Homeಮುಖಪುಟಬಹುಮತ ಸಾಬೀತು ಮಾಡಲು 15 ದಿನವೇಕೆ, ಒಂದು ತಿಂಗಳನ್ನೇ ತೆಗೆದುಕೊಳ್ಳಲಿ: ಬಿಜೆಪಿಗೆ ಸವಾಲು ಹಾಕಿದ...

ಬಹುಮತ ಸಾಬೀತು ಮಾಡಲು 15 ದಿನವೇಕೆ, ಒಂದು ತಿಂಗಳನ್ನೇ ತೆಗೆದುಕೊಳ್ಳಲಿ: ಬಿಜೆಪಿಗೆ ಸವಾಲು ಹಾಕಿದ ಶಿವಸೇನೆ

- Advertisement -
- Advertisement -

ಮಹಾರಾಷ್ಟ್ರದಲ್ಲಿ ಬಿಜೆಪಿ ಮತ್ತು ಶಿವಸೇನೆ ಮಧ್ಯೆ ಸಿಎಂ ಸ್ಥಾನಕ್ಕಾಗಿ ವಾರ್ ಮುಂದುವರೆದಿದೆ. ಎಲ್ಲ ಸರಿ ಹೋಯಿತು. ಬಿಜೆಪಿ ಮತ್ತು ಶಿವಸೇನೆ ಅಧಿಕಾರ ರಚಿಸಲಿವೆ ಎಂಬ ಮಾತುಗಳು ಕೇಳಿ ಬರುತ್ತಿದ್ದಂತೆಯೇ, ಯಾವುದೂ ಸರಿ ಹೋಗಿಲ್ಲ ಎನ್ನುವುದನ್ನು ಶಿವಸೇನೆ ಸಾಬೀತುಪಡಿಸಿದೆ.

೧೫ ದಿನಗಳಿಂದ ಅಧಿಕಾರ ರಚನೆಗೆ ಸರ್ಕಸ್ ನಡೆಸಿರುವ ಬಿಜೆಪಿ ಯಶಸ್ವಿಯಾಗದ ಕಾರಣ, ಶಿವಸೇನೆ ಬಿಜೆಪಿಯನ್ನು ಕೆಣಕಿದೆ. ಇವತ್ತು ಮಧ್ಯರಾತ್ರಿಗೆ ಪ್ರಸಕ್ತ ವಿಧಾನಸಭಾ ಅವಧಿ ಮುಕ್ತಾಯವಾಗಲಿದೆ. ಅಷ್ಟರೊಳಗೆ ಯಾವುದೇ ಪಕ್ಷ ಸರ್ಕಾರ ರಚನೆಗೆ ಮುಂದಾಗದಿದ್ದರೆ ರಾಷ್ಟ್ರಪತಿ ಆಳ್ವಿಕೆ ಜಾರಿಯಾಗಲಿದೆ. ಅದಕ್ಕೆ ಪ್ರತಿಕ್ರಿಯಿಸಿರುವ ಶಿವಸೇನೆ, `ಸಾಮಾನ್ಯವಾಗಿ ದೊಡ್ಡ ಪಕ್ಷವಾಗಿ ಹೊರಹೊಮ್ಮಿದ ಪಕ್ಷಕ್ಕೆ ಸರ್ಕಾರ ರಚಿಸುವ ಹಕ್ಕು ಮಂಡನೆಯ ಅವಕಾಶವಿದೆ. ಅದರ ಪ್ರಕಾರ ಬಿಜೆಪಿ ರಾಜ್ಯಪಾಲರ ಮುಂದೆ ಹಕ್ಕು ಮಂಡಿಸಿ ಸರ್ಕಾರ ರಚಿಸಲಿ. ಆನಂತರ ವಿಧಾನಸಭೆಯಲ್ಲಿ ಬಹುಮತ ಸಾಬೀತು ಪಡಿಸಲು ಹದಿನೈದು ದಿನ ಅಷ್ಟೆ ಯಾಕೆ, ಒಂದು ತಿಂಗಳನ್ನೇ ಟೈಮ್ ತೆಗೆದುಕೊಳ್ಳಲಿ’ ಎಂದಿರುವ ಶಿವಸೇನೆ ಸಂಸದ ಸಂಜಯ್ ರಾವತ್, ಬಿಜೆಪಿಗೆ ಸವಾಲು ಹಾಕಿದ್ದಾರೆ.

