Homeಕರ್ನಾಟಕ‘ಆದಿವಾಸಿಗಳ ಮೇಲೆ ನಡೆಯುತ್ತಿರುವ ಯುದ್ಧ ನಿಲ್ಲಲಿ’: ಬೆಂಗಳೂರಿನಲ್ಲಿ ಸೋನಿ ಸೋರಿ ಕಳವಳ

‘ಆದಿವಾಸಿಗಳ ಮೇಲೆ ನಡೆಯುತ್ತಿರುವ ಯುದ್ಧ ನಿಲ್ಲಲಿ’: ಬೆಂಗಳೂರಿನಲ್ಲಿ ಸೋನಿ ಸೋರಿ ಕಳವಳ

- Advertisement -
- Advertisement -

ಬೆಂಗಳೂರು: ಮಧ್ಯ ಭಾರತದ ಬಸ್ತಾರ್ ಪ್ರದೇಶವು ಕಳೆದ ಕೆಲವು ತಿಂಗಳುಗಳಿಂದ ಸರ್ಕಾರದ ಸಶಸ್ತ್ರ ಪಡೆಗಳು ಮತ್ತು ಆದಿವಾಸಿಗಳ ನಡುವಿನ ಸಂಘರ್ಷದ ಕೇಂದ್ರಬಿಂದುವಾಗಿ ಮಾರ್ಪಟ್ಟಿದೆ. ‘ಆಪರೇಷನ್ ಕಾಗರ್’ ಎಂಬ ಕಾರ್ಯಾಚರಣೆಯು ನಕ್ಸಲರ ನಿಗ್ರಹದ ಹೆಸರಿನಲ್ಲಿ ಬುಡಕಟ್ಟು ಸಮುದಾಯಗಳ ಮೇಲೆ ನಡೆಸುತ್ತಿರುವ ದಮನಕಾರಿ ಕ್ರಮವಾಗಿದೆ. ಇದು ಸಂವಿಧಾನದ ಆಶಯಗಳನ್ನು ಬದಿಗಿಟ್ಟು ನಡೆಯುತ್ತಿರುವ ಯುದ್ಧವಿದ್ದಂತೆ. ಈ ಪರಿಸ್ಥಿತಿಯು ಮೂಲನಿವಾಸಿಗಳ ಬದುಕು ಮತ್ತು ಸಂವಿಧಾನದ ಮೇಲಿನ ನಂಬಿಕೆಯನ್ನು ಅಲುಗಾಡಿಸಿದೆ,” ಎಂದು ಛತ್ತೀಸ್‌ಗಡದ ಆದಿವಾಸಿಗಳ ಪರ ಹೋರಾಟಗಾರ್ತಿ ಸೋನಿ ಸೋರಿ ಹೇಳಿದರು.

ಶನಿವಾರ ಬೆಂಗಳೂರಿನ ಆಶೀರ್ವದ್ ಸಭಾಂಗಣದಲ್ಲಿ ಆಯೋಜಿಸಿದ್ದ ‘ಆದಿವಾಸಿಗಳ ಮೇಲೆ ನಡೆಸುತ್ತಿರುವ ಯುದ್ಧ ನಿಲ್ಲಲಿ’ ಎಂಬ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಈ ಸಂಘರ್ಷದ ಮೂಲ ಕಾರ್ಪೊರೇಟ್ ಬಂಡವಾಳಶಾಹಿಗಳ ಹಿತಾಸಕ್ತಿ ಎಂದು ಬಲವಾಗಿ ಪ್ರತಿಪಾದಿಸಿದರು. “ದಂಡಕಾರಣ್ಯದಲ್ಲಿ ಅಡಗಿರುವ ರೂ.70 ಲಕ್ಷ ಕೋಟಿ ಮೌಲ್ಯದ ಖನಿಜ ಸಂಪತ್ತೇ ಈ ಯುದ್ಧಕ್ಕೆ ಮೂಲ ಕಾರಣ. ಈ ಸಂಪತ್ತನ್ನು ಕಾರ್ಪೊರೇಟ್‌ಗಳಿಗೆ ಹಸ್ತಾಂತರಿಸುವ ಉದ್ದೇಶದಿಂದಲೇ ಆಪರೇಷನ್ ಕಾಗರ್ ಜಾರಿಗೊಳಿಸಲಾಗಿದೆ ಎಂಬುದು ಮಾನವ ಹಕ್ಕುಗಳ ಕಾರ್ಯಕರ್ತರ ದೃಢವಾದ ನಂಬಿಕೆ,” ಎಂದರು.

