Homeಮುಖಪುಟಮೊದಲು ನಿತೀಶ್ ಕುಮಾರ್ 'ಲವ್ ಜಿಹಾದ್' ಕಾಯ್ದೆ ತರಲಿ, ನಾವು ನಂತರ ಯೋಚಿಸುತ್ತೇವೆ: ಸಂಜಯ್ ರಾವತ್

ಮೊದಲು ನಿತೀಶ್ ಕುಮಾರ್ ‘ಲವ್ ಜಿಹಾದ್’ ಕಾಯ್ದೆ ತರಲಿ, ನಾವು ನಂತರ ಯೋಚಿಸುತ್ತೇವೆ: ಸಂಜಯ್ ರಾವತ್

ಆರ್ಥಿಕ ಕುಸಿತ, ನಿರುದ್ಯೋಗ ಮತ್ತು ಬೆಲೆ ಏರಿಕೆ ಇಂದಿನ ಪ್ರಮುಖ ವಿಷಯಗಳಾಗಿವೆ ಎಂದು ನಾವು ಭಾವಿಸುತ್ತೇವೆ - ಸಂಜಯ್ ರಾವತ್

- Advertisement -
- Advertisement -

ಬಿಹಾರ ಸಿಎಂ ನಿತೀಶ್ ಕುಮಾರ್ ಸರ್ಕಾರ ಮೊದಲು ‘ಲವ್ ಜಿಹಾದ್’ ಕಾಯ್ದೆ ತರಲಿ, ನಂತರ ಮಹಾರಾಷ್ಟ್ರ ಸರ್ಕಾರ ಅದರ ಬಗ್ಗೆ ಅಧ್ಯಯನ ನಡೆಸುತ್ತದೆ ಎಂದು ಶಿವಸೇನೆ ಸಂಸದ ಮತ್ತು ವಕ್ತಾರ ಸಂಜಯ್ ರಾವತ್ ತಿಳಿಸಿದ್ದಾರೆ.

ಮುಂಬೈನಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ‘ರಾಜ್ಯದ ಬಿಜೆಪಿಯ ಕೆಲ ಪ್ರಮುಖ ನಾಯಕರು ರಾಜ್ಯದಲ್ಲಿ ಲವ್ ಜಿಹಾದ್ ಕಾಯ್ದೆ ತರಬೇಕೇಂದು ಮಾತನಾಡುತ್ತಿದ್ದಾರೆ. ಅವರು ತಾವು ಆಳ್ವಿಕೆಯಲ್ಲಿರುವ ಮಧ್ಯಪ್ರದೇಶ ಮತ್ತು ಉತ್ತರ ಪ್ರದೇಶಗಳಲ್ಲಿ ಈ ಕಾಯ್ದೆಯನ್ನು ಜಾರಿಗೊಳಿಸಲಿ. ಎಲ್ಲಕ್ಕಿಂತ ಬಿಹಾರದಲ್ಲಿ ಮೊದಲು ಜಾರಿಗೊಳಿಸಲಿ. ನಂತರ ನಾವು ಅದರ ಬಗ್ಗೆ ಯೋಚಿಸುತ್ತೇವೆ’ ಎಂದಿದ್ದಾರೆ.

ಆರ್ಥಿಕ ಕುಸಿತ, ನಿರುದ್ಯೋಗ ಮತ್ತು ಬೆಲೆ ಏರಿಕೆ ಇಂದಿನ ಪ್ರಮುಖ ವಿಷಯಗಳಾಗಿವೆ ಎಂದು ನಾವು ಭಾವಿಸುತ್ತೇವೆ. ಆದರೆ ಲವ್ ಜಿಹಾದ್ ಸಮಸ್ಯೆಯನ್ನು ಹೆಚ್ಚು ಮುಖ್ಯವೆಂದು ಅವರು ಭಾವಿಸಿದರೆ ಅವುಗಳನ್ನು ಚರ್ಚಿಸುತ್ತೇವೆ ಎಂದು ಸಂಜಯ್ ರಾವತ್ ತಿಳಿಸಿದ್ದಾರೆ.

ಮಹಾರಾಷ್ಟ್ರದ ಮಾಜಿ ಸಿಎಂ ದೇವೇಂದ್ರ ಫಡ್ನವಿಸ್ ಕಳೆದ ವಾರ ರಾಜ್ಯದಲ್ಲಿಯೂ ಲವ್ ಜಿಹಾದ್ ಕಾಯ್ದೆ ತರಬೇಕೆಂದು ಒತ್ತಾಯಿಸಿದ್ದರು. ಮಧ್ಯಪ್ರದೇಶ ಮತ್ತು ಉತ್ತರ ಪ್ರದೇಶದ ಬಿಜೆಪಿ ಸರ್ಕಾರಗಳು ಈ ಕಾಯ್ದೆ ತರುತ್ತೇವೆಂದು ಘೋಷಿಸಿದ್ದಾರೆ. ಹಿಂದೂ ಮಹಿಳೆಯರು ಮುಸ್ಲಿಂ ಪುರುಷರನ್ನು ಪ್ರೀತಿಸಿ ಮದುವೆಯಾಗಿ ಮುಸ್ಲಿಂ ಧರ್ಮಕ್ಕೆ ಮತಾಂತರವಾಗುತ್ತಾರೆ. ಅದನ್ನು ತಡೆಗಟ್ಟಲು ಈ ಕಾನೂನು ಅಗತ್ಯವಿದೆ ಎಂದು ಬಿಜೆಪಿ ವಾದಿಸುತ್ತಿದೆ.

