Homeಕರ್ನಾಟಕಕಾದಂಬರಿ, ರಂಗಕೃತಿಗೆ ಎಡಪಂಥೀಯ ಧೋರಣೆ ಆಧಾರ: ಮೈಮ್‌ ರಮೇಶ್

ಕಾದಂಬರಿ, ರಂಗಕೃತಿಗೆ ಎಡಪಂಥೀಯ ಧೋರಣೆ ಆಧಾರ: ಮೈಮ್‌ ರಮೇಶ್

ಮೈಸೂರು ರಂಗಾಯಣ ನಿರ್ದೇಶಕ ಅಡ್ಡಂಡ ಸಿ.ಕಾರ್ಯಪ್ಪ ಅವರಿಗೆ ರಂಗಾಯಣದ ನಿವೃತ್ತ ಕಲಾವಿದ, ಹಿರಿಯ ರಂಗಕರ್ಮಿ ಮೈಮ್ ರಮೇಶ್ ಅವರಿಂದ ರಂಗಪಾಠ

- Advertisement -
- Advertisement -

ವಿವಾದಗಳಿಂದಲೇ ಸದಾ ಚರ್ಚೆಯಲ್ಲಿರುವ ಮೈಸೂರು ರಂಗಾಯಣ ನಿರ್ದೇಶಕ ಅಡ್ಡಂಡ ಸಿ.ಕಾರ್ಯಪ್ಪ ಅವರಿಗೆ ರಂಗಾಯಣದ ನಿವೃತ್ತ ಕಲಾವಿದ, ಹಿರಿಯ ರಂಗಕರ್ಮಿ ಮೈಮ್‌ ರಮೇಶ್‌ ರಂಗಪಾಠ ಮಾಡಿದ್ದಾರೆ.

ಎಡಪಂಥೀಯರ ಕುರಿತು ವಾಗ್ದಾಳಿ ನಡೆಸುತ್ತಿರುವ ಅಡ್ಡಂಡ ಸಿ.ಕಾರ್ಯಪ್ಪ ಅವರ ವರ್ತನೆಯನ್ನು ಖಂಡಿಸಿ ಬಹಿರಂಗ ಪತ್ರ ಬರೆದಿರುವ ಅವರು, “ಕಾದಂಬರಿ ಮತ್ತು ರಂಗಕೃತಿ ಎರಡೂ ಜಾಗತಿಕವಾಗಿ ಚಾಲ್ತಿಯಲ್ಲಿರುವ ಎಡಪಂಥೀಯ ಧೋರಣೆಯನ್ನು ಆಧರಿಸಿವೆ” ಎಂದು ತಿಳಿಸಿದ್ದಾರೆ.

ಪತ್ರದ ಪೂರ್ಣ ಪಠ್ಯ:

ಮಾನ್ಯರೇ,

ಕಳೆದ ಕೆಲವು ದಿನಗಳಿಂದ ಮೈಸೂರು ರಂಗಾಯಣದ ನಿರ್ದೇಶಕರಾಗಿರುವ ಅಡ್ಡಂಡ ಕಾರ್ಯಪ್ಪ ಅವರಿಂದಾಗಿ ‘ರಂಗಾಯಣ ಮೈಸೂರು’ ವಿವಾದಗಳ ಕಗ್ಗಾಡಿನಲ್ಲಿ ಸಿಕ್ಕಿಬಿದ್ದಿದೆ. ರಂಗಭೂಮಿಯಲ್ಲಿ ಕೆಲಸ ಮಾಡುತ್ತಿರುವ ಎಲ್ಲರೂ ತೀವ್ರವಾಗಿ ಪ್ರತಿಭಟಿಸುತ್ತಿದ್ದಾರೆ.

