Homeಮುಖಪುಟದೊರೆಸ್ವಾಮಿಯವರು ತಮ್ಮ ನಾಲಿಗೆ ಬಿಗಿಹಿಡಿದು ಮಾತನಾಡಲಿ: ಯತ್ನಾಳ್‌ ಹೇಳಿಕೆ ಸಮರ್ಥಿಸಿಕೊಂಡ ಸಚಿವ ಸೋಮಣ್ಣ

ದೊರೆಸ್ವಾಮಿಯವರು ತಮ್ಮ ನಾಲಿಗೆ ಬಿಗಿಹಿಡಿದು ಮಾತನಾಡಲಿ: ಯತ್ನಾಳ್‌ ಹೇಳಿಕೆ ಸಮರ್ಥಿಸಿಕೊಂಡ ಸಚಿವ ಸೋಮಣ್ಣ

ವಿಜಯಪುರದಲ್ಲಿ ಇಂದು ಮತ್ತೆ ವಿವಾದಾತ್ಮಕ ಹೇಳಿಕೆ ನೀಡಿರುವ ಬಸನಗೌಡ ಯತ್ನಾಳ್, ಯಾವುದೇ ಕಾರಣಕ್ಕೂ ಕ್ಷಮೆ ಕೇಳುವುದಿಲ್ಲ, ದೇಶ ವಿರೋಧಿಗಳಿಗೆ ಬಿರಿಯಾನಿ ತಿನ್ನಿಸುವ ಕಾಲ ಮುಗೀತು. ಇನ್ನೇನಿದ್ದರೂ ಕಂಡಲ್ಲಿ ಗುಂಡು ಹೊಡೆಯುತ್ತೇವೆ ಎಂದಿದ್ದಾರೆ.

- Advertisement -
- Advertisement -

ಯತ್ನಾಳ್‌ ಏನು ಹೇಳಿದ್ದಾರೋ ಗೊತ್ತಿಲ್ಲ. ಆದರೆ ದೊರೆಸ್ವಾಮಿಯವರು ಸಹ ತಮ್ಮ ನಾಲಿಗೆ ಬಿಗಿಹಿಡಿದು ಮಾತನಾಡಬೇಕು. ಭಾಷೆ ತನ್ನತನವನ್ನು ಎತ್ತಿ ತೋರಿಸುತ್ತದೆ ಎಂದು ಹೇಳುವ ಮೂಲಕ ವಸತಿ ಸಚಿವ ವಿ.ಸೋಮಣ್ಣ ದೊರೆಸ್ವಾಮಿಯವರನ್ನು ಟೀಕಿಸಿದ್ದಾರೆ.

ಕೊಪ್ಪಳದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ದೊರೆಸ್ವಾಮಿಯವರು ನಮ್ಮ ತಾಲ್ಲೂಕಿನವರು, ನಮ್ಮ ಊರಿನವರು. ಆದರೆ ನೂರು ವರ್ಷ ವಯಸ್ಸಾಗಿದೆ. ಇಷ್ಟು ದಿನ ದೇವರು ಇಷ್ಟು ದಿನ ಇರೋಕೆ ಬಿಟ್ಟಿದ್ದಾನೆ. ನಾನು ಈ ದೇಶದಲ್ಲಿ ಇರೋದು. ಈ ಕರ್ಮಭೂಮಿಯಲ್ಲಿ ಒಂದು ದೊಡ್ಡ ಇತಿಹಾಸವಿದೆ ಎಂಬುದನ್ನು ಅವರು ಅರ್ಥ ಮಾಡಿಕೊಳ್ಳವೇ ಬೇಡವೋ ನೀವೆ ಹೇಳಿ ಎಂದು ಅವರು ಪ್ರಶ್ನಿಸಿದ್ದಾರೆ.

