ಮುಂಬೈನ ಬ್ರೀಚ್ ಕ್ಯಾಂಡಿ ಆಸ್ಪತ್ರೆಯಲ್ಲಿ ಇಂದು ನಿಧನರಾದ ಖ್ಯಾತ ಗಾಯಕಿ ಲತಾ ಮಂಗೇಶ್ಕರ್ ಅವರ ಸ್ಮರಣಾರ್ಥವಾಗಿ ದೇಶದಲ್ಲಿ ಎರಡು ದಿನಗಳ ರಾಷ್ಟ್ರೀಯ ಶೋಕಾಚರಣೆಯನ್ನು ಆಚರಿಸಲಾಗುವುದು ಎಂದು ಸರ್ಕಾರ ತಿಳಿಸಿದೆ.
ಇಂದು ಸಂಜೆ 6.30ಕ್ಕೆ ಸಕಲ ಸರ್ಕಾರಿ ಗೌರವಗಳೊಂದಿಗೆ ಲತಾ ಮಂಗೇಶ್ಕರ್ ಅವರ ಅಂತ್ಯಕ್ರಿಯೆ ನಡೆಯಲಿದೆ. ಶ್ರೇಷ್ಠ ಗಾಯಕಿಗೆ ಗೌರವ ಸೂಚಕವಾಗಿ ಎರಡು ದಿನಗಳ ಕಾಲ ರಾಷ್ಟ್ರಧ್ವಜವನ್ನು ಅರ್ಧಕ್ಕೆ ಹಾರಿಸಲಾಗುತ್ತದೆ.
ನೈಟಿಂಗೇಲ್ ಆಫ್ ಇಂಡಿಯಾ ಎಂದು ಕರೆಸಿಕೊಳ್ಳುತ್ತಿದ್ದ ಗಾಯಕಿ ಜನವರಿಯಲ್ಲಿ ಕೋವಿಡ್ ಸೋಂಕಿಗೆ ತುತ್ತಾಗಿದ್ದರು. ಜೊತೆಗೆ ನ್ಯುಮೋನಿಯಾದಿಂದ ಬಳಲುತ್ತಿದ್ದ ಅವರನ್ನು ಮುಂಬೈನ ಬ್ರೀಚ್ ಕ್ಯಾಂಡಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಕಳೆದ ಕೆಲವು ದಿನಗಳಿಂದ ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಚಿಕಿತ್ಸೆ ಫಲಕಾರಿಯಾಗದೆ ಭಾನುವಾರ (ಫೆ.6) ನಿಧನರಾಗಿದ್ದಾರೆ.
ಇದನ್ನೂ ಓದಿ: ಲತಾ ಮಂಗೇಶ್ಕರ್ ಅವರ 10 ಎವರ್‌ಗ್ರೀನ್ ಹಾಡುಗಳು
ಲತಾ ಮಂಗೇಶ್ಕರ್ ನಿಧನಕ್ಕೆ ರಾಷ್ಟ್ರಪತಿ ರಾಮನಾಥ್ ಕೋವಿಂದ್, ಪ್ರಧಾನಿ ನರೇಂದ್ರ ಮೋದಿ, ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ, ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ, ಸಿದ್ದರಾಮಯ್ಯ, ಸಿಎಂ ಬಸವರಾಜ ಬೊಮ್ಮಾಯಿ, ಪಂಹಾಬ್ ಸಿಎಂ ಚರಣ್‌ಜಿತ್ ಚನ್ನಿ, ಸಂಗೀತ ನಿರ್ದೇಶಕ ರೆಹಮಾನ್, ಗಾಯಕಿ ಶ್ರೇಯಾ ಘೋಷಲ್, ನಟಿ ಕಾಜೋಲ್, ಭೂಮಿ ಪಡ್ನೇಕರ್, ನಟ ಅಕ್ಷಯ್ ಕುಮಾರ್, ಮಹೇಶ್ ಬಾಬು, ಮಮ್ಮುಟಿ, ಸಂಜಯ್ ದತ್, ಗೌತಮ್ ಗಂಭೀರ್, ಸೆಹ್ವಾಗ್ ಸೇರಿದಂತೆ ಎಲ್ಲಾ ರಂಗದ ಗಣ್ಯರು ಸಂತಾಪ ಸೂಚಿಸಿದ್ದಾರೆ.