ಇದನ್ನೂ ಓದಿ: ಸಿಎಂ ಹುದ್ದೆಯನ್ನು ಯಾವುದೇ ಕಾರಣಕ್ಕೆ ಬಿಟ್ಟು ಕೊಡುವುದಿಲ್ಲ: ಇಟ್ಟ ಹೆಜ್ಜೆ ಹಿಂದಕ್ಕೆ ತೆಗೆಯಲ್ಲ- ಶಿವಸೇನೆ ಎಚ್ಚರಿಕೆ

ಚುನಾವಣಾ ಫಲಿತಾಂಶ ಬಂದು ೧೫ ದಿನಗಳು ಕಳೆದರೂ, ಮಹಾರಾಷ್ಟ್ರದಲ್ಲಿ ಯಾವೊಂದು ಪಕ್ಷಕ್ಕೂ ಸರ್ಕಾರ ರಚಿಸಲು ಸಾಧ್ಯವಾಗಿಲ್ಲ. ೫೦:೫೦ ಸೂತ್ರದಂತೆ ನಡೆದುಕೊಳ್ಳದ ಬಿಜೆಪಿ ವಿರುದ್ಧ ಮುನಿಸಿಕೊಂಡಿರುವ ಶಿವಸೇನೆ, ತನ್ನ ಶಾಸಕರನ್ನು ಕುದುರೆ ವ್ಯಾಪಾರದಿಂದ ರಕ್ಷಿಸಲು ಮುಂಬೈನ ಹೋಟೆಲ್‌ಗೆ ಸ್ಥಳಾಂತರಿಸಿದೆ.

ಬಿಜೆಪಿ ಸರ್ಕಾರ ರಚನೆ ಮಾಡಿ, ಪ್ರಮಾಣವಚನ ಸ್ವೀಕರಿಸಿದರೆ, ವಿಧಾನಸಭೆಯಲ್ಲಿ ಬಹುಮತ ಸಾಬೀತುಪಡಿಸಲೇಬೇಕು.  ಒಂದುವೇಳೆ ಬಹುಮತ ಸಾಬೀತುಪಡಿಸುವಲ್ಲಿ ವಿಫಲವಾದರೆ ಶಿವಸೇನೆಗೆ ಸರ್ಕಾರ ರಚನೆಗೆ ಅವಕಾಶ ನೀಡಬೇಕಾಗುತ್ತದೆ ಎಂದು ಹೇಳಿದ್ದಾರೆ ರಾವತ್.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತೂತುಕುಡಿ ಸಾತನ್‌ಕುಳಂ ತಂದೆ-ಮಗನ ಕಸ್ಟಡಿ ಸಾವು ಪ್ರಕರಣ : ಅಪರಾಧಿಗಳಾದ ಎಲ್ಲಾ 9 ಪೊಲೀಸರಿಗೆ ಮರಣದಂಡನೆ ವಿಧಿಸಿದ ನ್ಯಾಯಾಲಯ

ತಮಿಳುನಾಡಿನ ತೂತುಕುಡಿ ಜಿಲ್ಲೆಯ ಸಾತನ್‌ಕುಳಂ ಪೊಲೀಸ್ ಠಾಣೆಯಲ್ಲಿ ಕೋವಿಡ್-19 ಲಾಕ್‌ಡೌನ್ ಸಮಯದಲ್ಲಿ ಸಂಭವಿಸಿದ, ವ್ಯಾಪಾರಿ ಪಿ. ಜಯರಾಜ್ (58) ಮತ್ತು ಅವರ ಮಗ ಜೆ. ಬೆನಿಕ್ಸ್ (31) ಅವರ ಕಸ್ಟಡಿ ಸಾವು ಪ್ರಕರಣದ...

ದಾವಣಗೆರೆ ದಕ್ಷಿಣ ಉಪ-ಸಮರ: ಶಾಮನೂರು ಸಾಮ್ರಾಜ್ಯದಲ್ಲಿ ಅಹಿಂದ ಬಂಡಾಯ!

ತುಂಗಭದ್ರಾ ನದಿ ಪರ‍್ವಕ್ಕೆ ಎತ್ತರದ ಪ್ರದೇಶದಲ್ಲಿರುವ ದಾವಣಗೆರೆ ಮಧ್ಯ ಕರ್ನಾಟಕದ ಪ್ರಮುಖ ವಾಣಿಜ್ಯ ನಗರಿ. ಬೆಣ್ಣೆ ದೋಸೆಯ ಘಮಲಿನ ದಾವಣಗೆರೆಯ ರಾಜಕಾರಣ ಮಾತ್ರ ಮಿರ್ಚಿ-ಮಂಡಕ್ಕಿಯ ಖಡಕ್ ಖಾರಾ ಕುರುಕುಲಿನಂತೆ! ದಾವಣಗೆರೆ ಮತ್ತದರ ಸುತಮುತ್ತಲಿನ...

