Homeಕರ್ನಾಟಕವಿಧಾನ ಪರಿಷತ್ತಿಗೆ ಅನರ್ಹ ಶಾಸಕರ ಆಯ್ಕೆ 'ಹಿಂಬಾಗಿಲ ಪ್ರವೇಶ': ವಕೀಲ ಪ್ರಶಾಂತ್ ಭೂಷಣ್

ವಿಧಾನ ಪರಿಷತ್ತಿಗೆ ಅನರ್ಹ ಶಾಸಕರ ಆಯ್ಕೆ ‘ಹಿಂಬಾಗಿಲ ಪ್ರವೇಶ’: ವಕೀಲ ಪ್ರಶಾಂತ್ ಭೂಷಣ್

'ಆರ್.ಶಂಕರ್, ಎನ್.ನಾಗರಾಜ್ ಮತ್ತು ಎ.ಎಚ್.ವಿಶ್ವನಾಥ್ ಅವರನ್ನು ಮೇಲ್ಮನೆಗೆ ಆಯ್ಕೆ ಮಾಡಬೇಕು ಎನ್ನುವ ನಿರ್ಧಾರ ಮತ್ತು ಅವರ ನಾಮನಿರ್ದೇಶನವನ್ನು ಪ್ರಶ್ನಿಸುವ' ಪಿಐಎಲ್‌ಗಳ ಕುರಿತು ವಿಚಾರಣೆ ನಡೆಯುತ್ತಿದೆ.

- Advertisement -
- Advertisement -

“ವಿಧಾನ ಪರಿಷತ್ತಿಗೆ ಅನರ್ಹ ಅಭ್ಯರ್ಥಿಗಳನ್ನು ಆಯ್ಕೆ ಮಾಡುವುದು ಅಥವಾ ನಾಮನಿರ್ದೇಶನ ಮಾಡುವುದು ಹಿಂಬಾಗಿಲಿನ ಪ್ರವೇಶಕ್ಕೆ ಸಮನಾಗಿರುತ್ತದೆ” ಎಂದು ಹಿರಿಯ ವಕೀಲ ಪ್ರಶಾಂತ್ ಭೂಷಣ್ ಕರ್ನಾಟಕ ಹೈಕೋರ್ಟ್ ಮುಂದೆ ಬುಧವಾರ ವಾದಿಸಿದರು.

ಮುಖ್ಯ ನ್ಯಾಯಮೂರ್ತಿ ಅಭಯ್ ಶ್ರೀನಿವಾಸ್ ಒಕಾ ಮತ್ತು ನ್ಯಾಯಮೂರ್ತಿ ಎಸ್. ವಿಶ್ವಜಿತ್ ಶೆಟ್ಟಿ ಅವರನ್ನೊಳಗೊಂಡ ವಿಭಾಗೀಯ ಪೀಠದ ಮುಂದೆ ಪ್ರಶಾಂತ್ ಭೂಷಣ್ ವಾದ ಮಂಡಿಸಿದ್ದಾರೆ.

‘ಆರ್.ಶಂಕರ್, ಎನ್.ನಾಗರಾಜ್ ಮತ್ತು ಎ.ಎಚ್.ವಿಶ್ವನಾಥ್ ಅವರನ್ನು ಮೇಲ್ಮನೆಗೆ ಆಯ್ಕೆ ಮಾಡಬೇಕು ಎನ್ನುವ ನಿರ್ಧಾರ ಮತ್ತು ಅವರ ನಾಮನಿರ್ದೇಶನವನ್ನು ಪ್ರಶ್ನಿಸುವ’ ಪಿಐಎಲ್‌ಗಳ ಕುರಿತು ವಿಚಾರಣೆ ನಡೆಯುತ್ತಿದೆ.

