Homeಮುಖಪುಟಮತ್ತೆ ಒಂಟಿಯಾದ ಚಿರಾಗ್ ಪಾಸ್ವಾನ್ - ಜೆಡಿಯುಗೆ ಹಾರಿದ ಪಕ್ಷದ ಪ್ರಮುಖ ನಾಯಕ!

ಮತ್ತೆ ಒಂಟಿಯಾದ ಚಿರಾಗ್ ಪಾಸ್ವಾನ್ – ಜೆಡಿಯುಗೆ ಹಾರಿದ ಪಕ್ಷದ ಪ್ರಮುಖ ನಾಯಕ!

- Advertisement -
- Advertisement -

ಬಿಹಾರದ ಪ್ರಭಾವಶಾಲಿ ನಾಯಕರಾಗಿದ್ದ ರಾಮ್ ವಿಲಾಸ್‌ ಪಾಸ್ವಾನ್ ಅವರ ಲೋಕ ಜನಶಕ್ತಿ ಪಕ್ಷ(LJP)ವು ಎರಡು ಬಣಗಳಾಗಿ ಒಡೆದು ಹೋಗಿದೆ. ಒಂದು ಬಣದ ನಾಯಕನಾಗಿ ರಾಮ್ ವಿಲಾಸ್ ಪಾಸ್ವಾನ್ ಅವರ ಸಹೋಧರ ಪಶುಪತಿ ಕುಮಾರ್‌ ಪರಾಸ್ ಅವರಿದ್ದರೆ, ಇನ್ನೊಂದು ನಾಯಕನಾಗಿ ಪಾಸ್ವಾನ್ ಅವರ ಮಗ ಚಿರಾಗ್ ಪಾಸ್ವಾನ್ ಅವರಿದ್ದಾರೆ.

ಕಳೆದ ಬಾರಿಯ ವಿಧಾನಸಭಾ ಚುನಾವಣೆಯಲ್ಲಿ ಚಿರಾಗ್ ಅವರು ಯಾವುದೆ ಪಕ್ಷಗಳ ಮೈತ್ರಿಯಿಲ್ಲದೆ ಏಕಾಂಗಿಯಾಗಿ ಹೋರಾಟ ನಡೆಸಿದ್ದರು. ಅದರ ನಂತರ ಪಕ್ಷದ ಒಳಗೆ ಆಂತರಿಕ ಬಿನ್ನಾಭಿಪ್ರಾಯ ಭುಗಿಲೆದ್ದು ಪಕ್ಷವು ಒಡೆದು ಹೋಗಿತ್ತು. ಹೀಗಾಗಿ ಚಿರಾಗ್ ಅವರೇ ತಮ್ಮ ಬಣವನ್ನು ಮುನ್ನಡೆಸುತ್ತಿದ್ದರು. ಇದೀಗ ಚಿರಾಗ್‌ಗೆ ಮತ್ತೊಂದು ಅಫಾತ ಉಂಟಾಗಿದೆ. ಸೋಮವಾರದಂದು ಚಿರಾಗ್ ಬಣದ ಹಿರಿಯ ಮುಖಂಡ ವಿನೋದ್ ಕುಮಾರ್ ಸಿಂಗ್ ಅವರು ಆಡಳಿತಾರೂಢ ಜೆಡಿಯು ಪಕ್ಷವನ್ನು ಸೇರಿದ್ದಾರೆ.

ಇದನ್ನೂ ಓದಿ: ತೇಜಸ್ವಿ, ಚಿರಾಗ್ ಪಾಸ್ವಾನ್ ಮೈತ್ರಿಗೆ ಸಮ್ಮತ ಸೂಚಿಸಿದ ಲಾಲು ಪ್ರಸಾದ್ ಯಾದವ್

ಪಕ್ಷವು ಒಡೆಯುವುದಕ್ಕಿಂತ ಮುಂಚೆ, ಚಿರಾಗ್ ಪಾಸ್ವಾನ್ ವಿರುದ್ಧ ನಡೆದ ನಾಯಕತ್ವ ದಂಗೆಯ ನಂತರವೂ ಪಕ್ಷದ ರಾಜಕೀಯ ಕಾರ್ಯತಂತ್ರಗಳನ್ನು ರೂಪಿಸುವಲ್ಲಿ ವಿನೋದ್‌ ಸಿಂಗ್ ಪ್ರಮುಖ ಪಾತ್ರ ವಹಿಸಿದ್ದರು. ಹಾಗಾಗಿ ಅವರನ್ನು ಚಿರಾಗ್‌ ಅವರ ಆಪ್ತ ನಾಯಕ ಎಂದು ಪರಿಗಣಿಸಲಾಗಿತ್ತು.

ಈ ಹಿಂದೆ ಜೆಡಿಯುನಲ್ಲೆ ಇದ್ದ ವಿನೋದ್‌ ಸಿಂಗ್‌‌ ಅವರು, 2015 ರಲ್ಲಿ ರಾಜಕೀಯ ಅವಕಾಶಕ್ಕಾಗಿ ಎಲ್‌ಜೆಪಿಗೆ ಸೇರಿದ್ದರು.

“ಚಿರಾಗ್ ಪಾಸ್ವಾನ್ ನೇತೃತ್ವದ ಎಲ್‌ಜೆಪಿ ಈಗ ಹಿರಿಯ ನಾಯಕರಿಗೆ ಯಾವುದೇ ಕಾಳಜಿ ಮತ್ತು ಗೌರವವಿಲ್ಲದೆ ನಿರಂಕುಶವಾಗಿ ಕೆಲಸ ಮಾಡಲು ಆರಂಭಿಸಿದೆ. ಇಂತಹ ಪರಿಸ್ಥಿತಿಯಲ್ಲಿ ನನಗೆ ಕೆಲಸ ಮಾಡಲು ಸಾಧ್ಯವಾಗುತ್ತಿಲ್ಲ. ಹೀಗಾಗಿ ನಾನು ಈ ಪಕ್ಷವನ್ನು ತೊರೆದಿದ್ದೇನೆ” ಎಂದು ಜೆಡಿಯು ಸೇರಿದ ನಂತರ ವಿನೋದ್‌ ಸಿಂಗ್ ಹೇಳಿದ್ದಾರೆ.

ಜೆಡಿಯು ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಲಾಲನ್ ಸಿಂಗ್ ಅವರು ವಿನೋದ್‌ ಸಿಂಗ್ ಅವರನ್ನು ಪಕ್ಷದ ಇತರ ನಾಯಕರ ಸಮ್ಮುಖದಲ್ಲಿ ಮತ್ತೆ ಜೆಡಿಯುಗೆ ಸೇರಿಸಿಕೊಂಡಿದ್ದಾರೆ.

ವಿನೋದ್ ಸಿಂಗ್ ಅವರಿಗೆ 2015 ಮತ್ತು 2020 ರ ವಿಧಾನಸಭಾ ಚುನಾವಣೆಯಲ್ಲಿ ಎಲ್‌ಜೆಪಿಯಿಂದ ಟಿಕೆಟ್ ನೀಡಲಾಗಿತ್ತು. ಅವರು ಎಲ್‌ಜೆಪಿ ಸಂಸದೀಯ ಮಂಡಳಿಯ ಸದಸ್ಯರಲ್ಲಿ ಒಬ್ಬರಾಗಿದ್ದು, ಎಲ್‌ಜೆಪಿಯ ಉಪಾಧ್ಯಕ್ಷರಾಗಿ ದೀರ್ಘಕಾಲ ಸೇವೆ ಸಲ್ಲಿಸಿದ್ದರು.

ಇದನ್ನೂ ಓದಿ: ನಿತೀಶ್‌ ಕುಮಾರ್‌ರವರ JDU ಯಾವಾಗ ಬೇಕಾದರೂ ಇಬ್ಭಾಗವಾಗಬಹುದು: ಚಿರಾಗ್ ಪಾಸ್ವಾನ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಉತ್ತರ ಪ್ರದೇಶ| ರಸ್ತೆ ಗುಂಡಿಗೆ ಇಳಿದ ಆಂಬ್ಯುಲೆನ್ಸ್; ಮರುಜೀವ ಪಡೆದ ಮೆದುಳು ನಿಷ್ಕ್ರಿಯಗೊಂಡಿದ್ದ ಮಹಿಳೆ!

ಉತ್ತರ ಪ್ರದೇಶದ ಬರೇಲಿಯ ಖಾಸಗಿ ಆಸ್ಪತ್ರೆಯೊಂದರ ವೈದ್ಯರು ಮೆದುಳು ನಿಷ್ಕ್ರಿಯ ಎಂದು ಘೋಷಿಸಿದ್ದು, ಮಹಿಳೆಯೊಬ್ಬರ ಮೃತದೇಹವನ್ನು ಅಂತ್ಯಕ್ರಿಯೆಗಾಗಿ ಮನೆಗೆ ಸಾಗಿಸುತ್ತಿದ್ದಾಗ ಆಂಬ್ಯುಲೆನ್ಸ್ ರಸ್ತೆಯ ಗುಂಡಿಗೆ ಇಳಿದ ನಂತರ ಆಕೆ ಜೀವಂತವಾಗಿರುವ ಲಕ್ಷಣಗಳು ಕಂಡುಬಂದು...

ಪಶ್ಚಿಮ ಏಷ್ಯಾ ಸಂಘರ್ಷ: ದುಬೈ ವಿಮಾನ ನಿಲ್ದಾಣದ ಮೇಲೆ ಇರಾನ್​ ಡ್ರೋನ್​ ದಾಳಿ; ಭಾರತೀಯ ಪ್ರಜೆ ಸೇರಿ ನಾಲ್ವರಿಗೆ ಗಾಯ

ದುಬೈ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಬಳಿ ಇರಾನಿನ ಎರಡು ಡ್ರೋಣಗಳಿಂದ ದಾಳಿ ನಡೆದಿದೆ. ಈ ದಾಳಿಯಲ್ಲಿ ಓರ್ವ ಭಾರತೀಯ ಸೇರಿದಂತೆ ನಾಲ್ವರು ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಅಲ್ಲಿನ ಸರ್ಕಾರದ ಪರವಾಗಿ ಪ್ರಕಟಣೆ ಹೊರಡಿಸಿರುವ...

ಜಾರ್ಖಂಡ್| ಆಂಬ್ಯುಲೆನ್ಸ್ ನಿರಾಕರಿಸಿದ ಆಸ್ಪತ್ರೆ ಸಿಬ್ಬಂದಿ; ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿದ ತಂದೆ

ಆಸ್ಪತ್ರೆ ಸಿಬ್ಬಂದಿ ಆಂಬ್ಯುಲೆನ್ಸ್ ನಿರಾಕರಿಸಿದ್ದರಿಂದ ಕೂಲಿಕಾರ ತಂದೆಯೊಬ್ಬ ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿರುವ ಹೃದಯವಿದ್ರಾವಕ ಘಟನೆಯೊಂದು ಜಾರ್ಖಂಡ್‌ನ ಪಶ್ಚಿಮ ಸಿಂಗ್ಭೂಮ್ ಜಿಲ್ಲೆಯಲ್ಲಿ ಬೆಳಕಿಗೆ ಬಂದಿದೆ. ಕಳೆದ ಶನಿವಾರ ನಡೆದಿದೆ ಎನ್ನಲಾದ...

ಮಧುರಾಂತಕಂ ಬಳಿ 14 ವರ್ಷದ ಬಾಲಕಿಯ ಮೇಲೆ ಸಾಮೂಹಿಕ ಅತ್ಯಾಚಾರ: ಪೋಕ್ಸೋ ಪ್ರಕರಣದಡಿ ಓರ್ವ ರೌಡಿ ಶೀಟರ್ ಬಂಧನ

ಚೆನ್ನೈ (ಚೆಂಗಲ್ಪಟ್ಟು): ಸೋಮವಾರ ರಾತ್ರಿ ಮಧುರಾಂಟಕಂ ಬಳಿಯ ಜಲಮೂಲದ ದಡದಲ್ಲಿ 14 ವರ್ಷದ ಬಾಲಕಿಯ ಮೇಲೆ ರೌಡಿ ಶೀಟರ್ ಮತ್ತು ಆತನ ಸಹಚರರು ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ ಎಂದು ವರದಿಯಾಗಿದೆ. ಪ್ರಕರಣ ಸಂಬಂಧ ಪೋಕ್ಸೋ...

