Homeಕರ್ನಾಟಕಕಸಾಪ ಅಧ್ಯಕ್ಷ ಮಹೇಶ್ ಜೋಶಿಗೆ ಸೌಜನ್ಯ ಪರ ಹೋರಾಟಗಾರರ ವಕೀಲರಿಂದ ಲೀಗಲ್ ನೋಟಿಸ್

ಕಸಾಪ ಅಧ್ಯಕ್ಷ ಮಹೇಶ್ ಜೋಶಿಗೆ ಸೌಜನ್ಯ ಪರ ಹೋರಾಟಗಾರರ ವಕೀಲರಿಂದ ಲೀಗಲ್ ನೋಟಿಸ್

- Advertisement -
- Advertisement -

ಧರ್ಮಸ್ಥಳದ ವಕೀಲರು ಲೀಗಲ್ ನೋಟಿಸ್ ನೀಡಿದ್ದಾರೆ ಎಂಬ ಕಾರಣವನ್ನು ಮುಂದಿಟ್ಟುಕೊಂಡು ಬೆಂಗಳೂರಿನಲ್ಲಿ ಸಾಹಿತಿ- ಚಿಂತಕರ ಸಭೆಗೆ ನೀಡಲಾಗಿದ್ದ ಸಭಾಂಗಣವನ್ನು ರದ್ದುಗೊಳಿಸಿದ್ದ ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಮಹೇಶ್ ಜೋಶಿಗೆ ಸೌಜನ್ಯ ಪರ ಹೋರಾಟಗಾರರ ಪರವಾಗಿ ಎಸ್ ಬಾಲನ್ ಲೀಗಲ್ ನೋಟಿಸ್ ನೀಡಿದ್ದಾರೆ.

ಎಸ್ ಬಾಲನ್ ಅವರು ನೀಡಿರುವ ಲೀಗಲ್ ನೋಟಿಸ್‌ನಲ್ಲಿ ”ಧರ್ಮಸ್ಥಳದ ವಕೀಲರ ಹೆಸರಿನಲ್ಲಿ ನೀಡಲಾದ ಲೀಗಲ್ ನೋಟಿಸ್‌ಗೆ ವಿಳಾಸ, ಲೆಟರ್ ಹೆಡ್, ಸಂಪರ್ಕ ಸೇರಿದಂತೆ ಯಾವುದೇ ತಲೆ-ಬಾಲ ಇಲ್ಲವಾಗಿದ್ದು, ಸೌಜನ್ಯ ಪರ ಹೋರಾಟಗಾರರನ್ನು ದಾರಿ ತಪ್ಪಿಸಲು ಹೈಕೋರ್ಟ್ ಆದೇಶವನ್ನು ತಿರುಚಿ ವಂಚನೆ ಮಾಡಲಾಗಿದೆ” ಎಂದು ವಿವರಿಸಲಾಗಿದೆ.

ಸೌಜನ್ಯ ಪರ ಹೋರಾಟಗಾರರು ಮಾರ್ಚ್ 9ರಂದು ‘ಸಾಹಿತಿಗಳ ಸಮಲೋಚನಾ ಸಭೆ’ ನಡೆಸಲು ಕನ್ನಡ ಸಾಹಿತ್ಯ ಪರಿಷತ್‌ಗೆ ಹಣ ಪಾವತಿಸಿ ಅಕ್ಕಮಹಾದೇವಿ ಸಭಾಂಗಣವನ್ನು ಬುಕ್ ಮಾಡಿದ್ದರು. ಆದರೆ ಮಾರ್ಚ್ 8ರಂದು “ಧರ್ಮಸ್ಥಳದ ವಕೀಲರೊಬ್ಬರು ಲೀಗಲ್ ನೋಟಿಸ್ ನೋಟಿಸ್ ಮತ್ತು ಹೈಕೋರ್ಟ್ ರಿಟ್ ಆದೇಶದ ಪ್ರತಿ ನೀಡಿದ್ದಾರೆ. ಆ ಕಾರಣಕ್ಕಾಗಿ ಸಭಾಂಗಣದ ಬುಕ್ಕಿಂಗ್ ಅನ್ನು ರದ್ದುಗೊಳಿಸಲಾಗುವುದು” ಎಂದು ತಿಳಿಸಲಾಗಿತ್ತು. ಸಭಾಂಗಣ ದಿಢೀರ್ ಆಗಿ ರದ್ದಾದ ಕಾರಣ ಸಭೆಯನ್ನೂ ಕೂಡಾ ರದ್ದುಗೊಳಿಸಲಾಗಿತ್ತು.

