Homeಮುಖಪುಟಲೆಬನಾನ್‌ ಮೇಲೆ ಮುಂದುವರೆದ ಇಸ್ರೇಲ್ ದಾಳಿ | ಹಿಜ್ಬುಲ್ಲಾದ ಮತ್ತೊಬ್ಬ ಮುಖಂಡ ನಬಿಲ್ ಕೌಕ್ ಹತ್ಯೆ

ಲೆಬನಾನ್‌ ಮೇಲೆ ಮುಂದುವರೆದ ಇಸ್ರೇಲ್ ದಾಳಿ | ಹಿಜ್ಬುಲ್ಲಾದ ಮತ್ತೊಬ್ಬ ಮುಖಂಡ ನಬಿಲ್ ಕೌಕ್ ಹತ್ಯೆ

- Advertisement -
- Advertisement -

ಲೆಬನಾನಿನ ಬಂಡುಕೋರ ಗುಂಪು ಹಿಜ್ಬುಲ್ಲಾದ ಮುಖ್ಯಸ್ಥ ಹಸನ್ ನಸ್ರಲ್ಲಾ ಅವರ ಹತ್ಯೆಯ ಒಂದು ದಿನದ ನಂತರ, ಬೈರುತ್ ಅನ್ನು ಗುರಿಯಾಗಿಸಿಕೊಂಡು ನಡೆಸಿದ ಸರಣಿ ವೈಮಾನಿಕ ದಾಳಿಯಲ್ಲಿ ಸಂಘಟನೆಯ ಮತ್ತೊಬ್ಬ ಉನ್ನತ ನಾಯಕ ನಬಿಲ್ ಕೌಕ್ ಅವರನ್ನು ಹತ್ಯೆ ಮಾಡಿರುವುದಾಗಿ ಇಸ್ರೇಲ್ ಸೇನೆ ಹೇಳಿಕೊಂಡಿದೆ.ಇಸ್ರೇಲ್ ದಾಳಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ

ಇಸ್ರೇಲಿ ರಕ್ಷಣಾ ಪಡೆಗಳು (ಐಡಿಎಫ್) ಇರಾನ್ ಬೆಂಬಲಿತ ಬಂಡುಕೋರ ಸಂಘಟನೆಯೊಳಗಿನ ಹಿರಿಯ ವ್ಯಕ್ತಿಯಾದ ಕೌಕ್‌ನ ಹತ್ಯೆಯನ್ನು ಎಕ್ಸ್‌ನಲ್ಲಿ ಘೋಷಿಸಿದೆ. “ಮಿಲಿಟರಿ ಗುಪ್ತಚರ ಮಾರ್ಗದರ್ಶನದಲ್ಲಿ ಇಸ್ರೇಲಿ ಫೈಟರ್ ಜೆಟ್‌ಗಳು ಆಯೋಜಿಸಿದ ನಿಖರವಾದ ವೈಮಾನಿಕ ದಾಳಿಯಲ್ಲಿ ನಬೀಲ್ ಕೌಕ್ ಅವರನ್ನು ಹತ್ಯೆ ಮಾಡಲಾಗಿದೆ” ಎಂದು ಪೋಸ್ಟ್ ಹೇಳಿದೆ.

ಇದನ್ನೂಓದಿ: ದೆಹಲಿ: ವೇಗ ತಗ್ಗಿಸುವಂತೆ ಹೇಳಿದ ಪೊಲೀಸ್‌ಗೆ ಗುದ್ದಿದ ಕಾರು ಚಾಲಕ; ಗಂಭೀರ ಗಾಯಗೊಂಡಿದ್ದ ಪೇದೆ ಸಾವು

