Homeಮುಖಪುಟಬೆಂಗಳೂರಿಗೆ ಹೊರಟ ಲಕ್ಷ್ಮಣ್ ಸವದಿ: ಕಾಂಗ್ರೆಸ್ ಸೇರ್ಪಡೆ ಸಾಧ್ಯತೆ

ಬೆಂಗಳೂರಿಗೆ ಹೊರಟ ಲಕ್ಷ್ಮಣ್ ಸವದಿ: ಕಾಂಗ್ರೆಸ್ ಸೇರ್ಪಡೆ ಸಾಧ್ಯತೆ

- Advertisement -
- Advertisement -

ಅಥಣಿ ಬಿಜೆಪಿ ಟಿಕೆಟ್ ವಂಚಿತ ಲಕ್ಷ್ಮಣ್ ಸವದಿ ಇಂದು ಬೆಂಗಳೂರಿಗೆ ಹೊರಟಿದ್ದು, ವಿಧಾನ ಪರಿಷತ್ ಸ್ಥಾನ ಮತ್ತು ಬಿಜೆಪಿ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಲಿದ್ದು, ಕಾಂಗ್ರೆಸ್ ಪಕ್ಷ ಸೇರುವ ಸಾಧ್ಯತೆ ಇದೆ ಎನ್ನಲಾಗುತ್ತಿದೆ.

ಇಂದು ಅವರು ಬೆಂಗಳೂರಿಗೆ ಆಗಮಿಸಲು ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ವಿಮಾನ ವ್ಯವಸ್ಥೆ ಮಾಡಿದ್ದಾರೆ ಎನ್ನಲಾಗಿದೆ. ಅಲ್ಲದೆ ಕಾಂಗ್ರೆಸ್‌ ವಿಧಾನ ಪರಿಷತ್ ಸದಸ್ಯ ಚನ್ನರಾಜ ಹಟ್ಟಿಹೊಳಿ ಲಕ್ಷ್ಮಣ್ ಸವದಿ ಜೊತೆಗಿದ್ದು ಖುದ್ದಾಗಿ ಬೆಂಗಳೂರಿಗೆ ಕರೆತರುತ್ತಿದ್ದಾರೆ. ಇದೆಲ್ಲವೂ ಅವರು ಕಾಂಗ್ರೆಸ್ ಪಕ್ಷ ಸೇರುತ್ತಾರೆ ಎಂಬುದಕ್ಕೆ ಸಾಕ್ಷಿಗಳಾಗಿವೆ.

ಬಿಜೆಪಿ ನಾಯಕರು ಸವದಿ ಮನವೊಲಿಸಲು ಯತ್ನಿಸಿದರೂ ಸಫಲರಾಗಿಲ್ಲ. ಇಂದು ಬಿಜೆಪಿಗೆ ರಾಜೀನಾಮೆ ನೀಡುವ ಸವದಿ ಸಂಜೆ ಬೆಳಗಾವಿಯಲ್ಲಿ ಸತೀಶ್ ಜಾರಕಿಹೊಳಿಯವರ ನೇತೃತ್ವದಲ್ಲಿ ನಡೆಯುವ ಪ್ರಜಾಧ್ವನಿ ಯಾತ್ರೆಯಲ್ಲಿ ಕಾಂಗ್ರೆಸ್ ಸೇರಲಿದ್ದು, ಅಲ್ಲಿಯೇ ಅವರಿಗೆ ಅಥಣಿ ಕಾಂಗ್ರೆಸ್ ಟಿಕೆಟ್ ಘೋಷಿಸಲಾಗುವುದು ಎಂದು ವರದಿಯಾಗಿದೆ. ಆ ಕಾರ್ಯಕ್ರಮದಲ್ಲಿ ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯನವರು ಸಹ ಭಾಗವಹಿಸಲಿದ್ದಾರೆ.

ಸುಮಾರು 50 ಕ್ಷೇತ್ರಗಳಲ್ಲಿ ಬಿಜೆಪಿ ಟಿಕೆಟ್ ಸಿಗದ ಕಾರಣ ಆಕಾಂಕ್ಷಿಗಳು ಬಂಡಾಯವೆದ್ದಿದ್ದಾರೆ. 5ಕ್ಕೂ ಹೆಚ್ಚು ಶಾಸಕರು ಈಗಾಗಲೇ ಬಿಜೆಪಿ ಪಕ್ಷಕ್ಕೆ ರಾಜೀನಾಮೆ ಘೋಷಿಸಿದ್ದಾರೆ. ಇದರಿಂದಾಗಿ ಬಿಜೆಪಿ ನಾಯಕರಿಗೆ ತಲೆನೋವು ಜೋರಾಗಿದೆ.

ಇದನ್ನೂ ಓದಿ: ಪದ್ಮನಾಭನಗರದಿಂದ ಡಿ.ಕೆ ಸುರೇಶ್ ಕಣಕ್ಕೆ? : ಕೂತೂಹಲ ಮೂಡಿಸಿದ ಬೆಳವಣಿಗೆಗಳು 

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಮಣಿಪುರ ಹಿಂಸಾಚಾರಕ್ಕೆ ಬಲಿಯಾದವರ ಬಗ್ಗೆ ಮೋದಿ ಸರ್ಕಾರಕ್ಕೆ ಸ್ವಲ್ಪವೂ ಸಹಾನುಭೂತಿ ಇಲ್ಲ: ಮಲ್ಲಿಕಾರ್ಜುನ ಖರ್ಗೆ

0
ಮಣಿಪುರದ ಪರಿಸ್ಥಿತಿಯ ಬಗ್ಗೆ ಮೋದಿ ಸರಕಾರ ನಿರಾಸಕ್ತಿಯನ್ನು ಹೊಂದಿದ್ದು, ಪಶ್ಚಾತ್ತಾಪವಿಲ್ಲದಂತೆ ವರ್ತಿಸುತ್ತಿದೆ ಎಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಮೋದಿ ಸರ್ಕಾರದ ವಿರುದ್ಧ ವಾಗ್ದಾಳಿಯನ್ನು ನಡೆಸಿದೆ. ಈ ಕುರಿತು ಎಕ್ಸ್‌ನಲ್ಲಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ...