Homeಮುಖಪುಟ'ಇನ್ನಾದರೂ ಪಾಠ ಕಲಿಯಿರಿ': ಹರಿಯಾಣ ಸೋಲಿನ ಬಗ್ಗೆ ಕಾಂಗ್ರೆಸ್‌ಗೆ ಶಿವಸೇನೆ (ಯುಬಿಟಿ) ವಾಗ್ದಾಳಿ

‘ಇನ್ನಾದರೂ ಪಾಠ ಕಲಿಯಿರಿ’: ಹರಿಯಾಣ ಸೋಲಿನ ಬಗ್ಗೆ ಕಾಂಗ್ರೆಸ್‌ಗೆ ಶಿವಸೇನೆ (ಯುಬಿಟಿ) ವಾಗ್ದಾಳಿ

- Advertisement -
- Advertisement -

ಹರಿಯಾಣ ವಿಧಾನಸಭಾ ಚುನಾವಣೆಯಲ್ಲಿ ಇಂಡಿಯಾ ಮೈತ್ರಿಕೂಟದ ಪ್ರಮುಖ ಪಕ್ಷ ಕಾಂಗ್ರೆಸ್ ಸೋಲಿಗೆ ಶಿವಸೇನೆ (ಯುಬಿಟಿ) ನಾಯಕ ಸಂಜಯ್ ರಾವುತ್ ಬುಧವಾರ ಟೀಕಿಸಿದ್ದು, ”ಮಿತ್ರಪಕ್ಷಗಳ ಬೆಂಬಲವಿಲ್ಲದೆ ಗೆಲ್ಲಬಹುದು ಎಂದು ಪಕ್ಷ ನಂಬಿತ್ತು” ಎಂದು ಹೇಳಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ

ಶಿವಸೇನೆ (ಯುಬಿಟಿ) ಮುಖವಾಣಿ ಸಾಮ್ನಾದ ಸಂಪಾದಕೀಯದಲ್ಲಿ ಬರೆದಿರುವ ಸಂಜಯ್ ರಾವತ್, ಕಾಂಗ್ರೆಸ್ “ಗೆಲುವಿನ ಆಟವನ್ನು ಸೋಲನ್ನಾಗಿ ಪರಿವರ್ತಿಸಿದೆ” ಎಂದು ಪ್ರತಿಪಾದಿಸಿದ್ದಾರೆ. ಹರಿಯಾಣದಲ್ಲಿ ಕಾಂಗ್ರೆಸ್ ಪಕ್ಷದ ಸೋಲಿಗೆ “ಅತಿಯಾದ ಆತ್ಮವಿಶ್ವಾಸ” ಮತ್ತು ಸ್ಥಳೀಯ ನಾಯಕರ “ಅಹಂಕಾರ” ಕಾರಣ ಎಂದು ಅವರು ಹೇಳಿದ್ದಾರೆ.

ಅಭ್ಯರ್ಥಿ ಆಯ್ಕೆಯಲ್ಲಿ ಕುಮಾರಿ ಸೆಲ್ಜಾ ಅವರಂತಹ ಪ್ರಮುಖ ವ್ಯಕ್ತಿಗಳನ್ನು ಬದಿಗಿಟ್ಟು, ಹರಿಯಾಣ ಕಾಂಗ್ರೆಸ್ ನಾಯಕ ಭೂಪಿಂದರ್ ಸಿಂಗ್ ಹೂಡಾ ಅವರ ಪ್ರಾಬಲ್ಯವನ್ನು ಸಂಪಾದಕೀಯವು ವಿಶೇಷವಾಗಿ ಟೀಕಿಸಿದೆ. ಈ ಆಂತರಿಕ ಭಿನ್ನಾಭಿಪ್ರಾಯವು ಕಾಂಗ್ರೆಸ್‌ನ ಸಂಘಟನಾ ಶಕ್ತಿಯನ್ನು ದುರ್ಬಲಗೊಳಿಸಿದ್ದು ಮತ್ತು ಕಳಪೆ ಮಟ್ಟದ ಪ್ರಚಾರಕ್ಕೆ ಕಾರಣವಾಯಿತು ಎಂದು ಅದು ವಾದಿಸಿದೆ.

