Homeಮುಖಪುಟನಮ್ಮೆಲ್ಲರ ಶತ್ರು ಒಬ್ಬನೇ ಎಂದರಿತು ಹೋರಾಡೋಣ: ಸುರೀಂದರ್‌ ಸಿಂಘ್

ನಮ್ಮೆಲ್ಲರ ಶತ್ರು ಒಬ್ಬನೇ ಎಂದರಿತು ಹೋರಾಡೋಣ: ಸುರೀಂದರ್‌ ಸಿಂಘ್

ಸತ್ಯದ ಮಾತನಾಡಿದ ಗೌರಿ ಲಂಕೇಶರಂತಹವರ ಮೇಲೆ ದಾಳಿ ನಡೆದಂತೆ ಪಂಜಾಬಿನಲ್ಲಿ ಹಲವು ದಾಳಿಗಳು ನಡೆದವು. ಈ ಫ್ಯಾಸಿಸ್ಟ್‌ ದಾಳಿಯನ್ನು ವಿರೋಧಿಸಿ ಚಂಡೀಗಢದಲ್ಲಿ 20000 ಜನಕ್ಕೂ ಹೆಚ್ಚು ಮಂದಿ ಸೇರಿ ಪ್ರತಿಭಟನೆ ನಡೆಸಿದರು.

- Advertisement -
- Advertisement -

ನಮ್ಮೆಲ್ಲರ ಶತ್ರು ಒಬ್ಬನೇ ಎಂಬುದನ್ನು ಅರಿತು ಸಂಘಟನೆ ಕಟ್ಟುವುದು ಇಂದಿನ ಅಗತ್ಯ ಎಂದು ಟಿಕ್ರಿಗಡಿಯಲ್ಲಿ ರೈತ ಹೋರಾಟ ಮುನ್ನಡೆಸುತ್ತಿರುವ ಸುರೀಂದರ್‌ ಸಿಂಘ್ ಅಭಿಪ್ರಾಯಪಟ್ಟಿದ್ದಾರೆ.

ಗುರುವಾರ ಮಾಸ್‌ ಮೀಡಿಯಾ ಫೌಂಡೇಷನ್‌ ಪ್ರತಿನಿಧಿಯೊಂದಿಗೆ ಮಾತನಾಡಿದ ಅವರು, ಪಂಜಾಬಿನ ರೈತರು ಸಂಘಟಿತರಾಗಿದ್ದು ಹೇಗೆ, ಫ್ಯಾಸಿಸ್ಟ್‌ ಶಕ್ತಿಯ ದಬ್ಬಾಳಿಕೆ ವಿರುದ್ಧ ಹೋರಾಟ ಮೊದಲಾಗಿದ್ದು ಹೇಗೆ ಎಂಬುದನ್ನು ವಿವರಿಸಿದರು.

ಪಂಜಾಬಿನಲ್ಲಿ ಇದುವರೆಗೆ ನಡೆದ ಯಾವುದೇ ಯುದ್ಧ ಅನ್ಯಾಯ, ಹಿಂಸೆಗಳ ವಿರುದ್ಧ ನಡೆದಿದೆಯೇ ಹೊರತು, ಜಾತಿ ಮತಗಳ ವಿರುದ್ಧವಲ್ಲ ಎಂದು ಅವರು ಹೇಳಿದರು.

1980ರ ನಂತರ ಭಾರತದಲ್ಲಿ ಕೃಷಿ ಸಮಸ್ಯೆ ಹೆಚ್ಚಾಯಿತು. ಹಸಿರು ಕ್ರಾಂತಿಯ ಮೂಲಕ ಕಂಡ ಅಭಿವೃದ್ಧಿಯ ಕನಸು ಸಾಯಲಾರಂಭಿಸಿತ್ತು. ವಿವೇಕದ ಕೊರತೆಯೇ ಈ ಹಿನ್ನೆಡೆಗೆ ಕಾರಣ ಎಂಬುದನ್ನು ಅರಿತೆವು. ಆಗಿನಿಂದ ಸಂಘಟನೆ ಕಟ್ಟುತ್ತಿದ್ದೇವೆ ಎಂದರು.