ಯತ್ನಾಳ್‌

ದೊರೆಸ್ವಾಮಿಯವರು ನಾಲಿಗೆ ಬಿಗಿಹಿಡಿದು ಮಾತಾಡಲಿ. ಯತ್ನಾಳ್‌ ಹೇಳಿಕೆ ಸಮರ್ಥಿಸಿಕೊಂಡ ವಸತಿ ಸಚಿವ ವಿ.ಸೋಮಣ್ಣ

Posted by Naanu Gauri on Wednesday, February 26, 2020

ನಮಗೂ ಮಾತನಾಡಲ್ಲಿಕ್ಕೆ ಬರುತ್ತದೆ. ಯತ್ನಾಳ್‌ ಭಾವಾವೇಶದಲ್ಲಿ ಮಾತನಾಡಿರಬಹುದು. ಆದರೆ ಅದಕ್ಕೆ ಅವಕಾಶ ಮಾಡಿಕೊಟ್ಟವರು ಯಾರು? ನಾನು ಯಾವುದು ಸರಿ ಯಾವುದು ತಪ್ಪು ಎಂದು ನಾನು ಹೇಳುವುದಿಲ್ಲ. ನನಗೆ ಎಷ್ಟು ಮೈ ಉರಿಯುತ್ತದೆಯೆಂದರೆ, ಒಳ್ಳೇ ಕೆಲಸ ಮಾಡುತ್ತಿರುವವರು ನೂರಾರು ಜನ ಇದ್ದಾರೆ ಅಲ್ಲವೇ? ಎಂದು ಪರೋಕ್ಷವಾಗಿ ದೊರೆಸ್ವಾಮಿ ವಿರುದ್ಧ ಕಿಡಿಕಾರಿದ್ದಾರೆ.

ದೇಶದ್ರೋಹದ ಘೋಷಣೆ ಕೂಗಿದರೆ ಇನ್ನು ಮುಂದೆ ಪೊಲೀಸರು ಬೇಕಿಲ್ಲ. ಜನರೇ ಕೈಗೆ ಬಡಿಗೆಗಳನ್ನು ತೆಗೆದುಕೊಳ್ಳುತ್ತಾರೆ ಎಂದು ಪ್ರಚೋದನೆ ಸಹ ನೀಡಿದ್ದಾರೆ.

ಇನ್ನೊಂದೆಡೆ ವಿಜಯಪುರದಲ್ಲಿ ಇಂದು ಮತ್ತೆ ವಿವಾದಾತ್ಮಕ ಹೇಳಿಕೆ ನೀಡಿರುವ ಬಸನಗೌಡ ಯತ್ನಾಳ್, ಯಾವುದೇ ಕಾರಣಕ್ಕೂ ಕ್ಷಮೆ ಕೇಳುವುದಿಲ್ಲ, ದೇಶ ವಿರೋಧಿಗಳಿಗೆ ಬಿರಿಯಾನಿ ತಿನ್ನಿಸುವ ಕಾಲ ಮುಗೀತು. ಇನ್ನೇನಿದ್ದರೂ ಕಂಡಲ್ಲಿ ಗುಂಡು ಹೊಡೆಯುತ್ತೇವೆ ಎಂದಿದ್ದಾರೆ.

ಕಾಂಗ್ರೆಸ್‌ ನನ್ನ ವಿರುದ್ಧ ಮಾತನಾಡುವ ನೈತಿಕತೆ ಹೊಂದಿಲ್ಲ. ದೇಶದ್ರೋಹಿಗಳ ವಿರುದ್ಧ ಬೇಕಾದರೆ ಹೋರಾಟ ಮಾಡಲಿ ಎಂದು ಯತ್ನಾಳ್‌ ಹೇಳಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ದೆಹಲಿ ಗಲಭೆ ಪ್ರಕರಣದಿಂದ ಒಂಬತ್ತು ಜನರನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದ ಪ್ರಕರಣದಲ್ಲಿ ಒಂಬತ್ತು ಜನರನ್ನು ನ್ಯಾಯಾಲಯವು ಖುಲಾಸೆಗೊಳಿಸಿದೆ. ಸಾಕ್ಷ್ಯಗಳು ನಿರ್ದಿಷ್ಟತೆಯ ಕೊರತೆ ಮತ್ತು ಸಾಮಾನ್ಯ ಸ್ವರೂಪದ್ದಾಗಿರುವುದರಿಂದ ಪ್ರಕರಣದಲ್ಲಿ ಅವುಗಳನ್ನು ನಂಬಲಾಗುವುದಿಲ್ಲ ಎಂ ನ್ಯಾಯಾಲಯ ಹೇಳಿದೆ. ಹೆಚ್ಚುವರಿ ಸೆಷನ್ಸ್ ನ್ಯಾಯಾಧೀಶ...

