Homeಮುಖಪುಟಸಿಜೆಐ ಗವಾಯಿ ಮೇಲೆ ಶೂ ಎಸೆಯಲು ಪ್ರಯತ್ನ! 'ಸನಾತನ ಧರ್ಮದ ಅವಮಾನ ಸಹಿಸುವುದಿಲ್ಲ' ಎಂದು ಕಿರುಚಾಡಿದ...

ಸಿಜೆಐ ಗವಾಯಿ ಮೇಲೆ ಶೂ ಎಸೆಯಲು ಪ್ರಯತ್ನ! ‘ಸನಾತನ ಧರ್ಮದ ಅವಮಾನ ಸಹಿಸುವುದಿಲ್ಲ’ ಎಂದು ಕಿರುಚಾಡಿದ ವಕೀಲ

- Advertisement -
- Advertisement -

ಸುಪ್ರೀಂ ಕೋರ್ಟ್‌ನಲ್ಲಿ ಸೋಮವಾರ ನಡೆಯುತ್ತಿದ್ದ ವಿಚಾರಣೆ ಸಮಯದಲ್ಲಿ ವಕೀಲರೊಬ್ಬರು ಭಾರತದ ಮುಖ್ಯ ನ್ಯಾಯಮೂರ್ತಿ ಬಿ.ಆರ್. ಗವಾಯಿ ಅವರ ಮೇಲೆ ಶೂ ಎಸೆಯಲು ಪ್ರಯತ್ನಿಸಿದ ನಾಟಕೀಯ ದೃಶ್ಯ ನಡೆಯಿತು. ಆರೋಪಿಯನ್ನು ನ್ಯಾಯಾಲಯದ ಕೊಠಡಿಯಿಂದ ಹೊರಗೆ ಕರೆದೊಯ್ಯುತ್ತಿದ್ದಾಗ, ‘ಭಾರತ ಸನಾತನ ಧರ್ಮದ ಅವಮಾನವನ್ನು ಸಹಿಸುವುದಿಲ್ಲ’ ಎಂದು ಕಿರುಚಾಡಿದ್ದಾನೆ.

ಮಧ್ಯಪ್ರದೇಶದಲ್ಲಿ ಹಾನಿಗೊಳಗಾದ ವಿಷ್ಣು ವಿಗ್ರಹದ ಪುನಃಸ್ಥಾಪನೆಗೆ ಸಂಬಂಧಿಸಿದ ಅರ್ಜಿಯನ್ನು ಆಲಿಸುವಾಗ ಮುಖ್ಯ ನ್ಯಾಯಮೂರ್ತಿಗಳು ‘ದೇವರನ್ನೇ ಕೇಳಿ’ ಎಂಬ ಹೇಳಿಕೆ ನೀಡಿದ ಕೆಲವೇ ವಾರಗಳ ನಂತರ ವಕೀಲನಿಂದ ಇಂದು ಕೃತ್ಯ ನಡೆದಿದೆ.

ಆರೋಪಿಯನ್ನು ತಕ್ಷಣವೇ ಬಂಧಿಸಲಾಯಿತು. ಈ ಸಂದರ್ಭದಲ್ಲಿ ಮುಖ್ಯ ನ್ಯಾಯಮೂರ್ತಿ ಗವಾಯಿ ಶಾಂತಚಿತ್ತರಾಗಿದ್ದರು, ಯಾವುದೇ ಅಡೆತಡೆಯಿಲ್ಲದೆ ತಮ್ಮ ವಿಚಾರಣೆಯನ್ನು ಮುಂದುವರೆಸಿದರು.

ಘಟನೆಯ ನಂತರ ಮಾತನಾಡಿದ ಅವರು, “ಇದೆಲ್ಲದರಿಂದ ವಿಚಲಿತರಾಗಬೇಡಿ. ಈ ವಿಷಯಗಳು ನನ್ನ ಮೇಲೆ ಪರಿಣಾಮ ಬೀರುವುದಿಲ್ಲ. ವಿಚಾರಣೆಯನ್ನು ಮುಂದುವರಿಸಿ” ಎಂದು ಶಾಂತವಾಗಿ ಹೇಳಿದರು.