ಸೋನಿ ಸೋರಿ ಅವರ ಪ್ರಕಾರ, ಅಭಿವೃದ್ಧಿಯ ಹೆಸರಿನಲ್ಲಿ ಬುಡಕಟ್ಟು ಜನಾಂಗದವರು ಶತಮಾನಗಳಿಂದ ವಾಸಿಸುತ್ತಿರುವ ಪ್ರದೇಶಗಳನ್ನು ನಾಶ ಮಾಡಲಾಗುತ್ತಿದೆ. ಇದು ಅವರ ಸಾಂಸ್ಕೃತಿಕ ಪರಂಪರೆ, ಸ್ವಯಂ ಆಡಳಿತ ಮತ್ತು ಸ್ವ-ನಿರ್ಣಯದ ಹಕ್ಕುಗಳಿಗೆ ಗಂಭೀರ ಅಪಾಯ ತಂದೊಡ್ಡಿದೆ. “ಬುಡಕಟ್ಟು ಜನಾಂಗದವರ ಬದುಕುವ ಹಕ್ಕನ್ನು ಹರಣ ಮಾಡಲಾಗುತ್ತಿದ್ದು, ಇದು ಸಂವಿಧಾನದ ಮೂಲಭೂತ ಹಕ್ಕುಗಳನ್ನೇ ಕಡೆಗಣಿಸಿದಂತಾಗಿದೆ,” ಎಂದು ಅವರು ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.

ನಕಲಿ ಎನ್‌ಕೌಂಟರ್‌ಗಳು ಮತ್ತು ಸತ್ಯಶೋಧನೆಗೆ ನಿರಾಕರಣೆ

ಮಾತು ಮುಂದುವರೆಸಿದ ಸೋನಿ, ಈ ಕಾರ್ಯಾಚರಣೆಗಳಲ್ಲಿ ಮಾನವ ಹಕ್ಕುಗಳ ಉಲ್ಲಂಘನೆಗಳು ವ್ಯಾಪಕವಾಗಿ ನಡೆಯುತ್ತಿವೆ ಎಂದು ಆರೋಪಿಸಿದರು. “ಕಳೆದ ಒಂದು ವರ್ಷದಲ್ಲೇ ನಡೆದ 70ಕ್ಕೂ ಹೆಚ್ಚು ಎನ್‌ಕೌಂಟರ್‌ಗಳಲ್ಲಿ 600ಕ್ಕೂ ಹೆಚ್ಚು ಮಾವೋವಾದಿಗಳು ಮತ್ತು ಆದಿವಾಸಿಗಳನ್ನು ಕೊಲ್ಲಲಾಗಿದೆ ಎಂದು ಸರ್ಕಾರ ಹೇಳಿದರೂ, ಈ ಕುರಿತು ಯಾವುದೇ ತನಿಖೆ ನಡೆದಿಲ್ಲ. ಎನ್‌ಕೌಂಟರ್‌ಗಳು ನಕಲಿ ಎಂದು ನಮ್ಮ ಸಮುದಾಯದಲ್ಲಿ ಎಲ್ಲರಿಗೂ ಗೊತ್ತು. ಆಪರೇಷನ್ ಕಾಗರ್ ಪ್ರಾರಂಭವಾದಾಗಿನಿಂದ, ಯಾವುದೇ ಮಾನವ ಹಕ್ಕುಗಳ ಸಂಘಟನೆ ಅಥವಾ ಸ್ವತಂತ್ರ ಸತ್ಯಶೋಧನಾ ತಂಡಕ್ಕೆ ಬಸ್ತಾರ್‌ಗೆ ಭೇಟಿ ನೀಡಲು ಅವಕಾಶ ನೀಡಿಲ್ಲ. ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಸರ್ಕಾರದ ಈ ರೀತಿಯ ನಿಯಂತ್ರಣವು ಅದರ ಪಾರದರ್ಶಕತೆಯ ಬಗ್ಗೆ ಗಂಭೀರ ಪ್ರಶ್ನೆಗಳನ್ನು ಹುಟ್ಟುಹಾಕುತ್ತದೆ. ಇದು ಮಾನವ ಹಕ್ಕುಗಳ ಸಂಘಟನೆಗಳ ಕಾರ್ಯವೈಖರಿಗೆ ದೊಡ್ಡ ಅಡ್ಡಿಯಾಗಿದೆ,” ಎಂದು ಅವರು ವಿವರಿಸಿದರು.