ಇದನ್ನೂಓದಿ: ವೈದ್ಯೆ ಅತ್ಯಾಚಾರ-ಕೊಲೆ ಪ್ರಕರಣ: ಆರೋಪಿ ರಾಯ್‌ ವಿರುದ್ಧ 11 ಸಾಕ್ಷ್ಯಗಳನ್ನು ಚಾರ್ಜ್‌ಶೀಟ್‌ನಲ್ಲಿ ಉಲ್ಲೇಖಿಸಿದ ಸಿಬಿಐ

ಹರಿಯಾಣದಲ್ಲಿ ಬಿಜೆಪಿ ವಿರೋಧಿ ಭಾವನೆ ಇದ್ದು, ಕಾಂಗ್ರೆಸ್ ಪ್ರಚಂಡ ಗೆಲುವು ಕಾಣುತ್ತದೆ ಎಂದು ಹಲವರು ನಿರೀಕ್ಷೆಯಿಟ್ಟಿದ್ದರು ಸಂಪಾದಕೀಯ ಹೇಳಿದೆ. ಆದಾಗ್ಯೂ, ಬಿಜೆಪಿ ವಿರೋಧಿ ವಾತಾವರಣವನ್ನು ಲಾಭ ಮಾಡಿಕೊಳ್ಳುವಲ್ಲಿ ಪಕ್ಷದ ಆಂತರಿಕ ಕಲಹವು ಬಾರಿ ದೊಡ್ಡ ವೈಫಲ್ಯ ಅನುಭವಿಸಿದೆ ಎಂದು ಸಂಪಾದಕೀಯ ಹೇಳಿಕೊಂಡಿದೆ.

ಗೆಲ್ಲುವ ಪಂದ್ಯವನ್ನು ಸೋಲನ್ನಾಗಿ ಪರಿವರ್ತಿಸುವುದು ಹೇಗೆ ಎಂಬುದನ್ನು ಕಾಂಗ್ರೆಸ್‌ನಿಂದ ಎಲ್ಲರೂ ಕಲಿಯಬೇಕು ಎಂದು ಸಂಪಾದಕೀಯ ಹೇಳಿದೆ. ಹರಿಯಾಣದಲ್ಲಿ ಪಕ್ಷದ ಸೋಲಿನಿಂದ ಪಾಠ ಕಲಿಯುವಂತೆ ಸಂಪಾದಕೀಯವು ಮಹಾರಾಷ್ಟ್ರದ ಕಾಂಗ್ರೆಸ್ ನಾಯಕರಿಗೆ ಎಚ್ಚರಿಕೆ ನೀಡಿದೆ.

ಕಾಂಗ್ರೆಸ್ ಮೈತ್ರಿಯ ಭಾಗವಾಗಿ ಚುನಾವಣೆಯಲ್ಲಿ ಸ್ಪರ್ಧಿಸಿದ್ದರೆ ಫಲಿತಾಂಶಗಳು ವಿಭಿನ್ನವಾಗಿರುತ್ತಿದ್ದವು ಎಂದು ರಾವತ್ ಪ್ರತಿಪಾದಿಸಿದ್ದಾರೆ. “ಹರಿಯಾಣದಲ್ಲಿ ಇಂಡಿಯಾ ಮೈತ್ರಿಕೂಟ ಗೆಲ್ಲಲು ಸಾಧ್ಯವಾಗಲಿಲ್ಲ ಏಕೆಂದರೆ ಕಾಂಗ್ರೆಸ್ ಸ್ವಂತವಾಗಿ ಗೆಲ್ಲುತ್ತೇವೆ ಮತ್ತು ಅಧಿಕಾರದಲ್ಲಿ ತನಗೆ ಬೇರೆ ಪಾಲುದಾರರ ಅಗತ್ಯವಿಲ್ಲ ಎಂದು ಭಾವಿಸಿತ್ತು” ಎಂದು ಸಂಪಾದಕೀಯ ಹೇಳಿದೆ.

ಶಿವಸೇನೆ (ಯುಬಿಟಿ) ಸಂಸದೆ ಪ್ರಿಯಾಂಕಾ ಚತುರ್ವೇದಿ ಕೂಡ ಹರಿಯಾನ ಸೋಲಿನ ಬಗ್ಗೆ ಕಾಂಗ್ರೆಸ್ ಆತ್ಮಾವಲೋಕನ ಮಾಡಿಕೊಳ್ಳುವಂತೆ ಕರೆ ನೀಡಿದ್ದಾರೆ.

ಇದನ್ನೂಓದಿ: ಇಬ್ಬರು ಮಾಜಿ ಸಿಎಂಗಳಿಗೆ ಹನಿಟ್ರ್ಯಾಪ್ ಮಾಡಿ ಸಚಿವ ಸ್ಥಾನ ಪಡೆದಿದ್ದ ಮುನಿರತ್ನ : ಸಂತ್ರಸ್ತ ಮಹಿಳೆ ಗಂಭೀರ ಆರೋಪ

“ಜಮ್ಮು ಕಾಶ್ಮೀರ ವಿಧಾನಸಭಾ ಚುನಾವಣೆಯಲ್ಲಿ ಇಂಡಿಯಾ ಮೈತ್ರಿಕೂಟವು ಉತ್ತಮವಾಗಿ ಹೋರಾಡಿ ಸರ್ಕಾರ ರಚಿಸಲು ಸಜ್ಜಾಗಿದ್ದಾರೆ. ಹರಿಯಾಣದಲ್ಲಿ ಕಾಂಗ್ರೆಸ್ ಸೋಲನ್ನು ಅನುಭವಿಸಬೇಕಾಯಿತು. ಆಡಳಿತ ವಿರೋಧಿ ಅಲೆಯ ನಂತರವೂ ಹರಿಯಾಣದಲ್ಲಿ ಬಿಜೆಪಿ ಸರ್ಕಾರವನ್ನು ರಚಿಸಿದೆ. ಅದಕ್ಕಾಗಿ ನಾನು ಅವರನ್ನು ಅಭಿನಂದಿಸುತ್ತೇನೆ. ಕಾಂಗ್ರೆಸ್ ತನ್ನ ಸೋಲಿಗೆ ಕಾರಣಗಳ ಬಗ್ಗೆ ಆತ್ಮಾವಲೋಕನ ಮಾಡಿಕೊಳ್ಳಬೇಕು” ಎಂದು ಅವರು ಹೇಳಿದ್ದಾರೆ.

ಹರಿಯಾಣ ವಿಧಾನಸಭೆಯ 90 ಸ್ಥಾನಗಳಲ್ಲಿ ಬಿಜೆಪಿ 48 ಸ್ಥಾನಗಳನ್ನು ಗೆದ್ದರೆ, ಕಾಂಗ್ರೆಸ್ 37 ಸ್ಥಾನಗಳನ್ನು ಗೆಲ್ಲುವಲ್ಲಿ ಯಶಸ್ವಿಯಾಗಿದೆ. ಮಂಗಳವಾರ ಬಿಡುಗಡೆಯಾದ ECI ಅಂಕಿಅಂಶಗಳ ಪ್ರಕಾರ, ಪಕ್ಷೇತರ ಅಭ್ಯರ್ಥಿಗಳು 3 ಸ್ಥಾನಗಳನ್ನು ಗೆದ್ದಿದ್ದು ಮತ್ತು ಇಂಡಿಯನ್ ನ್ಯಾಷನಲ್ ಲೋಕದಳ (INLD) 2 ಸ್ಥಾನಗಳನ್ನು ಪಡೆದುಕೊಂಡಿದೆ.

ಮಹಾರಾಷ್ಟ್ರದಲ್ಲಿ ವಿರೋಧ ಪಕ್ಷವಾಗಿರುವ ಕಾಂಗ್ರೆಸ್, ಎನ್‌ಸಿಪಿ (ಎಸ್‌ಪಿ) ಮತ್ತು ಶಿವಸೇನೆ (ಯುಬಿಟಿ) ಮಹಾ ವಿಕಾಸ್ ಅಘಾಡಿ (ಎಂವಿಎ) ಮೈತ್ರಿ ಮಾಡಿಕೊಂಡಿದೆ. ರಾಜ್ಯದಲ್ಲಿ ಈ ವರ್ಷದ ಕೊನೆಯಲ್ಲಿ ವಿಧಾನಸಭಾ ಚುನಾವಣೆ ನಡೆಯಲಿದೆ. 288 ಸ್ಥಾನಗಳ ಮಹಾರಾಷ್ಟ್ರ ವಿಧಾನಸಭೆ ಚುನಾವಣೆಗೆ ಎಂವಿಎಯಲ್ಲಿ ಸೀಟು ಹಂಚಿಕೆ ಸೂತ್ರದ ಕುರಿತು ಮಾತುಕತೆಗಳು ನಡೆಯುತ್ತಿವೆ.