ಇದನ್ನೂ ಓದಿ: ಅಧಿಕೃತವಾಗಿ ಬಿಜೆಪಿ ಸೇರಿದ 17 ಅನರ್ಹ ಶಾಸಕರು: ಭಾವೀ ಮಂತ್ರಿಗಳು ಎಂದ ಯಡಿಯೂರಪ್ಪ

ಅರ್ಜಿದಾರರನ್ನು ಪ್ರತಿನಿಧಿಸುತ್ತಿರುವ ಪ್ರಶಾಂತ್ ಭೂಷಣ್ ಸುಪ್ರೀಂ ಕೋರ್ಟ್ ತೀರ್ಪನ್ನು ಉಲ್ಲೇಖಿಸಿ, “ಈ ಮೂವರು ರಾಜಕಾರಣಿಗಳ ಅನರ್ಹತೆಯನ್ನು ಸ್ಪೀಕರ್ ಸಮರ್ಥಿಸಿದ್ದಾರೆ. ಆದ್ದರಿಂದ ಅವರನ್ನು ವಿಧಾನಸಭೆಗೆ ಆಯ್ಕೆ ಮಾಡಲು ಅಥವಾ ನಾಮನಿರ್ದೇಶನ ಮಾಡಲು ಸಾಧ್ಯವಿಲ್ಲ” ಎಂದು ಅವರು ಹೇಳಿದರು.

ಪ್ರತಿವಾದಿ ವಾದ ಮಂಡಿಸಲು ಸಮಯ ಕೋರಿರುವುದರಿಂದ ನ್ಯಾಯಪೀಠವು ಈ ವಿಚಾರಣೆಯನ್ನು ಇಂದು ನಡೆಸಲಿದೆ.

ಇದನ್ನೂ ಓದಿ: ಎಚ್. ವಿಶ್ವನಾಥ್, ಸಿ. ಪಿ. ಯೋಗೇಶ್ವರ್‌ ಸೇರಿ ಐವರು ವಿಧಾನಪರಿಷತ್‌ಗೆ ನಾಮನಿರ್ದೇಶನ

ಅನರ್ಹಗೊಂಡ ಶಾಸಕರಾದ ಎ.ಎಚ್.ವಿಶ್ವನಾಥ್ (ನಾಮನಿರ್ದೇಶಿತ) ಮತ್ತು ಎಂಟಿಬಿ ನಾಗರಾಜ್ ಡಿಸೆಂಬರ್ ಉಪಚುನಾವಣೆಯಲ್ಲಿ ಸೋತಿದ್ದರು. ಶಂಕರ್ ಚುನಾವಣೆಯಲ್ಲಿ ಸ್ಪರ್ಧಿಸಲಿಲ್ಲ.

ಸಚಿವ ಸಂಪುಟಕ್ಕೆ ಸೇರಿಸಿಕೊಳ್ಳುವ ಉದ್ದೇಶದಿಂದ ಮೇಲ್ಮನೆಗೆ ಇವರ ನಾಮನಿರ್ದೇಶನ/ಚುನಾವಣೆ ಮಾಡಲಾಗಿದೆ ಎಂದು ಅರ್ಜಿದಾರರು ವಾದಿಸಿದರು. ಇವರನ್ನು ಪರಿಷತ್ತಿನಲ್ಲಿ ಸೇರಿಸಿಕೊಳ್ಳುವುದು ಸಂವಿಧಾನದ 164 ಮತ್ತು 361 ಬಿ ವಿಧಿಗೆ ವಿರುದ್ಧವಾಗಿದೆ ಎಂದು ಅವರು ಹೇಳಿದರು.


