Homeಕರ್ನಾಟಕವಿಧಾನ ಪರಿಷತ್‌ ಉಪಸಭಾಪತಿ ಎಸ್‌.ಎಲ್‌.ಧರ್ಮೇಗೌಡ ಅಸಹಜ ಸಾವು: ಡೆತ್‌ನೋಟ್ ಪತ್ತೆ

ವಿಧಾನ ಪರಿಷತ್‌ ಉಪಸಭಾಪತಿ ಎಸ್‌.ಎಲ್‌.ಧರ್ಮೇಗೌಡ ಅಸಹಜ ಸಾವು: ಡೆತ್‌ನೋಟ್ ಪತ್ತೆ

ವಿಧಾನ ಪರಿಷತ್‌ನಲ್ಲಿ ಈಚೆಗೆ ನಡೆದ ಘಟನೆಯಿಂದ ಧರ್ಮೇಗೌಡ ಅವರು ಮನನೊಂದಿದ್ದರು, ಸಹೋದರ ವಿಧಾನ ಪರಿಷತ್‌ ಸದಸ್ಯ ಎಸ್‌.ಎಲ್‌.ಭೋಜೇಗೌಡ ಅವರೊಂದಿಗೆ ಬೇಸರ ಹಂಚಿಕೊಂಡಿದ್ದರು ಎಂದು ಧರ್ಮೇಗೌಡ ಅವರ ಆಪ್ತರೊಬ್ಬರು ತಿಳಿಸಿದ್ದಾರೆ.

- Advertisement -
- Advertisement -

ವಿಧಾನ ಪರಿಷತ್‌ನ‌ ಉಪಸಭಾಪತಿ ಎಸ್‌.ಎಲ್‌.ಧರ್ಮೇಗೌಡ ಅಸಹಜವಾಗಿ ಸಾವನ್ನಪ್ಪಿದ್ದು, ಅವರ ಮೃತದೇಹ ಚಿಕ್ಕಮಗಳೂರಿನ ಕಡೂರು ತಾಲ್ಲೂಕಿನ ಗುಣಸಾಗರ ಬಳಿಯ ರೈಲು ಹಳಿಯಲ್ಲಿ ರಕ್ತ ಸಿಕ್ತ ಸ್ಥಿತಿಯಲ್ಲಿ ಪತ್ತೆಯಾಗಿದೆ. ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಶಂಕಿಸಲಾಗಿದೆ.

ಸಖರಾಯಪಟ್ಟಣದ ಬಳಿ ತೋಟದ ಮನೆಯಿಂದ ಸೋಮವಾರ ಸಂಜೆ ಕಾರಿನಲ್ಲಿ ತೆರಳಿದ್ದ ಧರ್ಮೇಗೌಡ ಅವರು ರಾತ್ರಿಯಾದರೂ ಹಿಂತಿರುಗಲಿಲ್ಲ. ಇದರಿಂದ ಭಯಗೊಂಡ ಮನೆಯವರು ಹುಡುಕಾಡಿದ್ದಾರೆ. ಗುಣಸಾಗರ – ಕಬ್ಳಿ ಮಾರ್ಗದ ನಡುವೆ ತಡರಾತ್ರಿ ಶವ ಪತ್ತೆಯಾಗಿದೆ ಎಂದು ತಿಳಿಸಿದ್ದಾರೆ.

ಇದನ್ನೂ ಓದಿ: ರಾಜೀನಾಮೆ ನೀಡದೆ ಸರ್ಕಾರಿ ಮನೆ ತೊರೆದ ವಿಧಾನ ಪರಿಷತ್ ಸಭಾಪತಿ ಪ್ರತಾಪ್‌ಚಂದ್ರ ಶೆಟ್ಟಿ

ಜೊತೆಗೆ ಧರ್ಮೇಗೌಡ ಅವರ ಮೃತದೇಹದ ಜತೆ ಡೆತ್‌ ನೋಟ್‌ ಸಿಕ್ಕಿದೆ. ವಿಧಾನ ಪರಿಷತ್‌ನಲ್ಲಿ ಈಚೆಗೆ ನಡೆದ ಘಟನೆಯ ಉಲ್ಲೇಖ ಅದರಲ್ಲಿ ಇದೆ ಎಂನ್ನಲಾಗಿದೆ.

ಧರ್ಮೇಗೌಡ ಅವರು ಬೀರೂರಿನ ಪರಿಚಯಸ್ಥರೊಬ್ಬರಿಗೆ ಸೋಮವಾರ ಸಂಜೆ ಫೋನ್‌ ಮಾಡಿ ಜನ ಶತಾಬ್ಧಿ ರೈಲಿನ ಸಮಯವನ್ನು ವಿಚಾರಿಸಿದ್ದರು. ಹುಬ್ಬಳ್ಳಿಯಿಂದ ಸ್ನೇಹಿತರೊಬ್ಬರು ರೈಲಿನಲ್ಲಿ ಬರುತ್ತಿದ್ದಾರೆ ಎಂದು ಅವರಿಗೆ ತಿಳಿಸಿದ್ದರು ಎಂದು ಆಪ್ತರೊಬ್ಬರು ತಿಳಿಸಿದ್ದಾರೆ.

