Homeಮುಖಪುಟಖ್ಯಾತ ನಟ ದಿಲೀಪ್ ಕುಮಾರ್ ನಿಧನ: ಅಗಲಿದ ಚಿತ್ರರಂಗದ ದಂತಕತೆಗೆ ಗಣ್ಯರ ಕಂಬನಿ

ಖ್ಯಾತ ನಟ ದಿಲೀಪ್ ಕುಮಾರ್ ನಿಧನ: ಅಗಲಿದ ಚಿತ್ರರಂಗದ ದಂತಕತೆಗೆ ಗಣ್ಯರ ಕಂಬನಿ

- Advertisement -
- Advertisement -

ದಶಕಗಳ ಕಾಲ ದೇಶವನ್ನು ರಂಜಿಸಿದ ಭಾರತ ಚಿತ್ರರಂಗದ ದಂತಕತೆ  ದಿಲೀಪ್‌ ಕುಮಾರ್ ಇಂದು ಮುಂಜಾನೆ ನಮ್ಮನ್ನಗಲಿದ್ದಾರೆ. 98 ವರ್ಷಗಳ ಹಿರಿಯ ನಟ ತೀವ್ರ ಅನಾರೋಗ್ಯದಿಂದ ಬಳಲುತ್ತಿದ್ದು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಇಂದು ಬೆಳಗ್ಗೆ ಸುಮಾರು 8 ಗಂಟೆಯ ಹೊತ್ತಿಗೆ ದಿಲೀಪ್‌ ಕುಮಾರ್ ಅವರಿಗೆ ಚಿಕಿತ್ಸೆ ನೀಡುತ್ತಿದ್ದ ವೈದ್ಯರು ನಟನ ಸಾವಿನ ಸುದ್ದಿಯನ್ನು ಖಚಿತ ಪಡಿಸಿದ್ದಾರೆ.ತೀವ್ರ ಉಸಿರಾಟ ಸಮಸ್ಯೆಯಿಂದ ಬಳಲುತ್ತಿದ್ದ ದಿಲೀಪ್ ಕುಮಾರ್ ಅವರಿಗೆ ಮುಂಬೈನ ಪಿಡಿ ಹಿಂದುಜ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿತ್ತು. ಆದರೆ, ಚಿಕಿತ್ಸೆ ಫಲಕಾರಿಯಾಗದೆ ಇಂದು ಇಹಲೋಕ ತ್ಯಜಿಸಿದ್ದಾರೆ.

ಇತ್ತೀಚೆಗಷ್ಟೇ ದಿಲೀಪ್ ಅವರು ತೀವ್ರ ಉಸಿರಾಟದ ತೊಂದರೆಯಿಂದ ಆಸ್ಪತ್ರೆಗೆ ದಾಖಲಾಗಿ ನಂತರ ಚೇತರಿಸಿಕೊಂಡು ಮನೆಗೆ ಮರಳಿದ್ದರು. ಪುನಃ ಅನಾರೋಗ್ಯ ಕಾಣಿಸಿಕೊಂಡ ಪರಿಣಾಮ ಆಸ್ಪತ್ರೆ ಸೇರಿದ್ದರು. ದಿಲೀಪ್ ಅವರ ಅಂತಿಮಸಂಸ್ಕಾರವನ್ನು ಸಾಂಟ್ರಾಕ್ರೂಜ್ ಚಿತಾಗಾರದಲ್ಲಿ ನಡೆಸಲು ಕುಟುಂಬಸ್ಥರು ನಿರ್ಧರಿಸಿದ್ದಾರೆ.