ವಿಡಿಯೊ ನೊಡಿ: ‘ಗಾಂಧೀಜಿ ಹಂತಕ ಗೋಡ್ಸೆ ಎಂಬ ವ್ಯಕ್ತಿ ಮತ್ತು ಆತನ ದೃಷ್ಟಿಯ ಭಾರತ’ ಪುಸ್ತಕ ಬಿಡುಗಡೆ: ದಿನೇಶ್ ಗುಂಡೂರಾವ್ ಅವರ ಮಾತು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ದಲಿತರು, ಅಲ್ಪಸಂಖ್ಯಾತರ ಮೇಲಿನ ಹಿಂಸಾಚಾರದ ಕುರಿತು ವಿಶ್ವಸಂಸ್ಥೆಯ ಕಠಿಣ ಪ್ರಶ್ನೆ: ಸಂಶೋಧನಾತ್ಮಕ ವರದಿಗಳನ್ನು ಆಧರಿಸಿ ಭಾರತಕ್ಕೆ CERD ಚಾಟಿ

ನವದೆಹಲಿ: ಭಾರತದಲ್ಲಿ ದಲಿತರು, ಆದಿವಾಸಿಗಳು, ಮುಸ್ಲಿಮರು ಹಾಗೂ ಇತರ ಅಲ್ಪಸಂಖ್ಯಾತ ಸಮುದಾಯಗಳು ಎದುರಿಸುತ್ತಿರುವ ತಾರತಮ್ಯ, ಹಿಂಸೆ ಮತ್ತು ಹಕ್ಕುಗಳ ಉಲ್ಲಂಘನೆ ಕುರಿತು ವಿಶ್ವಸಂಸ್ಥೆಯ ಜನಾಂಗೀಯ ತಾರತಮ್ಯ ನಿರ್ಮೂಲನೆ ಕುರಿತ ಸಮಿತಿ (CERD) ತೀವ್ರ...

ಪಶ್ಚಿಮ ಬಂಗಾಳ| ಕಳೆದ ಒಂದು ತಿಂಗಳಲ್ಲಿ ಕ್ರಿಶ್ಚಿಯನ್ನರ ಮೇಲೆ ಸತತ ದಾಳಿ

ಪಶ್ಚಿಮ ಬಂಗಾಳದ ಚರ್ಚ್ ಒಂದರ ಆವರಣದಲ್ಲಿರುವ ಸ್ಮಶಾನದಲ್ಲಿ ಮೃತರೊಬ್ಬರಿಗೆ ಕೊನೆಯ ವಿದಾಯ ಕೋರುತ್ತಿದ್ದ ಕ್ರಿಶ್ಚಿಯನ್ ಕುಟುಂಬದ ಮೇಲೆ ಹಿಂದುತ್ವ ಗುಂಪೊಂದು ದಾಳಿ ನಡೆಸಿದೆ ಎಂದು ಆರೋಪಿಸಲಾಗಿದೆ. ಈ ಘಟನೆಯು ಆಗಸ್ಟ್ 14 ರಂದು ಪೂರ್ಬ...

‘ನಮ್ಮ ರಕ್ತದಿಂದ ಅವರು ಬಾಯಾರಿಕೆಯನ್ನು ತಣಿಸಿಕೊಳ್ಳುತ್ತಾರೆಯೇ?’: ಕೇರಳ ವಿವಿಯಲ್ಲಿ ಜಾತಿ ತಾರತಮ್ಯದ ವಿರುದ್ಧ ದಲಿತ ಸಂಶೋಧನಾ ವಿದ್ಯಾರ್ಥಿನಿ ಅನಿರ್ದಿಷ್ಟಾವಧಿ ಉಪವಾಸ

ತಿರುವನಂತಪುರಂ: ಜಾತಿ ಮತ್ತು ಲಿಂಗ ಆಧಾರಿತ ತಾರತಮ್ಯ, ಕಿರುಕುಳ ಹಾಗೂ ಶೈಕ್ಷಣಿಕ ಅವಕಾಶಗಳ ನಿರಾಕರಣೆಯ ಆರೋಪಗಳನ್ನು ಮುಂದಿಟ್ಟುಕೊಂಡು ಕೇರಳದ ತುಂಚತ್ ಎಳುಥಾಚನ್ ಮಲಯಾಳಂ ವಿಶ್ವವಿದ್ಯಾಲಯದ ದಲಿತ ಪಿಎಚ್‌ಡಿ ಸಂಶೋಧನಾ ವಿದ್ಯಾರ್ಥಿನಿ ಅನಘಾ ಶಾಸಿ...

