ್ಯೆ, ನೀಟ್ ಅಕ್ರಮಗಳಿಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ಇಂದು (ಜುಲೈ 25) ಪ್ರಧಾನ ಮಂತ್ರಿಗಳಿಗೆ ತಮ್ಮ...

ಅಭಿಜೀತ್ ದಿಪ್ಕೆಗೆ ಟೈಫಾಯ್ಡ್; ಪ್ರತಿಭಟನೆ ಮುಂದುವರಿಯಲಿದೆ ಎಂದ ಸಿಜೆಪಿ ಸಂಸ್ಥಾಪಕ

ತನಗೆ ಟೈಫಾಯ್ಡ್ ಇರುವುದು ಪತ್ತೆಯಾಗಿದೆ ಎಂದು ಕಾಕ್ರೋಚ್‌ ಜನತಾ ಪಕ್ಷದ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದಿಪ್ಕೆ ಅವರು ಇಂದು ಹೇಳಿದ್ದಾರೆ. "ನನ್ನ ಅನಾರೋಗ್ಯವು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ...

ಮುಸ್ಲಿಮರ ಬಗ್ಗೆ ನಿಂದನಾತ್ಮಕ, ಪ್ರಚೋದನಕಾರಿ ಹೇಳಿಕೆ : ಸಿ.ಟಿ ರವಿ ವಿರುದ್ಧ FIR

ಮುಸ್ಲಿಮರ ವಿರುದ್ಧ ನಿಂದನಾತ್ಮಕ ಹಾಗೂ ಪ್ರಚೋದನಕಾರಿ ಹೇಳಿಕೆ ನೀಡಿದ ವಿಧಾನಪರಿಷತ್ ಸದಸ್ಯ ಸಿ.ಟಿ ರವಿ ವಿರುದ್ಧ ಚಿಕ್ಕಮಗಳೂರು ನಗರ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ. ನಗರದ ಜಾಮಿಯಾ ಮಸೀದಿಯ ಅಧ್ಯಕ್ಷ ಮುದಸ್ಸಿರ್ ಪಾಷಾ ಅವರು...