ಸುಪ್ರೀಂ ಕೋರ್ಟ್ ವಕೀಲ ರೋಹಿತ್ ಪಾಂಡೆ ಅವರು, ಆರೋಪಿಯನ್ನು 2011 ರಿಂದ ಬಾರ್ ಅಸೋಸಿಯೇಷನ್‌ನ ಸದಸ್ಯ ಎಂದು ಗುರುತಿಸಿದ್ದಾರೆ. “ಮುಖ್ಯ ನ್ಯಾಯಮೂರ್ತಿಗಳ ದೇವರ ಕುರಿತ ಹೇಳಿಕೆಗಳಿಗೆ ಪ್ರತಿಕ್ರಿಯೆಯಾಗಿ ಈ ಕೃತ್ಯ ನಡೆದಿದೆ ಎಂದು ತೋರುತ್ತದೆ. ನಾನು ಈ ಘಟನೆಯನ್ನು ಬಲವಾಗಿ ಖಂಡಿಸುತ್ತೇನೆ. ಆರೋಪಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕೆಂದು ಒತ್ತಾಯಿಸುತ್ತೇನೆ” ಎಂದು ಅವರು ಹೇಳಿದರು.

ಸೆಪ್ಟೆಂಬರ್‌ನಲ್ಲಿ, ಮಧ್ಯಪ್ರದೇಶದ ಜವಾರಿ ದೇವಸ್ಥಾನದಲ್ಲಿ 7 ಅಡಿ ಎತ್ತರದ ವಿಷ್ಣು ವಿಗ್ರಹವನ್ನು ಪುನಃಸ್ಥಾಪಿಸಲು ಕೋರಿ ಸಲ್ಲಿಸಲಾದ ಅರ್ಜಿಯನ್ನು ವಜಾಗೊಳಿಸುತ್ತಾ, ಮುಖ್ಯ ನ್ಯಾಯಮೂರ್ತಿ ಗವಾಯಿ ಅರ್ಜಿದಾರರಿಗೆ, “ಇದು ಸಂಪೂರ್ಣವಾಗಿ ಪ್ರಚಾರ ಹಿತಾಸಕ್ತಿ ಮೊಕದ್ದಮೆ. ಹೋಗಿ ದೇವರನ್ನೇ ಈಗ ಏನಾದರೂ ಮಾಡಲು ಕೇಳಿ. ನೀವು ವಿಷ್ಣುವಿನ ಕಟ್ಟಾ ಭಕ್ತ ಎಂದು ಹೇಳುತ್ತೀರಿ. ಆದ್ದರಿಂದ ಈಗಲೇ ಹೋಗಿ ಪ್ರಾರ್ಥಿಸಿ” ಎಂದು ಹೇಳಿದರು.

ಈ ತೀರ್ಪಿನ ಬಗ್ಗೆ ಸಾಮಾಜಿಕ ಮಾಧ್ಯಮದಲ್ಲಿ ವ್ಯಾಪಕ ಟೀಕೆ, ವಿವಾದಾತ್ಮಕ ಹೇಳಿಕೆಗಳು ಬಂದವು. ಬಳಿಕ, ಮುಖ್ಯ ನ್ಯಾಯಮೂರ್ತಿ ತಮ್ಮ ಹೇಳಿಕೆಗಳನ್ನು ತಪ್ಪಾಗಿ ನಿರೂಪಿಸಲಾಗಿದೆ ಎಂದು ಹೇಳಿದರು. “ನಾನು ಎಲ್ಲ ಧರ್ಮಗಳನ್ನು ಗೌರವಿಸುತ್ತೇನೆ” ಎಂದು ಒತ್ತಿ ಹೇಳಿದರು.

ಕೋರ್ಟ್‌ ಹಾಲ್‌ನಲ್ಲಿ ನಡೆದದ್ದೇನು?

