Homeಕರ್ನಾಟಕ22 ನೇ ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನ ಬಿಟ್ಟು 23ನೇ ಸಮ್ಮೇಳನ ಆಚರಣೆ: ಕಪ್ಪು ಪಟ್ಟಿ...

22 ನೇ ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನ ಬಿಟ್ಟು 23ನೇ ಸಮ್ಮೇಳನ ಆಚರಣೆ: ಕಪ್ಪು ಪಟ್ಟಿ ಪ್ರದರ್ಶನ

- Advertisement -
- Advertisement -

“ದೊಡ್ಡ ಬಳ್ಳಾಪುರದಲ್ಲಿ 22 ನೇ ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನವನ್ನು ನಡೆಸದೇ 23ನೇ ಸಮ್ಮೇಳನ ನಡೆಸಲಾಗುತ್ತಿದೆ ಎಂದು ಆರೋಪಿಸಿ, ಖಂಡಿಸಿರುವ ಜಿಲ್ಲೆಯ ಕನ್ನಡಪರ ಸಂಘಟನೆಗಳು, ಕಪ್ಪು ಬಾವುಟ ಪ್ರದರ್ಶನ ಮಾಡಿ ಜಿಲ್ಲಾ ಘಟಕದ ಅಧ್ಯಕ್ಷ ಚಿ.ಮಾ.ಸುಧಾಕರ್ ವಿರುದ್ಧ ಘೋಷಣೆ ಕೂಗಿದರು.

ಕನ್ನಡ ಸಾಹಿತ್ಯ ಪರಿಷತ್‌ ವತಿಯಿಂದ ದೊಡ್ಡಬಳ್ಳಾಪುರದಲ್ಲಿ ಭಾನುವಾರ 23 ನೇ ಜಿಲ್ಲಾ ಮಟ್ಟದ ಕನ್ನಡ ಸಾಹಿತ್ಯ ಸಮ್ಮೇಳನ ಆಯೋಜನೆ ಮಾಡಲಾಗಿತ್ತು. ಧ್ವಜಾರೋಹಣ, ಸಮ್ಮೇಳನಾಧ್ಯಕ್ಷರು ಮತ್ತು ಕಲಾ ತಂಡಗಳ ಮೆರವಣಿಗೆ ನಡೆಯಿತು. ಇದಾದ ನಂತರ ವೇದಿಕೆ ಕಾರ್ಯಕ್ರಮದಲ್ಲಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್‌ ಜಿಲ್ಲಾ ಘಟಕದ ಅಧ್ಯಕ್ಷ ಚಿ.ಮಾ.ಸುಧಾಕರ್, ಪ್ರಾಸ್ತಾವಿಕ ನುಡಿ ಆರಂಭಿಸುತ್ತಿದ್ದಂತೆ ವೇದಿಕೆ ಮುಂಭಾಗದಲ್ಲಿದ್ದ ಹೋರಾಟಗಾರರು ಕಪ್ಪುಪಟ್ಟಿ ಪ್ರದರ್ಶನ ಮಾಡಿ ಘೊಷಣೆ ಕೂಗಿದರು. ಜೊತೆಗೆ ವೇದಿಕೆ ಮುಂಭಾಗದಲ್ಲಿ ಪ್ರತಿಭಟನೆಯನ್ನೂ ನಡೆಸಿದರು.

