Homeಅಂತರಾಷ್ಟ್ರೀಯಲೆಬನಾನ್ ಮೇಲೆ ಇಸ್ರೇಲ್ ದಾಳಿ | 600 ಭಾರತೀಯ ಸೈನಿಕರು ಅಪಾಯದಲ್ಲಿ!

ಲೆಬನಾನ್ ಮೇಲೆ ಇಸ್ರೇಲ್ ದಾಳಿ | 600 ಭಾರತೀಯ ಸೈನಿಕರು ಅಪಾಯದಲ್ಲಿ!

- Advertisement -
- Advertisement -

ಇಸ್ರೇಲ್ ಸೇನೆ ಹಿಜ್ಬುಲ್ಲಾ ವಿರುದ್ಧ ಮಾಡಿದ್ದ ದಾಳಿಗೆ ವಿಶ್ವಸಂಸ್ಥೆಯ ಶಾಂತಿಪಾಲಕ ಸೇನೆ  ಒಳಗಾಗಿದೆ. ಲೆಬನಾನ್‌ ಗಡಿಯ ಈ ವಿಶ್ವಸಂಸ್ಥೆಯ ಶಾಂತಿಪಾಲಕ ಸೇನೆಯಲ್ಲಿ 600 ಭಾರತೀಯ ಸೈನಿಕರಿದ್ದು ಈ ದಾಳಿಯ ಬಗ್ಗೆ ಭಾರತ ಆತಂಕ ವ್ಯಕ್ತಪಡಿಸಿದೆ. ವಿಶ್ವಸಂಸ್ಥೆಯ ಈ ಸೇನೆಯಲ್ಲಿರುವ ಭಾರತೀಯ ಸೈನಿಕರು ಇಸ್ರೇಲ್-ಲೆಬನಾನ್ ಗಡಿಯಲ್ಲಿ 120-ಕಿಮೀ ನೀಲಿ ರೇಖೆಯ ಉದ್ದಕ್ಕೂ ನೆಲೆಸಿದ್ದಾರೆ.ಇಸ್ರೇಲ್ ದಾಳಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ

ಶುಕ್ರವಾರ ಈ ಬಗ್ಗೆ ಹೇಳಿಕೆ ಬಿಡುಗಡೆ ಮಾಡಿರುವ ವಿದೇಶಾಂಗ ವ್ಯವಹಾರಗಳ ಸಚಿವಾಲಯವು, “ನೀಲಿ ರೇಖೆಯ ಉದ್ದಕ್ಕೂ ಹದಗೆಡುತ್ತಿರುವ ಭದ್ರತಾ ಪರಿಸ್ಥಿತಿಯ ಬಗ್ಗೆ ನಾವು ಕಳವಳಗೊಂಡಿದ್ದೇವೆ. ನಾವು ಪರಿಸ್ಥಿತಿಯನ್ನು ನಿಕಟವಾಗಿ ಮೇಲ್ವಿಚಾರಣೆ ಮಾಡುತ್ತಿದ್ದೇವೆ. ವಿಶ್ವಸಂಸ್ಥೆಯ ಆವರಣದ ಪಾವಿತ್ರತೆಯನ್ನು ಎಲ್ಲರೂ ಗೌರವಿಸಬೇಕು ಮತ್ತು ವಿಶ್ವಸಂಸ್ಥೆಯ ಶಾಂತಿಪಾಲಕರ ಸುರಕ್ಷತೆ ಮತ್ತು ಅವರ ಆದೇಶದ ಪವಿತ್ರತೆಯನ್ನು ಖಚಿತಪಡಿಸಿಕೊಳ್ಳಲು ಸೂಕ್ತ ಕ್ರಮಗಳನ್ನು ತೆಗೆದುಕೊಳ್ಳಲಾಗಿದೆ” ಎಂದು ಹೇಳಿದೆ.