ಸಿಜೆಐ ನೇತೃತ್ವದ ಪೀಠವು ವಕೀಲರ ಪ್ರಕರಣಗಳ ಪ್ರಸ್ತಾಪವನ್ನು ಆಲಿಸುತ್ತಿದ್ದಾಗ ನಾಟಕೀಯ ಘಟನೆ ನಡೆಯಿತು. ಸ್ಥಳದಲ್ಲದಿfದವರ ಪ್ರಕಾರ, ವಕೀಲರು ವೇದಿಕೆಯ ಬಳಿಗೆ ಹೋಗಿ ತಮ್ಮ ಶೂ ತೆಗೆದು ನ್ಯಾಯಾಧೀಶರ ಮೇಲೆ ಎಸೆಯಲು ಪ್ರಯತ್ನಿಸಿದರು.

ಆದರೂ, ನ್ಯಾಯಾಲಯದಲ್ಲಿ ಹಾಜರಿದ್ದ ಭದ್ರತಾ ಸಿಬ್ಬಂದಿ ಸಕಾಲದಲ್ಲಿ ಮಧ್ಯಪ್ರವೇಶಿಸಿ ವಕೀಲರನ್ನು ಹೊರಗೆ ಕರೆದೊಯ್ದರು. ಹೊರನಡೆಯುವಾಗ, ವಕೀಲನು “ಸನಾತನ ಧರ್ಮದ ಅಪಮಾನ ಸಹಿಸುವುದಿಲ್ಲ” ಎಂದು ಕಿರುಚಾಡಿದ್ದಾನೆ.

ಸಿಜೆಐ ಯಾವುದೇ ಮುಜುಗರಕ್ಕೊಳಗಾಗದೆ ನ್ಯಾಯಾಲಯದಲ್ಲಿ ಹಾಜರಿದ್ದ ವಕೀಲರು ತಮ್ಮ ವಾದಗಳನ್ನು ಮುಂದುವರಿಸುವಂತೆ ಸೂಚಿಸಿದರು.

“ಇದೆಲ್ಲದರಿಂದ ವಿಚಲಿತರಾಗಬೇಡಿ. ನಾವು ವಿಚಲಿತರಾಗುವುದಿಲ್ಲ. ಈ ವಿಷಯಗಳು ನನ್ನ ಮೇಲೆ ಪರಿಣಾಮ ಬೀರುವುದಿಲ್ಲ” ಎಂದು ಅವರು ಹೇಳಿದರು.

ಕೃತ್ಯ ಖಂಡಿಸಿದ ಹಿರಿಯ ಪತ್ರಕರ್ತ ರಾಜದೀಪ್‌ ಸರ್ದೇಸಾಯಿ

ಸಿಜೆಐ ಮೇಲೆ ಶೂ ಎಸೆಯಲು ಯತ್ನಿಸಿದ ವಲೀಕನ ಕೃತ್ಯವನ್ನು ಹಿರಿಯ ಪತ್ರಕರ್ತ ರಾಜದೀಪ್‌ ಸರ್ದೇಸಾಯಿ ಖಂಡಿಸಿದ್ದಾರೆ. “ಸನಾತನ ವಿರೋಧಿ ಹೇಳಿಕೆಗಳನ್ನು ಸಹಿಸುವುದಿಲ್ಲ ಎಂದು ವಕೀಲರೊಬ್ಬರು ನ್ಯಾಯಾಲಯದಲ್ಲಿ ಸಿಜೆಐ ನ್ಯಾಯಮೂರ್ತಿ ಗವಾಯಿ ಅವರ ಮೇಲೆ ಶೂ ಎಸೆದ ಘಟನೆ ನಡೆದಿದೆ. ಇದು ಸಂಪೂರ್ಣವಾಗಿ ಸ್ವೀಕಾರಾರ್ಹವಲ್ಲದ ವರ್ತನೆ. ನ್ಯಾಯಾಲಯದ ವಿಚಾರಣೆಯಲ್ಲಿ ವಿಷ್ಣುವಿನ ವಿಗ್ರಹದ ಬಗ್ಗೆ ಸಿಜೆಐ ಅವರ ಹೇಳಿಕೆಗಳು ಈ ರೀತಿಯ ಹಿಂಸಾತ್ಮಕ ನಡವಳಿಕೆಯನ್ನು ಪ್ರಚೋದಿಸಿದರೆ, ಅದು ತೀವ್ರ ಕಳವಳಕಾರಿ. ದುಃಖಕರವೆಂದರೆ, ಜಾತಿ ದ್ವೇಷ ಮತ್ತು ಧಾರ್ಮಿಕ ಅಸಹಿಷ್ಣುತೆಯ ಸಂಸ್ಕೃತಿಯನ್ನು ‘ಸಾಮಾನ್ಯಗೊಳಿಸಲಾಗುತ್ತಿದೆ’. ಸಾಮಾಜಿಕ ಮಾಧ್ಯಮ ಸೇನೆಗಳು ಮತ್ತು ವಿಷಕಾರಿ ಟಿವಿ ‘ಚರ್ಚೆ’ಗಳೊಂದಿಗೆ ಹಿಂಸಾಚಾರವನ್ನು ಉತ್ತೇಜಿಸುತ್ತಿದೆ” ಎಂದು ಹೇಳಿದ್ದಾರೆ.

