Homeಮುಖಪುಟಆಸ್ಪತ್ರೆಯ ಎದುರಲ್ಲೇ ಕುಸಿದು ಬಿದ್ದರೂ 25 ನಿಮಿಷಗಳವರೆಗೂ ಬಿಸಿಲಲ್ಲಿ ಬಳಲಿದ ಆರೋಗ್ಯ ಕಾರ್ಯಕರ್ತ

ಆಸ್ಪತ್ರೆಯ ಎದುರಲ್ಲೇ ಕುಸಿದು ಬಿದ್ದರೂ 25 ನಿಮಿಷಗಳವರೆಗೂ ಬಿಸಿಲಲ್ಲಿ ಬಳಲಿದ ಆರೋಗ್ಯ ಕಾರ್ಯಕರ್ತ

- Advertisement -
- Advertisement -

ಮಧ್ಯಪ್ರದೇಶದ ಸಾಗರ್ ಜಿಲ್ಲೆಯಲ್ಲಿ ಕೊರೊನಾ ರೋಗಿಗಳಿಗೆ ಸಹಾಯ ಮಾಡುವ ಆರೋಗ್ಯ ಕಾರ್ಯಕರ್ತರೊಬ್ಬರು ತನ್ನ ಕರ್ತವ್ಯಗಳನ್ನು ನಿರ್ವಹಿಸುವಾಗ ಪ್ರಜ್ಞೆ ತಪ್ಪಿ ಬಿದ್ದಿದ್ದಾರೆ. ಆದರೆ 25 ನಿಮಿಷಗಳ ಕಾಲ 44 ಡಿಗ್ರಿ ಸೆಲ್ಸಿಯಸ್ ಶಾಖದ ಬಿಸಿಲಿನಲ್ಲಿ ರಸ್ತೆಯಲ್ಲೇ ಅವರು ಬಿದ್ದದ್ದರೂ ಯಾರು ಸಹಾಯಕ್ಕೆ ಬಂದಿಲ್ಲ ಎಂದು ತಿಳಿದುಬಂದಿದೆ.

ತುರ್ತು ಸೇವೆಯಾದ 108 ಆಂಬ್ಯುಲೆನ್ಸ್‌ನಲ್ಲಿ ಕಾರ್ಯನಿರ್ವಹಿಸುತ್ತಿದ್ದ ಆರೋಗ್ಯ ಕಾರ್ಯಕರ್ತ ಹಿರಾಲಾಲ್ ಪ್ರಜಾಪತಿ, ಟಿಬಿ ಆಸ್ಪತ್ರೆಯಿಂದ ಬುಂಡೇಲ್‌ಖಂಡ್ ವೈದ್ಯಕೀಯ ಕಾಲೇಜಿಗೆ (ಬಿಎಂಸಿ) ಕೊರೊನಾ ವೈರಸ್ ಪಾಸಿಟಿವ್ ಆಗಿರುವ ಜನರನ್ನು ಸಾಗಿಸಿದ ನಂತರ ಬುಧವಾರ ಮಧ್ಯಾಹ್ನ 2 ಗಂಟೆ ಸುಮಾರಿಗೆ ಕುಸಿದು ಬಿದ್ದರು ಎನ್ನಲಾಗಿದೆ.

ಸ್ಥಳೀಯ ವರದಿಗಳ ಪ್ರಕಾರ, ದೇಹದ ಪೂರ್ತಿ ಪಿಪಿಇ (ವೈಯಕ್ತಿಕ ರಕ್ಷಣಾ ಸಾಧನಗಳು) ಧರಿಸಿದ್ದ ಪ್ರಜಾಪತಿ ಶಾಖದಿಂದ ಕುದಿಯುತ್ತಿದ್ದು, ಬಿಎಂಸಿ ಬಳಿ ಕುಸಿದುಬಿದ್ದರು. ಆದರೆ ಅವರ ಸಹೋದ್ಯೋಗಿಯಾಗಿರುವ ಆಂಬ್ಯುಲೆನ್ಸ್ ಚಾಲಕ ಅವರನ್ನು ಬಿಎಂಸಿಗೆ ದಾಖಲಿಸುವಂತೆ ಅಧಿಕಾರಿಗಳಿಗೆ ಮನವಿ ಮಾಡಿದರು ಆದರೆ ಅಧಿಕಾರಿಗಳು ನಿರಾಕರಿಸಿದರಿಂದ ಸುಮಾರು ಅರ್ಧ ಘಂಟೆಯವರೆಗೆ ನೆಲದ ಮೇಲೆ ಬಿದ್ದಿದ್ದರು.

