Homeಮುಖಪುಟದೇಶದ ಪ್ರಮುಖ ಆರ್‌ಟಿಐ ಕಾರ್ಯಕರ್ತ ಸಾಕೇತ್‌ ಗೋಖಲೆ ತೃಣಮೂಲ ಪಕ್ಷಕ್ಕೆ ಸೇರ್ಪಡೆ

ದೇಶದ ಪ್ರಮುಖ ಆರ್‌ಟಿಐ ಕಾರ್ಯಕರ್ತ ಸಾಕೇತ್‌ ಗೋಖಲೆ ತೃಣಮೂಲ ಪಕ್ಷಕ್ಕೆ ಸೇರ್ಪಡೆ

- Advertisement -
- Advertisement -

ದೇಶದ ಪ್ರಮುಖ ಆರ್‌ಟಿಐ ಕಾರ್ಯಕರ್ತ, ಹೋರಾಟಗಾರ ಸಾಕೇತ್ ಗೋಖಲೆ ಅವರು ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್‌ ಪಕ್ಷಕ್ಕೆ ಗುರುವಾರದಂದು ಸೇರ್ಪಡೆಗೊಂಡಿದ್ದಾರೆ. ಈ ಬಗ್ಗೆ ಟ್ವಿಟರ್‌ನಲ್ಲಿ ಬರೆದಿರುವ ಅವರು, ಮಮತಾ ಬ್ಯಾನರ್ಜಿ ಮತ್ತು ಅಭಿಷೇಕ್‌ ನೇತೃತ್ವದ ತೃಣಮೂಲ ಕಾಂಗ್ರೆಸ್‌ ಪಕ್ಷಕ್ಕೆ ಸೇರ್ಪಡೆಯಾಗುವ ಮೂಲಕ ಗೌರವಕ್ಕೆ ಪಾತ್ರನಾದೆ ಎಂದು ಹೇಳಿದ್ದಾರೆ.

ರೈತ ಹೋರಾಟದ ಬಗ್ಗೆ ಸುಳ್ಳು ಪ್ರಚಾರ, ಪ್ರಯೋಗಗಳನ್ನು ಪೂರೈಸದ ಕೊರೊನಾ ಲಸಿಕೆಗೆಗೆ ಅನುಮತಿ ಹೀಗೆ ಒಕ್ಕೂಟ ಸರ್ಕಾರದ ಹಲವಾರು ಕೃತ್ಯಗಳನ್ನು ಸಾಕೇತ್‌ ಗೋಖಲೆ ಬಹಿರಂಗ ಪಡಿಸಿದ್ದರು. ಅವರು ತೃಣಮೂಲ ಪಕ್ಷದ ನಾಯಕರಾದ ಸುಗತ ರಾಯ್, ಯಶವಂತ ಸಿನ್ಹಾ ಮತ್ತು ಡೆರೆಕ್‌ ಒಬ್ರಿಯಾನ್ ಸಮ್ಮುಖದಲ್ಲಿ ಪಕ್ಷವನ್ನು ಸೇರಿದ್ದಾರೆ.

ಇದನ್ನೂ ಓದಿ: ಅತ್ಯಾಚಾರ ಸಂತ್ರಸ್ತೆಯ ಗುರುತು ಬಹಿರಂಗ: BJP ಐಟಿ ಸೆಲ್‌ ಮುಖ್ಯಸ್ಥ ಅಮಿತ್‌ ಮಾಳವಿಯನನ್ನು ಬಂಧಿಸಲು ಸಾಕೇತ್‌ ಗೋಖಲೆ ಆಗ್ರಹ!