ಇದನ್ನೂಓದಿ: ಜಮ್ಮು ಕಾಶ್ಮೀರ | ನ್ಯಾಷನಲ್ ಕಾನ್ಫರೆನ್ಸ್‌ ಸರ್ಕಾರಕ್ಕೆ ಆಮ್ ಆದ್ಮಿ ಪಕ್ಷ ಬೆಂಬಲ

ಲೆಬನಾನ್‌ನಲ್ಲಿರುವ ವಿಶ್ವಸಂಸ್ಥೆಯ ಮಧ್ಯಂತರ ಪಡೆ (UNIFIL)ನ ನಖೌರಾ ಪ್ರಧಾನ ಕಛೇರಿ ಮತ್ತು ಹತ್ತಿರದ ಸ್ಥಾನಗಳನ್ನು ಇಸ್ರೇಲಿ ಪಡೆಗಳು ಪದೇ ಪದೇ ದಾಳಿಯ ಮಾಡುತ್ತಿದೆ ವಿಶ್ವಸಂಸ್ಥೆ ಹೇಳಿದ ಒಂದು ದಿನದ ನಂತರ ಭಾರತ ಸರ್ಕಾರ ಈ ಹೇಳಿಕೆ ನೀಡಿದೆ.ಇಸ್ರೇಲ್ ದಾಳಿ

“ಇಂದು ಬೆಳಿಗ್ಗೆ, ಇಸ್ರೇಲ್ ಸೇನೆ ಮೆರ್ಕಾವಾ ಟ್ಯಾಂಕ್ ನಖೌರಾದಲ್ಲಿನ ಯುನಿಫಿಲ್‌ನ ಪ್ರಧಾನ ಕಛೇರಿಯಲ್ಲಿನ ವೀಕ್ಷಣಾ ಗೋಪುರದ ಕಡೆಗೆ ತನ್ನ ಆಯುಧವನ್ನು ಹಾರಿಸಿದ್ದು, ಇಬ್ಬರು ಶಾಂತಿಪಾಲಕರು ಗಾಯಗೊಂಡಿದ್ದಾರೆ. ಅದೃಷ್ಟವಶಾತ್ ಯಾವುದೆ ಗಂಭೀರ ಗಾಯಗಳಾಗಿಲ್ಲ. ಆದರೆ ಅವರು ಆಸ್ಪತ್ರೆಯಲ್ಲಿಯೇ ಇದ್ದಾರೆ” ಎಂದು ವಿಶ್ವಸಂಸ್ಥೆ ಹೇಳಿಕೆ ತಿಳಿಸಿದೆ.

ಇಸ್ರೇಲ್-ಲೆಬನಾನ್ ಗಡಿಯಲ್ಲಿನ ಪರಿಸ್ಥಿತಿಯು ಹಿಜ್ಬುಲ್ಲಾದ ಮಾಜಿ ಮುಖ್ಯಸ್ಥ ಹಸನ್ ನಸ್ರಲ್ಲಾ ಅವರ ಹತ್ಯೆಯ ನಂತರ ತೀವ್ರವಾಗಿ ಉಲ್ಬಣಗೊಂಡಿದೆ. ಇಸ್ರೇಲ್ ಈ ಪ್ರದೇಶದಲ್ಲಿ ಭೂ-ಆಧಾರಿತ ಶಸ್ತ್ರಾಸ್ತ್ರಗಳನ್ನು ಬಳಸುತ್ತಿದೆ ಎಂದು ವರದಿಯಾಗಿದ್ದು, ಅಲ್ಲಿರುವ ಪಡೆಗಳಿಗೆ ಹೆಚ್ಚಿನ ಅಪಾಯವಿದೆ ಎಂದು ವರದಿಯಾಗಿದೆ. ಆದರೆ UNIFIL ಪೋಸ್ಟ್‌ಗಳ ಸಮೀಪವಿರುವ ಪ್ರದೇಶಗಳಲ್ಲಿ ಹೆಜ್ಬುಲ್ಲಾ ಕಾರ್ಯನಿರ್ವಹಿಸುತ್ತಿದೆ ಎಂದು ಇಸ್ರೇಲ್ ಆರೋಪಿಸಿದೆ.