ನಾನು ಬಿ.ವಿ.ಕಾರಂತರು ರಂಗಾಯಣವನ್ನು ಆರಂಭಿಸಿದಾಗಲೇ ನಟನಾಗಿ, ಕೆಲಸಗಾರನಾಗಿ, ನಿರಂತರವಾಗಿ ತೊಡಗಿಸಿಕೊಂಡು ನಿವೃತ್ತನಾದವನು. ನಾನು ರಂಗಾಯಣದ ಹಲವು ನಿರ್ದೇಶಕರ ಜೊತೆ ಕೆಲಸ ಮಾಡಿದ್ದೇನೆ. ಅವರಲ್ಲಿ ಯಾರೂ ರಂಗಭೂಮಿಯ ಶಕ್ತಿಗೆ, ಸಾಧ್ಯತೆಗಳಿಗೆ ವಿರೋಧವೆನಿಸುವ ಕೆಲಸ ಮಾಡಿದ ಉದಾಹರಣೆ ಇಲ್ಲ. ಆದರೆ ಒಬ್ಬ ನಟನಾಗಿ, ನಿರ್ದೇಶಕನಾಗಿ ಕೆಲಸ ಮಾಡುತ್ತಿದ್ದ ಮಾನ್ಯ ಅಡ್ಡಂಡ ಕಾರ್ಯಪ್ಪನವರು ಬಂದ ಬಳಿಕ ತಾನು ಹೇಳಿದ್ದೇ ಮಾತು, ತಾನು ಹೇಳಿದಂತೆಯೇ ಆಗಬೇಕು. ಇತ್ಯಾದಿಯಾಗಿ ಹೇಳುತ್ತಾ ಸರ್ವಾಧಿಕಾರಿ ಧೋರಣೆ ತಾಳಿದ್ದಾರೆ.

ಅವರು ಯಾವುದೇ ಪಕ್ಷದ ಸಂಘಟನೆಯ ಕಾರ್ಯಕರ್ತನಾಗಿರಲಿ. ಒಂದು ಸಾರ್ವಜನಿಕ ಸಂಸ್ಥೆಯ ನೇತೃತ್ವ ವಹಿಸಿದ ಬಳಿಕ ಪ್ರಜಾಪ್ರಭುತ್ವ ಮಾದರಿಯಲ್ಲಿ ಕೆಲಸ ನಿರ್ವಹಿಸಬೇಕು. ಎಲ್ಲರನ್ನೂ ವಿಶ್ವಾಸಕ್ಕೆ ತೆಗೆದುಕೊಂಡು ರಂಗಭೂಮಿಯ ಕಾಯಕವನ್ನು ನಿರ್ವಹಿಸಬೇಕು. ಇದು ರಂಗಭೂಮಿಯಲ್ಲಿ ಕೆಲಸ ಮಾಡುವ ಎಲ್ಲರ ಜವಾಬ್ದಾರಿ.

ಸಂಸ್ಥೆಯ ಜವಾಬ್ದಾರಿ ಸ್ವೀಕರಿಸಿದ ಬಳಿಕ ಅವರು ನಡೆಸಿದ ಎಲ್ಲ ಚಟುವಟಿಕೆಗಳು, ಮಾತುಗಳು, ವಿಡಿಯೋಗಳು ಅವರು ಅಂತರಂಗದಲ್ಲಿ ಎಂತಹ ವ್ಯಕ್ತಿತ್ವವುಳ್ಳವರು ಎಂಬುದನ್ನು ಬಹಿರಂಗಗೊಳಿಸಿವೆ. ಅವರು ಉಳಿದವರನ್ನು ನಿಂದಿಸುವ ರಭಸದಲ್ಲಿ ಮುಖ್ಯವಾಗಿ ಎಡಪಂಥೀಯರನ್ನೇ ಗುರಿಯಾಗಿಸಿಕೊಂಡು ಮಾತನಾಡುತ್ತಿದ್ದಾರೆ. ನಾಡಿನಲ್ಲಿ ಹೆಸರು ಮಾಡಿರುವ ಕಾದಂಬರಿಕಾರ ಎಸ್.ಎಲ್.ಭೈರಪ್ಪ ಅವರನ್ನು ಮತ್ತು ಖ್ಯಾತ ರಂಗ ನಿರ್ದೇಶಕ ಪ್ರಕಾಶ್ ಬೆಳವಾಡಿಯವರನ್ನು ತಮ್ಮ ಮೂಗಿನ ನೇರಕ್ಕೆ ಬಳಸಿಕೊಳ್ಳುತ್ತಿದ್ದಾರೆ. ಅವರಿಗೆ ಒಪ್ಪಿಗೆ ಇದೆಯೋ ಇಲ್ಲವೋ ಎನ್ನುವುದು ಬೇರೆ ಮಾತು. ಆದರೆ “ಕಾದಂಬರಿ ಮತ್ತು ರಂಗಕೃತಿ ಎರಡೂ ಜಾಗತಿಕವಾಗಿ ಚಾಲ್ತಿಯಲ್ಲಿರುವ ಎಡಪಂಥೀಯ ಧೋರಣೆಯನ್ನು ಆಧರಿಸಿ” ಎಂದು ಅವರಿಗೆ ತಿಳಿಯದೇ ಹೋಗುತ್ತದೆ.

