Homeಕರ್ನಾಟಕಸಮ್ಮಿಶ್ರ ಸರ್ಕಾರ ಉರುಳಲು ಪೆಗಾಸಸ್ ಕಾರಣ? HDK, ಸಿದ್ದು ಆಪ್ತ ಸಹಾಯಕರು, ಜಿ.ಪರಮೇಶ್ವರ್ ಫೋನ್ ಹ್ಯಾಕ್!

ಸಮ್ಮಿಶ್ರ ಸರ್ಕಾರ ಉರುಳಲು ಪೆಗಾಸಸ್ ಕಾರಣ? HDK, ಸಿದ್ದು ಆಪ್ತ ಸಹಾಯಕರು, ಜಿ.ಪರಮೇಶ್ವರ್ ಫೋನ್ ಹ್ಯಾಕ್!

ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ ಅವರ ಭದ್ರತಾ ಸಿಬ್ಬಂದಿಯಾಗಿದ್ದ ಮಂಜುನಾಥ್ ಮುದ್ದೇಗೌಡ ಎಂಬ ಪೊಲೀಸ್ ಅಧಿಕಾರಿಯ ಪೋನ್ ನಂಬರ್ ಕೂಡ ಹ್ಯಾಕ್ ಮಾಡಲಾಗಿದೆ.

- Advertisement -
- Advertisement -

ಪೆಗಾಸಸ್ ಕಳೆದ ಎರಡು ದಿನಗಳಲ್ಲಿ ದೇಶದಲ್ಲಿ ಕೋಲಾಹಲ ಸೃಷ್ಟಿಸಿದೆ. ಆದರೆ, ಇಲ್ಲಿಯವರೆಗೆ ಕರ್ನಾಟಕದ ಯಾರ ಹೆಸರು ಕೇಳಿ ಬಂದಿರಲಿಲ್ಲ. ಆದರೆ, ಇಂದು ದಿ ವೈರ್ ಬಿಡುಗಡೆ ಮಾಡಿರುವ ವರದಿಯಲ್ಲಿ ಕರ್ನಾಟಕದ 2019 ರ ಸಮ್ಮಿಶ್ರ ಸರ್ಕಾರ ಉರುಳಲು ಈ ಪೆಗಾಸಸ್ ಗೂಢಚರ್ಯೆ ಕಾರಣವಾಗಿದೆಯೇ ಎಂಬ ಅನುಮಾನಗಳಿಗೆ ಕಾರಣವಾಗಿದೆ.

ಮಾಜಿ ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯ ಮತ್ತು ಎಚ್.ಡಿ.ಕುಮಾರಸ್ವಾಮಿ ಮತ್ತು ಮಾಜಿ ಉಪಮುಖ್ಯಮಂತ್ರಿ ಜಿ.ಪರಮೇಶ್ವರ ಅವರ ಮೇಲೆ ಪೆಗಾಸಸ್ ಕಣ್ಗಾವಲು ಇದ್ದದ್ದು ಈಗ ಬಹಿರಂಗವಾಗಿದೆ. ಸಿದ್ದರಾಮಯ್ಯ ಮತ್ತು ಎಚ್.ಡಿ.ಕುಮಾರಸ್ವಾಮಿ ಅವರ ವೈಯಕ್ತಿಕ ಕಾರ್ಯದರ್ಶಿಗಳ ಮೊಬೈಲ್ ಫೋನ್ ಸಂಖ್ಯೆಗಳನ್ನು ಹ್ಯಾಕ್ ಮಾಡಲಾಗಿದೆ ಎಂದು ಪ್ಯಾರಿಸ್ ಮೂಲದ ಫಾರ್ಬಿಡನ್ ಸ್ಟೋರೀಸ್‌ ಸಂಸ್ಥೆ ನಡೆಸಿದ ತನಿಖೆಯಿಂದ ಬಹಿರಂಗಗೊಂಡಿದೆ.