ಇದನ್ನೂ ಓದಿ: ಸ್ಟ್ಯಾನ್ ಸ್ವಾಮಿ ನಿಧನಕ್ಕೆ ದೇಶ ವಿದೇಶಗಳ ಗಣ್ಯರ ಕಂಬನಿ: ಭಾರತ ಸರ್ಕಾರದ ವಿರುದ್ಧ ಆಕ್ರೋಶ

1922 ಡಿಸೆಂಬರ್ 11ರಲ್ಲಿ ಅವಿಭಜಿತ ಭಾರತದ ಇಂದಿನ ಪಾಕಿಸ್ತಾನದಲ್ಲಿರುವ ಪೇಷಾವರದಲ್ಲಿ ಜನಸಿದ್ದ ದಿಲೀಪ್ ಕುಮಾರ್ ನಿಜವಾದ ಹೆಸರು ಮಹಮ್ಮದ್ ಯೂಸುಫ್ ಖಾನ್. ಹಾಗಾಗಿ ಇವರನ್ನು ಬಾಲಿವುಡ್ ನ ಮೊದಲ ಖಾನ್ ಎನ್ನಲಾಗುತ್ತಿತ್ತು. ಪತ್ನಿ ಸಾಯಿರಾ ಬಾನು ಜೊತೆ ತುಂಬು ಜೀವನ ನಡೆಸಿದ ದಿಲೀಪ್ ಕುಮಾರ್ ಇಂದು ಇಹಲೋಕ ತ್ಯಜಿಸಿದ್ದಾರೆ. ಫಿಲ್ಮ್​ಫೇರ್ ಪ್ರಶಸ್ತಿ ಆರಂಭವಾದಾಗ ಅದನ್ನು ಪಡೆದ ಮೊದಲ ವ್ಯಕ್ತಿ ದಿಲೀಪ್ ಕುಮಾರ್. ಭಾರತ ಚಿತ್ರರಂಗದಲ್ಲಿ ಅತ್ಯಂತ ಗೌರವ ಮತ್ತು ಪ್ರೀತಿಗಳಿಸಿದ್ದ ಚಿತ್ರರಂಗದ ಗೆಳೆಯರು ಸಹುದ್ಯೋಗಿಗಳು ದಿಲೀಪ್ ಸಾಬ್‌ ಎಂದೇ ಸಂಭೋದಿಸುತ್ತಿದ್ದರು.

ದಿಲೀಪ್ ಕುಮಾರ್ ಸಾವಿಗೆ ಪ್ರಧಾನಿ ನರೇಂದ್ರ ಮೋದಿ ಸೇರಿದಂತೆ ಬಾಲಿವುಡ್‌ನ ಹಿರಿಯ ಗಣ್ಯರು ಕಂಬನಿ ಮಿಡಿದಿದ್ದಾರೆ. ಇಂದು ಮುಂಜಾನೆ ಟ್ಟಿಟ್ಟರ್ ಮತ್ತು ಫೇಸ್‌ಬುಕ್ ಸಂಪೂರ್ಣ ದಿಲೀಪ್‌ಕುಮಾರ್ ಮಯವಾಗಿದೆ.

ಸಾಮಾಜಿಕ ಜಾಲತಾಣ ಟ್ವಿಟರ್ ನಲ್ಲಿ ಟ್ವೀಟ್ ಮಾಡಿರುವ ಪ್ರಧಾನಿ ಮೋದಿಯವರು, ದಿಲೀಪ್ ಕುಮಾರ್ ನಿಧನಕ್ಕೆ ಸಂತಾಪ ಸೂಚಿಸುತ್ತಿದ್ದೇನೆ. ದಿಲೀಪ್ ಅವರನ್ನು ಸಿನಿಮೀಯ ದಂತಕಥೆ ಎಂದು ಸ್ಮರಿಸಲಾಗುತ್ತದೆ ಎಂದು ಹೇಳಿದ್ದಾರೆ. ದಿಲೀಪ್ ಅವರು ಸಾಟಿಯಿಲ್ಲದ ಪ್ರತಿಭೆಯನ್ನು ಹೊಂದಿದ್ದರು. ಈ ಕಾರಣದಿಂದಲೇ ಸಾಕಷ್ಟು ಪ್ರೇಕ್ಷಕರ ಮನಗೆದ್ದಿದ್ದರು. ಅವರ ನಿಧನ ನಮ್ಮ ಸಾಂಸ್ಕೃತಿಕ ಜಗತ್ತಿಗೆ ಆಗಿರುವ ದೊಡ್ಡ ನಷ್ಟವಾಗಿದೆ ಎಂದು ತಿಳಿಸಿದ್ದಾರೆ.