ರಂಗಭೂಮಿ ಒಬ್ಬನದ್ದಲ್ಲ. ಅದು ಸಮೂಹ ಸೃಷ್ಟಿ. ನಟ ನಟಿಯರು, ನಿರ್ದೇಶಕರು ಮತ್ತು ಪ್ರೇಕ್ಷಕರು ಒಟ್ಟಾಗಿ ನಡೆಸುವ ಸಂವಹನ ಸಂಸ್ಕೃತಿ. ಅವರು ಎಷ್ಟೇ ಸಮರ್ಥನೆ ಮಾಡಿದರೂ ಪ್ರೇಕ್ಷಕರು ಮತ್ತು ಸಾರ್ವಜನಿಕರು ತಮ್ಮದೇ ಆದ ರೀತಿಯಲ್ಲಿ ವ್ಯಾಖ್ಯಾನಿಸುವುದರಿಂದ ಮಾನ್ಯ ಕಾರ್ಯಪ್ಪನವರು ತಮ್ಮಿಂದಾಗುತ್ತಿರುವ ತಪ್ಪು ಹೇಳಿಕೆಗಳನ್ನು ಧೋರಣೆಗಳನ್ನು ಗುರುತಿಸಿಕೊಳ್ಳಬೇಕು. ಅವರಿಗೆ ಒದಗಿರುವ ಗೌರವದ ನಿರ್ದೇಶಕನ ಸ್ಥಾನ ಮತ್ತು ಅವಕಾಶವನ್ನು ಸದುಪಯೋಗಗೊಳಿಸಬೇಕು. ಈ ಅವಕಾಶ ತಾತ್ಕಾಲಿಕವಾದದ್ದು, ರಂಗಭೂಮಿ ಯಾವತ್ತೂ ಜೀವಂತವಾಗಿ ಉಳಿಯುತ್ತದೆ. ಅದನ್ನು ಉಳಿಸುವುದು ಎಲ್ಲರ ಜವಾಬ್ದಾರಿ. ಸರ್ವಾಧಿಕಾರಿ ನಿಲುವುಗಳನ್ನು ಯಾರೂ ಒಪ್ಪಿಕೊಳ್ಳುವುದಿಲ್ಲ, ವಿರೋಧಿಸುತ್ತಾರೆ, ಪ್ರತಿಭಟಿಸುತ್ತಾರೆ. ಇದು ಅವರೇ ಘೋಷಿಸಿಕೊಳ್ಳುವ ಸಂಸ್ಥೆ, ಪಕ್ಷ, ಸರಕಾರದವರು ಕೂಡಾ ಒಪ್ಪಿಕೊಳ್ಳಲಾರದ ವಿಚಾರವಾಗಿದೆ. ಆ ಸಂಸ್ಥೆಗಳವರೇ ಅಡ್ಡಂಡ ಕಾರ್ಯಪ್ಪನವರನ್ನು ತಮ್ಮ ಪಕ್ಷ, ಸಂಸ್ಥೆ ವಿರೋಧಿ ಧೋರಣೆಗಳಿಗಾಗಿ ದೂರ ತಳ್ಳುತ್ತಾರೆ, ತಿಳಿದಿರಲಿ.

