Homeಮುಖಪುಟ'ನಾಚಿಕೆಗೇಡು ಅಂದ್ರೇನು ನಾನು ಹೇಳ್ತೇನೆ': ಅಮೆರಿಕ ವ್ಯಾಪಾರ ಒಪ್ಪಂದ, ಎಪ್‌ಸ್ಟೀನ್ ಫೈಲ್ಸ್ ಉಲ್ಲೇಖಿಸಿ ಮೋದಿ ವಿರುದ್ಧ...

‘ನಾಚಿಕೆಗೇಡು ಅಂದ್ರೇನು ನಾನು ಹೇಳ್ತೇನೆ’: ಅಮೆರಿಕ ವ್ಯಾಪಾರ ಒಪ್ಪಂದ, ಎಪ್‌ಸ್ಟೀನ್ ಫೈಲ್ಸ್ ಉಲ್ಲೇಖಿಸಿ ಮೋದಿ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ

- Advertisement -
- Advertisement -

ಎಐ ಶೃಂಗಸಭೆಯಲ್ಲಿ ಯುವ ಕಾಂಗ್ರೆಸ್‌ ಕಾರ್ಯಕರ್ತರು ಶರ್ಟ್‌ ಬಿಚ್ಚಿ ಪ್ರತಿಭಟಿಸಿದ್ದನ್ನು ‘ಗಲೀಜು, ನಾಚಿಕೆಗೇಡು’ಎಂದಿದ್ದ ಪ್ರಧಾನಿ ನರೇಂದ್ರ ಮೋದಿಯವರಿಗೆ ವಿಪಕ್ಷ ನಾಯಕ ರಾಹುಲ್ ಗಾಂಧಿ ತಿರುಗೇಟು ನೀಡಿದ್ದಾರೆ.

ವಿಡಿಯೋ ಮೂಲಕ ಪ್ರತಿಕ್ರಿಯಿಸಿರುವ ರಾಹುಲ್ ಗಾಂಧಿ, “ಪ್ರಧಾನಿ ಸರಣಿ ರಾಷ್ಟ್ರೀಯ ನಾಚಿಕೆಗೇಡುಗಳ ನೇತೃತ್ವ ವಹಿಸುತ್ತಿದ್ದಾರೆ ಎಂದು ವಾಗ್ದಾಳಿ ನಡೆಸಿದ್ದಾರೆ. ಭಾರತ-ಅಮೆರಿಕ ವ್ಯಾಪಾರ ಒಪ್ಪಂದ, ಎಪ್‌ಸ್ಟೀನ್‌ ಫೈಲ್ಸ್ ವಿಚಾರಗಳನ್ನು ರಾಹುಲ್ ಗಾಂಧಿ ಉಲ್ಲೇಖಿಸಿದ್ದಾರೆ.

“ಮೋದಿಯವರೇ ನೀವು ನಾಚಿಕೆಗೇಡಿನ ಬಗ್ಗೆ ಮಾತನಾಡುತ್ತಿದ್ದೀರಾ? ಹಾಗಾದರೆ, ನಾಚಿಕೆಗೇಡು ಅಂದರೆ ಏನೆಂದು ನಾನು ನಿಮಗೆ ತಿಳಿಸುತ್ತೇನೆ. ನಿಮ್ಮದು, ನಿಮ್ಮ ಸಚಿವರದ್ದು ಮತ್ತು ನಿಮ್ಮ ಸ್ನೇಹಿತರ ಹೆಸರು ಎಪ್‌ಸ್ಟೀನ್‌ ಫೈಲ್ಸ್‌ನಲ್ಲಿ ಒಟ್ಟಿಗೆ ಇದೆ. ನಿಮ್ಮ ಹೆಸರನ್ನು ಅಂತಹ ನೀಚ ಅಪರಾಧಿಯೊಂದಿಗೆ ಕಾಣಿಸಿಕೊಂಡಿದೆ, ಇದೇ ನಾಚಿಕೆಗೇಡು” ಎಂದು ರಾಹುಲ್ ಗಾಂಧಿ ಸಾಮಾಜಿಕ ಜಾಲತಾಣ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ವಿಡಿಯೋದಲ್ಲಿ ಹೇಳಿದ್ದಾರೆ.