ಶಾಂತಿ ಮಾತುಕತೆಗಳ ನಿರಾಕರಣೆ

ಸೋನಿ ಸೋರಿ ಅವರು, ಆದಿವಾಸಿಗಳು ದಶಕಗಳ ಕಾಲ ಹೋರಾಡಿ ಪಡೆದ ಕಾನೂನುಗಳಾದ 1996ರ ಪೆಸಾ ಕಾಯ್ದೆ ಮತ್ತು 2006ರ ಅರಣ್ಯ ಹಕ್ಕು ಕಾಯ್ದೆಗಳನ್ನು ಜಾರಿಗೊಳಿಸುವಲ್ಲಿ ಸರ್ಕಾರಗಳು ವಿಫಲವಾಗಿವೆ ಎಂದು ಆಪಾದಿಸಿದರು. “ಈ ಕಾಯ್ದೆಗಳನ್ನು ತಿದ್ದುಪಡಿಗಳ ಹೆಸರಿನಲ್ಲಿ ದುರ್ಬಲಗೊಳಿಸಲಾಗುತ್ತಿದೆ. ನಮ್ಮ ಹಕ್ಕುಗಳಿಗಾಗಿ ಹೋರಾಟ ಮಾಡಿದರೆ, ನಮ್ಮನ್ನು ನಕ್ಸಲೀಯರೆಂದು ಬಂಧಿಸಲಾಗುತ್ತದೆ ಅಥವಾ ಗುಂಡಿಕ್ಕಿ ಕೊಲ್ಲಲಾಗುತ್ತದೆ. ಕಳೆದ 35 ವರ್ಷಗಳಲ್ಲಿ 8,000ಕ್ಕೂ ಹೆಚ್ಚು ಆದಿವಾಸಿ ಜನರನ್ನು ನಕಲಿ ಎನ್‌ಕೌಂಟರ್‌ಗಳಲ್ಲಿ ಕೊಲ್ಲಲಾಗಿದೆ, ಆದರೆ ಯಾವುದೇ ತನಿಖೆ ನಡೆದಿಲ್ಲ. ರಾಜಕೀಯ ನಾಯಕರ ಪಾತ್ರವನ್ನು ಪೊಲೀಸರೇ ನಿರ್ವಹಿಸುತ್ತಿರುವ ಈ ಪ್ರದೇಶದಲ್ಲಿ ಪ್ರಜಾಪ್ರಭುತ್ವ ಮೌಲ್ಯಗಳು ಸಂಪೂರ್ಣವಾಗಿ ನಶಿಸಿವೆ,” ಎಂದರು.

ಶಾಂತಿ ಮಾತುಕತೆಗಳ ಅಸಮರ್ಥತೆಯ ಕುರಿತು ಮಾತನಾಡಿದ ಅವರು, “ಒಂದೆಡೆ, ಮಾವೋವಾದಿ ಪಕ್ಷವು ಶಾಂತಿ ಮಾತುಕತೆಗಳಿಗೆ ಸಿದ್ಧವಿರುವುದಾಗಿ ಘೋಷಿಸಿ, ಅಖಿಲ ಭಾರತ ಮತ್ತು ರಾಜ್ಯ ಮಟ್ಟದಲ್ಲಿ ಶಾಂತಿ ಸಮಿತಿಗಳನ್ನು ರಚಿಸಲು ಪ್ರಯತ್ನಿಸುತ್ತಿದೆ. ಆದರೆ ಸರ್ಕಾರವು ‘ಹತ್ಯೆ ಮಾಡುತ್ತೇವೆ, ನಿರ್ಮೂಲನೆ ಮಾಡುತ್ತೇವೆ’ ಎಂಬ ಧೋರಣೆ ಹೊಂದಿದೆ. ಈ ನಿರ್ದಯಿ ನಿಲುವಿನಿಂದಾಗಿ ಶಾಂತಿಯುತ ಪರಿಹಾರದ ಅವಕಾಶಗಳು ಕಳೆದುಹೋಗುತ್ತಿವೆ,” ಎಂದು ವಿಷಾದ ವ್ಯಕ್ತಪಡಿಸಿದರು. ಹಲವಾರು ರಾಜಕೀಯ ವಿರೋಧ ಪಕ್ಷಗಳು ಮತ್ತು ಎಡಪಂಥೀಯ ಸಂಘಟನೆಗಳು ಶಾಂತಿ ಮಾತುಕತೆ ನಡೆಸುವಂತೆ ಒತ್ತಾಯಿಸಿದರೂ, ಹತ್ಯಾಕಾಂಡಕ್ಕೆ ಆದ್ಯತೆ ನೀಡಲಾಗುತ್ತಿದೆ ಎಂದು ಅವರು ಹೇಳಿದರು.

ನಮ್ಮ ಜವಾಬ್ದಾರಿ

ಕೊನೆಯಲ್ಲಿ, ಸೋನಿ ಸೋರಿ ಅವರು ಎಲ್ಲರಿಗೂ ಒಂದು ಪ್ರಮುಖ ಕರೆ ನೀಡಿದರು. “ಸಂವಿಧಾನದ ಐದನೇ ಮತ್ತು ಆರನೇ ಶೆಡ್ಯೂಲ್‌ಗಳ ನಿಬಂಧನೆಗಳನ್ನು ಕಟ್ಟುನಿಟ್ಟಾಗಿ ಜಾರಿಗೊಳಿಸಿದರೆ ಮಾತ್ರ ಬುಡಕಟ್ಟು ಜನಾಂಗದವರ ಪರಿಸ್ಥಿತಿ ಸುಧಾರಿಸಬಹುದು. ಆದರೆ ರಾಜ್ಯಪಾಲರು ಮತ್ತು ರಾಷ್ಟ್ರಪತಿಗಳಿಗೆ ಇರುವ ವಿಶೇಷ ಅಧಿಕಾರಗಳನ್ನು ಸರಿಯಾಗಿ ಬಳಸುತ್ತಿಲ್ಲ. ಈ ಎಲ್ಲಾ ಅಧಿಕಾರಗಳನ್ನು ಪ್ರಸ್ತುತ ಸರ್ಕಾರವು ತನ್ನ ಕೈಯಲ್ಲಿ ಹಿಡಿದಿಟ್ಟುಕೊಂಡಿದೆ,” ಎಂದರು.

“ಆಪರೇಷನ್ ಕಾಗರ್ ಅನ್ನು ತಕ್ಷಣವೇ ನಿಲ್ಲಿಸಿ, ಶಾಂತಿ ಮಾತುಕತೆಗಳನ್ನು ಪ್ರಾರಂಭಿಸಬೇಕು ಎಂದು ನಾವು ಆಗ್ರಹಿಸುತ್ತಿದ್ದೇವೆ. ಈ ಯುದ್ಧವು ಬುಡಕಟ್ಟು ಜನರ ಬದುಕನ್ನು ಮಾತ್ರವಲ್ಲದೆ, ದೇಶದ ಪ್ರಜಾಪ್ರಭುತ್ವ ಮತ್ತು ಮಾನವೀಯತೆಯ ಮೌಲ್ಯಗಳನ್ನೂ ನಾಶ ಮಾಡುತ್ತಿದೆ. ಸರ್ಕಾರಗಳು ಸರ್ವಾಧಿಕಾರಿ ಪ್ರವೃತ್ತಿಗಳನ್ನು ಬಿಟ್ಟು, ಶಾಂತಿ ಮತ್ತು ಪ್ರಜಾಸತ್ತಾತ್ಮಕ ಮಾರ್ಗಗಳನ್ನು ಅನುಸರಿಸಬೇಕು. ಆದಿವಾಸಿಗಳ ಹಕ್ಕುಗಳು ಮತ್ತು ಜೀವಗಳನ್ನು ರಕ್ಷಿಸಲು, ಶಾಂತಿ ಮಾತುಕತೆಯ ಮೂಲಕ ಕದನ ವಿರಾಮ ಘೋಷಿಸುವುದು ಪ್ರಜಾಪ್ರಭುತ್ವದ ಕರ್ತವ್ಯ. ಈ ಚಳುವಳಿಯನ್ನು ನಿರ್ಮಿಸುವುದು ಪ್ರತಿಯೊಬ್ಬ ನಾಗರಿಕನ ಜವಾಬ್ದಾರಿಯಾಗಿದೆ,” ಎಂದು ಸೋನಿ ಸೋರಿ ತಮ್ಮ ಭಾಷಣವನ್ನು ಮುಕ್ತಾಯಗೊಳಿಸಿದರು.