ವಿಡಿಯೊ ನೋಡಿ: ಶಿಲ್ಪಕಲೆಗಳ ತವರೂರು ಹಾಸನದಲ್ಲಿ ಮಹಾತ್ಮ ಗಾಂಧಿಯ ವಿರೂಪ ಪ್ರತಿಮೆಗಳ ರಚನೆ; ಉದ್ಘಾಟನೆ ರದ್ದು!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ದಲಿತರು, ಅಲ್ಪಸಂಖ್ಯಾತರ ಮೇಲಿನ ಹಿಂಸಾಚಾರದ ಕುರಿತು ವಿಶ್ವಸಂಸ್ಥೆಯ ಕಠಿಣ ಪ್ರಶ್ನೆ: ಸಂಶೋಧನಾತ್ಮಕ ವರದಿಗಳನ್ನು ಆಧರಿಸಿ ಭಾರತಕ್ಕೆ CERD ಚಾಟಿ

ನವದೆಹಲಿ: ಭಾರತದಲ್ಲಿ ದಲಿತರು, ಆದಿವಾಸಿಗಳು, ಮುಸ್ಲಿಮರು ಹಾಗೂ ಇತರ ಅಲ್ಪಸಂಖ್ಯಾತ ಸಮುದಾಯಗಳು ಎದುರಿಸುತ್ತಿರುವ ತಾರತಮ್ಯ, ಹಿಂಸೆ ಮತ್ತು ಹಕ್ಕುಗಳ ಉಲ್ಲಂಘನೆ ಕುರಿತು ವಿಶ್ವಸಂಸ್ಥೆಯ ಜನಾಂಗೀಯ ತಾರತಮ್ಯ ನಿರ್ಮೂಲನೆ ಕುರಿತ ಸಮಿತಿ (CERD) ತೀವ್ರ...

ಪಶ್ಚಿಮ ಬಂಗಾಳ| ಕಳೆದ ಒಂದು ತಿಂಗಳಲ್ಲಿ ಕ್ರಿಶ್ಚಿಯನ್ನರ ಮೇಲೆ ಸತತ ದಾಳಿ

ಪಶ್ಚಿಮ ಬಂಗಾಳದ ಚರ್ಚ್ ಒಂದರ ಆವರಣದಲ್ಲಿರುವ ಸ್ಮಶಾನದಲ್ಲಿ ಮೃತರೊಬ್ಬರಿಗೆ ಕೊನೆಯ ವಿದಾಯ ಕೋರುತ್ತಿದ್ದ ಕ್ರಿಶ್ಚಿಯನ್ ಕುಟುಂಬದ ಮೇಲೆ ಹಿಂದುತ್ವ ಗುಂಪೊಂದು ದಾಳಿ ನಡೆಸಿದೆ ಎಂದು ಆರೋಪಿಸಲಾಗಿದೆ. ಈ ಘಟನೆಯು ಆಗಸ್ಟ್ 14 ರಂದು ಪೂರ್ಬ...

‘ನಮ್ಮ ರಕ್ತದಿಂದ ಅವರು ಬಾಯಾರಿಕೆಯನ್ನು ತಣಿಸಿಕೊಳ್ಳುತ್ತಾರೆಯೇ?’: ಕೇರಳ ವಿವಿಯಲ್ಲಿ ಜಾತಿ ತಾರತಮ್ಯದ ವಿರುದ್ಧ ದಲಿತ ಸಂಶೋಧನಾ ವಿದ್ಯಾರ್ಥಿನಿ ಅನಿರ್ದಿಷ್ಟಾವಧಿ ಉಪವಾಸ

ತಿರುವನಂತಪುರಂ: ಜಾತಿ ಮತ್ತು ಲಿಂಗ ಆಧಾರಿತ ತಾರತಮ್ಯ, ಕಿರುಕುಳ ಹಾಗೂ ಶೈಕ್ಷಣಿಕ ಅವಕಾಶಗಳ ನಿರಾಕರಣೆಯ ಆರೋಪಗಳನ್ನು ಮುಂದಿಟ್ಟುಕೊಂಡು ಕೇರಳದ ತುಂಚತ್ ಎಳುಥಾಚನ್ ಮಲಯಾಳಂ ವಿಶ್ವವಿದ್ಯಾಲಯದ ದಲಿತ ಪಿಎಚ್‌ಡಿ ಸಂಶೋಧನಾ ವಿದ್ಯಾರ್ಥಿನಿ ಅನಘಾ ಶಾಸಿ...