ಸ್ವತಂತ್ರ ಭಾರದ್ವಾಜ್ ಬಂಧನದ ಬೆನ್ನಲ್ಲೇ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ ವಿದ್ಯಾರ್ಥಿನಿ ಮನೆ ಮೇಲೆ ಕಲ್ಲು ತೂರಾಟ, ಪೊಲೀಸರ ರಕ್ಷಣೆಗೆ ಮನವಿ

ನವದೆಹಲಿಯ ಜಂತರ್ ಮಂತರ್‌ನಲ್ಲಿ ನಡೆದ ಸಿಜೆಪಿ ಪ್ರತಿಭಟನೆಯ ವೇಳೆ ಸಂಜಯ್ ಆಝಾದ್ ಎಂಬುವವರ ಮೇಲೆ ಸ್ವಯಂಘೋಷಿತ ಗೋರಕ್ಷಕ ಸ್ವತಂತ್ರ ಭಾರದ್ವಾಜ್ ಭೀಕರವಾಗಿ ಹಲ್ಲೆ ನಡೆಸಿದ್ದನು. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಆತನನ್ನು ಬಂಧಿಸಿದ...

ಜನ್ ಧನ್ ಯೋಜನೆಯಡಿ ತೆರೆಯಲಾದ ಪ್ರತಿ ನಾಲ್ಕನೇ ಬ್ಯಾಂಕ್‌ ಖಾತೆ ನಿಷ್ಕ್ರಿಯ: ಆರ್‌ಟಿಐ ಮಾಹಿತಿ

ಮಾಹಿತಿ ಹಕ್ಕು (ಆರ್‌ಟಿಐ) ಕಾಯ್ದೆಯಡಿ ಲಭ್ಯವಾಗಿರುವ ಉತ್ತರದ ಪ್ರಕಾರ, ಪ್ರಧಾನಮಂತ್ರಿ ಜನ್ ಧನ್ ಯೋಜನೆಯಡಿ ತೆರೆಯಲಾದ ಪ್ರತಿ ನಾಲ್ಕನೇ ಖಾತೆಯು ನಿಷ್ಕ್ರಿಯಗೊಂಡಿದೆ. ಸುಮಾರು 5.72 ಕೋಟಿ ಖಾತೆಗಳಲ್ಲಿ ಶೂನ್ಯ ಬ್ಯಾಲೆನ್ಸ್ ಇದೆ. ಆಗಸ್ಟ್ 12,...

ಬಡ ಪೌರ ಕಾರ್ಮಿಕರ ಮೇಲೆ ದರ್ಪ ಮೆರೆದ ಸಚಿವ ಕೃಷ್ಣ ಬೈರೇಗೌಡ : ಸಾರ್ವಜನಿಕ ವಲಯದಲ್ಲಿ ತೀವ್ರ ಆಕ್ರೋಶ

ಸೇವೆಯನ್ನು ಖಾಯಂಗೊಳಿಸುವಂತೆ ಮನವಿ ಮಾಡಿದ ಬಡ ಪೌರ ಕಾರ್ಮಿಕರೊಂದಿಗೆ ಗ್ರೇಟರ್ ಬೆಂಗಳೂರು ನಗರಾಭಿವೃದ್ಧಿ ಸಚಿವ ಕೃಷ್ಣ ಬೈರೇಗೌಡ ಅವರು ದರ್ಪ ಮೆರೆದಿರುವುದು ಸಾರ್ವಜನಿಕ ವಲಯದಲ್ಲಿ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಶನಿವಾರ (ಸೆ.6) ಬೆಂಗಳೂರಿನ...

ಗ್ರಾಮೀಣ ಭಾಗದ ಶಾಲಾ ಮಕ್ಕಳಿಗೆ ಶಿಕ್ಷಣ ಮತ್ತು ಉದ್ಯೋಗದಲ್ಲಿ 7.5% ಮೀಸಲಾತಿ: ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್

ಗ್ರಾಮೀಣ ಹಾಗೂ ಬಡ ವಿದ್ಯಾರ್ಥಿಗಳ ಉನ್ನತ ಶಿಕ್ಷಣದ ಕನಸಿಗೆ ಬಲ ತುಂಬುವ ನಿಟ್ಟಿನಲ್ಲಿ ಸರ್ಕಾರಿ ಶಾಲಾ ವಿದ್ಯಾರ್ಥಿಗಳಿಗೆ ಶಿಕ್ಷಣ ಹಾಗೂ ಉದ್ಯೋಗದಲ್ಲಿ ಶೇಕಡಾ 7.5 ರಷ್ಟು ಮೀಸಲಾತಿ ಕಲ್ಪಿಸುವುದಾಗಿ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್...