ಈ ಬೆಳವಣಿಗೆ ರಾಜ್ಯ ರಾಜಕೀಯದಲ್ಲಿ ಸಂಚಲನಕ್ಕೆ ಕಾರಣವಾಗಲಿದೆ. ಪೆಗಾಸಸ್ ಗೂಢಚರ್ಚೆಯಿಂದಾಗಿಯೇ 2019 ರ ಜುಲೈನಲ್ಲಿ ಕರ್ನಾಟಕದಲ್ಲಿ ಆಡಳಿತ ನಡೆಸುತ್ತಿದ್ದ ಕಾಂಗ್ರೆಸ್-ಜೆಡಿಎಸ್‌ ನೇತೃತ್ವದ ಸಮ್ಮಿಶ್ರ ಸರ್ಕಾರ ಉರುಳಲು ಕಾರಣವಾಯಿತೆ ಎಂಬ ಅನುಮಾನಗಳು ಶುರುವಾಗಿವೆ.

ಇದನ್ನೂ ಓದಿ: ನ್ಯಾ. ರಂಜನ್ ಗೊಗೊಯ್ ವಿರುದ್ಧ ಲೈಂಗಿಕ ಕಿರುಕುಳ ಆರೋಪ ಮಾಡಿದ್ದಾಕೆಯ ಇಡೀ ಕುಟುಂಬದ ಮೇಲೆ ಪೆಗಾಸಸ್ ಕಣ್ಗಾವಲು!

2019 ರಲ್ಲಿ ಜಾತ್ಯತೀತ ಜನತಾದಳ ಮತ್ತು ಕಾಂಗ್ರೆಸ್ ನೇತೃತ್ವದ ಸಮ್ಮಿಶ್ರ ಸರ್ಕಾರ ಉರುಳಿಸಲು ಬಿಜೆಪಿ ಸರ್ವ ಪ್ರಯತ್ನ ನಡೆಸುತ್ತಿತ್ತು. ಸರ್ಕಾರ ಮತ್ತು ಭಾರತೀಯ ಜನತಾ ಪಕ್ಷ  ನಡುವೆ ತೀವ್ರ ಜಟಾಪಟಿ ನಡೆಯುತ್ತಿದ್ದ ಸಮಯದಲ್ಲಿ ಕರ್ನಾಟಕದ ಕೆಲವು ಪ್ರಮುಖ ರಾಜಕೀಯ ವ್ಯಕ್ತಿಗಳ ದೂರವಾಣಿ ಸಂಖ್ಯೆಗಳನ್ನು ಹ್ಯಾಕ್ ಮಾಡಲು ಆಯ್ಕೆ ಮಾಡಲಾಗಿದೆ ಎಂದು ವರದಿ ಹೇಳಿದೆ.

ಇದೇ ಸಂದರ್ಭದಲ್ಲಿ ಸಮ್ಮಿಶ್ರ ಸರ್ಕಾರದ 17 ಶಾಸಕರು ತಮ್ಮ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿ ಸಮ್ಮಿಶ್ರ ಸರ್ಕಾರ ಪತನಕ್ಕೆ ಕಾರಣರಾಗಿದ್ದರು. ನಂತರ ಅವರೆಲ್ಲರೂ ಬಿಜೆಪಿ ಸೇರಿ ಬಹುತೇಕರು ಉಪ ಚುನಾವಣೆಯಲ್ಲಿ ಆಯ್ಕೆಯಾದಾಗ ಈ ಬೆಳವಣಿಗೆಗಳು ನಡೆದಿವೆ ಎಂದು ವರದಿ ಬಹಿರಂಗ ಪಡಿಸಿದೆ.

ಸೋರಿಕೆಯಾಗಿರುವ ದತ್ತಾಂಶದ ಪ್ರಕಾರ, ಆಗಿನ ಸಮ್ಮಿಶ್ರ ಸರ್ಕಾರದಲ್ಲಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಅವರ ಆಪ್ತ ಸಹಾಯಕರಾಗಿದ್ದ ಸತೀಶ್ ಅವರಿಗೆ ಸಂಬಂಧಿಸಿದ ಎರಡು ಫೋನ್ ಸಂಖ್ಯೆಗಳನ್ನು ಪೆಗಾಸಸ್‌ ಟಾರ್ಗೆಟ್ ಮಾಡಲಾಗಿದೆ. 2019 ರ ಮಧ್ಯದಲ್ಲಿ ಗೂಢಚರ್ಯೆಗೆ ಒಳಪಡಿಸಲಾಗಿದೆ. ಸತೀಶ್ ಅವರು 2019 ರಲ್ಲಿ ಇದೆ ಫೋನ್ ಸಂಖ್ಯೆಯನ್ನು ಬಳಸುತ್ತಿದ್ದರು ಎಂದು ದೃಢಪಡಿಸಿದ್ದಾರೆ ಎಂದು ದಿ ವೈರ್ ವರದಿ ಮಾಡಿದೆ. ಈ ಸಮಯದಲ್ಲಿ ಕಾಂಗ್ರೆಸ್-ಜೆಡಿ (ಎಸ್) ಸರ್ಕಾರವು ಬಂಡಾಯ ಶಾಸಕರನ್ನು ಮನವೊಲಿಸಲು ಹೆಣಗಾಡುತ್ತಿತ್ತು.

