Homeಮುಖಪುಟಲೆಸ್ಬಿಯನ್‌ ಜೋಡಿಯ ‘ಕರ್ವಾ ಚೌತ್’ ಜಾಹೀರಾತು! - ಮಿಶ್ರ ಪ್ರತಿಕ್ರಿಯೆ

ಲೆಸ್ಬಿಯನ್‌ ಜೋಡಿಯ ‘ಕರ್ವಾ ಚೌತ್’ ಜಾಹೀರಾತು! – ಮಿಶ್ರ ಪ್ರತಿಕ್ರಿಯೆ

- Advertisement -
- Advertisement -

ನವ ವಿವಾಹಿತ ಲೆಸ್ಬಿಯನ್‌‌ ಜೋಡಿ ತಮ್ಮ ಮೊದಲ ‘ಕರ್ವಾ ಚೌತ್’ ಹಬ್ಬವನ್ನು ಆಚರಿಸುವ ಜಾಹಿರಾತನ್ನು ಡಾಬರ್‌ ಒಡೆತನದ ಖ್ಯಾತ ಸೌಂದರ್ಯ ವರ್ಧಕ ‘ಫೆಮ್ ಸ್ಕಿನ್‌ಕೇರ್‌’ ಸಾಮಾಜಿಕ ಜಾಲತಾಣದಲ್ಲಿ ಅಪ್ಲೋಡ್ ಮಾಡಿದ್ದು, ಈ ವಿಡಿಯೊಗೆ ಸಾಮಾಜಿಕ ಜಾಲತಾಣದಲ್ಲಿ ಮಿಶ್ರ ಪ್ರತಿಕ್ರಿಯೆ ಬಂದಿವೆ.

‘ಕರ್ವಾ ಚೌತ್’ ಉತ್ತರ ಭಾರತ ಮೂಲದ ಹಿಂದೂಗಳು ಆಚರಿಸುವ ಹಬ್ಬವಾಗಿದೆ. ವಿವಾಹಿತ ಮಹಿಳೆಯರು ತಮ್ಮ ಪತಿಯ ದೀರ್ಘ ಆಯಸ್ಸು ಮತ್ತು ಆರೋಗ್ಯಕರ ಜೀವನಕ್ಕಾಗಿ ಪ್ರಾರ್ಥಿಸುತ್ತಾ ಇಡೀ ದಿನ ಉಪವಾಸ ಹಿಡಿದು ಈ ಹಬ್ಬವನ್ನು ಆಚರಿಸುತ್ತಾರೆ. ಉಪವಾಸ ತೊರೆಯುವಾಗ ಚಂದ್ರನನ್ನು ಜರಡಿಯಲ್ಲಿ ನೋಡಿ, ತಕ್ಷಣವೆ ತನ್ನ ಗಂಡನನ್ನು ನೋಡುತ್ತಾರೆ. ಈ ವೇಳೆ ಗಂಡನು ತನ್ನ ಪತ್ನಿಗೆ ನೀರು ಮತ್ತು ಸಿಹಿ ತಿನಿಸಿ ವೃತವನ್ನು ತೊರೆಯುವಂತೆ ಮಾಡುತ್ತಾನೆ.

ಇದನ್ನೂ ಓದಿ: ‘ಸಲಿಂಗ ವಿವಾಹ ಮೂಲಭೂತ ಹಕ್ಕಲ್ಲ’ – ಒಕ್ಕೂಟ ಸರ್ಕಾರ ಹೇಳಿಕೆ

ಈ ಹಬ್ಬವನ್ನೇ ಮುಖ್ಯ ವಿಷಯವನ್ನಾಗಿ ನಿರ್ಮಿಸಿರುವ ‘ಫೆಮ್ ಸ್ಕಿನ್‌ಕ್ರೀಮ್’ನ ಜಾಹಿರಾತಿನಲ್ಲಿ, ಇಬ್ಬರು ಮಹಿಳೆಯರು ತಮ್ಮ ಮೊದಲ ಕರ್ವಾ ಚೌತ್ ಆಚರಣೆಗೆ ತಯಾರಿ ನಡೆಸುತ್ತಾ, ಒಬ್ಬರು ಇನ್ನೊಬ್ಬರ ಮುಖಕ್ಕೆ ಬ್ಲೀಚ್ ಹಾಕುತ್ತಾರೆ. ಅದರ ಸಂಭಾಷಣೆಯಲ್ಲಿ ಅವರು ಹಬ್ಬದ ಮಹತ್ವವನ್ನು ಚರ್ಚಿಸುತ್ತಾರೆ ಮತ್ತು ತಾವು ಯಾಕೆ ಉಪವಾಸ ಆಚರಿಸುತ್ತಿದ್ದೇವೆ ಎಂದು ಹೇಳಿಕೊಳ್ಳುತ್ತಾರೆ.

