Homeಮುಖಪುಟನ್ಯಾಯಾಲಯದ ತೀರ್ಪು ಶಾಸಕಾಂಗ ನೇರವಾಗಿ ರದ್ದುಪಡಿಸುವಂತಿಲ್ಲ: ಸಿಜೆಐ ಚಂದ್ರಚೂಡ್

ನ್ಯಾಯಾಲಯದ ತೀರ್ಪು ಶಾಸಕಾಂಗ ನೇರವಾಗಿ ರದ್ದುಪಡಿಸುವಂತಿಲ್ಲ: ಸಿಜೆಐ ಚಂದ್ರಚೂಡ್

- Advertisement -
- Advertisement -

ನ್ಯಾಯಾಲಯದ ತೀರ್ಪನ್ನು ಶಾಸಕಾಂಗ ನೇರವಾಗಿ ತಳ್ಳಿಹಾಕಲು ಅಥವಾ ರದ್ದುಪಡಿಸಲು ಸಾಧ್ಯವಿಲ್ಲ ಎಂದು ಪ್ರತಿಪಾದಿಸಿದ ಭಾರತದ ಮುಖ್ಯ ನ್ಯಾಯಮೂರ್ತಿ ಡಿ ವೈ ಚಂದ್ರಚೂಡ್, ನ್ಯಾಯಾಂಗದ ಆದೇಶದಲ್ಲಿನ ನ್ಯೂನತೆಯನ್ನು ಸರಿಪಡಿಸಲು ಶಾಸಕಾಂಗವು ಹೊಸ ಕಾನೂನನ್ನು ಜಾರಿಗೊಳಿಸುವ ಆಯ್ಕೆಯನ್ನು ಬಳಬಹುದು ಎಂದು ಹೇಳಿದ್ದಾರೆ.

ಹಿಂದೂಸ್ತಾನ್ ಟೈಮ್ಸ್ ಹಮ್ಮಿಕೊಂಡಿದ್ದ ನಾಯಕತ್ವ ಶೃಂಗಸಭೆಯಲ್ಲಿ ಮಾತನಾಡಿದ ಡಿ ವೈ ಚಂದ್ರಚೂಡ್, ತಾವು ನೀಡಿದ ತೀರ್ಪಿನ ಬಗ್ಗೆ ಸಮಾಜ ಹೇಗೆ ಪ್ರತಿಕ್ರಿಯಿಸುತ್ತದೆ ಎಂಬ ಬಗ್ಗೆ ನ್ಯಾಯಮೂರ್ತಿಗಳು ಚಿಂತಿಸುವುದಿಲ್ಲ. ಇದು ಚುನಾಯಿತ ಸರ್ಕಾರ ಹಾಗೂ ನ್ಯಾಯಾಂಗದ ನಡುವೆ ಇರುವ ವ್ಯತ್ಯಾಸವಾಗಿದೆ ಎಂದು ಹೇಳಿದ್ದಾರೆ.

ನ್ಯಾಯಾಲಯದ ತೀರ್ಪಿನ ವಿಚಾರ ಬಂದಾಗ ಶಾಸಕಾಂಗವು ಏನು ಮಾಡಬಹುದು ಮತ್ತು ಶಾಸಕಾಂಗವು ಏನು ಮಾಡಬಾರದು ಎಂಬುದರ ನಡುವೆ ವಿಭಜನಾ ರೇಖೆಯಿದೆ. ನ್ಯಾಯಾಲಯವು ಯಾವುದೇ ಒಂದು ವಿಷಯಕ್ಕೆ ಸಂಬಂಧಿಸಿದಂತೆ ಗುರುತಿಸುವ ನ್ಯೂನತೆಯನ್ನು ಸರಿಪಡಿಸಲು ಮಾತ್ರ ಕಾನೂನು ರೂಪಿಸುವ ಅಧಿಕಾರ ಶಾಸಕಾಂಗಕ್ಕೆ ಇದೆ ಎಂದು ಹೇಳಿದ್ದಾರೆ.

ತೀರ್ಪು ತಪ್ಪಾಗಿದೆ ಎಂದು ಸಮರ್ಥಿಸಿಕೊಂಡು ಅದನ್ನು ನೇರವಾಗಿ ರದ್ದುಪಡಿಸುವ ಅಧಿಕಾರ ಶಾಸಕಾಂಗಕ್ಕೆ ಇಲ್ಲ. ಯಾವುದೇ ಪ್ರಕರಣ ಕುರಿತು ನಿರ್ಣಯ ಕೈಗೊಳ್ಳುವಾಗ ಸಂವಿಧಾನದ ನೀತಿ ನಿಯಮಗಳನ್ನಷ್ಟೇ  ನ್ಯಾಯಮೂರ್ತಿಗಳು ಅನುಸರಿಸುತ್ತಾರೆ. ಸಾರ್ವಜನಿಕ ನೀತಿನಿಯಮಗಳನ್ನು ಪರಿಗಣಿಸುವುದಿಲ್ಲ ಎಂದು ಸ್ಪಷ್ಟಪಡಿಸಿದರು.