ಇನ್ನು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಆಪ್ತ ಸಹಾಯಕರಾಗಿದ್ದ ವೆಂಕಟೇಶ್ ಅವರ ದೂರವಾಣಿ ಸಂಖ್ಯೆಯನ್ನು ಸಹ ಇದೇ ಅವಧಿಯಲ್ಲಿ ಸೇರಿಸಲಾಗಿದೆ ಎಂದು ವರದಿ ಬಹಿರಂಗ ಪಡಿಸಿದೆ.

ಇದನ್ನೂ ಓದಿ: Explainer: ಏನಿದು ಪೆಗಾಸಸ್? ಹೇಗೆ ಫೋನ್ ಹ್ಯಾಕ್ ಮಾಡುತ್ತದೆ? ಅಪಾಯಗಳೇನು?

ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹಲವು ವರ್ಷಗಳಿಂದ ವೈಯಕ್ತಿಕ ಫೋನ್ ಬಳಸುತ್ತಿಲ್ಲ ಮತ್ತು ಫೋನ್ ಸಂಭಾಷಣೆಗಾಗಿ ಅವರು ತಮ್ಮ ಆಪ್ತ ಸಹಾಯಕರನ್ನು ಅವಲಂಬಿಸಿದ್ದಾರೆ ಎಂದು ಸಿದ್ದರಾಮಯ್ಯ ಅವರ ಆಪ್ತ ಮೂಲಗಳು ತಿಳಿಸಿವೆ. ಆದ್ದರಿಂದ, ವೆಂಕಟೇಶ್ ಅವರ ಫೋನ್ ಸಂಖ್ಯೆಯನ್ನು ಪೆಗಾಸಸ್‌ ಗೂಢಚರ್ಯೆಗೆ ಆಯ್ಕೆ ಮಾಡಿರುವುದು ಅಪಾರ ಮಹತ್ವವನ್ನು ಪಡೆದುಕೊಂಡಿದೆ ಎಂದು ದಿ ವೈರ್‌ ವರದಿ ಮಾಡಿದೆ.

ಇವರ ಜೊತೆಗೆ  ಮಾಜಿ ಪ್ರಧಾನಿ ಮತ್ತು ಜೆಡಿಎಸ್ ಅಧ್ಯಕ್ಷ ಎಚ್.ಡಿ.ದೇವೇಗೌಡ ಅವರ ಭದ್ರತಾ ಸಿಬ್ಬಂದಿಯಲ್ಲಿ ಒಬ್ಬರಾಗಿದ್ದ ಮಂಜುನಾಥ್ ಮುದ್ದೇಗೌಡ ಎಂಬ ಪೊಲೀಸ್ ಅಧಿಕಾರಿಯ ಪೋನ್ ನಂಬರ್ ಕೂಡ ಹ್ಯಾಕ್ ಮಾಡಲಾಗಿದೆ. ನನ್ನ ಮೊಬೈಲ್ ಸಂಖ್ಯೆ ಎಂದು ಪೊಲೀಸ್ ಅಧಿಕಾರಿ ದೃಢಪಡಿಸಿದ್ದಾರೆ.  ಅವರ ಸಂಖ್ಯೆಯನ್ನು 2019 ರ ಮಧ್ಯದಲ್ಲಿ ಹ್ಯಾಕ್ ಮಾಡಲಾಗಿದೆ.