ಜಾಹಿರಾತಿನ ಕೊನೆಯಲ್ಲಿ ಇಬ್ಬರು ಮಹಿಳೆಯರು ಚಂದ್ರನನ್ನು ಜರಡಿಯಲ್ಲಿ ನೋಡಿಕೊಂಡು, ಅದೇ ಜರಡಿಯಲ್ಲಿ ಒಬ್ಬರಿಗೊಬ್ಬರು ಮುಖವನ್ನು ನೋಡುತ್ತಾರೆ. ನಂತರ ತಮ್ಮ ಉಪವಾಸವನ್ನು ತೊರೆಯಲು ಪರಸ್ಪರ ನೀರನ್ನು ಕುಡಿಸುತ್ತಾರೆ. ಈ ಮೂಲಕ ಕರ್ವಾ ಚೌತ್ ಉಪವಾಸ ಮುರಿದು ಹಬ್ಬವನ್ನು ಆಚರಿಸಿಕೊಳ್ಳುತ್ತಾರೆ.

‘ಗ್ಲೋ ವಿಥ್ ಪ್ರೈಡ್’ ಎಂಬ ಹ್ಯಾಶ್‌ಟ್ಯಾಗ್‌ನೊಂದಿಗೆ ಕಾಮನಬಿಲ್ಲು ಬಣ್ಣಗಳಲ್ಲಿ ಚಿತ್ರಿಸಲಾದ ಫೆಮ್‌ನ ಲಾಂಛನದೊಂದಿಗೆ ವಿಡಿಯೊ ಮುಕ್ತಾಯಗೊಳ್ಳುತ್ತದೆ. ಕಾಮನಬಿಲ್ಲು ಧ್ವಜವು LGBTQIA+ ಸಾಮಾಜಿಕ ಚಳುವಳಿಯ ಸಂಕೇತವಾಗಿದೆ.

ಇದನ್ನೂ ಓದಿ: ಸಲಿಂಗ ದಂಪತಿಗೆ ರಕ್ಷಣೆ ನೀಡಿ: ಪೊಲೀಸರಿಗೆ ಅಲಹಾಬಾದ್ ಹೈಕೋರ್ಟ್ ಆದೇಶ

ಈ ಜಾಹಿರಾತನ್ನು ಕಂಪೆನಿಯು ಆನ್‌ಲೈನ್‌ನಲ್ಲಿ ಹಂಚಿಕೊಂಡಾಗಿನಿಂದ, ಅದರ ಸಂದೇಶದ ಮೇಲೆ ಮಿಶ್ರ ಪ್ರತಿಕ್ರಿಯೆ ಉಂಟಾಗಿದೆ. ಕೆಲವರು ಬ್ರಾಂಡ್‌ನ ಪ್ರಯತ್ನವನ್ನು ಬೆಂಬಲಿಸಿದರೆ, ಇನ್ನೂ ಕೆಲವರು ಅದನ್ನು ಟೀಕಿಸಿದ್ದಾರೆ.

“ಜಾಹಿರಾತಿನ ಬಗ್ಗೆ ಬಗ್ಗೆ ಮಿಶ್ರ ಭಾವನೆಯಿದೆ. ಸಾಂಪ್ರದಾಯಿಕವಲ್ಲದ ಸಂಬಂಧಗಳನ್ನು ಒಪ್ಪಿಕೊಳ್ಳುವುದು ಒಳ್ಳೆಯದೇ ಆಗಿದೆ. ಆದರೆ ಸ್ತ್ರೀದ್ವೇಷಿ ಸಂಪ್ರದಾಯವನ್ನು ಪ್ರಚಾರ ಮಾಡುವುದು ಮತ್ತು ‘ಬಿಳಿ ಚರ್ಮವೆ ಸುಂದರ ನ್ಯಾಯವೇ’ ಎಂಬ ಸಂದೇಶ ಕೂಡಾ ಇದು ಹರಡುತ್ತದೆ” ಎಂದು ಕೆಲವು ಬಳಕೆದಾರರು ಅಭಿಪ್ರಾಯಪಟ್ಟಿದ್ದಾರೆ.

