Homeಕರ್ನಾಟಕಜನರಿಗೆ ಪಾಠ ಹೇಳುವ ಮೊದಲು ಮೋದಿ ಆತ್ಮಾವಲೋಕನ ಮಾಡಿಕೊಳ್ಳಲಿ: ಸಿದ್ದರಾಮಯ್ಯ

ಜನರಿಗೆ ಪಾಠ ಹೇಳುವ ಮೊದಲು ಮೋದಿ ಆತ್ಮಾವಲೋಕನ ಮಾಡಿಕೊಳ್ಳಲಿ: ಸಿದ್ದರಾಮಯ್ಯ

ಕೊರೊನಾ ಪರಿಹಾರದ ರೂ.20 ಲಕ್ಷ ಕೋಟಿ ಪ್ಯಾಕೇಜ್ ಏನಾಯಿತು? ಯಾರಿಗೆ ಎಷ್ಟು ತಲುಪಿದೆ? ಪಿ.ಎಂ. ಕೇರ್ಸ್ ನಿಧಿಗೆ ಬಂದ ದುಡ್ಡೆಷ್ಟು? ಖರ್ಚಿನ ವಿವರಗಳೇನು?

- Advertisement -
- Advertisement -

ಜನತೆಗೆ ಕರ್ತವ್ಯಪಾಲನೆಯ ಪಾಠ ಮಾಡುವ ಮೊದಲು ಪ್ರಧಾನಿ ನರೇಂದ್ರ ಮೋದಿಯವರು ತನ್ನ ಕರ್ತವ್ಯಪಾಲನೆ ಬಗ್ಗೆ ಆತ್ಮಾವಲೋಕನ ಮಾಡಿಕೊಳ್ಳಬೇಕಾಗಿತ್ತು ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ತಿಳಿಸಿದ್ದಾರೆ.

ಈ ಕುರಿತು ಸರಣಿ ಟ್ವೀಟ್‌ಗಳನ್ನು ಮಾಡಿರುವ ಅವರು, “ಕೊರೊನಾ ಸೋಂಕಿನ ನಿಯಂತ್ರಣ ಮತ್ತು ಅದರಿಂದಾಗಿ ಕಷ್ಟ-ನಷ್ಟಕ್ಕೀಡಾಗಿರುವ ಜನತೆಗೆ ಪರಿಹಾರ ನೀಡಲು ಕೇಂದ್ರ ಸರ್ಕಾರ ಏನು ಮಾಡಿದೆ ಮತ್ತು ಮುಂದಿನ ದಿನಗಳಲ್ಲಿ ಏನು ಮಾಡಲಿದೆ ಎನ್ನುವುದನ್ನು ಮೋದಿಯವರು ಇಂದಿನ ತಮ್ಮ ಭಾಷಣದಲ್ಲಿ ದೇಶದ ಜನತೆಗೆ ತಿಳಿಸಬೇಕಾಗಿತ್ತು” ಎಂದು ಅಭಿಪ್ರಾಯಪಟ್ಟಿದ್ದಾರೆ.

ದೇಶದ ಜನತೆಗೆ ಬುದ್ದಿವಾದ ಹೇಳುವ ಮೂಲಕ ಪ್ರಧಾನಿಯವರು ತನ್ನ ವೈಫಲ್ಯವನ್ನು ಮುಚ್ಚಿಕೊಳ್ಳುವ ಹತಾಶ ಪ್ರಯತ್ನವನ್ನಷ್ಟೇ ಮಾಡಿದ್ದಾರೆ. ಕೊರೊನಾ ಸೋಂಕು ಉಲ್ಬಣಕ್ಕೆ ಜನರ ನಿರ್ಲಕ್ಷಕ್ಕಿಂತಲೂ ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ಹೊಣೆಗೇಡಿತನ ಕಾರಣ ಎನ್ನುವುದನ್ನು ಪ್ರಧಾನಿಯವರು ಒಪ್ಪಿಕೊಂಡು ದೇಶದ ಜನತೆಯಲ್ಲಿ ಕ್ಷಮೆಯಾಚಿಸಬೇಕಾಗಿತ್ತು ಎಂದು ಸಿದ್ದು ಹೇಳಿದ್ದಾರೆ.

