Homeಮುಖಪುಟಭಾರತ ರತ್ನ, ಗಾನ ಕೋಗಿಲೆ ಲತಾ ಮಂಗೇಶ್ಕರ್ (92) ನಿಧನ

ಭಾರತ ರತ್ನ, ಗಾನ ಕೋಗಿಲೆ ಲತಾ ಮಂಗೇಶ್ಕರ್ (92) ನಿಧನ

- Advertisement -
- Advertisement -

ಖ್ಯಾತ ಹಿನ್ನೆಲೆ ಗಾಯಕಿ, ಭಾರತ ರತ್ನ ಲತಾ ಮಂಗೇಶ್ಕರ್ ಅವರು ಮುಂಬೈನ ಬ್ರೀಚ್ ಕ್ಯಾಂಡಿ ಆಸ್ಪತ್ರೆಯಲ್ಲಿ ಭಾನುವಾರ ನಿಧನರಾಗಿದ್ದಾರೆ. ಅವರಿಗೆ  92 ವರ್ಷ ವಯಸ್ಸಾಗಿತ್ತು.

ನೈಟಿಂಗೇಲ್ ಆಫ್ ಇಂಡಿಯಾ ಎಂದು ಕರೆಸಿಕೊಳ್ಳುತ್ತಿದ್ದ ಗಾಯಕಿ ಜನವರಿಯಲ್ಲಿ ಕೋವಿಡ್ ಸೋಂಕಿಗೆ ತುತ್ತಾಗಿದ್ದರು. ಜೊತೆಗೆ ನ್ಯುಮೋನಿಯಾದಿಂದ ಬಳಲುತ್ತಿದ್ದ ಅವರನ್ನು ಮುಂಬೈನ ಬ್ರೀಚ್ ಕ್ಯಾಂಡಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಕಳೆದ ಕೆಲವು ದಿನಗಳಿಂದ ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಚಿಕಿತ್ಸೆ ಫಲಕಾರಿಯಾಗದೆ ಭಾನುವಾರ (ಫೆ.6) ನಿಧನರಾಗಿದ್ದಾರೆ.

ಭಾರತ ರತ್ನ, ಪದ್ಮವಿಭೂಷಣ, ಪದ್ಮಭೂಷಣ ಮತ್ತು ದಾದಾಸಾಹೇಬ್ ಫಾಲ್ಕೆ ಪ್ರಶಸ್ತಿಗಳಿಗೆ ಲತಾ ಮಂಗೇಶ್ಕರ್ ಭಾಜನರಾಗಿದ್ದಾರೆ. ಹಿಂದಿ ಚಿತ್ರರಂಗದ ಜೊತೆಗೆ ಮರಾಠಿ, ಬಂಗಾಳಿ ಸೇರಿದಂತೆ ಹಲವಾರು ಪ್ರಾದೇಶಿಕ ಭಾಷೆಗಳಲ್ಲಿ ಹಾಡಿದ್ದಾರೆ. ಪ್ರಮುಖ ಸಂಗೀತ ಕುಟುಂಬಕ್ಕೆ ಸೇರಿದ ಲತಾ ಮಂಗೇಶ್ಕರ್ ಅವರು ಸಂಗೀತ ಸಂಯೋಜನೆಯ ಜೊತೆಗೆ ಬೆರಳೆಣಿಕೆಯಷ್ಟು ಚಲನಚಿತ್ರಗಳನ್ನು ನಿರ್ಮಿಸಿದ್ದಾರೆ.

