Homeಕರ್ನಾಟಕರಾಜ್ಯ ಸರ್ಕಾರವು ಮೋದಿಯ ದಾರಿಯಲ್ಲಿ ಹೆಜ್ಜೆ ಹಾಕಲಿ: ‘ಸಂಯುಕ್ತ ಹೋರಾಟ ಕರ್ನಾಟಕ’ ಆಗ್ರಹ

ರಾಜ್ಯ ಸರ್ಕಾರವು ಮೋದಿಯ ದಾರಿಯಲ್ಲಿ ಹೆಜ್ಜೆ ಹಾಕಲಿ: ‘ಸಂಯುಕ್ತ ಹೋರಾಟ ಕರ್ನಾಟಕ’ ಆಗ್ರಹ

ಹೋರಾಟ ಮುಂದುವರಿಯುತ್ತದೆ ಎಂದು ಹೋರಾಟ ಸಮಿತಿ ತಿಳಿಸಿದೆ

- Advertisement -
- Advertisement -

ಮೂರು ಕರಾಳ ಕೃಷಿ ಕಾಯ್ದೆಗಳನ್ನು ವಾಪಸ್ಸು ಪಡೆಯುವುದಾಗಿ ಪ್ರಧಾನಿ ಮೋದಿ ಮಾಡಿರುವ ಘೋಷಣೆ ದೇಶದ ರೈತರ ಚಾರಿತ್ರಿಕ ಹೋರಾಟಕ್ಕೆ ಸಂದ ಭಾರಿ ದೊಡ್ಡ ವಿಜಯವಾಗಿದೆ ಎಂದು ‘ಸಂಯುಕ್ತ ಹೋರಾಟ ಕರ್ನಾಟಕ’ ಶುಕ್ರವಾರ ಹೇಳಿದೆ. ಮಳೆ, ಚಳಿ, ಬಿಸಿಲು, ಬೆದರಿಕೆಗಳನ್ನು ಲೆಕ್ಕಿಸದೇ ದೆಹಲಿಯ ಗಡಿಗಳಲ್ಲಿ ಸತತ ಒಂದು ವರ್ಷದಿಂದ ಹೋರಾಟ ನಡೆಸಿ ಹೋರಾಟದ ಗೆಲುವಿಗೆ ಕಾರಣಿಭೂತರಾದ ಲಕ್ಷಾಂತರ ರೈತರು ಹಾಗು ಇದರ ಭಾಗವಾಗಿ ದೇಶಾದ್ಯಂತ ವ್ಯಾಪಕ ಹೋರಾಟ ನಡೆಸಿದ ರೈತರು, ದಲಿತರು, ಕಾರ್ಮಿಕರನ್ನು ‘ಸಂಯುಕ್ತ ಹೋರಾಟ ಕರ್ನಾಟಕ’ ಅಭಿನಂದಿಸಿದೆ.

ಈ ಬಗ್ಗೆ ಪ್ರತಿಕಾ ಹೇಳಿಕೆ ಬಿಡುಗಡೆ ಮಾಡಿರುವ ‘ಸಂಯುಕ್ತ ಹೋರಾಟ ಕರ್ನಾಟಕ’, “ಪ್ರಧಾನಿ ಮೋದಿ ಮೂರು ಕರಾಳ ಕೃಷಿ ಕಾಯ್ದೆಗಳ ವಾಪಸಾತಿ ಮಾಡುವುದಾಗಿ ಮಾತ್ರ ಘೋಷಣೆ ಮಾಡಿದ್ದಾರೆ. ಆದರೆ, ಕೃಷಿ ಉತ್ಪನ್ನಗಳಿಗೆ ಕನಿಷ್ಠ ಬೆಂಬಲ ಬೆಲೆ ನೀಡುವ ಕಾನೂನು ರಚನೆಯ ಬಗ್ಗೆ ಹಾಗು ವಿದ್ಯುತ್‌ ಕ್ಷೇತ್ರದ ಸಂಪೂರ್ಣ ಖಾಸಗಿಕರಣಕ್ಕೆ ಅವಕಾಶ ಮಾಡಿಕೊಡುವ ವಿದ್ಯುತ್‌ ಮಸೂದೆ-2020 ರ ವಾಪಸಾತಿಯ ಬಗ್ಗೆ ಮೌನ ವಹಿಸಿದ್ದಾರೆ. ಈ ಬೇಡಿಕೆಗಳನ್ನು ಸಹ ಈಡೇರಿಸಬೇಕು” ಎಂದು ಹೋರಾಟ ಸಮಿತಿಯು ಆಗ್ರಹಿಸಿದೆ.