ಪ್ರತ್ಯೇಕ ಒಳಮೀಸಲಾತಿ ಇಲ್ಲ ಎಂದಿದ್ದಕ್ಕೆ ಫ್ರೀಡಂ ಪಾರ್ಕಿನಲ್ಲಿ ಬಿಕ್ಕಿ ಬಿಕ್ಕಿ ಅತ್ತ ಅಲೆಮಾರಿ ಸಮುದಾಯ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತೂತುಕುಡಿ ಸಾತನ್‌ಕುಳಂ ತಂದೆ-ಮಗನ ಕಸ್ಟಡಿ ಸಾವು ಪ್ರಕರಣ : ಅಪರಾಧಿಗಳಾದ ಎಲ್ಲಾ 9 ಪೊಲೀಸರಿಗೆ ಮರಣದಂಡನೆ ವಿಧಿಸಿದ ನ್ಯಾಯಾಲಯ

ತಮಿಳುನಾಡಿನ ತೂತುಕುಡಿ ಜಿಲ್ಲೆಯ ಸಾತನ್‌ಕುಳಂ ಪೊಲೀಸ್ ಠಾಣೆಯಲ್ಲಿ ಕೋವಿಡ್-19 ಲಾಕ್‌ಡೌನ್ ಸಮಯದಲ್ಲಿ ಸಂಭವಿಸಿದ, ವ್ಯಾಪಾರಿ ಪಿ. ಜಯರಾಜ್ (58) ಮತ್ತು ಅವರ ಮಗ ಜೆ. ಬೆನಿಕ್ಸ್ (31) ಅವರ ಕಸ್ಟಡಿ ಸಾವು ಪ್ರಕರಣದ...

ದಾವಣಗೆರೆ ದಕ್ಷಿಣ ಉಪ-ಸಮರ: ಶಾಮನೂರು ಸಾಮ್ರಾಜ್ಯದಲ್ಲಿ ಅಹಿಂದ ಬಂಡಾಯ!

ತುಂಗಭದ್ರಾ ನದಿ ಪರ‍್ವಕ್ಕೆ ಎತ್ತರದ ಪ್ರದೇಶದಲ್ಲಿರುವ ದಾವಣಗೆರೆ ಮಧ್ಯ ಕರ್ನಾಟಕದ ಪ್ರಮುಖ ವಾಣಿಜ್ಯ ನಗರಿ. ಬೆಣ್ಣೆ ದೋಸೆಯ ಘಮಲಿನ ದಾವಣಗೆರೆಯ ರಾಜಕಾರಣ ಮಾತ್ರ ಮಿರ್ಚಿ-ಮಂಡಕ್ಕಿಯ ಖಡಕ್ ಖಾರಾ ಕುರುಕುಲಿನಂತೆ! ದಾವಣಗೆರೆ ಮತ್ತದರ ಸುತಮುತ್ತಲಿನ...

‘Dr. Nimo Yadav’, ‘Nehr Who’ ಎಕ್ಸ್‌ ಖಾತೆಗಳನ್ನು ತಕ್ಷಣ ಮರುಸ್ಥಾಪಿಸಲು ದೆಹಲಿ ಹೈಕೋರ್ಟ್ ಆದೇಶ

'Dr. Nimo Yadav' ಮತ್ತು 'Nehr Who' ಎಂಬ ಎರಡು ಪರೋಡಿ ಎಕ್ಸ್‌ ಖಾತೆಗಳನ್ನು ತಕ್ಷಣ ಮರು ಸ್ಥಾಪಿಸುವಂತೆ ದೆಹಲಿ ಹೈಕೋರ್ಟ್ ಸೋಮವಾರ (ಏ.6) ಎಕ್ಸ್ ಸಂಸ್ಥೆಗೆ (X Corp) ಆದೇಶಿಸಿದೆ. 'Dr....