ನ್ಯಾಯಾಧೀಶರು ಚುನಾಯಿತರಾಗದಿರುವುದು ನಮ್ಮ ಶಕ್ತಿಯೇ ಹೊರತು ನಮ್ಮ ಕೊರತೆಯಲ್ಲ.
ಭಾರತದ ಸುಪ್ರೀಂಕೋರ್ಟ್ ಜನರ ಕುಂದುಕೊರತೆಗಳನ್ನು ಅರ್ಥಮಾಡಿಕೊಳ್ಳಲು ಉದ್ದೇಶಿಸಿರುವ ಜನರ ನ್ಯಾಯಾಲಯವಾಗಿದೆ ಮತ್ತು ಅದು ಯುನೈಟೆಡ್ ಸ್ಟೇಟ್ಸ್‌ನ ಸುಪ್ರೀಂ ಕೋರ್ಟ್‌ಗಿಂತ ಭಿನ್ನವಾಗಿದೆ ಎಂದು ಚಂದ್ರಚೂಡ್ ಹೇಳಿದ್ದಾರೆ.

ಅಮೇರಿಕನ್ ಸುಪ್ರೀಂಕೋರ್ಟ್ ಒಂದು ವರ್ಷದಲ್ಲಿ ನಿಗದಿತ ಪ್ರಕರಣಗಳನ್ನು ವಿಲೇವಾರಿ ಮಾಡುತ್ತದೆ.  ನಾವು ಈ ವರ್ಷ ಕನಿಷ್ಠ 72,000 ಪ್ರಕರಣಗಳನ್ನು ವಿಲೇವಾರಿ ಮಾಡಿದ್ದೇವೆ ಮತ್ತು ಇನ್ನೂ ಎರಡು ತಿಂಗಳುಗಳಿವೆ. ಅದು ನಾವು ಮಾಡುವ ಕೆಲಸದಲ್ಲಿ ವ್ಯತ್ಯಾಸವನ್ನು ತೋರಿಸುತ್ತದೆ ಎಂದು ಹೇಳಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಂಗಾಳ SIR : ನ್ಯಾಯಮಂಡಳಿಗಳಿಂದ ಪರಿಹಾರ ಪಡೆದವರು ಕೇವಲ 0.01% ಜನ

ಪಶ್ಚಿಮ ಬಂಗಾಳದಲ್ಲಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಲ್ಲಿ ಉಂಟಾದ ವಿವಾದಗಳನ್ನು ಬಗೆಹರಿಸಲು ಮೇಲ್ಮನವಿ ನ್ಯಾಯಮಂಡಳಿಗಳನ್ನು ಸ್ಥಾಪಿಸಲಾಗಿದೆ. ಎಸ್‌ಐಆರ್ ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಿಂದ ಹೆಸರುಗಳನ್ನು ಕೈಬಿಟ್ಟಿರುವುದರ ಅಥವಾ...

ಪ.ಬಂಗಾಳ ಎಸ್‌ಐಆರ್‌ : ದೇಶ ಕಾದ ಯೋಧನಿಂದ ತೀರ್ಪು ಕೊಟ್ಟ ನ್ಯಾಯಾಧೀಶರವರೆಗೆ.. ಮತ ಹಕ್ಕು ಕಳೆದುಕೊಂಡ ಲಕ್ಷಾಂತರ ಜನರು

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ದೇಶದಲ್ಲಿ ಪ್ರಸ್ತುತ ಚರ್ಚೆಯಲ್ಲಿರುವ ಪ್ರಮುಖ ವಿಚಾರ. ಹಲವು ಗೊಂದಲಗಳ ನಡುವೆ ಮೊದಲ ಹಂತದಲ್ಲಿ ಬಿಹಾರದಲ್ಲಿ ಎಸ್‌ಐಆರ್‌ ಪೂರ್ತಿಗೊಳಿಸಿದ ಚುನಾವಣಾ ಆಯೋಗ, ನಂತರ ಅಲ್ಲಿ ವಿಧಾನಸಭಾ...

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...