Homeಕರ್ನಾಟಕ7ನೇ ತರಗತಿ ಮಕ್ಕಳಿಗೆ ನಟಿ ತಮನ್ನಾ ಕುರಿತ ಪಾಠ : ಪೋಷಕರಿಂದ ವಿರೋಧ

7ನೇ ತರಗತಿ ಮಕ್ಕಳಿಗೆ ನಟಿ ತಮನ್ನಾ ಕುರಿತ ಪಾಠ : ಪೋಷಕರಿಂದ ವಿರೋಧ

- Advertisement -
- Advertisement -

ಬಹುಭಾಷಾ ನಟಿ ತಮನ್ನಾ ಭಾಟಿಯಾ ಕುರಿತ ಪಠ್ಯ ಅಳವಡಿಸಿಕೊಂಡಿರುವ ಬೆಂಗಳೂರಿನ ಹೆಬ್ಬಾಳದ ಸಿಂಧಿ ಪ್ರೌಢ ಶಾಲೆಯ ವಿರುದ್ದ ಪೋಷಕರು ಅಸಮಧಾನ ವ್ಯಕ್ತಪಡಿಸಿದ್ದು, ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗಕ್ಕೆ ದೂರು ಸಲ್ಲಿಸಿದ್ದಾರೆ.

ಶಾಲೆಯ 7ನೇ ತರಗತಿಯ ಮಕ್ಕಳ ಪಠ್ಯ ಪುಸ್ತಕದಲ್ಲಿ ನಟರಾದ ತಮನ್ನಾ, ರಣವೀರ್ ಸಿಂಗ್ ಸೇರಿದಂತೆ ಪ್ರಮುಖ ಸಿಂಧಿಗಳ ಕುರಿತು ಪಾಠವಿದೆ. ಆದರೆ, ಪೋಷಕರು ತಮನ್ನಾ ಅವರ ವಿಷಯಕ್ಕೆ ಮಾತ್ರ ವಿರೋಧ ವ್ಯಕ್ತಪಡಿಸಿದ್ದಾರೆ ಎಂದು ವರದಿಯಾಗಿದೆ.

ಮಕ್ಕಳು ತಮನ್ನಾ ಕುರಿತ ಪಾಠ ಕೇಳಿದ ನಂತರ ಇಂಟರ್‌ನೆಟ್‌ನಲ್ಲಿ ಆಕೆಯ ಬಗ್ಗೆ ಹೆಚ್ಚಿನ ಮಾಹಿತಿ ಹುಡುಕುತ್ತಾರೆ. ಈ ಮೂಲಕ ಅವರು ವಯಸ್ಸಿಗೆ ಸೂಕ್ತವಲ್ಲದ ವಿಷಯಗಳಿಗೆ ಆಕರ್ಷಿತರಾಗುವ ಅಪಾಯವಿದೆ. ಹಾಗಾಗಿ, ತಮನ್ನಾ ಕುರಿತ ಪಾಠವನ್ನು ಕೈ ಬಿಡಲು ಒತ್ತಾಯಿಸಿದ್ದೇವೆ ಎಂದು ಪೋಷಕರು ದೂರಿನಲ್ಲಿ ತಿಳಿಸಿದ್ದಾರೆ.

7ತರಗತಿಯ ಪಠ್ಯ ಪುಸ್ತಕದಲ್ಲಿನ ಪಾಠವು 1947ರಿಂದ 1962ರ ಅವಧಿಯಲ್ಲಿ ನಡೆದ ಸಿಂಧ್ ವಿಭಜನೆ, ಆ ನಂತರದ ಜನರ ಜೀವನ, ವಲಸೆ, ಸಮುದಾಯ ಮತ್ತು ಕಲಹಗಳ ವಿಷಯಗಳನ್ನು ಒಳಗೊಂಡಿದೆ. ಸಿಂಧ್ ಭಾಷಾ ಅಲ್ಪ ಸಂಖ್ಯಾತ ಸಮುದಾಯದ ಸಂಸ್ಕೃತಿಯನ್ನು ವಿದ್ಯಾರ್ಥಿಗಳಿಗೆ ಪರಿಚಯಿಸಲು ಇಂತಹ ಪಾಠವನ್ನು ಅಳವಡಿಸಿಕೊಳ್ಳಲಾಗಿದೆ ಎಂದು ಶಾಲೆಯ ಆಡಳಿತ ಮಂಡಳಿ ತಿಳಿಸಿರುವುದಾಗಿ ವರದಿಗಳು ಹೇಳಿವೆ.