ಚುನಾವಣಾ ಕಾರ್ಯಕ್ಕೆ ಅರಣ್ಯ ಸಿಬ್ಬಂದಿ : ಅಸ್ಸಾಂ ಸರ್ಕಾರದ ಆದೇಶಕ್ಕೆ ಎನ್‌ಜಿಟಿ ತಡೆ

ವಿಧಾನಸಭೆ ಚುನಾವಣೆಗೆ ಅಸ್ಸಾಂ ಅರಣ್ಯ ಸಂರಕ್ಷಣಾ ಪಡೆಯ 1,600 ಸಿಬ್ಬಂದಿಯನ್ನು ನಿಯೋಜಿಸಲು ಕೋರಿದ್ದ ಅಸ್ಸಾಂ ಸರ್ಕಾರದ ಆದೇಶವನ್ನು ರಾಷ್ಟ್ರೀಯ ಹಸಿರು ನ್ಯಾಯಮಂಡಳಿಯ (ಎನ್‌ಜಿಟಿ) ಪೂರ್ವ ವಲಯ ಪೀಠ ಗುರುವಾರ (ಮಾ.2) ತಡೆಹಿಡಿದಿದೆ. ಈ ಆದೇಶವನ್ನು...

‘ಕರೂರು ದುರಂತದಲ್ಲಿ ಪಿತೂರಿ ಇದೆ’ ಈ ಘಟನೆಯಲ್ಲಿ ನನಗೂ ನ್ಯಾಯ ಬೇಕು: ಟಿವಿಕೆ ಮುಖ್ಯಸ್ಥ ನಟ, ರಾಜಕಾರಣಿ ವಿಜಯ್ ಆರೋಪ  

ಕರೂರಿನಲ್ಲಿ ನಡೆದ ದುರಂತ ಕಾಲ್ತುಳಿತ ಮತ್ತು ಅವರ ಕೊನೆಯ ಚಿತ್ರ ಜನನಾಯಗನ್ ಬಿ ಡುಗಡೆಯ ಹಿಂದೆ ಜಂಟಿ ಕುತಂತ್ರ ಮತ್ತು ಪಿತೂರಿ ಇದೆ ಎಂದು ಟಿವಿಕೆ ಮುಖ್ಯಸ್ಥ ವಿಜಯ್ ಗುರುವಾರ ಆರೋಪಿಸಿದ್ದಾರೆ ಮತ್ತು...

ತೆಲಂಗಾಣ| ಗೋಮಾಂಸ ಮಾರಾಟ ಆರೋಪ; ಮುಸ್ಲಿಂ ಸಮುದಾಯದ ತಂದೆ-ಮಗನ ಮೇಲೆ ಹಲ್ಲೆ

ಹನುಮಾನ್ ಜಯಂತಿ ಸಂದರ್ಭದಲ್ಲಿ ಗೋಮಾಂಸ ಮಾರಾಟ ಮಾಡಿದ ಆರೋಪದ ಮೇಲೆ ಹಿಂದುತ್ವವಾದಿ ಗುಂಪೊಂದು 60 ವರ್ಷದ ಮುಸ್ಲಿಂ ವ್ಯಕ್ತಿ ಮತ್ತು ಆತನ ಹದಿಹರೆಯದ ಮಗನ ಮೇಲೆ ಹಲ್ಲೆ ನಡೆಸಿರುವ ಘಟನೆ ತೆಲಂಗಾಣದ ಜಗ್ತಿಯಾಲ್...