ಸ್ವತಂತ್ರ ಭಾರದ್ವಾಜ್ ಬಂಧನದ ಬೆನ್ನಲ್ಲೇ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ ವಿದ್ಯಾರ್ಥಿನಿ ಮನೆ ಮೇಲೆ ಕಲ್ಲು ತೂರಾಟ, ಪೊಲೀಸರ ರಕ್ಷಣೆಗೆ ಮನವಿ

ನವದೆಹಲಿಯ ಜಂತರ್ ಮಂತರ್‌ನಲ್ಲಿ ನಡೆದ ಸಿಜೆಪಿ ಪ್ರತಿಭಟನೆಯ ವೇಳೆ ಸಂಜಯ್ ಆಝಾದ್ ಎಂಬುವವರ ಮೇಲೆ ಸ್ವಯಂಘೋಷಿತ ಗೋರಕ್ಷಕ ಸ್ವತಂತ್ರ ಭಾರದ್ವಾಜ್ ಭೀಕರವಾಗಿ ಹಲ್ಲೆ ನಡೆಸಿದ್ದನು. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಆತನನ್ನು ಬಂಧಿಸಿದ...

ಜನ್ ಧನ್ ಯೋಜನೆಯಡಿ ತೆರೆಯಲಾದ ಪ್ರತಿ ನಾಲ್ಕನೇ ಬ್ಯಾಂಕ್‌ ಖಾತೆ ನಿಷ್ಕ್ರಿಯ: ಆರ್‌ಟಿಐ ಮಾಹಿತಿ

ಮಾಹಿತಿ ಹಕ್ಕು (ಆರ್‌ಟಿಐ) ಕಾಯ್ದೆಯಡಿ ಲಭ್ಯವಾಗಿರುವ ಉತ್ತರದ ಪ್ರಕಾರ, ಪ್ರಧಾನಮಂತ್ರಿ ಜನ್ ಧನ್ ಯೋಜನೆಯಡಿ ತೆರೆಯಲಾದ ಪ್ರತಿ ನಾಲ್ಕನೇ ಖಾತೆಯು ನಿಷ್ಕ್ರಿಯಗೊಂಡಿದೆ. ಸುಮಾರು 5.72 ಕೋಟಿ ಖಾತೆಗಳಲ್ಲಿ ಶೂನ್ಯ ಬ್ಯಾಲೆನ್ಸ್ ಇದೆ. ಆಗಸ್ಟ್ 12,...

ಬಡ ಪೌರ ಕಾರ್ಮಿಕರ ಮೇಲೆ ದರ್ಪ ಮೆರೆದ ಸಚಿವ ಕೃಷ್ಣ ಬೈರೇಗೌಡ : ಸಾರ್ವಜನಿಕ ವಲಯದಲ್ಲಿ ತೀವ್ರ ಆಕ್ರೋಶ

ಸೇವೆಯನ್ನು ಖಾಯಂಗೊಳಿಸುವಂತೆ ಮನವಿ ಮಾಡಿದ ಬಡ ಪೌರ ಕಾರ್ಮಿಕರೊಂದಿಗೆ ಗ್ರೇಟರ್ ಬೆಂಗಳೂರು ನಗರಾಭಿವೃದ್ಧಿ ಸಚಿವ ಕೃಷ್ಣ ಬೈರೇಗೌಡ ಅವರು ದರ್ಪ ಮೆರೆದಿರುವುದು ಸಾರ್ವಜನಿಕ ವಲಯದಲ್ಲಿ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಶನಿವಾರ (ಸೆ.6) ಬೆಂಗಳೂರಿನ...

ಗ್ರಾಮೀಣ ಭಾಗದ ಶಾಲಾ ಮಕ್ಕಳಿಗೆ ಶಿಕ್ಷಣ ಮತ್ತು ಉದ್ಯೋಗದಲ್ಲಿ 7.5% ಮೀಸಲಾತಿ: ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್

ಗ್ರಾಮೀಣ ಹಾಗೂ ಬಡ ವಿದ್ಯಾರ್ಥಿಗಳ ಉನ್ನತ ಶಿಕ್ಷಣದ ಕನಸಿಗೆ ಬಲ ತುಂಬುವ ನಿಟ್ಟಿನಲ್ಲಿ ಸರ್ಕಾರಿ ಶಾಲಾ ವಿದ್ಯಾರ್ಥಿಗಳಿಗೆ ಶಿಕ್ಷಣ ಹಾಗೂ ಉದ್ಯೋಗದಲ್ಲಿ ಶೇಕಡಾ 7.5 ರಷ್ಟು ಮೀಸಲಾತಿ ಕಲ್ಪಿಸುವುದಾಗಿ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್...