ಇದನ್ನೂ ಓದಿ : ವಿವಾಹಿತ ಮಹಿಳೆಯರ ನೇಮಕಕ್ಕೆ ನಿರಾಕರಿಸುತ್ತಿರುವ ‘ಫಾಕ್ಸ್‌ಕಾನ್’: ವರದಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಿಜೆಪಿ ನಿಯೋಗದಿಂದ ಕರ್ನಾಟಕ ರಾಜ್ಯಪಾಲರ ಭೇಟಿ: ‘ದ್ವೇಷ ಭಾಷಣ ತಡೆ’ ಮಸೂದೆಗೆ ಒಪ್ಪಿಗೆ ನೀಡದಂತೆ ಮನವಿ

ಬೆಂಗಳೂರು: ದ್ವೇಷ ಭಾಷಣ ಮಸೂದೆಯನ್ನು"ವಾಕ್ ಸ್ವಾತಂತ್ರ್ಯದ ಮೇಲಿನ ನೇರ ದಾಳಿ" ಮತ್ತು "ರಾಜಕೀಯ ಸೇಡಿನ ಸಾಧನ" ಎಂದು ಕರೆದಿರುವ ಬಿಜೆಪಿ ನಾಯಕರ ನಿಯೋಗವು ಸೋಮವಾರ ಕರ್ನಾಟಕ ರಾಜ್ಯಪಾಲ ಥಾವರ್‌ಚಂದ್ ಗೆಹ್ಲೋಟ್ ಅವರನ್ನು ಭೇಟಿ...

ಟೆಕ್ಕಿ ಶರ್ಮಿಳಾ ಕೊಲೆ ಪ್ರಕರಣ : ಪಿಯು ವಿದ್ಯಾರ್ಥಿಯನ್ನು ಬಂಧಿಸಿದ ಪೊಲೀಸರು

ಬೆಂಗಳೂರಿನ ರಾಮಮೂರ್ತಿ ನಗರದ ಸುಬ್ರಹ್ಮಣ್ಯ ಬಡಾವಣೆಯಲ್ಲಿ 2026ರ ಜನವರಿ 3ರಂದು ರಾತ್ರಿ ನಡೆದ ಮಂಗಳೂರು ಮೂಲದ ಸಾಫ್ಟ್‌ವೇರ್ ಇಂಜಿನಿಯರ್ ಶರ್ಮಿಳಾ ಕುಶಾಲಪ್ಪ (34) ಅವರ ಕೊಲೆ ಪ್ರಕರಣವನ್ನು ಪೊಲೀಸರು ಬೇಧಿಸಿದ್ದಾರೆ. ಆರಂಭದಲ್ಲಿ, ಫ್ಲ್ಯಾಟ್‌ಗೆ ಬೆಂಕಿ...

ಎಸ್‌ಎಸ್‌ಎಲ್‌ಸಿ ಪ್ರಶ್ನೆ ಪತ್ರಿಕೆ ಸೋರಿಕೆ: ಸಾಮಾಜಿಕ ಮಾಧ್ಯಮದಲ್ಲಿ 200-500 ರೂ.ಗೆ ಮಾರಾಟ: ಆರು ಶಿಕ್ಷಕರು, ಇಬ್ಬರು ಅಪ್ರಾಪ್ತ ವಿದ್ಯಾರ್ಥಿಗಳ ಬಂಧನ

ಬೆಂಗಳೂರು: ಎಸ್‌ಎಸ್‌ಎಲ್‌ಸಿ ಪೂರ್ವಸಿದ್ಧತಾ ಪರೀಕ್ಷೆಯ ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣದ ತನಿಖೆಯ ಸಂದರ್ಭದಲ್ಲಿ ಆಘಾತಕಾರಿ ಮಾಹಿತಿಗಳು ಹೊರಬಿದ್ದಿವೆ. ವಿದ್ಯಾರ್ಥಿಗಳು ಪ್ರಶ್ನೆಪತ್ರಿಕೆಗಳನ್ನು ಸಾಮಾಜಿಕ ಮಾಧ್ಯಮಗಳಲ್ಲಿ ಬಹಿರಂಗವಾಗಿ ಜಾಹೀರಾತು ಮಾಡಿ ಖಾಸಗಿ ಸಂದೇಶಗಳ ಮೂಲಕ 200 ರಿಂದ...