ಇದನ್ನೂ ಓದಿ: ಇದು ಯಡಿಯೂರಪ್ಪನವರ ’ಜಾತಿಗೊಂದು ನಿಗಮ’ವಷ್ಟೇ ಅಲ್ಲ, ಬಿಜೆಪಿಯ ಅಪಾಯಕಾರಿ ವೈದಿಕಶಾಹಿ ವರಸೆ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕರಾವಳಿ ಸಮಸ್ಯೆಗೆ ಶಾಶ್ವತ ಪರಿಹಾರದ ಭರವಸೆ: ಸಚಿವ ಕೆ.ಎಸ್.ಬಸವಂತಪ್ಪ

ರಾಜ್ಯದ ಕರಾವಳಿ ಭಾಗದಲ್ಲಿ ಮೀನುಗಾರಿಕೆ ಕ್ಷೇತ್ರದ ಅಭಿವೃದ್ಧಿ ಕುಂಠಿತವಾಗುತ್ತಿರುವ ಕುರಿತು ಕಳವಳ ವ್ಯಕ್ತವಾಗುತ್ತಿರುವ ಬೆನ್ನಲ್ಲೇ, ಸ್ಥಳೀಯ ಸಮಸ್ಯೆಗಳಿಗೆ ಸ್ಪಂದಿಸಲು ಸರ್ಕಾರ ಮುಂದಾಗಿದೆ. ಕರಾವಳಿ ವ್ಯಾಪ್ತಿಯ ಬಂದರುಗಳು, ಮೀನು ಮಾರುಕಟ್ಟೆಗಳು, ಬ್ರೇಕ್‌ವಾಟರ್‌ಗಳು ಹಾಗೂ ಜೆಟ್ಟಿಗಳಿಗೆ...

SIR ಪ್ರಕ್ರಿಯೆಯಲ್ಲಿ ಯಾರ ಹೆಸರು ಬಿಟ್ಟುಹೋಗಬಾರದು: PRC ನೀಡಲು ವಿಳಂಬ ಬೇಡ ಡಾ. ಜಿ. ಪರಮೇಶ್ವರ್

ಉದ್ಯೋಗ ಅಥವಾ ವಿವಿಧ ಕಾರಣಗಳಿಂದಾಗಿ ತಮ್ಮ ಸ್ವಂತ ಊರು ತೊರೆದು ಬೇರೆಡೆಗೆ ಸ್ಥಳಾಂತರಗೊಂಡು ನೆಲೆಸಿರುವ ರಾಜ್ಯದ ಯಾವುದೇ ನಾಗರಿಕರು ಯಾವುದೇ ಕಾರಣಕ್ಕೂ ಮತದಾರರ ಪಟ್ಟಿಯಿಂದ ಹೊರಗುಳಿಯಬಾರದು ಎಂದು ಉಪಮುಖ್ಯಮಂತ್ರಿ ಹಾಗೂ ಕಂದಾಯ ಸಚಿವರಾದ...

ಬಿಹಾರ ಪ್ರವಾಹದ ನಡುವೆ ಮೋದಿ ಹುಟ್ಟುಹಬ್ಬದ ಪ್ರಯುಕ್ತ ದೀಪೋತ್ಸವ; ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮಕ್ಕೆ ತೇಜಸ್ವಿ ಯಾದವ್ ಆಕ್ಷೇಪ

ಬಿಹಾರದಲ್ಲಿ ಪ್ರವಾಹ ಪರಿಸ್ಥಿತಿ ಮುಂದುವರಿದಿರುವ ನಡುವೆಯೇ ಪ್ರಧಾನಿ ನರೇಂದ್ರ ಮೋದಿ ಅವರ ಹುಟ್ಟುಹಬ್ಬದ ಅಂಗವಾಗಿ ಸೆಪ್ಟೆಂಬರ್ 17ರಂದು ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮ ಆಯೋಜಿಸಿರುವುದು ರಾಜಕೀಯ ಚರ್ಚೆಗೆ ಕಾರಣವಾಗಿದೆ. ರಾಜ್ಯದ 15 ಜಿಲ್ಲೆಗಳಲ್ಲಿ...

