Homeಚಳವಳಿಬೆಲೆ ಏರಿಕೆಯ ವಿರುದ್ಧ ಜೂನ್ 16 ರಿಂದ 30 ವರೆಗೆ ರಾಷ್ಟ್ರವ್ಯಾಪಿ ಪ್ರತಿಭಟನೆಗೆ ಎಡ ಪಕ್ಷಗಳ...

ಬೆಲೆ ಏರಿಕೆಯ ವಿರುದ್ಧ ಜೂನ್ 16 ರಿಂದ 30 ವರೆಗೆ ರಾಷ್ಟ್ರವ್ಯಾಪಿ ಪ್ರತಿಭಟನೆಗೆ ಎಡ ಪಕ್ಷಗಳ ಕರೆ

ಇಂಧನ ಬೆಲೆಯನ್ನು ಕಡಿಮೆ ಮಾಡಬೇಕು ಹಾಗೂ ಅಗತ್ಯ ವಸ್ತುಗಳ ಮತ್ತು ಔಷಧಿಗಳ ಬೆಲೆಯನ್ನು ನಿಯಂತ್ರಿಸಬೇಕು ಎಂದು ಎಡ ಪಕ್ಷಗಳು ಒತ್ತಾಯಿಸಿವೆ.

- Advertisement -
- Advertisement -

ಇಂಧನ, ಅಗತ್ಯ ವಸ್ತುಗಳು ಮತ್ತು ಔಷಧಿಗಳ ಬೆಲೆಗಳು ಹೆಚ್ಚುತ್ತಿರುವುದರ ವಿರುದ್ಧ ಎಡ ಪಕ್ಷಗಳು ಬುಧವಾರದಿಂದ ಹದಿನೈದು ದಿನಗಳ ರಾಷ್ಟ್ರವ್ಯಾಪಿ ಪ್ರತಿಭಟನೆ ನಡೆಸಲಿವೆ ಎಂದು ಭಾನುವಾರ ಜಂಟಿ ಹೇಳಿಕೆ ನೀಡಿದೆ. ಕಮ್ಯುನಿಸ್ಟ್ ಪಾರ್ಟಿ ಆಫ್ ಇಂಡಿಯಾ (ಮಾರ್ಕ್ಸ್‌ವಾದಿ), ಕಮ್ಯುನಿಸ್ಟ್ ಪಾರ್ಟಿ ಆಫ್ ಇಂಡಿಯಾ, ಅಖಿಲ ಭಾರತ ಫಾರ್ವರ್ಡ್ ಬ್ಲಾಕ್, ರೆವಲ್ಯೂಷನರಿ ಸೋಷಿಯಲಿಸ್ಟ್ ಪಾರ್ಟಿ ಮತ್ತು ಕಮ್ಯುನಿಸ್ಟ್ ಪಾರ್ಟಿ ಆಫ್ ಇಂಡಿಯಾ (ಮಾರ್ಕ್ಸ್ವಾದಿ-ಲೆನಿನಿಸ್ಟ್)-ಲಿಬರೇಶನ್ ಸೇರಿದಂತೆ ಹಲವು ಎಡ ಪಕ್ಷಗಳು ಈ ಪ್ರತಿಭಟನೆಯನ್ನು ಬೆಂಬಲಿಸಿದೆ.

ಜೂನ್ 16 ರಂದು ಪ್ರತಿಭಟನೆ ಆರಂಭಗೊಂಡು ಜೂನ್ 30 ಕ್ಕೆ ಕೊನೆಗೊಳ್ಳಲಿದೆ ಎಂದು ಹೇಳಿಕೆಯಲ್ಲಿ ತಿಳಿಸಲಾಗಿದೆ. ಹೆಚ್ಚಿದ ಇಂಧನ ಬೆಲೆಯನ್ನು ಕಡಿಮೆ ಮಾಡಬೇಕು, ಅಗತ್ಯ ವಸ್ತುಗಳ ಮತ್ತು ಔಷಧಿಗಳ ಬೆಲೆಯನ್ನು ನಿಯಂತ್ರಿಸಲು ಎಡ ಪಕ್ಷಗಳು ಒಕ್ಕೂಟ ಸರ್ಕಾರವನ್ನು ಒತ್ತಾಯಿಸಿವೆ.

