Homeಕರ್ನಾಟಕಶಾಸಕರು ಅಂದರೆ ಖರೀದಿ ವಸ್ತುಗಳು ಎಂದರ್ಥ : ದೇವನೂರು ಮಹಾದೇವ

ಶಾಸಕರು ಅಂದರೆ ಖರೀದಿ ವಸ್ತುಗಳು ಎಂದರ್ಥ : ದೇವನೂರು ಮಹಾದೇವ

ಈ ಕುಬ್ಜ ರಾಜಕಾರಣಿಗಳು ಮತ್ತೆ ಚುನಾವಣೆಗೆ ಸ್ಪರ್ಧಿಸಿ ಮತದಾರರ ಮುಂದೆ ಮತ ಯಾಚಿಸುತ್ತಿದ್ದಾರೆ. ಇದನ್ನು ಧೈರ್ಯ ಅನ್ನಬೇಕೋ, ಭಂಡತನ ಅನ್ನಬೇಕೋ ಅಥವ ನಿರ್ಲಜ್ಜ ಅನ್ನಬೇಕೋ ತಿಳಿಯದಾಗಿದೆ.

- Advertisement -
- Advertisement -

ಇಂದಿನ ಪತ್ರಿಕೆಗಳಲ್ಲಿ ಮಹಾರಾಷ್ಟ್ರ ಮಾಜಿ ಮುಖ್ಯಮಂತ್ರಿ ಪಡ್ನವೀಸ್ ಹೇಳಿಕೆಯೊಂದು ಪ್ರಕಟವಾಗಿದೆ- “ಶಾಸಕರನ್ನು ಖರೀದಿ ಮಾಡದೇ ಇರಲು ಮೊದಲೇ ನಿರ್ಧರಿಸಿದ್ದೆವು. ಎನ್‌ಸಿಪಿ ಬೆಂಬಲ ಪಡೆದು ಸರ್ಕಾರ ರಚಿಸಿದೆವು. ಆಮೇಲೆ ಅಜಿತ್ ಪವಾರ್ ಬೆಂಬಲ ನೀಡಲಿಲ್ಲ. ಪಡ್ನವೀಸ್ ಸರ್ಕಾರ ರಚಿಸಲು ಆಗಲಿಲ್ಲ” ಎಂದಿದೆ. ಇದರ ಅರ್ಥ ಏನೆಂದರೆ ಶಾಸಕರು ಅಂದರೆ ಖರೀದಿ ವಸ್ತುಗಳು ಅಂತ ಎಂದು ದೇವನೂರು ಮಹಾದೇವ ಅಭಿಪ್ರಾಯಪಟ್ಟಿದ್ದಾರೆ.

ಸ್ವರಾಜ್ ಇಂಡಿಯಾ ವತಿಯಿಂದ ಹಮ್ಮಿಕೊಂಡಿದ್ದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು ಇಂಥಹ ಕೃತ್ಯ ಎಸಗುವುದನ್ನು ಅನೈತಿಕ ಎನ್ನುತ್ತಾರೆ, ಮನೆಮುರುಕ ಅಂತಾರೆ. ಇನ್ನೂ ಏನೇನೋ ಅನ್ನುತ್ತಾರೆ. ದೇಶವನ್ನು ಆಳ್ವಿಕೆ ನಡೆಸುತ್ತಿರುವ ಪಕ್ಷವೇ ಇಂದು ಇಂಥಹ ಕೃತ್ಯಗಳನ್ನು ಎಸಗುತ್ತಿದೆ. ಇಂಥವರ ಕೈಗೆ ದೇಶ ಕೊಟ್ಟರೆ ಆ ದೇಶವನ್ನು ದೇವರೂ ಕಾಪಾಡಲಾರನೇನೊ. ಅಂಥ ಪರಿಸ್ಥಿತಿ ಇಂದು ಭಾರತದ ಪ್ರಜೆಗಳಿಗೆ ವಕ್ಕರಿಸಿದೆ ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಇದನ್ನೂ ಓದಿ: ಪೋಲಿ ಕಥೆಗೆ ಬಹುಮಾನ ಬಂದ ಕತೆ: ದೇವನೂರು ಮಹಾದೇವರ ಮಾತಲ್ಲಿ ಕೇಳಿ…

