Homeಕರ್ನಾಟಕ'ಅಲೆಮಾರಿ ಸಮುದಾಯಗಳಿಗೆ ನ್ಯಾಯ ಸಿಗಲಿ..'; ಮುಖ್ಯಮಂತ್ರಿಗಳಿಗೆ ಪತ್ರ ಬರೆದ ಹಿರಿಯ ಸಾಹಿತಿ ಬರಗೂರು ರಾಮಚಂದ್ರಪ್ಪ

‘ಅಲೆಮಾರಿ ಸಮುದಾಯಗಳಿಗೆ ನ್ಯಾಯ ಸಿಗಲಿ..’; ಮುಖ್ಯಮಂತ್ರಿಗಳಿಗೆ ಪತ್ರ ಬರೆದ ಹಿರಿಯ ಸಾಹಿತಿ ಬರಗೂರು ರಾಮಚಂದ್ರಪ್ಪ

- Advertisement -
- Advertisement -

ಪರಿಶಿಷ್ಟ ಜಾತಿ (ಎಸ್‌ಸಿ) ಒಳಮೀಸಲಾತಿಯಲ್ಲಿ ‘ಅಲೆಮಾರಿ ಸಮುದಾಯಗಳಿಗೆ ನ್ಯಾಯ ಸಿಗಲಿ’ ಎಂದು ಆಗ್ರಹಿಸಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಹಿರಿಯ ಸಾಹಿತಿ ಬರಗೂರು ರಾಮಚಂದ್ರಪ್ಪ ಅವರು ಪತ್ರ ಬರೆದಿದ್ದಾರೆ.

ಈ ಬಗ್ಗೆ ಬರಗೂರು ರಾಮಚಂದ್ರಪ್ಪ ಬರೆದಿರುವ ಪತ್ರ ‘ನಾನುಗೌರಿ.ಕಾಮ್’ಗೆ ಲಭ್ಯವಾಗಿದ್ದು, “ದಲಿತ ಸಮುದಾಯಗಳ ಒಳಮೀಸಲಾತಿ ಕುರಿತು ಸಲ್ಲಿಕೆಯಾದ ಜಸ್ಟೀಸ್‌ ನಾಗಮೋಹನದಾಸ್‌ ಅವರ ವರದಿಯನ್ನು ಒಪ್ಪಿ, ಕೆಲವು ಮಾರ್ಪಾಟುಗಳೊಂದಿಗೆ ಜಾರಿಗೊಳಿಸುತ್ತಿರುವುದು ಮೊದಲಿಗೆ ಅಭಿನಂದನೀಯ ಕ್ರಮವಾಗಿದೆ” ಎಂದು ಹೇಳಿದ್ದಾರೆ.

“ಎಡಗೈ ದಲಿತ ಸಮುದಾಯವು ಮೂರು ದಶಕಗಳಿಂದ ಒಳಮೀಸಲಾತಿಗಾಗಿ ನಡೆಸುತ್ತಾ ಬಂದ ಹೋರಾಟಕ್ಕೆ ಕಡೆಗೂ ಜಯವಾಗಿದೆ; ನ್ಯಾಯ ಸಿಕ್ಕಿದೆ. ಜೊತೆಗೆ ಬಲಗೈ ದಲಿತ ಸಮುದಾಯ ಮತ್ತು ಸ್ಪೃಶ್ಯ ಪರಿಶಿಷ್ಟ ಜಾತಿಗಳಿಗೂ ಮೀಸಲಾತಿ ಪ್ರಮಾಣವನ್ನು ಹೆಚ್ಚಿಸುವ ಮೂಲಕ ಸಮತೋಲನದ ಪ್ರಯತ್ನ ಮಾಡಲಾಗಿದೆ. ಪರಿಶಿಷ್ಟ ಜಾತಿಗಳಿಗಾಗಿ ಶಾಶ್ವತ ಆಯೋಗ ರಚಿಸುವ ತೀರ್ಮಾನ ಮಾಡಲಾಗಿದೆ. ಇವೆಲ್ಲ ಕ್ರಮಗಳೂ ಸ್ವಾಗತಾರ್ಹವಾಗಿವೆ” ಎಂದಿದ್ದಾರೆ.