ಇದನ್ನೂ ಓದಿ: ಬೆಂಗಳೂರಿನ ರೌಡಿಗಳಿಗೆ ಆಯುಧ ಪೂರೈಸುತ್ತಿದ್ದ ವೆಪನ್‌ ಡೀಲರ್‌ ಬಂಧನ

“ಎಲ್ಲಾ ಅಗತ್ಯ ವಸ್ತುಗಳ ಬೆಲೆಗಳು ಏರಿಕೆಯಾಗಿರುವುದರಿಂದ ಜನರ ಜೀವನೋಪಾಯದ ಮೇಲೆ ಹೊಡೆತ ಬೀಳುತ್ತಿವೆ. ಕೊರೊನಾ ದುರಂತದ ವಿನಾಶವನ್ನು ಎದುರಿಸಲು ಜನರಿಗೆ ಸಹಾಯ ಮಾಡುವ ಬದಲು, ನರೇಂದ್ರ ಮೋದಿ ಸರ್ಕಾರವು ಪೆಟ್ರೋಲಿಯಂ ಉತ್ಪನ್ನಗಳ ಬೆಲೆಯನ್ನು, ಮೇ 2 ರ ವಿಧಾನಸಭಾ ಚುನಾವಣೆಯ ಫಲಿತಾಂಶಗಳ ನಂತರ ಕನಿಷ್ಠ 21 ಪಟ್ಟು ಹೆಚ್ಚಿಸಿದೆ” ಎಂದು ಎಡ ಪಕ್ಷಗಳು ಆರೋಪಿಸಿವೆ.

“ಸಗಟು ಬೆಲೆ ಸೂಚ್ಯಂಕ (ಡಬ್ಲ್ಯುಪಿಐ) ಹನ್ನೊಂದು ವರ್ಷಗಳ ಗರಿಷ್ಠ ಮಟ್ಟಕ್ಕೆ ಏರಿಕೆಯಾಗಿದೆ. ಆಹಾರ ಉತ್ಪನ್ನಗಳ ಬೆಲೆಗಳು ಏಪ್ರಿಲ್‌ನಲ್ಲಿ 5% ದಷ್ಟು ಏರಿಕೆಯಾಗಿದೆ. ಪ್ರಾಥಮಿಕ ಸರಕುಗಳ ಬೆಲೆಗಳು 10.16% ದಷ್ಟು ಏರಿಕೆಯಾಗಿದೆ ಮತ್ತು ರೆಡಿ ಉತ್ಪನ್ನಗಳ ಬೆಲೆ 9.01% ದಷ್ಟು ಏರಿಕೆಯಾಗಿದೆ. ಈ ಸರಕುಗಳು ಚಿಲ್ಲರೆ ಮಾರುಕಟ್ಟೆಗಳನ್ನು ತಲುಪುವ ಹೊತ್ತಿಗೆ, ಗ್ರಾಹಕರಿಗೆ ಹೆಚ್ಚಿನ ಶುಲ್ಕ ವಿಧಿಸಲಾಗುತ್ತದೆ” ಎಂದು ಎಡ ಪಕ್ಷಗಳ ಜಂಟಿ ಹೇಳಿಕೆಯು ಹೇಳಿದೆ.

ಇದನ್ನೂ ಓದಿ: ಎಚ್.ಎಸ್. ದೊರೆಸ್ವಾಮಿಯವರ ’ನೆನಪಿನ ಸುರುಳಿ ತೆರೆದಾಗ’ ಕಂಡ ಕುವೆಂಪು

ಆರ್ಥಿಕತೆಯ ತೀವ್ರ ಹಿನ್ನಡೆ, ನಿರುದ್ಯೋಗ ಹೆಚ್ಚಳ, ಕೊಳ್ಳುವ ಶಕ್ತಿ ಕುಸಿಯುವಿಕೆ ಮತ್ತು ಹಸಿವಿನ ಮಟ್ಟ ಹೆಚ್ಚಳದ ಈ ಸಂಕಷ್ಟದ ಸಮಯದಲ್ಲಿ ಬೆಲೆ ಏರಿಕೆ ನಡೆಯುತ್ತಿದೆ ಎಂದು ಎಡ ಪಕ್ಷಗಳು ತಿಳಿಸಿವೆ.