ಸುರೀಂದರ್‌ ಸಿಂಘ್ ರವರ ವಿಡಿಯೋ ನೋಡಿ:

“ಪಂಜಾಬಿನ ವಿವಿಧ ಭಾಗಗಳಲ್ಲಿ ವಿವಿಧ ಸಮಸ್ಯೆಗಳ ಪರಿಹಾರಕ್ಕೆ ರೈತರು ಹೋರಾಟ ನಡೆಸಿದ್ದರು. ಅವರೆಲ್ಲರನ್ನೂ ಒಗ್ಗೂಡಿಸಬೇಕಿತ್ತು. ಗೂಂಡಾ, ಪೊಲೀಸ್‌, ರಾಜಕಾರಣಿಯ ಒಕ್ಕೂಟದ ಎದರು ನಾವು ಒಟ್ಟಾಗಿ ಹೋರಾಡಬೇಕು ಎಂಬ ಘೋಷಣೆಯ ಮೂಲಕ ಭಿನ್ನ ವಿಚಾರಧಾರೆಯವರನ್ನು ಒಂದುಗೂಡಿಸಿದೆವು” ಎಂದು ರೈತ ಹೋರಾಟ ಸಂಘಟಿಸಿದ ಬಗೆಯನ್ನು ಸುರೀಂದರ್‌ ಸಿಂಘ್‌ ವಿವರಿಸಿದರು.

“ಮೋದಿ ಸರ್ಕಾರ ಬಂದ ಮೇಲೆ ಪಂಜಾಬ್‌ ಮೇಲೆ ಮತ್ತೊಂದು ರೀತಿಯ ದಾಳಿ ನಡೆಯಿತು. ಕಾಶ್ಮೀರದ ಮೇಲೆ ನಡೆದಂತೆ, ಸತ್ಯದ ಮಾತನಾಡಿದ ಗೌರಿ ಲಂಕೇಶರಂತಹವರ ಮೇಲೆ ದಾಳಿ ನಡೆದಂತೆ ಪಂಜಾಬಿನಲ್ಲಿ ಹಲವು ದಾಳಿಗಳು ನಡೆದವು. ಈ ಫ್ಯಾಸಿಸ್ಟ್‌ ದಾಳಿಯನ್ನು ವಿರೋಧಿಸಿ ಚಂಡೀಗಢದಲ್ಲಿ 20000 ಜನಕ್ಕೂ ಹೆಚ್ಚು ಮಂದಿ ಸೇರಿ ಪ್ರತಿಭಟನೆ ನಡೆಸಿದರು. ಹೀಗೆ ಪ್ರಜಾಸತ್ತಾತ್ಮಕ ಮೌಲ್ಯಗಳನ್ನು ಎತ್ತಿ ಹಿಡಿಯುವ ಒಕ್ಕೂಟವೊಂದು ರಚನೆಯಾಯಿತು” ಎಂದು ಸುರೀಂದರ್‌ ಸಿಂಘ್‌ ವಿವರಿಸಿದರು.

(ಈ ವರದಿ ‘ಮಾಸ್ ಮೀಡಿಯಾ ಫೌಂಡೇಷನ್’ ನಿಯೋಜಿಸಿರುವ ವಿಶೇಷ ದೆಹಲಿ ತಂಡದಿಂದ ಪಡೆದ ಮಾಹಿತಿ ಆಧರಿಸಿ, ಸಿದ್ಧಪಡಿಸಿದೆ)


ಇದನ್ನೂ ಓದಿ: ಟ್ರ್ಯಾಕ್ಟರ್ ರ್‍ಯಾಲಿ: ದಿಟ್ಟ ರೈತ ಹೋರಾಟದ ಗಮನಸೆಳೆದ 10 ಫೋಟೊಗಳು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಂವಿಧಾನದ ಬುಡಕ್ಕೆ ಕೊಡಲಿ ಏಟು: ಆರ್‌ಎಸ್‌ಎಸ್-ಬಿಜೆಪಿಯ ಷಡ್ಯಂತ್ರ ಸೋಲಿಸಲು ಎರಡನೇ ಸ್ವಾತಂತ್ರ್ಯ ಸಂಗ್ರಾಮ ಅನಿವಾರ್ಯ – ಬಿ.ಕೆ. ಹರಿಪ್ರಸಾದ್