ಆದರೆ ಫೆಬ್ರವರಿ 4 ರಂದು, ಮೋದಿ ಸರ್ಕಾರವು ಸಂಸತ್ತಿನಲ್ಲಿ ಲವ್‌ ಜಿಹಾದ್‌ ವಿಷಯದ ಬಗ್ಗೆ ತನ್ನ ಅಭಿಪ್ರಾಯ ವ್ಯಕ್ತಪಡಿಸಿದೆ. “ಲವ್ ಜಿಹಾದ್ ಎಂಬ ಪದವನ್ನು ಈಗಿರುವ ಯಾವುದೇ ಕಾನೂನುಗಳ ಅಡಿಯಲ್ಲಿ ವ್ಯಾಖ್ಯಾನಿಸಲಾಗಿಲ್ಲ. ಅಲ್ಲದೇ ಇದುವರೆಗೂ ‘ಲವ್ ಜಿಹಾದ್’ ಪ್ರಕರಣವನ್ನು ಯಾವುದೇ ಕೇಂದ್ರ ಏಜೆನ್ಸಿಗಳು ವರದಿ ಮಾಡಿಲ್ಲ” ಎಂದು ಬಿಜೆಪಿ ಮುಖಂಡ ಮತ್ತು ಗೃಹ ವ್ಯವಹಾರಗಳ ಸಚಿವ ಜಿ. ಕಿಶನ್ ರೆಡ್ಡಿ ಲೋಕಸಭೆಗೆ ತಿಳಿಸಿದ್ದಾರೆ.

ಇನ್ನೊಂದೆಡೆ ಕಾಂಗ್ರೆಸ್ ಬಿಜೆಪಿಯ ಈ ಕಾಯ್ದೆಯನ್ನು ತೀವ್ರವಾಗಿ ವಿರೋಧಿಸಿದ್ದಾರೆ. ’ಲವ್ ಜಿಹಾದ್’ ಎಂಬುದು ದೇಶ ಒಡೆಯಲು ಬಿಜೆಪಿ ಸೃಷ್ಟಿಸಿದ ಪದ ಎಂದು ರಾಜಸ್ಥಾನದ ಸಿಎಂ ಅಶೋಕ್ ಗೆಹ್ಲೋಟ್ ವಾದಿಸಿದರೆ, ‘ರಾಜ್ಯದಲ್ಲಿ ಲವ್ ಜಿಹಾದ್ ಕಾನೂನು ತರಲು ಸಾಧ್ಯವಿಲ್ಲ’ ಎಂದು ಕರ್ನಾಟಕದ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ತಿಳಿಸಿದ್ದಾರೆ.


ಇದನ್ನೂ ಓದಿ: ಇದುವರೆಗೂ ಯಾವುದೇ ಲವ್‌ ಜಿಹಾದ್‌ ನಡೆದಿಲ್ಲವೆಂದ ಮೋದಿ ಸರ್ಕಾರ : ಇದು ಬಿಜೆಪಿ V/S ಬಿಜೆಪಿಯ ಕದನ..

 

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

‘ಸಕ್ಕರೆ ಮಟ್ಟ ಹೆಚ್ಚಿಸಿಕೊಳ್ಳಲು ಮಾವಿನಹಣ್ಣು, ಸಿಹಿತಿಂಡಿ ಸೇವಿಸುತ್ತಿರುವ ಕೇಜ್ರಿವಾಲ್..; ಇಡಿ ಆರೋಪ

0
ಮಧುಮೇಹಿಯಾಗಿರುವ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರು ವೈದ್ಯಕೀಯ ಜಾಮೀನು ಪಡೆಯಲು ರಕ್ತದಲ್ಲಿನ ಸಕ್ಕರೆ ಮಟ್ಟವನ್ನು ಹೆಚ್ಚಿಸಲು ಪ್ರತಿದಿನ ಮಾವಿನಹಣ್ಣು, ಆಲೂ ಪುರಿ ಮತ್ತು ಸಿಹಿತಿಂಡಿಗಳನ್ನು ಸೇವಿಸುತ್ತಿದ್ದಾರೆ ಎಂದು ಜಾರಿ ನಿರ್ದೇಶನಾಲಯ ಗುರುವಾರ...