ಈಗ, ಪಡ್ನವೀಸ್ ಮಾತುಗಳನ್ನು ಕರ್ನಾಟಕದ ಹಿನ್ನೆಲೆಯಲ್ಲಿ ನೋಡುವುದಾದರೆ, ಏನರ್ಥ ಬರುತ್ತದೆ? ಕರ್ನಾಟಕದಲ್ಲಿ ಶಾಸಕರನ್ನು ಖರೀದಿ ಮಾಡಿದರು, ಬಿಜೆಪಿ ಸರ್ಕಾರ ಬಂತು ಅಂತ ಅರ್ಥ ತಾನೆ? ಇದು ಪಡ್ನವೀಸ್ ಮಹಾಶಯರಿಗೆ ಚೆನ್ನಾಗಿ ಗೊತ್ತು. ಕರ್ನಾಟಕದ ಶಾಸಕರನ್ನು ಕಾಯ್ದುಕೊಂಡಿದ್ದು ಈತನೇ ತಾನೇ?
ಈಗ ಈ ಬಿಕರಿ ಶಾಸಕರಿಂದಾಗಿ ಕರ್ನಾಟಕದಲ್ಲಿ ಉಪಚುನಾವಣೆ ನಮ್ಮ ಮುಂದಿದೆ. ಈ ಬಿಕರಿ ಶಾಸಕರಿಗೆ, ದ್ರೋಹಿ ಅನ್ನುತ್ತಾರೆ. ನಮಾಕ್ ಹರಾಮ್ ಅನ್ನುತ್ತಾರೆ ನಮ್ಮ ಹಳ್ಳಿ ಕಡೆ ಒಂದು ಬೈಗುಳ ಇದೆ. ಅದು ನನಗೆ ಗೊತ್ತಿಲ್ಲ ಅಂತಲ್ಲ, ಗೊತ್ತಿದೆ. ಆದರೆ ಅದನ್ನು ಹೇಳಲು ಮನಸ್ಸಾಗುತ್ತಿಲ್ಲ ಎಂದರು.

’ಅನರ್ಹರ ಠೇವಣಿ ಹೋಗಲಿ; ಮತದಾರರ ಮಾನ ಉಳಿಯಲಿ’
ಆಯ್ತು, ನಾವೀಗ ಗಂಭೀರವಾಗಿ ಚಿಂತಿಸಬೇಕಾಗಿದೆ. ಯಾಕೆಂದರೆ ಈಗ ಅನರ್ಹ ಶಾಸಕರು ತಮ್ಮನ್ನು ಮಾರಾಟ ಮಾಡಿಕೊಂಡಿದ್ದು ತಮ್ಮೊಬ್ಬರನ್ನೇ ಅಲ್ಲ. ಯಾಕೆಂದರೆ ಇವರು ಶಾಸಕರಾಗಲು ಕಾರಣ ಮತದಾರರ ಮತಗಳು ಕಾರಣ. ಅಂದರೆ ಈ ಹೊಣೆಗೇಡಿಗಳು ನಿಜವಾದ ಅರ್ಥದಲ್ಲಿ ಮಾಡಿದ್ದಾದರೂ ಏನನ್ನು? ಮತದಾರರನ್ನೇ ಮಾರಿಬಿಟ್ಟರು! ರಾಜಕಾರಣ, ಜನತಂತ್ರ ವ್ಯವಸ್ಥೆಯನ್ನೆ ಗಲೀಜು ಮಾಡಿಬಿಟ್ಟರು. ಇದನ್ನು ಗಂಭೀರವಾಗಿ ಚಿಂತಿಸಬೇಕಾಗಿದೆ ಎಂದು ಆತಂಕ ವ್ಯಕ್ತಪಡಿಸಿದ್ದಾರೆ.

ಈಗ ಈ ಕುಬ್ಜ ರಾಜಕಾರಣಿಗಳು ಮತ್ತೆ ಚುನಾವಣೆಗೆ ಸ್ಪರ್ಧಿಸಿ ಮತದಾರರ ಮುಂದೆ ಮತ ಯಾಚಿಸುತ್ತಿದ್ದಾರೆ. ಇದನ್ನು ಧೈರ್ಯ ಅನ್ನಬೇಕೋ, ಭಂಡತನ ಅನ್ನಬೇಕೋ ಅಥವ ನಿರ್ಲಜ್ಜ ಅನ್ನಬೇಕೋ ತಿಳಿಯದಾಗಿದೆ. ಒಟ್ಟಿನಲ್ಲಿ, ರಾಜಕಾರಣಿಗಳಿಗೆ ಚೆಲ್ಲಾಟ, ಪ್ರಜೆಗಳಿಗೆ ಪ್ರಾಣ ಸಂಕಟ ಎಂಬಂತಾಗಿದೆ ಎಂದಿದ್ದಾರೆ.