ಇದನ್ನೂ ಓದಿ: ಕನ್ನಡ ಧ್ವಜ ಇಳಿಸದಿದ್ದರೆ ಗಲ್ಲಿ-ಗಲ್ಲಿಯಲ್ಲಿ ಭಗವಾಧ್ವಜ ಹಾರಾಡುತ್ತದೆ: ಎಚ್ಚರಿಕೆ ನೀಡಿದ ಮಹಾರಾಷ್ಟ್ರ ಏಕೀಕರಣ ಸಮಿತಿ

“ಜಿಲ್ಲಾ ಘಟಕದ ಅಧ್ಯಕ್ಷರು ಸರ್ವಾಧಿಕಾರಿ ಧೋರಣೆ ಮಾಡುತ್ತಿದ್ದಾರೆ. 22 ನೇ ಕನ್ನಡ ಸಾಹಿತ್ಯ ಸಮ್ಮೇಳನವನ್ನು ಕೊರೊನಾ ಕಾರಣದಿಂದ ಮುಂದೂಡಲಾಗಿತ್ತು. ನಂತರ ಜನವರಿ 28 ಕ್ಕೆ ಸಮ್ಮೇಳನ ನಡೆಸಲು ತೀರ್ಮಾನಿಸಲಾಗಿತ್ತು. ಆದರೆ ಈಗ ತರಾತುರಿಯಲ್ಲಿ 23 ನೇ ಸಮ್ಮೇಳನ ಮಾಡಲಾಗುತ್ತಿದೆ. ಇದರಿಂದ 22ನೇ ಸಾಹಿತ್ಯ ಸಮ್ಮೇಳನದ ಅಧ್ಯಕ್ಷರಿಗೆ ಅಪಮಾನ ಮಾಡಿದಂತಾಗುತ್ತದೆ” ಎಂದು ಪ್ರತಿಭಟನಾಕಾರರು ಆಕ್ರೋಶ ವ್ಯಕ್ತಪಡಿಸಿದರು.

“ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ಘಟಕದಿಂದ ಶಿಷ್ಟಾಚಾರ ಉಲ್ಲಂಘನೆ ಮಾಡಲಾಗುತ್ತಿದೆ. 22ನೇ ಸಾಹಿತ್ಯ ಸಮ್ಮೇಳನಾಧ್ಯಕ್ಷರಿಂದ 23ನೇ ಸಮ್ಮೇಳನಾಧ್ಯಕ್ಷರಿಗೆ ಕನ್ನಡದ ಬಾವುಟ ಹಸ್ತಾಂತರಿಸುವುದು ರೂಢಿ. ಸಮ್ಮೇಳನವೇ ನಡೆಯದೇ ಇರುವಾಗ ಹಸ್ತಾಂತರ ಮಾಡುವವರು ಯಾರು, ಈ ವಿಚಾರ ಅವರಿಗೆ ತಿಳಿದಿದ್ದರೂ ಪ್ರಭುದೇವ್ ಅವರಿಗೆ ಅಪಮಾನ ಮಾಡಿದ್ದಾರೆ” ಎಂದು ದೊಡ್ಡಬಳ್ಳಾಪುರ ಸಾಹಿತ್ಯ ಪರಿಷತ್‌ ನಿರ್ದೇಶಕ ಕಿರಣ್ ಹೇಳಿದರು.

ನಂತರ ಮಾತನಾಡಿದ ಸುಧಾಕರ್, ಜನವರಿ 28 ರಂದು ಸಮ್ಮೇಳನ ನಡೆಸುವುದಾಗಿ ಹೇಳಿದರು.


ಇದನ್ನೂ ಓದಿ: ಬಿಜೆಪಿ ಜಿಲ್ಲಾಧ್ಯಕ್ಷರ ಆಮಿಷ: ಪಕ್ಷಕ್ಕೆ ಬಂದರೆ ಅಧ್ಯಕ್ಷ ಪದವಿ ಗ್ಯಾರೆಂಟಿ ಎಂದ ಬಿ.ಸುರೇಶ್ ಗೌಡ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ದೆಹಲಿ ಗಲಭೆ ಪ್ರಕರಣದಿಂದ ಒಂಬತ್ತು ಜನರನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದ ಪ್ರಕರಣದಲ್ಲಿ ಒಂಬತ್ತು ಜನರನ್ನು ನ್ಯಾಯಾಲಯವು ಖುಲಾಸೆಗೊಳಿಸಿದೆ. ಸಾಕ್ಷ್ಯಗಳು ನಿರ್ದಿಷ್ಟತೆಯ ಕೊರತೆ ಮತ್ತು ಸಾಮಾನ್ಯ ಸ್ವರೂಪದ್ದಾಗಿರುವುದರಿಂದ ಪ್ರಕರಣದಲ್ಲಿ ಅವುಗಳನ್ನು ನಂಬಲಾಗುವುದಿಲ್ಲ ಎಂ ನ್ಯಾಯಾಲಯ ಹೇಳಿದೆ. ಹೆಚ್ಚುವರಿ ಸೆಷನ್ಸ್ ನ್ಯಾಯಾಧೀಶ...