ಬಂಗಾಳ| ಮತದಾರರ ಪಟ್ಟಿಯಿಂದ ಹೆಸರು ತೆಗೆದ ಬಳಿಕ ಸಾವಿಗೆ ಶರಣಾದ ಮುಸ್ಲಿಂ ವ್ಯಕ್ತಿ

ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆಯ ನಂತರ ಪಶ್ಚಿಮ ಬಂಗಾಳದಲ್ಲಿ ಮತದಾರರ ಪಟ್ಟಿಯಿಂದ ತನ್ನ ಹೆಸರನ್ನು ತೆಗೆದುಹಾಕಿದ್ದರಿಂದ ಮನನೊಂದ ಮುಸ್ಲಿಂ ವ್ಯಕ್ತಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಪೊಲೀಸರು ಸೋಮವಾರ ತಿಳಿಸಿದ್ದಾರೆ. ಮೃತನನ್ನು ಬಿರ್ಭುಮ್...

‘ಯೋಜನೆಯು ಕೇರಳಕ್ಕೆ ಜೀವನಾಡಿಯಾಗಲಿದೆ’: ವಯನಾಡ್ ಸುರಂಗ ಮಾರ್ಗ ವಿರುದ್ದದ ಅರ್ಜಿ ವಜಾಗೊಳಿಸಿದ ಸುಪ್ರೀಂ ಕೋರ್ಟ್

ಕೇರಳದ ಕೋಝಿಕ್ಕೋಡ್-ವಯನಾಡ್ ಸುರಂಗ ಮಾರ್ಗ ನಿರ್ಮಾಣಕ್ಕೆ ನೀಡಲಾದ ಪರಿಸರ ಅನುಮತಿ (ಇಸಿ) ಪ್ರಶ್ನಿಸಿ ಸಲ್ಲಿಸಲಾದ ಅರ್ಜಿಯನ್ನು ಸುಪ್ರೀಂ ಕೋರ್ಟ್ ಸೋಮವಾರ (ಏ.6) ವಜಾಗೊಳಿಸಿದೆ. ಸುರಂಗ ನಿರ್ಮಾಣದ ಸಮಯದಲ್ಲಿ ಪರಿಸರ ಅನುಮತಿಯ ಷರತ್ತುಗಳ ಉಲ್ಲಂಘನೆಯಾದರೆ, ಅರ್ಜಿದಾರರು...

651 ಕೋಟಿ ರೂ. ಮೌಲ್ಯದ ನಗದು, ಮದ್ಯ, ಮಾದಕ ವಸ್ತು ವಶಪಡಿಸಿಕೊಂಡ ಚುನಾವಣಾ ಆಯೋಗ

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದಲ್ಲಿ ನಡೆಯುತ್ತಿರುವ ವಿಧಾನಸಭಾ ಚುನಾವಣೆಗೆ ಸಂಬಂಧಿಸಿದಂತೆ ಅಧಿಕಾರಿಗಳು 651.51 ಕೋಟಿ ರೂ.ಗೂ ಹೆಚ್ಚು ಮೌಲ್ಯದ ನಗದು, ಮದ್ಯ, ಮಾದಕ ವಸ್ತುಗಳು ಮತ್ತು ಇತರ ಉಚಿತ ವಸ್ತುಗಳನ್ನು...

ಪೇರಳೆ ಹಣ್ಣು ಕದ್ದಿದ್ದಾಳೆಂದು ಆರೋಪಿಸಿ ಬಾಲಕಿಯನ್ನು ಸರಪಳಿಯಿಂದ ಕಟ್ಟಿ ಥಳಿಸಿದ ಮಾಜಿ ಸೇನಾಧಿಕಾರಿ

ಪೇರಳೆ ಹಣ್ಣು ಕದ್ದಿದ್ದಾಳೆಂದು ಆರೋಪಿಸಿ ನಾಲ್ಕು ವರ್ಷದ ಬಾಲಕಿಯನ್ನು ನಿವೃತ್ತ ಸೇನಾಧಿಕಾರಿಯೊಬ್ಬರು ಸರಪಳಿಯಿಂದ ಕಟ್ಟಿಹಾಕಿ ಕ್ರೂರವಾಗಿ ಥಳಿಸಿರುವ ಆಘಾತಕಾರಿ ಘಟನೆ ಹಿಮಾಚಲ ಪ್ರದೇಶದ ಉನಾ ಜಿಲ್ಲೆಯ ಬೆಹಡಾಲ ಗ್ರಾಮದಲ್ಲಿ ನಡೆದಿದೆ. ಬಾಲಕಿಯು ನಿವೃತ್ತ ಸೇನಾಧಿಕಾರಿಯ ತೋಟದ...