‘Dr. Nimo Yadav’, ‘Nehr Who’ ಎಕ್ಸ್‌ ಖಾತೆಗಳನ್ನು ತಕ್ಷಣ ಮರುಸ್ಥಾಪಿಸಲು ದೆಹಲಿ ಹೈಕೋರ್ಟ್ ಆದೇಶ

'Dr. Nimo Yadav' ಮತ್ತು 'Nehr Who' ಎಂಬ ಎರಡು ಪರೋಡಿ ಎಕ್ಸ್‌ ಖಾತೆಗಳನ್ನು ತಕ್ಷಣ ಮರು ಸ್ಥಾಪಿಸುವಂತೆ ದೆಹಲಿ ಹೈಕೋರ್ಟ್ ಸೋಮವಾರ (ಏ.6) ಎಕ್ಸ್ ಸಂಸ್ಥೆಗೆ (X Corp) ಆದೇಶಿಸಿದೆ. 'Dr....

ಬಂಗಾಳ| ಮತದಾರರ ಪಟ್ಟಿಯಿಂದ ಹೆಸರು ತೆಗೆದ ಬಳಿಕ ಸಾವಿಗೆ ಶರಣಾದ ಮುಸ್ಲಿಂ ವ್ಯಕ್ತಿ

ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆಯ ನಂತರ ಪಶ್ಚಿಮ ಬಂಗಾಳದಲ್ಲಿ ಮತದಾರರ ಪಟ್ಟಿಯಿಂದ ತನ್ನ ಹೆಸರನ್ನು ತೆಗೆದುಹಾಕಿದ್ದರಿಂದ ಮನನೊಂದ ಮುಸ್ಲಿಂ ವ್ಯಕ್ತಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಪೊಲೀಸರು ಸೋಮವಾರ ತಿಳಿಸಿದ್ದಾರೆ. ಮೃತನನ್ನು ಬಿರ್ಭುಮ್...

‘ಯೋಜನೆಯು ಕೇರಳಕ್ಕೆ ಜೀವನಾಡಿಯಾಗಲಿದೆ’: ವಯನಾಡ್ ಸುರಂಗ ಮಾರ್ಗ ವಿರುದ್ದದ ಅರ್ಜಿ ವಜಾಗೊಳಿಸಿದ ಸುಪ್ರೀಂ ಕೋರ್ಟ್

ಕೇರಳದ ಕೋಝಿಕ್ಕೋಡ್-ವಯನಾಡ್ ಸುರಂಗ ಮಾರ್ಗ ನಿರ್ಮಾಣಕ್ಕೆ ನೀಡಲಾದ ಪರಿಸರ ಅನುಮತಿ (ಇಸಿ) ಪ್ರಶ್ನಿಸಿ ಸಲ್ಲಿಸಲಾದ ಅರ್ಜಿಯನ್ನು ಸುಪ್ರೀಂ ಕೋರ್ಟ್ ಸೋಮವಾರ (ಏ.6) ವಜಾಗೊಳಿಸಿದೆ. ಸುರಂಗ ನಿರ್ಮಾಣದ ಸಮಯದಲ್ಲಿ ಪರಿಸರ ಅನುಮತಿಯ ಷರತ್ತುಗಳ ಉಲ್ಲಂಘನೆಯಾದರೆ, ಅರ್ಜಿದಾರರು...

651 ಕೋಟಿ ರೂ. ಮೌಲ್ಯದ ನಗದು, ಮದ್ಯ, ಮಾದಕ ವಸ್ತು ವಶಪಡಿಸಿಕೊಂಡ ಚುನಾವಣಾ ಆಯೋಗ

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದಲ್ಲಿ ನಡೆಯುತ್ತಿರುವ ವಿಧಾನಸಭಾ ಚುನಾವಣೆಗೆ ಸಂಬಂಧಿಸಿದಂತೆ ಅಧಿಕಾರಿಗಳು 651.51 ಕೋಟಿ ರೂ.ಗೂ ಹೆಚ್ಚು ಮೌಲ್ಯದ ನಗದು, ಮದ್ಯ, ಮಾದಕ ವಸ್ತುಗಳು ಮತ್ತು ಇತರ ಉಚಿತ ವಸ್ತುಗಳನ್ನು...