ಅಂತಿಮವಾಗಿ, ಅವರನ್ನು ಇತರ ಅರೆವೈದ್ಯಕೀಯ ಸಿಬ್ಬಂದಿಗಳು ತಮ್ಮ ಆಂಬ್ಯುಲೆನ್ಸ್‌ನಲ್ಲಿ ಜಿಲ್ಲಾ ಆಸ್ಪತ್ರೆಗೆ ಕರೆದೊಯ್ದು, ಅಲ್ಲಿ ಅವರಿಗೆ ಚಿಕಿತ್ಸೆ ನೀಡಲಾಯಿತು. ಪ್ರಸ್ತುತ ಪ್ರಜಾಪತಿ ಚೇತರಿಸಿಕೊಂಡಿದ್ದಾರೆ ಹಾಗೂ ಸ್ಥಿರವಾಗಿದ್ದಾರೆ ಎನ್ನಲಾಗಿದೆ.

ಮಧ್ಯಪ್ರದೇಶದಲ್ಲಿ ಇದುವರೆಗೆ 7,000 ಕೊರೊನಾ ಪ್ರಕರಣಗಳು ವರದಿಯಾಗಿದ್ದು, 313 ಜನರು ಸೋಂಕಿನಿಂದಾಗಿ ಮೃತಪಟ್ಟಿದ್ದಾರೆ.

ರಾಜ್ಯದ ಇಂದೋರ್ ನಗರವು ಕೊರೊನಾ ಭಾದಿತ ನಗರಗಳಲ್ಲೇ ದೇಶದ ಅತ್ಯಂತ ಕೆಟ್ಟ ಪ್ರದೇಶಗಳಲ್ಲಿ ಒಂದಾಗಿದೆ. ಅಲ್ಲಿ 3,000 ಪ್ರಕರಣಗಳು ವರದಿಯಾಗಿದ್ದು; 78 ಹೊಸ ಪ್ರಕರಣಗಳು ಬುಧವಾರ ಪತ್ತೆಯಾಗಿವೆ ಎಂದು ಮುಖ್ಯ ವೈದ್ಯಾಧಿಕಾರಿ ಪ್ರವೀಣ್ ಜಾಡಿಯಾ ತಿಳಿಸಿದ್ದಾರೆ.

ನಿನ್ನೆ ಹೊರಡಿಸಿದ ಆದೇಶದಲ್ಲಿ, ಮನೆ ಸಂಪರ್ಕತಡೆಯನ್ನು ಉಲ್ಲಂಘಿಸುವವರಿಗೆ 2 ಸಾವಿರ ರೂ.ಗಳ ದಂಡ ವಿಧಿಸಲು ಸರ್ಕಾರ ನಿರ್ಧರಿಸಿದೆ. ಎರಡನೇ ಬಾರಿಗೆ ನಿಯಮಗಳನ್ನು ಉಲ್ಲಂಘಿಸುತ್ತಿರುವುದು ಕಂಡುಬಂದಲ್ಲಿ ಅವರನ್ನು ಸಾಂಸ್ಥಿಕ ಸಂಪರ್ಕತಡೆಗೆ ಹಾಕಲಾಗುತ್ತದೆ ಎಂದು ರಾಜ್ಯ ಆರೋಗ್ಯ ಇಲಾಖೆ ಹೇಳಿದೆ.

ಇದರ ಮಧ್ಯೆ ಮಧ್ಯಪ್ರದೇಶ ಆಡಳಿತವು ಬೆಳೆಗಳ ಮೇಲೆ ದಾಳಿ ಮಾಡುತ್ತಿರುವ ಮಿಡತೆಗಳ ಬೆದರಿಕೆಯನ್ನು ಎದುರಿಸುತ್ತಿದೆ. ಸೆಹೋರ್ ಜಿಲ್ಲೆಯ ಬುಡ್ನಿ ಮತ್ತು ನಸ್ರುಲ್ಲಗಂಜ್ ಪ್ರದೇಶಗಳಲ್ಲಿನ ರೈತರು ಮಿಡತೆಗಳನ್ನು ಓಡಿಸಲು ಕೃಷಿ ಇಲಾಖೆಯ ಸಲಹೆಯಂತೆ ಪಾತ್ರೆಗಳನ್ನು ಹೊಡೆಯುತ್ತಿರುವುದು ಕಂಡುಬಂದಿಂದೆ.