ಎಸ್‌ಐಆರ್ (SIR) ವಿರೋಧಿ ಹೋರಾಟದಲ್ಲಿ ನಮ್ಮ ಪಕ್ಷ ನಿಮ್ಮ ಜೊತೆಗಿದೆ ಎಂದು ಹೇಳಲು ಸರ್ಕಾರದ ಪ್ರತಿನಿಧಿಯಾಗಿ ನಾನು ಇಲ್ಲಿ ಬಂದಿದ್ದೇನೆ. ನೀವು ಮಂಡಿಸಿರುವ ಹಕ್ಕೊತ್ತಾಯಗಳ ಕುರಿತು ನೂತನ ಮುಖ್ಯಮಂತ್ರಿಗಳು, ಸಿದ್ದರಾಮಯ್ಯ ಸೇರಿದಂತೆ ಪಕ್ಷದ...

ಮತದಾರರ ಪಟ್ಟಿಯಿಂದ 65 ಲಕ್ಷ ಜನರನ್ನು ಹೊರಹಾಕಿದ್ದು ಯಾರು? ಈ ಅಕ್ರಮಕ್ಕೆ ಚುನಾವಣಾ ಆಯೋಗವೇ ಉತ್ತರಿಸಬೇಕು: ಮೊಹಮ್ಮದ್ ಯೂಸುಫ್ ಕನ್ನಿ

"ಬ್ರಿಟಿಷರ ವಿರುದ್ಧ ಹೋರಾಡಿ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟಿದ್ದೇವೆ. 1952ರ ಮೊದಲ ಚುನಾವಣೆಯ ಸಂದರ್ಭದಲ್ಲಿ ಸುಮಾರು 17.32 ಕೋಟಿ ಮತದಾರರಿದ್ದರು. 1955ರಲ್ಲಿ ಸಿಟಿಜನ್‌ಶಿಪ್ ಆಕ್ಟ್ ಜಾರಿಯಾದ ಬಳಿಕ ನಡೆದ 1957ರ ಚುನಾವಣೆಯಲ್ಲಿ ಈ ಸಂಖ್ಯೆ...

ಸರ್ಕಾರ-ನ್ಯಾಯಾಂಗ ವ್ಯವಸ್ಥೆ ಕೈಬಿಟ್ಟರೆ ರಾಜ್ಯದ ಜನ ಅನಾಥರಾಗುತ್ತಾರೆ : ಹಿರಿಯ ಸಾಹಿತಿ ಬಿ.ಟಿ. ಲಲಿತಾ ನಾಯ್ಕ್

ಎಸ್‌ಐಆರ್‌ ವಿಚಾರದಲ್ಲಿ ಇಂದು ನಾಡಿನ ಜನತೆ ಭೀಕರ ಸಂಕಷ್ಟದಲ್ಲಿದ್ದಾರೆ. ಈ ಗೊಂದಲವನ್ನು ಉಂಟು ಮಾಡಿದವರು ಯಾರು? ಕೇಂದ್ರ ಸರ್ಕಾರವೋ ಅಥವಾ ಕರ್ನಾಟಕ ಸರ್ಕಾರದ ಅಲಕ್ಷ್ಯ ಇದಕ್ಕೆ ಕಾರಣವೇ? ಅಥವಾ ನಮಗೆ ಸಂಬಂಧವೇ ಇಲ್ಲ...