ಉತ್ತರ ಪ್ರದೇಶ| ಕಳ್ಳನೆಂದು ಭಾವಿಸಿ ದಲಿತ ವ್ಯಕ್ತಿಯನ್ನು ಥಳಿಸಿ ಕೊಂದ ಗುಂಪು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ವಂದೇ ಮಾತರಂ ಗೀತೆಯ 6 ಚರಣಕ್ಕೆ ಕರ್ನಾಟಕ ಸರ್ಕಾರದ ಬ್ರೇಕ್

ವಂದೇ ಮಾತರಂ ಗೀತೆಯ ಗಾಯನಕ್ಕೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರದ ನಿರ್ಧಾರ ಮತ್ತು ಕಡ್ಡಾಯ ನೀತಿಗೆ ಕರ್ನಾಟಕ ಸರ್ಕಾರ ನೇರವಾಗಿ ಸೆಡ್ಡು ಹೊಡೆದಿದೆ. ರಾಜ್ಯ ಸರ್ಕಾರದ ಅಧಿಕೃತ ಕಾರ್ಯಕ್ರಮಗಳಲ್ಲಿ ವಂದೇ ಮಾತರಂ ಗೀತೆಯ ಸಂಪೂರ್ಣ...

ಸಿಜೆಪಿ ಪ್ರತಿಭಟನೆಯಲ್ಲಿ ಬಾಲಕಿ ನಿಶು ಆಜಾದ್‌ಗೆ ಬೆದರಿಕೆ; ಕ್ರಮಕ್ಕೆ ಸುಪ್ರೀಂ ಕೋರ್ಟ್ ಸೂಚನೆ

ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ನೇತೃತ್ವದಲ್ಲಿ ನಡೆದ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ 14 ವರ್ಷದ ನಿಶು ಆಜಾದ್‌ಗೆ ಕಿಡಿಗೇಡಿಗಳು ಅತ್ಯಾಚಾರದ ಬೆದರಿಕೆ ಹಾಕಿದ್ದಾರೆ ಹಾಗೂ ಅವರ ಮನೆ ಮೇಲೆ ಕಲ್ಲು ತೂರಾಟ ನಡೆಸಿದ್ದಾರೆ ಎಂಬ...

ಜಾದವ್‌ಪುರ ವಿವಿ ವಿರುದ್ಧ ಸುವೇಂದು ಅಧಿಕಾರಿಯ ‘ಕೇಸರಿ ಯಾತ್ರೆ’: ‘ಆಜಾದಿ’, ‘ಲಾಲ್ ಸಲಾಂ’ ಕೂಗುವವರನ್ನು ಬೇರುಸಹಿತ ಕಿತ್ತುಹಾಕುತ್ತೇನೆ ಎಂದು ಬೆದರಿಕೆ

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಬಿಜೆಪಿ ನಾಯಕ ಹಾಗೂ ಮುಖ್ಯಮಂತ್ರಿ ಸುವೇಂದು ಅಧಿಕಾರಿ ನೇತೃತ್ವದಲ್ಲಿ ಕೋಲ್ಕತ್ತಾದ ಜಾದವ್‌ಪುರ ವಿಶ್ವವಿದ್ಯಾಲಯದತ್ತ ನಡೆದ ‘ಗೆರುವಾ ಸಮ್ಮಾನ್ ಯಾತ್ರೆ’ (ಕೇಸರಿ ಗೌರವ ಮೆರವಣಿಗೆ) ಇದೀಗ ರಾಜ್ಯದ ರಾಜಕೀಯ ವಲಯದಲ್ಲಿ...