ಜಾಗಟೆ ಬಾರಿಸಿ, ದೀಪ ಹಚ್ಚಿ ಕೊರೊನಾ ಎದುರಿಸಲು ಕರೆನೀಡಿದ ಪ್ರಧಾನ ಮಂತ್ರಿಯವರ ಮೂಢತನದ ಭಾಷಣಗಳೇ ಕೊರೊನಾ ಸೋಂಕಿನ ಬಗ್ಗೆ ಜನರ ನಿರ್ಲಕ್ಷಕ್ಕೆ ಮುಖ್ಯ ಕಾರಣ. ರೋಗವನ್ನು ವೈಜ್ಞಾನಿಕವಾಗಿ ಎದುರಿಸಲು ಕರೆನೀಡಬೇಕಾದ ಪ್ರಧಾನಿ, ಟಿವಿ ಜ್ಯೋತಿಷಿಗಳ ರೀತಿಯಲ್ಲಿ ಪ್ರವಚನ ನೀಡಿದರೆ ಜನ ಮೂಢಮತಿಗಳಾಗದೆ ಇನ್ನೇನು ಆಗಲು ಸಾಧ್ಯ ಎಂದು ಪ್ರಶ್ನಿಸಿದ್ದಾರೆ.

ದೇಶದ ಜನತೆಗೆ ಕರ್ತವ್ಯಪಾಲನೆಯ ಪ್ರವಚನ ನೀಡಿದ ಪ್ರಧಾನಿಗಳು ಅದರ ಜೊತೆಗೆ ಕೊರೊನಾ ಪರಿಹಾರದ ರೂ.20 ಲಕ್ಷ ಕೋಟಿ ಪ್ಯಾಕೇಜ್ ಏನಾಯಿತು? ಯಾರಿಗೆ ಎಷ್ಟು ತಲುಪಿದೆ? ಪಿ.ಎಂ. ಕೇರ್ಸ್ ನಿಧಿಗೆ ಬಂದ ದುಡ್ಡೆಷ್ಟು? ಕೊರೊನಾ ನಿಯಂತ್ರಣ ಮತ್ತು ಪರಿಹಾರಕ್ಕಾಗಿ ಆ ನಿಧಿಯಿಂದ ಬಳಕೆಯಾದ ದುಡ್ಡಿನ ಮೊತ್ತವೆಷ್ಟು? ಎಂಬುದನ್ನೂ ತಿಳಿಸಬೇಕಿತ್ತು ಎಂದಿದ್ದಾರೆ.

ಕೊರೊನಾ ಸೋಂಕು ಪ್ರಾರಂಭಗೊಂಡಾಗ ಪ್ರಧಾನಿಯವರು ‘ಪ್ರಧಾನಮಂತ್ರಿ ಗರೀಬ್ ಕಲ್ಯಾಣ ಯೋಜನೆಯನ್ನು ಜೂನ್ ನಲ್ಲಿ ಪ್ರಕಟಿಸಿದ್ದರು. ಅದು ಎಷ್ಟು ಜನರಿಗೆ ತಲುಪಿದೆ? ರಾಜ್ಯದ ಬಿಜೆಪಿ ಸರ್ಕಾರ ಅನ್ನಭಾಗ್ಯದಲ್ಲಿ ನೀಡಲಾಗುತ್ತಿದ್ದ ಅಕ್ಕಿಯನ್ನು 7 ರಿಂದ 5 ಕಿಲೋಗೆ ಇಳಿಸಿದೆ, ಇಂದಿರಾ ಕ್ಯಾಂಟೀನ್ ಗಳನ್ನು ಮುಚ್ಚಲು ಹೊರಟಿದೆ ಎಂದು ಕಿಡಿಕಾರಿದ್ದಾರೆ.