ಎಸ್ಐಆರ್ ಹೆಸರಿನಲ್ಲಿ ನಡೆಯುತ್ತಿರುವ ಜನವಿರೋಧಿ ಹುನ್ನಾರಗಳನ್ನು ಸೋಲಿಸಬೇಕಿದೆ: ಎಸ್. ವರಲಕ್ಷ್ಮಿ

ಬೆಂಗಳೂರು: ರಾಜ್ಯಾದ್ಯಂತ ಎಸ್ಐಆರ್ (SIR) ವಿರುದ್ಧ ನಡೆಯುತ್ತಿರುವ ಸಮಾವೇಶವು ಆಕ್ರಮಣಕಾರಿ ಧೋರಣೆಯ ವಿರುದ್ಧದ ಬೃಹತ್ ಪ್ರತಿರೋಧವಾಗಿದೆ ಎಂದು ಸಿಐಟಿಯು ರಾಜ್ಯ ಪ್ರಧಾನ ಕಾರ್ಯದರ್ಶಿ ಎಸ್. ವರಲಕ್ಷ್ಮಿ ತಿಳಿಸಿದರು. ಎಸ್ಐಆರ್ ಸಮಸ್ಯೆಯಲ್ಲ ಎಂದು ಬಿಂಬಿಸುವ ಸಂಘಪರಿವಾರದವರ...

ಮತದಾನ ನಮ್ಮ ಜನ್ಮಸಿದ್ದ ಹಕ್ಕು, ಎಸ್‌ಐಆರ್ ಕುರಿತು ಜನ ಜಾಗೃತಿ ಅಗತ್ಯ: ಪೀಟರ್ ಮಚಾಡೋ

'ಮತದಾನ ನಮ್ಮ ಜನ್ಮಸಿದ್ದ ಹಕ್ಕು ಅದನ್ನು ನಾವು ಬಿಟ್ಟು ಕೊಡುವುದಿಲ್ಲ' ಎಂದು ಕರ್ನಾಟಕ ಕ್ರೈಸ್ತ ಸಮುದಾಯದ ಮಹಾ ಧರ್ಮಾಧ್ಯಕ್ಷ ರೆವೆಂಡರ್ ಫಾದರ್ ಪೀಟರ್ ಮಚಾಡೋ ಹೇಳಿದರು. ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ...

ಸುರಿವ ಮಳೆಯಲ್ಲಿಯೂ ಎಸ್‌ಐಆರ್ ವಿರೋಧಿ ಜಾಥಾಕ್ಕೆ ಜೊತೆಯಾದ ಮಳವಳ್ಳಿ, ಮದ್ದೂರು, ಮಂಡ್ಯ ಜನತೆ

ಮಂಡ್ಯ: ಮಳವಳ್ಳಿಯ ಬಸ್ ನಿಲ್ದಾಣದ ಬಳಿ ಸುರಿವ ಮಳೆಯಲ್ಲಿಯೂ 'ಎಸ್‌ಐಆರ್ (SIR) ವಿರೋಧಿ ಕರ್ನಾಟಕ' ಜಾಥಾಕ್ಕೆ ಹೋರಾಟಗಾರರು, ಬರಹಗಾರರು, ಜನಚಳವಳಿಗಳ ಮುಖಂಡರು ಹಾಗೂ ಪ್ರಗತಿಪರರು ಬೆಂಬಲ ವ್ಯಕ್ತಪಡಿಸಿದರು‌. ಈ ವೇಳೆ ಎಸ್‌ಐಆರ್ ಕುರಿತು ಮಾತನಾಡಿದ...

ಚಿತ್ರದುರ್ಗದಲ್ಲಿ ಸಮಾರೋಪಗೊಂಡ ಮಾರ್ಗ -3 SIR ವಿರೋಧಿ ಜನಜಾಗೃತಿ ಜಾಥ: ಜೂನ್ 20ರ ಸಮಾವೇಶದ ಯಶಸ್ಸಿಗೆ ಕರೆ

ಚುನಾವಣಾ ಆಯೋಗ ಜಾರಿಗೆ ತರಲು ಹೊರಟಿರುವ ಎಸ್‌ಐಆರ್ (SIR) ವ್ಯವಸ್ಥೆಯನ್ನು ವಿರೋಧಿಸಿ ಹಮ್ಮಿಕೊಳ್ಳಲಾಗಿದ್ದ ‘ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾ’ವು ದಾವಣಗೆರೆಯಲ್ಲಿ ಪ್ರಚಾರ ಮುಗಿಸಿ ಚಿತ್ರದುರ್ಗವನ್ನು ತಲುಪಿದ್ದು, ಇಲ್ಲಿ ಯಶಸ್ವಿಯಾಗಿ ಸಮಾರೋಪಗೊಂಡಿದೆ. ಎದ್ದೇಳು ಕರ್ನಾಟಕ,...