ಪಶ್ಚಿಮ ಬಂಗಾಳದ ಪ್ರವಾಸೋದ್ಯಮ ಜಾಹೀರಾತಿನಲ್ಲಿ ಐಫೆಲ್ ಟವರ್, ಈಜಿಪ್ಟ್ ಪಿರಮಿಡ್: ಆದರೆ ಬಂಗಾಳವೇ ನಾಪತ್ತೆ!

ಪಶ್ಚಿಮ ಬಂಗಾಳವನ್ನು ಜಾಗತಿಕ ಪ್ರವಾಸೋದ್ಯಮ ಭೂಪಟದಲ್ಲಿ ಮುನ್ನೆಲೆಗೆ ತರುವ ಉದ್ದೇಶದಿಂದ ಬಿಡುಗಡೆ ಮಾಡಲಾದ ರಾಜ್ಯದ ಹೊಸ ಪ್ರವಾಸೋದ್ಯಮ ಜಾಹೀರಾತು ಈಗ ತೀವ್ರ ಟೀಕೆ ಹಾಗೂ ಅಪಹಾಸ್ಯಕ್ಕೆ ಈಡಾಗಿದೆ. ಈ ಜಾಹೀರಾತನ್ನು ಒಮ್ಮೆ ಗಮನಿಸಿದರೆ...

ಅಮೆರಿಕದಲ್ಲಿ ಮೋಹನ್‌ ಭಾಗವತ್ ಸೌಹಾರ್ದತೆ ಮಾತು; ಮಹಾರಾಷ್ಟ್ರದ ಗಾರ್ಬಾ-ದಾಂಡಿಯಾ ಕಾರ್ಯಕ್ರಮಗಳಲ್ಲಿ ಮುಸ್ಲಿಮರಿಗೆ ನಿಷೇಧ ಹೇರಿದ ವಿಎಚ್‌ಪಿ

ರಾಷ್ಟ್ರೀಯ ಸ್ವಯಂಸೇವಕ ಸಂಘದ (ಆರ್‌ಎಸ್‌ಎಸ್) ಮುಖ್ಯಸ್ಥ ಮೋಹನ್ ಭಾಗವತ್ ಅವರು ನ್ಯೂಯಾರ್ಕ್‌ನಲ್ಲಿ ಮಾಡಿದ ಭಾಷಣದಲ್ಲಿ ಧಾರ್ಮಿಕ ಸೌಹಾರ್ದತೆ, ಪರಸ್ಪರ ಗೌರವ ಮತ್ತು ಪ್ರತಿಯೊಂದು ಸಮುದಾಯದ ಗುರುತಿನ ರಕ್ಷಣೆ ಕುರಿತು ಮಾತನಾಡಿದ ಕೆಲವೇ ದಿನಗಳ...

ಸೈಬರ್ ವಂಚನೆಗೊಳಗಾದ ಸಂತ್ರಸ್ತರಿಗೆ ನೆರವು: ಕರ್ನಾಟಕದಲ್ಲಿ ಶೀಘ್ರವೇ ‘ಇ-ಶೂನ್ಯ ಎಫ್‌ಐಆರ್’ ಜಾರಿ

ಸೈಬರ್ ವಂಚನೆಗೊಳಗಾದ ಸಂತ್ರಸ್ತರು ಇನ್ನು ಮುಂದೆ ದೂರು ದಾಖಲಿಸಲು ಪೊಲೀಸ್ ಠಾಣೆಗಳಿಗೆ ಅಲೆಯಬೇಕಿಲ್ಲ. ಸೈಬರ್ ಅಪರಾಧ ಪ್ರಕರಣಗಳ ಎಫ್‌ಐಆರ್ ದಾಖಲಾತಿಯನ್ನು ಚುರುಕುಗೊಳಿಸುವ ಹಾಗೂ ಜನಸ್ನೇಹಿಯಾಗಿಸುವ ಉದ್ದೇಶದಿಂದ ಭಾರತೀಯ ಸೈಬರ್ ಅಪರಾಧ ಸಮನ್ವಯ ಕೇಂದ್ರ...