ಇದೀಗ ಸಭಾಂಗಣವನ್ನು ರದ್ದುಗೊಳಿಸಿದ್ದ ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಮಹೇಶ್ ಜೋಶಿಗೆ ಹೋರಾಟಗಾರರ ಪರವಾಗಿ ಎಸ್ ಬಾಲನ್ ಲೀಗಲ್ ನೋಟಿಸ್ ನೀಡಿದ್ದಾರೆ. “ಧರ್ಮಸ್ಥಳದ ವಕೀಲರು ನೀಡಿದ್ದಾರೆ ಎಂದು ಕಳುಹಿಸಲಾದ ಲೀಗಲ್ ನೋಟಿಸ್‌ನಲ್ಲಿ ವಕೀಲನ ವಿಳಾಸ, ಇ-ಮೇಲ್ ಐಡಿ, ದೂರವಾಣಿ ಸಂಖ್ಯೆ ಇತ್ಯಾದಿಗಳು ಯಾವುದೂ ನಮೂದಿಸಲಾಗಿಲ್ಲ. ಎಸ್. ರಾಜಶೇಖರ್ ಎಂಬ ಹೆಸರಿನ ವಕೀಲರು ಯಾರು? ಅವರು ವೃತ್ತಿನಿರತರಾಗಿರುವ ಸ್ಥಳ ಯಾವುದು ಎಂಬ ಬಗೆಗಿನ ಯಾವ ಮಾಹಿತಿಯೂ ಇಲ್ಲವಾಗಿದ್ದು, ಖಾಲಿ ಹಾಳೆಯಲ್ಲಿ ನೋಟಿಸ್ ನೀಡಲಾಗಿದೆ” ಎಂದು ಬಾಲನ್ ತನ್ನ ನೋಟಿಸ್‌ನಲ್ಲಿ ಉಲ್ಲೇಖಿಸಿದ್ದಾರೆ.

ರಾಜಶೇಖರ್ ಎಂಬ ವಕೀಲರ ಹೆಸರಿನಲ್ಲಿ ವಿವಿಪುರಂ ಪೊಲೀಸ್ ಇನ್ಸ್‌ಪೆಕ್ಟರ್‌ಗೂ ನೋಟಿಸ್ ನೀಡಲಾಗಿದೆ. ಈ ನೋಟಿಸ್ ಅನ್ನು ಇನ್ಸ್‌ಪೆಕ್ಟರ್ ಕೂಡಾ ಕನ್ನಡ ಸಾಹಿತ್ಯ ಪರಿಷತ್‌ಗೆ ನೀಡಿದ್ದಾರೆ. ರಾಜಶೇಖರ್ ಎಂಬ ವಕೀಲರ ಹೆಸರಿನಲ್ಲಿ ನೀಡಲಾದ ನೋಟಿಸ್‌ನಲ್ಲಿ “ಜಸ್ಟಿಸ್ ಪಾರ್ ಸೌಜನ್ಯ ಹೆಸರಿನಲ್ಲಿ ಯಾವುದೇ ಕಾರ್ಯಕ್ರಮಗಳು ಅಥವಾ ಸಾರ್ವಜನಿಕ ಕಾರ್ಯಗಳನ್ನು ಯಾರೂ ಕೂಡಾ ನಡೆಸದಂತೆ ಸ್ಪಷ್ಟ ನಿರ್ದೇಶನ ನೀಡಲಾಗಿದೆ” ಎಂದು ಉಲ್ಲೇಖಿಸಲಾಗಿದೆ. ಆದರೆ ಈ ವಾದ ಅಥವಾ ಹೇಳಿಕೆಗಳು ವಂಚನೆ ಮಾತ್ರವಲ್ಲ, ಹಾಸ್ಯಾಸ್ಪದವೂ ಆಗಿದೆ ಎಂದು ವಕೀಲ ಬಾಲನ್ ಹೇಳಿದ್ದಾರೆ.