SIR : ಒಂದೇ ಮತಗಟ್ಟೆಯ 729 ಮತದಾರರಲ್ಲಿ 728 ಮಂದಿಯ ಹೆಸರು ಡಿಲೀಟ್!

ದೆಹಲಿಯ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆಗೆ (ಎಸ್‌ಐಆರ್‌) ಮುನ್ನ, ಯಮುನಾ ನದಿ ಪಾತ್ರದ ಕೊಳಗೇರಿ ಪ್ರದೇಶವಾದ ಬೇಲಾ ಎಸ್ಟೇಟ್‌ನ ಭಾಗವೊಂದನ್ನು ಒಳಗೊಂಡಿರುವ ಮತಗಟ್ಟೆಯಲ್ಲಿ 729 ನೋಂದಾಯಿತ ಮತದಾರರಿದ್ದರು. ಆದರೆ, ಆಗಸ್ಟ್‌ನಲ್ಲಿ ಕರಡು...

ಬಂಗಾಳದ ನಾನ್‌ವೆಜ್ ವಿವಾದ: ಬಾಗೇಶ್ವರ್ ಬಾಬಾ ಹೇಳಿಕೆಗೆ ಹಿಂದೂ ವಲಯದಲ್ಲೇ ವಿರೋಧ; ‘ಹಿಂದೂ ಧರ್ಮ ಆಹಾರದ ಕೋಡ್ ಅಲ್ಲ!

ದುರ್ಗಾ ಪೂಜೆಯ ಸಂದರ್ಭದಲ್ಲಿ ಮೀನು, ಮಾಂಸ ಸೇವನೆ ಹಾಗೂ ಮಾರಾಟದ ವಿರುದ್ಧ ಬಾಗೇಶ್ವರ್ ಧಾಮದ ಮುಖ್ಯಸ್ಥ ಧೀರೇಂದ್ರ ಕೃಷ್ಣ ಶಾಸ್ತ್ರಿ ನೀಡಿದ್ದ ಹೇಳಿಕೆ ಪಶ್ಚಿಮ ಬಂಗಾಳದಲ್ಲಿ ರಾಜಕೀಯ ವಿವಾದ ಹುಟ್ಟುಹಾಕಿದ ಬೆನ್ನಲ್ಲೇ, ಇದೀಗ...

SIR: ಪಂಜಾಬ್‌ ಮತದಾರರ ಪಟ್ಟಿಯಿಂದ ಡಿಲೀಟ್ ಆಗಿದ್ದ ರಾಘವ್ ಚಡ್ಡಾ ಹೆಸರು ದೆಹಲಿಯಲ್ಲಿ ಎಂಟ್ರಿ!

ರಾಜ್ಯಸಭಾ ಸಂಸದ ರಾಘವ್ ಚಡ್ಡಾ ಅವರ ಹೆಸರು ಪಂಜಾಬ್‌ನ ಕರಡು ಮತದಾರರ ಪಟ್ಟಿಯಿಂದ ತೆಗೆದುಹಾಕಲ್ಪಟ್ಟ ಕೆಲವೇ ದಿನಗಳಲ್ಲಿ, ದೆಹಲಿಯ ಮತದಾರರ ಪಟ್ಟಿಯಲ್ಲಿ ದಿಢೀರನೆ ಪ್ರತ್ಯಕ್ಷವಾಗಿರುವುದು ದೇಶಾದ್ಯಂತ ಭಾರಿ ರಾಜಕೀಯ ಚರ್ಚೆಗೆ ಕಾರಣವಾಗಿದೆ. ಈ...

ರಾಜ್ಯ ಕಾಂಗ್ರೆಸ್‌ಗೆ 35 ನೂತನ ಜಿಲ್ಲಾಧ್ಯಕ್ಷರ ನೇಮಕ; ಹೈಕಮಾಂಡ್ ಪಟ್ಟಿಯಲ್ಲಿ ಮಹಿಳೆಯರಿಗಿಲ್ಲ ಪ್ರಾತಿನಿಧ್ಯ!