‘ಕೇವಲ ಮುಸ್ಲಿಮರೇ ಶಾಸಕರಾಗಿದ್ದಾರೆ’..ಚುನಾವಣೆ ಗೆಲ್ಲಲು ಧರ್ಮ ಮುಂದಿಟ್ಟ ಗುರುವಾಯೂರು ಬಿಜೆಪಿ ಅಭ್ಯರ್ಥಿ

ಕೇರಳದ ಗುರುವಾಯೂರು ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಬಿ. ಗೋಪಾಲಕೃಷ್ಣನ್ ಚುನಾವಣೆ ಗೆಲ್ಲಲು ಧರ್ಮವನ್ನೇ ಮುಖ್ಯ ಅಸ್ತ್ರವನ್ನಾಗಿ ಬಳಸಿಕೊಂಡಿದ್ದು, ಕಳೆದ 50 ವರ್ಷಗಳಲ್ಲಿ ಕೇವಲ ಮುಸ್ಲಿಮರೇ ಶಾಸಕರಾಗಿದ್ದಾರೆ ಎಂಬುವುದನ್ನು ಪುನರುಚ್ಚರಿಸಿದ್ದಾರೆ. ಚುನಾವಣಾ ಪ್ರಚಾರದ ಭಾಗವಾಗಿ...

ಹೊಸ ಹಿಂದೂ ದೇವಾಲಯಕ್ಕೆ ಭೂಮಿ ಮಂಜೂರು ಮಾಡಿದ ಸಿಂಗಾಪುರ ಆಡಳಿತ

ಸಿಂಗಪುರದಲ್ಲಿ ಹೆಚ್ಚುತ್ತಿರುವ ಹಿಂದೂ ಸಮುದಾಯದ ಅಗತ್ಯಗಳನ್ನು ಪೂರೈಸಲು ಸಿಂಗಾಪುರ ಸರ್ಕಾರವು ನಗರ-ರಾಜ್ಯದ ಯಿಶುನ್ ಅವೆನ್ಯೂ 3 ರಲ್ಲಿ ಹೊಸ ಹಿಂದೂ ದೇವಾಲಯವನ್ನು ನಿರ್ಮಿಸಲು ಭೂಮಿ ಮಂಜೂರು ಮಾಡಿದೆ. ಏಪ್ರಿಲ್ 1 ರ ಬುಧವಾರದ ಮಾಧ್ಯಮ...

ಕೇರಳ ಚುನಾವಣೆಗೆ ಮುನ್ನ ಕಾಂಗ್ರೆಸ್ ನೇತೃತ್ವದ ಯುಡಿಎಫ್ ಗೆ ಬೆಂಬಲ ಘೋಷಿಸಿದ ‘ಅಂಬೇಡ್ಕರ್‌ವಾದಿ ಪ್ರಜಾಸತ್ತಾತ್ಮಕ ರಂಗ’

ಎಡ ಸರ್ಕಾರ ಕೈಗೊಂಡ ಅಭಿವೃದ್ಧಿ ಉಪಕ್ರಮಗಳು ಆದಿವಾಸಿ, ದಲಿತ ಮತ್ತು ಇತರ ಅಂಚಿನಲ್ಲಿರುವ ಸಮುದಾಯಗಳನ್ನು ಬದಿಗಿಟ್ಟಿವೆ ಎಂದು ಆರೋಪಿಸಿ, ಅಂಬೇಡ್ಕರ್‌ವಾದಿ ಪ್ರಜಾಸತ್ತಾತ್ಮಕ ರಂಗ (ಎಡಿಎಫ್) ಬುಧವಾರ ಕಾಂಗ್ರೆಸ್ ನೇತೃತ್ವದ ಯುನೈಟೆಡ್ ಪ್ರಜಾಸತ್ತಾತ್ಮಕ ರಂಗ...