ಕೆಲವರು, ಸೌಂದರ್ಯ ವರ್ಧಕ ಉತ್ಪನ್ನಗಳು ‘ಅಂತರ್ಗತವಾಗಿ ಜಾತಿವಾದಿ ಮತ್ತು ಜನಾಂಗೀಯ’ ನೀತಿಯನ್ನು ಬೆಳೆಸುತ್ತದೆ. ಇದಕ್ಕೆ LGBTQI+ ದೃಷ್ಟಿಕೋನ ಸೇರಿಸುವುದರಿಂದ ಬದಲಾಗುವುದಿಲ್ಲ ಎಂದು ದೂರಿದ್ದಾರೆ.

ಇದನ್ನೂ ಓದಿ: ಸಲಿಂಗ ವಿವಾಹ: ಕೊಡಗು ಮೂಲದ ಯುವಕನನ್ನು ಬಹಿಷ್ಕರಿಸಿದ ಕೊಡವ ಸಮಾಜ!

ಇದನ್ನೂ ಓದಿ: ಸಲಿಂಗ ವಿವಾಹವನ್ನು ನಮ್ಮ ಕಾನೂನು ಮತ್ತು ಸಮಾಜ ಒಪ್ಪುವುದಿಲ್ಲ: ಕೇಂದ್ರ ಸರ್ಕಾರ

ಇದನ್ನೂ ಓದಿ: ಮಹಿಳೆ ಈ 40 ವಿಷಯಗಳನ್ನು ಹೇಳಿದರೆ ಅದನ್ನು ‘ಗುಡ್‌ ನ್ಯೂಸ್‌’ ಎಂದು ಒಪ್ಪಿಕೊಳ್ಳಿ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಭಾರತದಲ್ಲಿ 12 ಸಾವಿರ ಉದ್ಯೋಗಿಗಳನ್ನು ವಜಾಗೊಳಿಸಿದ ಒರಾಕಲ್ : ಜಾಗತಿಕವಾಗಿ 30 ಸಾವಿರ ಜನರ ಕೆಲಸಕ್ಕೆ ಕುತ್ತು

ಐಟಿ ದೈತ್ಯ ಒರಾಕಲ್ ಜಾಗತಿಕ ಮಟ್ಟದಲ್ಲಿ ಸುಮಾರು 30,000 ಉದ್ಯೋಗಿಗಳನ್ನು ವಜಾಗೊಳಿಸಲು ನಿರ್ಧರಿಸಿದ್ದು, ಇದು ಭಾರತದ ಮೇಲೂ ತೀವ್ರ ಪರಿಣಾಮ ಬೀರಿದೆ. ವರದಿಗಳ ಪ್ರಕಾರ, ಭಾರತವೊಂದರಲ್ಲೇ ಸುಮಾರು 12,000 ಉದ್ಯೋಗಿಗಳನ್ನು ಕೆಲಸದಿಂದ ತೆಗೆದುಹಾಕಲಾಗಿದೆ. ಕಂಪನಿಯು ತನ್ನ ಒಟ್ಟು ಉದ್ಯೋಗಿಳ...

ಗೋವಾ ನೈಟ್‌ಕ್ಲಬ್ ಬೆಂಕಿ ಪ್ರಕರಣ: ಮಾಲೀಕರಾದ ಸೌರಭ್ ಲೂತ್ರಾ, ಗೌರವ್ ಲೂತ್ರಾ ಸಹೋದರರಿಗೆ ಜಾಮೀನು

ಪಣಜಿ: ಕಳೆದ ಡಿಸೆಂಬರ್‌ನಲ್ಲಿ 25 ಜನರ ಸಾವಿಗೆ ಕಾರಣವಾದ ವಿನಾಶಕಾರಿ ಬೆಂಕಿ ಪ್ರಕರಣಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ಬಿರ್ಚ್ ಬೈ ರೋಮಿಯೋ ಲೇನ್ ನೈಟ್‌ಕ್ಲಬ್‌ನ ಮಾಲೀಕರಾದ ಸೌರಭ್ ಲೂತ್ರಾ ಮತ್ತು ಗೌರವ್ ಲೂತ್ರಾ ಅವರಿಗೆ...