ಇದನ್ನೂ ಓದಿ: ನಟಿಯ ಬಗ್ಗೆ ಅವಹೇಳನಾಕಾರಿ ಪ್ರಶ್ನೆ ಕೇಳಿದ ಪತ್ರಕರ್ತ: ಇದು ಮಹಿಳೆಯರ ಮೇಲೆ ಆತನಿಗಿರುವ ಗೌರವ ವ್ಯಕ್ತಪಡಿಸುತ್ತದೆ ಎಂದ ನಟಿ

ಪ್ರಸಿದ್ಧ ಮರಾಠಿ ಸಂಗೀತಗಾರ ಮತ್ತು ರಂಗಭೂಮಿ ಕಲಾವಿದರಾಗಿದ್ದ ಪಂಡಿತ್ ದೀನನಾಥ್ ಮಂಗೇಶ್ಕರ್ ಮತ್ತು ಶೇವಂತಿ ಮಂಗೇಶ್ಕರ್ ಅವರ ಪುತ್ರಿಯಾಗಿ ಲತಾ ಅವರು 1929 ರಲ್ಲಿ ಮಧ್ಯಪ್ರದೇಶದ ಇಂದೋರ್‌ನಲ್ಲಿ ಜನಿಸಿದರು. ಐದು ಒಡಹುಟ್ಟಿದವರಲ್ಲಿ ಲತಾ ಹಿರಿಯರಾಗಿದ್ದರು. ತಂದೆ ಪಂಡಿತ್ ದೀನನಾಥ್ ಮಂಗೇಶ್ಕರ್ ಬಳಿ ಸಂಗೀತ ಪಾಠ ಕಲಿತರು.

1942 ರಲ್ಲಿ, ಅವರ ತಂದೆ ನಿಧನರಾದಾಗ 13 ವರ್ಷದ ಅವರು ಸಂಗೀತದಲ್ಲಿ ತಮ್ಮ ವೃತ್ತಿಜೀವನವನ್ನು ಪ್ರಾರಂಭಿಸಿದರು. 1945 ರಲ್ಲಿ, ಮಧುಬಾಲಾ ನಟಿಸಿದ ಮಹಲ್ ಚಿತ್ರದ ’ಆಯೇಗಾ ಆನೇವಾಲಲಾ’ ಹಾಡಿನೊಂದಿಗೆ ಯಶಸ್ಸು ಲಭಿಸುತ್ತಾ ಹೋಯಿತು.

30,000 ಕ್ಕೂ ಹೆಚ್ಚು ಹಾಡುಗಳನ್ನು ಹಾಡಿರುವ ಲತಾ ಮಂಗೇಶ್ಕರ್‌ ಅವರಿ ಹಿಂದೆ ಭಾಷೆಯೊಂದರಲೇ ಅಧಙಿಕ ಹಾಡುಗಳನ್ನು ಹಾಡಿದ್ದಾರೆ, ಅವರ ಗಾಯನದ “ತುಜೆ ದೇಖಾ ತೋ ಯೇ ಜಾನಾ ಸನಮ್,” “ಗೋರಿ ಹೈ ಕಲೈಯಾನ್,” “ಲಗ್ ಜಾ ಗಲೇ,” “ಸಾವನ್ ಕಾ ಮಹಿನಾ,” “ಪ್ಯಾರ್ ಕಿಯಾ ಟು ಡರ್ನಾ ಕ್ಯಾ,” “ಏ ಮೇರೆ ವತನ್ ಕೆ ಲಾಗಿನ್”, ವೀರ್ ಝರಾ ಚಿತ್ರದ ‘ತೇರೆ ಲಿಯೇ’ ಹೆಚ್ಚು ಪ್ರಸಿದ್ಧಿ ಪಡೆದವು.

ಗಾಯಕಿ ಲತಾ ಮಂಗೇಶ್ಕರ್‌ ಕನ್ನಡದಲ್ಲಿಯೂ ಹಾಡಿದ್ದಾರೆ. 1967 ರಲ್ಲಿ ಬಿಡುಗಡೆಯಾಗಿದ್ದ ‘ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ’ ಚಿತ್ರದ ಎರಡು ಹಾಡುಗಳಿಗೆ ಲತಾ ಮಂಗೇಶ್ಕರ್ ದನಿಯಾಗಿದ್ದರು. ಬೆಳ್ಳನೆ ಬೆಳಗಾಯಿತು ಮತ್ತು ಎಲ್ಲಾರೆ ಇರುತಿರೋ ಬಂದಾರೆ ಬರುತೀರೋ ಎಂಬ ಹಾಡುಗಳನ್ನು ಹಾಡಿದ್ದಾರೆ.