ಚುನಾವಣಾ ಕಾರ್ಯಕ್ಕೆ ಅರಣ್ಯ ಸಿಬ್ಬಂದಿ : ಅಸ್ಸಾಂ ಸರ್ಕಾರದ ಆದೇಶಕ್ಕೆ ಎನ್‌ಜಿಟಿ ತಡೆ

ವಿಧಾನಸಭೆ ಚುನಾವಣೆಗೆ ಅಸ್ಸಾಂ ಅರಣ್ಯ ಸಂರಕ್ಷಣಾ ಪಡೆಯ 1,600 ಸಿಬ್ಬಂದಿಯನ್ನು ನಿಯೋಜಿಸಲು ಕೋರಿದ್ದ ಅಸ್ಸಾಂ ಸರ್ಕಾರದ ಆದೇಶವನ್ನು ರಾಷ್ಟ್ರೀಯ ಹಸಿರು ನ್ಯಾಯಮಂಡಳಿಯ (ಎನ್‌ಜಿಟಿ) ಪೂರ್ವ ವಲಯ ಪೀಠ ಗುರುವಾರ (ಮಾ.2) ತಡೆಹಿಡಿದಿದೆ. ಈ ಆದೇಶವನ್ನು...

‘ಕರೂರು ದುರಂತದಲ್ಲಿ ಪಿತೂರಿ ಇದೆ’ ಈ ಘಟನೆಯಲ್ಲಿ ನನಗೂ ನ್ಯಾಯ ಬೇಕು: ಟಿವಿಕೆ ಮುಖ್ಯಸ್ಥ ನಟ, ರಾಜಕಾರಣಿ ವಿಜಯ್ ಆರೋಪ  

ಕರೂರಿನಲ್ಲಿ ನಡೆದ ದುರಂತ ಕಾಲ್ತುಳಿತ ಮತ್ತು ಅವರ ಕೊನೆಯ ಚಿತ್ರ ಜನನಾಯಗನ್ ಬಿ ಡುಗಡೆಯ ಹಿಂದೆ ಜಂಟಿ ಕುತಂತ್ರ ಮತ್ತು ಪಿತೂರಿ ಇದೆ ಎಂದು ಟಿವಿಕೆ ಮುಖ್ಯಸ್ಥ ವಿಜಯ್ ಗುರುವಾರ ಆರೋಪಿಸಿದ್ದಾರೆ ಮತ್ತು...

ತೆಲಂಗಾಣ| ಗೋಮಾಂಸ ಮಾರಾಟ ಆರೋಪ; ಮುಸ್ಲಿಂ ಸಮುದಾಯದ ತಂದೆ-ಮಗನ ಮೇಲೆ ಹಲ್ಲೆ

ಹನುಮಾನ್ ಜಯಂತಿ ಸಂದರ್ಭದಲ್ಲಿ ಗೋಮಾಂಸ ಮಾರಾಟ ಮಾಡಿದ ಆರೋಪದ ಮೇಲೆ ಹಿಂದುತ್ವವಾದಿ ಗುಂಪೊಂದು 60 ವರ್ಷದ ಮುಸ್ಲಿಂ ವ್ಯಕ್ತಿ ಮತ್ತು ಆತನ ಹದಿಹರೆಯದ ಮಗನ ಮೇಲೆ ಹಲ್ಲೆ ನಡೆಸಿರುವ ಘಟನೆ ತೆಲಂಗಾಣದ ಜಗ್ತಿಯಾಲ್...