ಮೈಮ್ ರಮೇಶ,
ರಂಗನಿರ್ದೇಶಕ, ನಿವೃತ್ತ ರಂಗಾಯಣ ಕಲಾವಿದ, ಮೈಸೂರು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಶಾಲೆ, ಪೂಜಾ ಸ್ಥಳ, ಬಸ್ ನಿಲ್ದಾಣಗಳ ಬಳಿ ಇರುವ 717 ಮದ್ಯದಂಗಡಿಗಳನ್ನು ಮುಚ್ಚಲು ತಮಿಳುನಾಡು ಸಿಎಂ ಜೋಸೆಫ್ ವಿಜಯ್ ಆದೇಶ 

ಅಧಿಕಾರ ವಹಿಸಿಕೊಂಡ ನಂತರ ತಮ್ಮ ಮೊದಲ ಪ್ರಮುಖ ಆಡಳಿತಾತ್ಮಕ ನಿರ್ದೇಶನದಲ್ಲಿ, ಸಿ. ಜೋಸೆಫ್ ವಿಜಯ್ ಸೋಮವಾರ, ತಮಿಳುನಾಡು ಸರ್ಕಾರವು ಪೂಜಾ ಸ್ಥಳಗಳು, ಶಿಕ್ಷಣ ಸಂಸ್ಥೆಗಳು ಮತ್ತು ಬಸ್ ನಿಲ್ದಾಣಗಳಿಂದ 500 ಮೀಟರ್ ಒಳಗೆ...

FACT CHECK: ಭಾರತೀಯರು ಚಿನ್ನ ಖರೀದಿಸಬೇಡಿ ಎಂದು 1967ರಲ್ಲೇ ಇಂದಿರಾ ಗಾಂಧಿ ಹೇಳಿದ್ರಾ?

ಪ್ರಧಾನಿ ನರೇಂದ್ರ ಮೋದಿಯವರು ಇತ್ತೀಚೆಗೆ ತೆಲಂಗಾಣದ ಸಿಕಂದರಾಬಾದ್ ರ‍್ಯಾಲಿಯಲ್ಲಿ ಮಾತನಾಡುತ್ತಾ, ಆರ್ಥಿಕ ಬಿಕ್ಕಟ್ಟು ತಪ್ಪಿಸಲು "ಒಂದು ವರ್ಷ ಚಿನ್ನ ಖರೀದಿಸಬೇಡಿ" ಎಂದು ಜನರಲ್ಲಿ ಮನವಿ ಮಾಡಿದ್ದರು. ಇದರ ಬೆನ್ನಲ್ಲೇ, 1967ರಲ್ಲಿ ಅಂದಿನ ಪ್ರಧಾನಿ...

ಪಶ್ಚಿಮ ಬಂಗಾಳ| ಧ್ವನಿವರ್ಧಕಗಳ ನಿಯಂತ್ರಣಕ್ಕೆ ಆದೇಶಿಸಿದ ನೂತನ ಸಿಎಂ ಅಧಿಕಾರಿ; ಧಾರ್ಮಿಕ ಸಭೆ ನೆಪದಲ್ಲಿ ರಸ್ತೆ ತಡೆಗೆ ನಿಷೇಧ

ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ನೇತೃತ್ವದ ಸರ್ಕಾರವು ಧಾರ್ಮಿಕ ಸ್ಥಳಗಳಲ್ಲಿ ಧ್ವನಿವರ್ಧಕಗಳ ಬಳಕೆಯನ್ನು ನಿಯಂತ್ರಿಸಲು ಮತ್ತು ಪ್ರಾರ್ಥನೆ ಅಥವಾ ಧಾರ್ಮಿಕ ಸಭೆ ನೆಪದಲ್ಲಿ ಸಾರ್ವಜನಿಕ ರಸ್ತೆಗಳನ್ನು ನಿರ್ಬಂಧಿಸದಂತೆ ನೋಡಿಕೊಳ್ಳಲು ಪೊಲೀಸ್ ಅಧಿಕಾರಿಗಳಿಗೆ ಹೊಸ ಸೂಚನೆಗಳನ್ನು...