ಹೆಜ್ಬೊಲ್ಲಾ ಬಂಡುಕೋರ ಗುಂಪಿನ ಪ್ರಮುಖ ಕಮಾಂಡರ್ ಆಗಿದ್ದ ನಬಿಲ್ ಕೌಕ್, ಗುಂಪಿನ ಪ್ರಿವೆಂಟಿವ್ ಸೆಕ್ಯುರಿಟಿ ಘಟಕದ ಮುಖ್ಯಸ್ಥರಾಗಿದ್ದರು ಮತ್ತು ಅದರ ಕೇಂದ್ರ ಮಂಡಳಿಯಲ್ಲಿ ಪ್ರಮುಖ ಸ್ಥಾನವನ್ನು ಹೊಂದಿದ್ದರು. ಅವರನ್ನು ನಸ್ರಲ್ಲಾ ಅವರ ನಂತರದ ಸಂಭಾವ್ಯ ಉತ್ತರಾಧಿಕಾರಿ ಎಂದು ಭಾವಿಸಲಾಗಿತ್ತು.

ನಬೀಲ್ ಕೌಕ್ ಅವರು 1980 ರ ದಶಕದಿಂದಲೂ ಹಿಜ್ಬೊಲ್ಲಾದ ಸದಸ್ಯರಾಗಿದ್ದರು ಮತ್ತು ಈ ಹಿಂದೆ ದಕ್ಷಿಣ ಲೆಬನಾನ್‌ನಲ್ಲಿ ಹಿಜ್ಬೊಲ್ಲಾದ ಮಿಲಿಟರಿ ಕಮಾಂಡರ್ ಆಗಿ ಸೇವೆ ಸಲ್ಲಿಸಿದ್ದರು. 2020 ರಲ್ಲಿ ಅಮೆರಿಕ ಅವರ ವಿರುದ್ಧ ನಿರ್ಬಂಧಗಳನ್ನು ಘೋಷಿಸಿತ್ತು.ಇಸ್ರೇಲ್ ದಾಳಿ

ಇಸ್ರೇಲ್ ಘೋಷಣೆಗೆ ಹಿಜ್ಬುಲ್ಲಾ ತಕ್ಷಣಕ್ಕೆ ಯಾವುದೆ ಪ್ರತಿಕ್ರಿಯೆ ನೀಡಿಲ್ಲ. ಇತ್ತೀಚಿನ ವಾರಗಳಲ್ಲಿ ಇಸ್ರೇಲ್‌ ನಡೆಸಿದ ದಾಳಿಗಳಲ್ಲಿ ಹಲವಾರು ಹಿರಿಯ ಹಿಜ್ಬುಲ್ಲಾ ಕಮಾಂಡರ್‌ಗಳು ಕೊಲ್ಲಲ್ಪಟ್ಟಿದ್ದಾರೆ. ಇದಕ್ಕೆ ಉತ್ತರವಾಗಿ ಉತ್ತರ ಇಸ್ರೇಲ್‌ ಮೇಲೆ ನೂರಾರು ರಾಕೆಟ್‌ಗಳು ಮತ್ತು ಕ್ಷಿಪಣಿಗಳನ್ನು ಹಾರಿಸುವುದನ್ನು ಹಿಜ್ಬುಲ್ಲಾ ಮುಂದುವರಿಸಿದೆ. ಆದರೆ ಈ ದಾಳಿಗಳಲ್ಲಿ ಹೆಚ್ಚಿನವುಗಳನ್ನು ಇಸ್ರೇಲ್ ಹೊಡೆದುರುಳಿಸಿದೆ ಎಂದು ವರದಿಯಾಗಿದೆ.

ವಿಡಿಯೊ ನೋಡಿ: ಪ್ರಬಲ ಜಾತಿ ಸಂಘಗಳಿಗೆ ಹಣ ಹರಿದುಬರುತ್ತೆ, ತಳಸಮುದಾಯಗಳ ಸಂಪನ್ಮೂಲ ಸಂಪೂರ್ಣ ಕಿತ್ತುಕೊಳ್ಳಲಾಗಿದೆ-ಸಿ.ಜಿ. ಲಕ್ಷ್ಮಿಪತಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸುರಂಗ ರಸ್ತೆ ಕಾಮಗಾರಿ ವೇಳೆ ವಯನಾಡಿನಲ್ಲಿ ಭೂಕುಸಿತ: ಜನರು ಜೀವ ಉಳಿಸಿಕೊಳ್ಳಲು ಓಡಿದ ಭಯಾನಕ ದೃಶ್ಯ ಸೆರೆ