“ಆದರೆ, ಇಷ್ಟೆಲ್ಲ ನ್ಯಾಯ ಒದಗಿಸುವ ನಿರ್ಣಯದಲ್ಲಿ ಅಲೆಮಾರಿ ಸಮುದಾಯಗಳಿಗೆ ಸೂಕ್ತ ಸಾಮಾಜಿಕ ನ್ಯಾಯವನ್ನು ಒದಗಿಸಿಲ್ಲವೆಂಬ ಅ೦ಶ ಮುನ್ನೆಲೆಗೆ ಬಂದಿದೆ. ಅಲೆಮಾರಿ ಸಮುದಾಯಗಳು ಬೇರೆ ಶೋಷಿತ ಸಮುದಾಯಗಳಿಗಿ೦ತ ಭಿನ್ನವಾದ ಜೀವನ ವಿಧಾನವನ್ನು ಒಳಗೊಂಡಿವೆ. ಸಾಮಾಜಿಕ, ಆರ್ಥಿಕ ಮತ್ತು ಶೈಕ್ಷಣಿಕವಾಗಿ ಬೇರೆ ಯಾವುದೇ ಶೋಷಿತ ಸಮುದಾಯದ ಜೊತೆಗೆ ಸ್ಪರ್ಧೆ ಮಾಡಲಾಗದಂಥ ಸ್ಥಿತಿಯಲ್ಲಿವೆ. ಈ ವಾಸ್ತವವನ್ನು ಪರಿಗಣಿಸಿಯೇ ಜಸ್ಟೀಸ್‌ ನಾಗಮೋಹನದಾಸ್‌ ಆಯೋಗವು ಅಲೆಮಾರಿ ಸಮುದಾಯಗಳಿಗೆ ಪ್ರತ್ಯೇಕವಾಗಿ ಒಳಮೀಸಲಾತಿಗೆ ಶಿಫಾರಸು ಮಾಡಿತ್ತು” ಎಂದು ವಿವರಿಸಿದ್ದಾರೆ.

“ಸಾಮಾಜಿಕ ನ್ಯಾಯಕ್ಕೆ ಬದ್ಧರಾದವರೆಂದೇ ಹೆಸರಾದ ಮಾನ್ಯ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಅಲೆಮಾರಿಗಳಿಗಾದ ‘ಅನ್ಯಾಯ’ವನ್ನು ಸರಿಪಡಿಸಲು ಪರ್ಯಾಯ ಪರಿಹಾರ ಮಾರ್ಗಗಳನ್ನು ಹುಡುಕಬೇಕೆಂದೂ, ನ್ಯಾಯ ಒದಗಿಸಬೇಕೆಂದೂ ಒತ್ತಾಯ ಪೂರ್ವಕವಾಗಿ ವಿನಂತಿಸುತ್ತೇನೆ. ಈ ಸಂಬ೦ಧವಾಗಿ ಅಲೆಮಾರಿ ಸಂಘಟನೆಗಳ ನೇತಾರರನ್ನು ಮಾತುಕತೆಗೆ ಆಹ್ವಾನಿಸುವುದು ಅಗತ್ಯವೆಂದು ಭಾವಿಸುತ್ತೇನೆ” ಎಂದು ಆಗ್ರಹಿಸಿದ್ದಾರೆ.

ಒಳಮೀಸಲಾತಿ ಧರಣಿ| ಆಹ್ವಾನವಿಲ್ಲದೆ ವೇದಿಕೆಗೆ ಬಂದ ಬಿಜೆಪಿ ನಾಯಕರು; ಕೆಳಗಿಳಿಸಿದ ಹೋರಾಟಗಾರರು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಇರಾನ್: ಪ್ರತಿಭಟನಾಕಾರರ ಮೇಲೆ ನಡೆದ ದಮನ ಕಾರ್ಯಾಚರಣೆಯಲ್ಲಿ ಸಾವಿನ ಸಂಖ್ಯೆ 2571ಕ್ಕೆ ಏರಿಕೆ 