ಕಳೆದ ವಾರ ರಾಜಸ್ಥಾನ, ಪಂಜಾಬ್, ಹರಿಯಾಣ, ಉತ್ತರ ಪ್ರದೇಶ ಮತ್ತು ಮಧ್ಯಪ್ರದೇಶಕ್ಕೆ ಮಿಡತೆಗಳ ದೊಡ್ಡ ಗುಂಪು ಪ್ರವೇಶಿಸಿದೆ. ಇವುಗಳನ್ನು ಶೀಘ್ರದಲ್ಲೇ ನಿಯಂತ್ರಿಸದಿದ್ದರೆ, ಸುಮಾರು 8,000 ಕೋಟಿ ಮೌಲ್ಯದ ಏಕದಳ ಬೆಳೆಗಳನ್ನು ನಾಶಪಡಿಸಬಹುದು ಎಂದು ತಜ್ಞರು ಅಭಿಪ್ರಾಯ ಪಟ್ಟಿದ್ದಾರೆ.


ಓದಿ: ಆರೋಗ್ಯ ಕಾರ್ಯಕರ್ತರ ಮೇಲಿನ ದಾಳಿಗೆ ಏಳು ವರ್ಷಗಳ ಜೈಲು ಶಿಕ್ಷೆ: ಕೇಂದ್ರ ಸರ್ಕಾರ


 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಮುಂಬೈ ಮಹಾರಾಷ್ಟ್ರ ನಗರವಲ್ಲ’: ಅಣ್ಣಾಮಲೈ ಹೇಳಿಕೆಗೆ ಶಿವಸೇನೆಯಿಂದ ತೀವ್ರ ಆಕ್ರೋಶ

ಮುಂಬೈ: ಐಪಿಎಸ್ ಅಧಿಕಾರಿಯಿಂದ ರಾಜಕಾರಣಿಯಾಗಿ ಬದಲಾದ ಕೆ.ಅಣ್ಣಾಮಲೈ ಅವರು "ಬಾಂಬೆ ಮಹಾರಾಷ್ಟ್ರ ನಗರವಲ್ಲ, ಅಂತರರಾಷ್ಟ್ರೀಯ ನಗರ" ಎಂದು ಹೇಳಿದ್ದು, ಇದು ಮುಂಬೈನಲ್ಲಿ ವಿವಾದ ಸೃಷ್ಟಿಸಿದೆ.  ಇದಕ್ಕೆ ಉದ್ಧವ್ ಠಾಕ್ರೆ ನೇತೃತ್ವದ ಶಿವಸೇನೆ (ಯುಬಿಟಿ)...

ಮೂರನೇ ಅತ್ಯಾಚಾರ ಪ್ರಕರಣ ದಾಖಲು : ಉಚ್ಛಾಟಿತ ಕಾಂಗ್ರೆಸ್ ಶಾಸಕ ರಾಹುಲ್ ಮಾಂಕೂಟತ್ತಿಲ್ ಬಂಧನ

ಅತ್ಯಾಚಾರ ಆರೋಪ ಕೇಳಿ ಬಂದ ಬಳಿಕ ಕಾಂಗ್ರೆಸ್‌ನಿಂದ ಉಚ್ಛಾಟನೆಗೊಂಡಿರುವ ಕೇರಳದ ಪಾಲಕ್ಕಾಡ್‌ನ ಶಾಸಕ ರಾಹುಲ್ ಮಾಂಕೂಟತ್ತಿಲ್ ಅವರನ್ನು ಭಾನುವಾರ (ಜ.11) ಬಂಧಿಸಲಾಗಿದೆ. ಪಾಲಕ್ಕಾಡ್‌ನ ಕೆಪಿಎಂ ರೀಜೆನ್ಸಿ ಹೋಟೆಲ್‌ನಿಂದ ಬೆಳಗಿನ ಜಾವ 12.30ರ ಸುಮಾರಿಗೆ ಮಾಂಕೂಟತ್ತಿಲ್...