ಕೇರಳದ ವಯನಾಡ್ ಜಿಲ್ಲೆಯ ಮೇಪ್ಪಾಡಿಯಲ್ಲಿ ಮಂಗಳವಾರ (ಇಂದು) ಭೀಕರ ಭೂಕುಸಿತ ಸಂಭವಿಸಿದ್ದು, ಕನಿಷ್ಠ ಇಬ್ಬರು ಸಾವನ್ನಪ್ಪಿದ್ದಾರೆ ಮತ್ತು ಏಳು ಜನರು ಗಾಯಗೊಂಡಿದ್ದಾರೆ. ಅವಶೇಷಗಳ ಅಡಿಯಲ್ಲಿ ಸಿಲುಕಿರುವ ಜನರನ್ನು ರಕ್ಷಿಸಲು ಕಾರ್ಯಾಚರಣೆ ಮುಂದುವರಿದಿದ್ದು, ಈ...

ಒಟಿಟಿಗೆ ಬಂದ ಎರಡೇ ದಿನಕ್ಕೆ ದಿಲ್ಜಿತ್ ದೋಸಾಂಜ್ ನಟನೆಯ ‘ಸಟ್ಲಜ್’ ಸಿನಿಮಾ ಔಟ್! ಜೀ5 ವಿರುದ್ಧ ಆಕ್ರೋಶ, ಕಾನೂನು ಹೋರಾಟದ ಭರವಸೆ

ತೀವ್ರ ವಿವಾದ ಹಾಗೂ ಸೆನ್ಸಾರ್ ಮಂಡಳಿಯ ಕತ್ತರಿ ಪ್ರಯೋಗದ ನಡುವೆಯೂ ಕೊನೆಗೂ ಒಟಿಟಿ ಪರದೆಯ ಮೇಲೆ ಬಿಡುಗಡೆಯಾಗಿದ್ದ ಖ್ಯಾತ ನಟ ದಿಲ್ಜಿತ್ ದೋಸಾಂಜ್ ಅಭಿನಯದ 'ಸಟ್ಲಜ್' (ಮೂಲ ಶೀರ್ಷಿಕೆ: ಪಂಜಾಬ್ 95) ಚಿತ್ರವನ್ನು...

ಫೇಕ್ ಮದುವೆ ಜಾಲಕ್ಕೆ ಬಿದ್ದ ಫೇಮಸ್ ಗೋರಕ್ಷಕ ‘ಬಿಟ್ಟು ಬಜರಂಗಿ’

ಹರಿಯಾಣದಲ್ಲಿ "ಲವ್ ಜಿಹಾದ್" ಮತ್ತು ಅಂತರ್ಧರ್ಮೀಯ ವಿವಾಹಗಳ ವಿರುದ್ಧ ನಿರಂತರವಾಗಿ ಹೋರಾಡುತ್ತಾ, ತನ್ನದೇ ಆದ ಸಾರ್ವಜನಿಕ ಪ್ರಭಾವ ಬೆಳೆಸಿಕೊಂಡಿದ್ದ ರಾಜ್ ಕುಮಾರ್ ಅಲಿಯಾಸ್ ಬಿಟ್ಟು ಬಜರಂಗಿಗೆ ತನಗೆ ಇಂತಹದ್ದೊಂದು ಪರಿಸ್ಥಿತಿ ಎದುರಾಗಬಹುದು ಎಂಬ...