ಕಾಂಗ್ರೆಸ್‌ ನಾಯಕ ರಾಹಯಲ್ ಗಾಂಧಿ ಸೇರಿದಂತೆ ವಿವಿಧ ರಾಜಕೀಯ ನಾಯಕರು ದಿಲೀಪ್ ಕುಮಾರ್ ನಿಧನಕ್ಕೆ ಶೋಕ ವ್ಯಕ್ತಪಡಿಸಿದ್ದಾರೆ. ಭಾವಪೂರ್ಣ ಅಕ್ಷರಗಳ ಮೂಲಕ ಅಗಲಿದ ಹಿರಿಯ ನಟನಿಗೆ ಅಕ್ಷರ ನಮನ ಸಲ್ಲಿಸಿದ್ದಾರೆ.

ಬಾಲಿವುಡ್ ನಟ ಅಕ್ಷಯ್‌ ಕುಮಾರ್ ಭಾರತ ಚಿತ್ರರಂಗದ ಗಣ್ಯರು ದಿಲೀಪ್ ಕುಮಾರ್ ಸಾವು ಭಾರತ ಚಿತ್ರರಂಗಕ್ಕೆ ತುಂಬಲಾರದ ನಷ್ಟವನ್ನು ತಂದೊಡ್ಡಿದೆಯೆಂದು ಕಂಬನಿ ಮಿಡಿದಿದ್ದಾರೆ.

ನಟ, ನಿರ್ದೇಶಕ ಫರ್ಹಾನ್ ಅಖ್ತರ್ ಕೂಡ ದಿಲೀಪ್ ಕುಮಾರ್ ಸಾವಿಗೆ ತೀವ್ರ ಸಂತಾಪ ಸೂಚಿಸಿದ್ದಾರೆ.

ದೇಶದಲ್ಲಿ 1950-1960  ರ ದಶಕಗಳಲ್ಲಿ ದಿಲೀಪ್ ಕುಮಾರ್ ಅವರನ್ನೇ ರೋಲ್‌ ಮಾಡೆಲ್ ಆಗಿಸಕೊಂಡಿದ್ದ ದೊಡ್ಡ ವರ್ಗವೇ ಬೆಳೆದಿತ್ತು. ಇಂದಿಗೂ ಲಕ್ಷಾಂತರ ಜನರು ದಿಲೀಪ್ ಅವರ ಅಭಿನಯವನ್ನು ವ್ಯಕ್ತಿತ್ವವನ್ನು ಆರಾಧಿಸುತ್ತಾರೆ, ಪ್ರೀತಿಸುತ್ತಾರೆ ಮತ್ತು ಗೌರವಿಸುತ್ತಾರೆ. ಇವರೆಲ್ಲರ ಪ್ರೀತಿ ಕಂಬನಿಯಾಗಿ ಸಾಮಾಜಿಕ ಜಾಲತಾಣಗಳಲ್ಲಿ ವ್ಯಕ್ತವಾಗುತ್ತಿದೆ.

ಹಿಂದಿ ಚಿತ್ರರಂಗದ ಆರಂಭಿಕ ಸೂಪರ್‌ ಸ್ಟಾರ್‌ಗಳಲ್ಲಿ ಒಬ್ಬರಾದ ದಿಲೀಪ್ ಕುಮಾರ್‌ ಅವರ ನಟೆನೆಯನ್ನು ನೋಡಿ ಸಾಕಷ್ಟು ಜನರು ಚಿತ್ರರಂಗಕ್ಕೆ ಬಂದಿದ್ದಾರೆ. 3-4 ತಲೆಮಾರುಗಳಿಗೆ ದಿಲೀಪ್ ದೊಡ್ಡ ಪ್ರೇರಣೆಯಾಗಿದ್ದರು ಮತ್ತು ಹಿಂದಿ ಚಿತ್ರರಂಗಕ್ಕೂ ದಿಲೀಪ್ ಕುಮಾರ್‌ ದೊಡ್ಡ ಪ್ರೇರಕ ಶಕ್ತಿಯಾಗಿದ್ದರು. ಖ್ಯಾತ ನಟ ಶಾರುಖ್‌ ಖಾನ್ ಹಲವು ಸಂದರ್ಶನಗಳಲ್ಲಿ ತಮಗೆ ದಿಲೀಪ್‌ ಕುಮಾರ್‌ ಅವರೇ ಪ್ರೇರಣೆ ಎಂದು ಬಹಿರಂಗವಾಗಿ ಹೇಳಿದ್ದಾರೆ. ನಟ ಅಮಿರ್ ಖಾನ್‌ ಕೂಡ ದಿಲೀಪ್ ಕುಮಾರ್‌ ಅವರ ಸಿನೆಮಾಗಳಿಂದ ಸಾಕಷ್ಟು ನಟನೆಯ ಪಾಠಗಳನ್ನು ಕಲಿತಿರುವುದಾಗಿ ಈ ಹಿಂದೆ ಹೇಳಿದ್ದರು.