ಇರಾನ್‌ ಹಿಂಸಾಚಾರ : ಸಾವಿನ ಸಂಖ್ಯೆ 116ಕ್ಕೆ ಏರಿಕೆ

ಕಳೆದ ಎರಡು ವಾರಗಳಿಂದ ಇರಾನ್‌ನಲ್ಲಿ ನಡೆಯುತ್ತಿರುವ ಸರ್ಕಾರಿ ವಿರೋಧಿ ಪ್ರತಿಭಟನೆಗಳಲ್ಲಿ ಕನಿಷ್ಠ 116 ಜನರು ಸಾವನ್ನಪ್ಪಿದ್ದಾರೆ. ಅಧಿಕಾರಿಗಳು ಪ್ರತಿಭಟನಾ ನಿರತರ ಮೇಲೆ ಕಠಿಣ ಕ್ರಮದ ಎಚ್ಚರಿಕೆ ನೀಡಿದ್ದಾರೆ ಎಂದು ವರದಿಯಾಗಿದೆ. ಡಿಸೆಂಬರ್ 28ರಂದು ಪ್ರಾರಂಭವಾದ...

ಪಾಕಿಸ್ತಾನದ ಸಿಂಧ್‌ನಲ್ಲಿ 23 ವರ್ಷದ ಹಿಂದೂ ರೈತನನ್ನು ಗುಂಡಿಕ್ಕಿ ಕೊಂದ ಭೂಮಾಲೀಕರು 

ಕರಾಚಿ: ಪಾಕಿಸ್ತಾನದ ಸಿಂಧ್ ಪ್ರಾಂತ್ಯದಲ್ಲಿ 23 ವರ್ಷದ ಹಿಂದೂ ರೈತನೊಬ್ಬ ತನ್ನ ಜಮೀನಿನಲ್ಲಿ ಆಶ್ರಯ ಮನೆ ನಿರ್ಮಿಸಿದ್ದಕ್ಕಾಗಿ ಆತನ ಮನೆ ಮಾಲೀಕರು ಗುಂಡಿಕ್ಕಿ ಕೊಂದಿದ್ದಾರೆ, ಇದು ಹಿಂದೂ ಸಮುದಾಯದಿಂದ ವ್ಯಾಪಕ ಪ್ರತಿಭಟನೆಗೆ ಎಂದು...

ದ್ವೇಷ ಭಾಷಣ ಮಸೂದೆ ರಾಜ್ಯಪಾಲರಿಂದ ತಿರಸ್ಕೃತವಾಗಿಲ್ಲ: ಸಿಎಂ ಸಿದ್ದರಾಮಯ್ಯ

ದ್ವೇಷ ಭಾಷಣ ಮಸೂದೆ ಸರ್ವಾನುಮತದಿಂದ ಅಂಗೀಕಾರವಾಗಿದ್ದು, ರಾಜ್ಯಪಾಲರು ಅದನ್ನು ವಾಪಸ್ ಕಳಿಸಿಲ್ಲ, ತಿರಸ್ಕರಿಸಿಲ್ಲ, ಅಂಕಿತವನ್ನೂ ಹಾಕಿಲ್ಲ. ಅವರು ಕರೆದಾಗ ಈ ಬಗ್ಗೆ ವಿವರಣೆ ನೀಡಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಭಾನುವಾರ (ಜ.11) ಮಂಗಳೂರಿನಲ್ಲಿ...

ಐಸಿಸ್ ಗುರಿ ಮಾಡಿ ಸಿರಿಯಾ ಮೇಲೆ ವೈಮಾನಿಕ ದಾಳಿ ನಡೆಸಿದ ಅಮೆರಿಕ

ಸಿರಿಯಾದ ಇಸ್ಲಾಮಿಕ್ ಸ್ಟೇಟ್ (ಐಎಸ್) ಗುಂಪಿನ ತಾಣಗಳ ಮೇಲೆ ಅಮೆರಿಕ ಮತ್ತು ಅದರ ಪಾಲುದಾರ ಪಡೆಗಳು ದೊಡ್ಡ ಪ್ರಮಾಣದ ದಾಳಿಗಳನ್ನು ನಡೆಸಿವೆ ಎಂದು ಅಮೆರಿಕದ ಸೆಂಟ್ರಲ್ ಕಮಾಂಡ್ (ಸೆಂಟ್‌ಕಾಮ್) ಘೋಷಿಸಿದೆ. ಡಿಸೆಂಬರ್ 13ರಂದು ಸಿರಿಯಾದಲ್ಲಿ...