‘ಕೇವಲ ಮುಸ್ಲಿಮರೇ ಶಾಸಕರಾಗಿದ್ದಾರೆ’..ಚುನಾವಣೆ ಗೆಲ್ಲಲು ಧರ್ಮ ಮುಂದಿಟ್ಟ ಗುರುವಾಯೂರು ಬಿಜೆಪಿ ಅಭ್ಯರ್ಥಿ

ಕೇರಳದ ಗುರುವಾಯೂರು ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಬಿ. ಗೋಪಾಲಕೃಷ್ಣನ್ ಚುನಾವಣೆ ಗೆಲ್ಲಲು ಧರ್ಮವನ್ನೇ ಮುಖ್ಯ ಅಸ್ತ್ರವನ್ನಾಗಿ ಬಳಸಿಕೊಂಡಿದ್ದು, ಕಳೆದ 50 ವರ್ಷಗಳಲ್ಲಿ ಕೇವಲ ಮುಸ್ಲಿಮರೇ ಶಾಸಕರಾಗಿದ್ದಾರೆ ಎಂಬುವುದನ್ನು ಪುನರುಚ್ಚರಿಸಿದ್ದಾರೆ. ಚುನಾವಣಾ ಪ್ರಚಾರದ ಭಾಗವಾಗಿ...

ಹೊಸ ಹಿಂದೂ ದೇವಾಲಯಕ್ಕೆ ಭೂಮಿ ಮಂಜೂರು ಮಾಡಿದ ಸಿಂಗಾಪುರ ಆಡಳಿತ

ಸಿಂಗಪುರದಲ್ಲಿ ಹೆಚ್ಚುತ್ತಿರುವ ಹಿಂದೂ ಸಮುದಾಯದ ಅಗತ್ಯಗಳನ್ನು ಪೂರೈಸಲು ಸಿಂಗಾಪುರ ಸರ್ಕಾರವು ನಗರ-ರಾಜ್ಯದ ಯಿಶುನ್ ಅವೆನ್ಯೂ 3 ರಲ್ಲಿ ಹೊಸ ಹಿಂದೂ ದೇವಾಲಯವನ್ನು ನಿರ್ಮಿಸಲು ಭೂಮಿ ಮಂಜೂರು ಮಾಡಿದೆ. ಏಪ್ರಿಲ್ 1 ರ ಬುಧವಾರದ ಮಾಧ್ಯಮ...

ಕೇರಳ ಚುನಾವಣೆಗೆ ಮುನ್ನ ಕಾಂಗ್ರೆಸ್ ನೇತೃತ್ವದ ಯುಡಿಎಫ್ ಗೆ ಬೆಂಬಲ ಘೋಷಿಸಿದ ‘ಅಂಬೇಡ್ಕರ್‌ವಾದಿ ಪ್ರಜಾಸತ್ತಾತ್ಮಕ ರಂಗ’

ಎಡ ಸರ್ಕಾರ ಕೈಗೊಂಡ ಅಭಿವೃದ್ಧಿ ಉಪಕ್ರಮಗಳು ಆದಿವಾಸಿ, ದಲಿತ ಮತ್ತು ಇತರ ಅಂಚಿನಲ್ಲಿರುವ ಸಮುದಾಯಗಳನ್ನು ಬದಿಗಿಟ್ಟಿವೆ ಎಂದು ಆರೋಪಿಸಿ, ಅಂಬೇಡ್ಕರ್‌ವಾದಿ ಪ್ರಜಾಸತ್ತಾತ್ಮಕ ರಂಗ (ಎಡಿಎಫ್) ಬುಧವಾರ ಕಾಂಗ್ರೆಸ್ ನೇತೃತ್ವದ ಯುನೈಟೆಡ್ ಪ್ರಜಾಸತ್ತಾತ್ಮಕ ರಂಗ...