Lata-ji’s demise is heart-breaking for me, as it is for millions the world over. In her vast range of songs, rendering the essence and beauty of India, generations found expression of their inner-most emotions. A Bharat Ratna, Lata-ji’s accomplishments will remain incomparable. pic.twitter.com/rUNQq1RnAp
— President of India (@rashtrapatibhvn) February 6, 2022
’ಲತಾಜಿ ಅವರ ನಿಧನವು ನನ್ನ ಹೃದಯವನ್ನು ಕಲುಕಿದೆ, ಇದೆ ರೀತಿ ಪ್ರಪಂಚದಾದ್ಯಂತದ ಲಕ್ಷಾಂತರ ಜನರಿಗೆ ಆಗಿದೆ. ಅವರು ಹಾಡುಗಳ ಮೂಲಕ ಭಾರತದ ಸಾರ ಮತ್ತು ಸೌಂದರ್ಯವನ್ನು ನಿರೂಪಿಸಿದ್ದಾರೆ’ ಎಂದಿದ್ದಾರೆ.
ಸಂತಾಪ ಸೂಚಿಸಿ ಟ್ವೀಟ್ ಮಾಡಿರುವ ಪ್ರಧಾನಿ ನರೇಂದ್ರ ಮೋದಿ, “ಹೇಳಿಕೊಳ್ಳಲಾಗದಷ್ಟು ನಾನು ದುಃಖಿತನಾಗಿದ್ದೇನೆ. ದಯೆ ಮತ್ತು ಕಾಳಜಿಯುಳ್ಳ ಲತಾ ದೀದಿ ಅವರು ನಮ್ಮನ್ನು ಅಗಲಿದ್ದಾರೆ. ಅವರು ದೇಶದಲ್ಲಿ ತುಂಬಲಾರದ ಶೂನ್ಯವನ್ನು ಬಿಟ್ಟು ಹೋಗಿದ್ದಾರೆ. ಮುಂಬರುವ ಪೀಳಿಗೆ ಅವರನ್ನು ಭಾರತೀಯ ಸಂಸ್ಕೃತಿಯ ಧೀಮಂತಿಕೆ ಎಂದು ನೆನಪಿಸಿಕೊಳ್ಳುತ್ತಾರೆ. ಲತಾ ದೀದಿಯವರಿಂದ ನಾನು ಯಾವಾಗಲೂ ಅಪಾರ ಪ್ರೀತಿಯನ್ನು ಪಡೆದಿದ್ದೇನೆ. ಅದು ನನಗೆ ಸಿಕ್ಕ ಗೌರವವೆಂದು ಭಾವಿಸುತ್ತೇನೆ’ ಎಂದಿದ್ದಾರೆ.
I am anguished beyond words. The kind and caring Lata Didi has left us. She leaves a void in our nation that cannot be filled. The coming generations will remember her as a stalwart of Indian culture, whose melodious voice had an unparalleled ability to mesmerise people. pic.twitter.com/MTQ6TK1mSO
— Narendra Modi (@narendramodi) February 6, 2022
ಇದನ್ನೂ ಓದಿ: ಲತಾ ಮಂಗೇಶ್ಕರ್ : ನಿಮಗೆ ಗೊತ್ತಿರದ ಲತಾಜಿ ಬಗ್ಗೆ ವಿಶೇಷ ಮಾಹಿತಿ ಇಲ್ಲಿವೆ
ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ ಕುಡ ಸಂತಾಪ ವ್ಯಕ್ತಪಡಿಸಿದ್ದಾರೆ. “ಲತಾ ಮಂಗೇಶ್ಕರ್ ಅವರ ನಿಧನದ ದುಃಖದ ಸುದ್ದಿ ತಿಳಿಯಿತು. ಅವರು ಹಲವು ದಶಕಗಳಿಂದ ಭಾರತದ ಅತ್ಯಂತ ಪ್ರೀತಿಯ ಧ್ವನಿಯಾಗಿ ಉಳಿದರು. ಅವರ ಧ್ವನಿ ಅಮರವಾಗಿದೆ. ಅವರ ಅಭಿಮಾನಿಗಳ ಹೃದಯದಲ್ಲಿ ಪ್ರತಿಧ್ವನಿಸುತ್ತಲೇ ಇರುತ್ತದೆ. ಅವರ ಕುಟುಂಬ, ಸ್ನೇಹಿತರು ಮತ್ತು ಅಭಿಮಾನಿಗಳಿಗೆ ನನ್ನ ಸಂತಾಪಗಳು’ ಎಂದಿದ್ದಾರೆ.
