ಜೂನ್ 13 ರಂದು ವಿಧಾನಸಭೆಯಿಂದ ವಿಧಾನ ಪರಿಷತ್‌ಗೆ ನಡೆಯುವ ದ್ವೈವಾರ್ಷಿಕ ಚುನಾವಣೆಗೆ ಕಾಂಗ್ರೆಸ್ 8 ಸ್ಥಾನಗಳಿಗೆ ತನ್ನ ಅಭ್ಯರ್ಥಿಗಳನ್ನು ಘೋಷಿಸಿದೆ.
ಸಿಎಂ ಸಿದ್ದರಾಮಯ್ಯ ಪುತ್ರ ಯತೀಂದ್ರ, ಹಾಲಿ ಸಚಿವ ಎನ್.ಎಸ್.ಬೋಸರಾಜು, ಸಿಎಂ ರಾಜಕೀಯ ಕಾರ್ಯದರ್ಶಿ ಕೆ.ಗೋವಿಂದರಾಜು, ವಸಂತಕುಮಾರ್, ಜಗದೇವ್ ಗುತ್ತೇದಾರ್, ಐವನ್ ಡಿಸೋಜಾ ಮತ್ತು ಬಿಲ್ಕಿಸ್ ಬಾನೊ ಅವರನ್ನು ಕಾಂಗ್ರೆಸ್ ತನ್ನ ಅಭ್ಯರ್ಥಿಗಳನ್ನಾಗಿ ಘೋಷಿಸಿದೆ. ಜೊತೆಗೆ, ಮಾಜಿ ಸಿಎಂ ಜಗದೀಶ್ ಶೆಟ್ಟರ್ ಅವರ ರಾಜೀನಾಮೆಯಿಂದ ತೆರವಾಗಿರುವ ಸ್ಥಾನಕ್ಕೆ ಯುವ ಕಾಂಗ್ರೆಸ್ ಮಾಜಿ ನಾಯಕ ಬಸನಗೌಡ ಬಾದರ್ಲಿ ಅವರನ್ನು ಪಕ್ಷವು ಆಯ್ಕೆ ಮಾಡಿದೆ.
ವಿಧಾನ ಪರಿಷತ್‌ನ 11 ಸ್ಥಾನಗಳಿಗೆ ಇದೇ ಜೂನ್ 13ರಂದು ನಡೆಯಲಿರುವ ಚುನಾವಣೆಗೆ ಆಡಳಿತರೂಢ ಕಾಂಗ್ರೆಸ್ ಪಕ್ಷದಲ್ಲಿ ಆಕಾಂಕ್ಷಿಗಳ ಪಟ್ಟಿ ದೊಡ್ಡದಾಗಿತ್ತು. ಹಲವರು ರಾಜ್ಯ ಮತ್ತು ರಾಷ್ಟ್ರೀಯ ನಾಯಕರ ಬಳಿ ಲಾಬಿ ನಡೆಸಿದ್ದರು. ಅಂತಿಮವಾಗಿ, ಕಾಂಗ್ರೆಸ್ ಹೈಕಮಾಂಡ್ ವರಿಷ್ಠರು ಏಳು ಜನರನ್ನು ಆಯ್ಕೆ ಮಾಡಿ ಪಟ್ಟಿ ಬಿಡುಗಡೆ ಮಾಡಿದೆ.

ಇಂದು ಬೆಳಗ್ಗೆಯೇ ಬಿಜೆಪಿ ಮೂರು ಸ್ಥಾನಗಳಿಗೆ ತನ್ನ ಅಭ್ಯರ್ಥಿ ಘೋಷಣೆ ಮಾಡಿತ್ತು. ಅದರ ಬೆನ್ನಲ್ಲೇ ಕಾಂಗ್ರೆಸ್ ಕೂಡ ಏಳು ಜನರ ಪಟಟಿ ಬಿಡುಗಡೆ ಮಾಡಿದೆ. ಸಂಖ್ಯಾಬಲದ ಮೇಲೆ ಒಟ್ಟು 11ರಲ್ಲಿ ಏಳು ಸ್ಥಾನಗಳು ಕಾಂಗ್ರೆಸ್ಗೆ ಸಿಗಲಿದ್ದು, 7 ಸ್ಥಾನಗಳಿಗೆ ಕಾಂಗ್ರೆಸ್ ಅಭ್ಯರ್ಥಿಯನ್ನು ಘೋಷಣೆ ಮಾಡಿದೆ.
ಏಳು ಸ್ಥಾನಗಳಿಗೆ 30ಕ್ಕೂ ಹೆಚ್ಚು ಆಕಾಂಕ್ಷಿಗಳಿದ್ದು, ಸಿಎಂ ಸಿದ್ದರಾಮಯ್ಯ ಮತ್ತು ಡಿಸಿಎಂ ಡಿ.ಕೆ. ಶಿವಕುಮಾರ್ ಪಕ್ಷದ ಹೈಕಮಾಂಡ್ ನಾಯಕರ ಜತೆಗೆ ಮಾತನಾಡಿ 7 ಜನರಿಗೆ ಜನರಿಗೆ ಮಣೆ ಹಾಕಿದೆ.
ಸಮುದಾಯಗಳ ಸಾಮಾಜಿಕ ನ್ಯಾಯ ಆಧಾರದಲ್ಲಿ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗಿದೆ ಎಂದು ಮೂಲಗಳು ತಿಳಿಸಿವೆ. ಗೋವಿಂದರಾಜ್ ಅವರನ್ನೇ ಮತ್ತೊಂದು ಅವಧಿಗೆ ಮುಂದುವರಿಸಿದ್ದು, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಆಪ್ತರು ಹಾಗೂಒಕ್ಕಲಿಗ ಸಮುದಾಯದವರ ಗೋವಿಂದ ರಾಜ್ ಅವರಿಗೆ ಅವಕಾಶವನ್ನ ನೀಡಿದೆ. ಒಬಿಸಿ ಸಮುದಾಯದಿಂದ ಯತೀಂದ್ರ ಸಿದ್ದರಾಮಯ್ಯ, ಪರಿಶಿಷ್ಟ ಜಾತಿ ಸಮುದಾಯದಿಂದ ವಸಂತಕುಮಾರ್, ರೆಡ್ಡಿ ಸಮುದಾಯದಿಂದ ಹಾಲಿ ಸಚಿವ ಎನ್ಎಸ್ ಬೋಸರಾಜು, ಜಗದೇವ್ ಗುತ್ತೇದಾರ್ ಅವರಿಗೆ ಮಣೆ ಹಾಕಿದೆ ಎನ್ನಲಾಗಿದೆ.
ಇದನ್ನೂ ಓದಿ; ವಿಧಾನ ಪರಿಷತ್ ಚುನಾವಣೆ: ಬಿಜೆಪಿಯಿಂದ ಮೂವರು ಅಭ್ಯರ್ಥಿಗಳ ಪಟ್ಟಿ ಪ್ರಕಟ