ಮುಸ್ಲಿಂ ಮಹಿಳೆಯರ ವಿರುದ್ಧದ ಷರಿಯಾ ಕಾನೂನಿಗೆ ಏಕರೂಪ ನಾಗರಿಕ ಸಂಹಿತೆ ಪರಿಹಾರ: ಸುಪ್ರೀಂ ಕೋರ್ಟ್

"ಮುಸ್ಲಿಂ ವೈಯಕ್ತಿಕ ಕಾನೂನಿನಡಿಯಲ್ಲಿ ತಾರತಮ್ಯದ ಆನುವಂಶಿಕ ನಿಬಂಧನೆಗಳನ್ನು ಪರಿಹರಿಸಲು ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಅತ್ಯಂತ ಪರಿಣಾಮಕಾರಿ ಪರಿಹಾರ ಎಂದು ಸುಪ್ರೀಂ ಕೋರ್ಟ್ ಮಂಗಳವಾರ (ಮಾ.20) ಹೇಳಿದೆ. ಮುಖ್ಯ ನ್ಯಾಯಮೂರ್ತಿ ಸೂರ್ಯ...

ಮುಂಬೈ: ಬಜೆಟ್ ಅಧಿವೇಶನದ ನಡುವೆ ವಿಧಾನ ಭವನದ ಬಳಿ ವ್ಯಕ್ತಿಯೊಬ್ಬನಿಂದ ಆತ್ಮಹತ್ಯೆಗೆ ಯತ್ನ: ವಶಕ್ಕೆ ಪಡೆದ ಪೊಲೀಸರು

ಮುಂಬೈ: ಮಾರ್ಚ್ 11, ಬುಧವಾರ ಮಹಾರಾಷ್ಟ್ರ ವಿಧಾನ ಭವನದ ಹೊರಗೆ ವ್ಯಕ್ತಿಯೊಬ್ಬರು ಆತ್ಮಾಹುತಿ ಮಾಡಿಕೊಳ್ಳಲು ಯತ್ನಿಸಿರುವುದಾಗಿ ವರದಿಯಾಗಿದೆ. ತಕ್ಷಣವೇ ಮುಂಬೈ ಪೊಲೀಸರು ಆತನನ್ನು ಬಂಧಿಸಿದ್ದಾರೆ.  2026 ರ ಮಹಾರಾಷ್ಟ್ರ ಬಜೆಟ್ ಅಧಿವೇಶನ ವಿಧಾನ ಭವನದಲ್ಲಿ...

ಕೋವಿಡ್ ಲಸಿಕೆ ಕೆಲ ಸಾವುಗಳಿಗೆ ಕಾರಣವಾಗಿದೆ ಎಂದು ಅಧಿಕೃತ ದತ್ತಾಂಶ ತೋರಿಸಿದೆ, ಸರ್ಕಾರ ಜವಾಬ್ದಾರಿಯಿಂದ ನುಣುಚಿಕೊಳ್ಳಲು ಸಾಧ್ಯವಿಲ್ಲ : ಸುಪ್ರೀಂ ಕೋರ್ಟ್

ಸರ್ಕಾರದ ಅಧೀನದ ಸಾರ್ವಜನಿಕ ಆರೋಗ್ಯ ವ್ಯವಸ್ಥೆಯ ಮೂಲಕ ಕೋವಿಡ್ ಲಸಿಕೆಯನ್ನು ವಿತರಿಸಲಾಗಿದೆ. ಕೋವಿಡ್ ಲಸಿಕೆ ಪಡೆದ ಬಳಿಕ ಕೆಲ ಸಾವುಗಳು ಸಂಭವಿಸಿರುವುದನ್ನು ಅಧಿಕೃತ ದತ್ತಾಂಶಗಳೇ ದೃಢಪಡಿಸಿವೆ. ಹೀಗಿರುವಾಗ, ಲಸಿಕೆ ಹಾಕಿಸಿಕೊಂಡ ನಂತರ ಸಾವು...

