Homeಕರ್ನಾಟಕಎಲ್ಲವನ್ನೂ ಇಲ್ಲಿಗೆ ಬಿಡಿ, ಕೋಮು ಸಾಮರಸ್ಯ ಹಾಳು ಮಾಡಬೇಡಿ: ಬಿಎಸ್‌ವೈ ಖಡಕ್‌ ಎಚ್ಚರಿಕೆ

ಎಲ್ಲವನ್ನೂ ಇಲ್ಲಿಗೆ ಬಿಡಿ, ಕೋಮು ಸಾಮರಸ್ಯ ಹಾಳು ಮಾಡಬೇಡಿ: ಬಿಎಸ್‌ವೈ ಖಡಕ್‌ ಎಚ್ಚರಿಕೆ

- Advertisement -
- Advertisement -

“ಎಲ್ಲವನ್ನೂ ಇಲ್ಲಿಗೆ ಬಿಟ್ಟು, ನಿಮ್ಮ ಕೆಲಸ ನೀವು ಮಾಡಿ. ಇಲ್ಲದಿದ್ದರೆ, ಸರ್ಕಾರದಿಂದ ಕಠಿಣ ಕ್ರಮ ಖಂಡಿತ” ಎಂದು ಮಾಜಿ ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ಪ್ರತಿಕ್ರಿಯೆ ನೀಡಿದ್ದಾರೆ.

ರಾಜ್ಯದಲ್ಲಿನ ಕೋಮುದ್ವೇಷ ಬೆಳವಣಿಗೆಗಳನ್ನು ಖಂಡಿಸಿರುವ ಅವರು, ಖಡಕ್‌ ಎಚ್ಚರಿಕೆ ನೀಡಿದ್ದಾರೆ. ‘ಧರ್ಮ ಸಂಘರ್ಷ’ ಹಾಗೂ ನುಗ್ಗಿಕೇರಿ ಘಟನೆಗೆ ಸಂಬಂಧಿಸಿದಂತೆ ಬೆಂಗಳೂರಿನಲ್ಲಿ ಮಾತನಾಡಿದ ಅವರು, “ಹಿಂದೂ-ಮುಸ್ಲಿಮರು ಒಂದೇ ತಾಯಿ ಮಕ್ಕಳಂತೆ ಸೌಹಾರ್ದತೆಯಿಂದ ಬದುಕಬೇಕೆಂಬುದು ನಮ್ಮ ಆಸೆ. ಅದನ್ನು ಹಾಳು ಮಾಡುವ ಕೆಲಸ ಮಾಡಬೇಡಿ” ಎಂದು ಎಚ್ಚರಿಸಿದ್ದಾರೆ.

“ಯಾರಾದರೂ ನಮ್ಮ ಸಹಬಾಳ್ವೆಗೆ ಅಡ್ಡಿ ಮಾಡುವಂತಹ ಪ್ರಯತ್ನ ಮಾಡಿದರೆ, ಮುಖ್ಯಮಂತ್ರಿಗಳು ಹೇಳಿದಂತೆ ಅಂಥವರ ಮೇಲೆ ಕಾನೂನಿನ ಕ್ರಮ ತೆಗೆದುಕೊಳ್ಳುತ್ತೇವೆ. ಇನ್ನು ಮುಂದೆಯಾದರೂ ಅಹಿತಕರ ಘಟನೆ ನಡೆಯದಂತೆ ಒಟ್ಟಾಗಿ ಬಾಳುವುದಕ್ಕೆ ಅವಕಾಶ ಮಾಡಿಕೊಡಬೇಕು” ಎಂದು ತಿಳಿಸಿದ್ದಾರೆ.

“ಈಗಾಗಲೇ ಮುಖ್ಯಮಂತ್ರಿ ಎಚ್ಚರಿಕೆ ಕೊಟ್ಟಿದ್ದಾರೆ. ಇಂತಹ ಘಟನೆಗಳನ್ನ ಸರ್ಕಾರ ಯಾವುದೇ ಕಾರಣಕ್ಕೂ ಸಹಿಸುವುದಿಲ್ಲ. ನಾನೂ ಕೂಡ ಕಿವಿಮಾತು ಹೇಳುತ್ತಿದ್ದೇನೆ. ಇಲ್ಲಿಗೆ ಎಲ್ಲವನ್ನೂ ನಿಲ್ಲಿಸಿ, ನಿಮ್ಮ-ನಿಮ್ಮ ಕೆಲಸ ಮಾಡಿ. ಎಲ್ಲರೂ ಗೌರವ, ನೆಮ್ಮದಿಯಿಂದ ಬದುಕಬೇಕಾಗುತ್ತದೆ” ಎಂದು ಹೇಳಿದ್ದಾರೆ.