ಈಗ ಮತದಾರರ ಮುಂದೆ ಉಳಿದಿರುವುದು ಒಂದೇ ದಾರಿ- ಈ ಅನರ್ಹ ಶಾಸಕರಿಗೆ ಠೇವಣಿಯೂ ಸಿಗದಂತೆ ಮಾಡಿ ಮತದಾರರು ತಮ್ಮ ಮಾನ-ಮರ‍್ಯಾದೆ ಕಾಪಾಡಿಕೊಳ್ಳಬೇಕಿದೆ. ಈ ಉಪಚುನಾವಣೆಗೆ ಒಂದೇ ಘೋಷಣೆ- `ಅನರ್ಹರ ಠೇವಣಿ ಹೋಗಲಿ, ಮತದಾರರ ಮಾನ ಉಳಿಯಲಿ’ ಎಂದು ಘೋಷಿಸಿದರು.

ಇದನ್ನೂ ಓದಿ: ಮಾತ್ಮ ಗಾಂಧಿ ಅಂದ್ರ ಏನ್ ಅಂದ್ಕಂಡಿದ್ದೀರಿ? : ‘ಗಾಂಧಿ-150’ ನೆನಪಿನಲ್ಲಿ ದೇವನೂರು ಮಹಾದೇವರವರ ಸಂದರ್ಶನ

ರಾಜ್ಯ ಮುಳುಗಡೆಯಾದರೂ ತಮಗೇನೂ ಸಂಬಂಧವಿಲ್ಲದವರಂತೆ ಜನಪ್ರತಿನಿಧಿಗಳು ಇರುವಾಗ ಹಾಗೂ ಜನತಂತ್ರ ವ್ಯವಸ್ಥೆಯೇ ಬಿಕ್ಕಟ್ಟಿನಲ್ಲಿರುವ ಈ ಸಂದರ್ಭದಲ್ಲಿ ಸ್ವರಾಜ್ ಇಂಡಿಯಾ ಪಕ್ಷವು ಹೊಸ ದಾರಿಗಳಿಗಾಗಿ ಹುಡುಕುತ್ತಿದೆ. ರಾಜ್ಯದಲ್ಲಿ ಮುಂಬರುವ ತಾಲ್ಲೂಕು ಜಿಲ್ಲಾ ಪಂಚಾಯ್ತ್ ಚುನಾವಣೆಯಲ್ಲಿ ನಾಡು ಕಟ್ಟುವ ರಾಜಕಾರಣಕ್ಕೆ ವೇದಿಕೆ ಸಿದ್ಧಪಡಿಸುತ್ತಿದೆ. ‘ಹೊಸ ರಾಜಕಾರಣಕ್ಕೆ ಹೊಸ ಮುಖಗಳು’ ಎಂಬ ಆಲೋಚನೆಯಲ್ಲಿ ಹುಡುಕಾಟ ನಡೆಸಲಿದೆ. ಯುವಕರು, ಮಹಿಳೆಯರಿಗೆ ಆದ್ಯತೆ, ಅಷ್ಟೇ ಅಲ್ಲ, ನಾಡಿನ ಎಲ್ಲಾ ಸಮಾಜಮುಖಿ ಸಂಘಟನೆಗಳನ್ನೂ ಒಳಗೊಂಡು ಹಂಚಿಕೊಂಡು ಹೆಜ್ಜೆ ಹಾಕುವ ಪ್ರಯತ್ನವೂ ನಡೆದಿದೆ. ಈ ನಾಡು ಕಟ್ಟುವ ರಾಜಕಾರಣಕ್ಕೆ ಎಲ್ಲರೂ ಕೈ ಜೋಡಿಸಬೇಕೆಂದು ವಿನಂತಿಸುವೆ ಎಂದು ಮನವಿ ಮಾಡಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪಶ್ಚಿಮ ಬಂಗಾಳ: TMC ಬಂಡಾಯ ನಾಯಕ ರಿತಬ್ರತ ಬ್ಯಾನರ್ಜಿಗೆ ವಿಪಕ್ಷ ಸ್ಥಾನ ನೀಡಿದ್ದಕ್ಕೆ ನ್ಯಾಯಾಧೀಶರ ತೀವ್ರ ಆಕ್ಷೇಪ