ಇದನ್ನೂ ಓದಿ: ವಿವಾದಿತ ಕೃಷಿ ಕಾನೂನುಗಳು ವಾಪಸ್: ರೈತರ ಸಂಭ್ರಮ ವಿಡಿಯೋ ಮತ್ತು ಚಿತ್ರಗಳಲ್ಲಿ

ಬಿಜೆಪಿ ರಾಜ್ಯ ಸರ್ಕಾರವೂ ಮೋದಿಯವರ ದಾರಿಯಲ್ಲಿ ಹೆಜ್ಜೆ ಹಾಕಬೇಕು:

ರೈತರ ಒ೦ದು ವರ್ಷದ ಸತತ ಹೋರಾಟದ ಕಾರಣದಿಂದ ಪ್ರಧಾನಿಗೆ ತಮ್ಮ ತಪ್ಪಿನ ಅರಿವು ಆಗಿದ್ದು, ಈ ಕಾರಣಕ್ಕಾಗಿ ಕರಾಳ ಕೃಷಿ ಕಾಯ್ದೆ ವಾಪಸ್ಸು ಪಡೆದಿದ್ದಾರೆ ಎಂದು ಹೇಳಿರುವ ‘ಸಂಯುಕ್ತ ಹೋರಾಟ’ವು, ಮೋದಿಯ ದಾರಿಯಲ್ಲಿ ರಾಜ್ಯದ ಬಿಜೆಪಿ ಸರ್ಕಾರ ಕೂಡಾ ಹೆಜ್ಜೆ ಇಡಬೇಕು ಎಂದು ತಿಳಿಸಿದೆ.

“ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ಪ್ರಧಾನಿ ಮೋದಿಯ ಹಾದಿಯಲ್ಲಿ ಹೆಜ್ಜೆ ಹಾಕಿ, ಭೂ ಸುಧಾರಣೆ ಕಾಯ್ದೆ, ಎಪಿಎಂಸಿ ಕಾಯ್ದೆಗಳ ತಿದ್ದುಪಡಿಗಳನ್ನು ಕೂಡಲೇ ರದ್ದು ಮಾಡಬೇಕು” ಎಂದು ಸಂಯುಕ್ತ ಹೋರಾಟ-ಕರ್ನಾಟಕ ರಾಜ್ಯ ಸರ್ಕಾರವನ್ನು ಒತ್ತಾಯಿಸಿದೆ. ಇಲ್ಲವೆಂದಾದಲ್ಲಿ ರಾಜ್ಯದಲ್ಲಿ ಹೋರಾಟವನ್ನು ತೀವ್ರಗೊಳಿಸಲಾಗುವುದೆ೦ದು ಸಂಯುಕ್ತ ಹೋರಾಟ ಕರ್ನಾಟಕ ಎಚ್ಚರಿಕೆ ನೀಡಿದೆ.