ಲೈಂಗಿಕ ದೌರ್ಜನ್ಯ ಆರೋಪ: ಮಲಯಾಳಂ ಚಲನಚಿತ್ರ ನಿರ್ದೇಶಕ ರಂಜಿತ್ ಬಾಲಕೃಷ್ಣನ್ 14 ದಿನಗಳ ನ್ಯಾಯಾಂಗ ಬಂಧನಕ್ಕೆ 

ಕೇರಳ: ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಮಲಯಾಳಂ ನಿರ್ದೇಶಕ ಮತ್ತು ನಿರ್ಮಾಪಕ ರಂಜಿತ್ ಬಾಲಕೃಷ್ಣನ್ ಅವರನ್ನು ಬುಧವಾರ 14 ದಿನಗಳ ನ್ಯಾಯಾಂಗ ಬಂಧನಕ್ಕೆ ಒಳಪಡಿಸಲಾಗಿದೆ. ಪ್ರಸ್ತುತ ಅವರನ್ನು ಎರ್ನಾಕುಲಂ ಸಬ್ ಜೈಲಿನಲ್ಲಿ ಇರಿಸಲಾಗಿದೆ.  ಜನವರಿ...

ಫಾರ್ಮ್–6 ವಿವಾದ : ಕೋಲ್ಕತ್ತಾದ ಚುನಾವಣಾಧಿಕಾರಿ ಕಚೇರಿ ಮುಂದೆ ಟಿಎಂಸಿ -ಬಿಜೆಪಿ ಕಾರ್ಯಕರ್ತರ ನಡುವೆ ಘರ್ಷಣೆ

ಮತದಾರರ ಪಟ್ಟಿಗೆ ಹೊಸದಾಗಿ ಹೆಸರುಗಳನ್ನು ಸೇರಿಸುವ ನಮೂನೆ -6 (ಫಾರ್ಮ್ -6) ವಿಚಾರದಲ್ಲಿ ಕೋಲ್ಕತ್ತಾದ ಮುಖ್ಯ ಚುನಾವಣಾಧಿಕಾರಿ ಕಚೇರಿ ಮುಂದೆ ಮಂಗಳವಾರ (ಮಾ. 31) ತೃಣಮೂಲ ಕಾಂಗ್ರೆಸ್ (ಟಿಎಂಸಿ) ಮತ್ತು ಬಿಜೆಪಿ ಕಾರ್ಯಕರ್ತರ...

‘ಶೀಘ್ರದಲ್ಲೇ ಹೊರಡುತ್ತೇನೆ’: ‘2-3 ವಾರಗಳಲ್ಲಿ’ ಇರಾನ್ ಮೇಲಿನ ಯುದ್ಧ ಕೊನೆಗೊಳಿಸುವ ಬಗ್ಗೆ ಸುಳಿವು ನೀಡಿದ ಅಮೆರಿಕ ಅಧ್ಯಕ್ಷ ಟ್ರಂಪ್ 

ವಾಷಿಂಗ್ಟನ್ ಡಿಸಿ: ಜಾಗತಿಕ ಇಂಧನ ಮಾರುಕಟ್ಟೆಗಳನ್ನು ಅಸ್ತವ್ಯಸ್ತಗೊಳಿಸಿರುವ ಒಂದು ತಿಂಗಳ ಕಾಲ ನಡೆದ ಯುದ್ಧದ ಸಂಭಾವ್ಯ ಅಂತ್ಯದ ಬಗ್ಗೆ ಸುಳಿವು ನೀಡುವ ಮೂಲಕ, ಮುಂದಿನ ಎರಡು ಮೂರು ವಾರಗಳ ಮೊದಲೇ ಇರಾನ್ ವಿರುದ್ಧದ...

ದೊಡ್ಡಬಳ್ಳಾಪುರದಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ : ಕೆಐಎಡಿಬಿ ವಿರುದ್ಧ ಬೀದಿಗಿಳಿದ ಜನ

ದೇವನಹಳ್ಳಿ ಬಳಿಕ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ ಪ್ರಾರಂಭಗೊಂಡಿದೆ. ಕರ್ನಾಟಕ ಕೈಗಾರಿಕಾ ಪ್ರದೇಶ ಅಭಿವೃದ್ದಿ ಮಂಡಳಿ (ಕೆಐಎಡಿಬಿ) ವಿರುದ್ಧ ಜನರು ಬೀದಿಗಿಳಿದಿದ್ದಾರೆ. ದೊಡ್ಡಬಳ್ಳಾಪುರ ತಾಲೂಕಿನ ದೊಡ್ಡಬೆಳವಂಗಲ...