ಮಿತವ್ಯಯ ಪಾಲನೆ ಮಾಡಿ ಲಭ್ಯ ಇರುವ ಸಂಪನ್ಮೂಲವನ್ನು ಕೊರೊನಾ ನಿಯಂತ್ರಣಕ್ಕಾಗಿ ಬಳಸಬೇಕಾದ ರಾಜ್ಯ ಬಿಜೆಪಿ ಸರ್ಕಾರ ಕೊರೊನಾ ಕಾಯಿಲೆಯ ಪರಿಹಾರದ ನೆಪದಲ್ಲಿ ಜನರ ತೆರಿಗೆ ಹಣವನ್ನು ಲೂಟಿ ಮಾಡುತ್ತಿದೆ. ಇದೇನಾದರೂ ಪ್ರಧಾನಿ ಮೋದಿಯವರ ಗಮನಕ್ಕೆ ಬಂದಿದೆಯೇ ಎಂದು ಸಿದ್ದರಾಮಯ್ಯ ಪ್ರಶ್ನಿಸಿದ್ದಾರೆ.


ಇದನ್ನೂ ಓದಿ: ಲಾಕ್‌ಡೌನ್‌ ಮುಗಿದಿದೆ, ಆದರೆ ಕೊರೊನಾ ಮುಗಿದಿಲ್ಲ: ಪ್ರಧಾನಿ ಮೋದಿ ಎಚ್ಚರಿಕೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಉತ್ತರ ಪ್ರದೇಶ : 33 ವರ್ಷಗಳ ಬಳಿಕ ದೇಶದ್ರೋಹ ಪ್ರಕರಣದಿಂದ ಮುಸ್ಲಿಂ ವ್ಯಕ್ತಿ ಖುಲಾಸೆ

ಪ್ರಾಸಿಕ್ಯೂಷನ್ ಆರೋಪಗಳನ್ನು ಸಾಂದರ್ಭಿಕ ಪುರಾವೆಗಳೊಂದಿಗೆ ಸಾಬೀತುಪಡಿಸಲು ವಿಫಲವಾಗಿದೆ ಮತ್ತು ಆರೋಪಿಯನ್ನು ಕೃತ್ಯಕ್ಕೆ ಲಿಂಕ್ ಮಾಡುವ ಪ್ರಮುಖ ಪುರಾವೆಗಳು ಕಾಣೆಯಾಗಿವೆ ಎಂದು ಅಭಿಪ್ರಾಯಪಟ್ಟ ಲಕ್ನೋದ ವಿಶೇಷ ರಾಷ್ಟ್ರೀಯ ತನಿಖಾ ದಳ (ಎನ್ಐಎ) ನ್ಯಾಯಾಲಯ, ದೇಶದ್ರೋಹ...

‘ಊರು ಕೊಳ್ಳೆ ಹೊಡೆದ ಮೇಲೆ ದಿಡ್ಡಿ ಬಾಗಿಲು ಹಾಕಿದರು’ ಎಂಬಂತೆ NTA ಯಿಂದ ₹7.5 ಕೋಟಿಯ ಬೃಹತ್ ಸೆಕ್ಯೂರಿಟಿ ಟೆಂಡರ್

ನೀಟ್ ಪ್ರಶ್ನೆಪತ್ರಿಕೆ ಸೋರಿಕೆಯಾಗಿ, ಅಮಾಯಕ ವಿದ್ಯಾರ್ಥಿಗಳ ಜೀವ-ಭವಿಷ್ಯ ಹಾಳಾದ ಮೇಲೆ, ಊರು ಕೊಳ್ಳೆ ಹೊಡೆದ ಮೇಲೆ ದಿಡ್ಡಿ ಬಾಗಿಲು ಹಾಕಿದರು ಎಂಬಂತೆ ಈಗ ಎನ್‌ಟಿಎ (NTA) ₹7.5 ಕೋಟಿ ವೆಚ್ಚದ ಭದ್ರತಾ ಟೆಂಡರ್...