ವಿಧಾನ ಪರಿಷತ್‌ನಲ್ಲಿ ಈಚೆಗೆ ನಡೆದ ಘಟನೆಯಿಂದ ಧರ್ಮೇಗೌಡ ಅವರು ಮನನೊಂದಿದ್ದರು, ಸಹೋದರ ವಿಧಾನ ಪರಿಷತ್‌ ಸದಸ್ಯ ಎಸ್‌.ಎಲ್‌.ಭೋಜೇಗೌಡ ಅವರೊಂದಿಗೆ ಬೇಸರ ಹಂಚಿಕೊಂಡಿದ್ದರು ಎಂದು ಧರ್ಮೇಗೌಡ ಅವರ ಆಪ್ತರೊಬ್ಬರು ಪ್ರಜಾವಾಣಿಗೆ ತಿಳಿಸಿದ್ದರು.

ಇದನ್ನೂ ಓದಿ:  ಉಪಸಭಾಪತಿಯನ್ನು ಎಳೆದಾಡಿದ ಕಾಂಗ್ರೆಸ್-ಬಿಜೆಪಿ ಸದಸ್ಯರು: ವಿಧಾನ ಪರಿಷತ್‌ನಲ್ಲಿ ಭಾರಿ ಗದ್ದಲ

ಇವರಿಗೆ ಸಂತಾಪ ಸೂಚಿಸಿ ಯಡಿಯೂರಪ್ಪನವರು ಟ್ವೀಟ್ ಮಾಡಿದ್ದಾರೆ, “ವಿಧಾನಪರಿಷತ್ ಉಪಸಭಾಪತಿ ಶ್ರೀ ಎಸ್.ಎಲ್.ಧರ್ಮೇಗೌಡರ ನಿಧನದ ಸುದ್ದಿ ದಿಗ್ಭ್ರಮೆ ಮೂಡಿಸಿದೆ. ಇದನ್ನು ನಂಬಲಿಕ್ಕೇ ಸಾಧ್ಯವಾಗುತ್ತಿಲ್ಲ. ಶಾಸಕರಾಗಿ, ಉಪಸಭಾಪತಿಗಳಾಗಿ ಜನಮನ್ನಣೆ ಗಳಿಸಿದ್ದ ಅವರ ದುರಂತ ಅಂತ್ಯ ಅತ್ಯಂತ ದುಃಖವನ್ನುಂಟು ಮಾಡಿದೆ. ಹಿರಿಯ ಅಧಿಕಾರಿಗಳಿಂದ ಘಟನೆಯ ವಿವರ ಪಡೆದುಕೊಳ್ಳುತ್ತಿದ್ದೇನೆ. ಅವರ ಆತ್ಮಕ್ಕೆ ಸದ್ಗತಿಯನ್ನು ಕೋರುತ್ತಾ, ಅವರ ಕುಟುಂಬದವರಿಗೆ ಮತ್ತು ಅಭಿಮಾನಿಗಳಿಗೆ ಈ ನೋವನ್ನು ಭರಿಸುವ ಶಕ್ತಿಯನ್ನು ಭಗವಂತ ನೀಡಲಿ ಎಂದು ಪ್ರಾರ್ಥಿಸುತ್ತೇನೆ. ಓಂ ಶಾಂತಿ” ಎಂದು ಬರೆದುಕೊಂಡಿದ್ದಾರೆ.


ಜೀವ ಅಮೂಲ್ಯವಾಗಿದೆ. ಮಾನಸಿಕ ಒತ್ತಡಗಳಿದ್ದರೆ ಇಲ್ಲಿ ಸಂಪರ್ಕಿಸಿ:

ಬೆಂಗಳೂರು ಸಹಾಯವಾಣಿ – 080-25497777, ಬೆಳಿಗ್ಗೆ 10 ರಿಂದ ಸಂಜೆ 8 ರವರೆಗೆ

ಕರ್ನಾಟಕ ಆರೋಗ್ಯ ಸಹಾಯವಾಣಿ: 104

 


ಇದನ್ನೂ ಓದಿ: ವಿಧಾನ ಪರಿಷತ್‌ ಕೋಲಾಹಲ: ಬಿಜೆಪಿ-ಜೆಡಿಎಸ್‌ನ ‍ಷಡ್ಯಂತ್ರ ಎಂದ ಸಿದ್ದರಾಮಯ್ಯ – ಸರಣಿ ಟ್ವೀಟ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...