ಇದನ್ನೂ ಓದಿ: ಮುಂಬೈನ 3% ವಿಚ್ಛೇದನಕ್ಕೆ ಟ್ರಾಫಿಕ್ ಕಾರಣ!: ಮಾಜಿ ಸಿಎಂ ಪತ್ನಿ ಅಮೃತ ಫಡ್ನವಿಸ್‌‌‌ ವಿಚಿತ್ರ ಹೇಳಿಕೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಭಾರತದಲ್ಲಿ 12 ಸಾವಿರ ಉದ್ಯೋಗಿಗಳನ್ನು ವಜಾಗೊಳಿಸಿದ ಒರಾಕಲ್ : ಜಾಗತಿಕವಾಗಿ 30 ಸಾವಿರ ಜನರ ಕೆಲಸಕ್ಕೆ ಕುತ್ತು

ಐಟಿ ದೈತ್ಯ ಒರಾಕಲ್ ಜಾಗತಿಕ ಮಟ್ಟದಲ್ಲಿ ಸುಮಾರು 30,000 ಉದ್ಯೋಗಿಗಳನ್ನು ವಜಾಗೊಳಿಸಲು ನಿರ್ಧರಿಸಿದ್ದು, ಇದು ಭಾರತದ ಮೇಲೂ ತೀವ್ರ ಪರಿಣಾಮ ಬೀರಿದೆ. ವರದಿಗಳ ಪ್ರಕಾರ, ಭಾರತವೊಂದರಲ್ಲೇ ಸುಮಾರು 12,000 ಉದ್ಯೋಗಿಗಳನ್ನು ಕೆಲಸದಿಂದ ತೆಗೆದುಹಾಕಲಾಗಿದೆ. ಕಂಪನಿಯು ತನ್ನ ಒಟ್ಟು ಉದ್ಯೋಗಿಳ...

ಗೋವಾ ನೈಟ್‌ಕ್ಲಬ್ ಬೆಂಕಿ ಪ್ರಕರಣ: ಮಾಲೀಕರಾದ ಸೌರಭ್ ಲೂತ್ರಾ, ಗೌರವ್ ಲೂತ್ರಾ ಸಹೋದರರಿಗೆ ಜಾಮೀನು

ಪಣಜಿ: ಕಳೆದ ಡಿಸೆಂಬರ್‌ನಲ್ಲಿ 25 ಜನರ ಸಾವಿಗೆ ಕಾರಣವಾದ ವಿನಾಶಕಾರಿ ಬೆಂಕಿ ಪ್ರಕರಣಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ಬಿರ್ಚ್ ಬೈ ರೋಮಿಯೋ ಲೇನ್ ನೈಟ್‌ಕ್ಲಬ್‌ನ ಮಾಲೀಕರಾದ ಸೌರಭ್ ಲೂತ್ರಾ ಮತ್ತು ಗೌರವ್ ಲೂತ್ರಾ ಅವರಿಗೆ...

ಲೈಂಗಿಕ ದೌರ್ಜನ್ಯ ಆರೋಪ: ಮಲಯಾಳಂ ಚಲನಚಿತ್ರ ನಿರ್ದೇಶಕ ರಂಜಿತ್ ಬಾಲಕೃಷ್ಣನ್ 14 ದಿನಗಳ ನ್ಯಾಯಾಂಗ ಬಂಧನಕ್ಕೆ 

ಕೇರಳ: ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಮಲಯಾಳಂ ನಿರ್ದೇಶಕ ಮತ್ತು ನಿರ್ಮಾಪಕ ರಂಜಿತ್ ಬಾಲಕೃಷ್ಣನ್ ಅವರನ್ನು ಬುಧವಾರ 14 ದಿನಗಳ ನ್ಯಾಯಾಂಗ ಬಂಧನಕ್ಕೆ ಒಳಪಡಿಸಲಾಗಿದೆ. ಪ್ರಸ್ತುತ ಅವರನ್ನು ಎರ್ನಾಕುಲಂ ಸಬ್ ಜೈಲಿನಲ್ಲಿ ಇರಿಸಲಾಗಿದೆ.  ಜನವರಿ...