ಬಸವರಾಜ ಬೊಮ್ಮಾಯಿಯವರು ಮುಖ್ಯಮಂತ್ರಿಯಾದ ಬಳಿಕ ರಾಜ್ಯದಲ್ಲಿ ಮತೀಯ ಸಂಘಟನೆಗಳು ಸಂಘರ್ಷವನ್ನು ಉಂಟು ಮಾಡುತ್ತಿರುವ ಕುರಿತು ಜನರು ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ ಬಿ.ಎಸ್‌.ಯಡಿಯೂರಪ್ಪನವರ ಹೇಳಿಕೆ ಮಹತ್ವ ಪಡೆದುಕೊಂಡಿದೆ.

ಮುಖ್ಯಮಂತ್ರಿ ಸ್ಥಾನದಿಂದ ಬಿ.ಎಸ್‌.ಯಡಿಯೂರಪ್ಪನವರು ಇಳಿದ ಬಳಿಕ ಬೊಮ್ಮಾಯಿಯವರಿಗೆ ಮುಖ್ಯಮಂತ್ರಿ ಸ್ಥಾನ ದೊರಕಿತು. ಬೊಮ್ಮಾಯಿಯವರು ಯಡಿಯೂರಪ್ಪನವರ ಆಪ್ತರಾದ ಕಾರಣ, ನಿಜವಾದ ಸಿಎಂ ಯಡಿಯೂರಪ್ಪನವರೇ ಎಂಬ ವಿಶ್ಲೇಷಣೆಗಳು ಬಂದಿದ್ದವು.

ಬೊಮ್ಮಾಯಿಯವರು ಸಮಾಜವಾದಿ ಹಿನ್ನೆಲೆಯವರಾಗಿದ್ದು, ರಾಜ್ಯದ ಅಭಿವೃದ್ಧಿಯಾಗುತ್ತದೆ ಎಂದು ಭಾವಿಸಲಾಗಿತ್ತು. ದುರಾದೃಷ್ಟವಶಾತ್‌ ಬೊಮ್ಮಾಯಿಯವರ ಅವಧಿಯಲ್ಲಿ ಹಲವಾರು ಕೋಮುದ್ವೇಷ ಪ್ರಕರಣಗಳು ಘಟಿಸಿವೆ. ಮುಖ್ಯಮಂತ್ರಿಯವರೇ ಮತೀಯ ಗೂಂಡಾಗಿರಿಯನ್ನು ಸಮರ್ಥಿಸಿದ್ದು ಟೀಕೆಗೆ ಒಳಗಾಗಿದೆ.

ಯಡಿಯೂರಪ್ಪನವರೇ ಮುಖ್ಯಮಂತ್ರಿಯಾಗಿದ್ದರೆ ರಾಜ್ಯದ ಪರಿಸ್ಥಿತಿ ಇಷ್ಟು ದುಸ್ಥಿತಿಗೆ ಇಳಿಯುತ್ತಿರಲಿಲ್ಲ ಎಂಬ ಅಭಿಪ್ರಾಯಗಳು ಮೂಡಿಬರುತ್ತಿವೆ. ಈಗ ಯಡಿಯೂರಪ್ಪನವರೇ ಮತೀಯ ಸಂಘಟನೆಗಳಿಗೆ ಕಡಿವಾಣ ಹಾಕುವ ಹೇಳಿಕೆ ನೀಡಿರುವುದು ಭರವಸೆ ಮೂಡಿಸಿದೆ.