ವೆನೆಜುವೆಲಾದ ತೈಲ ಖರೀದಿಗೆ ಅಮೆರಿಕದ ಅನುಮತಿ ಪಡೆಯಲು ರಿಲಯನ್ಸ್ ಮಾತುಕತೆ : ವರದಿ

ಭಾರತದ ರಿಲಯನ್ಸ್ ಇಂಡಸ್ಟ್ರೀಸ್ ವೆನೆಜುವೆಲಾದ ಕಚ್ಚಾ ತೈಲ ಖರೀದಿಯನ್ನು ಪುನರಾರಂಭಿಸಲು ಅಮೆರಿಕದ ಅನುಮೋದನೆಯನ್ನು ಕೋರುತ್ತಿದೆ ಎಂದು ಈ ವಿಷಯದ ಬಗ್ಗೆ ಗೊತ್ತಿರುವ ಎರಡು ಮೂಲಗಳು ಶುಕ್ರವಾರ ತಿಳಿಸಿವೆ ಎಂದು ಸುದ್ದಿ ಸಂಸ್ಥೆ ರಾಯಿಟರ್ಸ್...

ಐ-ಪ್ಯಾಕ್‌ ಮೇಲೆ ದಾಳಿ | ಇಡಿ ಅಧಿಕಾರಿಗಳ ವಿರುದ್ಧ ತನಿಖೆ ಪ್ರಾರಂಭಿಸಿದ ಕೋಲ್ಕತ್ತಾ ಪೊಲೀಸರು : ಸುಪ್ರೀಂ ಕೋರ್ಟ್‌ನಲ್ಲಿ ಕೇವಿಯಟ್ ಸಲ್ಲಿಸಿದ ಪ. ಬಂಗಾಳ ಸರ್ಕಾರ

ಐ-ಪ್ಯಾಕ್ ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ದಾಳಿ ನಡೆಸಿದ ಸಂದರ್ಭದಲ್ಲಿ ದಾಖಲೆಗಳ ಕಳ್ಳತನದ ಆರೋಪದ ಮೇಲೆ ಕೋಲ್ಕತ್ತಾ ಪೊಲೀಸರು ಶನಿವಾರ (ಜ.10)...

ಟ್ರಂಪ್ ಸಂಚಿಗೆ ತಿರುಗೇಟು : ನಾವು ಯಾರ ಅಡಿಯಾಳಾಗಲು ಸಿದ್ದರಿಲ್ಲ ಎಂದ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು

ವೆನೆಜುವೆಲಾ ಬಳಿಕ ಖನಿಜ-ಸಮೃದ್ಧ ಡ್ಯಾನಿಶ್ (ಡೆನ್ಮಾರ್ಕ್‌) ಸ್ವಾಯತ್ತ ಪ್ರದೇಶವಾದ ಗ್ರೀನ್‌ ಲ್ಯಾಂಡ್‌ ಮೇಲೆ ಬಲಪ್ರಯೋಗ ಮಾಡಲು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಯೋಜಿಸುತ್ತಿದ್ದಾರೆ. ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು...

ಮತ್ತೆ ಒಂದಾದ ಎನ್‌ಸಿಪಿ ಬಣಗಳು : ಸುಪ್ರಿಯಾ ಸುಳೆ ಜೊತೆ ವೇದಿಕೆ ಹಂಚಿಕೊಂಡ ಅಜಿತ್ ಪವಾರ್, ಜಂಟಿ ಪ್ರಣಾಳಿಕೆ ಬಿಡುಗಡೆ

ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಅಜಿತ್ ಪವಾರ್ ನೇತೃತ್ವದ ಎನ್‌ಸಿಪಿ ಮತ್ತು ಅವರ ಚಿಕ್ಕಪ್ಪ ಶರದ್ ಪವಾರ್ ನೇತೃತ್ವದ ಎನ್‌ಸಿಪಿ (ಎಸ್‌ಪಿ) ಶನಿವಾರ (ಜ.10) ಪುಣೆ ಮಹಾನಗರ ಪಾಲಿಕೆಗೆ ನಡೆಯಲಿರುವ ಚುನಾವಣೆಗೆ ಜಂಟಿ ಪ್ರಣಾಳಿಕೆಯನ್ನು ಬಿಡುಗಡೆ...