ದಿಲೀಪ್ ಕುಮಾರ್ ಸಾಬ್ ಇಂದು ಭೌತಿಕವಾಗಿ ನಮ್ಮನಗಲಿರಬಹುದು ಆದರೆ ಅಂದಾಜ್, ದಾಗ್, ದೇವದಾಸ್, ಆಜಾದ್, ಶಕ್ತಿ, ಮಸಾಲ್, ಸೌದಾಗರ್, ಕ್ರಾಂತಿ, ಮಘಲ್ ಎ ಆಜಮ್ ಮುಂತಾದ ಚಿತ್ರಗಳಿಂದ ಜನರ ಮನಸ್ಸಿನಲ್ಲಿ ಶಾಶ್ವತವಾಗಿ ಉಳಿದಿದ್ದಾರೆ.

 

ಇದನ್ನೂ ಓದಿ: ಫಾದರ್ ಸ್ಟ್ಯಾನ್‌ ಸ್ವಾಮಿ ಸಾವು : ರಾಷ್ಟ್ರಪತಿಗಳಿಗೆ ವಿರೋಧಪಕ್ಷಗಳ ನಾಯಕರ ಪತ್ರ-ತನ್ನ ಪಾತ್ರ ನಿರಾಕರಿಸಿದ ಸರ್ಕಾರ

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮತದಾರರ ಹೆಸರು ಅಳಿಸಲು ಯತ್ನ : ಬಿಜೆಪಿ ವಿರುದ್ಧ 5 ವಿಪಕ್ಷಗಳಿಂದ ದೂರು ದಾಖಲು

ಅಸ್ಸಾಂನ ಐದು ವಿರೋಧ ಪಕ್ಷಗಳು ಶುಕ್ರವಾರ (ಜ.9) ಪೊಲೀಸ್ ದೂರು ದಾಖಲಿಸಿದ್ದು, ಆಡಳಿತಾರೂಢ ಭಾರತೀಯ ಜನತಾ ಪಾರ್ಟಿ (ಬಿಜೆಪಿ) ರಾಜ್ಯದ ಮತದಾರರ ಪಟ್ಟಿಯಿಂದ ಹೆಚ್ಚಿನ ಸಂಖ್ಯೆಯ ನಿಜವಾದ ಮತದಾರರ ಹೆಸರನ್ನು ಅಳಿಸಲು ಸಂಚು...

ಐ-ಪ್ಯಾಕ್ ಮೇಲೆ ದಾಳಿ ಪ್ರಕರಣ: ಮಮತಾ ಬ್ಯಾನರ್ಜಿ ದೂರಿನ ಬೆನ್ನಲ್ಲೇ ಜಾರಿ ನಿರ್ದೇಶನಾಲಯದ ವಿರುದ್ಧ ಎಫ್‌ಐಆರ್

ಕೋಲ್ಕತ್ತಾ: ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ ನಡೆಸಿದ ದಾಳಿಗೆ ಸಂಬಂಧಿಸಿದಂತೆ ಟಿಎಂಸಿ ಅಧ್ಯಕ್ಷೆ ಮಮತಾ ಬ್ಯಾನರ್ಜಿ...