ತಮಿಳುನಾಡು| ಪೊಲೀಸ್ ದೌರ್ಜನ್ಯದಿಂದ ಎರಡು ತಿಂಗಳಲ್ಲಿ ನಾಲ್ವರು ದಲಿತರು ಸಾವು

ವಿಧಾನಸಭೆ ಚುನಾವಣೆ ಹೊಸ್ತಿಲಲ್ಲಿರುವ ತಮಿಳುನಾಡಿನಲ್ಲಿ ಕಾನೂನು ಸುವ್ಯವಸ್ಥೆ ಹದಗೆಡುತ್ತಿರುವುದನ್ನು ಪ್ರತಿಬಿಂಬಿಸುವ ಆತಂಕಕಾರಿ ವಿಚಾರವೊಂದು ಮುನ್ನಲೆಗೆ ಬಂದಿದ್ದು, ಪೊಲೀಸ್ ಹಿಂಸಾಚಾರದಿಂದಾಗಿ ಎರಡು ತಿಂಗಳ ಅವಧಿಯಲ್ಲಿ ನಾಲ್ವರು ದಲಿತರು ಸಾವನ್ನಪ್ಪಿದ್ದಾರೆ. ಈ ಸಾವುಗಳಲ್ಲಿ, ಎರಡು ಪ್ರಕರಣಗಳನ್ನು...

ಪಶ್ಚಿಮ ಏಷ್ಯಾ ಸಂಘರ್ಷ| ಹಾರ್ಮುಜ್ ಜಲಸಂಧಿಯಲ್ಲಿ ಇರಾನಿನ 16 ಹಡಗುಗಳನ್ನು ನಾಶಪಡಿಸಿದ್ದಾಗಿ ವಿಡಿಯೋ ಹಂಚಿಕೊಂಡ ಅಮೆರಿಕ ಸೇನೆ

ಪಶ್ಚಿಮ ಏಷ್ಯಾದಿಂದ ತೈಲ ರಫ್ತನ್ನು ತಡೆಯಲು ಇರಾನ್ ಪ್ರಯತ್ನಿಸುತ್ತಿರುವುದರಿಂದ ಹಾರ್ಮುಜ್ ಜಲಸಂಧಿಯಲ್ಲಿ ಇರಾನಿನ 16 ಹಡಗುಗಳನ್ನು ನಾಶಪಡಿಸಿರುವುದಾಗಿ ಅಮೆರಿಕ ಸೇನೆ ಹೇಳಿಕೊಂಡಿದೆ.  ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಈ ಹಿಂದೆ ಇರಾನ್ ಜಲಸಂಧಿಯಲ್ಲಿ ಗಣಿಗಳನ್ನು...

13 ವರ್ಷಗಳಿಂದ ಕೋಮಾದಲ್ಲಿರುವ ಯುವಕನ ದಯಾಮರಣಕ್ಕೆ ಸುಪ್ರೀಂ ಕೋರ್ಟ್ ಅನುಮತಿ

ಕಳೆದ 13 ವರ್ಷಗಳಿಂದ ಕೋಮಾದಲ್ಲಿರುವ 32 ವರ್ಷದ ಹರೀಶ್ ರಾಣಾ ಎಂಬ ಯುವಕನ ಪರೋಕ್ಷ (ನಿಷ್ಕ್ರಿಯ) ದಯಾಮರಣಕ್ಕೆ ಸುಪ್ರೀಂ ಕೋರ್ಟ್ ಬುಧವಾರ (ಮಾ.11) ಅನುಮತಿ ನೀಡಿದೆ ಎಂದು livelaw.in ವರದಿ ಮಾಡಿದೆ. ದೆಹಲಿ ಮೂಲದ ಹರೀಶ್...