ತೃಣಮೂಲ ಕಾಂಗ್ರೆಸ್‌ನ ಬಂಡಾಯ ಬಣದ ಮುಖ್ಯಸ್ಥ ರಿತಬ್ರತ ಬ್ಯಾನರ್ಜಿ ಅವರನ್ನು ಪಶ್ಚಿಮ ಬಂಗಾಳದ ವಿಧಾನಸಭೆಯ ವಿರೋಧ ಪಕ್ಷದ ನಾಯಕರನ್ನಾಗಿ ನೇಮಕ ಮಾಡುವಲ್ಲಿ ಸ್ಪೀಕರ್ ರತೀಂದ್ರ ಬೋಸ್ ತೋರಿರುವ "ತರಾತುರಿ"ಯನ್ನು ಕಲ್ಕತ್ತಾ ಹೈಕೋರ್ಟ್‌ನ ನ್ಯಾಯಮೂರ್ತಿ...

ಎರಡು ವರ್ಷಗಳಲ್ಲಿ 1,679 ಜನರನ್ನು ಬಾಂಗ್ಲಾದೇಶಕ್ಕೆ ಕಳುಹಿಸಲಾಗಿದೆ; ಇವರಲ್ಲಿ 193 ಮಂದಿ ವಿದೇಶಿಯರೆಂದು ಘೋಷಿತರು: ಅಸ್ಸಾಂ ಸರ್ಕಾರ

ಗುವಾಹಟಿ: ಕಳೆದ ಎರಡು ವರ್ಷಗಳ ಅವಧಿಯಲ್ಲಿ ಗಡೀಪಾರು, ಗಡಿಯಿಂದ ಆಚೆಗೆ ತಳ್ಳುವಿಕೆ (ಪುಶ್‌ಬ್ಯಾಕ್) ಅಥವಾ ಉಚ್ಚಾಟನೆ ಪ್ರಕ್ರಿಯೆಯ ಮೂಲಕ ಒಟ್ಟು 1,679 ಜನರನ್ನು ಬಾಂಗ್ಲಾದೇಶಕ್ಕೆ ಕಳುಹಿಸಲಾಗಿದೆ ಎಂದು ಅಸ್ಸಾಂ ಸರ್ಕಾರ ರಾಜ್ಯ ವಿಧಾನಸಭೆಗೆ...

17 ದಿನ, 9 ಕೆಜಿ ತೂಕ ಇಳಿಕೆ, ಸೋನಮ್ ವಾಂಗ್‌ಚುಕ್ ಆರೋಗ್ಯ ಸ್ಥಿತಿ ಗಂಭೀರ: ಉಪವಾಸ ಕೈಬಿಡುವಂತೆ ಅಖಿಲೇಶ್-ಕೇಜ್ರಿವಾಲ್ ಮನವಿ

ದೇಶದ ಶಿಕ್ಷಣ ವ್ಯವಸ್ಥೆಯನ್ನು ಜರ್ಜರಿತಗೊಳಿಸಿರುವ ಸರಣಿ ಪ್ರಶ್ನೆ ಪತ್ರಿಕೆ ಸೋರಿಕೆ ಮತ್ತು ಭ್ರಷ್ಟಾಚಾರವನ್ನು ವಿರೋಧಿಸಿ ಹಾಗೂ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಆಗ್ರಹಿಸಿ ಖ್ಯಾತ ಪರಿಸರ ಕಾರ್ಯಕರ್ತ ಸೋನಮ್...

ಎನ್‌ಸಿಪಿಯ ಎರಡೂ ಬಣಗಳಲ್ಲೂ ಬಿರುಸಿನ ಬೆಳವಣಿಗೆ : ಬಿಜೆಪಿ ತೆಕ್ಕೆಗೆ ಮತ್ತೊಂದು ಪಕ್ಷ?