“ಹೈಕೋರ್ಟ್ ತನ್ನ ಆದೇಶದಲ್ಲಿ ಸೌಜನ್ಯ ಪ್ರಕರಣದಲ್ಲಿ ಯಾವುದೇ ವ್ಯಕ್ತಿಯು ಅವಹೇಳನಕಾರಿಯಾಗಿ ಯಾವುದೇ ಹೇಳಿಕೆಯನ್ನು ನೀಡಿದರೆ ಅಥವಾ ಅಂತಹ ಯಾವುದೇ ಅವಹೇಳನಕಾರಿ ಹೇಳಿಕೆಯನ್ನು ಪ್ರಕಟಿಸಿದರೆ, ಪ್ರತಿವಾದಿ ಪೊಲೀಸರು ಕಾನೂನಿನ ಪ್ರಕಾರ ಕ್ರಮ ಕೈಗೊಳ್ಳಬೇಕಾಗುತ್ತದೆ. ಅಪರಾಧ ನಡೆದರೆ, ಕಾನೂನಿನ ಪ್ರಕಾರ ತಕ್ಷಣ ಕ್ರಮ ಕೈಗೊಳ್ಳುವುದು ಪೊಲೀಸರ ಬದ್ಧ ಕರ್ತವ್ಯ. ಆದರೆ ಹೈಕೋರ್ಟ್‌ನ ಈ ಸ್ಪಷ್ಟ ಆದೇಶವನ್ನು ತಿರುಚಿ, ಧರ್ಮಸ್ಥಳದ ಬಗ್ಗೆ ಯಾರೂ ಮಾತನಾಡಬಾರದು ಎಂದು ಬಿಂಬಿಸಿ ನೋಟಿಸ್ ನೀಡಲಾಗಿದೆ” ಎಂದು ಬಾಲನ್ ಆರೋಪಿಸಿದ್ದಾರೆ.

“ತಲೆ ಮತ್ತು ಬಾಲವಿಲ್ಲದ ಲೀಗಲ್ ನೋಟಿಸ್ ಆಧಾರದ ಮೇಲೆ ನೀವು ಕನ್ನಡ ಸಾಹಿತ್ಯ ಪರಿಷತ್ತಿನ ಆವರಣದಲ್ಲಿ ಮಾಡಲಾಗಿದ್ದ ಹಾಲ್ ಬುಕಿಂಗ್ ಅನ್ನು ಹೇಗೆ ರದ್ದುಗೊಳಿಸಿದ್ದೀರಿ” ಎಂದು ಸೌಜನ್ಯ ಪರ ಹೋರಾಟಗಾರರ ವಕೀಲ ಬಾಲನ್ ಪ್ರಶ್ನಿಸಿದ್ದಾರೆ.

ಬಜರಂಗದಳ ಬೆದರಿಕೆ: ಔರಂಗಜೇಬ್ ಸಮಾಧಿಯ ಸುತ್ತ ಬಿಗಿ ಭದ್ರತೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ದಾಳಿ ಮುಂದುವರಿಸುವ ಸೂಚನೆ ನೀಡಿದ ಟ್ರಂಪ್ : ಇರಾನ್‌ನಿಂದ ತೀವ್ರ ಪ್ರತಿದಾಳಿಯ ಎಚ್ಚರಿಕೆ

ಅಮೆರಿಕದ ಸಹಯೋಗದೊಂದಿಗೆ ಇಸ್ರೇಲ್ ಶನಿವಾರ (ಫೆ.28) ಇರಾನ್‌ ಮೇಲೆ ಕ್ಷಿಪಣಿ ದಾಳಿ ನಡೆಸಿದೆ. ಇದರಿಂದ ಮಧ್ಯಪ್ರಾಚ್ಯದಲ್ಲಿ ಯುದ್ಧ ಪ್ರಾರಂಭವಾಗುವಾಗ ಎಲ್ಲಾ ಲಕ್ಷಣಗಳು ಗೋಚರಿಸುತ್ತಿವೆ. ಇಸ್ರೇಲ್‌ ಇರಾನ್‌ನ ರಾಜಧಾನಿ ಟೆಹ್ರಾನ್‌ ಸೇರಿದಂತೆ ದೇಶದ ಹಲವು ಸ್ಥಳಗಳ...