ರಾಜಸ್ಥಾನದಲ್ಲಿ ನೀಟ್‌-ಯುಜಿ ಪ್ರಶ್ನೆ ಪತ್ರಿಕೆ ಸೋರಿಕೆ; ಸಿಬಿಐ ತನಿಖೆಗೆ ಆದೇಶಿಸಿದ ಸರ್ಕಾರ

ಮೇ 3 ರಂದು ನಡೆಸಲಾದ ನೀಟ್ (ಯುಜಿ) 2026 ಅನ್ನು ರದ್ದುಗೊಳಿಸುವುದಾಗಿ ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (ಎನ್‌ಟಿಎ) ಮಂಗಳವಾರ (ಮೇ 12) ಘೋಷಿಸಿದೆ. ಪ್ರತ್ಯೇಕವಾಗಿ ತಿಳಿಸಲಾಗುವ ದಿನಾಂಕಗಳಲ್ಲಿ ಮರು ಪರೀಕ್ಷೆಯನ್ನು ನಡೆಸಲಾಗುವುದು, ಪರೀಕ್ಷೆಗೆ...

ಇತ್ಯರ್ಥವಾಗದ ಚುನಾವಣಾ ತಕರಾರು : ಮತ ಹಾಕಿದ ಜನರಿಗೆ ದಿನಕ್ಕೊಬ್ಬ ಶಾಸಕ

ರಾಜ್ಯದಲ್ಲಿ ಪ್ರಸ್ತುತ ಆಡಳಿತ ನಡೆಸುತ್ತಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಮೂರು ವರ್ಷಗಳನ್ನು ಪೂರೈಸಿದೆ. ಚುನಾವಣೆ ನಡೆಯಲು ಇನ್ನು ಎರಡು ವರ್ಷಗಳು ಬಾಕಿಯಿದೆ. ಅಂದರೆ, ಸರ್ಕಾರದ ಐದು ವರ್ಷಗಳ ಅವಧಿಯಲ್ಲಿ ಮುಕ್ಕಾಲು...

“ಸನಾತನವನ್ನು ನಿರ್ಮೂಲನೆ ಮಾಡಬೇಕು…”; ವಿಧಾನಸಭೆಯಲ್ಲೇ ತನ್ನ ಹಿಂದಿನ ಹೇಳಿಕೆ ಪುನರುಚ್ಚರಿಸಿದ ಉದಯನಿಧಿ ಸ್ಟಾಲಿನ್

ತಮಿಳುನಾಡು ವಿರೋಧ ಪಕ್ಷದ ನಾಯಕ ಮತ್ತು ಡಿಎಂಕೆ ನಾಯಕ ಉದಯನಿಧಿ ಸ್ಟಾಲಿನ್ ಮಂಗಳವಾರ ತಮಿಳುನಾಡು ವಿಧಾನಸಭೆಯಲ್ಲಿ ನಡೆದ ಅಧಿವೇಶನದಲ್ಲಿ, ಸನಾತನ ಧರ್ಮದ ನಿರ್ಮೂಲನೆಗೆ ಮತ್ತೊಮ್ಮೆ ಕರೆ ನೀಡಿದ್ದಾರೆ. ಸದನದಲ್ಲಿ ಮಾತನಾಡಿದ ಅವರು, "ಜನರನ್ನು ವಿಭಜಿಸುವ...