ಫಾರ್ಮ್–6 ವಿವಾದ : ಕೋಲ್ಕತ್ತಾದ ಚುನಾವಣಾಧಿಕಾರಿ ಕಚೇರಿ ಮುಂದೆ ಟಿಎಂಸಿ -ಬಿಜೆಪಿ ಕಾರ್ಯಕರ್ತರ ನಡುವೆ ಘರ್ಷಣೆ

ಮತದಾರರ ಪಟ್ಟಿಗೆ ಹೊಸದಾಗಿ ಹೆಸರುಗಳನ್ನು ಸೇರಿಸುವ ನಮೂನೆ -6 (ಫಾರ್ಮ್ -6) ವಿಚಾರದಲ್ಲಿ ಕೋಲ್ಕತ್ತಾದ ಮುಖ್ಯ ಚುನಾವಣಾಧಿಕಾರಿ ಕಚೇರಿ ಮುಂದೆ ಮಂಗಳವಾರ (ಮಾ. 31) ತೃಣಮೂಲ ಕಾಂಗ್ರೆಸ್ (ಟಿಎಂಸಿ) ಮತ್ತು ಬಿಜೆಪಿ ಕಾರ್ಯಕರ್ತರ...

‘ಶೀಘ್ರದಲ್ಲೇ ಹೊರಡುತ್ತೇನೆ’: ‘2-3 ವಾರಗಳಲ್ಲಿ’ ಇರಾನ್ ಮೇಲಿನ ಯುದ್ಧ ಕೊನೆಗೊಳಿಸುವ ಬಗ್ಗೆ ಸುಳಿವು ನೀಡಿದ ಅಮೆರಿಕ ಅಧ್ಯಕ್ಷ ಟ್ರಂಪ್ 

ವಾಷಿಂಗ್ಟನ್ ಡಿಸಿ: ಜಾಗತಿಕ ಇಂಧನ ಮಾರುಕಟ್ಟೆಗಳನ್ನು ಅಸ್ತವ್ಯಸ್ತಗೊಳಿಸಿರುವ ಒಂದು ತಿಂಗಳ ಕಾಲ ನಡೆದ ಯುದ್ಧದ ಸಂಭಾವ್ಯ ಅಂತ್ಯದ ಬಗ್ಗೆ ಸುಳಿವು ನೀಡುವ ಮೂಲಕ, ಮುಂದಿನ ಎರಡು ಮೂರು ವಾರಗಳ ಮೊದಲೇ ಇರಾನ್ ವಿರುದ್ಧದ...

ದೊಡ್ಡಬಳ್ಳಾಪುರದಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ : ಕೆಐಎಡಿಬಿ ವಿರುದ್ಧ ಬೀದಿಗಿಳಿದ ಜನ

ದೇವನಹಳ್ಳಿ ಬಳಿಕ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ ಪ್ರಾರಂಭಗೊಂಡಿದೆ. ಕರ್ನಾಟಕ ಕೈಗಾರಿಕಾ ಪ್ರದೇಶ ಅಭಿವೃದ್ದಿ ಮಂಡಳಿ (ಕೆಐಎಡಿಬಿ) ವಿರುದ್ಧ ಜನರು ಬೀದಿಗಿಳಿದಿದ್ದಾರೆ. ದೊಡ್ಡಬಳ್ಳಾಪುರ ತಾಲೂಕಿನ ದೊಡ್ಡಬೆಳವಂಗಲ...