ಐಎಎಸ್‌ ಅಧಿಕಾರಿ ರೋಹಿಣಿ ಸಿಂಧೂರಿ ವಿರುದ್ಧ ತನಿಖೆಗೆ ಪೂರ್ವಾನುಮತಿ ನೀಡಲು ಹೈಕೋರ್ಟ್ ನಿರ್ದೇಶನ

ಪರಿಸರ ಸ್ನೇಹಿ ಬಟ್ಟೆ ಚೀಲಗಳ ಖರೀದಿಯಲ್ಲಿ ನಡೆದಿದೆ ಎನ್ನಲಾದ ಅಕ್ರಮಗಳಿಗೆ ಸಂಬಂಧಿಸಿದಂತೆ, ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ ವಿರುದ್ಧ ಎಫ್‌ಐಆರ್ ದಾಖಲಿಸಲು ಅನುಮತಿಸುವಂತೆ ಹೈಕೋರ್ಟ್ ರಾಜ್ಯ ಸರ್ಕಾರಕ್ಕೆ ನಿರ್ದೇಶನ ನೀಡಿದೆ ಎಂದು ವರದಿಯಾಗಿದೆ....

ನ್ಯಾಯಾಂಗ ಅಧಿಕಾರಿಗಳನ್ನು ರಕ್ಷಿಸುವಲ್ಲಿ ಚುನಾವಣಾ ಆಯೋಗ ವಿಫಲವಾಗಿದೆ: ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳದ ಮಾಲ್ಡಾ ಜಿಲ್ಲೆಯಲ್ಲಿ ಎಸ್‌ಐಆರ್ ಕಾರ್ಯದಲ್ಲಿ ತೊಡಗಿರುವ ನ್ಯಾಯಾಂಗ ಅಧಿಕಾರಿಗಳನ್ನು 'ರಕ್ಷಿಸುವಲ್ಲಿ ಚುನಾವಣಾ ಆಯೋಗ ವಿಫಲವಾಗಿದೆ' ಎಂದು ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ದೂಷಿಸಿದ್ದಾರೆ. ಮತದಾರರ ಪಟ್ಟಿಯಿಂದ ಹೆಸರುಗಳನ್ನು ಅಳಿಸಿಹಾಕಿದ್ದಕ್ಕಾಗಿ ಬುಧವಾರ ಪ್ರತಿಭಟನಾಕಾರರು ಹಲವಾರು...

ಎಎಪಿಯ ರಾಜ್ಯಸಭಾ ಉಪನಾಯಕ ಸ್ಥಾನದಿಂದ ರಾಘವ್ ಚಡ್ಡಾಗೆ ಕೋಕ್, ಅಶೋಕ್ ಮಿತ್ತಲ್ ಗೆ ಅಧಿಕಾರ: ವರದಿ

ಮಹತ್ವದ ಬೆಳವಣಿಗೆಯೊಂದರಲ್ಲಿ, ಆಮ್ ಆದ್ಮಿ ಪಕ್ಷ (ಎಎಪಿ) ರಾಜ್ಯಸಭೆಯಲ್ಲಿ ರಾಘವ್ ಚಡ್ಡಾ ಅವರನ್ನು ಉಪನಾಯಕ ಹುದ್ದೆಯಿಂದ ಬದಲಾಯಿಸಲು ಮುಂದಾಗಿದ್ದು, ಇದು ಪಕ್ಷದೊಳಗಿನ ಆಂತರಿಕ ಬಿರುಕು ಉಂಟಾಗಿರುವ ಲಕ್ಷಣಗಳನ್ನು ಸೂಚಿಸುತ್ತದೆ. ಮೇಲ್ಮನೆಯಲ್ಲಿ ಪಕ್ಷದ ಹೊಸ...