ಇದನ್ನೂ ಓದಿರಿ: ಚಂದ್ರು ಕೊಲೆ ಪ್ರಕರಣ: ಪೊಲೀಸ್‌ ಕಮಿಷನರ್‌ ಹೇಳಿಕೆ ಅಲ್ಲಗಳೆದ ಬಿಜೆಪಿ ನಾಯಕರಿಗೆ ಭಾಸ್ಕರ್‌ ರಾವ್‌ ಖಡಕ್‌ ಪ್ರತಿಕ್ರಿಯೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

2 COMMENTS

  1. ಮಾನ್ಯ ಯೆಡಿಯೂರಪ್ಪ ನವರ ಮಾತು ಎಲ್ಲರೂ ಸ್ವಾಗತಿಸ ಬೇಕಾದುದ್ದೆ, ಈ ಮಾತು ಮುಖ್ಯಮಂತ್ರಿಗಳು ಹೇಳಬೇಕಿತ್ತು ಮತ್ತು ಕಠಿಣ ನಿರ್ಧಾರ ತೆಗೆದುಕೊಂಡು ಯಾರೇ ಕೋಮು ದ್ವೇಷ ಕದಡುವ ಪ್ರಯತ್ನ ಪಟ್ಟಿದ್ದಾರೆ ಅವರಿಗೆಲ್ಲ ದೇಶದ್ರೋಹ ಪ್ರಕರಣ ದಾಖಲಿಸಿ ಶಿಕ್ಷೆ ಕೊಡಬೇಕಿತ್ತು,
    ಮನುಷ್ಯ ಎಂದಿಗೂ ಮನುಷ್ಯತ್ವ ಮರೀಬಾರ್ದು
    ಜೈ ಹಿಂದ್
    ಜೈ ಕರ್ನಾಟಕ

  2. ಅಧಿಕಾರಕ್ಕಾಗಿ ಹಸಿದ ತೋಳದ ಕಾವಲಿನಲ್ಲಿರುವ ಜನತೆಗೆ ಬಿಡುಗಡೆ ಅಷ್ಟು ಸುಲಬದ್ದಲ್ಲ .

LEAVE A REPLY

Please enter your comment!
Please enter your name here

- Advertisment -

ಭಾರತದಲ್ಲಿ 12 ಸಾವಿರ ಉದ್ಯೋಗಿಗಳನ್ನು ವಜಾಗೊಳಿಸಿದ ಒರಾಕಲ್ : ಜಾಗತಿಕವಾಗಿ 30 ಸಾವಿರ ಜನರ ಕೆಲಸಕ್ಕೆ ಕುತ್ತು

ಐಟಿ ದೈತ್ಯ ಒರಾಕಲ್ ಜಾಗತಿಕ ಮಟ್ಟದಲ್ಲಿ ಸುಮಾರು 30,000 ಉದ್ಯೋಗಿಗಳನ್ನು ವಜಾಗೊಳಿಸಲು ನಿರ್ಧರಿಸಿದ್ದು, ಇದು ಭಾರತದ ಮೇಲೂ ತೀವ್ರ ಪರಿಣಾಮ ಬೀರಿದೆ. ವರದಿಗಳ ಪ್ರಕಾರ, ಭಾರತವೊಂದರಲ್ಲೇ ಸುಮಾರು 12,000 ಉದ್ಯೋಗಿಗಳನ್ನು ಕೆಲಸದಿಂದ ತೆಗೆದುಹಾಕಲಾಗಿದೆ. ಕಂಪನಿಯು ತನ್ನ ಒಟ್ಟು ಉದ್ಯೋಗಿಳ...

ಗೋವಾ ನೈಟ್‌ಕ್ಲಬ್ ಬೆಂಕಿ ಪ್ರಕರಣ: ಮಾಲೀಕರಾದ ಸೌರಭ್ ಲೂತ್ರಾ, ಗೌರವ್ ಲೂತ್ರಾ ಸಹೋದರರಿಗೆ ಜಾಮೀನು

ಪಣಜಿ: ಕಳೆದ ಡಿಸೆಂಬರ್‌ನಲ್ಲಿ 25 ಜನರ ಸಾವಿಗೆ ಕಾರಣವಾದ ವಿನಾಶಕಾರಿ ಬೆಂಕಿ ಪ್ರಕರಣಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ಬಿರ್ಚ್ ಬೈ ರೋಮಿಯೋ ಲೇನ್ ನೈಟ್‌ಕ್ಲಬ್‌ನ ಮಾಲೀಕರಾದ ಸೌರಭ್ ಲೂತ್ರಾ ಮತ್ತು ಗೌರವ್ ಲೂತ್ರಾ ಅವರಿಗೆ...