ಬಿಹಾರ: ಪತಿಯನ್ನು ಹತ್ಯೆ ಮಾಡಿದ ಗುಂಪಿನಿಂದ ಬೆದರಿಕೆ; ಇಬ್ಬರು ಮಕ್ಕಳೊಂದಿಗೆ ವಿಷ ಸೇವಿಸಿದ ಮುಸ್ಲಿಂ ಮಹಿಳೆ ಸಾವು, ಮಕ್ಕಳ ಸ್ಥಿತಿ ಗಂಭೀರ

ಬಿಹಾರದ ರೋಹ್ತಾಸ್ ಜಿಲ್ಲೆಯ ಮುಸ್ಲಿಂ ಮಹಿಳೆಯೊಬ್ಬರು ಮಂಗಳವಾರ ತನ್ನ ಇಬ್ಬರು ಅಪ್ರಾಪ್ತ ಮಕ್ಕಳೊಂದಿಗೆ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ವರದಿಯಾಗಿದೆ.  ಪತಿಯನ್ನು ಅಮಾನುಷವಾಗಿ ಹಲ್ಲೆ ನಡೆಸಿ ಹತ್ಯೆ ಮಾಡಿದ್ದ ಆರೋಪಿಗಳಿಂದ ಬೆದರಿಕೆಗಳನ್ನು ತಾಳಲಾರದೆ...

ಅತ್ಯಾಚಾರ ಆರೋಪ: ಅಶೋಕ್ ಖರತ್ ಅವರ ಪುತ್ರನನ್ನು ವಿಚಾರಣೆಗಾಗಿ ವಶಕ್ಕೆ ಪಡೆದ ಎಸ್ಐಟಿ; ಪತ್ನಿಗಾಗಿ ಹುಡುಕಾಟ 

ನಾಸಿಕ್: ಅತ್ಯಾಚಾರ ಆರೋಪಿ ಸ್ವಯಂ ಘೋಷಿತ ದೇವಮಾನವ ಅಶೋಕ್ ಖರತ್ ವಿರುದ್ಧ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ), ನಾಸಿಕ್ ನಗರದಲ್ಲಿ ಆತನ ಮಗನನ್ನು ವಿಚಾರಣೆಗಾಗಿ ವಶಕ್ಕೆ ಪಡೆದಿದ್ದು, ಆತನ ಪತ್ನಿಗಾಗಿಯೂ...

ಇರಾಕ್‌ : ಬಗ್ದಾದ್‌ನಲ್ಲಿ ಯುಎಸ್‌ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅಪಹರಣ

ಇರಾಕ್‌ ರಾಜಧಾನಿ ಬಗ್ದಾದ್‌ ನಗರದ ಅಲ್-ಸಾದೂನ್ ಬೀದಿಯಲ್ಲಿರುವ ಬಗ್ದಾದ್ ಹೋಟೆಲ್ ಬಳಿ ಅಮೆರಿಕದ ಪ್ರಶಸ್ತಿ ವಿಜೇತ ಸ್ವತಂತ್ರ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅವರನ್ನು ಮಂಗಳವಾರ (ಮಾ.31, 2026) ಅಪಹರಿಸಲಾಗಿದೆ ಎಂದು ವರದಿಯಾಗಿದೆ. ಸಿಸಿಟಿವಿ ದೃಶ್ಯಾವಳಿಗಳ ಪ್ರಕಾರ,...

ವಾಣಿಜ್ಯ ಎಲ್‌ಪಿಜಿ ದರ 195.50 ರೂ. ಏರಿಕೆ : ಜನ ಸಾಮಾನ್ಯರಿಗೆ ಗಾಯದ ಮೇಲೆ ಬರೆ

ಪಶ್ಚಿಮ ಏಷ್ಯಾ ಸಂಘರ್ಷದಿಂದಾಗಿ ಜಾಗತಿಕ ತೈಲ ಬೆಲೆಗಳು ಏರುತ್ತಿರುವ ನಡುವೆ, ವಾಣಿಜ್ಯ ಎಲ್‌ಪಿಜಿ ದರವನ್ನು ಬುಧವಾರ (ಏ.1) 195.50 ರೂ. ಹೆಚ್ಚಿಸಲಾಗಿದೆ. ಸರ್ಕಾರಿ ಸ್ವಾಮ್ಯದ ತೈಲ ಕಂಪನಿಗಳ ಪ್ರಕಾರ, ಬೆಲೆ ಏರಿಕೆ ಬಳಿಕ...