ಇರಾನ್‌ನಲ್ಲಿ ಪ್ರತಿಭಟನೆಗಳ ಮೇಲೆ ನಡೆದ ದಮನ ಕಾರ್ಯಾಚರಣೆಯಲ್ಲಿ ಸಾವನ್ನಪ್ಪಿದವರ ಸಂಖ್ಯೆ ಕನಿಷ್ಠ 2,571 ಕ್ಕೆ ಏರಿದೆ ಎಂದು ಮಾನವ ಹಕ್ಕುಗಳ ಕಾರ್ಯಕರ್ತರು ಬುಧವಾರ ತಿಳಿಸಿದ್ದಾರೆ. ಈ ಅಂಕಿ ಅಂಶವು ಅಮೆರಿಕ ಮೂಲದ ಮಾನವ ಹಕ್ಕುಗಳ...

ಕಾಂಗ್ರೆಸ್‌ ಮುಖಂಡನ ಗೂಂಡಾವರ್ತನೆ : ಫ್ಲೆಕ್ಸ್‌ ತೆರವುಗೊಳಿಸಿದ್ದಕ್ಕೆ ಪೌರಾಯುಕ್ತೆಗೆ ಧಮ್ಕಿ, ಅವಾಚ್ಯ ಶಬ್ದಗಳಿಂದ ನಿಂದನೆ

ಸಚಿವ ಝಮೀರ್ ಅಹ್ಮದ್ ಅವರ ಮಗ ಝೈದ್ ಖಾನ್ ನಟನೆಯ 'ಕಲ್ಟ್' ಸಿನಿಮಾದ ಫ್ಲೆಕ್ಸ್‌ಗಳನ್ನು ತೆರವುಗೊಳಿಸಿದ ವಿಚಾರವಾಗಿ ಕೆಪಿಸಿಸಿ ಸಂಯೋಜಕ ರಾಜೀವ್ ಗೌಡ, ಶಿಡ್ಲಘಟ್ಟ ನಗರಸಭೆ ಪೌರಾಯುಕ್ತೆ ಜಿ. ಅಮೃತಗೌಡ ಅವರೊಂದಿಗೆ ಗೂಂಡಾವರ್ತನೆ...

ಹಿಂದಿ ಶೈಕ್ಷಣಿಕ ಪದ್ಧತಿ ಹೇರಿಕೆಯಿಂದ ಉತ್ತರದ ಜನರಿಂದ ದಕ್ಷಿಣಕ್ಕೆ ವಲಸೆ: ಮಾರನ್

ಇಂಗ್ಲಿಷ್ ಶಿಕ್ಷಣವನ್ನು ನಿರುತ್ಸಾಹಗೊಳಿಸುತ್ತಾ, ವಿದ್ಯಾರ್ಥಿಗಳು ಹಿಂದಿ ಮಾತ್ರ ಕಲಿಯಲು ಪ್ರೋತ್ಸಾಹಿಸುತ್ತಿದ್ದಾರೆ. ಉತ್ತರ ರಾಜ್ಯಗಳ ಈ ನೀತಿಗಳಿಂದ ಉದ್ಯೋಗ ಸಿಗದೆ ದಕ್ಷಿಣದ ರಾಜ್ಯಗಳಿಗೆ ವಲಸೆ ಬರುತ್ತಿದ್ದಾರೆ ಎಂದು ಡಿಎಂಕೆ ಸಂಸದ ದಯಾನಿಧಿ ಮಾರನ್ ಉತ್ತರ...

ಚಿಕ್ಕಮಗಳೂರು| ದಲಿತರ ಜಮೀನಿಗೆ ನುಗ್ಗಿ ಬೆಳೆ ನಾಶ; ಪ್ರಬಲ ಜಾತಿ ಜನರಿಂದ ವಿನಾಕಾರಣ ತೊಂದರೆ

ಚಿಕ್ಕಮಗಳೂರು ತಾಲೂಕಿನ ಆಲ್ದೂರು ಹೋಬಳಿಯ ಸತ್ತಿಹಳ್ಳಿ ಗ್ರಾಮದ ದಲಿತ ಸಮುದಾಯದ ರೈತರಿಗೆ ಅದೇ ಊರಿನ ಪ್ರಬಲ ಜಾತಿಗೆ ಸೇರಿದ ಜನರು ವಿನಾಕಾರಣ ತೊಂದರೆ ನಿಡುತ್ತಿದ್ದು, ಜಮೀನಿಗೆ ನುಗ್ಗಿ ಬೆಳೆ ನಾಶ ಮಾಡಿದ್ದಾರೆ ಎಂಬ...