ಹೋರಾಟ ಮುಂದುವರಿಯುತ್ತದೆ 

ಕೇಂದ್ರದಲ್ಲಿ ಕನಿಷ್ಠ ಬೆಂಬಲ ಬೆಲೆ ಖಾತರಿಯ ಕಾನೂನು, ವಿದ್ಯುತ್‌ ಮಸೂದೆ-2020 ರ ವಾಪಸಾತಿ ಹಾಗು ರಾಜ್ಯ ಸರ್ಕಾರ ಭೂ ಸುಧಾರಣಾ ಕಾಯ್ದೆ, ಎಪಿಎಂಸಿ ಕಾಯ್ದೆ, ಗೋಹತ್ಯೆ ನಿಷೇಧ ಕಾಯ್ದೆ ತಿದ್ದುಪಡಿಗಳ ವಾಪಸಾತಿ, ಕಾರ್ಮಿಕ ಸಂಹಿತೆ ರದ್ಧತಿ, ಸಾರ್ವಜನಿಕ ಉದ್ಯಮಗಳ ಖಾಸಗೀಕರಣಕ್ಕೆ ತಡೆ, ಅಗತ್ಯ ವಸ್ತುಗಳ ಬೆಲೆ ಏರಿಕೆಯ ನಿಯಂತ್ರಣ, ಸತತ ಮಳೆಯಿಂದ ಬೆಳೆ ನಷ್ಟಕ್ಕೆ ಪರಿಹಾರ, ಹಾಲಿನ ದರ ಇಳಿಕೆ ಸೇರಿದಂತೆ ಹಲವು ಬೇಡಿಕೆಗಳನ್ನು ಈಡೇರಿಸುವ ತನಕ ರಾಜ್ಯದಲ್ಲಿ ಹೋರಾಟವನ್ನು ಮುಂದುವರಿಸಲು ಸಂಯುಕ್ತ ಹೋರಾಟ- ಕರ್ನಾಟಕ ನಿರ್ಧರಿಸಿದೆ ಎಂದು ಹೇಳಿದೆ.

ನವೆಂಬರ್‌ 26 ರ ರಾಷ್ಟ್ರೀಯ ಹೆದ್ದಾರಿ ತಡೆ ಚಳುವಳಿ 

ದಿಲ್ಲಿಯ ರೈತ ಹೋರಾಟಕ್ಕೆ ಒಂದು ವರ್ಷ ತುಂಬುತ್ತಿರುವ ಹಿನ್ನೆಲೆಯಲ್ಲಿ ರಾಜ್ಯದ ರಾಷ್ಟ್ರೀಯ ಹೆದ್ದಾರಿ ತಡೆ ಚಳುವಳಿಯನ್ನು ಘೋಷಿಸಲಾಗಿತ್ತು. ಈ ಕುರಿತು ನಾಳೆ ಬೆಂಗಳೂರಿನಲ್ಲಿ ಸಂಯುಕ್ತ ಹೋರಾಟ-ಕರ್ನಾಟಕದ ಪ್ರತಿಕಾಗೋಷ್ಠಿಯಲ್ಲಿ ಹೋರಾಟದ ರೂಪರೇಷಗಳನ್ನು ಘೋಷಣೆ ಮಾಡಲಾಗುವುದು ಎಂದು ಹೋರಾಟ ಸಮಿತಿ ತಿಳಿಸಿದೆ. ಘೋಷಣೆ ಮಾಡಲಾಗುವುದು ಎಂದು ಹೋರಾಟ ಸಮಿತಿ  tiLiside ತಿಳಿಸಿದೆ. 

ಇದನ್ನೂ ಓದಿ: ರೈತ ಹೋರಾಟಕ್ಕೆ ಸಾಥ್ ನೀಡಿ ಒಕ್ಕೂಟ ಸರ್ಕಾರದ ಕೆಂಗಣ್ಣಿಗೆ ಗುರಿಯಾದ ಆಯ್ದ ಕೆಲವರ ಪಟ್ಟಿ ಇಲ್ಲಿದೆ

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಮುಂದುವರಿದ ಬಿಜೆಪಿ ನಾಯಕರ ದ್ವೇಷ ಭಾಷಣ; ‘ಕಾಂಗ್ರೆಸ್ ದೇಶದಲ್ಲಿ ಷರಿಯಾ ಕಾನೂನು ಜಾರಿಗೆ ತರಲಿದೆ’...

0
ಸಂಪತ್ತು ಮರು ಹಂಚಿಕೆ ಕುರಿತು ದ್ವೇಷ ಭಾಷಣ ಮಾಡಿದ್ದ ಪ್ರಧಾನಿ ನರೇಂದ್ರ ಮೋದಿಯವರ ನಂತರ, ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಕೂಡ ಮಂಗಳವಾರ ಕಾಂಗ್ರೆಸ್ ವಿರುದ್ಧ ಗಂಭೀರ ಆರೋಪ ಮಾಡಿದ್ದಾರೆ. 'ಕಾಂಗ್ರೆಸ್...