“ಸರ್ಕಾರದ ಪ್ರೋತ್ಸಾಹದಡಿಯಲ್ಲೇ ಸ್ಪಷ್ಟ ಹಾಗೂ ನಿರ್ಲಜ್ಜವಾಗಿ ಕಾಳ ಮಾರುಕಟ್ಟೆ ಮತ್ತು ಸಂಗ್ರಹಣೆ ನಡೆಯುತ್ತಿದೆ. ಮೋದಿ ಸರ್ಕಾರವು ಇಂತಹ ಕಾಳ ಮಾರುಕಟ್ಟೆಯನ್ನು, ಅದರಲ್ಲೂ ವಿಶೇಷವಾಗಿ ಅಗತ್ಯ ಔಷಧಿಗಳ ಕಾಳ ಮಾರುಕಟ್ಟೆಯನ್ನು ಕಟ್ಟುನಿಟ್ಟಾಗಿ ನಿಗ್ರಹಿಸಬೇಕು” ಎಂದು ಹೇಳಿಕೆಯಲ್ಲಿ ತಿಳಿಸಲಾಗಿದೆ.

ಆದಾಯ ತೆರಿಗೆ ಪಾವತಿ ಮಾಡುವ ಅಡಿಯಲ್ಲಿ ಬರದ ಎಲ್ಲಾ ಕುಟುಂಬಗಳಿಗೆ ಒಕ್ಕೂಟ ಸರ್ಕಾರವು ತಕ್ಷಣ ಆರು ತಿಂಗಳವರೆಗೆ ತಿಂಗಳಿಗೆ 7,500 ರೂ.ಗಳ ನೇರ ನಗದು ವರ್ಗಾವಣೆಯನ್ನು ನೀಡಬೇಕು ಎಂದು ಎಡ ಪಕ್ಷಗಳು ಒತ್ತಾಯಿಸಿವೆ.

ಇದನ್ನೂ ಓದಿ: ಗೋಹತ್ಯೆ ತಡೆ ಕಾನೂನಿನ ದುರ್ಬಳಕೆ: ಪೊಲೀಸರ ವಿರುದ್ಧ ಅಲಹಾಬಾದ್ ಹೈಕೋರ್ಟ್ ಗರಂ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಶೀಘ್ರದಲ್ಲೇ ಹೊರಡುತ್ತೇನೆ’: ‘2-3 ವಾರಗಳಲ್ಲಿ’ ಇರಾನ್ ಮೇಲಿನ ಯುದ್ಧ ಕೊನೆಗೊಳಿಸುವ ಬಗ್ಗೆ ಸುಳಿವು ನೀಡಿದ ಅಮೆರಿಕ ಅಧ್ಯಕ್ಷ ಟ್ರಂಪ್ 

ವಾಷಿಂಗ್ಟನ್ ಡಿಸಿ: ಜಾಗತಿಕ ಇಂಧನ ಮಾರುಕಟ್ಟೆಗಳನ್ನು ಅಸ್ತವ್ಯಸ್ತಗೊಳಿಸಿರುವ ಒಂದು ತಿಂಗಳ ಕಾಲ ನಡೆದ ಯುದ್ಧದ ಸಂಭಾವ್ಯ ಅಂತ್ಯದ ಬಗ್ಗೆ ಸುಳಿವು ನೀಡುವ ಮೂಲಕ, ಮುಂದಿನ ಎರಡು ಮೂರು ವಾರಗಳ ಮೊದಲೇ ಇರಾನ್ ವಿರುದ್ಧದ...

ದೊಡ್ಡಬಳ್ಳಾಪುರದಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ : ಕೆಐಎಡಿಬಿ ವಿರುದ್ಧ ಬೀದಿಗಿಳಿದ ಜನ

ದೇವನಹಳ್ಳಿ ಬಳಿಕ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ ಪ್ರಾರಂಭಗೊಂಡಿದೆ. ಕರ್ನಾಟಕ ಕೈಗಾರಿಕಾ ಪ್ರದೇಶ ಅಭಿವೃದ್ದಿ ಮಂಡಳಿ (ಕೆಐಎಡಿಬಿ) ವಿರುದ್ಧ ಜನರು ಬೀದಿಗಿಳಿದಿದ್ದಾರೆ. ದೊಡ್ಡಬಳ್ಳಾಪುರ ತಾಲೂಕಿನ ದೊಡ್ಡಬೆಳವಂಗಲ...