ಅಮೆರಿಕ ಅಣತಿಯಂತೆ ಇರಾನ್ ಮೇಲೆ ಇಸ್ರೇಲ್ ದಾಳಿ : ಟೆಹ್ರಾನ್‌ನ ಹಲವೆಡೆ ಭಾರೀ ಸ್ಪೋಟ

ಇರಾನ್ ಮೇಲೆ ಇಸ್ರೇಲ್ ಶನಿವಾರ (ಫೆ.28) ವೈಮಾನಿಕ ದಾಳಿ ನಡೆಸಿರುವುದಾಗಿ ಅಂತಾರಾಷ್ಟ್ರೀಯ ಮಾಧ್ಯಮಗಳು ವರದಿ ಮಾಡಿವೆ. ಈ ದಾಳಿಯನ್ನು ಇಸ್ರೇಲ್ 'ಪೂರ್ವಭಾವಿ ದಾಳಿ' ಎಂದು ಕರೆದಿದೆ. ಇಂದು ಬೆಳಿಗ್ಗಿನ ಹೇಳಿಕೆಯೊಂದರಲ್ಲಿ, ಇಸ್ರೇಲ್ ರಕ್ಷಣಾ ಸಚಿವ...

ನಟಿಯ ಅಪಹರಣ, ಅತ್ಯಾಚಾರ ಪ್ರಕರಣ : ನಟ ದಿಲೀಪ್, ಇತರರ ಖುಲಾಸೆ ಪ್ರಶ್ನಿಸಿ ಮೇಲ್ಮನವಿ ಸಲ್ಲಿಸಿದ ಕೇರಳ ಸರ್ಕಾರ

ನಟಿಯ ಅಪಹರಣ ಮತ್ತು ಅತ್ಯಾಚಾರ ಪ್ರಕರಣದಲ್ಲಿ (2017ರ ಪ್ರಕರಣ) ಮಲಯಾಳಂನ ಪ್ರಮುಖ ನಟ ದಿಲೀಪ್ ಅವರನ್ನು ಎಲ್ಲಾ ಆರೋಪಗಳಿಂದ ಮುಕ್ತಗೊಳಿಸಿದ ಸೆಷನ್ಸ್ ನ್ಯಾಯಾಲಯದ ಆದೇಶವನ್ನು ಪ್ರಶ್ನಿಸಿ ಕೇರಳ ಸರ್ಕಾರ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದೆ. ಪ್ರಕರಣದ...

‘ದಿ ಕೇರಳ ಸ್ಟೋರಿ-2’ ಬಿಡುಗಡೆಗೆ ವಿಧಿಸಿದ್ದ ತಡೆಯಾಜ್ಞೆ ತೆರವು

'ದಿ ಕೇರಳ ಸ್ಟೋರಿ-2 : ಗೋಸ್ ಬಿಯಾಂಡ್' ಚಿತ್ರದ ಬಿಡುಗಡೆಗೆ ವಿಧಿಸಲಾಗಿದ್ದ ಮಧ್ಯಂತರ ತಡೆಯಾಜ್ಞೆಯನ್ನು ಕೇರಳ ಹೈಕೋರ್ಟ್ ವಿಭಾಗೀಯ ಪೀಠ ಶುಕ್ರವಾರ (ಫೆ.27) ತೆರವುಗೊಳಿಸಿದೆ. 'ಕೋಮು ಸಾಮರಸ್ಯ ಕದಡುವ ಸಾಧ್ಯತೆ'ಯನ್ನು ಉಲ್ಲೇಖಿಸಿ ನ್ಯಾಯಮೂರ್ತಿ ಬೆಚು...