ಇದೇ ರೀತಿಯಾಗಿ, ಕಾಂಗ್ರೆಸ್ ಉಪಮುಖ್ಯಮಂತ್ರಿ ಜಿ. ಪರಮೇಶ್ವರ್‌ ಅವರ ಮೊಬೈಲ್ ನಂಬರ್ ಕೂಡ ಹ್ಯಾಕ್ ಮಾಡಲಾಗಿದೆ.  2019 ರಲ್ಲಿ ಅದೇ ಫೋನ್ ಸಂಖ್ಯೆಯನ್ನು ಬಳಸುತ್ತಿದ್ದು, ಕೆಲವು ತಿಂಗಳುಗಳ ಹಿಂದೆ ಅದರ ಬಳಕೆ ನಿಲ್ಲಿಸಿದ್ದೇನೆ. ಆ ಸಮಯದಲ್ಲಿ ನಾನು ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷನಾಗಿರಲಿಲ್ಲ ಎಂದು ಮಾಜಿ ಉಪಮುಖ್ಯಮಂತ್ರಿ ದಿ ವೈರ್‌ಗೆ ತಿಳಿಸಿದ್ದಾರೆ.

ಇಸ್ರೇಲಿ ಕಂಪನಿ ಎನ್‌ಎಸ್‌ಒ ಗ್ರೂಪ್‌ನ ಪೆಗಾಸಸ್ ಗೂಢಚರ್ಯೆ ತಂತ್ರಾಂಶ ಬಳಸಿಕೊಂಡು ಪ್ರಸ್ತುತ ಸಂಪುಟದಲ್ಲಿರುವ ಇಬ್ಬರು ಮಂತ್ರಿಗಳು, 40 ಕ್ಕೂ ಹೆಚ್ಚು ಪತ್ರಕರ್ತರು, ಮೂವರು ವಿರೋಧ ಪಕ್ಷದ ನಾಯಕರು ಮತ್ತು ಒಬ್ಬ ನ್ಯಾಯಾಧೀಶರು, ಹಲವಾರು ಉದ್ಯಮಿಗಳು ಮತ್ತು  ಹೋರಾಟಗಾರರು ಸೇರಿದಂತೆ 300 ಕ್ಕೂ ಹೆಚ್ಚು ಜನರ ಮೊಬೈಲ್ ಫೋನ್ ಸಂಖ್ಯೆಗಳನ್ನು ಹ್ಯಾಕ್ ಮಾಡಲಾಗಿದೆ ಎಂದು ಪ್ಯಾರಿಸ್ ಮೂಲದ ಫಾರ್ಬಿಡನ್ ಸ್ಟೋರೀಸ್‌ ಸಂಸ್ಥೆ ನಡೆಸಿದ ತನಿಖೆಯಿಂದ ಬಹಿರಂಗಗೊಂಡಿದೆ.

ಇದಕ್ಕೆ ಪ್ರತಿಕ್ರಿಯಿಸಿರುವ ಕರ್ನಾಟಕ ಕಾಂಗ್ರೆಸ್, “ಇಸ್ರೇಲಿ ಗೂಡಾಚಾರಿಕೆ ಸಾಫ್ಟವೇರ್ ಪೆಗಾಸಸ್ ಮೂಲಕ ನಮ್ಮ ನಾಯಕರಾದ ಸಿದ್ದರಾಮಯ್ಯ ಹಾಗೂ ಡಾ.ಜಿ.ಪರಮೇಶ್ವರ್‌ ಅವರ ಫೋನ್‌ಗಳನ್ನು ಕದ್ದು ನೋಡಲಾಗುತ್ತಿತ್ತು ಎಂಬ ವಿಚಾರ ಬೆಳಕಿಗೆ ಬಂದಿದೆ. ಬಿಜೆಪಿ ಪಕ್ಷ ಇಂತಹ ನೀಚ ಕೃತ್ಯಕ್ಕೆ ಇಳಿಯುವ ಮೂಲಕ ಅದೊಂದು ರಾಜಕೀಯ ಪಕ್ಷವಾಗಿರದೆ, ವಿಧ್ವಂಸಕ ಕೃತ್ಯವೆಸಗುವ ಸಂಘಟನೆ ಎಂದು ಸಾಬೀತು ಮಾಡಿದೆ” ಎಂದು ಆಕ್ರೋಶ ವ್ಯಕ್ತಪಡಿಸಿದೆ.


ಇದನ್ನೂ ಓದಿ: ಫೋನ್ ಹ್ಯಾಕ್ ಮಾಡಿಯೂ ಬಿಜೆಪಿಗೆ ಚುನಾವಣೆ ಗೆಲ್ಲಲು ಸಾಧ್ಯವಾಗಲಿಲ್ಲ: ಟಿಎಂಸಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...