ಆಂಧ್ರ ವಿಧಾನಸಭಾ ಸ್ಪೀಕರ್ ಅಯ್ಯಣ್ಣ ಪಾತ್ರುಡು ಅವರಿಂದ ದಲಿತ ವ್ಯಕ್ತಿಗೆ ಕಪಾಳಮೋಕ್ಷ: ವೈಎಸ್‌ಆರ್‌ಸಿಪಿ ವಾಗ್ದಾಳಿ

ಏಪ್ರಿಲ್ 3 ರ ಗುರುವಾರ ನರಸಿಪಟ್ಟಣದಲ್ಲಿ ದಲಿತ ವ್ಯಕ್ತಿಯೊಬ್ಬರಿಗೆ ಕಪಾಳಮೋಕ್ಷ ಮಾಡಿದ್ದಕ್ಕಾಗಿ ಆಂಧ್ರಪ್ರದೇಶ ವಿಧಾನಸಭಾ ಸ್ಪೀಕರ್ ಮತ್ತು ತೆಲುಗು ದೇಶಂ ಪಕ್ಷದ (ಟಿಡಿಪಿ) ನಾಯಕ ಅಯ್ಯಣ್ಣ ಪಾತ್ರುಡು ಅವರ ವಿರುದ್ಧ ವೈಎಸ್‌ಆರ್ ಕಾಂಗ್ರೆಸ್...

ಪ. ಬಂಗಾಳ | ಬಿಜೆಪಿ ಪ್ರಚಾರ ಸಾಮಗ್ರಿ ಸಜ್ಜುಗೊಳಿಸಿದ ವಿಡಿಯೋ ವೈರಲ್ : ಚುನಾವಣಾ ಕರ್ತವ್ಯದಲ್ಲಿದ್ದ ಅಧಿಕಾರಿ ಅಮಾನತು

ಬಿಜೆಪಿ ಪ್ರಚಾರ ಸಾಮಗ್ರಿಗಳನ್ನು ತಯಾರಿಸಲು ಸಹಾಯ ಮಾಡಿದ ಆರೋಪದ ಮೇಲೆ ಪಶ್ಚಿಮ ಬಂಗಾಳದ ಉತ್ತರ 24 ಪರಗಣ ಜಿಲ್ಲೆಯ ಪಾಣಿಹಟಿ ವಿಧಾನಸಭಾ ಕ್ಷೇತ್ರದ ಅಧಿಕಾರಿಯೊಬ್ಬರನ್ನು ಚುನಾವಣಾ ಆಯೋಗ ಅಮಾನತುಗೊಳಿಸಿದೆ ಎಂದು ದಿ ಇಂಡಿಯನ್...

ಮುಸ್ಲಿಮರ ವಿರುದ್ಧ ದ್ವೇಷ ಕಾರುವ ಅಸ್ಸಾಂ ಸಿಎಂ ಪತ್ನಿ ಬಳಿ 2 ಮುಸ್ಲಿಂ ದೇಶಗಳ ಪಾಸ್‌ಪೋರ್ಟ್ ಇದೆ : ಕಾಂಗ್ರೆಸ್ ಆರೋಪ

ಮತದಾನಕ್ಕೆ ಇನ್ನೇನು ಮೂರು ದಿನಗಳು ಬಾಕಿ ಇರುವಾಗ, ಅಸ್ಸಾಂನಲ್ಲಿ ಕಾಂಗ್ರೆಸ್‌-ಬಿಜೆಪಿ ನಡುವೆ ವೈಯಕ್ತಿಕ ವಿಚಾರಗಳ ಕುರಿತ ವಾಗ್ಯುದ್ಧ ತಾರಕಕ್ಕೇರಿದೆ. ಸಿಎಂ ಹಿಮಂತ ಬಿಸ್ವಾ ಶರ್ಮಾ ಮತ್ತು ಅವರ ಪತ್ನಿ ರಿನಿಕಿ ಭುಯಾನ್ ಶರ್ಮಾ...