‘ಅಮೃತಕಾಲ’ದ ಸ್ವಪ್ನದಿಂದ ‘ಬಿಕ್ಕಟ್ಟಿನ ಕಾಲ’ಕ್ಕೆ: ಕಳಚಿಕೊಳ್ಳುತ್ತಿರುವ ಮೋದಿಯವರ ‘ಆತ್ಮನಿರ್ಭರ’ ಮುಖವಾಡ 

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗೂ ಮುನ್ನ ದೇಶವು ಎಲ್‌ಪಿಜಿ ಸಿಲಿಂಡರ್‌ಗಳ ಕೊರತೆಯಿಂದ ಬಳಲುತ್ತಿದ್ದಾಗ, ಬಿಜೆಪಿ ನಾಯಕರು ಮತ್ತು ಕೇಂದ್ರ ಸರ್ಕಾರದ ಮಂತ್ರಿಗಳು ಮೋದಿಯವರ ‘ದಯೆ’ಯಿಂದ ಭಾರತಕ್ಕೆ ಯಾವುದೇ...

ಪಶ್ಚಿಮ ಬಂಗಾಳ| ಚುನಾವಣಾ ಫಲಿತಾಂಶದ ಬಳಿಕ ಮುಸ್ಲಿಂ ಸಮುದಾಯದ ಮನೆ- ಅಂಗಡಿಗಳ ಮೇಲೆ ದಾಳಿ: ಎಪಿಸಿಆರ್

ಪಶ್ಚಿಮ ಬಂಗಾಳದ ಇತ್ತೀಚಿನ ಚುನಾವಣಾ ಫಲಿತಾಂಶದ ಬಳಿಕ ಭಾರತೀಯ ಜನತಾ ಪಕ್ಷದ ಸದಸ್ಯರು ಸರಣಿ ಹಿಂಸಾತ್ಮಕ ಘಟನೆಗಳನ್ನು ನಡೆಸಿದ್ದಾರೆ ಎಂದು ನಾಗರಿಕ ಹಕ್ಕುಗಳ ರಕ್ಷಣಾ ಸಂಘ (ಎಪಿಸಿಆರ್) ದಾಖಲಿಸಿದೆ. ವಿಶೇಷವಾಗಿ, ಮುಸ್ಲಿಮರ ವಿರುದ್ಧ...

ದುಬಾರಿ ರ‍್ಯಾಲಿ, ರೋಡ್ ಶೋ ನಡೆಸುತ್ತಾ ದೇಶದ ಜನರಿಗೆ ಮಿತವ್ಯಯದ ಸಲಹೆ ನೀಡಿದ ಪ್ರಧಾನಿ ಮೋದಿ

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗಳು ಪೂರ್ಣಗೊಂಡ ಬಳಿಕ, ಮೇ 10ರಂದು ಪ್ರಧಾನಿ ನರೇಂದ್ರ ಮೋದಿಯವರು ದೇಶದ ಜನರಿಗೆ ಕೆಲವು ಸಲಹೆಗಳನ್ನು ನೀಡಿದ್ದು, ಕೋವಿಡ್ ಸಂದರ್ಭದ ಮಿತಿಗಳನ್ನು ಹಾಕಿಕೊಳ್ಳುವಂತೆ...

ಮೇ 15 ರಂದು ರಾಷ್ಟ್ರವ್ಯಾಪಿ ಮನರೇಗಾ ಕಾರ್ಮಿಕರ ಮುಷ್ಕರ; ದೇಶದಾದ್ಯಂತ ಕಾರ್ಮಿಕ ಸಂಘಟನೆಗಳ ಬೆಂಬಲ

ವಿಬಿ ಜಿರಾಮ್‌ (ಜಿ) ಕಾಯ್ದೆಯನ್ನು ಹಿಂಪಡೆಯುವ ಜೊತೆಗೆ ಗ್ರಾಮೀಣ ಉದ್ಯೋಗ ಯೋಜನೆಯಡಿಯಲ್ಲಿ ಬಲವಾದ ಉದ್ಯೋಗ ಖಾತರಿಗಳನ್ನು ನೀಡುವಂತೆ ಒತ್ತಾಯಿಸಿ ಕೃಷಿ ಮತ್ತು ಗ್ರಾಮೀಣ ಕಾರ್ಮಿಕರ ಸಂಘಗಳ ಜಂಟಿ ವೇದಿಕೆ ಮತ್ತು ಮನರೇಗಾ ಸಂಘರ್ಷ...