ಐಎಎಸ್‌ ಅಧಿಕಾರಿ ರೋಹಿಣಿ ಸಿಂಧೂರಿ ವಿರುದ್ಧ ತನಿಖೆಗೆ ಪೂರ್ವಾನುಮತಿ ನೀಡಲು ಹೈಕೋರ್ಟ್ ನಿರ್ದೇಶನ

ಪರಿಸರ ಸ್ನೇಹಿ ಬಟ್ಟೆ ಚೀಲಗಳ ಖರೀದಿಯಲ್ಲಿ ನಡೆದಿದೆ ಎನ್ನಲಾದ ಅಕ್ರಮಗಳಿಗೆ ಸಂಬಂಧಿಸಿದಂತೆ, ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ ವಿರುದ್ಧ ಎಫ್‌ಐಆರ್ ದಾಖಲಿಸಲು ಅನುಮತಿಸುವಂತೆ ಹೈಕೋರ್ಟ್ ರಾಜ್ಯ ಸರ್ಕಾರಕ್ಕೆ ನಿರ್ದೇಶನ ನೀಡಿದೆ ಎಂದು ವರದಿಯಾಗಿದೆ....

ನ್ಯಾಯಾಂಗ ಅಧಿಕಾರಿಗಳನ್ನು ರಕ್ಷಿಸುವಲ್ಲಿ ಚುನಾವಣಾ ಆಯೋಗ ವಿಫಲವಾಗಿದೆ: ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳದ ಮಾಲ್ಡಾ ಜಿಲ್ಲೆಯಲ್ಲಿ ಎಸ್‌ಐಆರ್ ಕಾರ್ಯದಲ್ಲಿ ತೊಡಗಿರುವ ನ್ಯಾಯಾಂಗ ಅಧಿಕಾರಿಗಳನ್ನು 'ರಕ್ಷಿಸುವಲ್ಲಿ ಚುನಾವಣಾ ಆಯೋಗ ವಿಫಲವಾಗಿದೆ' ಎಂದು ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ದೂಷಿಸಿದ್ದಾರೆ. ಮತದಾರರ ಪಟ್ಟಿಯಿಂದ ಹೆಸರುಗಳನ್ನು ಅಳಿಸಿಹಾಕಿದ್ದಕ್ಕಾಗಿ ಬುಧವಾರ ಪ್ರತಿಭಟನಾಕಾರರು ಹಲವಾರು...

ಎಎಪಿಯ ರಾಜ್ಯಸಭಾ ಉಪನಾಯಕ ಸ್ಥಾನದಿಂದ ರಾಘವ್ ಚಡ್ಡಾಗೆ ಕೋಕ್, ಅಶೋಕ್ ಮಿತ್ತಲ್ ಗೆ ಅಧಿಕಾರ: ವರದಿ

ಮಹತ್ವದ ಬೆಳವಣಿಗೆಯೊಂದರಲ್ಲಿ, ಆಮ್ ಆದ್ಮಿ ಪಕ್ಷ (ಎಎಪಿ) ರಾಜ್ಯಸಭೆಯಲ್ಲಿ ರಾಘವ್ ಚಡ್ಡಾ ಅವರನ್ನು ಉಪನಾಯಕ ಹುದ್ದೆಯಿಂದ ಬದಲಾಯಿಸಲು ಮುಂದಾಗಿದ್ದು, ಇದು ಪಕ್ಷದೊಳಗಿನ ಆಂತರಿಕ ಬಿರುಕು ಉಂಟಾಗಿರುವ ಲಕ್ಷಣಗಳನ್ನು ಸೂಚಿಸುತ್ತದೆ. ಮೇಲ್ಮನೆಯಲ್ಲಿ ಪಕ್ಷದ ಹೊಸ...