ಲೈಂಗಿಕ ದೌರ್ಜನ್ಯ ಆರೋಪ: ಮಲಯಾಳಂ ಚಲನಚಿತ್ರ ನಿರ್ದೇಶಕ ರಂಜಿತ್ ಬಾಲಕೃಷ್ಣನ್ 14 ದಿನಗಳ ನ್ಯಾಯಾಂಗ ಬಂಧನಕ್ಕೆ 

ಕೇರಳ: ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಮಲಯಾಳಂ ನಿರ್ದೇಶಕ ಮತ್ತು ನಿರ್ಮಾಪಕ ರಂಜಿತ್ ಬಾಲಕೃಷ್ಣನ್ ಅವರನ್ನು ಬುಧವಾರ 14 ದಿನಗಳ ನ್ಯಾಯಾಂಗ ಬಂಧನಕ್ಕೆ ಒಳಪಡಿಸಲಾಗಿದೆ. ಪ್ರಸ್ತುತ ಅವರನ್ನು ಎರ್ನಾಕುಲಂ ಸಬ್ ಜೈಲಿನಲ್ಲಿ ಇರಿಸಲಾಗಿದೆ.  ಜನವರಿ...

ಫಾರ್ಮ್–6 ವಿವಾದ : ಕೋಲ್ಕತ್ತಾದ ಚುನಾವಣಾಧಿಕಾರಿ ಕಚೇರಿ ಮುಂದೆ ಟಿಎಂಸಿ -ಬಿಜೆಪಿ ಕಾರ್ಯಕರ್ತರ ನಡುವೆ ಘರ್ಷಣೆ

ಮತದಾರರ ಪಟ್ಟಿಗೆ ಹೊಸದಾಗಿ ಹೆಸರುಗಳನ್ನು ಸೇರಿಸುವ ನಮೂನೆ -6 (ಫಾರ್ಮ್ -6) ವಿಚಾರದಲ್ಲಿ ಕೋಲ್ಕತ್ತಾದ ಮುಖ್ಯ ಚುನಾವಣಾಧಿಕಾರಿ ಕಚೇರಿ ಮುಂದೆ ಮಂಗಳವಾರ (ಮಾ. 31) ತೃಣಮೂಲ ಕಾಂಗ್ರೆಸ್ (ಟಿಎಂಸಿ) ಮತ್ತು ಬಿಜೆಪಿ ಕಾರ್ಯಕರ್ತರ...

‘ಶೀಘ್ರದಲ್ಲೇ ಹೊರಡುತ್ತೇನೆ’: ‘2-3 ವಾರಗಳಲ್ಲಿ’ ಇರಾನ್ ಮೇಲಿನ ಯುದ್ಧ ಕೊನೆಗೊಳಿಸುವ ಬಗ್ಗೆ ಸುಳಿವು ನೀಡಿದ ಅಮೆರಿಕ ಅಧ್ಯಕ್ಷ ಟ್ರಂಪ್ 

ವಾಷಿಂಗ್ಟನ್ ಡಿಸಿ: ಜಾಗತಿಕ ಇಂಧನ ಮಾರುಕಟ್ಟೆಗಳನ್ನು ಅಸ್ತವ್ಯಸ್ತಗೊಳಿಸಿರುವ ಒಂದು ತಿಂಗಳ ಕಾಲ ನಡೆದ ಯುದ್ಧದ ಸಂಭಾವ್ಯ ಅಂತ್ಯದ ಬಗ್ಗೆ ಸುಳಿವು ನೀಡುವ ಮೂಲಕ, ಮುಂದಿನ ಎರಡು ಮೂರು ವಾರಗಳ ಮೊದಲೇ ಇರಾನ್ ವಿರುದ್ಧದ...

ದೊಡ್ಡಬಳ್ಳಾಪುರದಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ : ಕೆಐಎಡಿಬಿ ವಿರುದ್ಧ ಬೀದಿಗಿಳಿದ ಜನ

ದೇವನಹಳ್ಳಿ ಬಳಿಕ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ ಪ್ರಾರಂಭಗೊಂಡಿದೆ. ಕರ್ನಾಟಕ ಕೈಗಾರಿಕಾ ಪ್ರದೇಶ ಅಭಿವೃದ್ದಿ ಮಂಡಳಿ (ಕೆಐಎಡಿಬಿ) ವಿರುದ್ಧ ಜನರು ಬೀದಿಗಿಳಿದಿದ್ದಾರೆ. ದೊಡ್ಡಬಳ್ಳಾಪುರ ತಾಲೂಕಿನ ದೊಡ್ಡಬೆಳವಂಗಲ...