ಬಿಹಾರ: ಪತಿಯನ್ನು ಹತ್ಯೆ ಮಾಡಿದ ಗುಂಪಿನಿಂದ ಬೆದರಿಕೆ; ಇಬ್ಬರು ಮಕ್ಕಳೊಂದಿಗೆ ವಿಷ ಸೇವಿಸಿದ ಮುಸ್ಲಿಂ ಮಹಿಳೆ ಸಾವು, ಮಕ್ಕಳ ಸ್ಥಿತಿ ಗಂಭೀರ

ಬಿಹಾರದ ರೋಹ್ತಾಸ್ ಜಿಲ್ಲೆಯ ಮುಸ್ಲಿಂ ಮಹಿಳೆಯೊಬ್ಬರು ಮಂಗಳವಾರ ತನ್ನ ಇಬ್ಬರು ಅಪ್ರಾಪ್ತ ಮಕ್ಕಳೊಂದಿಗೆ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ವರದಿಯಾಗಿದೆ.  ಪತಿಯನ್ನು ಅಮಾನುಷವಾಗಿ ಹಲ್ಲೆ ನಡೆಸಿ ಹತ್ಯೆ ಮಾಡಿದ್ದ ಆರೋಪಿಗಳಿಂದ ಬೆದರಿಕೆಗಳನ್ನು ತಾಳಲಾರದೆ...

ಅತ್ಯಾಚಾರ ಆರೋಪ: ಅಶೋಕ್ ಖರತ್ ಅವರ ಪುತ್ರನನ್ನು ವಿಚಾರಣೆಗಾಗಿ ವಶಕ್ಕೆ ಪಡೆದ ಎಸ್ಐಟಿ; ಪತ್ನಿಗಾಗಿ ಹುಡುಕಾಟ 

ನಾಸಿಕ್: ಅತ್ಯಾಚಾರ ಆರೋಪಿ ಸ್ವಯಂ ಘೋಷಿತ ದೇವಮಾನವ ಅಶೋಕ್ ಖರತ್ ವಿರುದ್ಧ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ), ನಾಸಿಕ್ ನಗರದಲ್ಲಿ ಆತನ ಮಗನನ್ನು ವಿಚಾರಣೆಗಾಗಿ ವಶಕ್ಕೆ ಪಡೆದಿದ್ದು, ಆತನ ಪತ್ನಿಗಾಗಿಯೂ...

ಇರಾಕ್‌ : ಬಗ್ದಾದ್‌ನಲ್ಲಿ ಯುಎಸ್‌ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅಪಹರಣ

ಇರಾಕ್‌ ರಾಜಧಾನಿ ಬಗ್ದಾದ್‌ ನಗರದ ಅಲ್-ಸಾದೂನ್ ಬೀದಿಯಲ್ಲಿರುವ ಬಗ್ದಾದ್ ಹೋಟೆಲ್ ಬಳಿ ಅಮೆರಿಕದ ಪ್ರಶಸ್ತಿ ವಿಜೇತ ಸ್ವತಂತ್ರ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅವರನ್ನು ಮಂಗಳವಾರ (ಮಾ.31, 2026) ಅಪಹರಿಸಲಾಗಿದೆ ಎಂದು ವರದಿಯಾಗಿದೆ. ಸಿಸಿಟಿವಿ ದೃಶ್ಯಾವಳಿಗಳ ಪ್ರಕಾರ,...

ವಾಣಿಜ್ಯ ಎಲ್‌ಪಿಜಿ ದರ 195.50 ರೂ. ಏರಿಕೆ : ಜನ ಸಾಮಾನ್ಯರಿಗೆ ಗಾಯದ ಮೇಲೆ ಬರೆ

ಪಶ್ಚಿಮ ಏಷ್ಯಾ ಸಂಘರ್ಷದಿಂದಾಗಿ ಜಾಗತಿಕ ತೈಲ ಬೆಲೆಗಳು ಏರುತ್ತಿರುವ ನಡುವೆ, ವಾಣಿಜ್ಯ ಎಲ್‌ಪಿಜಿ ದರವನ್ನು ಬುಧವಾರ (ಏ.1) 195.50 ರೂ. ಹೆಚ್ಚಿಸಲಾಗಿದೆ. ಸರ್ಕಾರಿ ಸ್ವಾಮ್ಯದ ತೈಲ ಕಂಪನಿಗಳ ಪ್ರಕಾರ, ಬೆಲೆ ಏರಿಕೆ ಬಳಿಕ...