ಕರ್ನಾಟಕದ ಎಸ್‌ಐಆರ್ ಪ್ರಕ್ರಿಯೆಯಲ್ಲಿ ‘ಸಾಮೂಹಿಕ ಅಕ್ರಮ’ ಆರೋಪ: ರಾಜ್ಯ ಮುಖ್ಯ ಚುನಾವಣಾಧಿಕಾರಿಗೆ ದೂರು ನೀಡಿದ ಎನ್‌ಡಿಎ ನಿಯೋಗ

ಬೆಂಗಳೂರು: ಕರ್ನಾಟಕದಲ್ಲಿ ಸದ್ಯ ಚಾಲ್ತಿಯಲ್ಲಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಭಾರಿ ಪ್ರಮಾಣದ ಸಾಂಸ್ಥಿಕ ಅಕ್ರಮಗಳು ನಡೆಯುತ್ತಿವೆ ಎಂದು ಆರೋಪಿಸಿ, ರಾಜ್ಯದ ಪ್ರಮುಖ ವಿರೋಧ ಪಕ್ಷಗಳಾದ ಬಿಜೆಪಿ ಮತ್ತು...

SIR: ಮತದಾರರ ಹಕ್ಕು ರಕ್ಷಣೆಗೆ ಕಣಕ್ಕಿಳಿದ ‘ನಾಗರಿಕ ಮತ ಕಾವಲು ಸಮಿತಿ’

ರಾಜ್ಯದ ಶೋಷಿತ, ಹಿಂದುಳಿದ ಮತ್ತು ಅಂಚಿನಲ್ಲಿರುವ ಸಮುದಾಯಗಳ ಮತದಾನದ ಹಕ್ಕಿಗೆ ಯಾವುದೇ ಚ್ಯುತಿ ಬಾರದಂತೆ ತಡೆಯಲು ಬೂತ್ ಮಟ್ಟದಿಂದ ಹಿಡಿದು ರಾಜ್ಯ ಮಟ್ಟದವರೆಗೆ ‘ನಾಗರಿಕ ಮತ ಕಾವಲು ಸಮಿತಿ’ಯನ್ನು ಅಸ್ತಿತ್ವಕ್ಕೆ ತರಲಾಗಿದೆ. ಎಸ್‌ಐಆರ್...

ಮೋಹನ್‌ಲಾಲ್ ‘ದಂತ’ ಕಥೆ: ಅರಣ್ಯ ಇಲಾಖೆ ಮುಂದೆ 10 ಆನೆ ದಂತ, 13 ಮೂರ್ತಿಗಳ ಅಚ್ಚರಿಯ ಘೋಷಣೆ!

ನಟ ಮೋಹನ್‌ಲಾಲ್ ಅವರು ತಾವೇ ಕಾನೂನುಬಾಹಿರವಾಗಿ ವನ್ಯಜೀವಿ ವಸ್ತುಗಳನ್ನು ಹೊಂದಿರುವ ಆರೋಪದ ಮೇಲೆ ವಿಚಾರಣೆ ಎದುರಿಸುತ್ತಿದ್ದರೂ, ತಮ್ಮ ಬಳಿ 10 ಆನೆ ದಂತಗಳು ಮತ್ತು 13 ದಂತದ ಮೂರ್ತಿಗಳು ಇರುವುದಾಗಿ ಕೇರಳ ಅರಣ್ಯ...

ಅಯೋಧ್ಯೆ ರಾಮಮಂದಿರ ಹಗರಣ: ‘ಕದ್ದ ಹಣ’ ಹಂಚಿಕೆಯ ಮೊಬೈಲ್ ಚಾಟ್‌ಗಳು ಬಹಿರಂಗ; ತೀವ್ರಗೊಂಡ ತನಿಖೆ

ಲಕ್ನೋ: ಅಯೋಧ್ಯೆಯ ಶ್ರೀರಾಮ ಜನ್ಮಭೂಮಿ ತೀರ್ಥ ಕ್ಷೇತ್ರ ಟ್ರಸ್ಟ್‌ನ ನಿಧಿ ದುರುಪಯೋಗ ಮತ್ತು ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ ಅತ್ಯಂತ ಸ್ಫೋಟಕ ಮಾಹಿತಿ ಹೊರಬಿದ್ದಿದ್ದು, ತನಿಖೆ ತೀವ್ರಗೊಂಡಿದೆ. ಪ್ರಕರಣದ ಪ್ರಮುಖ ಆರೋಪಿಗಳ ಮೊಬೈಲ್ ಫೋನ್‌ಗಳ...