ಪ್ರಧಾನಿಯವರು ವ್ಯಾಪಾರ ಒಪ್ಪಂದದ ಮೂಲಕ ದೇಶವನ್ನು ಅಮೆರಿಕಕ್ಕೆ ಮಾರಿದ್ದಾರೆ ಎಂದು ಟೀಕಿಸಿದ ರಾಹುಲ್ ಗಾಂಧಿ, “ನೀವು ಅಮೆರಿಕದೊಂದಿಗೆ ವ್ಯಾಪಾರ ಒಪ್ಪಂದ ಮಾಡಿಕೊಳ್ಳುವ ಮೂಲಕ ದೇಶವನ್ನು ಮಾರಿದ್ದೀರಿ. ನಮ್ಮ ದೇಶದ ಡೇಟಾವನ್ನು ಹಸ್ತಾಂತರಿಸಿದ್ದೀರಿ. ರೈತರನ್ನು ನಾಶಮಾಡಿದ್ದೀರಿ. ಜವಳಿ ಉದ್ಯಮವನ್ನು ಹಾಳುಮಾಡಿದ್ದೀರಿ, ಇದು ನಾಚಿಕೆಗೇಡು” ಎಂದು ಎಂದಿದ್ದಾರೆ.

ಅಮೆರಿಕದಲ್ಲಿ ಗೌತಮ್ ಅದಾನಿ ವಿರುದ್ದ ಪ್ರಕರಣ ದಾಖಲಾಗಿರುವುದನ್ನು ರಾಹುಲ್ ಗಾಂಧಿ ಉಲ್ಲೇಖಿಸಿದ್ದು, ಪ್ರಧಾನಿ ತಮ್ಮ ಸ್ನೇಹಿತರಾದ ಅನಿಲ್ ಅಂಬಾನಿ, ಅದಾನಿ ಪರವಾಗಿದ್ದಾರೆ ಎಂದು ಆರೋಪಿಸಿದ್ದಾರೆ.

“ಅಮೆರಿಕದಲ್ಲಿ ಅದಾನಿ ವಿರುದ್ಧ ನಡೆಯುತ್ತಿರುವ ಪ್ರಕರಣ ನಿಮ್ಮ ನಿದ್ದೆಗೆಡಿಸಿದೆ ಎಂಬುವುದು ಇಡೀ ದೇಶಕ್ಕೆ ಗೊತ್ತು. ಏಕೆಂದರೆ ಅದು ಬಿಜೆಪಿ ಮತ್ತು ನಿಮ್ಮ ಆರ್ಥಿಕ ರಚನೆಯ ವಿರುದ್ಧದ ಪ್ರಕರಣ. 14 ತಿಂಗಳಿನಿಂದ, ಈ ಸಂಬಂಧ ನೀವು ಯಾವುದೇ ಕ್ರಮ ಕೈಗೊಂಡಿಲ್ಲ ಇದು ನಾಚಿಕೆಗೇಡಿನ ಸಂಗತಿ. ಮೋದಿಯವರೇ ನಿಮ್ಮ ಸ್ನೇಹಿತರಾದ ಅನಿಲ್ ಅಂಬಾನಿ, ಅದಾನಿ ಮತ್ತು ನಿಮಗಾಗಿ ಏನು ಬೇಕೋ ಅದನ್ನು ಮಾಡಿ” ಎಂದಿದ್ದಾರೆ.

“ನಾನು ಮತ್ತು ಕಾಂಗ್ರೆಸ್ ಪಕ್ಷದ ಸಿಂಹ ಹೃದಯದ ಯೋಧರು ದೇಶವನ್ನು ರಕ್ಷಿಸುತ್ತಲೇ ಇರುತ್ತೇವೆ. ಈ ವಿಚಾರದಲ್ಲಿ ನಾವು ಒಂದು ಇಂಚು ಕೂಡ ಹಿಂದೆ ಸರಿಯುವುದಿಲ್ಲ” ಎಂದು ರಾಹುಲ್ ಗಾಂಧಿ ಹೇಳಿದ್ದಾರೆ.