ಕುಸಿಯುವುದರಲ್ಲಿ ರೂಪಾಯಿ ಮತ್ತು ಬಿಜೆಪಿ ವರ್ಚಸ್ಸಿನ ನಡುವೆ ತೀವ್ರ ಪೈಪೋಟಿಯಿದೆ : ಅಖಿಲೇಶ್ ಯಾದವ್ ವ್ಯಂಗ್ಯ

ಕುಸಿಯುವುದರಲ್ಲಿ ರೂಪಾಯಿ ಮತ್ತು ಬಿಜೆಪಿ ವರ್ಚಸ್ಸಿನ ನಡುವೆ ತೀವ್ರ ಪೈಪೋಟಿ ನಡೆಯುತ್ತಿದೆ ಎಂದು ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ವ್ಯಂಗ್ಯವಾಡಿದ್ದಾರೆ. ಬಿಜೆಪಿ ನಾಯಕರು ಹಾಗೂ ಅವರ ಸಹವರ್ತಿಗಳ ಭ್ರಷ್ಟಾಚಾರ ಮತ್ತು ದುರ್ನಡತೆಯ ಪ್ರಕರಣಗಳು...

ಅಂತರ್ಧರ್ಮೀಯ ‘ಲಿವ್-ಇನ್’ ಸಂಬಂಧ ಅಪರಾಧವಲ್ಲ: ಅಲಹಾಬಾದ್ ಹೈಕೋರ್ಟ್

ಅಂತರ್ಧರ್ಮೀಯ ಲಿವ್-ಇನ್ ಸಂಬಂಧವನ್ನು ನಿಷೇಧಿಸಲಾಗಿಲ್ಲ ಅಥವಾ ಯಾವುದೇ ಕಾನೂನಿನ ಅಡಿಯಲ್ಲಿ ಅಪರಾಧವಲ್ಲಎಂದು ತೀರ್ಪು ನೀಡಿರುವ ಅಲಹಾಬಾದ್ ಹೈಕೋರ್ಟ್, ಮಹಿಳೆಯ ಕುಟುಂಬದಿಂದ ಬೆದರಿಕೆ ಎದುರಿಸುತ್ತಿರುವ ದಂಪತಿಗಳಿಗೆ ರಕ್ಷಣೆ ನೀಡಿದೆ. ಸೋನ್‌ಭದ್ರಾದ ಕಾಜಲ್ ಪ್ರಜಾಪತಿ ಮತ್ತು ಅವರ...

‘ವೇತನ ಸಹಿತ ಪಿತೃತ್ವ ರಜೆಯನ್ನು ಕಾನೂನುಬದ್ಧಗೊಳಿಸಬೇಕು’; ರಾಜ್ಯಸಭೆಯಲ್ಲಿ ಎಎಪಿ ಸಂಸದ ರಾಘವ್ ಚಡ್ಡಾ ಒತ್ತಾಯ

ಭಾರತದಲ್ಲಿ ವೇತನ ಸಹಿತ ಪಿತೃತ್ವ ರಜೆಯನ್ನು ಕಾನೂನುಬದ್ಧ ಹಕ್ಕನ್ನಾಗಿ ಮಾಡಲು, ಹಂಚಿಕೆಯ ಆರೈಕೆ ಜವಾಬ್ದಾರಿಗಳನ್ನು ಒತ್ತಿಹೇಳಲು ಕಾನೂನನ್ನು ಜಾರಿಗೆ ತರಬೇಕೆಂದು ಎಎಪಿ ಸಂಸದ ರಾಘವ್ ಚಡ್ಡಾ ಒತ್ತಾಯಿಸಿದ್ದಾರೆ. ರಾಜ್ಯಸಭೆಯಲ್ಲಿ ಮಾತನಾಡಿದ ಅವರು, ತಂದೆ ಉದ್ಯೋಗ...

ಬಿಜೆಪಿ ಇತರ ರಾಜ್ಯಗಳ ಅಕ್ರಮ ಮತದಾರರನ್ನು ಸೇರಿಸುತ್ತಿದೆ : ಮಮತಾ ಬ್ಯಾನರ್ಜಿ ಆರೋಪ

ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಮಂಗಳವಾರ (ಮಾ.31) ಬಿಜೆಪಿ ಬಿಹಾರ, ರಾಜಸ್ಥಾನ, ಹರಿಯಾಣ ಮತ್ತು ಉತ್ತರ ಪ್ರದೇಶದ ಅಕ್ರಮ ಮತದಾರರನ್ನು ರಾಜ್ಯದ ಮತದಾರರ ಪಟ್ಟಿಯಲ್ಲಿ ಸೇರಿಸಲು ಪ್ರಯತ್ನಿಸುತ್ತಿದೆ ಎಂದು ಆರೋಪಿಸಿದರು. ಪಶ್ಚಿಮ...