‘ದೆಹಲಿಯಲ್ಲಿ ಮತ್ತೆ ಚುನಾವಣೆ ನಡೆಸಿ; ಬಿಜೆಪಿ 10ಕ್ಕಿಂತ ಹೆಚ್ಚು ಸ್ಥಾನ ಗೆದ್ದರೆ ರಾಜಕೀಯ ತ್ಯಜಿಸುತ್ತೇನೆ’: ಕೇಜ್ರಿವಾಲ್ ಸವಾಲು

"ದೆಹಲಿಯಲ್ಲಿ ಮತ್ತೆ ಚುನಾವಣೆ ನಡೆಸಿ, ಬಿಜೆಪಿ ಹತ್ತಕ್ಕಿಂತ ಹೆಚ್ಚು ಸ್ಥಾನಗಳನ್ನು ಗೆದ್ದರೆ ನಾನು ರಾಜಕೀಯ ತ್ಯಜಿಸುತ್ತೇನೆ" ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಆಮ್‌ ಆದ್ಮಿ ಪಕ್ಷದ (ಎಎಪಿ) ಮುಖ್ಯಸ್ಥ ಅರವಿಂದ್ ಕೇಜ್ರಿವಾಲ್ ಹೇಳಿದ್ದಾರೆ....

ಚನ್ನರಾಯಪಟ್ಟಣ| ಭೂಸ್ವಾಧೀನ ವಿರುದ್ಧ ಗೆದ್ದ ರೈತರಿಂದ ‘ಭೂಮಿ ಹಬ್ಬ’ ಸಂಭ್ರಮ: ಹೋರಾಟದ ಒಡನಾಡಿಗಳಿಗೆ ಗೌರವ ಸಮರ್ಪಣೆ

ದೇವನಹಳ್ಳಿಯ ಚನ್ನರಾಯಪಟ್ಟಣದ ಹೋಬಳಿಯ 13 ಹಳ್ಳಿಗಳ 1,777 ಎಕರೆ ಕೃಷಿ ಭೂಮಿಯನ್ನು ಉಳಿಸಿಕೊಳ್ಳಲು ರೈತರು ನಡೆಸಿದ ಸುದೀರ್ಘ ನಾಲ್ಕು ವರ್ಷಗಳ ಸತ್ಯಾಗ್ರಹಕ್ಕೆ ಐತಿಹಾಸಿಕ ಜಯ ಲಭಿಸಿದ ಹಿನ್ನಲೆಯಲ್ಲಿ, ಭೂಸ್ವಾದೀನ ವಿರೋಧಿ ಹೋರಾಟ ಸಮಿತಿಯು...

ಅಬಕಾರಿ ಹಗರಣದಲ್ಲಿ ಕೇಜ್ರಿವಾಲ್ ಮತ್ತು ಇತರರು ಖುಲಾಸೆ: ದೆಹಲಿ ಹೈಕೋರ್ಟ್‌ಗೆ ಮೇಲ್ಮನವಿ ಸಲ್ಲಿಸಿದ ಸಿಬಿಐ

ಮದ್ಯ ನೀತಿ ಪ್ರಕರಣದಲ್ಲಿ ಮಾಜಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್, ಮಾಜಿ ಉಪಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಮತ್ತು ಇತರರನ್ನು ಖುಲಾಸೆಗೊಳಿಸಿದ ವಿಶೇಷ ನ್ಯಾಯಾಲಯದ ಆದೇಶವನ್ನು ಪ್ರಶ್ನಿಸಿ ಸಿಬಿಐ ದೆಹಲಿ ಹೈಕೋರ್ಟ್‌ನಲ್ಲಿ ಮೇಲ್ಮನವಿ ಸಲ್ಲಿಸಿದೆ ಎಂದು...