ಕರೂರ್ ಕಾಲ್ತುಳಿತ : ಸಿಬಿಐ ಮುಂದೆ ವಿಚಾರಣೆಗೆ ಹಾಜರಾದ ನಟ ವಿಜಯ್

ಕರೂರ್ ಕಾಲ್ತುಳಿತ ಘಟನೆಗೆ ಸಂಬಂಧಪಟ್ಟಂತೆ ನಟ ಹಾಗೂ ತಮಿಳಗ ವೆಟ್ರಿ ಕಳಗಂ (ಟಿವಿಕೆ) ಪಕ್ಷದ ಮುಖ್ಯಸ್ಥ ವಿಜಯ್ ಸೋಮವಾರ (ಜ.12) ದೆಹಲಿಯ ಕೇಂದ್ರ ತನಿಖಾ ದಳ (ಸಿಬಿಐ) ಕಚೇರಿಗೆ ವಿಚಾರಣೆಗೆ ಹಾಜರಾಗಿದ್ದಾರೆ. ಚಾರ್ಟರ್ಡ್ ವಿಮಾನದಲ್ಲಿ...

ಜೂನ್‌ ಅಂತ್ಯದೊಳಗೆ ಜಿಬಿಎ ವ್ಯಾಪ್ತಿಯ ಪಾಲಿಕೆಗಳಿಗೆ ಚುನಾವಣೆ : ಗಡುವು ವಿಧಿಸಿದ ಸುಪ್ರೀಂ ಕೋರ್ಟ್

ಗ್ರೇಟರ್ ಬೆಂಗಳೂರು ಪ್ರಾಧಿಕಾರ (ಜಿಬಿಎ) ವ್ಯಾಪ್ತಿಯ ಐದು ನಗರ ಪಾಲಿಕೆಗಳಿಗೆ ಜೂನ್ ಅಂತ್ಯದೊಳಗೆ ಚುನಾವಣೆ ನಡೆಸುವಂತೆ ರಾಜ್ಯ ಸರ್ಕಾರಕ್ಕೆ ಸುಪ್ರೀಂ ಕೋರ್ಟ್ ಸೋಮವಾರ (ಜ.12) ನಿರ್ದೇಶನ ನೀಡಿದೆ. ಮುಖ್ಯ ನ್ಯಾಯಮೂರ್ತಿ ಸೂರ್ಯ ಕಾಂತ್ ಮತ್ತು...

ಐ-ಪ್ಯಾಕ್ ಮೇಲೆ ಇಡಿ ದಾಳಿ: ಸುಪ್ರೀಂ ಕೋರ್ಟ್ ನಲ್ಲಿ ಮಮತಾ ವಿರುದ್ಧ ಎಫ್‌ಐಆರ್ ದಾಖಲಿಸಲು ನಿರ್ದೇಶನ ಕೋರಿ ಅರ್ಜಿ ಸಲ್ಲಿಸಿದ ಇಡಿ

ನವದೆಹಲಿ: ಐ-ಪಿಎಸಿ ವಿರುದ್ಧದ ಬಹು-ರಾಜ್ಯ ಹಣ ವರ್ಗಾವಣೆ ಪ್ರಕರಣದಲ್ಲಿ ತನಿಖೆಗೆ ಅಡ್ಡಿಪಡಿಸಿದ, ಸಾಕ್ಷ್ಯಗಳನ್ನು ತಿರುಚಿದ ಮತ್ತು ನಾಶಪಡಿಸಿದ ಆರೋಪದ ಮೇಲೆ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ, ಡಿಜಿಪಿ ಮತ್ತು ಕೋಲ್ಕತ್ತಾ ಪೊಲೀಸ್...