ಬಿಹಾರ: ಪತಿಯನ್ನು ಹತ್ಯೆ ಮಾಡಿದ ಗುಂಪಿನಿಂದ ಬೆದರಿಕೆ; ಇಬ್ಬರು ಮಕ್ಕಳೊಂದಿಗೆ ವಿಷ ಸೇವಿಸಿದ ಮುಸ್ಲಿಂ ಮಹಿಳೆ ಸಾವು, ಮಕ್ಕಳ ಸ್ಥಿತಿ ಗಂಭೀರ

ಬಿಹಾರದ ರೋಹ್ತಾಸ್ ಜಿಲ್ಲೆಯ ಮುಸ್ಲಿಂ ಮಹಿಳೆಯೊಬ್ಬರು ಮಂಗಳವಾರ ತನ್ನ ಇಬ್ಬರು ಅಪ್ರಾಪ್ತ ಮಕ್ಕಳೊಂದಿಗೆ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ವರದಿಯಾಗಿದೆ.  ಪತಿಯನ್ನು ಅಮಾನುಷವಾಗಿ ಹಲ್ಲೆ ನಡೆಸಿ ಹತ್ಯೆ ಮಾಡಿದ್ದ ಆರೋಪಿಗಳಿಂದ ಬೆದರಿಕೆಗಳನ್ನು ತಾಳಲಾರದೆ...

ಅತ್ಯಾಚಾರ ಆರೋಪ: ಅಶೋಕ್ ಖರತ್ ಅವರ ಪುತ್ರನನ್ನು ವಿಚಾರಣೆಗಾಗಿ ವಶಕ್ಕೆ ಪಡೆದ ಎಸ್ಐಟಿ; ಪತ್ನಿಗಾಗಿ ಹುಡುಕಾಟ 

ನಾಸಿಕ್: ಅತ್ಯಾಚಾರ ಆರೋಪಿ ಸ್ವಯಂ ಘೋಷಿತ ದೇವಮಾನವ ಅಶೋಕ್ ಖರತ್ ವಿರುದ್ಧ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ), ನಾಸಿಕ್ ನಗರದಲ್ಲಿ ಆತನ ಮಗನನ್ನು ವಿಚಾರಣೆಗಾಗಿ ವಶಕ್ಕೆ ಪಡೆದಿದ್ದು, ಆತನ ಪತ್ನಿಗಾಗಿಯೂ...

ಇರಾಕ್‌ : ಬಗ್ದಾದ್‌ನಲ್ಲಿ ಯುಎಸ್‌ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅಪಹರಣ

ಇರಾಕ್‌ ರಾಜಧಾನಿ ಬಗ್ದಾದ್‌ ನಗರದ ಅಲ್-ಸಾದೂನ್ ಬೀದಿಯಲ್ಲಿರುವ ಬಗ್ದಾದ್ ಹೋಟೆಲ್ ಬಳಿ ಅಮೆರಿಕದ ಪ್ರಶಸ್ತಿ ವಿಜೇತ ಸ್ವತಂತ್ರ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅವರನ್ನು ಮಂಗಳವಾರ (ಮಾ.31, 2026) ಅಪಹರಿಸಲಾಗಿದೆ ಎಂದು ವರದಿಯಾಗಿದೆ. ಸಿಸಿಟಿವಿ ದೃಶ್ಯಾವಳಿಗಳ ಪ್ರಕಾರ,...

ವಾಣಿಜ್ಯ ಎಲ್‌ಪಿಜಿ ದರ 195.50 ರೂ. ಏರಿಕೆ : ಜನ ಸಾಮಾನ್ಯರಿಗೆ ಗಾಯದ ಮೇಲೆ ಬರೆ

ಪಶ್ಚಿಮ ಏಷ್ಯಾ ಸಂಘರ್ಷದಿಂದಾಗಿ ಜಾಗತಿಕ ತೈಲ ಬೆಲೆಗಳು ಏರುತ್ತಿರುವ ನಡುವೆ, ವಾಣಿಜ್ಯ ಎಲ್‌ಪಿಜಿ ದರವನ್ನು ಬುಧವಾರ (ಏ.1) 195.50 ರೂ. ಹೆಚ್ಚಿಸಲಾಗಿದೆ. ಸರ್ಕಾರಿ ಸ್ವಾಮ್ಯದ ತೈಲ ಕಂಪನಿಗಳ ಪ್ರಕಾರ, ಬೆಲೆ ಏರಿಕೆ ಬಳಿಕ...