Received the sad news of Lata Mangeshkar ji’s demise. She remained the most beloved voice of India for many decades.
Her golden voice is immortal and will continue to echo in the hearts of her fans.My condolences to her family, friends and fans. pic.twitter.com/Oi6Wb2134M
— Rahul Gandhi (@RahulGandhi) February 6, 2022
“ಮಧುರ ಕಂಠದ ಮೂಲಕ ದಶಕಗಳಿಂದ ಜನಮನವನ್ನು ರಂಜಿಸಿದ್ದ ಗಾನಕೋಗಿಲೆ ಲತಾ ಮಂಗೇಶ್ಕರ್ ಸಾವು ನನ್ನಂತಹ ಕೋಟ್ಯಂತರ ಅಭಿಮಾನಿಗಳ ಮನಸ್ಸನ್ನು ಆಘಾತಕ್ಕೀಡು ಮಾಡಿದೆ. ನಮ್ಮನ್ನು ಅಗಲಿ ಹೋದರೂ ಅಮರ ಕಂಠ ಸಿರಿಯ ಮೂಲಕ ನಮ್ಮೊಳಗೆ ಲತಾ ದೀದಿ ಅಜರಾಮರ. ಅವರ ಆತ್ಮಕ್ಕೆ ಚಿರಶಾಂತಿಯನ್ನು ಕೋರುವೆ.” ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಟ್ವೀಟ್ ಮಾಡಿದ್ದಾರೆ.
ಮಧುರ ಕಂಠದ ಮೂಲಕ ದಶಕಗಳಿಂದ ಜನಮನವನ್ನು ರಂಜಿಸಿದ್ದ
ಗಾನಕೋಗಿಲೆ
ಲತಾ ಮಂಗೇಶ್ಕರ್ ಸಾವು ನನ್ನಂತಹ ಕೋಟ್ಯಂತರ ಅಭಿಮಾನಿಗಳ ಮನಸ್ಸನ್ನು ಆಘಾತಕ್ಕೀಡು ಮಾಡಿದೆ.ನಮ್ಮನ್ನು ಅಗಲಿ ಹೋದರೂ ಅಮರ
ಕಂಠ ಸಿರಿಯ ಮೂಲಕ ನಮ್ಮೊಳಗೆ ಲತಾ ದೀದಿ ಅಜರಾಮರ.ಅವರ ಆತ್ಮಕ್ಕೆ ಚಿರಶಾಂತಿಯನ್ನು ಕೋರುವೆ.#LataMangeshkar pic.twitter.com/VD4B4d7Mzx
— Siddaramaiah (@siddaramaiah) February 6, 2022
Feeling numb. Devastated. Yesterday was Saraswati Puja & today Ma took her blessed one with her. Somehow it feels that even the birds, trees & wind are silent today.
Swar Kokila Bharat Ratna #LataMangeshkar ji your divine voice will echo till eternity. Rest in peace. Om Shanti. pic.twitter.com/UvUDTPu1eq— Shreya Ghoshal (@shreyaghoshal) February 6, 2022
Love, respect and prayers 🌹 @mangeshkarlata pic.twitter.com/PpJb1AdUdc
— A.R.Rahman (@arrahman) February 6, 2022
Meri Awaaz Hi Pehchaan Hain, Gar Yaad Rahe…and how can one forget such a voice!
Deeply saddened by the passing away of Lata Mangeshkar ji, my sincere condolences and prayers. Om Shanti 🙏🏻— Akshay Kumar (@akshaykumar) February 6, 2022
ಇದನ್ನೂ ಓದಿ: ನುಡಿ ನೆನಪು; ಕಪ್ಪು ಮೊಗದ ಸುಂದರ – ಸಿಡ್ನಿ ಪಾಟಿಯೆ