ಭಾರತಕ್ಕಿಂತ ಯಾವುದೇ ಪಾಲುದಾರ ದೇಶ ಮುಖ್ಯವಲ್ಲ, ವ್ಯಾಪಾರ ಮಾತುಕತೆ ಪುನರಾರಂಭ: ಅಮೆರಿಕ ರಾಯಭಾರಿ ಸೆರ್ಗಿಯೊ ಗೋರ್

"ವಾಷಿಂಗ್ಟನ್‌ಗೆ ಭಾರತಕ್ಕಿಂತ ಅಗತ್ಯವಾದ ದೇಶ ಇನ್ನೊಂದಿಲ್ಲ ಮತ್ತು ಎರಡೂ ಕಡೆಯವರು ವ್ಯಾಪಾರ ಒಪ್ಪಂದವನ್ನು ದೃಢೀಕರಿಸುವಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡಿದ್ದಾರೆ" ಎಂದು ಅಮೆರಿಕದ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್ ಸೋಮವಾರ ಹೇಳಿದ್ದಾರೆ. ಅಮೆರಿಕ ರಾಯಭಾರ ಕಚೇರಿಯ ನೌಕರರು...

ಬಿಷಪ್ ಫ್ರಾಂಕೊ ಮುಲಕ್ಕಲ್ ಅತ್ಯಾಚಾರ ಪ್ರಕರಣ : ಒಂಬತ್ತು ವರ್ಷಗಳ ಬಳಿಕ ಮೌನ ಮುರಿದ ಸಂತ್ರಸ್ತೆ, ಕಾನೂನು ಹೋರಾಟ ಮುಂದುವರಿಸುವುದಾಗಿ ಹೇಳಿಕೆ

ಬಿಷಪ್ ಫ್ರಾಂಕೊ ಮುಲಕ್ಕಲ್ ವಿರುದ್ದದ ಅತ್ಯಾಚಾರ ಪ್ರಕರಣದ ಸಂತ್ರಸ್ತೆ ಕ್ರೈಸ್ತ ಸನ್ಯಾಸಿನಿ ಒಂಬತ್ತು ವರ್ಷಗಳ ನಂತರ ಮೊದಲ ಬಾರಿಗೆ ಸಾರ್ವಜನಿಕವಾಗಿ ಮಾತನಾಡಿದ್ದು, ಫ್ರಾಂಕೊ ಮುಲಕ್ಕಲ್ ಅವರನ್ನು ನ್ಯಾಯಾಲಯ ಖುಲಾಸೆಗೊಳಿಸಿದ್ದಕ್ಕೆ ನಾನು ದಂಗಾಗಿದ್ದೇನೆ. ನ್ಯಾಯಕ್ಕಾಗಿ...

‘ವೆನೆಜುವೆಲಾದ ಹಂಗಾಮಿ ಅಧ್ಯಕ್ಷ’ ಎಂದು ಘೋಷಿಸಿಕೊಂಡ ಡೊನಾಲ್ಡ್ ಟ್ರಂಪ್ 

ಸೋಮವಾರ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಟ್ರುತ್ ಸೋಶಿಯಲ್‌ನಲ್ಲಿ ತಮ್ಮದೇ ಆದ ವಿಕಿಪೀಡಿಯಾ ಪುಟದ ಫೋಟೋವನ್ನು ಪೋಸ್ಟ್ ಮಾಡಿದ್ದಾರೆ, ಅದರಲ್ಲಿ "ವೆನೆಜುವೆಲಾದ ಹಂಗಾಮಿ ಅಧ್ಯಕ್ಷ" ಎಂಬ ಹುದ್ದೆಯನ್ನು ಹೊಂದಿರುವ ಅವರ ಚಿತ್ರವಿದೆ. ಪೋಸ್ಟ್‌ನಲ್ಲಿ ಟ್ರಂಪ್...

ಪೊಲೀಸ್ ತುರ್ತು ವಾಹನದ ಚಾಲಕ ಸೇರಿ ಐವರಿಂದ ಯುವತಿ ಮೇಲೆ ಅತ್ಯಾಚಾರ!

ಪೊಲೀಸ್ ತುರ್ತು ಸೇವೆ (112) ವಾಹನದ ಚಾಲಕ ಸೇರಿದಂತೆ ಐವರು ಪುರುಷರು 19 ವರ್ಷದ ಯುವತಿ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿರುವ ಘಟನೆ ಛತ್ತೀಸ್‌ಗಢದ ಕೋರ್ಬಾ ಜಿಲ್ಲೆಯ ಬಂಕಿಮೊಂಗ್ರ ಪ್ರದೇಶದಲ್ಲಿ ನಡೆದಿದೆ. ಜನವರಿ...