ಪಶ್ಚಿಮ ಬಂಗಾಳದ ಪ್ರವಾಸೋದ್ಯಮ ಜಾಹೀರಾತಿನಲ್ಲಿ ಐಫೆಲ್ ಟವರ್, ಈಜಿಪ್ಟ್ ಪಿರಮಿಡ್: ಆದರೆ ಬಂಗಾಳವೇ ನಾಪತ್ತೆ!

ಪಶ್ಚಿಮ ಬಂಗಾಳವನ್ನು ಜಾಗತಿಕ ಪ್ರವಾಸೋದ್ಯಮ ಭೂಪಟದಲ್ಲಿ ಮುನ್ನೆಲೆಗೆ ತರುವ ಉದ್ದೇಶದಿಂದ ಬಿಡುಗಡೆ ಮಾಡಲಾದ ರಾಜ್ಯದ ಹೊಸ ಪ್ರವಾಸೋದ್ಯಮ ಜಾಹೀರಾತು ಈಗ ತೀವ್ರ ಟೀಕೆ ಹಾಗೂ ಅಪಹಾಸ್ಯಕ್ಕೆ ಈಡಾಗಿದೆ. ಈ ಜಾಹೀರಾತನ್ನು ಒಮ್ಮೆ ಗಮನಿಸಿದರೆ...

ಅಮೆರಿಕದಲ್ಲಿ ಮೋಹನ್‌ ಭಾಗವತ್ ಸೌಹಾರ್ದತೆ ಮಾತು; ಮಹಾರಾಷ್ಟ್ರದ ಗಾರ್ಬಾ-ದಾಂಡಿಯಾ ಕಾರ್ಯಕ್ರಮಗಳಲ್ಲಿ ಮುಸ್ಲಿಮರಿಗೆ ನಿಷೇಧ ಹೇರಿದ ವಿಎಚ್‌ಪಿ

ರಾಷ್ಟ್ರೀಯ ಸ್ವಯಂಸೇವಕ ಸಂಘದ (ಆರ್‌ಎಸ್‌ಎಸ್) ಮುಖ್ಯಸ್ಥ ಮೋಹನ್ ಭಾಗವತ್ ಅವರು ನ್ಯೂಯಾರ್ಕ್‌ನಲ್ಲಿ ಮಾಡಿದ ಭಾಷಣದಲ್ಲಿ ಧಾರ್ಮಿಕ ಸೌಹಾರ್ದತೆ, ಪರಸ್ಪರ ಗೌರವ ಮತ್ತು ಪ್ರತಿಯೊಂದು ಸಮುದಾಯದ ಗುರುತಿನ ರಕ್ಷಣೆ ಕುರಿತು ಮಾತನಾಡಿದ ಕೆಲವೇ ದಿನಗಳ...

ಸೈಬರ್ ವಂಚನೆಗೊಳಗಾದ ಸಂತ್ರಸ್ತರಿಗೆ ನೆರವು: ಕರ್ನಾಟಕದಲ್ಲಿ ಶೀಘ್ರವೇ ‘ಇ-ಶೂನ್ಯ ಎಫ್‌ಐಆರ್’ ಜಾರಿ

ಸೈಬರ್ ವಂಚನೆಗೊಳಗಾದ ಸಂತ್ರಸ್ತರು ಇನ್ನು ಮುಂದೆ ದೂರು ದಾಖಲಿಸಲು ಪೊಲೀಸ್ ಠಾಣೆಗಳಿಗೆ ಅಲೆಯಬೇಕಿಲ್ಲ. ಸೈಬರ್ ಅಪರಾಧ ಪ್ರಕರಣಗಳ ಎಫ್‌ಐಆರ್ ದಾಖಲಾತಿಯನ್ನು ಚುರುಕುಗೊಳಿಸುವ ಹಾಗೂ ಜನಸ್ನೇಹಿಯಾಗಿಸುವ ಉದ್ದೇಶದಿಂದ ಭಾರತೀಯ ಸೈಬರ್ ಅಪರಾಧ ಸಮನ್ವಯ ಕೇಂದ್ರ...