ಎಲ್‌ಡಿಎಫ್‌ನ ‘ಕೇರಳಂ’ ಮರುನಾಮಕರಣ ಕ್ರಮ ಬೆಂಬಲಿಸಿದ ರಾಜ್ಯ ಬಿಜೆಪಿ; ಪ್ರಧಾನಿ ಮೋದಿ ಮಧ್ಯಸ್ಥಿಕೆಗೆ ಮನವಿ

ಭಾರತೀಯ ಜನತಾ ಪಕ್ಷದ (ಬಿಜೆಪಿ) ಕೇರಳ ಘಟಕವು, ಎಡ ಪ್ರಜಾಸತ್ತಾತ್ಮಕ ರಂಗ (ಎಲ್‌ಡಿಎಫ್‌) ಸರ್ಕಾರದ 'ಕೇರಳಂ' ಮರುನಾಕರಣ ಪ್ರಸ್ತಾವನೆಯನ್ನು ಬೆಂಬಲಿಸಿದೆ. ಈ ಪ್ರಕ್ರಿಯೆಯನ್ನು ಪೂರ್ಣಗೊಳಿಸಲು ಮಧ್ಯಸ್ಥಿಕೆ ವಹಿಸಬೇಕು ಎಂದು ಪ್ರಧಾನಿ ನರೇಂದ್ರ ಮೋದಿಯವರಲ್ಲಿ...

ರಾಯಚೂರು ಕೃಷಿ ವಿವಿ ಸಹಾಯಕ ಪ್ರಾಧ್ಯಾಪಕರ ನೇಮಕಾತಿ ತಡೆಗೆ ಸಂಚು ಆರೋಪ: ನಿಗದಿತ ದಿನಾಂಕದಂದು ಪರೀಕ್ಷೆ ನಡೆಸಲು ಒತ್ತಾಯ 

ಬೆಂಗಳೂರು: ರಾಯಚೂರು ಕೃಷಿ ವಿವಿಯಲ್ಲಿನ 75 ಸಹಾಯಕ ಪ್ರಾಧ್ಯಾಪಕರ ಹುದ್ದೆಗಳ ನೇಮಕಾತಿ ಪರೀಕ್ಷೆಯನ್ನು ನಿಗದಿತ ದಿನಾಂಕಗಳಾದ ಜನವರಿ.17 ಮತ್ತು ಜನವರಿ.18ರಂದೇ ನಡೆಸಬೇಕು. ಪಟ್ಟಭದ್ರ ಹಿತಾಸಕ್ತಿಗಳ ಒತ್ತಾಯಕ್ಕೆ ಮಣಿದು ಪರೀಕ್ಷೆಯನ್ನು ಮುಂದೂಡಬಾರದು ಎಂದು ಅಭ್ಯರ್ಥಿಗಳು...

ಸಂಭಾಲ್ ಹಿಂಸಾಚಾರ ಪ್ರಕರಣ : ಹಿರಿಯ ಅಧಿಕಾರಿಗಳು ಸೇರಿ 12 ಪೊಲೀಸ್ ಸಿಬ್ಬಂದಿ ವಿರುದ್ಧ ಎಫ್‌ಐಆರ್ ದಾಖಲಿಸಲು ಕೋರ್ಟ್ ಆದೇಶ

2024ರ ನವೆಂಬರ್‌ನಲ್ಲಿ ಶಾಹಿ ಜಾಮಾ ಮಸೀದಿ ಬಳಿ ನಡೆದ ಹಿಂಸಾಚಾರದ ಸಂದರ್ಭದಲ್ಲಿ ನಡೆದ ಗುಂಡಿನ ದಾಳಿಯಲ್ಲಿ ಪಾತ್ರವಿದೆ ಎಂಬ ಆರೋಪದ ಮೇಲೆ ಹಿರಿಯ ಅಧಿಕಾರಿಗಳು ಸೇರಿದಂತೆ 12 ಪೊಲೀಸ್ ಸಿಬ್ಬಂದಿಯ ವಿರುದ್ಧ ಕ್ರಿಮಿನಲ್...