ಕಾಂಗ್ರೆಸ್ ಶಾಸಕ ಸುಬ್ಬಾರೆಡ್ಡಿ ಚುನಾವಣೆ ರದ್ದುಗೊಳಿಸಿದ ಕರ್ನಾಟಕ ಹೈಕೋರ್ಟ್ ಆದೇಶಕ್ಕೆ ಸುಪ್ರೀಂ ಕೋರ್ಟ್ ತಡೆ

ನವದೆಹಲಿ: 2023ರ ವಿಧಾನಸಭಾ ಚುನಾವಣೆಯ ಸಂದರ್ಭದಲ್ಲಿ ಚಿಕ್ಕಬಳ್ಳಾಪುರ ಜಿಲ್ಲೆಯ ಬಾಗೇಪಲ್ಲಿ ಕ್ಷೇತ್ರದಿಂದ ಕಾಂಗ್ರೆಸ್ ಶಾಸಕ ಎಸ್.ಎನ್. ಸುಬ್ಬಾರೆಡ್ಡಿ ಅವರ ಆಯ್ಕೆಯನ್ನು ರದ್ದುಗೊಳಿಸಿದ ಕರ್ನಾಟಕ ಹೈಕೋರ್ಟ್‌ನ ತೀರ್ಪನ್ನು ಸುಪ್ರೀಂ ಕೋರ್ಟ್ ಶುಕ್ರವಾರ ತಡೆಹಿಡಿದಿದೆ. ಭಾರತದ ಮುಖ್ಯ...

ಹಾಜರಾತಿ ಆಧಾರದ ಮೇಲೆ ಪರೀಕ್ಷಾ ನಿಷೇಧ ವಿರೋಧಿಸಿ ಎಎಂಯು ಎಂಜಿನಿಯರಿಂಗ್ ವಿದ್ಯಾರ್ಥಿಗಳಿಂದ ಪ್ರತಿಭಟನೆ; ಬಂಧನ, ಹಲ್ಲೆ ಆರೋಪ 

ಕಡಿಮೆ ಹಾಜರಾತಿ ಕಾರಣ ಸೆಮಿಸ್ಟರ್ ಪರೀಕ್ಷೆಗಳಿಂದ ನಿಷೇಧಿಸಲ್ಪಟ್ಟಿದ್ದನ್ನು ವಿರೋಧಿಸಿ ನಡೆದ ಪ್ರತಿಭಟನೆಗಳ ನಂತರ, ವಿಶ್ವವಿದ್ಯಾಲಯದ ಪ್ರೊಕ್ಟೋರಿಯಲ್ ತಂಡವು ಹಲವಾರು ಅಂತಿಮ ವರ್ಷದ ವಿದ್ಯಾರ್ಥಿಗಳನ್ನು ವಶಕ್ಕೆ ಪಡೆದಿದೆ ಎಂದು ಅಲಿಘರ್ ಮುಸ್ಲಿಂ ವಿಶ್ವವಿದ್ಯಾಲಯದ (AMU)...

ವಿಧಾನಸಭಾ ಚುನಾವಣೆಗೂ ಮುನ್ನ ಎಐಎಡಿಎಂಕೆಯಿಂದ ಉಚ್ಚಾಟನೆಗೊಂಡ ಮಾಜಿ ಸಿಎಂ ಪನ್ನೀರ್‌ಸೆಲ್ವಂ, ಪ್ರತಿಸ್ಪರ್ಧಿ ಡಿಎಂಕೆ ಪಕ್ಷಕ್ಕೆ ಸೇರ್ಪಡೆ

ಮೂರು ಬಾರಿ ತಮಿಳುನಾಡು ಮುಖ್ಯಮಂತ್ರಿ ಮತ್ತು ಜೆ ಜಯಲಲಿತಾ ಅವರ ದೀರ್ಘಕಾಲದ ಸಹಾಯಕರಾಗಿದ್ದ ಪನ್ನೀರ್‌ಸೆಲ್ವಂ ಅವರನ್ನು ಎಡಪ್ಪಾಡಿ ಕೆ ಪಳನಿಸ್ವಾಮಿ (ಇಪಿಎಸ್) ಅವರೊಂದಿಗಿನ ತೀವ್ರ ಅಧಿಕಾರ ಹೋರಾಟದ ನಂತರ 2022 ರಲ್ಲಿ ಎಐಎಡಿಎಂಕೆಯಿಂದ...