SIR: ನಮೂನೆಯೂ ಇಲ್ಲ, ನೋಟಿಸ್‌ ಇಲ್ಲ ಸ್ವಂತ ಮನೆಯಲ್ಲಿದ್ದವರ ಹೆಸರನ್ನೇ ಅಳಿಸಿಹಾಕಿದ ಚುನಾವಣಾ ಆಯೋಗ

ರಾಜ್ಯದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಒಂದಾದ ಮೇಲೊಂದರಂತೆ ಆತಂಕಕಾರಿ ಪ್ರಕರಣಗಳು ಬೆಳಕಿಗೆ ಬರುತ್ತಿವೆ. ಮನೆಮನೆಗೆ ತೆರಳಿ ಎನ್ಯುಮರೇಷನ್ ನಮೂನೆ ವಿತರಿಸುವ ಮೊದಲ ಹಂತದ ಪ್ರಕ್ರಿಯೆ...

ಲೈಂಗಿಕ ಕಿರುಕುಳ ಪ್ರಕರಣದಲ್ಲಿ ಅಮಾನತುಗೊಂಡಿದ್ದ ಯುಪಿ ಪೊಲೀಸ್ ಕಾನ್‌ಸ್ಟೇಬಲ್; ಮರುನೇಮಕದ ಬೆನ್ನಲ್ಲೇ ಬಾಲಕಿಯ ಅತ್ಯಾಚಾರ, ಕೊಲೆ!

ಹತ್ತು ವರ್ಷದ ಬಾಲಕಿಯ ಮೇಲೆ ಅತ್ಯಾಚಾರಕ್ಕೆ ಯತ್ನಿಸಿ, ಆಕೆಯ ಸಾವಿಗೆ ಕಾರಣನಾದ ಆರೋಪದ ಮೇಲೆ ಬಂಧಿತನಾದ ಉತ್ತರ ಪ್ರದೇಶದ ಪೊಲೀಸ್ ಕಾನ್‌ಸ್ಟೇಬಲ್ ಅಭಿಷೇಕ್ ಯಾದವ್‌ನನ್ನು ವೈದ್ಯಕೀಯ ತಪಾಸಣೆಗಾಗಿ ಗೋರಖ್‌ಪುರದ ಜಿಲ್ಲಾಸ್ಪತ್ರೆಗೆ ಕರೆತಂದಾಗ, ಅಲ್ಲಿನ...

BJP ವಿರುದ್ಧದ ಆಕ್ರೋಶವೇ Gen-Z ಹೋರಾಟದ ಮೂಲ: ವಿಪಕ್ಷಗಳಿಗೆ ಇದು ದೊಡ್ಡ ಪಾಠ

ಜಂತರ್ ಮಂತರ್‌ನಲ್ಲಿ ನಡೆದ ವಿದ್ಯಾರ್ಥಿಗಳ ಹೋರಾಟವನ್ನು ನಿಮ್ಮ ರಾಜಕೀಯ ದೃಷ್ಟಿಕೋನಕ್ಕೆ ತಕ್ಕಂತೆ ನೀವು ಕ್ರಾಂತಿ ಎಂದಾದರೂ ನೋಡಬಹುದು, ಅಥವಾ ಕ್ಷಣಿಕವಾಗಿ ಎದ್ದ ಬಿರುಗಾಳಿ ಎಂದಾದರೂ ಭಾವಿಸಬಹುದು. ಆದರೆ ಇಲ್ಲಿ ನಿಜವಾಗಿಯೂ ಆಗಿದ್ದೇನು ಮತ್ತು...

ಇನ್‌ಸ್ಟಾಗ್ರಾಮ್‌ನಲ್ಲಿ ಕ್ಷಮಿಸಿದರೆ ಸಾಲದು, ವಿದ್ಯಾರ್ಥಿಗಳ ಮೇಲಿನ ಕೇಸ್ ವಾಪಸ್ ಪಡೆಯಿರಿ: ಪ್ರಧಾನಿಗೆ ದೀಪ್ಕೆ ನೇರ ಪ್ರಶ್ನೆ

ಪ್ರಧಾನಿ ನರೇಂದ್ರ ಮೋದಿ ಅವರು ಇನ್‌ಸ್ಟಾಗ್ರಾಮ್ ವಿಡಿಯೋವೊಂದರಲ್ಲಿ ತಮ್ಮ ವಿರುದ್ಧ ನಿಂದನಾತ್ಮಕ ಪದ ಬಳಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ಕ್ಷಮಿಸಿದ್ದೇನೆ ಎಂದು ಹೇಳಿರುವುದಕ್ಕೆ ಸಿಜೆಪಿ ಸಂಸ್ಥಾಪಕ ಅಭಿಜೀತ್...