ಪಿಎಂ ಕೇರ್ಸ್ ನಿಧಿಗೆ ಆರ್‌ಟಿಐ ಕಾಯ್ದೆಯಡಿ ಗೌಪ್ಯತೆಯ ಹಕ್ಕಿದೆ : ದೆಹಲಿ ಹೈಕೋರ್ಟ್

ಪಿಎಂ ಕೇರ್ಸ್ ನಿಧಿಯು ಕಾನೂನು ಅಥವಾ ಸರ್ಕಾರಿ ಘಟಕವಾಗಿದ್ದರೂ, ಮಾಹಿತಿ ಹಕ್ಕು ಕಾಯ್ದೆಯಡಿಯಲ್ಲಿ ಗೌಪ್ಯತೆಯ ಹಕ್ಕನ್ನು ನಿರಾಕರಿಸಲಾಗುವುದಿಲ್ಲ ಎಂದು ದೆಹಲಿ ಹೈಕೋರ್ಟ್ ಮಂಗಳವಾರ (ಜ.13) ಮೌಖಿಕವಾಗಿ ಹೇಳಿದೆ. ಮುಖ್ಯ ನ್ಯಾಯಮೂರ್ತಿ ಡಿ.ಕೆ. ಉಪಾಧ್ಯಾಯ ಮತ್ತು...

ಬಿಜೆಪಿ-ಆರ್‌ಎಸ್‌ಎಸ್‌ ನಾಯಕರನ್ನು ಭೇಟಿಯಾದ ಚೀನಾ ಕಮ್ಯುನಿಸ್ಟ್ ಪಕ್ಷದ ನಿಯೋಗ

ಗಾಲ್ವಾನ್ ಘರ್ಷಣೆಯ ನಂತರ ಮೊದಲ ಬಾರಿಗೆ ಭಾರತಕ್ಕೆ ಭೇಟಿ ನೀಡಿರುವ ಚೀನಾದ ಕಮ್ಯುನಿಸ್ಟ್ ಪಕ್ಷದ (ಸಿಪಿಸಿ) ನಿಯೋಗ ಬಿಜೆಪಿ-ಆರ್‌ಎಸ್‌ಎಸ್‌ ನಾಯಕರನ್ನು ಭೇಟಿ ಮಾಡಿದೆ ಎಂದು ವರದಿಯಾಗಿದೆ. ಸೋಮವಾರ (ಜ.12) ನವದೆಹಲಿಯಲ್ಲಿ ಬಿಜೆಪಿ ನಾಯಕರನ್ನು ಭೇಟಿ...

ಅಪ್ರಾಪ್ತ ಮುಸ್ಲಿಂ ವಿದ್ಯಾರ್ಥಿಗೆ ಎರಡು ತಿಂಗಳ ಜೈಲು ಶಿಕ್ಷೆ: ಇದು ‘ಕಾನೂನುಬಾಹಿರ’ ಎಂದ ಪಾಟ್ನಾ ಹೈಕೋರ್ಟ್: 5 ಲಕ್ಷ ಪರಿಹಾರಕ್ಕೆ ಆದೇಶ

ಬಿಹಾರ ಪೊಲೀಸರು ಎರಡು ತಿಂಗಳಿಗೂ ಹೆಚ್ಚು ಕಾಲ ಮುಸ್ಲಿಂ ಅಪ್ರಾಪ್ತ ವಿದ್ಯಾರ್ಥಿನಿಯನ್ನು ಬಂಧಿಸಿದ್ದು, ಕಾನೂನುಬಾಹಿರ ಎಂದು ಪಾಟ್ನಾ ಹೈಕೋರ್ಟ್ ಹೇಳಿದೆ. ಇಂಥ ವಿಚಾರಗಳಲ್ಲಿ ರಾಜ್ಯ ಮೂಕ ಪ್ರೇಕ್ಷಕನಾಗಿ ಉಳಿಯಲು ಸಾಧ್ಯವಿಲ್ಲ ಎಂದಿರುವ ಕೋರ್ಟ್...