ನ್ಯಾಷನಲಿಸ್ಟ್ ಕಾಂಗ್ರೆಸ್ ಪಾರ್ಟಿಯ (ಎನ್‌ಸಿಪಿ) ಎರಡೂ ಬಣಗಳ ಮುಖ್ಯ ನಾಯಕರು ಮಂಗಳವಾರ (ಜು.14) ರಾತ್ರಿ ಮಹಾರಾಷ್ಟ್ರ ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ಅವರನ್ನು ಭೇಟಿಯಾಗಿ ಚರ್ಚೆ ನಡೆಸಿದ್ದಾರೆ. ಈ ಸಭೆಯು ಶರದ್ ಪವಾರ್ ಅವರ...

ಮೋದಿಯ ಮೌನವನ್ನು ಪ್ರಶ್ನಿಸುವ ರಾಹುಲ್ ಗಾಂಧಿ, ಸಾರ್ವಜನಿಕ ಹಿತಾಸಕ್ತಿಯ ಈ ವಿಷಯಗಳಲ್ಲಿ ತಾವೇಕೆ ಮೌನ?

ಪ್ರಧಾನಿ ಮೋದಿಯವರದ್ದು ಜಾಣ ಮೌನ ಎಂದು ಈಗಾಗಲೇ ಈ ದೇಶದ ಜನಕ್ಕೆ ಮನವರಿಕೆಯಾಗಿದೆ. ಕಳೆದ 14ವರ್ಷದಲ್ಲಿ ಒಂದೇ ಒಂದು ಪ್ರೆಸ್ ಮೀಟ್‌ಅನ್ನು ಅಡ್ರೆಸ್ ಮಾಡದೆ ಇರುವವರ ಬಗ್ಗೆ ಜನ ಹೆಚ್ಚಿನದ್ದೇನನ್ನು ನಿರೀಕ್ಷಿಸಲಾರರು, ಆದರೆ...

ಹೊಸ ಮತದಾರರ ಫಾರಂ 6ಕ್ಕೆ ಪೋಷಕರ ಎಸ್‌ಐಆರ್ ಕಡ್ಡಾಯಗೊಳಿಸಿದ ಚು. ಆಯೋಗ : ಸಂಪೂರ್ಣ ಕಾನೂನುಬಾಹಿರ ಎಂದ ಸಂಸದ ಜಾನ್ ಬ್ರಿಟ್ಟಾಸ್

ಹೊಸ ಮತದಾರರನ್ನು ನೋಂದಾಯಿಸಲು ಬಳಸುವ ತನ್ನ ಆನ್‌ಲೈನ್ ಅರ್ಜಿಯಲ್ಲಿ ವಿಶೇಷ ತೀವ್ರ ಪರಿಷ್ಕರಣೆಗೆ (ಎಸ್‌ಐಆರ್) ಸಂಬಂಧಿಸಿದ ಹೊಸ ವಿಭಾಗವನ್ನು ಸೇರಿಸುವ ಮೂಲಕ ಚುನಾವಣಾ ಆಯೋಗವು (ಇಸಿ) "ಸಂಪೂರ್ಣವಾಗಿ ಕಾನೂನು ಅಧಿಕಾರವಿಲ್ಲದೆ ಕಾರ್ಯನಿರ್ವಹಿಸಿದೆ" ಎಂದು...

ಮಾನವೀಯತೆ ಮರೆತ ಪಂಚಾಯಿತಿ: 3 ವರ್ಷದ ಮಗುವಿನ ಮೇಲಿನ ಅತ್ಯಾಚಾರ ಪ್ರಕರಣ ಮುಚ್ಚಿಹಾಕಲು 1 ಲಕ್ಷ ರೂ.ದಂಡ, ಆ ಹಣದಲ್ಲೇ ಮದ್ಯದ ಪಾರ್ಟಿ!

ರಾಂಚಿ: ಜಾರ್ಖಂಡ್‌ನ ಗುಮ್ಲಾ ಜಿಲ್ಲೆಯ ಘಾಗ್ರಾ ಪೊಲೀಸ್ ಠಾಣಾ ವ್ಯಾಪ್ತಿಯ ಪಾಲ್ಮಾ ಗ್ರಾಮದಲ್ಲಿ ನಾಗರಿಕ ಸಮಾಜವೇ ತಲೆ ತಗ್ಗಿಸುವಂತಹ ವಿಕೃತ ಘಟನೆಯೊಂದು ಬೆಳಕಿಗೆ ಬಂದಿದೆ. ಮೂರು ವರ್ಷದ ಮಗುವಿನ ಮೇಲೆ ನಡೆದ ಭೀಕರ...