ಪೇರಳೆ ಹಣ್ಣು ಕದ್ದಿದ್ದಾಳೆಂದು ಆರೋಪಿಸಿ ಬಾಲಕಿಯನ್ನು ಸರಪಳಿಯಿಂದ ಕಟ್ಟಿ ಥಳಿಸಿದ ಮಾಜಿ ಸೇನಾಧಿಕಾರಿ

ಪೇರಳೆ ಹಣ್ಣು ಕದ್ದಿದ್ದಾಳೆಂದು ಆರೋಪಿಸಿ ನಾಲ್ಕು ವರ್ಷದ ಬಾಲಕಿಯನ್ನು ನಿವೃತ್ತ ಸೇನಾಧಿಕಾರಿಯೊಬ್ಬರು ಸರಪಳಿಯಿಂದ ಕಟ್ಟಿಹಾಕಿ ಕ್ರೂರವಾಗಿ ಥಳಿಸಿರುವ ಆಘಾತಕಾರಿ ಘಟನೆ ಹಿಮಾಚಲ ಪ್ರದೇಶದ ಉನಾ ಜಿಲ್ಲೆಯ ಬೆಹಡಾಲ ಗ್ರಾಮದಲ್ಲಿ ನಡೆದಿದೆ. ಬಾಲಕಿಯು ನಿವೃತ್ತ ಸೇನಾಧಿಕಾರಿಯ ತೋಟದ...

ಆಂಧ್ರ ವಿಧಾನಸಭಾ ಸ್ಪೀಕರ್ ಅಯ್ಯಣ್ಣ ಪಾತ್ರುಡು ಅವರಿಂದ ದಲಿತ ವ್ಯಕ್ತಿಗೆ ಕಪಾಳಮೋಕ್ಷ: ವೈಎಸ್‌ಆರ್‌ಸಿಪಿ ವಾಗ್ದಾಳಿ

ಏಪ್ರಿಲ್ 3 ರ ಗುರುವಾರ ನರಸಿಪಟ್ಟಣದಲ್ಲಿ ದಲಿತ ವ್ಯಕ್ತಿಯೊಬ್ಬರಿಗೆ ಕಪಾಳಮೋಕ್ಷ ಮಾಡಿದ್ದಕ್ಕಾಗಿ ಆಂಧ್ರಪ್ರದೇಶ ವಿಧಾನಸಭಾ ಸ್ಪೀಕರ್ ಮತ್ತು ತೆಲುಗು ದೇಶಂ ಪಕ್ಷದ (ಟಿಡಿಪಿ) ನಾಯಕ ಅಯ್ಯಣ್ಣ ಪಾತ್ರುಡು ಅವರ ವಿರುದ್ಧ ವೈಎಸ್‌ಆರ್ ಕಾಂಗ್ರೆಸ್...

ಪ. ಬಂಗಾಳ | ಬಿಜೆಪಿ ಪ್ರಚಾರ ಸಾಮಗ್ರಿ ಸಜ್ಜುಗೊಳಿಸಿದ ವಿಡಿಯೋ ವೈರಲ್ : ಚುನಾವಣಾ ಕರ್ತವ್ಯದಲ್ಲಿದ್ದ ಅಧಿಕಾರಿ ಅಮಾನತು

ಬಿಜೆಪಿ ಪ್ರಚಾರ ಸಾಮಗ್ರಿಗಳನ್ನು ತಯಾರಿಸಲು ಸಹಾಯ ಮಾಡಿದ ಆರೋಪದ ಮೇಲೆ ಪಶ್ಚಿಮ ಬಂಗಾಳದ ಉತ್ತರ 24 ಪರಗಣ ಜಿಲ್ಲೆಯ ಪಾಣಿಹಟಿ ವಿಧಾನಸಭಾ ಕ್ಷೇತ್ರದ ಅಧಿಕಾರಿಯೊಬ್ಬರನ್ನು ಚುನಾವಣಾ ಆಯೋಗ ಅಮಾನತುಗೊಳಿಸಿದೆ ಎಂದು ದಿ ಇಂಡಿಯನ್...

ಮುಸ್ಲಿಮರ ವಿರುದ್ಧ ದ್ವೇಷ ಕಾರುವ ಅಸ್ಸಾಂ ಸಿಎಂ ಪತ್ನಿ ಬಳಿ 2 ಮುಸ್ಲಿಂ ದೇಶಗಳ ಪಾಸ್‌ಪೋರ್ಟ್ ಇದೆ : ಕಾಂಗ್ರೆಸ್ ಆರೋಪ

ಮತದಾನಕ್ಕೆ ಇನ್ನೇನು ಮೂರು ದಿನಗಳು ಬಾಕಿ ಇರುವಾಗ, ಅಸ್ಸಾಂನಲ್ಲಿ ಕಾಂಗ್ರೆಸ್‌-ಬಿಜೆಪಿ ನಡುವೆ ವೈಯಕ್ತಿಕ ವಿಚಾರಗಳ ಕುರಿತ ವಾಗ್ಯುದ್ಧ ತಾರಕಕ್ಕೇರಿದೆ. ಸಿಎಂ ಹಿಮಂತ ಬಿಸ್ವಾ ಶರ್ಮಾ ಮತ್ತು ಅವರ ಪತ್ನಿ ರಿನಿಕಿ ಭುಯಾನ್ ಶರ್ಮಾ...