ಫೆ.22ರಂದು ದೆಹಲಿ-ಮೀರತ್ ನಮೋ ಭಾರತ್ ರೈಲು ಉದ್ಘಾಟಿಸಿ ಮಾತನಾಡಿದ್ದ ಪ್ರಧಾನಿ ಮೋದಿ, ಎಐ ಶೃಂಗಸಭೆಯಲ್ಲಿ ಶರ್ಟ್‌ ಬಿಚ್ಚಿ ಪ್ರತಿಭಟಿಸಿದ್ದ ಯುವ ಕಾಂಗ್ರೆಸ್‌ ಕಾರ್ಯತರ ವಿರುದ್ದ ವಾಗ್ದಾಳಿ ನಡೆಸಿದ್ದರು. ಕಾಂಗ್ರೆಸ್‌ನಿಂದ ‘ಗಲೀಜು ಮತ್ತು ನಾಚಿಕೆಗೇಡಿನ’ ವರ್ತನೆ ಎಂದಿದ್ದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಭೂ ವಿವಾದದಲ್ಲಿ ಸಹೋದರರ ಹತ್ಯೆ; ಒಂದೇ ಕುಟುಂಬದ 13 ಮಂದಿಗೆ ಜೀವಾವಧಿ ಶಿಕ್ಷೆ

ಭೂ ವಿವಾದಕ್ಕೆ ಸಂಬಂಧಿಸಿದಂತೆ ಸುಮಾರು 10 ವರ್ಷಗಳ ಹಿಂದೆ ಇಬ್ಬರು ಸಹೋದರರನ್ನು ಹತ್ಯೆಗೈದ ಪ್ರಕರಣದಲ್ಲಿ ಒಂದೇ ಕುಟುಂಬದ 13 ಮಂದಿಗೆ ಉತ್ತರ ಪ್ರದೇಶದ ಸಹರಾನ್‌ಪುರದ ಸ್ಥಳೀಯ ನ್ಯಾಯಾಲಯ ಜೀವಾವಧಿ ಶಿಕ್ಷೆ ವಿಧಿಸಿದೆ ಎಂದು...

ಉತ್ತರ ಪ್ರದೇಶ: ಬಜರಂಗದಳ ದೂರಿನ ಮೇರೆಗೆ ಮತಾಂತರ ವಿರೋಧಿ ಕಾನೂನಿನಡಿಯಲ್ಲಿ ಕೇರಳ ಮೂಲದ ಪಾದ್ರಿಯ ಬಂಧನ

ಬಜರಂಗದಳ ಸದಸ್ಯರು ನೀಡಿದ ದೂರಿನ ಮೇರೆಗೆ ಧಾರ್ಮಿಕ ಮತಾಂತರದ ಆರೋಪದ ಮೇಲೆ ಕೇರಳದ ಪಾದ್ರಿಯೊಬ್ಬರನ್ನು ಉತ್ತರ ಪ್ರದೇಶದಲ್ಲಿ ಬಂಧಿಸಲಾಗಿದೆ ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ. ಪೊಲೀಸರ ಪ್ರಕಾರ, ತಿರುವನಂತಪುರಂ ಮೂಲದ ಪಾದ್ರಿ ಜೋಸ್ ಥಾಮಸ್,...

ಜಾರ್ಖಂಡ್ | ಏರ್ ಆಂಬ್ಯುಲೆನ್ಸ್ ಪತನ : ರೋಗಿ, ವೈದ್ಯ ಸೇರಿ 7 ಮಂದಿ ಸಾವು

ರಾಂಚಿಯಿಂದ ದೆಹಲಿಗೆ ತೆರಳುತ್ತಿದ್ದ ಏರ್ ಆಂಬ್ಯುಲೆನ್ಸ್ ಜಾರ್ಖಂಡ್‌ನ ಛಾತ್ರಾ ಜಿಲ್ಲೆಯಲ್ಲಿ ಸೋಮವಾರ (ಫೆ.24) ಪತನಗೊಂಡಿದ್ದು, ಅದರಲ್ಲಿದ್ದ ಎಲ್ಲಾ ಏಳು ಜನರು ಸಾವಿಗೀಡಾಗಿದ್ದಾರೆ ಎಂದು ವರದಿಯಾಗಿದೆ. ರೆಡ್‌ಬರ್ಡ್‌ ಏರ್ವೇಸ್ ಪ್ರೈವೆಟ್ ಲಿಮಿಟೆಡ್ ಎಂಬ ಸಂಸ್ಥೆ ನಿರ್ವಹಣೆ...

