Homeಕರ್ನಾಟಕಬಿಜೆಪಿಯವರು ನನ್ನಷ್ಟು ವರ್ಷ ರಾಜಕಾರಣ ಮಾಡಲಿ ನೋಡೊಣ: ಬಿಜೆಪಿ ವಿರುದ್ದ ಮಲ್ಲಿಕಾರ್ಜುನ ಖರ್ಗೆ ಕಿಡಿ

ಬಿಜೆಪಿಯವರು ನನ್ನಷ್ಟು ವರ್ಷ ರಾಜಕಾರಣ ಮಾಡಲಿ ನೋಡೊಣ: ಬಿಜೆಪಿ ವಿರುದ್ದ ಮಲ್ಲಿಕಾರ್ಜುನ ಖರ್ಗೆ ಕಿಡಿ

- Advertisement -
- Advertisement -

ಬಿಜೆಪಿಯವರು ನನ್ನಷ್ಟು ವರ್ಷ ರಾಜಕಾರಣ ಮಾಡಲಿ ನೋಡೊಣ ಎಂದು ಕರ್ನಾಟಕ ರಾಜ್ಯಸಭಾ ಚುನಾವಣಾ ಫಲಿತಾಂಶ ಹೊರ ಬೀಳುತ್ತಿದ್ದಂತೆ ಕಾಂಗ್ರೆಸ್ ಹಿರಿಯ ನಾಯಕ ಮಲ್ಲಿಕಾರ್ಜುನ ಖರ್ಗೆ ಬಿಜೆಪಿ ನಾಯಕರಿಗೆ ಸವಾಲೆಸೆದಿದ್ದಾರೆ.

ಕಳೆದ ಲೋಕಸಭಾ ಚುನಾವಣೆಯಲ್ಲಿ ಸೋಲನುಭವಿಸಿದ್ದ ಮಲ್ಲಿಕಾರ್ಜುನ ಖರ್ಗೆಯನ್ನು ಹೇಗಾದರೂ ಮಾಡಿ ಮತ್ತೆ ಸಂಸತ್ ಗೆ ಪ್ರವೇಶಿಸುವಂತೆ ಮಾಡಬೇಕು ಎಂದು ನಿರ್ಧರಿಸಿದ್ದ ಕಾಂಗ್ರೆಸ್ ಹೈಕಮಾಂಡ್ ಅವರಿಗೆ ರಾಜ್ಯಸಭೆ ಟಿಕೆಟ್ ನೀಡಿ ಇದೀಗ ಗೆಲ್ಲಿಸಿಕೊಂಡಿದೆ. ಇದನ್ನು ಟೀಕಿಸಿದ್ದ ಬಿಜೆಪಿ ನಾಯಕರು, “ಮಲ್ಲಿಕಾರ್ಜುನ ಖರ್ಗೆ ಹಿಂಬಾಗಿಲಿನ ಮೂಲಕ ರಾಜ್ಯಸಭೆಗೆ ಪ್ರವೇಶಿಸಿದ್ದಾರೆ” ಎಂದು ಆರೋಪಿಸಿದ್ದರು.

ಬಿಜೆಪಿಯ ಟೀಕೆಗೆ ಇಂದು ಉತ್ತರಿಸಿರುವ ಖರ್ಗೆ, ” ನನ್ನಷ್ಟು ವರ್ಷ ವಿಧಾನಸಭೆಗೆ ಆಯ್ಕೆ ಯಾದವರು ಬಿಜೆಪಿಯಲ್ಲಿ ಯಾರಿದ್ದಾರೆ? ಬಿಜೆಪಿಯವರು ನನ್ನಷ್ಟು ವರ್ಷ ರಾಜಕಾರಣ ಮಾಡಲಿ ನೋಡೊಣ. ಅದರಲ್ಲೂ ಅವರ ಪಕ್ಷ ಅವಕಾಶ ನೀಡುತ್ತೊ ಏನೊ ನೊಡೋಣ?” ಎಂದು ಖಡಕ್ ಆಗಿ ಹೇಳಿದ್ದಾರೆ.

ತಮಗೆ ರಾಜ್ಯಸಭೆಗೆ ಸ್ಥಾನ ನೀಡಿದ ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಅವರಿಗೂ ಇದೇ ಸಂದರ್ಭದಲ್ಲಿ ಧನ್ಯವಾದ ಅರ್ಪಿಸಿದ ಮಲ್ಲಿಕಾರ್ಜುನ ಖರ್ಗೆ, “ಸೋನಿಯಾ ಗಾಂಧಿ ಅವರು ನನ್ನ ಮೇಲೆ ಇಟ್ಟಿರುವ ನಂಬಿಕೆಯನ್ನು ನಾನು ಉಳಿಸಿಕೊಳ್ಳುತ್ತೇನೆ. ರಾಜ್ಯದ, ದೇಶದ ಸಮಸ್ಯೆಗಳನ್ನು ಸಮರ್ಥವಾಗಿ ಸಂಸತ್ತಿನಲ್ಲಿ ಪ್ರಸ್ತಾಪಿಸುತ್ತೇನೆ” ಎಂದು ವಿಶ್ವಾಸ ವ್ಯಕ್ತಪಡಿಸಿದ್ದಾರೆ.


ಓದಿ: ಮಲ್ಲಿಕಾರ್ಜುನ ಖರ್ಗೆ ಹಾಗೂ ಪುತ್ರ ಪ್ರಿಯಾಂಕ್ ಖರ್ಗೆಗೆ ಜೀವ ಬೆದರಿಕೆ ಕರೆ!


 

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಮೋದಿ ದ್ವೇಷ ಭಾಷಣದ ಕುರಿತು ಅಭಿಪ್ರಾಯ ವ್ಯಕ್ತಪಡಿಸಿದ ಬಿಜೆಪಿ ಜಿಲ್ಲಾಧ್ಯಕ್ಷ ಪಕ್ಷದಿಂದಲೇ ಉಚ್ಚಾಟನೆ!

0
ಪ್ರಧಾನಿ ನರೇಂದ್ರ ಮೋದಿಯವರು ಮುಸ್ಲಿಮರ ವಿರುದ್ಧ ಮಾಡಿರುವ ದ್ವೇಷ ಭಾಷಣದ ಬಗ್ಗೆ ಮಾಧ್ಯಮವೊಂದರಲ್ಲಿ ತನ್ನ ಅಭಿಪ್ರಾಯ ವ್ಯಕ್ತಪಡಿಸಿದ್ದಕ್ಕೆ ರಾಜಸ್ಥಾನದ ಬಿಕಾನೇರ್ ಬಿಜೆಪಿ ಅಲ್ಪಸಂಖ್ಯಾತ ಮೋರ್ಚಾದ ಜಿಲ್ಲಾಧ್ಯಕ್ಷನನ್ನು ಪಕ್ಷದಿಂದಲೇ ಉಚ್ಚಾಟಿಸಲಾಗಿದೆ. ಈ ವಿಚಾರ ಈಗ...