ಪೆಟ್ರೋಲ್ – ಎಥೆನಾಲ್ ಕುರಿತ ಮಾಹಿತಿ ಒದಗಿಸುವಂತೆ ತೈಲ ಸಚಿವಾಲಯಕ್ಕೆ ಕೇಂದ್ರ ಮಾಹಿತಿ ಆಯೋಗ ಆದೇಶ

ಪೆಟ್ರೋಲ್ ಉತ್ಪಾದನೆ ಮತ್ತು ಆಮದು, ಎಥೆನಾಲ್ ಸಂಗ್ರಹಣೆ, ಮಿಶ್ರಣ ಮತ್ತು ಪೆಟ್ರೋಲಿಯಂ ವಲಯದ ಲಾಭದ ಕುರಿತ ಹಿಂದಿನ ಡೇಟಾವನ್ನು ಬಹಿರಂಗಪಡಿಸುವಂತೆ ತೈಲ ಸಚಿವಾಲಯದ ಯೋಜನಾ ವಿಭಾಗವಾದ ಪೆಟ್ರೋಲಿಯಂ ಯೋಜನೆ ಮತ್ತು ವಿಶ್ಲೇಷಣಾ ಕೋಶ...

ಭೋಜಶಾಲಾ-ಕಮಲ್ ಮೌಲಾ ಪ್ರಕರಣ : ಮುಸ್ಲಿಮರ ಮೇಲ್ಮನವಿ ವಿಚಾರಣೆಗೆ ಸುಪ್ರೀಂ ಸಮ್ಮತಿ; ಮಧ್ಯಂತರ ನಮಾಝ್‌ಗೆ ನಿರಾಕರಣೆ

ಮಧ್ಯಪ್ರದೇಶದ ಧಾರ್‌ನಲ್ಲಿರುವ ಐತಿಹಾಸಿಕ ಭೋಜ್‌ಶಾಲಾ-ಕಮಲ್ ಮೌಲಾ ಸಂಕೀರ್ಣವು ಸರಸ್ವತಿ ದೇವಿಗೆ ಸಮರ್ಪಿತವಾದ ದೇವಾಲಯವಾಗಿದೆ ಎಂದು ಘೋಷಿಸಿ, ಅಲ್ಲಿ ನಮಾಝ್ ಮಾಡುವುದನ್ನು ನಿಷೇಧಿಸಿರುವ ಮಧ್ಯಪ್ರದೇಶ ಹೈಕೋರ್ಟ್‌ನ ತೀರ್ಪನ್ನು ಪ್ರಶ್ನಿಸಿ, ವಿವಿಧ ಮುಸ್ಲಿಂ ಸಂಘಟನೆಗಳು ಸಲ್ಲಿಸಿರುವ...

ತೀವ್ರ ಹದಗೆಟ್ಟ ಸೋನಮ್ ವಾಂಗ್ಚುಕ್ ಆರೋಗ್ಯ : ಉಪವಾಸ ಕೈ ಬಿಡುವಂತೆ ವಿಪಕ್ಷ ನಾಯಕರಿಂದ ಮನವಿ

ದೆಹಲಿಯ ಜಂತರ್ ಮಂತರ್‌ನಲ್ಲಿ ಅನಿರ್ದಿಷ್ಟಾವಧಿ ಉಪವಾಸ ಸತ್ಯಾಗ್ರಹ ಕೈಗೊಂಡಿರುವ ಶಿಕ್ಷಣ ತಜ್ಞ ಹಾಗೂ ಪರಿಸರ ಹೋರಾಟಗಾರ ಸೋನಮ್ ವಾಂಗ್ಚುಕ್ ಅವರಿಗೆ ತಮ್ಮ ಪ್ರತಿಭಟನೆಯನ್ನು ಕೊನೆಗೊಳಿಸುವಂತೆ ವಿರೋಧ ಪಕ್ಷಗಳ ನಾಯಕರು ಮಂಗಳವಾರ (ಜು.14) ಮನವಿ...