ಸಂಪೂರ್ಣ ಒಳಮೀಸಲಾತಿ ಜಾರಿಗೆ ಆಗ್ರಹಿಸಿ ರಾಜ್ಯದ ಎಲ್ಲಾ ಜಿಲ್ಲಾ ಕೇಂದ್ರಗಳಲ್ಲಿ ಬೃಹತ್ ಪ್ರತಿಭಟನೆ

ಈ ವರ್ಷದ ಬಜೆಟ್ ಅಧಿವೇಶನದಲ್ಲಿ ಬಹುಕಾಲದ ಸಂಪೂರ್ಣ ಒಳಮೀಸಲಾತಿ ಜಾರಿಗೆ ಆಗ್ರಹಿಸಿ ಪರಿಶಿಷ್ಟ ಜಾತಿ (ಎಸ್‌ಸಿ) ಎಡಗೈ ಸಂಬಂಧಿತ ಜಾತಿ ಮುಖಂಡರು ರಾಜ್ಯದ ಎಲ್ಲ ಜಿಲ್ಲಾ ಕೇಂದ್ರಗಳಲ್ಲಿ ಮೆರವಣಿಗೆ ನಡೆಸಿ, ಜಿಲ್ಲಾಧಿಕಾರಿಗಳು ಮತ್ತು...

“ಇಲ್ಲಿ 60 ವರ್ಷ ವಾಸಿಸಿದ್ದೆವು, ಒಂದೇ ದಿನದಲ್ಲಿ ನಿರಾಶ್ರಿತರಾದೆವು”: ಅಜಿ ನದಿ ದಡದ ಅಕ್ರಮ ಅತಿಕ್ರಮಣ ತೆರವಿನಲ್ಲಿ ಮನೆ ಕಳೆದುಕೊಂಡವರ ಮಾತು

ಗುಜರಾತ್‌ನ ರಾಜ್‌ಕೋಟ್ ಮುನ್ಸಿಪಲ್ ಕಾರ್ಪೊರೇಷನ್ (ಆರ್‌ಎಂಸಿ) ಜಂಗಲೇಶ್ವರದಲ್ಲಿ ನೂರಾರು ವಸತಿ ರಚನೆಗಳನ್ನು ನೆಲಸಮಗೊಳಿಸಿ ಹಲವಾರು ಕುಟುಂಬಗಳನ್ನು ನಿರಾಶ್ರಿತರನ್ನಾಗಿ ಮಾಡಿರುವ ಅಜಿ ನದಿಯ ದಡದಲ್ಲಿ ಅಕ್ರಮ ಅತಿಕ್ರಮಣಗಳನ್ನು ತೆಗೆದುಹಾಕಲು ದೊಡ್ಡ ಪ್ರಮಾಣದ ನೆಲಸಮ ಕಾರ್ಯಾಚರಣೆಯ...

ಇಂಡಿಯಾ ಬಣದ ಸಂಚಾಲಕರಾಗಲು ಸ್ಟಾಲಿನ್ ಸೂಕ್ತ: ಮಣಿಶಂಕರ್ ಅಯ್ಯರ್

"ಡಿಎಂಕೆ ಮುಖ್ಯಸ್ಥ ಎಂಕೆ ಸ್ಟಾಲಿನ್ ಅವರು ಇಂಡಿಯಾ ಬಣದ ಸಂಚಾಲಕರಾಗಲು ಸೂಕ್ತ" ಎಂದು ಹಿರಿಯ ಕಾಂಗ್ರೆಸ್ ನಾಯಕ ಮಣಿಶಂಕರ್ ಅಯ್ಯರ್ ಪ್ರತಿಪಾದಿಸಿದ್ದಾರೆ. ಮಾಧ್ಯಮಗಳೊಂದಿಗೆ ಮಾತನಾಡಿದ ಅಯ್ಯರ್, ತಮಿಳುನಾಡು ಮುಖ್ಯಮಂತ್ರಿ ಇಂಡಿಯಾ ಬಣದ ಸಂಚಾಲಕರಾಗಲು ಉತ್ತಮ...