ಬಿಹಾರ: ಪತಿಯನ್ನು ಹತ್ಯೆ ಮಾಡಿದ ಗುಂಪಿನಿಂದ ಬೆದರಿಕೆ; ಇಬ್ಬರು ಮಕ್ಕಳೊಂದಿಗೆ ವಿಷ ಸೇವಿಸಿದ ಮುಸ್ಲಿಂ ಮಹಿಳೆ ಸಾವು, ಮಕ್ಕಳ ಸ್ಥಿತಿ ಗಂಭೀರ

ಬಿಹಾರದ ರೋಹ್ತಾಸ್ ಜಿಲ್ಲೆಯ ಮುಸ್ಲಿಂ ಮಹಿಳೆಯೊಬ್ಬರು ಮಂಗಳವಾರ ತನ್ನ ಇಬ್ಬರು ಅಪ್ರಾಪ್ತ ಮಕ್ಕಳೊಂದಿಗೆ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ವರದಿಯಾಗಿದೆ.  ಪತಿಯನ್ನು ಅಮಾನುಷವಾಗಿ ಹಲ್ಲೆ ನಡೆಸಿ ಹತ್ಯೆ ಮಾಡಿದ್ದ ಆರೋಪಿಗಳಿಂದ ಬೆದರಿಕೆಗಳನ್ನು ತಾಳಲಾರದೆ...

ಅತ್ಯಾಚಾರ ಆರೋಪ: ಅಶೋಕ್ ಖರತ್ ಅವರ ಪುತ್ರನನ್ನು ವಿಚಾರಣೆಗಾಗಿ ವಶಕ್ಕೆ ಪಡೆದ ಎಸ್ಐಟಿ; ಪತ್ನಿಗಾಗಿ ಹುಡುಕಾಟ 

ನಾಸಿಕ್: ಅತ್ಯಾಚಾರ ಆರೋಪಿ ಸ್ವಯಂ ಘೋಷಿತ ದೇವಮಾನವ ಅಶೋಕ್ ಖರತ್ ವಿರುದ್ಧ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ), ನಾಸಿಕ್ ನಗರದಲ್ಲಿ ಆತನ ಮಗನನ್ನು ವಿಚಾರಣೆಗಾಗಿ ವಶಕ್ಕೆ ಪಡೆದಿದ್ದು, ಆತನ ಪತ್ನಿಗಾಗಿಯೂ...

ಇರಾಕ್‌ : ಬಗ್ದಾದ್‌ನಲ್ಲಿ ಯುಎಸ್‌ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅಪಹರಣ

ಇರಾಕ್‌ ರಾಜಧಾನಿ ಬಗ್ದಾದ್‌ ನಗರದ ಅಲ್-ಸಾದೂನ್ ಬೀದಿಯಲ್ಲಿರುವ ಬಗ್ದಾದ್ ಹೋಟೆಲ್ ಬಳಿ ಅಮೆರಿಕದ ಪ್ರಶಸ್ತಿ ವಿಜೇತ ಸ್ವತಂತ್ರ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅವರನ್ನು ಮಂಗಳವಾರ (ಮಾ.31, 2026) ಅಪಹರಿಸಲಾಗಿದೆ ಎಂದು ವರದಿಯಾಗಿದೆ. ಸಿಸಿಟಿವಿ ದೃಶ್ಯಾವಳಿಗಳ ಪ್ರಕಾರ,...

ವಾಣಿಜ್ಯ ಎಲ್‌ಪಿಜಿ ದರ 195.50 ರೂ. ಏರಿಕೆ : ಜನ ಸಾಮಾನ್ಯರಿಗೆ ಗಾಯದ ಮೇಲೆ ಬರೆ

ಪಶ್ಚಿಮ ಏಷ್ಯಾ ಸಂಘರ್ಷದಿಂದಾಗಿ ಜಾಗತಿಕ ತೈಲ ಬೆಲೆಗಳು ಏರುತ್ತಿರುವ ನಡುವೆ, ವಾಣಿಜ್ಯ ಎಲ್‌ಪಿಜಿ ದರವನ್ನು ಬುಧವಾರ (ಏ.1) 195.50 ರೂ. ಹೆಚ್ಚಿಸಲಾಗಿದೆ. ಸರ್ಕಾರಿ ಸ್ವಾಮ್ಯದ ತೈಲ ಕಂಪನಿಗಳ ಪ್ರಕಾರ, ಬೆಲೆ ಏರಿಕೆ ಬಳಿಕ...