ಉಮರ್ ಖಾಲಿದ್ ಅವರನ್ನು ‘ದೇಶಪ್ರೇಮಿ’ ಎಂದ ಬಿ.ಕೆ. ಹರಿಪ್ರಸಾದ್; ವಿಧಾನಸೌಧ ಪೊಲೀಸ್ ಠಾಣೆಯಲ್ಲಿ ದೂರು ದಾಖಲು

ಬೆಂಗಳೂರಿನ ರಾಷ್ಟ್ರೀಯ ಕಾನೂನು ಶಾಲೆ (ಎನ್‌ಎಲ್‌ಎಸ್‌ಐಯು) ಯೂನಿವರ್ಸಿಟಿಯಲ್ಲಿ ಜೈಲಿನಲ್ಲಿರುವ ಹೋರಾಟಗಾರ ಉಮರ್ ಖಾಲಿದ್ ಕುರಿತಾದ ಸಾಕ್ಷ್ಯಚಿತ್ರಕ್ಕೆ ಸಂಬಂಧಿಸಿದಂತೆ ನಡೆಯುತ್ತಿರುವ ವಿವಾದದ ನಡುವೆ, ಅವರನ್ನು "ರಾಷ್ಟ್ರಪ್ರೇಮಿ" ಎಂದು ಕರೆದಿರುವ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ...

ಇಂದಿರಾ ಗಾಂಧಿಯಂತೆ ನೇರವಾಗಿ ನಿಲ್ಲಿ, ಟ್ರಂಪ್ ಮುಂದೆ ಮಂಡಿಯೂರುತ್ತಿದ್ದೀರಿ: ‘UPI ಟ್ಯಾಕ್ಸ್’ ಬಗ್ಗೆ ಮೋದಿ ವಿರುದ್ಧ ರಾಹುಲ್ ವಾಗ್ದಾಳಿ!

ಯುಪಿಐ (UPI) ವಹಿವಾಟುಗಳಿಗೆ ಸಂಬಂಧಿಸಿದಂತೆ ಜಾರಿಯಾಗುತ್ತಿರುವ ಹೊಸ 'ಮರ್ಚೆಂಟ್ ಡಿಸ್ಕೌಂಟ್ ರೇಟ್' (MDR) ವ್ಯವಸ್ಥೆ ಇದೀಗ ತೀವ್ರ ರಾಜಕೀಯ ಸಂಘರ್ಷಕ್ಕೆ ಕಾರಣವಾಗಿದೆ. ಇದನ್ನು "ಬ್ಯಾಂಕ್‌ಗಳು ವಿಧಿಸುವ ಸೇವಾ ಶುಲ್ಕ" ಎಂದು ಸರ್ಕಾರ ಸಮರ್ಥಿಸಿಕೊಳ್ಳುತ್ತಿದ್ದರೂ,...

ಲಿಯೋನೆಲ್ ಮೆಸ್ಸಿ ಕೇರಳ ಭೇಟಿ ಪ್ರಕರಣ: ಕೊಚ್ಚಿಯ ‘ರಿಪೋರ್ಟರ್ ಟಿವಿ’ ಕಚೇರಿಯಲ್ಲಿ ಪೊಲೀಸರಿಂದ ಶೋಧ

ಮಲಯಾಳಂ ಸುದ್ದಿ ವಾಹಿನಿ 'ರಿಪೋರ್ಟರ್ ಟಿವಿ'ಯ ಕೊಚ್ಚಿ ಪ್ರಧಾನ ಕಚೇರಿಯಲ್ಲಿ ಬುಧವಾರ (ಸೆ.16) ಮುಂಜಾನೆ ಪೊಲೀಸ್ ತಂಡವೊಂದು ಶೋಧ ಕಾರ್ಯ ನಡೆಸಿದ್ದು, ಇದರಿಂದಾಗಿ ತನ್ನ ಸುದ್ದಿ ಪ್ರಸಾರ ಕಾರ್ಯಾಚರಣೆಗೆ ಅಡಚಣೆಯಾಗಿದೆ ಎಂದು ವಾಹಿನಿ...