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...

ಪ್ರಧಾನಿಗಳೇ ನಿಮ್ಮ ರೀಲ್‌ಗಳನ್ನು ಅಂಧಭಕ್ತರು ಮೆಚ್ಚಬಹುದು, ಆದರೆ ಇತಿಹಾಸ ನಿಮ್ಮನ್ನು ಕ್ಷಮಿಸುವುದಿಲ್ಲ: ಬಿ.ಕೆ. ಹರಿಪ್ರಸಾದ್

ಪ್ರಧಾನಿ ನರೇಂದ್ರ ಮೋದಿ ಬಿಡುಗಡೆ ಮಾಡಿರುವ ಇತ್ತೀಚಿನ ವಿಡಿಯೋ (ರೀಲ್) ಕುರಿತು ಕಾಂಗ್ರೆಸ್ ಹಿರಿಯ ನಾಯಕ ಮತ್ತು ಕೆಪಿಸಿಸಿ ಅಧ್ಯಕ್ಷರಾದ ಬಿ.ಕೆ. ಹರಿಪ್ರಸಾದ್ ತೀವ್ರ ವಾಗ್ದಾಳಿ ನಡೆಸಿದ್ದಾರೆ. ತಾನು ಮಾಡಿದರೆ ರಾಜತಂತ್ರ, ಬೇರೆಯವರು...

ಪ್ರಧಾನಿ ಮೋದಿ ವಿರುದ್ಧ ನಿಂದನೆ: ನನಗೆ ಕೇವಲ 15 ವರ್ಷ ‘ಅನ್ಯರ ಪ್ರಭಾವಕ್ಕೆ ಒಳಗಾಗಿದ್ದೆ’ ಎಂದು ಕ್ಷಮೆ ಕೇಳಿದ ವಿದ್ಯಾರ್ಥಿನಿ ವಿಡಿಯೋ ವೈರಲ್

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿ ಭಾರಿ ಆಕ್ರೋಶಕ್ಕೆ ಗುರಿಯಾಗಿದ್ದ ಸಿಜೆಪಿ (CJP) ಪ್ರತಿಭಟನಾಕಾರ ಯುವತಿಯೊಬ್ಬಳು ಸೋಶಿಯಲ್ ಮೀಡಿಯಾದಲ್ಲಿ ಕ್ಷಮೆಯಾಚಿಸಿದ್ದಾಳೆ ಎನ್ನಲಾದ ವೀಡಿಯೊವೊಂದು ಹರಿದಾಡುತ್ತಿದೆ. ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್...

ಸ್ಪೇನ್‌ಗೆ ನುಗ್ಗಿದ ಸಾವಿರಾರು ಮೊರಾಕನ್ನರು : ಬೃಹತ್ ವಲಸೆಯ ಹಿಂದೆ ಇಸ್ರೇಲ್ ಕುತಂತ್ರ?

ಮೊರಾಕೊದಿಂದ ಸ್ಪೇನ್‌ನ ಸಿಯುಟಾ ನಗರಕ್ಕೆ ಸಾವಿರಾರು ವಲಸಿಗರು ನುಗ್ಗಿದ ಬಿಕ್ಕಟ್ಟಿನ ಹಿಂದೆ ಇಸ್ರೇಲ್ ಕೈವಾಡವಿದೆ ಎಂಬ ಆರೋಪಗಳು ಕೇಳಿ ಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಇಸ್ರೇಲ್‌ನ ಕುತಂತ್ರ ಬುದ್ದಿಯ ಬಗ್ಗೆ ಭಾರೀ ಚರ್ಚೆಗಳು ನಡೆಯುತ್ತಿವೆ. ಇದೇ...