ಗದಗ | ಮನುವಾದದ ಜಾರಿಗೆ ಎಸ್‌ಐಆರ್‌ ಹೇರಿಕೆ : ಡಾ.ಇಸಾಬೆಲ್ಲ ಝೇವಿಯರ್

ದೇಶದಲ್ಲಿ ಮನುವಾದ ಜಾರಿಗೆ ತರುವುದು ಆರ್‌ಎಸ್‌ಎಸ್‌-ಸಂಘಪರಿವಾರದ ಮೂಲ ಉದ್ದೇಶ, ಅದಕ್ಕಾಗಿ ಜನರ ಮೇಲೆ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಯಂತಹ ಹೊಸ ಹೊಸ ಪ್ರಕ್ರಿಯೆಗಳನ್ನು ಹೇರಲಾಗುತ್ತಿದೆ ಎಂದು ಸಾಮಾಜಿಕ ಹೋರಾಟಗಾರ್ತಿ...

ಸಂವಿಧಾನ ವಿರೋಧಿ ‘SIR’ಗೆ ಹರಿಹರದಲ್ಲಿ ತೀವ್ರ ವಿರೋಧ: ಜನಜಾಗೃತಿ ಜಾಥಾದ ಮೂಲಕ ಕೇಂದ್ರ ಸರ್ಕಾರದ ವಿರುದ್ಧ ನಾಗರಿಕರ ಆಕ್ರೋಶ

ದಾವಣಗೆರೆ ಜಿಲ್ಲೆಯ ಹರಿಹರ ತಾಲ್ಲೂಕಿನಲ್ಲಿ ಇತ್ತೀಚೆಗೆ ಕೇಂದ್ರ ಚುನಾವಣಾ ಆಯೋಗದ 'SIR' (ವಿಶೇಷ ಗುರುತಿನ ಪರಿಶೀಲನೆ/ಮರುಪರಿಶೀಲನಾ ಕ್ರಮ) ಯೋಜನೆ ವಿರುದ್ಧ ಬೃಹತ್ ಜನಜಾಗೃತಿ ಜಾಥಾ ಯಶಸ್ವಿಯಾಗಿ ಸಂಚರಿಸಿತು. ಸಾರ್ವಜನಿಕರಲ್ಲಿ ಈ ಯೋಜನೆಯ ಕುರಿತು...

“ಎಸ್ಐಆರ್ ಮೂಲಕ ಮನುವಾದದ ಜಾರಿಗೆ ಕುತಂತ್ರ ರೂಪಿಸುತ್ತಿರುವ ಬಿಜೆಪಿ ಗೆಲ್ಲಲು ಬಿಡುವುದಿಲ್ಲ”:  ಮೈಸೂರಿನಲ್ಲಿ ಜನಾಕ್ರೋಶ

2026 ಜೂನ್ 16 ರಂದು ಹುಣುಸೂರು, ಹೆಚ್.ಡಿ ಕೋಟೆ, ಮೈಸೂರಿನಲ್ಲಿ ಸಾಗಿದ ಎಸ್ಐಆರ್ ವಿರೋಧಿ ಕರ್ನಾಟಕ ಜಾಥಾಕ್ಕೆ ಹುಣುಸೂರಿನ ಸಂವಿಧಾನ ಸರ್ಕಲ್ ನಿಂದ ಅಭೂತಪೂರ್ವ ಬೆಂಬಲ ಸಿಕ್ಕಿತು. ಬೆಳಗ್ಗೆ 8 ಗಂಟೆ ಸುಮಾರಿಗೆ ಎಸ್ಐಆರ್...