‘ಭ್ರಷ್ಟ ಜನತಾ ಪಾರ್ಟಿ’: ಬಿಜೆಪಿ ಡಬಲ್ ಎಂಜಿನ್ ಆಡಳಿತದ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ

ನವದೆಹಲಿ: ವಿವಿಧ ರಾಜ್ಯಗಳಲ್ಲಿ ಬಿಜೆಪಿಯ ಡಬಲ್ ಎಂಜಿನ್ ಸರ್ಕಾರಗಳ ವಿರುದ್ಧ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ.  ತಮ್ಮ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ರಾಹುಲ್, ಉತ್ತರಾಖಂಡದಲ್ಲಿ ಅಂಕಿತ...

ಇಂದೋರ್‌ನಲ್ಲಿ ಕಲುಷಿತ ನೀರಿಗೆ 8 ಮಂದಿ ಬಲಿ: ಆರ್‌ಎಸ್‌ಎಸ್ ಕಚೇರಿಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್: ಭುಗಿಲೆದ್ದ ವಿವಾದ

ಇಂದೋರ್: ಆರ್‌ಎಸ್‌ಎಸ್ ಕಚೇರಿಯಲ್ಲಿ ಬುಧವಾರ ತಡರಾತ್ರಿ ನಡೆದ ಸಭೆಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್ ಭಾಗವಹಿಸಿದ್ದು ಕಂಡುಬಂದ ನಂತರ ಗುರುವಾರ ಇಂದೋರ್‌ನಲ್ಲಿ ರಾಜಕೀಯ ವಿವಾದ ಭುಗಿಲೆದ್ದಿದೆ.  ಕನಿಷ್ಠ ಎಂಟು ಮಂದಿ ಜೀವಗಳನ್ನು ಬಲಿ ಪಡೆದಿರುವ ಕಲುಷಿತ...

ಐ-ಪ್ಯಾಕ್ ಮೇಲೆ ಇಡಿ ದಾಳಿ: ಕೋಲ್ಕತ್ತಾದಲ್ಲಿ ಮಮತಾ ಪ್ರತಿಭಟನೆ: ಅಮಿತ್ ಶಾ ಕಚೇರಿಯ ಹೊರಗೆ ಪ್ರತಿಭಟಿಸುತ್ತಿದ್ದ ಟಿಎಂಸಿ ಶಾಸಕರ ಬಂಧನ

ಗುರುವಾರ (ಜ.8) ಬೆಳಿಗ್ಗೆ ಕೋಲ್ಕತ್ತಾದ ಸಾಲ್ಟ್ ಲೇಕ್‌ನಲ್ಲಿರುವ ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ನಡೆಸಿದ...

ಮಹಾರಾಷ್ಟ್ರ ಜಲ್ನಾ ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣದ ಪ್ರಮುಖ ಆರೋಪಿ ಸ್ಪರ್ಧೆ!

ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆಯ ಆರೋಪಿ ಶ್ರೀಕಾಂತ್ ಪಂಗಾರ್ಕರ್ ಮುಂಬರುವ ಜಲ್ನಾ ಮುನ್ಸಿಪಲ್ ಕಾರ್ಪೊರೇಷನ್ ಚುನಾವಣೆಯಲ್ಲಿ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಿದ್ದಾರೆ ಎಂಬ ಸುದ್ದಿ  ಹಲವು ರಾಷ್ಟ್ರೀಯ ಮಾಧ್ಯಮಗಳಲ್ಲಿ ವರದಿಯಾಗಿದೆ.  ಗೌರಿ ಲಂಕೇಶ್ ಹತ್ಯೆ ಸೇರಿದಂತೆ...

‘ಮೋದಿ ಟ್ರಂಪ್‌ಗೆ ಕರೆ ಮಾಡದ ಕಾರಣ ಭಾರತ-ಯುಎಸ್ ವ್ಯಾಪಾರ ಒಪ್ಪಂದ ನಡೆಯಲಿಲ್ಲ’: ಹೊವಾರ್ಡ್ ಲುಟ್ನಿಕ್ 

ಪ್ರಧಾನಿ ನರೇಂದ್ರ ಮೋದಿ ಅವರು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರಿಗೆ ಸರಿಯಾದ ಸಮಯಕ್ಕೆ ಕರೆ ಮಾಡದ ಕಾರಣ ಭಾರತದೊಂದಿಗಿನ ವ್ಯಾಪಾರ ಒಪ್ಪಂದ ನಡೆಯಲಿಲ್ಲ ಎಂದು ಅಮೆರಿಕದ ವಾಣಿಜ್ಯ ಕಾರ್ಯದರ್ಶಿ ಹೊವಾರ್ಡ್ ಲುಟ್ನಿಕ್...