ಕರ್ನಾಟಕ ಕಾಂಗ್ರೆಸ್‌ನ ಬಹುನಿರೀಕ್ಷಿತ ಜಿಲ್ಲಾ ಪುನರ್‌ರಚನೆಗೆ ಕೊನೆಗೂ ಚಾಲನೆ ದೊರೆತಿದ್ದು, ರಾಜ್ಯದ 35 ಸಾಂಸ್ಥಿಕ ಜಿಲ್ಲಾ ಕಾಂಗ್ರೆಸ್ ಸಮಿತಿಗಳಿಗೆ (DCC) ನೂತನ ಅಧ್ಯಕ್ಷರನ್ನು ನೇಮಕ ಮಾಡಲಾಗಿದೆ. ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ....

ತ್ರಿಪುರ| ಬಿಜೆಪಿ ಬೇಡಿಕೆಗೆ ಸ್ಪಂದಿಸಿದ ಇಸಿಐ; ಗ್ರಾಮ ಸಮಿತಿ ಚುನಾವಣೆ ಹಿನ್ನೆಲೆಯಲ್ಲಿ ಎಸ್‌ಐಆರ್ ಪ್ರಕ್ರಿಯೆ ಮುಂದೂಡಿಕೆ

ಆಡಳಿತರೂಢ ಭಾರತೀಯ ಜನತಾ ಪಕ್ಷ (ಬಿಜೆಪಿ) ಸೇರಿದಂತೆ ವಿವಿಧ ರಾಜಕೀಯ ಪಕ್ಷಗಳ ಬೇಡಿಕೆಗೆ ಸ್ಪಂದಿಸಿರುವ ಭಾರತೀಯ ಚುನಾವಣಾ ಆಯೋಗ (ಇಸಿಐ), ರಾಜ್ಯದ ಬುಡಕಟ್ಟು ಪ್ರದೇಶಗಳಲ್ಲಿ ಸೆಪ್ಟೆಂಬರ್ 28 ರಂದು ನಡೆಯಲಿರುವ ಗ್ರಾಮ ಸಮಿತಿ...

SIR: ಸ್ವತಃ BLO ಗೆ ನೋಟಿಸ್ ನೀಡಿದ ಚುನಾವಣಾ ಆಯೋಗ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯ ತಾಂತ್ರಿಕ ಎಡವಟ್ಟುಗಳು ಮತ್ತು ಗೊಂದಲಗಳು ಪ್ರತಿದಿನವೂ ಒಂದಲ್ಲ ಒಂದು ವಿಲಕ್ಷಣ ಘಟನೆಗಳಿಗೆ ಕಾರಣವಾಗುತ್ತಿದ್ದು, ಇದೀಗ ಸ್ವತಃ ಮತದಾರರ ಪಟ್ಟಿ ಪರಿಷ್ಕರಣೆ...

‘ಎಸ್‌ಐಆರ್ ಪ್ರಜಾಪ್ರಭುತ್ವಕ್ಕೆ ವಂಚನೆ’: 2025ಕ್ಕೆ ಹೋಲಿಸಿದರೆ ದೆಹಲಿಯ 58.60 ಲಕ್ಷ ಮತದಾರರ ಹೆಸರುಗಳು ಮಾಯ: ನಾಗರೀಕ ಸಂಘಟನೆಗಳ ಆಕ್ರೋಶ

ನವದೆಹಲಿ: ದೆಹಲಿಯಲ್ಲಿ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆ ಮತದಾರರ ಪಟ್ಟಿಯ ಶುದ್ಧೀಕರಣದ ಸಾಮಾನ್ಯ ಆಡಳಿತಾತ್ಮಕ ಕ್ರಮವಲ್ಲ, ಬದಲಾಗಿ ನಾಗರಿಕರ ಮತದಾನದ ಹಕ್ಕಿನ ಮೇಲೆ ಗಂಭೀರ ಪರಿಣಾಮ ಬೀರುವ...