‘ಏಕರೂಪತೆ ಸಮಾನತೆಯಲ್ಲ’: 2029ಕ್ಕೂ ಮುನ್ನ 21 ರಾಜ್ಯಗಳಲ್ಲಿ ಯುಸಿಸಿ ಜಾರಿ ಘೋಷಿಸಿದ ಅಮಿತ್ ಶಾಗೆ ಪ್ರತಿಪಕ್ಷಗಳ ತೀವ್ರ ತಿರುಗೇಟು

ನವದೆಹಲಿ/ಮುಂಬೈ: 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಸರ್ಕಾರಗಳಿರುವ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಜಾರಿಗೆ ತರಲಾಗುವುದು ಎಂಬ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ...

KPSC ಅಧ್ಯಕ್ಷರ ಪುತ್ರಿಯ ನಕಲಿ ಪ್ರಮಾಣಪತ್ರ ಹಗರಣ: ಅಕ್ರಮಕ್ಕೆ ಸಾಥ್ ನೀಡಿದ್ದ ಅಧಿಕಾರಿಯ ಜಾಮೀನು ಅರ್ಜಿ ವಜಾ

ಕೆಪಿಎಸ್‌ಸಿ (KPSC) ಅಧ್ಯಕ್ಷರ ಪುತ್ರಿಗೆ ಅಕ್ರಮವಾಗಿ ನಕಲಿ ಆದಾಯ ಪ್ರಮಾಣಪತ್ರ ನೀಡಿದ ಆರೋಪ ಎದುರಿಸುತ್ತಿರುವ ಕಂದಾಯ ಅಧಿಕಾರಿಯ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಬೆಂಗಳೂರಿನ ನಗರ ಸಿವಿಲ್ ಮತ್ತು ಸೆಷನ್ಸ್ ನ್ಯಾಯಾಲಯ ಮಂಗಳವಾರ ವಜಾಗೊಳಿಸಿದೆ....

ಬಂಗಾಳದಲ್ಲಿ ಬಿಜೆಪಿ ಸರ್ಕಾರದ ನಿರ್ಬಂಧ; ನೆಲಕಚ್ಚಿದ ದನದ ಮಾಂಸ ವ್ಯಾಪಾರ

ಪಶು ಹತ್ಯೆಯ ಕುರಿತು ಮುಖ್ಯಮಂತ್ರಿ ಸುವೇಂಧು ಅಧಿಕಾರಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಸೂಚನೆ ಹೊರಡಿಸಿದ ನಂತರ, ಮಾಂಸದ ವ್ಯಾಪಾರಿ ಮುಷ್ತಾಕ್ ಕಳೆದ ಮೂರು ತಿಂಗಳಿನಿಂದ ಒಂದು ಪೈಸೆಯನ್ನೂ ಗಳಿಸಿಲ್ಲ. "ಚುನಾವಣೆಯ ಕಾರಣದಿಂದ...

ತೀವ್ರಗೊಂಡ ಸೌದಿ-ಹೌತಿ ಸಂಘರ್ಷ : ಮಕ್ಕಾ ಗುರಿಯಾಗಿಸಿದ್ದ ಡ್ರೋನ್ ಹೊಡೆದುರುಳಿಸಿದ್ದೇವೆ ಎಂದ ಸೌದಿ; ತಳ್ಳಿಹಾಕಿದ ಹೌತಿ

ಯೆಮನ್‌ನ ರೆಬೆಲ್ ಗ್ರೂಪ್ ಹೌತಿ ಮತ್ತು ಸೌದಿ ಬೆಂಬಲಿತ ಪಡೆಗಳ ಸಂಘರ್ಷ ತೀವ್ರಗೊಂಡಿದ್ದು, ಇತಿಹಾಸದಲ್ಲೇ ಮೊದಲ ಬಾರಿಗೆ ಮುಸ್ಲಿಮರ ಪವಿತ್ರ ನಗರ ಮಕ್ಕಾದಲ್ಲಿ ಸೌದಿ ಅರೇಬಿಯಾದ ನಾಗರಿಕ ರಕ್ಷಣಾ (ಸಿವಿಲ್ ಡಿಫೆನ್ಸ್) ಇಲಾಖೆಯು...