‘ರೈಲ್ವೆ ಸಚಿವಾಲಯವನ್ನು ವೈಯಕ್ತಿಕ ಆಸ್ತಿಯಾಗಿ ಬಳಸಿಕೊಳ್ಳಲಾಗಿದೆ’: ಲಾಲು ಮತ್ತು ಕುಟುಂಬದ ವಿರುದ್ಧ ದೆಹಲಿ ನ್ಯಾಯಾಲಯ ಆರೋಪ

ನವದೆಹಲಿ: ಉದ್ಯೋಗಕ್ಕಾಗಿ ಭೂಮಿ ಹಗರಣದಲ್ಲಿ ಆರ್‌ಜೆಡಿ ಮುಖ್ಯಸ್ಥ ಮತ್ತು ಮಾಜಿ ರೈಲ್ವೆ ಸಚಿವ ಲಾಲು ಪ್ರಸಾದ್ ಯಾದವ್, ಅವರ ಕುಟುಂಬದ ಸದಸ್ಯರು ಮತ್ತು ಇತರರ ವಿರುದ್ಧ ದೆಹಲಿ ನ್ಯಾಯಾಲಯ ಗಂಭೀರ ಆರೋಪಗಳನ್ನು ಮಾಡಿದೆ.  ಯಾದವ್...

‘ಕೇರಳದ ಮಲಯಾಳಂ ಮಸೂದೆಯನ್ನು ವಿರೋಧಿಸಲು ಸಾಧ್ಯವಿರುವ ಎಲ್ಲವನ್ನೂ ಮಾಡುತ್ತೇವೆ’: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಕನ್ನಡ ಮಾಧ್ಯಮ ಶಾಲೆಗಳಲ್ಲಿಯೂ ಮಲಯಾಳಂ ಅನ್ನು ಪ್ರಥಮ ಭಾಷೆಯನ್ನಾಗಿ ಮಾಡುವ ಕೇರಳದ ಪ್ರಸ್ತಾವಿತ ಕಾನೂನನ್ನು ವಿರೋಧಿಸಲು ಕರ್ನಾಟಕ "ಸಾಧ್ಯವಾದಷ್ಟು ಪ್ರಯತ್ನಿಸುತ್ತದೆ" ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.   ಪ್ರಸ್ತಾವಿತ ಮಲಯಾಳಂ ಭಾಷಾ ಮಸೂದೆಯು "ಕೇರಳದ...

ಜಾರ್ಖಂಡ್‌ನಲ್ಲಿ ಮತ್ತೊಂದು ಗುಂಪುಹತ್ಯೆ: ದನ ಕಳ್ಳತನದ ಶಂಕೆಯಲ್ಲಿ ಮುಸ್ಲಿಂ ವ್ಯಕ್ತಿಯನ್ನು ಥಳಿಸಿ ಕೊಂದ ಗುಂಪು

ಜಾರ್ಖಂಡ್‌ನ ಗೊಡ್ಡಾ ಜಿಲ್ಲೆಯಲ್ಲಿ ಬುಧವಾರ ದನಗಳನ್ನು ಕದ್ದಿದ್ದಾನೆ ಎಂಬ ಶಂಕೆಯಲ್ಲಿ 45 ವರ್ಷದ ಮುಸ್ಲಿಂ ವ್ಯಕ್ತಿಯನ್ನು ಅಪರಿಚಿತ ಜನರ ಗುಂಪೊಂದು ಹೊಡೆದು ಕೊಂದಿದೆ ಎಂದು ಪಿಟಿಐ ವರದಿ ಮಾಡಿದೆ. ಪೊಲೀಸ್ ಅಧಿಕಾರಿಗಳನ್ನು ಉಲ್ಲೇಖಿಸಿ ವರದಿ...