ಬೆಂಗಳೂರು: ಮತ್ತು ಬೆರೆಸಿದ ಪಾನೀಯ ನೀಡಿ ಗೆಳೆಯ ಮತ್ತು ಆತನ ಸ್ನೇಹಿತನಿಂದ ಅತ್ಯಾಚಾರ, ಬೆದರಿಕೆ: ಕಾಲೇಜು ವಿದ್ಯಾರ್ಥಿನಿಯಿಂದ ದೂರು

19 ವರ್ಷದ ಖಾಸಗಿ ಕಾಲೇಜು ವಿದ್ಯಾರ್ಥಿನಿಯೊಬ್ಬಳು ತನ್ನ ಗೆಳೆಯ ಮತ್ತು ಅವನ ಸ್ನೇಹಿತನ ವಿರುದ್ಧ ಮಾದಕ ದ್ರವ್ಯ ಸೇವಿಸಿ ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ ಎಂದು ದೂರು ದಾಖಲಿಸಿದ್ದಾಳೆ. ಜಕ್ಕೂರಿನಲ್ಲಿ ಈ ಘಟನೆ ನಡೆದಿದ್ದು, ವಿದ್ಯಾರ್ಥಿನಿಗೆ...

ಮಕ್ಕಳಲ್ಲಿ ಹಿಂಸಾತ್ಮಕ ಪ್ರವೃತ್ತಿ ತಡೆಯಲು ಮೀನು-ಮಾಂಸ ಮಾರಾಟ ನಿಷೇಧ: ಬಿಹಾರ ಉಪಮುಖ್ಯಮಂತ್ರಿ

ಮಕ್ಕಳಲ್ಲಿ 'ಹಿಂಸಾತ್ಮಕ ಪ್ರವೃತ್ತಿ'ಗಳನ್ನು ನಿಲ್ಲಿಸುವ ಪ್ರಯತ್ನದಲ್ಲಿ ಧಾರ್ಮಿಕ ಸ್ಥಳಗಳು, ಶಿಕ್ಷಣ ಸಂಸ್ಥೆಗಳು ಅಥವಾ ಜನದಟ್ಟಣೆಯ ಸ್ಥಳಗಳ ಬಳಿ ಮಾಂಸ ಮತ್ತು ಮೀನು ಮಾರಾಟವನ್ನು ನಿಷೇಧಿಸುವ ನಿರ್ಧಾರವನ್ನು ತೆಗೆದುಕೊಳ್ಳಲಾಗಿದೆ ಎಂದು ಬಿಹಾರ ಉಪಮುಖ್ಯಮಂತ್ರಿ ವಿಜಯ್...

ದೆಹಲಿಯಲ್ಲಿ ಅರುಣಾಚಲದ ಮಹಿಳೆಯರಿಗೆ ಜನಾಂಗೀಯ ನಿಂದನೆ : ಪ್ರಕರಣ ದಾಖಲು

ದೆಹಲಿಯ ಮಾಳವೀಯ ನಗರದಲ್ಲಿ ಅರುಣಾಚಲ ಪ್ರದೇಶದ ಮೂವರು ಮಹಿಳೆಯರಿಗೆ ಜನಾಂಗೀಯ ನಿಂದನೆ ಮಾಡಿ, ಕಿರುಕುಳ ನೀಡಿದ ಆರೋಪ ಕೇಳಿ ಬಂದಿದೆ. ಫೆಬ್ರವರಿ 20 ಎಸಿ ದುರಸ್ತಿ ಸಂದರ್ಭದಲ್ಲಿ ಉಂಟಾದ ಸಣ್ಣ ಜಗಳವೊಂದು ಜನಾಂಗೀಯ ನಿಂದನೆಗೆ...

ಹಿಂದುತ್ವ ಗುಂಪಿನಿಂದ ಮುಸ್ಲಿಂ ವ್ಯಕ್ತಿಯನ್ನು ರಕ್ಷಿಸಿದ್ದ ಜಿಮ್ ಟ್ರೈನರ್ ‘ಮೊಹಮ್ಮದ್ ದೀಪಕ್’ ಅವರನ್ನು ಭೇಟಿಯಾದ ರಾಹುಲ್ ಗಾಂಧಿ 

ನವದೆಹಲಿ: ಕಳೆದ ತಿಂಗಳು ಕೋಟ್ದ್ವಾರದಲ್ಲಿರುವ ಅಹ್ಮದ್ ಅವರ ಬಾಬಾ ಸ್ಕೂಲ್ ಡ್ರೆಸ್ & ಮ್ಯಾಚಿಂಗ್ ಸೆಂಟರ್‌ನ ರಕ್ಷಣೆಗೆ ಬಂದು ಸುದ್ದಿಯಲ್ಲಿದ್ದ ಜಿಮ್ ತರಬೇತುದಾರ ದೀಪಕ್ ಅವರನ್ನು ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್...