ಅಪ್ರಾಪ್ತ ಬಾಲಕಿಯ ಅತ್ಯಾಚಾರ-ಕೊಲೆ ಆರೋಪ : ಪ. ಬಂಗಾಳದ ಬಾರುಯಿಪುರದಲ್ಲಿ ಹಿಂಸಾಚಾರ ; ಶಂಕಿತ ಆರೋಪಿಯ ಗುಂಪು ಹತ್ಯೆ

ಪಶ್ಚಿಮ ಬಂಗಾಳದ ದಕ್ಷಿಣ 24 ಪರಗಣ ಜಿಲ್ಲೆಯ ಬಾರುಯಿಪುರದಲ್ಲಿ ಶನಿವಾರ (ಜು.4) ಮಧ್ಯಾಹ್ನದಿಂದ ನಾಪತ್ತೆಯಾಗಿದ್ದ ಅಪ್ರಾಪ್ತ ಬಾಲಕಿಯೊಬ್ಬಳ ಶವ ಭಾನುವಾರ (ಜು.5) ಬೆಳಿಗ್ಗೆ ಕೆರೆಯಲ್ಲಿ ಪತ್ತೆಯಾಗಿದ್ದು, ಆ ಬಳಿಕ ಅಲ್ಲಿ ತೀವ್ರ ಹಿಂಸಾತ್ಮಕ...

SIR ಬಳಿಕ ಒಡಿಶಾದ ಕರಡು ಮತದಾರರ ಪಟ್ಟಿ ಪ್ರಕಟ : 20 ಲಕ್ಷ ಹೆಸರುಗಳು ಡಿಲೀಟ್

ವಿಶೇಷ ತೀವ್ರ ಪರಿಷ್ಕರಣೆಯ (ಎಸ್‌ಐಆರ್) ಗಣತಿ ಹಂತದ ಬಳಿಕ ಚುನಾವಣಾ ಆಯೋಗ ಭಾನುವಾರ (ಜು.5) ಒಡಿಶಾದ ಕರಡು ಮತದಾರರ ಪಟ್ಟಿಯನ್ನು ಪ್ರಕಟಿಸಿದ್ದು, ಇದರಲ್ಲಿ 20 ಲಕ್ಷಕ್ಕೂ ಹೆಚ್ಚು ಜನರ ಹೆಸರುಗಳನ್ನು ಮತದಾರರ ಪಟ್ಟಿಯಿಂದ...

SIR: ಟಾರ್ಗೆಟ್ ಮತ್ತು ಒತ್ತಡದ ಕೆಲಸದಿಂದ ಮೂವರು ಸಿಬ್ಬಂದಿ ಸಾವು

ಕರ್ನಾಟಕದಲ್ಲಿ ನಡೆಯುತ್ತಿರುವ ಸಮಗ್ರ ಮತದಾರರ ಪಟ್ಟಿ ಪರಿಷ್ಕರಣೆ (SIR) ಪ್ರಕ್ರಿಯೆಯು ಕೆಳಹಂತದ ನೌಕರರ ಪಾಲಿಗೆ ಮರಣಶಾಸನವಾಗುತ್ತಿದೆಯೇ ಎಂಬ ಗಂಭೀರ ಪ್ರಶ್ನೆಯೊಂದು ಎದ್ದಿದೆ. ಅಧಿಕಾರಿಗಳು ನೀಡುತ್ತಿರುವ ಅತಿಯಾದ ಒತ್ತಡ ಮತ್ತು ಟಾರ್ಗೆಟ್ ಬೆನ್ನತ್ತುವ ಧಾವಂತದಿಂದಾಗಿ...