ಈ ಬಗ್ಗೆ ಟ್ವಿಟರ್‌ನಲ್ಲಿ ಪ್ರತಿಕ್ರಿಯಿಸಿದ ಸಾಕೇತ್ ಗೋಖಲೆ, “ಮಮತಾ ಬ್ಯಾನರ್ಜಿ ಮತ್ತು ಅಭಿಷೇಕ್‌ ನೇತೃತ್ವದ ತೃಣಮೂಲ ಕಾಂಗ್ರೆಸ್‌ ಪಕ್ಷಕ್ಕೆ ಸೇರ್ಪಡೆಯಾಗುವ ಮೂಲಕ ಗೌರವಕ್ಕೆ ಪಾತ್ರನಾದೆ. ನಮ್ಮ ಪ್ರಜಾಪ್ರಭುತ್ವವನ್ನು ರಕ್ಷಿಸುವ ಹೋರಾಟದಲ್ಲಿ, ಎಲ್ಲಾ ಕೈಗಳ ಅಗತ್ಯವಿದೆ. ಇದಕ್ಕಾಗಿ ನಾನು ನನ್ನ ಕೈಲಾದ ಕೊಡುಗೆಯನ್ನು ನೀಡುತ್ತೇನೆ ಎಂದು ಆಶಿಸುತ್ತೇನೆ. ನಗುಮುಖದೊಂದಿಗೆ ನನ್ನನ್ನು ಆತ್ಮೀಯವಾಗಿ ಸ್ವಾಗತಿಸಿದ್ದಕ್ಕೆ ಧನ್ಯವಾದಗಳು” ಎಂದು ಹೇಳಿದ್ದಾರೆ.

“ನನ್ನ ಯುದ್ದವು ಎಂದಿನಂತೆ ಮುಂದುವರೆದಿದೆ. ನಾನು ಮಾಡುವ ಕೆಲಸವನ್ನು ಇನ್ನೂ ಹೆಚ್ಚಿನ ಶಕ್ತಿಯಿಂದ ಮುಂದುವರಿಸುತ್ತೇನೆ. ಪ್ರತಿಪಕ್ಷಗಳ ಒಗ್ಗಟ್ಟಿನ ಅಗತ್ಯವು ಹಿಂದೆಂದಿಗಿಂತಲೂ ಇಂದು ಹೆಚ್ಚಾಗಿದೆ. ಬಿಜೆಪಿಯ ಫ್ಯಾಸಿಸಂ ಎಂಬ ರಾಕ್ಷಸರ ವಿರುದ್ಧ ಹೋರಾಡುತ್ತಿರುವ ಎಲ್ಲರೂ ನನ್ನ ಸ್ನೇಹಿತರು ಮತ್ತು ಮಿತ್ರರಾಗಿದ್ದಾರೆ” ಎಂದು ಸಾಕೇತ್‌ ಗೋಖಲೆ ಹೇಳಿದ್ದಾರೆ.

ಇದನ್ನೂ ಓದಿ: ರಂಜನ್ ಗೊಗೊಯ್ ವಿರುದ್ಧ ನ್ಯಾಯಾಂಗ ನಿಂದನೆ ಪ್ರಕರಣ ದಾಖಲಿಸಿ: ಸಾಕೇತ್ ಗೋಖಲೆ ಆಗ್ರಹ

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಬಿಸಿಲಿನ ತಾಪವಿದ್ದರೂ ಬಿಜೆಪಿ ಒತ್ತಡದಿಂದ ಬಂಗಾಳದಲ್ಲಿ 7 ಹಂತದ ಚುನಾವಣೆ: ಅಭಿಷೇಕ್ ಬ್ಯಾನರ್ಜಿ

0
ಪಶ್ಚಿಮ ಬಂಗಾಳದಲ್ಲಿ ಸಾಕಷ್ಟು ಬಿಸಿಲಿನ ತಾಪವಿದ್ದರೂ, ಏಳು ಹಂತಗಳಲ್ಲಿ ಲೋಕಸಭೆ ಚುನಾವಣೆ ಆಯೋಜಿಸುವಂತೆ ಬಿಜೆಪಿ ಚುನಾವಣಾ ಆಯೋಗವನ್ನು ಒತ್ತಾಯಿಸಿದೆ ಎಂದು ಟಿಎಂಸಿಯ ನಾಯಕ ಅಭಿಷೇಕ್ ಬ್ಯಾನರ್ಜಿ ಮಂಗಳವಾರ ಆರೋಪಿಸಿದ್ದಾರೆ. ಟಿಎಂಸಿಯ ಡಾರ್ಜಿಲಿಂಗ್ ಅಭ್ಯರ್ಥಿ ಗೋಪಾಲ್...